Tag: srimurali

  • ಮಗನನ್ನು ಹೀರೋ ಆಗಿ ನೋಡೋದು ಸ್ಪಂದನಾ ಕನಸಾಗಿತ್ತು- ನಿರ್ದೇಶಕ ಮಹೇಶ್

    ಮಗನನ್ನು ಹೀರೋ ಆಗಿ ನೋಡೋದು ಸ್ಪಂದನಾ ಕನಸಾಗಿತ್ತು- ನಿರ್ದೇಶಕ ಮಹೇಶ್

    ಸ್ಯಾಂಡಲ್‌ವುಡ್‌ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾಗೆ ಎಲ್ಲಾ ಪೋಷಕರಂತೆಯೇ ತನ್ನ ಮಗನ ಮೇಲೆ ಸಾವಿರಾರು ಕನಸನ್ನು ಕಟ್ಟಿಕೊಂಡಿದ್ದರು. ವಿಜಯ ಅವರಂತೆಯೇ ಮಗ ಶೌರ್ಯ ಹೀರೋ ಆಗಬೇಕು ಎಂಬುದು ಸ್ಪಂದನಾ ಕನಸಾಗಿತ್ತು ಎಂದು  ‘ಮದಗಜ’ ಚಿತ್ರದ ನಿರ್ದೇಶಕ ಮಹೇಶ್ ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ:ಕುಟುಂಬಕ್ಕೆ ಸ್ಪಂದನಾ ಮೃತದೇಹ ಹಸ್ತಾಂತರ ಪ್ರಕ್ರಿಯೆ ಪೂರ್ಣ

    ನಿರ್ದೇಶಕ ಮಹೇಶ್ ಈ ಬಗ್ಗೆ ಮಾತನಾಡಿದ್ದು, ಸ್ಪಂದನಾಗೆ ತಮ್ಮ ಮಗನನ್ನ ಹೀರೋ ಮಾಡಬೇಕು ಅನ್ನೋ ದೊಡ್ಡ ಕನಸಿತ್ತು. ಮಗನ ಮೊದಲ ಸಿನಿಮಾವನ್ನ ವಿಜಯ ರಾಘವೇಂದ್ರ ಅವರೇ ಡೈರೆಕ್ಷನ್ ಮಾಡುವ ಯೋಚನೆಯಿತ್ತು. ಶ್ರೀಮುರಳಿ ಮತ್ತು ವಿಜಯ್ ಪುತ್ರರನ್ನು ಅವರ ವಿದ್ಯಾಭ್ಯಾಸದ ನಂತರ ಮುಂದಿನ ವರ್ಷಗಳಲ್ಲಿ ನಾಯಕ ನಟನಾಗಿ ಪರಿಚಯಿಸೋ ಆಸೆ ಸ್ಪಂದನಾದಾಗಿತ್ತು ಎಂದು ಹೇಳಿದ್ದಾರೆ. ಇದನ್ನೂ ಓದಿ:ರಾಹುಲ್ ಮದ್ವೆಯಾಗ್ತೀನಿ – ಒಂದು ಷರತ್ತು ಪಾಲಿಸಬೇಕು ಎಂದ ಶೆರ್ಲಿನ್ ಚೋಪ್ರಾ

    ಸ್ಪಂದನಾ ಸಾವು ಸಹಿಸಿಕೊಳ್ಳುವ ಶಕ್ತಿ ಶ್ರೀಮುರಳಿ ಅವರಿಗಿಲ್ಲ. ನನ್ನ ಕುಟುಂಬಕ್ಕೆ ಯಾಕೆ ಪದೇ ಪದೇ ಹೀಗೆ ಆಗುತ್ತಿದೆ. ನಾನು ಎಂದಿಗೂ ಯಾರಿಗೂ ದ್ರೋಹ ಮಾಡಿಲ್ಲ. ದೇವರು ಯಾಕೆ ಪದೇ ಪದೇ ನೋವು ಕೊಡ್ತಾ ಇದ್ದಾನೆ ಅಂತಾ ಮುರಳಿ ಬೇಸರ ವ್ಯಕ್ತಪಡಿಸಿದ್ದಾರೆ. ಅಪ್ಪು ಅಗಲಿಕೆಯನ್ನು ಅವ್ರು ಅರಗಿಸಿಕೊಂಡಿಲ್ಲ. ಅಷ್ಟರಲ್ಲಿ ಸೂರಜ್‌ಗೆ ಆಕ್ಸಿಡೆಂಟ್ ಆಗಿ ಕಾಲು ಕಟ್ ಆಗಿತ್ತು. ಸೂರಜ್‌ಗೆ ನೆರವಾಗಬೇಕು ಅಂತೆಲ್ಲ ಶ್ರೀಮುರಳಿ- ವಿಜಯ್ ಪ್ಲ್ಯಾನ್ ಹಾಕಿಕೊಂಡಿದ್ರು. ಅಷ್ಟರಲ್ಲಿ  ಸ್ಪಂದನಾ ಅವರಿಗೆ ಈಗಾಗಿದೆ. ನಿಜವಾಗ್ಲೂ ಇದನ್ನು ತಡೆದುಕೊಳ್ಳುವ ಶಕ್ತಿ ಮುರಳಿಗೂ ಇಲ್ಲ ವಿಜಯ್‌ಗೂ ಇಲ್ಲಾ ಎಂದು ಮಹೇಶ್ ಮಾತನಾಡಿದ್ದಾರೆ.

    ಚಿನ್ನೇಗೌಡ್ರನ್ನು ತಂದೆಯಂತೆ ಪ್ರೀತಿಯಿಂದ ಕಾಣುತ್ತಿದ್ದರು ಸ್ಪಂದನಾ. ಮನೆಯಲ್ಲಿದ್ದಾಗ ಅವರೇ ಮಾವನಿಗೆ ಊಟ ಬಡಿಸುತ್ತಿದ್ರು. ತುಂಬಾ ಒಳ್ಳೆಯ ಬಾಂದವ್ಯ ಇತ್ತು. ಚಿನ್ನೇಗೌಡ್ರಿಗೆ ಈ ನೋವು ಸಹಿಸೋ ಶಕ್ತಿ ಇರಲ್ಲ. ಸೊಸೆ ಮನೆ ಮಗಳಂತೆ ಕಾಣುತ್ತಿದ್ದರು. ಸ್ಪಂದನಾ ಅತ್ತಿಗೆ ಮನೆಗೆ ಬಂದಾಗೆಲ್ಲ ಮುರಳಿ ರೇಗಿಸುತ್ತಿದ್ದರು. ಈಗ ಎಲ್ಲರನ್ನು ಶಾಪಿಂಗ್‌ಗೆ ಕರೆಕೊಂಡು ಅಂಗಡಿಗಳನ್ನು ಮನೆಬಾಗಿಲಿಗೆ ತೆಗೆದುಕೊಂಡು ಬರುತ್ತಾರೆ ಅಂತಾ ರೇಗಿಸುತ್ತಿದ್ದರು. ಸ್ಪಂದನಾ ಮನೆಗೆ ಬಂದಾಗಲೆಲ್ಲ ಮುರುಳಿ ಮಕ್ಕಳ ಜೊತೆಗೂಡಿ ಶಾಪಿಂಗ್‌ಗೆ ಹೋಗುತ್ತಿದ್ರು. ಮಕ್ಕಳಿಗೆ ಬಟ್ಟೆ, ಫುಡ್ ಕೊಡಿಸೋದು ಅವರಿಗೆ ಇಷ್ಟ. ಅವರ ಚಂದದ ಕುಟುಂಬದ ಮೇಲೆ ಯಾರ ಕೆಟ್ಟ ಕಣ್ಣು ಬಿತ್ತು ಗೊತ್ತಿಲ್ಲ ಎಂದು ಎಸ್. ಮಹೇಶ್ ವಿಷಾದ ವ್ಯಕ್ತಪಡಿಸಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ಪಂದನಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

    ಸ್ಪಂದನಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

    ಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸಂತಾಪ ವ್ಯಕ್ತ ಪಡಿಸಿದ್ದಾರೆ. ಸಿದ್ದರಾಮಯ್ಯ ಟ್ವೀಟ್ ಮಾಡಿ, ‘ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರ ಅಕಾಲಿಕ ನಿಧನದ ವಾರ್ತೆ ಆಘಾತವನ್ನುಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಸ್ಪಂದನಾ ಅವರ ಅಗಲಿಕೆಯಿಂದ ನೊಂದಿರುವ ವಿಜಯ ರಾಘವೇಂದ್ರ ಹಾಗೂ ಬಿ.ಕೆ ಶಿವರಾಂ ಅವರ ಕುಟುಂಬಕ್ಕೆ ನನ್ನ ಸಂತಾಪಗಳು’ ಎಂದು ಟ್ವೀಟ್ ಮಾಡಿದ್ದಾರೆ.

    ಶ್ರೀಮುರಳಿ ಹೇಳಿದ್ದೇನು?

    ಸ್ಪಂದನಾ (Spandana) ಸಾವಿನ ವಿಚಾರ ಕುರಿತಂತೆ ನಟ ಶ್ರೀಮುರಳಿ ಪ್ರತಿಕ್ರಿಯೆ ನೀಡಿದ್ದು,’ಅಣ್ಣ ನನಗೆ ಕಾಲ್ ಮಾಡಿ ಹೇಳಿದ್ದು ಇಷ್ಟೆ. ಅತ್ತಿಗೆ ಮಲಗಿದವರು ಎದ್ದೇಳಲಿಲ್ಲ ಅಂತ. ಆಮೇಲೆ ಏನಾಯಿತು ಎನ್ನುವುದರ ಕುರಿತು ನಾಳೆಯೇ ಸ್ಪಷ್ಟತೆ ಸಿಗಲಿದೆ. ಅತ್ತಿಗೆಯ ಅಗಲಿಗೆ ಆಘಾತ ಮೂಡಿಸಿದೆ’ ಎಂದು ಹೇಳಿದರು. ಇದನ್ನೂ ಓದಿ:ತಮಿಳಿಗೆ ಹಾರಿದ ‘ಸೀತಾರಾಮಂ’ ನಟಿ- ಶಿವಕಾರ್ತಿಕೇಯನ್‌ಗೆ ಮೃಣಾಲ್ ನಾಯಕಿ

    ಸ್ಪಂದನಾ ಅವರು ಸಂಬಂಧಿಗಳ ಜೊತೆ ಪ್ರವಾಸಕ್ಕೆ ತೆರಳಿದ್ದರು. ಶೂಟಿಂಗ್ ಮುಗಿಸಿಕೊಂಡು ವಿಜಯ ರಾಘವೇಂದ್ರ (Vijaya Raghavendra) ಕೂಡ ಅವರೊಂದಿಗೆ ಭಾಗಿಯಾಗಿದ್ದರು. ನಿನ್ನೆಯಷ್ಟೇ ಸ್ಪಂದನಾ ಅವರಿಗೆ ಹೃದಯಾಘಾತವಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಸರಿಯಾದ ಮಾಹಿತಿ ಇನ್ನೂ ಅವರ ಕುಟುಂಬಕ್ಕೆ ತಲುಪಿಲ್ಲ.

     

    ಈಗಾಗಲೇ ವಿಜಯ ರಾಘವೇಂದ್ರ ಕುಟುಂಬ ಮತ್ತು ಸ್ಪಂದನಾ ಅವರ ಕುಟುಂಬ ಬ್ಯಾಂಕಾಕ್ (Bangkok)ಗೆ ತೆರಳಿದೆ.  ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ನಾಲ್ಕು ದಿನಗಳ ಹಿಂದೆಯಷ್ಟೇ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅವರು ತನ್ನ ಕಾಲೇಜು ಸ್ನೇಹಿತರೊಂದಿಗೆ ಥಾಯ್ ಲ್ಯಾಂಡ್‍ಗೆ ಪ್ರವಾಸ ಹೋಗಿದ್ದರು. ಭಾನುವಾರ ಸಂಜೆ ಶಾಫಿಂಗ್ ಮುಗಿಸಿ ಹೋಟೇಲ್ ನತ್ತ ಹೋಗಬೇಕಾದರೆ ಸ್ಪಂದನಾ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ನೇಹಿತರು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅಷ್ಟರಲ್ಲಾಗಲೇ ಸ್ಪಂದನಾ ಮೃತಪಟ್ಟಿರುವುದಾಗಿ (Passway) ವೈದ್ಯರು ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅತ್ತಿಗೆ ಮಲಗಿದವರು ಎದ್ದೇಳಲಿಲ್ಲ ಅಂತ ನನಗೆ ಸಿಕ್ಕಿರುವ ಮಾಹಿತಿ : ನಟ ಶ್ರೀಮುರಳಿ

    ಅತ್ತಿಗೆ ಮಲಗಿದವರು ಎದ್ದೇಳಲಿಲ್ಲ ಅಂತ ನನಗೆ ಸಿಕ್ಕಿರುವ ಮಾಹಿತಿ : ನಟ ಶ್ರೀಮುರಳಿ

    ಸ್ಪಂದನಾ (Spandana) ಸಾವಿನ ವಿಚಾರ ಕುರಿತಂತೆ ನಟ ಶ್ರೀಮುರಳಿ ಪ್ರತಿಕ್ರಿಯೆ ನೀಡಿದ್ದು,’ಅಣ್ಣ ನನಗೆ ಕಾಲ್ ಮಾಡಿ ಹೇಳಿದ್ದು ಇಷ್ಟೆ. ಅತ್ತಿಗೆ ಮಲಗಿದವರು ಎದ್ದೇಳಲಿಲ್ಲ ಅಂತ. ಆಮೇಲೆ ಏನಾಯಿತು ಎನ್ನುವುದರ ಕುರಿತು ನಾಳೆಯೇ ಸ್ಪಷ್ಟತೆ ಸಿಗಲಿದೆ. ಅತ್ತಿಗೆಯ ಅಗಲಿಕೆ ಆಘಾತ ಮೂಡಿಸಿದೆ’ ಎಂದು ಹೇಳಿದರು.

    ಸ್ಪಂದನಾ ಅವರು ಸಂಬಂಧಿಗಳ ಜೊತೆ ಪ್ರವಾಸಕ್ಕೆ ತೆರಳಿದ್ದರು. ಶೂಟಿಂಗ್ ಮುಗಿಸಿಕೊಂಡು ವಿಜಯ ರಾಘವೇಂದ್ರ (Vijaya Raghavendra) ಕೂಡ ಅವರೊಂದಿಗೆ ಭಾಗಿಯಾಗಿದ್ದರು. ನಿನ್ನೆಯಷ್ಟೇ ಸ್ಪಂದನಾ ಅವರಿಗೆ ಹೃದಯಾಘಾತವಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಸರಿಯಾದ ಮಾಹಿತಿ ಇನ್ನೂ ಅವರ ಕುಟುಂಬಕ್ಕೆ ತಲುಪಿಲ್ಲ.

     

    ಈಗಾಗಲೇ ವಿಜಯ ರಾಘವೇಂದ್ರ ಕುಟುಂಬ ಮತ್ತು ಸ್ಪಂದನಾ ಅವರ ಕುಟುಂಬ ಬ್ಯಾಂಕಾಕ್ (Bangkok)ಗೆ ತೆರಳಿದೆ.  ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ನಾಲ್ಕು ದಿನಗಳ ಹಿಂದೆಯಷ್ಟೇ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅವರು ತನ್ನ ಕಾಲೇಜು ಸ್ನೇಹಿತರೊಂದಿಗೆ ಥಾಯ್ ಲ್ಯಾಂಡ್‍ಗೆ ಪ್ರವಾಸ ಹೋಗಿದ್ದರು. ಭಾನುವಾರ ಸಂಜೆ ಶಾಫಿಂಗ್ ಮುಗಿಸಿ ಹೋಟೇಲ್ ನತ್ತ ಹೋಗಬೇಕಾದರೆ ಸ್ಪಂದನಾ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ನೇಹಿತರು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅಷ್ಟರಲ್ಲಾಗಲೇ ಸ್ಪಂದನಾ ಮೃತಪಟ್ಟಿರುವುದಾಗಿ (Passedway) ವೈದ್ಯರು ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಶ್ರಾಂತಿ ಬಳಿಕ ‘ಬಘೀರ’ ಶೂಟಿಂಗ್ ನಲ್ಲಿ ಭಾಗಿಯಾದ ಶ್ರೀಮುರಳಿ

    ವಿಶ್ರಾಂತಿ ಬಳಿಕ ‘ಬಘೀರ’ ಶೂಟಿಂಗ್ ನಲ್ಲಿ ಭಾಗಿಯಾದ ಶ್ರೀಮುರಳಿ

    ರೋಬ್ಬರಿ ಮೂರು ತಿಂಗಳು ನಂತರ ಮತ್ತೆ ಬಘೀರ (Bagheera) ಸಿನಿಮಾದ ಶೂಟಿಂಗ್ ಪ್ರಾರಂಭವಾಗಿದೆ. ಚಿತ್ರೀಕರಣದಲ್ಲಿ ಗಾಯಗೊಂಡಿದ್ದ ನಟ ಶ್ರೀಮುರಳಿಗೆ ವೈದ್ಯರು ಮೂರು ತಿಂಗಳ ಕಾಲ ವಿಶ್ರಾಂತಿ ತಗೆದುಕೊಳ್ಳುವಂತೆ ಸೂಚಿಸಿದ್ದರು. ಇದೀಗ ವಿಶ್ರಾಂತಿ ಪಡೆದು ಮತ್ತೆ ಚಿತ್ರೀಕರಣದಲ್ಲಿ (Shooting) ಪಾಲ್ಗೊಂಡಿದ್ದಾರೆ. ಅರ್ಧಕ್ಕೆ ನಿಂತಿದ್ದ ಸಾಹಸ ದೃಶ್ಯದ ಚಿತ್ರೀಕರಣಲ್ಲಿ ಅವರು ಭಾಗಿಯಾಗಿದ್ದಾರೆ.

    ನಿರ್ದೇಶಕ ಸೂರಿ ಸದ್ಯ ಪ್ರಕಾಶ್ ರೈ (Prakash Rai) ಕಾಣಿಸಿಕೊಳ್ಳುವ ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದು, ಈ ದೃಶ್ಯಗಳು ಮುಗಿಯುತ್ತಿದ್ದಂತೆಯೇ ಚಿತ್ರತಂಡ ಮೈಸೂರಿಗೆ ಹಾರಲಿದೆಯಂತೆ. ರೇಸ್ ಕೋರ್ಸ್ ಸೇರಿದಂತೆ ಹಲವು ಸ್ಥಳಗಳಲ್ಲಿ ಚಿತ್ರೀಕರಣ ಮಾಡುವ ಪ್ಲ್ಯಾನ್ ಮಾಡಿದೆಯಂತೆ ಚಿತ್ರತಂಡ. ಈ ಭಾಗದ ಶೂಟಿಂಗ್ ನಲ್ಲೂ ಶ್ರೀಮುರಳಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ:ಸ್ಟಾರ್‌ ನಟರ ಚಿತ್ರಕ್ಕೆ ಶ್ರೀಲೀಲಾನೇ ಬೇಕು- ತೆಲುಗಿನ 9 ಸಿನಿಮಾಗಳಲ್ಲಿ ‘ಕಿಸ್‌’ ನಟಿ ಬ್ಯುಸಿ

    ಮೂರು ತಿಂಗಳ ಹಿಂದೆ ರಾಕ್‌ಲೈನ್ ಸ್ಟುಡಿಯೋದಲ್ಲಿ (Rockline Studio) ಹೊಂಬಾಳೆ ಸಂಸ್ಥೆ (Hombale Films) ನಿರ್ಮಾಣದ `ಬಘೀರ’ ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ರೋರಿಂಗ್ ಸ್ಟಾರ್ ಶ್ರೀಮುರಳಿಗೆ (Actor Srimurali) ಗಾಯಗಳಾಗಿದ್ದವು. ಸೂರಿ ನಿರ್ದೇಶನದ ಈ ಚಿತ್ರ ಕೊನೆಯ ಹಂತದ ಚಿತ್ರೀಕರಣದಲ್ಲಿತ್ತು. ಇನ್ನೇರೆಡೆ ದಿನಗಳಲ್ಲಿ ಶೂಟಿಂಗ್‌ಗೆ ಬ್ರೇಕ್ ಬೀಳೋದರಲ್ಲಿತ್ತು. ಈ ವೇಳೆ ಶ್ರೀಮುರಳಿಗೆ ಪೆಟ್ಟಾಗಿತ್ತು.

    `ಕೆಜಿಎಫ್’ ಮಾಸ್ಟರ್ ಮೈಂಡ್ ಪ್ರಶಾಂತ್ ನೀಲ್ ಬರೆದಿರುವ ಕಥೆಗೆ, ಡಾ.ಸೂರಿ ನಿರ್ದೇಶನ ಮಾಡುತ್ತಿದ್ದು, ಬಘೀರನಾಗಿ ಶ್ರೀಮುರಳಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಶ್ರೀಮುರಳಿ ರಗಡ್ ಪೊಲೀಸ್ ಆಫೀಸರ್ ಪಾತ್ರದಲ್ಲಿ ನಟಿಸಿದ್ದಾರೆ. ಈ ಹಿಂದೆಯೇ ಚಿತ್ರ ಫಸ್ಟ್ ಲುಕ್ ರಿವೀಲ್ ಆಗಿದ್ದು, ಶ್ರೀಮುರಳಿ ಸಖತ್ ಖಡಕ್ ಲುಕ್ಕಿನಲ್ಲಿ ಕಾಣಿಸಿಕೊಂಡಿದ್ರು. ಈ ಲುಕ್ ನೋಡಿ ಅಭಿಮಾನಿಗಳು ಕೂಡ ಖುಷಿಪಟ್ಟಿದ್ದರು.

  • ಆರೋಗ್ಯದಲ್ಲಿ ಚೇತರಿಕೆ, ಸದ್ಯದಲ್ಲೇ ಶ್ರೀಮುರಳಿ ಶೂಟಿಂಗ್‌ಗೆ ಹಾಜರ್

    ಆರೋಗ್ಯದಲ್ಲಿ ಚೇತರಿಕೆ, ಸದ್ಯದಲ್ಲೇ ಶ್ರೀಮುರಳಿ ಶೂಟಿಂಗ್‌ಗೆ ಹಾಜರ್

    ರೋರಿಂಗ್ ಸ್ಟಾರ್ ಶ್ರೀಮುರಳಿ (Srimurali) ಅವರು ಇತ್ತೀಚಿಗೆ ಧನ್ಯಾ ರಾಮ್‌ಕುಮಾರ್ (Dhanya Ramkumar) ಅವರ ಹೊಸ ಚಿತ್ರಕ್ಕೆ ಸಾಥ್ ನೀಡುವ ಮೂಲಕ ಸುದ್ದಿಯಲ್ಲಿದ್ದರು. ಈ ವೇಳೆ ತಮ್ಮ ಆರೋಗ್ಯದ ಬಗ್ಗೆ ಅಪ್‌ಡೇಟ್ ಹಂಚಿಕೊಂಡಿದ್ದಾರೆ. ಹಾಗೆಯೇ ಫ್ಯಾನ್ಸ್‌ಗೆ ನಟ ಗುಡ್ ನ್ಯೂಸ್ ಕೊಟ್ಟಿದ್ದಾರೆ.

    ಈ ವರ್ಷ ಜನವರಿಯಲ್ಲಿ ನಟ ಶ್ರೀಮುರಳಿ ಅವರಿಗೆ ‘ಬಘೀರ’ (Bhageera Film) ಸಿನಿಮಾದ ಚಿತ್ರೀಕರಣದ ವೇಳೆ ಕಾಲಿಗೆ ಪೆಟ್ಟಾಗಿತ್ತು. ರಾಕ್‌ಲೈನ್ ಸ್ಟುಡಿಯೋದಲ್ಲಿ ಸಿನಿಮಾಗಾಗಿ ಸ್ಟಂಟ್ಸ್ ಮಾಡುವ ವೇಳೆ ಶ್ರೀಮುರಳಿ ಅವರಿಗೆ ಗಾಯಗಳಾಗಿತ್ತು. ಇದೀಗ ಅವರು ಆರೋಗ್ಯವಾಗಿದ್ದಾರೆ. ಇದನ್ನೂ ಓದಿ:ಅಖಿಲ್ ಅಕ್ಕಿನೇನಿ ಜೊತೆ ಜಾನ್ವಿ ಕಪೂರ್ ರೊಮ್ಯಾನ್ಸ್

    ಇತ್ತೀಚಿಗೆ ಕಾಶಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಎಲ್ಲಾ ನಿನಗಾಗಿ’ (Ella Ninagagi) ಚಿತ್ರದ ಟೈಟಲ್ ರಿವೀಲ್ ಮಾಡಿಕೊಡುವ ಮೂಲಕ ಧನ್ಯಾ ರಾಮ್‌ಕುಮಾರ್ ಟೀಂ ಶುಭಕೋರಿದ್ದರು. ಈ ವೇಳೆ ಶ್ರೀಮುರಳಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಬಹಳ ಕಷ್ಟವಾದ ಸ್ಟಂಟ್ಸ್‌ಗಳನೆಲ್ಲಾ ಆರಾಮಾಗಿ ಮಾಡಿದ್ದೇನೆ. ಆದರೆ ಈ ಸಣ್ಣ ಸ್ಟಂಟ್ ಮಾಡಲು ಹೋಗಿ 3 ತಿಂಗಳು ರೆಸ್ಟ್ ತೆಗೆದುಕೊಳ್ಳುವಂತಾಯ್ತು. ಈಗ ಚೇತರಿಸಿಕೊಂಡಿದ್ದೇನೆ. ಮೇ ಮೊದಲ ವಾರದಲ್ಲಿ ಮತ್ತೆ ಬಘೀರ ಸಿನಿಮಾದ ಚಿತ್ರೀಕರಣಕ್ಕೆ ಹೋಗಲಿದ್ದೇನೆ ಎಂದು ಸಿಹಿಸುದ್ದಿ ನೀಡಿದ್ದಾರೆ.

    ಹೊಂಬಾಳೆ ಸಂಸ್ಥೆ ನಿರ್ಮಾಣದ ‘ಬಘೀರ’ ಚಿತ್ರದಲ್ಲಿ ಶ್ರೀಮುರಳಿ ಭಿನ್ನ ಲುಕ್‌ನಲ್ಲಿ ಕಾಣಿಸಿಕೊಳ್ತಿದ್ದಾರೆ. ರುಕ್ಮಿಣಿ ವಸಂತ್ (Rukmini Vasanth) ನಾಯಕಿಯಾಗಿ ನಟಿಸುತ್ತಿದ್ದಾರೆ. ಕೆಜಿಎಫ್ (KGF) ಮಾಸ್ಟರ್ ಮೈಂಡ್ ಪ್ರಶಾಂತ್ ನೀಲ್ (Prashanth Neel) ಬರೆದ ಕಥೆಗೆ ಡಾ.ಸೂರಿ ನಿರ್ದೇಶನ ಮಾಡ್ತಿದ್ದಾರೆ.

  • ಬಹುಭಾಷಾ ನಟ ಫಹಾದ್ ಫಾಸಿಲ್ ಇದೀಗ ಸಿಬಿಐ ಅಧಿಕಾರಿ

    ಬಹುಭಾಷಾ ನಟ ಫಹಾದ್ ಫಾಸಿಲ್ ಇದೀಗ ಸಿಬಿಐ ಅಧಿಕಾರಿ

    ಲಯಾಳಂ ಸೇರಿದಂತೆ ದಕ್ಷಿಣದ ಬಹುತೇಕ ಸಿನಿಮಾಗಳಲ್ಲಿ ನಟಿಸಿರುವ, ಪ್ರತಿಭಾವಂತ ಕಲಾವಿದ ಫಹಾದ್ ಫಾಸಿಲ್ (Fahad Faasil) ಇದೀಗ ಸಿಬಿಐ ಅಧಿಕಾರಿಯಾಗಿದ್ದಾರೆ. ಕನ್ನಡದ ಬಘೀರ (Bagheera)ಸಿನಿಮಾದಲ್ಲಿ ಅವರು ಇಂಥದ್ದೊಂದು ಪಾತ್ರ ನಿರ್ವಹಿಸಲಿದ್ದಾರೆ. ರೋರಿಂಗ್ ಸ್ಟಾರ್ ಶ್ರೀಮುರಳಿ (Srimurali) ನಾಯಕನಾಗಿ ನಟಿಸಿರುವ ಈ ಚಿತ್ರವು ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಮೂಡಿ ಬರುತ್ತಿದೆ. ಈಗಾಗಲೇ ಎರಡು ಹಂತದ ಚಿತ್ರೀಕರಣ ಕೂಡ ಮುಗಿಸಿದೆ.

    ಬಘೀರ್ ಸಿನಿಮಾದ ಶೂಟಿಂಗ್ ಸಂದರ್ಭದಲ್ಲಿ ಗಾಯ ಮಾಡಿಕೊಂಡಿದ್ದ ಶ್ರೀಮುರಳಿ, ಆನಂತರ ಆಸ್ಪತ್ರೆ ಸೇರಿ ಗಾಯಕ್ಕೆ ಶಸ್ತ್ರ ಚಿಕಿತ್ಸೆಯನ್ನೂ ಮಾಡಿಕೊಂಡಿದ್ದಾರೆ. ಸದ್ಯ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಸದ್ಯದಲ್ಲೇ ಚಿತ್ರೀಕರಣಕ್ಕೆ ಮರಳಲಿದ್ದು, ಆಗ ಫಹಾದ್ ಫಾಸಿಲ್ ಈ ತಂಡವನ್ನು ಸೇರಿಕೊಳ್ಳಲಿದ್ದಾರೆ. ಕಾಲಿವುಡ್ ವಿಕ್ರಮ್ ಸಿನಿಮಾ ಗೆಲುವಿನ ನಂತರ ಫಹಾದ್ ಗೆ ಭಾರೀ ಡಿಮಾಂಡ್ ಕ್ರಿಯೇಟ್ ಆಗಿದೆ. ಇದನ್ನೂ ಓದಿ: ವಿನಯ್ ರಾಜ್‌ಕುಮಾರ್‌ಗೆ ನಾಯಕಿಯಾದ `ವಿಕ್ರಮ್’ ನಟಿ ಸ್ವಾತಿಷ್ಟ ಕೃಷ್ಣನ್

    ಅಂದಹಾಗೆ ಬಘೀರ್ ಸಿನಿಮಾವನ್ನು ಡಾ.ಸೂರಿ ನಿರ್ದೇಶನ ಮಾಡುತ್ತಿದ್ದಾರೆ. ಲಕ್ಕಿ ಚಿತ್ರದ ನಂತರ ಸೂರಿ ಈ ಸಿನಿಮಾವನ್ನು ಕೈಗೆತ್ತಿಕೊಂಡಿದ್ದು, ಪ್ರಶಾಂತ್ ನೀಲ್ ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಈ ಸಿನಿಮಾದಲ್ಲಿ ಶ್ರೀಮುರಳಿ ಪೊಲೀಸ್ ಆಫೀಸರ್ ಪಾತ್ರ ಮಾಡುತ್ತಿದ್ದು, ಫಹಾದ್ ಸಿಬಿಐ ಅಧಿಕಾರಿಯಾಗಿ ಶ್ರೀಮುರಳಿಗೆ ಸಾಥ್ ನೀಡಲಿದ್ದಾರೆ. ಮಂಗಳೂರು ಸೇರಿದಂತೆ ಹಲವು ಕಡೆ ಈಗಾಗಲೇ ಹಲವು ಹಂತದ ಚಿತ್ರೀಕರಣ ನಡೆದಿದೆ. ಫೆಬ್ರವರಿಯಿಂದ ಮುಂದಿನ ಹಂತದ ಚಿತ್ರೀಕರಣ ಎನ್ನಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಯಶಸ್ವಿ ಶಸ್ತ್ರ ಚಿಕಿತ್ಸೆ: ಮನೆಗೆ ಮರಳಿದ ನಟ ಶ್ರೀಮುರಳಿ

    ಯಶಸ್ವಿ ಶಸ್ತ್ರ ಚಿಕಿತ್ಸೆ: ಮನೆಗೆ ಮರಳಿದ ನಟ ಶ್ರೀಮುರಳಿ

    ಸ್ಯಾಂಡಲ್ ವುಡ್ ಹೆಸರಾಂತ ನಟ ಶ್ರೀಮುರಳಿ (Srimurali) ಎರಡು ದಿನಗಳ ಹಿಂದೆಯಷ್ಟೇ ಶಸ್ತ್ರ ಚಿಕಿತ್ಸೆಗೆ (Surgery) ಒಳಗಾಗಿದ್ದಾರೆ. ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆದಿದ್ದು, ಎರಡು ದಿನ ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆದು, ಇದೀಗ ಮನೆಗೆ ಮರಳಿದ್ದಾರೆ. ಶೂಟಿಂಗ್ (Shooting) ವೇಳೆ ಅವರಿಗೆ ಮೊಣಕಾಲಿಗೆ ಪೆಟ್ಟು ಬಿದ್ದಿತ್ತು. ಆಗ ಆಸ್ಪತ್ರೆಗೆ ದಾಖಲಾಗಿದ್ದರು. ಮತ್ತೆ ಶೂಟಿಂಗ್ ನಲ್ಲೂ ಪಾಲ್ಗೊಂಡಿದ್ದರು. ನಂತರದ ದಿನಗಳಲ್ಲಿ ಮತ್ತೆ ಮತ್ತೆ ಮೊಣಕಾಲು ನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರ ಸಲಹೆ ಮೇರೆಗೆ ಶಸ್ತ್ರ ಚಿಕಿತ್ಸೆಗೆ ಅವರು ಒಳಗಾಗಿದ್ದರು.

    ಎರಡು ದಿನಗಳ ಹಿಂದೆ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಡಾ.ಶಂಕರ್ ಮತ್ತು ವೈದ್ಯರ ತಂಡ ಯಶಸ್ಸಿಯಾಗಿ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಎರಡು ದಿನ ಆಸ್ಪತ್ರೆಯಲ್ಲೇ ವಿಶ್ರಾಂತಿ ತಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಅಲ್ಲದೇ, ಮೂರು ತಿಂಗಳ ಕಾಲ ಡ್ಯಾನ್ಸ್ ಹಾಗೂ ಫೈಟ್ ಮಾಡದಂತೆ ಸೂಚನೆ ಕೂಡ ನೀಡಿದ್ದಾರೆ. ಸ್ವಲ್ಪ ದಿನಗಳ ನಂತರ ವಾಕಿಂಗ್ ಮಾಡಲು ಕೂಡ ಹೇಳಿದ್ದಾರೆ.  ಇದನ್ನೂ ಓದಿ: `ಪುಷ್ಪ 2′ ಬಗ್ಗೆ ಬಿಗ್ ಅಪ್‌ಡೇಟ್ ಕೊಟ್ರು ರಶ್ಮಿಕಾ ಮಂದಣ್ಣ

    ಹೊಂಬಾಳೆ (Hombale Films) ಬ್ಯಾನರ್ ನಲ್ಲಿ ಮೂಡಿ ಬರುತ್ತಿರುವ ಬಘೀರ (Bagheera) ಸಿನಿಮಾದ ಸಾಹಸ ಸನ್ನಿವೇಶದ ಚಿತ್ರೀಕರಣ ರಾಕ್ ಲೈನ್ ಸ್ಟುಡಿಯೋದಲ್ಲಿ ನಡೆದಿತ್ತು. ಇದೇ ವೇಳೆ ಶ್ರೀಮುರಳಿ ಮೊಣಕಾಲಿಗೆ ಏಟು ಮಾಡಿಕೊಂಡಿದ್ದರು. ಆ ಸಮಯದಲ್ಲಿ ಅದೊಂದು ಸಣ್ಣ ಪೆಟ್ಟು ಎಂದೇ ಹೇಳಲಾಗಿತ್ತು. ಆದರೆ, ತೀವ್ರವಾಗಿ ನೋವು ಕಾಣಿಸಿಕೊಂಡ ನಂತರ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರ ಚಿಕಿತ್ಸೆ ಮಾಡಲೇಬೇಕು ಎಂದು ವೈದ್ಯರು ಸೂಚಿಸಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಟ ಶ್ರೀಮುರಳಿಗೆ ಶಸ್ತ್ರ ಚಿಕಿತ್ಸೆ: ಮೂರು ತಿಂಗಳು ಕೆಲಸಕ್ಕೆ ಬ್ರೇಕ್

    ನಟ ಶ್ರೀಮುರಳಿಗೆ ಶಸ್ತ್ರ ಚಿಕಿತ್ಸೆ: ಮೂರು ತಿಂಗಳು ಕೆಲಸಕ್ಕೆ ಬ್ರೇಕ್

    ನ್ನಡದ ಖ್ಯಾತ ನಟ ಶ್ರೀಮುರಳಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಶೂಟಿಂಗ್ ವೇಳೆ ಅವರಿಗೆ ಮೊಣಕಾಲಿಗೆ ಪೆಟ್ಟು ಬಿದ್ದಿತ್ತು. ಆಗ ಆಸ್ಪತ್ರೆಗೆ ದಾಖಲಾಗಿದ್ದರು. ಮತ್ತೆ ಶೂಟಿಂಗ್ ನಲ್ಲೂ ಪಾಲ್ಗೊಂಡಿದ್ದರು. ನಂತರದ ದಿನಗಳಲ್ಲಿ ಮತ್ತೆ ಮತ್ತೆ ಮೊಣಕಾಲು ನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರ ಸಲಹೆ ಮೇರೆಗೆ ಇದೀಗ ಶಸ್ತ್ರ ಚಿಕಿತ್ಸೆಗೆ ಅವರು ಒಳಗಾಗಿದ್ದಾರೆ.

    ನಿನ್ನೆ ಬೆಳಿಗ್ಗೆ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಡಾ.ಶಂಕರ್ ಮತ್ತು ವೈದ್ಯರ ತಂಡ ಯಶಸ್ಸಿಯಾಗಿ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಎರಡು ದಿನ ಆಸ್ಪತ್ರೆಯಲ್ಲೇ ವಿಶ್ರಾಂತಿ ತಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಅಲ್ಲದೇ, ಮೂರು ತಿಂಗಳ ಕಾಲ ಡ್ಯಾನ್ಸ್ ಹಾಗೂ ಫೈಟ್ ಮಾಡದಂತೆ ಸೂಚನೆ ಕೂಡ ನೀಡಿದ್ದಾರೆ. ಸ್ವಲ್ಪ ದಿನಗಳ ನಂತರ ವಾಕಿಂಗ್ ಮಾಡಲು ಕೂಡ ಹೇಳಿದ್ದಾರೆ. ಇದನ್ನೂ ಓದಿ: ಸಚಿವ ಸುಧಾಕರ್‌ರನ್ನ ಹಾಡಿ ಹೊಗಳಿದ ರಮ್ಯಾ: ಕೈಗೆ ನಟಿ ಬೈ ಹೇಳಿ ಬಿಜೆಪಿ ಸೇರ್ಪಡೆ?

    ಹೊಂಬಾಳೆ ಬ್ಯಾನರ್ ನಲ್ಲಿ ಮೂಡಿ ಬರುತ್ತಿರುವ ಬಘೀರ ಸಿನಿಮಾದ ಸಾಹಸ ಸನ್ನಿವೇಶದ ಚಿತ್ರೀಕರಣ ರಾಕ್ ಲೈನ್ ಸ್ಟುಡಿಯೋದಲ್ಲಿ ನಡೆದಿತ್ತು. ಇದೇ ವೇಳೆ ಶ್ರೀಮುರಳಿ ಮೊಣಕಾಲಿಗೆ ಏಟು ಮಾಡಿಕೊಂಡಿದ್ದರು. ಆ ಸಮಯದಲ್ಲಿ ಅದೊಂದು ಸಣ್ಣ ಪೆಟ್ಟು ಎಂದೇ ಹೇಳಲಾಗಿತ್ತು. ಆದರೆ, ತೀವ್ರವಾಗಿ ನೋವು ಕಾಣಿಸಿಕೊಂಡ ನಂತರ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರ ಚಿಕಿತ್ಸೆ ಮಾಡಲೇಬೇಕು ಎಂದು ವೈದ್ಯರು ಸೂಚಿಸಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • `ಬಘೀರ’ ಸಿನಿಮಾದ ಶೂಟಿಂಗ್ ವೇಳೆ ಅವಗಢ: ನಟ ಶ್ರೀಮುರಳಿಗೆ ಪೆಟ್ಟು

    `ಬಘೀರ’ ಸಿನಿಮಾದ ಶೂಟಿಂಗ್ ವೇಳೆ ಅವಗಢ: ನಟ ಶ್ರೀಮುರಳಿಗೆ ಪೆಟ್ಟು

    ಸ್ಯಾಂಡಲ್‌ವುಡ್ ನಟ ಶ್ರೀಮುರಳಿಗೆ (Srimurali) ಮತ್ತೆ ಪೆಟ್ಟಾಗಿದೆ. `ಬಘೀರ’ (Bhageera) ಚಿತ್ರದ ಶೂಟಿಂಗ್ ವೇಳೆ ಅನಾಹುತವಾಗಿದೆ. ಶೂಟಿಂಗ್ ವೇಳೆ ಶ್ರೀಮುರಳಿಗೆ ತೀವ್ರ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

    `ಮದಗಜ’ (Madagaja) ಸಿನಿಮಾದ ನಂತರ ಬಘೀರ ಚಿತ್ರದಲ್ಲಿ ನಟ ಶ್ರೀಮುರಳಿ ಬ್ಯುಸಿಯಾಗಿದ್ದರು. ರಾಕ್‌ಲೈನ್ ಸ್ಟುಡಿಯೋದಲ್ಲಿ (Rockline Studio) ಹೊಂಬಾಳೆ ಸಂಸ್ಥೆ (Hombale Films) ನಿರ್ಮಾಣದ `ಬಘೀರ’ ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ರೋರಿಂಗ್ ಸ್ಟಾರ್ ಶ್ರೀಮುರಳಿಗೆ (Actor Srimurali) ಗಾಯಗಳಾಗಿದೆ. ಸೂರಿ ನಿರ್ದೇಶನದ ಈ ಚಿತ್ರ ಕೊನೆಯ ಹಂತದ ಚಿತ್ರೀಕರಣದಲ್ಲಿತ್ತು. ಇನ್ನೇರೆಡೆ ದಿನಗಳಲ್ಲಿ ಶೂಟಿಂಗ್‌ಗೆ ಬ್ರೇಕ್ ಬೀಳೋದರಲ್ಲಿತ್ತು. ಈ ವೇಳೆ ಶ್ರೀಮುರಳಿಗೆ ಪೆಟ್ಟಾಗಿದೆ. ಇದನ್ನೂ ಓದಿ: ಹನಿಮೂನ್ ಬಗ್ಗೆ ಕೇಳಿದ್ದಕ್ಕೆ ನಾಚಿ ನೀರಾದ ಹರಿಪ್ರಿಯಾ- ವಸಿಷ್ಠ

    ಈ ಹಿಂದೆ ಮಹೇಶ್ ಕುಮಾರ್ ನಿರ್ದೇಶನದ ಮದಗಜ ಶೂಟಿಂಗ್ ವೇಳೆ ಹೀಗೆ ಆಗಿತ್ತು. ಶ್ರೀಮುರಳಿ ಅವರ ಎಡಗಾಲಿಗೆ ಪೆಟ್ಟಾಗಿತ್ತು. ಈಗ ಮತ್ತೆ ಅದೇ ಕಾಲಿಗೆ ಪೆಟ್ಟಾಗಿದೆ. ಹಾಗಾಗಿ ನಟ ಈ ಸಂಬಂಧ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಕ್ಷಮೆ ಕೇಳಿದ ನಟ ಶ್ರೀಮುರಳಿ

    ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಕ್ಷಮೆ ಕೇಳಿದ ನಟ ಶ್ರೀಮುರಳಿ

    ಸ್ಯಾಂಡಲ್‌ವುಡ್ (Sandalwood) ನಟ ಶ್ರೀಮುರಳಿಗೆ (Srimurali) 41ರ ಹುಟ್ಟುಹಬ್ಬದ(Birthday) ಸಂಭ್ರಮವಾಗಿದ್ದು, ಈ ವೇಳೆ ತಮ್ಮ ಅಭಿಮಾನಿಗಳಿಗೆ ನಟ ಕ್ಷಮೆ ಕೇಳಿದ್ದಾರೆ. ʻಬಘೀರʼ ಚಿತ್ರದ ಅಪ್‌ಡೇಟ್ ಜೊತೆ ಫ್ಯಾನ್ಸ್‌ಗೆ ಕಹಿ ಸುದ್ದಿಯೊಂದನ್ನ ಕೊಟ್ಟಿದ್ದಾರೆ.

    ರೋರಿಂಗ್ ಸ್ಟಾರ್ ಶ್ರೀಮುರಳಿಗೆ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಸಂದರ್ಭದಲ್ಲಿ ಹೊಂಬಾಳೆ ಸಂಸ್ಥೆ(Hombale Films)  ಕೂಡ `ಬಘೀರ’ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿ, ಶ್ರೀಮುರಳಿಗೆ ಶುಭಹಾರೈಸಿದ್ದಾರೆ. `ಬಘೀರ’ ಸಿನಿಮಾ ಶುರುವಾದ ದಿನದಿಂದ ಚಿತ್ರದ ಅಪ್‌ಡೇಟ್ ಕೊಡದೇ ಶ್ರೀಮುರಳಿ ಸೈಲೆಂಟ್ ಆಗಿ ಬಿಟ್ಟಿದ್ದರು. ಚಿತ್ರ ಶುರುವಾಗಿದೆ ಅನ್ನೋದು ಬಿಟ್ಟರೆ ಬೇರೇ ಯಾವುದೇ ಮಾಹಿತಿ ಇರಲಿಲ್ಲ.‌ ಇದೀಗ ಶ್ರೀಮುರಳಿ ಅಭಿಮಾನಿಗಳಿಗೆ ವಿಶೇಷ ಮನವಿವೊಂದನ್ನ ಮಾಡಿದ್ದಾರೆ.

    ಡೈರೆಕ್ಟರ್ ಸೂರಿ(Director Suri)  ನಿರ್ದೇಶನದಲ್ಲಿ `ಬಘೀರ’ (Bhageera) ಸಿನಿಮಾ 50% ರಷ್ಟು ಚಿತ್ರೀಕರಣವಾಗಿದೆ. ಶ್ರೀಮುರಳಿಗೆ ನಾಯಕಿಯಾಗಿ ರುಕ್ಮಿಣಿ ವಸಂತ್ (Rukmini Vasanth) ಕಾಣಿಸಿಕೊಳ್ತಿದ್ದಾರೆ. ಮುಂದಿನ ವರ್ಷ ತೆರೆಗೆ ಅಬ್ಬರಿಸಲಿದೆ. ಸದ್ಯ ಬಘೀರ ಚಿತ್ರದ ಪೋಸ್ಟರ್‌ನಲ್ಲಿ ಶ್ರೀಮುರಳಿ ಖಡಕ್ ಆಗಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಪೋಸ್ಟರ್ ಮೂಲಕ ನಟನಿಗೆ ಚಿತ್ರತಂಡ ಶುಭಹಾರೈಸಿದೆ.

     

    View this post on Instagram

     

    A post shared by Hombale Films (@hombalefilms)

    ಶ್ರೀಮುರಳಿ ಪ್ರತಿ ವರ್ಷ ಜನ್ಮ ದಿನ ಆಚರಿಸಿಕೊಂಡು ಬರ್ತಿದ್ದಾರೆ. ತಮ್ಮ ಮನೆ ಅಂಗಳಕ್ಕೆ ಬರುವ ಅಭಿಮಾನಿಗಳನ್ನ ಪ್ರೀತಿಯಿಂದಲೇ ಅಪ್ಪಿಕೊಂಡ ಜನ್ಮ ದಿನ ಸೆಲೆಬ್ರೇಟ್ ಮಾಡುತ್ತಾರೆ. ಆದರೆ ಈ ವರ್ಷ ಹಾಗೆ ಆಗುತ್ತಿಲ್ಲ. ಶ್ರೀಮುರಳಿ ತಮ್ಮ ಜನ್ಮ ದಿನವನ್ನ ಅಭಿಮಾನಿಗಳ ಜೊತೆಗೆ ಸೆಲೆಬ್ರೇಟ್ ಮಾಡದೇ ಇರಲು ಡಿಸೈಡ್ ಮಾಡಿದ್ದಾರೆ. ಕಾರಣ ಏನು ಅನ್ನೋದನ್ನ ಸ್ವತಃ ಶ್ರೀಮುರಳಿ ಅವರೇ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಅಮಿತಾಭ್‌ಗೆ `ಭಾರತ ರತ್ನ ಪ್ರಶಸ್ತಿ’ ನೀಡಿ ಗೌರವಿಸಿ ಎಂದು ದೀದಿ ಮನವಿ

     

    View this post on Instagram

     

    A post shared by SriiMurali (@sriimurali)

    ನನ್ನ ಪ್ರೀತಿಯ ಅಭಿಮಾನಿಗಳೆ ಕಾರಣಾಂತರಗಳಿಂದ ನನ್ನ ಹುಟ್ಟುಹಬ್ಬವನ್ನು ನಿಮ್ಮೊಂದಿಗೆ ಆಚರಿಸಿಕೊಳ್ಳಲಾಗುವುದಿಲ್ಲ. ನಾನು ಬೆಂಗಳೂರಿನಲ್ಲಿ ಇರುವುದಿಲ್ಲ, ಕ್ಷಮಿಸಿ! ಬೇಗ ಸಿಗುವ. ಸದಾ ನಿಮ್ಮ ಪ್ರೀತಿ ಹಾಗು ಆಶೀರ್ವಾದವನ್ನು ಬಯಸುವ ನಾ ನಿಮ್ಮ  ಶ್ರೀಮುರಳಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಶ್ರೀಮುರಳಿ ಜನ್ಮ ದಿನದಂದೇ ಹೊರಗೆ ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿಯೇ ಈ ವರ್ಷ ರೋರಿಂಗ್ ಸ್ಟಾರ್ ಶ್ರೀಮುರಳಿ ಅವರ ಮನೆಯಂಗಳದಲ್ಲಿ ಅಂತಹ ಸಡಗರ ಸಂಭ್ರಮ ಇರೋದಿಲ್ಲ.

    Live Tv
    [brid partner=56869869 player=32851 video=960834 autoplay=true]