Tag: Srilaila

  • ಮಾಜಿಮಂತ್ರಿ ಜನಾರ್ದನ್ ರೆಡ್ಡಿ ಮಗನ ಸಿನಿಮಾದಲ್ಲಿ ಜೆನಿಲಿಯಾ ಅತ್ತಿಗೆ ಪಾತ್ರ ಮಾಡ್ತಿಲ್ಲವಂತೆ

    ಮಾಜಿಮಂತ್ರಿ ಜನಾರ್ದನ್ ರೆಡ್ಡಿ ಮಗನ ಸಿನಿಮಾದಲ್ಲಿ ಜೆನಿಲಿಯಾ ಅತ್ತಿಗೆ ಪಾತ್ರ ಮಾಡ್ತಿಲ್ಲವಂತೆ

    ಮಾಜಿಮಂತ್ರಿ ಜನಾರ್ದನ್ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ ಗ್ರ್ಯಾಂಡ್ ಆಗಿ ಸಿನಿಮಾ ರಂಗ ಪ್ರವೇಶ ಮಾಡಿದ್ದಾರೆ. ಕಿರೀಟಿ ನಟನೆಯ ಸಿನಿಮಾ ಎರಡು ಭಾಷೆಯಲ್ಲಿ ಮೂಡಿ ಬರುತ್ತಿದ್ದು, ಈ ಸಿನಿಮಾಗಾಗಿ ಅವರು ಪಕ್ಕಾ ತಯಾರಿ ಮಾಡಿಕೊಂಡೆ ಎಂಟ್ರಿ ಕೊಟ್ಟಿದ್ದಾರೆ. ಪಾತ್ರಗಳ ಆಯ್ಕೆಯಲ್ಲೂ ಚಿತ್ರತಂಡ ಕಾಳಜಿವಹಿಸಿದೆ. ಕಿರೀಟಿಗೆ ನಾಯಕಿಯಾಗಿ ಶ್ರೀಲೀಲಾ ನಟಿಸುತ್ತಿದ್ದು, ಮತ್ತೊಂದು ಮಹತ್ವದ ಪಾತ್ರದಲ್ಲಿ ಬಹುಭಾಷಾ ನಟಿ ಜೆನಿಲಿಯಾ ಡಿಸೋಜಾ ಕಾಣಿಸಿಕೊಳ್ಳುತ್ತಿದ್ದಾರೆ. ಆ ಪಾತ್ರದ ಬಗ್ಗೆ ಮೊದಲಿನಿಂದಲೂ ಚರ್ಚೆ ನಡೆದಿತ್ತು.

    ಮದುವೆಯ ನಂತರ ಸಿನಿಮಾ ರಂಗದಿಂದ ದೂರವಿದ್ದ ಜೆನಿಲಿಯಾ, ಇದೀಗ ಹಲವು ವರ್ಷಗಳ ನಂತರ ಸಿನಿಮಾ ರಂಗದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಾಗಿ ಅವರು ಯಾವ ರೀತಿಯ ಪಾತ್ರವನ್ನು ಒಪ್ಪಿಕೊಂಡಿರಬಹುದು ಎಂಬ ಕುತೂಹಲವಿತ್ತು. ಸಿನಿಮಾ ಮುಹೂರ್ತದ ದಿನ ಅವರು ನಾಯಕನ ಅತ್ತಿಗೆ ಪಾತ್ರ ಮಾಡಲಿದ್ದಾರೆ ಎನ್ನುವ ಗಾಸಿಪ್ ಹರಡಿತ್ತು. ಆದರೆ, ಜೆನಿಲಿಯಾ ಈ ಸಿನಿಮಾದಲ್ಲಿ ಅತ್ತಿಗೆಯ ಪಾತ್ರ ಮಾಡುತ್ತಿಲ್ಲವಂತೆ. ಇದನ್ನೂ ಓದಿ:ಚಾರ್ಲಿ 777 ತೆರಿಗೆ ವಿನಾಯತಿ: ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ಅಸಮಾಧಾನ ಏಕೆ?

    ಸದ್ಯ ಸಿಕ್ಕಿರುವ ಮಾಹಿತಿ ಪ್ರಕಾರ ಜೆನಿಲಿಯಾ ಕಂಪೆನಿಯೊಂದರ ಸಿಇಓ ಪಾತ್ರವನ್ನು ನಿಭಾಯಿಸಲಿದ್ದಾರಂತೆ. ಅದೊಂದು ಮಹತ್ವದ ಪಾತ್ರವೂ ಆಗಿದೆಯಂತೆ. ಹಾಗಾಗಿಯೇ ಅವರು ಈ ಪಾತ್ರವನ್ನು ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆಯು ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ರಾಧಾಕೃಷ್ಣ ರೆಡ್ಡಿ ಅವರು ಈ ಚಿತ್ರದ ನಿರ್ದೇಶಕರು. ಈ ಹಿಂದೆ ಇವರು ಪುನೀತ್ ರಾಜ್ ಕುಮಾರ್ ಬ್ಯಾನರ್ ನಲ್ಲಿ ಮಾಯಾಬಜಾರ್ ಸಿನಿಮಾವನ್ನು ನಿರ್ದೇಶನ ಮಾಡಿದ್ದರು. ಇದು ಇವರ ಎರಡನೇ ಸಿನಿಮಾ.

    Live Tv

  • ಮಾಜಿ ಮಂತ್ರಿ ಜನಾರ್ದನ ರೆಡ್ಡಿ ಪುತ್ರನ ಸಾಹಸವಿದು

    ಮಾಜಿ ಮಂತ್ರಿ ಜನಾರ್ದನ ರೆಡ್ಡಿ ಪುತ್ರನ ಸಾಹಸವಿದು

    ಮಾಜಿ ಮಂತ್ರಿ ಜನಾರ್ದನ್ ರೆಡ್ಡಿ ಪಾತ್ರ ಕಿರೀಟಿ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದ್ದಾರೆ. ಇನ್ನಷ್ಟೇ ಅವರ ಚೊಚ್ಚಲು ನಟನೆಯ ಸಿನಿಮಾದ ಶೂಟಿಂಗ್ ಶುರುವಾಗಬೇಕು ಅದಕ್ಕೂ ಮುನ್ನ ಮೊದಲ ಸಿನಿಮಾದ ಇಂಟ್ರೂಡಕ್ಷನ್ ಟೀಸರ್ ರಿಲೀಸ್ ಮಾಡಿದ್ದಾರೆ. ಕಿರೀಟಿ ಸ್ಟಂಟ್ಸ್, ಡ್ಯಾನ್ಸ್, ಆಕ್ಷನ್ ಸೀನ್ಸ್ ಕಂಡು ಚಿತ್ರರಸಿಕರು ಹುಬ್ಬೇರಿಸಿದ್ದರು. ಸ್ವತಃ ಚಿತ್ರಬ್ರಹ್ಮ ರಾಜಮೌಳಿಯೇ ಕಿರೀಟಿ ಆಕ್ಟಿಂಗ್ , ಸ್ಟಂಟ್ಸ್ ಗೆ ಬಹುಪರಾಕ್ ಅಂತಾ ಬೆನ್ನುತಟ್ಟಿದ್ದರು. ಇಷ್ಟೆಲ್ಲಾ ಮೆಚ್ಚುಗೆ ಪಡೆದಿರುವ ಕಿರೀಟಿ ಸಾಹಸದ ಹಿಂದೆ ನೋವು, ಕಷ್ಟದ ಪರಿಶ್ರಮ ಅಡಗಿದೆ. ಇದನ್ನೂ ಓದಿ: ತಾಯಿಯಾಗುತ್ತಿದ್ದಾರೆ ಚಂದ್ರನ ರಾಣಿ ಶ್ರಿಯಾ ಸರನ್ 

    ಜನಾರ್ದನ ರೆಡ್ಡಿ ಸುಪುತ್ರ ಕಿರೀಟಿ ಇಂಟ್ರೂಡಕ್ಷನ್  ಬಿಟಿಎಸ್ ಅಂದ್ರೆ ಟೀಸರ್ ಹಿಂದಿನ ಪರಿಶ್ರಮ ಸಣ್ಣದೊಂದು ಝಲಕ್ ನ್ನು ಚಿತ್ರತಂಡ ರಿಲೀಸ್ ಮಾಡಿದೆ.  ಆ ವಿಡಿಯೋ ತುಣುಕಿನಲ್ಲಿ ಕಿರೀಟಿ ಪರಿಶ್ರಮ ಎದ್ದು ಕಾಣ್ತಿದೆ. ಬಿದ್ದು, ಎದ್ದು, ಪೆಟ್ಟು ಮಾಡಿಕೊಂಡರು ಛಲ ಬಿಡದೇ ಕಿರೀಟಿ ಸ್ಟಂಟ್ಸ್ ಗಳನ್ನು ಅದ್ಭುತವಾಗಿ ಮಾಡಿದ್ದಾರೆ. ಖ್ಯಾತ ಸ್ಟಂಟ್ ಮಾಸ್ಟರ್ ಪೀಟರ್ ಹೇನ್ ಸಾರಥ್ಯದಲ್ಲಿ ಮೂಡಿ ಬಂದಿರುವ ಸ್ಟಂಟ್ಸ್ ಮೈ ಜುಮ್ ಎನಿಸುತ್ತವೆ.  ಇದನ್ನೂ ಓದಿ: ಮಗಳ ಮದುವೆಯ ಫೋಟೋ ಶೇರ್ ಮಾಡಿ ಭಾವುಕರಾದ ಆಲಿಯಾ ತಾಯಿ

    ಅಂದಹಾಗೇ ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ವಾರಾಹಿ ಫಿಲ್ಮಂ ಪ್ರೊಡಕ್ಷನ್ ನಡಿ ಅದ್ಧೂರಿ ಬಜೆಟ್ ನಲ್ಲಿ ತಯಾರಾಗ್ತಿರುವ 15 ಸಿನಿಮಾ ಇದಾಗಿದ್ದು, ಮಯಾಬಜಾರ್ ಖ್ಯಾತಿಯ ರಾಧಾಕೃಷ್ಣ ರೆಡ್ಡಿ ಓಂಕಾರ ಹಾಕಿರುವ, ಬಾಹುಬಲಿ ಛಾಯಾಗ್ರಾಹಕ ಕೆಕೆ ಸೆಂಥಿಲ್ ಕುಮಾರ್ ಕ್ಯಾಮೆರಾ ಕೈಚಳಕ ಹಾಗೂ ದೇವಿಶ್ರೀಪ್ರಸಾದ್ ಮ್ಯೂಸಿಕ್ ಪುಳಕ ಹಾಗೂ ರವೀಂದರ್ ಕಲಾ ನಿರ್ದೇಶನ ಕಿರೀಟಿ ಸಿನಿಮಾಗಿದೆ. ಕಿರೀಟಿ ತಂದೆ ಪಾತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಬಣ್ಣ ಹಚ್ಚಿದ್ದು, ಶ್ರೀಲೀಲಾ ನಾಯಕನಾಗಿ ನಟಿಸಿದ್ದು, ಜೆನಿಲಿಯಾ ಸೇರಿದಂತೆ ದೊಡ್ಡ ತಾರಾಬಳಗ ಸಿನಿಮಾದಲ್ಲಿದೆ.

  • ಜನಾರ್ದನ ರೆಡ್ಡಿ ಪುತ್ರನ ಸಿನಿಮಾದಲ್ಲಿ ಇಬ್ಬರು ನಾಯಕಿಯರು?

    ಜನಾರ್ದನ ರೆಡ್ಡಿ ಪುತ್ರನ ಸಿನಿಮಾದಲ್ಲಿ ಇಬ್ಬರು ನಾಯಕಿಯರು?

    ಮಾಜಿ ಸಚಿನ ಗಾಲಿ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಸ್ಯಾಂಡಲ್ ವುಡ್ ಅಂಗಳಕ್ಕೆ ಬಂದಾಗಿದೆ. ಇನ್ನೇನು ಸದ್ಯದಲ್ಲೇ ಸಿನಿಮಾದ ಮುಹೂರ್ತ ಕೂಡ ನಡೆಯುತ್ತಿದೆ. ಈ ಮಧ್ಯ ಈ ಚಿತ್ರದಲ್ಲಿ ಇಬ್ಬರು ನಾಯಕಿಯರು ನಟಿಸಲಿದ್ದಾರೆ ಎನ್ನುವ ಸುದ್ದಿ ಚಿತ್ರತಂಡದಿಂದಲೇ ಬಂದಿದೆ. ಇದನ್ನೂ ಓದಿ: ಮೈಕಲ್ ಅಂಡ್ ಮಾರ್ಕೊನಿ ಸಿನಿಮಾದಲ್ಲಿ ಪ್ರಶಾಂತ್ ಸಿದ್ದಿ ವಿಶೇಷ ಪಾತ್ರ

    ತಮಿಳು ಸಿನಿಮಾ ರಂಗದ ಫೇಮಸ್ ನಟಿ ಜೆನಿಲಿಯಾ ಮತ್ತು ಕನ್ನಡದ ಹುಡುಗಿ ಶ್ರೀಲೀಲಾ ಇಬ್ಬರೂ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಶ್ರೀಲೀಲಾ ನಾಯಕಿಯಾಗಿ ನಟಿಸುತ್ತಿದ್ದರೆ, ಜೆನಿಲಿಯಾ ಪಾತ್ರ ಸದ್ಯಕ್ಕೆ ಸಸ್ಪೆನ್ಸ್. ಇದನ್ನೂ ಓದಿ: ಹಾಲಿವುಡ್ ಗೆ ಹಾರಿದ ಸುದೀಪ್ ನಟನೆಯ ವಿಕ್ರಾಂತ್ ರೋಣ

    ಶಿವರಾಜ್ ಕುಮಾರ್ ನಟನೆಯ ಸತ್ಯ ಇನ್ ಲವ್ ನಂತರ ಜೆನಿಲಿಯಾ ಮತ್ತೆ ಕನ್ನಡ ಸಿನಿಮಾವನ್ನು ಮಾಡಿರಲಿಲ್ಲ. ನಟ ರಿತೇಶ್ ದೇಶಮುಖ ಅವರನ್ನು ಮದುವೆಯಾದ ನಂತರ ಅವರು ಸಿನಿಮಾ ರಂಗದಿಂದಲೇ ದೂರವಾಗಿದ್ದರು. ಇದೀಗ ಕಿರೀಟಿ ನಟನೆಯ ಚೊಚ್ಚಲು ಸಿನಿಮಾದ ಮೂಲಕ ಮತ್ತೆ ಚಿತ್ರೋದ್ಯಮಕ್ಕೆ ಕಮ್ ಬ್ಯಾಕ್ ಆಗುತ್ತಿದ್ದಾರೆ. ಇದನ್ನೂ ಓದಿ: ಸ್ಸಾರಿ… ಥಿಯೇಟರ್ ಗೆ ಬರ್ತಿಲ್ಲ ತಮಿಳಿನ ಧನುಷ್ ನಟನೆಯ ಮಾರನ್ ಸಿನಿಮಾ

    ಈ ಸಿನಿಮಾವನ್ನು ಟಾಲಿವುಡ್‌ನ ಜನಪ್ರಿಯ ನಿರ್ಮಾಣ ಸಂಸ್ಥೆ ವಾರಾಹಿ ಫಿಲ್ಮಂ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿದ್ದು, ತೆಲುಗು ಮತ್ತು ಕನ್ನಡ ಭಾಷೆಯಲ್ಲಿ ಏಕಕಾಲಕ್ಕೆ ಸಿನಿಮಾ ನಿರ್ಮಾಣವಾಗಲಿದೆ.  ಇನ್ನೂ ಹೆಸರಿಡದ ಈ ಸಿನಿಮಾವನ್ನು ಭಾರೀ ಬಜೆಟ್ ನಲ್ಲಿ ತಯಾರಿಸುತ್ತಿದ್ದು, ಹೆಸರಾಂತರ ತಾರಾಬಳಗವ ಇರಲಿದೆ. ಇದನ್ನೂ ಓದಿ:  ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಅಪ್ಡೇಟ್ : ಯಾವಾಗ, ಏನು ಅಂತ ನೋಡ್ಕೊಂಡ್ ಬಿಡಿ

    ಸಾಯಿ ಕೊರಪಾಠಿ ನಿರ್ಮಿಸಲಿರುವ ಚಿತ್ರಕ್ಕೆ ರಾಕ್‌ಸ್ಟಾರ್ ದೇವಿ ಶ್ರೀ ಪ್ರಸಾದ್ ಸಂಗೀತ ನೀಡಲಿದ್ದು, ಬಾಹುಬಲಿ ಸಿನಿಮಾದ ಕಣ್ಣು ಕೆ ಸೆಂಥಿಲ್ ಕುಮಾರ್ ಛಾಯಾಗ್ರಹಣವನ್ನು ವಹಿಸಲಿದ್ದಾರೆ. ರವೀಂದರ್ ಆರ್ಟ್ ಡೈರೆಕ್ಟರ್ ಆಗಿ, ಭಾರತದ ಟಾಪ್ ಸ್ಟಂಟ್ ನಿರ್ದೇಶಕ ಪೀಟರ್ ಹೆನ್ ಆಕ್ಷನ್ ಸೀಕ್ವೆನ್ಸ್‌ಗಳಿಗೆ ನೃತ್ಯ ಸಂಯೋಜನೆ ಮಾಡಲಿದ್ದಾರೆ.

  • ಜೇಮ್ಸ್ ಟ್ರೇಡ್ ಮಾರ್ಕ್ ಹಾಡಿಗೆ ಪುನೀತ್ ಭರ್ಜರಿ ಸ್ಟೆಪ್: ಭಾವುಕರಾದ ಅಭಿಮಾನಿಗಳು

    ಜೇಮ್ಸ್ ಟ್ರೇಡ್ ಮಾರ್ಕ್ ಹಾಡಿಗೆ ಪುನೀತ್ ಭರ್ಜರಿ ಸ್ಟೆಪ್: ಭಾವುಕರಾದ ಅಭಿಮಾನಿಗಳು

    ಇಂದು ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಚಿತ್ರದ ಪ್ರೊಮೊಷನ್ ಸಾಂಗ್ ‘ಟ್ರೇಡ್ ಮಾರ್ಕ್’ ಬಿಡುಗಡೆ ಆಗಿದೆ. ರಿಲೀಸ್ ಆದ ಕೆಲವೇ ನಿಮಿಷಗಳಲ್ಲೇ ಈ ಹಾಡು ವೈರಲ್ ಆಗಿದ್ದು, ಈ ಸಿನಿಮಾದ ಕೆಲ ಹಾಡಿಗೆ ಪುನೀತ್ ಅವರು ಹಾಕಿದ ಸ್ಟೆಪ್ ನೋಡಿ ಅಭಿಮಾನಿಗಳು ಭಾವುಕರಾಗಿದ್ದಾರೆ. ಇದನ್ನೂ ಓದಿ : ಪ್ರಶ್ನೆ ಮಾಡುವುದನ್ನು ನಿಲ್ಲಿಸಲ್ಲ : ಮತ್ತೆ ಗುಡುಗಿದ ನಟ ಚೇತನ್

    ನಟನೆಯಷ್ಟೇ ನೃತ್ಯದಲ್ಲೂ ಪುನೀತ್ ಪಳಗಿದವರು. ಕೆಲವು ಸಲ ಸಿನಿಮಾ ಗೆಲ್ಲದಿದ್ದರೂ, ಹಾಡುಗಳು ಸೂಪರ್ ಹಿಟ್ ಆದ ಉದಾಹರಣೆಗಳು ಕೂಡ ಇವೆ. ಅದರಲ್ಲೂ ಹಾಡಿಗಾಗಿ ಅವರು ಹಾಕುವ ಸ್ಟೆಪ್ ಕೂಡ ವಿಭಿನ್ನವಾಗಿರುತ್ತವೆ. ಹಾಗಾಗಿ ಅಪ್ಪು ಡಾನ್ಸ್ ಅಂದರೆ ಎಲ್ಲರಿಗೂ ಇಷ್ಟ. ಜೇಮ್ಸ್ ನಲ್ಲೂ ಅವರು ಪವರ್ ಫುಲ್ ಆಗಿಯೇ ನೃತ್ಯ ಮಾಡಿದ್ದಾರೆ. ಇದೀಗ ಬಿಡುಗಡೆ ಆಗಿರುವ ಪ್ರಮೋಷನಲ್ ಸಾಂಗ್ ನಲ್ಲಿ ಒಂದಷ್ಟು ತುಣುಕುಗಳನ್ನು ಹಾಕಿದ್ದಾರೆ ನಿರ್ದೇಶಕರು. ಈ ನೃತ್ಯವೇ ಅಭಿಮಾನಿಗಳ ಕಣ್ಣಲ್ಲಿ ನೀರು ತರಿಸಿದೆ. ಇಂತಹ ಡಾನ್ಸಿಗಾದರೂ ನೀವು ಇರಬೇಕಿತ್ತು ಎನ್ನುವ ಭಾವುಕ ನುಡಿಗಳನ್ನು ಅಭಿಮಾನಿಗಳು ಆಡಿದ್ದಾರೆ. ಇದನ್ನೂ ಓದಿ : ಶಿವರಾತ್ರಿ ವಿಶೇಷ: ತೆರೆಗೆ ಶಿವನಾಗಿ ದರ್ಶನ ಕೊಟ್ಟ ನಟ ಶಿವರು

    ಟ್ರೇಡ್ ಮಾರ್ಕ್ ಇದೊಂದು ಲಿರಿಕಲ್ ವಿಡಿಯೋ ಆಗಿದ್ದು, ಜೇಮ್ಸ್ ಸಿನಿಮಾದ ಮುಹೂರ್ತದಂದು ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಕ್ಲ್ಯಾಪ್ ಮಾಡುವ ದೃಶ್ಯದಿಂದ ಶುರುವಾಗುತ್ತದೆ. ಚಂದನ್ ಶೆಟ್ಟಿ, ಆಶಿಕಾ ರಂಗನಾಥ್, ಶ್ರೀಲೀಲಾ, ಮೋಹನ್ ಮೊದಲಾದವರು ಸ್ಟೆಪ್ ಹಾಕಿದ್ದಾರೆ. ಅಲ್ಲದೇ, ಜೇಮ್ಸ್ ಸಿನಿಮಾದ ಹಾಡಿನ ಕೆಲ ತುಣುಕುಗಳನ್ನೂ ಈ ವಿಡಿಯೋದಲ್ಲಿ ಹಾಕಲಾಗಿರುವುದು ಮತ್ತೊಂದು ವಿಶೇಷ. ಇದನ್ನೂ ಓದಿ : ಹರಿಪ್ರಿಯಾ ಟೆಂಪಲ್ ರನ್: ಉಡುಪಿ ಮಠದ ಆನೆಯೊಂದಿಗೆ ಸಮಯ ಕಳೆದ ನಟಿ

    ಚರಣ್ ರಾಜ್ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿರುವ ಟ್ರೇಡ್ ಮಾರ್ಕ್ ಗೀತೆಗೆ ವಿಕ್ಕಿ, ಅದಿತಿ ಸಾಗರ್ ಮತ್ತು ಚಂದನ್ ಶೆಟ್ಟಿ, ಶರ್ಮಿಳಾ, ಯುವ ರಾಜ್ ಕುಮಾರ್ ಮತ್ತು ಚರಣ್ ರಾಜ್ ದನಿಯಾಗಿದ್ದಾರೆ. ಚೇತನ್ ಕುಮಾರ್ ಸಾಹಿತ್ಯದಲ್ಲಿ ಹಾಡು ಮೂಡಿ ಬಂದಿದೆ.