Tag: SriLankan

  • ಆರ್ಥಿಕ ಬಿಕ್ಕಟ್ಟಿನಿಂದ ಪಾರಾಗಲು ಆಸ್ಟ್ರೇಲಿಯಾಕ್ಕೆ ಅಕ್ರಮ ವಲಸೆಗೆ ಯತ್ನ – 51 ಮಂದಿ ಬಂಧನ

    ಆರ್ಥಿಕ ಬಿಕ್ಕಟ್ಟಿನಿಂದ ಪಾರಾಗಲು ಆಸ್ಟ್ರೇಲಿಯಾಕ್ಕೆ ಅಕ್ರಮ ವಲಸೆಗೆ ಯತ್ನ – 51 ಮಂದಿ ಬಂಧನ

    ಕೊಲಂಬೊ: ಸತತ ಆರ್ಥಿಕ ಬಿಕ್ಕಟ್ಟಿನಿಂದ ತಪ್ಪಿಸಿಕೊಳ್ಳಲು ಆಸ್ಟ್ರೇಲಿಯಾಕ್ಕೆ ಅಕ್ರಮವಾಗಿ ವಲಸೆ ಹೋಗಲು ಮುಂದಾಗುತ್ತಿದ್ದ 51 ಮಂದಿ ಶ್ರೀಲಂಕಾ ಪ್ರಜೆಗಳನ್ನು ಇಂದು ಬಂಧಿಸಲಾಗಿದೆ. ಕಳೆದ ಒಂದು ವಾರದಲ್ಲಿ ಅಕ್ರಮ ವಲಸೆಗೆ ಯತ್ನಿಸಿದ 4ನೇ ಘಟನೆ ಇದಾಗಿದೆ ಎಂದು ಶ್ರೀಲಂಕಾ ವಾಯುಪಡೆ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

    SRILANKA

    ಇಂದು ಬೆಳಗ್ಗೆ ಲಂಕಾದ ಪಶ್ಚಿಮ ಕರಾವಳಿಯ ಮಾರವಿಲಾದಲ್ಲಿ ಶ್ರೀಲಂಕಾದ ಕೋಸ್ಟ್‌ಗಾರ್ಡ್‌ ಮತ್ತು ಪೊಲೀಸ್ ತಂಡವು ಕಾರ್ಯಾಚರಣೆ ನಡೆಸಿದೆ. ಈ ವೇಳೆ ಪೂರ್ವ ಸಮುದ್ರದ ಮಾರ್ಗವಾಗಿ ಆಸ್ಟ್ರೇಲಿಯಾಕ್ಕೆ ವಲಸೆ ಹೋಗಲು ಯತ್ನಿಸುತ್ತಿದ್ದದ್ದು ಕಂಡುಬಂದಿದೆ. ಸಮುದ್ರದಲ್ಲಿ ಮೀನುಗಾರಿಕಾ ಟ್ರಾಲರ್ ಅನ್ನು ವಶಪಡಿಸಿಕೊಂಡ ನಂತರ ಅಕ್ರಮವಾಗಿ ವಲಸೆ ಹೋಗಲು ಪ್ರಯತ್ನಿಸುತ್ತಿದ್ದ 51 ಮಂದಿ ಸಿಕ್ಕಿಬಿದ್ದಿದ್ದಾರೆ.

    ನೌಕಾಪಡೆಯು ಇಂದು ಬೆಳಿಗ್ಗೆ ಪೂರ್ವ ಸಮುದ್ರದಲ್ಲಿ ಶೋಧ ನಡೆಸಿದಾಗ 51 ಜನರನ್ನು ಹೊತ್ತೊಯ್ಯುತ್ತಿದ್ದ ಸ್ಥಳೀಯ ಬಹು-ದಿನದ ಮೀನುಗಾರಿಕೆ ಟ್ರಾಲರ್ ಅನ್ನು ವಶಪಡಿಸಿಕೊಂಡಿದೆ. ಅವರು ಸಮುದ್ರಮಾರ್ಗದಿಂದ ಅಕ್ರಮವಾಗಿ ವಲಸೆ ಹೋಗುವ ಯತ್ನದಲ್ಲಿದ್ದಾರೆ ಎಂದು ನೌಕಾಪಡೆ ಶಂಕೆ ವ್ಯಕ್ತಪಡಿಸಿದೆ.

    ಕಳೆದ ಜೂನ್ 27, 28ರಂದು ಅಕ್ರಮವಾಗಿ ವಲಸೆ ಹೋಗುತ್ತಿದ್ದ 100ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿತ್ತು. ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನಿಂದಾಗಿ ಜನರು ಪಲಾಯನ ಮಾಡುತ್ತಿದ್ದು, ಈ ವರ್ಷಾರಂಭದಿಂದ ಇದು ಶುರುವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಆಸ್ಟ್ರೇಲಿಯಾ ಅಕ್ರಮ ವಲಸಿಗರನ್ನು ನಿಯಂತ್ರಿಸಲು ಕ್ರಮ ವಹಿಸಿದೆ.

    Live Tv

  • ಶ್ರೀಲಂಕಾದಲ್ಲಿ ಬುಗಿಲೆದ್ದ ಆಕ್ರೋಶಕ್ಕೆ ಆಡಳಿತ ಪಕ್ಷದ ಸಂಸದ ಬಲಿ

    ಶ್ರೀಲಂಕಾದಲ್ಲಿ ಬುಗಿಲೆದ್ದ ಆಕ್ರೋಶಕ್ಕೆ ಆಡಳಿತ ಪಕ್ಷದ ಸಂಸದ ಬಲಿ

    ಕೊಲಂಬೊ: ಶ್ರೀಲಂಕಾದದಲ್ಲಿ ಬುಗಿಲೆದ್ದ ಜನರ ಆಕ್ರೊಶದಿಂದ ರಾಷ್ಟ್ರವ್ಯಾಪಿ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿದೆ. ಇದರಿಂದ ಆಡಳಿತ ಪಕ್ಷದ ಸಂಸದನನ್ನೇ ಬಲಿ ತೆಗೆದುಕೊಳ್ಳುವಂತೆ ಮಾಡಿದೆ.

    ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಈ ವಿಷಯ ಬೆಳಕಿಗೆ ಬಂದಿದೆ. ಆಡಳಿತ ಪಕ್ಷದ ಓರ್ವ ಸಂಸದ ಮೃತಪಟ್ಟಿದ್ದು, ಈ ಸಂಘರ್ಷದಲ್ಲಿ ಹತ್ತಾರು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ಪ್ರಧಾನಿ ಸ್ಥಾನಕ್ಕೆ ಮಹಿಂದಾ ರಾಜಪಕ್ಸ ರಾಜೀನಾಮೆ

    ಆಡಳಿತ ಪಕ್ಷದ ಸಂಸದ ಅಮರಕೀರ್ತಿ ಅತ್ತುಕೋರಲ ಅವರು ನಿಟ್ಟಂಬುವದಲ್ಲಿ ಬರುತ್ತಿದ್ದ ವೇಳೆ, ಅವರ ಕಾರನ್ನು ತಡೆದು ಇಬ್ಬರು ವ್ಯಕ್ತಿಗಳು ಏಕಾಏಕಿ ಗುಂಡು ಹಾರಿಸಿದ್ದಾರೆ. ತೀವ್ರವಾಗಿ ಗಾಯಗೊಂಡ ಅವರು ಹತ್ತಿರದ ಕಟ್ಟಡದಲ್ಲಿ ಆಶ್ರಯ ಪಡೆಯಲು ಯತ್ನಿಸಿದ್ದಾರೆ. ಇದೇ ವೇಳೆ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಮಾಜಿ ಕ್ರಿಕೆಟಿಗರ ಆಕ್ರೋಶ: ದ್ವೀಪ ರಾಷ್ಟ್ರದಲ್ಲಿ ನಡೆದಿರುವ ಹಿಂಸಾಚಾರವನ್ನು ಖಂಡಿಸಿರುವ ಶ್ರೀಲಂಕಾದ ಮಾಜಿ ಕ್ರಿಕೆಟಿಗರು, ಗೂಂಡಾಗಿರಿಯ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: 1945 ರಲ್ಲಿದ್ದಂತೆ, ವಿಜಯವು ನಮ್ಮದಾಗಿರುತ್ತದೆ: ಪುಟಿನ್ ಪ್ರತಿಜ್ಞೆ

    https://twitter.com/Sanath07/status/1523599175773876225?ref_src=twsrc%5Etfw%7Ctwcamp%5Etweetembed%7Ctwterm%5E1523599175773876225%7Ctwgr%5E%7Ctwcon%5Es1_&ref_url=https%3A%2F%2Fwww.prajavani.net%2Fworld-news%2Fsri-lanka-violence-goons-thugs-ex-cricketers-jayasuriya-jayawardena-slam-rajapaksas-colombo-clashes-935289.html

    ಮಹೇಲ ಜಯವರ್ಧನೆ, ಕುಮಾರ್ ಸಂಗಕ್ಕರ ಹಾಗೂ ಜಯಸೂರ್ಯ ಸಹ ದಾಳಿ ನಡೆಸಿರುವವರನ್ನು `ಘಾತುಕರು’ ಎಂದು ಕರೆದಿದ್ದಾರೆ. ಈ ಘಾತುಕರು ಪ್ರಧಾನಿಯ ಅಧಿಕೃತ ನಿವಾಸದಲ್ಲಿ ಬೆಳಿಗ್ಗೆ ಜೊತೆಗೂಡಿ, ಸರ್ಕಾರದ ವಿರುದ್ಧ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಅಮಾಯಕರ ಮೇಲೆ ದಾಳಿ ನಡೆಸಿದ್ದಾರೆ. ಇದೆಲ್ಲ ಹೇಗೆ ನಡೆಯಲು ಸಾಧ್ಯವಾಯಿತು? ಪೊಲೀಸರು ಮತ್ತು ಇತರರು ಇದನ್ನು ಕೇವಲ ನೋಡುತ್ತಿದ್ದರಷ್ಟೇ, ಎಂದು ಜಯವರ್ಧನೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.