Tag: Srinagar

  • ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮುಖ್ಯಸ್ಥ ಎನ್‌ಕೌಂಟರ್‌ಗೆ ಬಲಿ

    ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮುಖ್ಯಸ್ಥ ಎನ್‌ಕೌಂಟರ್‌ಗೆ ಬಲಿ

    – ಭಾರತೀಯ ಸೇನೆಗೆ ಬಹುದೊಡ್ಡ ಗೆಲುವು

    ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮುಖ್ಯಸ್ಥನನ್ನು ಶ್ರೀನಗರದಲ್ಲಿ ಎನ್‍ಕೌಂಟರ್ ಮಾಡಲಾಗಿದೆ.

    ಈ ವಿಚಾರದ ಬಗ್ಗೆ ಇಂದು ಮಾಹಿತಿ ನೀಡಿರುವ ಜಮ್ಮು ಕಾಶ್ಮೀರದ ಪೊಲೀಸರು, ಈ ಎನ್‍ಕೌಂಟರ್ ನಿಂದ ಉಗ್ರರ ವಿರುದ್ಧ ಬಹುದೊಡ್ಡ ಗೆಲುವು ಸಾಧಿಸಿದಂತೆ ಆಗಿದೆ. ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥನಾಗಿದ್ದ ಉಗ್ರ ರಯಾಜ್ ನಾಯ್ಕುನನ್ನು ಮೇ ತಿಂಗಳಲ್ಲಿ ಭಾರತೀಯ ಸೇನೆ ಹೊಡೆದು ಹಾಕಿತ್ತು. ಇದಾದ ನಂತರ ಸೈಫುಲ್ಲಾ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥನಾಗಿ ಅಧಿಕಾರ ವಹಿಸಿಕೊಂಡಿದ್ದ.

    ಇಂದು ಶ್ರೀನಗರದ ರಂಗ್ರೆತ್‍ನಲ್ಲಿ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಭಾರತೀಯ ಸೇನೆ ಆ ಪ್ರದೇಶವನ್ನು ಸುತ್ತುವರೆದಿತ್ತು. ಈ ವೇಳೆ ಉಗ್ರರು ಸೇನೆಯ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಇದಕ್ಕೆ ಪ್ರತಿಯಗಿ ಸೇನೆ ಕೂಡ ಗುಂಡಿನ ದಾಳಿ ಮಾಡಿದ್ದು, ಉಗ್ರ ಸೈಫುಲ್ಲಾನನ್ನು ಹೊಡೆದು ಹಾಕಿದ್ದಾರೆ. ಈ ಕಾರ್ಯಚರಣೆ ಸಂದರ್ಭದಲ್ಲಿ ಮತ್ತೊಬ್ಬ ಭಯೋತ್ಪಾದಕನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

    ಇಂದು ಕೊಲ್ಲಲ್ಪಟ್ಟ ಸೈಫುಲ್ಲಾ ಜಮ್ಮು ಕಾಶ್ಮೀರದಲ್ಲಿ ನಡೆದ ಹಲವಾರು ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ. ಜೊತೆಗೆ ಇಂದಿನ ಕಾರ್ಯಚರಣೆ ವೇಳೆಯೂ ಮೊದಲು ಆತನೇ ಸೇನೆಯ ಮೇಲೆ ಗುಂಡಿನ ದಾಳಿ ಮಾಡಿದ್ದ ಎಂದು ತಿಳಿದು ಬಂದಿದೆ. ಘಟನಾ ಸ್ಥಳದಿಂದ ಒಂದು ಎಕೆ-47 ಮತ್ತು ಪಿಸ್ತೂಲ್ ಅನ್ನು ಭಾರತೀಯ ಸೇನೆ ವಶಕ್ಕೆ ಪಡೆದುಕೊಂಡಿದೆ.

  • ಕುತಂತ್ರಿ ಬುದ್ಧಿ ಪ್ರದರ್ಶಿಸಿದ ಪಾಕ್- ಚೀನಾದಲ್ಲಿ ತಯಾರಾಗಿದ್ದ ಕ್ವಾಡ್‍ಕಾಪ್ಟರ್ ಹೊಡೆದುರುಳಿಸಿದ ಸೇನೆ

    ಕುತಂತ್ರಿ ಬುದ್ಧಿ ಪ್ರದರ್ಶಿಸಿದ ಪಾಕ್- ಚೀನಾದಲ್ಲಿ ತಯಾರಾಗಿದ್ದ ಕ್ವಾಡ್‍ಕಾಪ್ಟರ್ ಹೊಡೆದುರುಳಿಸಿದ ಸೇನೆ

    ಶ್ರೀನಗರ: ಭಾರತದಲ್ಲಿ ಗಡಿಯಲ್ಲಿ ಬೇಹುಗಾರಿಕೆ ನಡೆಸಲು ಹಾಗೂ ಉಗ್ರರನ್ನ ಅಕ್ರಮವಾಗಿ ಗಡಿ ಒಳಗೆ ನುಸುಳಿಸಲು ಪ್ರಯತ್ನಿಸಿ ಪಾಕ್‍ನ ಕ್ವಾಡ್‌ಕಾಪ್ಟರ್‌ನ್ನು ಹೊಡೆದುರುಳಿಸಿರುವುದಾಗಿ ಭಾರತೀಯ ಸೇನೆ ತಿಳಿಸಿದೆ.

    ಪಾಕಿಸ್ತಾನ ಕ್ವಾಡ್‍ಕಾಪ್ಟರ್ (ಹೆಲಿಕಾಪ್ಟರ್ ಮಾದರಿಯ ಡ್ರೋಣ್ ಸಾಧನ) ಚೀನಾದ ಡಿಜಿಐ ಮಾವಿಕ್ 2 ಕಂಪೆನಿ ತಯಾರಿಸಿದ್ದು, ಬೆಳಗ್ಗೆ 8 ಗಂಟೆ ಸಮಯದಲ್ಲಿ ಜಮ್ಮು ಕಾಶ್ಮೀರದ ಕೇರನ್ ಸೆಕ್ಟರ್ ನ ಭಾರತೀಯ ಸೇನೆ ಗಡಿಯಲ್ಲಿ ಹಾರಾಡುತ್ತಿದ್ದ ಕ್ವಾಡ್‌ಕಾಪ್ಟರ್‌ನ್ನು ಹೊಡೆದುರುಳಿಸಿದ್ದಾರೆ.

    ಭಯೋತ್ಪಾದಕರೊಳಗೆ ನುಸುಳಲು ಮತ್ತು ಭಾರತೀಯ ಸ್ಥಾವರಗಳ ಮಾಹಿತಿ ಕಲೆಹಾಕಲು ಪಾಕ್ ತನ್ನ ಕುತಂತ್ರಿ ತಂತ್ರವನ್ನು ಪ್ರದರ್ಶಿಸಿದ್ದು, ಭಾರತದ ಬಾರ್ಡರ್ ಆಕ್ಷನ್ ಟೀಂ (ಬ್ಯಾಟ್) ಗಡಿಯಲ್ಲಿ ಪಾಕ್ ಯತ್ನಗಳನ್ನು ವಿಫಲಗೊಳಿಸಿದೆ. ಅಲ್ಲದೇ ಗಡಿಯುದ್ದಕ್ಕೂ ತೀವ್ರ ಎಚ್ಚರಿಕೆ ವಹಿಸಿದೆ.

    ಇತ್ತೀಚೆಗಷ್ಟೇ ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಸೇನಾ ಮುಖ್ಯ ಜನರಲ್ ಮನೋಜ್ ಮುಕುಂದ್, ಪಾಕಿಸ್ತಾನ ಭಯೋತ್ಪಾದಕರನ್ನು ಭಾರತದೊಳಗೆ ನುಸುಳಿಸುವ ಪ್ರಯತ್ನವನ್ನು ಮುಂದುವರಿಸುತ್ತಿದೆ ಎಂದು ಹೇಳಿದ್ದರು.

  • ಜಮ್ಮು ಕಾಶ್ಮೀರದಲ್ಲಿ ಎಸ್‍ಐಯನ್ನು ಗುಂಡಿಕ್ಕಿ ಕೊಂದ ಉಗ್ರರು

    ಜಮ್ಮು ಕಾಶ್ಮೀರದಲ್ಲಿ ಎಸ್‍ಐಯನ್ನು ಗುಂಡಿಕ್ಕಿ ಕೊಂದ ಉಗ್ರರು

    ಶ್ರೀನಗರ: ಪೊಲೀಸ್ ಇನ್ಸ್ ಪೆಕ್ಟರ್ ಓರ್ವರನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಜಮ್ಮು ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯ ಬಿಜ್‍ಬೆಹರಾ ಪ್ರದೇಶದಲ್ಲಿ ನಡೆದಿದೆ.

    ಮೃತ ಇನ್ಸ್ ಪೆಕ್ಟರ್ ಅನ್ನು ಅನಂತ್‍ನಾಗ್ ಜಿಲ್ಲೆಯ ಪೊಲೀಸ್ ಅಧಿಕಾರಿ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಅನಂತ್‍ನಾಗ್ ಜಿಲ್ಲೆಯ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಮನೆಗೆ ಮರಳುತ್ತಿದ್ದಾಗ ಮೊಹಮ್ಮದ್ ಅಶ್ರಫ್ ಅವರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ಮಾಡಿದ್ದಾರೆ.

    ಈ ಗುಂಡಿನ ದಾಳಿಯಲ್ಲಿ ಅಶ್ರಫ್ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಬಿಜ್‍ಬೆಹರಾ ಉಪ ಜಿಲ್ಲಾ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನೆ ನಡೆದ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದಾರೆ. ಮೊಹಮ್ಮದ್ ಅಶ್ರಫ್ ಅವರು ಪ್ರಸ್ತುತ ಪುಲ್ವಾಮಾ ಜಿಲ್ಲೆಯ ಲೆಥ್‍ಪೊರಾದ ಪೊಲೀಸ್ ತರಬೇತಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.

    ಇದರ ಜೊತೆಗೆ ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್‍ಕೌಂಟರ್ ಮಾಡಿದ್ದು, ಈ ಗುಂಡಿನ ದಾಳಿಯಲ್ಲಿ ಅಪರಿಚಿತ ಭಯೋತ್ಪಾದಕನೊಬ್ಬನನ್ನು ಕೊಲ್ಲಲಾಗಿದೆ. ಶೋಪಿಯಾನ್ ಜಿಲ್ಲೆಯ ಮೆಲ್ಹೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ದಾಳಿ ನಡೆದಿದೆ. ಈ ಗುಂಡಿನ ದಾಳಿಯಲ್ಲಿ ಓರ್ವ ಉಗ್ರ ಮೃತಪಟ್ಟಿದ್ದಾನೆ.

  • ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ- ಇಬ್ಬರು ಯೋಧರು, ಓರ್ವ ಪೊಲೀಸ್ ಹುತಾತ್ಮ

    ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ- ಇಬ್ಬರು ಯೋಧರು, ಓರ್ವ ಪೊಲೀಸ್ ಹುತಾತ್ಮ

    ಶ್ರೀನಗರ: ಉಗ್ರರ ಅಟ್ಟಹಾಸಕ್ಕೆ ಜಮ್ಮು ಕಾಶ್ಮೀರದಲ್ಲಿ ಇಬ್ಬರು ಸಿಆರ್ ಪಿಎಫ್ ಯೋಧರು ಹಾಗೂ ಓರ್ವ ಪೊಲೀಸ್ ಹುತಾತ್ಮರಾಗಿದ್ದಾರೆ.

    ಜಮ್ಮು ಕಾಶ್ಮಿರದ ಬರಾಮುಲ್ಲಾದಲ್ಲಿ ಜಂಟಿಯಾಗಿ ಗಸ್ತು ತಿರುಗುತ್ತಿದ್ದ ವೇಳೆ ಉಗ್ರರು ದಾಳಿ ನಡೆಸಿದ್ದು, ಕೀರಿ ಪ್ರದೇಶದಲ್ಲಿ ಯೋಧರು ಹಾಗೂ ಪೊಲೀಸ್ ಸಿಬ್ಬಂದಿ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಇಬ್ಬರು ಯೋಧರು ಹಾಗೂ ಓರ್ವ ಪೊಲೀಸ್ ಹುತಾತ್ಮರಾಗಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಈ ಪ್ರದೇಶವನ್ನು ಯೋಧರು ಹಾಗೂ ಪೊಲೀಸರು ಸುತ್ತುವರಿದಿದ್ದು, ಭಯೋತ್ಮಾದಕರನ್ನು ಹಡೆಮುರಿ ಕಟ್ಟುವ ಕಾರ್ಯಾಚರಣೆ ನಡೆಸಿದ್ದಾರೆ.

    ಓರ್ವ ವಿಶೇಷ ಪೊಲೀಸ್ ಅಧಿಕಾರಿ(ಎಸ್‍ಪಿಒ) ಸ್ಥಳದಲ್ಲೇ ಹುತಾತ್ಮರಾಗಿದ್ದು, ಇಬ್ಬರು ಸಿಆರ್‍ಪಿಎಫ್ ಯೋಧರು ಘಟನೆ ವೇಳೆ ತೀವ್ರ ಗಾಯಗೊಂಡಿದ್ದರು. ಹೀಗಾಗಿ ನಂತರ ಇವರಿಬ್ಬರು ಸಹ ಮೃತಪಟ್ಟರು ಎಂದು ಜಮ್ಮು ಕಾಶ್ಮಿರ ಇನ್‍ಸ್ಪೆಕ್ಟರ್ ಜನರಲ್ ವಿಜಯ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.

    ಜಮ್ಮು ಕಾಶ್ಮೀರದಲ್ಲಿ ಪ್ರಯೋಗಾತ್ಮಕವಾಗಿ 4ಜಿ ಹೈಸ್ಪೀಡ್ ಇಂಟರ್ ನೆಟ್ ಬಳಕೆಗೆ ಅವಕಾಶ ನೀಡಿದ ಬೆನ್ನಲ್ಲೇ ಈ ಘಟನೆ ನಡೆದಿದೆ. ಗಂಡರ್‍ಬಲ್ ಹಾಗೂ ಉಧಂಪೂರ್ ಗಳಲ್ಲಿ ಪ್ರಾಯೋಗಿಕವಾಗಿ 4ಜಿ ಹೈ ಸ್ಪೀಡ್ ಇಂಟರ್ ನೆಟ್ ಸೇವೆಯನ್ನು ಪ್ರಾರಂಭಿಸಲಾಗಿದೆ. ಈ ಕುರಿತು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿ, ಬಳಿಕ ಎರಡೂ ಕೇಂದ್ರಾಡಳಿತ ಪ್ರದೇಶಗಳ ತಲಾ ಒಂದು ಜಿಲ್ಲೆಯಲ್ಲಿ ಇಂಟರ್ ನೆಟ್ ಸೇವೆಯನ್ನು ಪ್ರಾರಂಭಿಸಿದೆ. ಈ ಮೂಲಕ ಒಂದು ವರ್ಷಕ್ಕೂ ಹೆಚ್ಚು ಅವಧಿ ಬಳಿಕ ಜಮ್ಮು ಕಾಶ್ಮೀರದಲ್ಲಿ 4ಜಿ ಇಂಟರ್ ನೆಟ್ ಸೇವೆ ಆರಂಭಿಸಿದಂತಾಗಿದೆ. ಆಗಸ್ಟ್ 5, 2019ರಂದು 370ನೇ ವಿಧಿ ರದ್ದುಗೊಳಿಸಿ ಆದೇಶ ಹೊರಡಿಸಿದಾಗಿನಿಂದ ಜಮ್ಮು ಕಾಶ್ಮೀರದಲ್ಲಿ ಇಂಟರ್ ನೆಟ್ ಸೇವೆಯನ್ನು ಕಡಿತಗೊಳಿಸಲಾಗಿದೆ.

  • ಭಯೋತ್ಪಾದಕರಿಂದ ಗುಂಡಿನ ದಾಳಿ – ಇಬ್ಬರು ಪೊಲೀಸರು ಸಾವು

    ಭಯೋತ್ಪಾದಕರಿಂದ ಗುಂಡಿನ ದಾಳಿ – ಇಬ್ಬರು ಪೊಲೀಸರು ಸಾವು

    ಶ್ರೀನಗರ: ಇಂದು ಬೆಳಗ್ಗೆ ಶ್ರೀನಗರದ ಹೊರವಲಯದಲ್ಲಿ ಭಯೋತ್ಪಾದಕರಿಂದ ನಡೆದ ದಾಳಿಯಲ್ಲಿ ಇಬ್ಬರು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಮೃತಪಟ್ಟಿದ್ದಾರೆ.

    ಶ್ರೀನಗರದ ನೌಗಮ್ ನಲ್ಲಿ ಪೊಲೀಸ್ ತಂಡದ ಮೇಲೆ ದಾಳೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ದಾಳಿಯಲ್ಲಿ ಮೂವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ವೇಳೆ ಇಬ್ಬರು ಪೊಲೀಸರು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿರುವ ಕಾಶ್ಮೀರದ ಪೊಲೀಸರು, ನೌಗಮ್ ಬೈಪಾಸ್ ಬಳಿ ಪೊಲೀಸ್ ಗಸ್ತಿನಲ್ಲಿದ್ದಾಗ ಭಯೋತ್ಪಾದಕರು ನಿರ್ದಾಕ್ಷಿಣ್ಯವಾಗಿ ಗುಂಡು ಹಾರಿಸಿದ್ದಾರೆ. ಈ ವೇಳೆ 3 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅಲ್ಲಿ ಇಬ್ಬರು ಹುತಾತ್ಮರಾಗಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ಕಳುಹಿಸಲಾಗಿದೆ. ತನಿಖೆ ಮಾಡುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

    ಸ್ವಾತಂತ್ರ್ಯ ದಿನಾಚರಣೆಗೆ ಒಂದು ದಿನ ಬಾಕಿ ಇರುವಾಗಲೇ ಈ ದಾಳಿ ನಡೆದಿದ್ದು, ನಾಳೆ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಗೆ ಯಾವುದೇ ಅಡ್ಡಿ ಆಗಬಾರದೆಂದು ಭದ್ರತಾ ಪಡೆಗಳು ಕಾಶ್ಮೀರದಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಿವೆ. ಮುಖ್ಯವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ಶೇರ್-ಎ-ಕಾಶ್ಮೀರ ಕ್ರಿಕೆಟ್ ಕ್ರೀಡಾಂಗಣದ ಬಳಿ ಹೆಚ್ಚಿ ಭದ್ರತೆ ನೀಡಲಾಗಿದೆ.

  • ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ- ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಸೈನಿಕರು

    ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ- ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಸೈನಿಕರು

    ಶ್ರೀನಗರ: ಜಮ್ಮು ಕಾಶ್ಮೀರದ ಶ್ರೀನಗರದ ಹೊರ ವಲಯದಲ್ಲಿ ನಡೆದ ಗುಂಡಿನ ಚಕಮಕಿ ವೇಳೆ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಯೋಧರು ಹೊಡೆದುರುಳಿಸಿದ್ದಾರೆ.

    ಭಯೋತ್ಪಾದಕರು ಅಡಗಿಕೊಂಡಿರುವ ಕುರಿತು ಇಂದು ಬೆಳಗ್ಗೆ ಖಚಿತ ಮಾಹಿತಿ ಲಭ್ಯವಾಯಿತು. ಈ ಹಿನ್ನೆಲೆ ಭದ್ರತಾ ಸಿಬ್ಬಂದಿ ನಗರದ ಹೊರ ವಲಯದ ರಣಬಿರ್‍ಘರ್ ಪ್ರದೇಶದಲ್ಲಿ ಸುತ್ತುವರಿದು ಪರಿಶೀಲನಾ ಕಾರ್ಯಾಚರಣೆ ನಡೆರಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಭದ್ರತಾ ಸಿಬ್ಬಂದಿ ಪರಿಶೀಲನಾ ಕಾರ್ಯಾಚರಣೆ ನಡೆಸುವ ವೇಳೆ ಭಯೋತ್ಪಾದಕರು ಅವರ ಮೇಲೆ ಗುಂಡಿನ ದಾಳಿ ನಡೆಸಿದರು. ಹೀಗಾಗಿ ಇದಕ್ಕೆ ಪ್ರತಿಯಾಗಿ ಸೈನಿಕರು ಸಹ ಗುಂಡು ಹಾರಿಸಿದರು. ಈ ವೇಳೆ ಗುಂಡಿನ ಚಕಮಕಿ ನಡೆಯಿತು ಎಂದು ತಿಳಿಸಿದ್ದಾರೆ.

    ಭಯೋತ್ಪಾದಕರ ಗುರುತು ಪತ್ತೆಯಾಗಿಲ್ಲ. ಯಾವ ಸಂಘಟನೆಗೆ ಸೇರಿದ್ದಾರೆ ಎಂಬುದು ಸಹ ತಿಳಿದಿಲ್ಲ. ಹುಡುಕುವ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಹೆಚ್ಚಿನ ಮಾಹಿತಿಗಾಗಿ ಕಾಯುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಮುಖಂಡನ ಅಪಹರಿಸಿದ ಉಗ್ರರು!

    ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಮುಖಂಡನ ಅಪಹರಿಸಿದ ಉಗ್ರರು!

    ಶ್ರೀನಗರ: ಬಿಜೆಪಿ ಮುಖಂಡ ಹಾಗೂ ವಾಟರ್‍ಗಮ್ ಮುನ್ಸಿಪಲ್ ಕಮಿಟಿ ಉಪಾಧ್ಯಕ್ಷ ಮೆಹ್ರಾಜ್-ಉದ್-ದಿನ್ ಮಲ್ಲನ್ನು ಜಮ್ಮು-ಕಾಶ್ಮೀರದಲ್ಲಿ ಇಂದು ಉಗ್ರರು ಅಪಹರಿಸಿದ್ದಾರೆ.

    ವರದಿಗಳ ಪ್ರಕಾರ, ಬಿಜೆಪಿ ಮುಖಂಡ ತನ್ನ ಗೆಳೆಯನನ್ನು ಭೇಟಿಯಾಗಲೆಂದು ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಸ್ಯಾಂಟ್ರೋ ಕಾರಿನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಅಪಹರಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

    ಅಧಿಕಾರಿಗಳ ಪ್ರಕಾರ, ಬರಾಮುಲ್ಲಾದ ರಫೀಯಾಬಾದ್ ಪ್ರದೇಶದಿಂದ ಸೊಪೊರೆ ಪಟ್ಟಣಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಮುಖಂಡನನ್ನು ಕಿಡ್ನಾಪ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ಪೊಲೀಸರು ಕಾಣೆಯಾಗಿರುವ ಬಿಜೆಪಿ ಮುಖಂಡನ ಹುಡುಕಾಟದಲ್ಲಿ ತೊಡಗಿದ್ದಾರೆ.

    ಕೆಲ ದಿನಗಳ ಹಿಂದೆ ಉಗ್ರರು, ಕಾಶ್ಮೀರದ ಕೆಲ ಪ್ರದೇಶಗಳಲ್ಲಿ ಬಿಜೆಪಿ ಸೇರಬಾರದೆಂದು ಎಚ್ಚರಿಕೆ ನೀಡುವ ಪೋಸ್ಟರ್ ಗಳನ್ನು ಅಂಟಿಸಿದ್ದರು. ಇದಾದ ನಂತರ ಅಂದರೆ ಜುಲೈ 8 ರಂದು ಬಂಡಿಪೊರೆ ಜಿಲ್ಲೆಯಲ್ಲಿ ಬಿಜೆಪಿ ನಾಯಕ ವಾಸಿಮ್ ಬ್ಯಾರಿ, ತಂದೆ ಹಾಗೂ ಸಹೋದರನನ್ನು ಉಗ್ರರು ಶೂಟೌಟ್ ಮಾಡಿದ್ದರು. ಈ ಘಟನೆಯನ್ನು ಎಲ್ಲಾ ರಾಜಕೀಯ ನಾಯಕರು ಖಂಡಿಸಿದ್ದರು. ಅಲ್ಲದೆ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದರು.

  • ಭಾರತೀಯ ಸೇನೆಯ ಗುಂಡಿನ ದಾಳಿಗೆ ಇಬ್ಬರು ಉಗ್ರರು ಉಡೀಸ್

    ಭಾರತೀಯ ಸೇನೆಯ ಗುಂಡಿನ ದಾಳಿಗೆ ಇಬ್ಬರು ಉಗ್ರರು ಉಡೀಸ್

    ಶ್ರೀನಗರ: ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಉಗ್ರರ ಮೇಲೆ ಗುಂಡಿನ ದಾಳಿ ಮಾಡಿದ್ದು, ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.

    ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಇಂದು ನಡೆದ ಎನ್‍ಕೌಂಟರ್ ನಲ್ಲಿ ಭಾರತೀಯ ಭದ್ರತಾ ಪಡೆಗಳಿಂದ ಗುಂಡಿನ ದಾಳಿಗೆ ಇಬ್ಬರು ಉಗ್ರರು ಹತರಾಗಿದ್ದಾರೆ. ಈ ಇಬ್ಬರು ಉಗ್ರರಲ್ಲಿ ಓರ್ವ ಉಗ್ರ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಸಂಘಟನೆಯಾದ ಲಷ್ಕರ್-ಎ-ತೊಯ್ಬಾ (ಎಲ್‍ಇಟಿ) ಸದಸ್ಯ ಎಂದು ಗುರುತಿಸಲಾಗಿದೆ.

    ಸೇನೆಯಿಂದ ಹತ್ಯೆಗೀಡಾದ ಭಯೋತ್ಪಾದಕನನ್ನು ಕುಪ್ವಾರಾದ ನಟ್ನುಸಾ ನಿವಾಸಿಯಾಗಿದ್ದ ಇದ್ರೀಸ್ ಭಟ್ ಎಂದು ಗುರುತಿಸಲಾಗಿದೆ. ಈ ಉಗ್ರ 2018ರಲ್ಲಿ ವಾಗಾ ಬಾರ್ಡರ್ ಮೂಲಕ ಪಾಕಿಸ್ತಾನಕ್ಕೆ ಹೋಗಿದ್ದು, ಅಲ್ಲಿ ಉಗ್ರರ ಸಂಘಟನೆ ಸೇರಿ ತರಬೇತಿ ಪಡೆದು ಭಾರತಕ್ಕೆ ಅಕ್ರಮವಾಗಿ ನುಸುಳಿದ್ದ ಎಂದು ತಿಳಿದು ಬಂದಿದೆ. ಇದರ ಜೊತೆಗೆ ಹತ್ಯೆಯಾದ ಮತ್ತೋರ್ವ ಉಗ್ರಗಾಮಿಯ ಗುರುತು ಸಿಕ್ಕಿಲ್ಲ.

    ಈ ಎನ್‍ಕೌಂಟರ್‍ಗೂ ಮುಂಚೆಯೇ ನೌಗಮ್ ಸೆಕ್ಟರ್ ನಲ್ಲಿ ಶೋಧ ಕಾರ್ಯಚರಣೆ ನಡೆಸಿ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಭದ್ರತಾ ಪಡೆಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಶ್ರೀನಗರ ಮೂಲದ ರಕ್ಷಣಾ ಪಿಆರ್‍ಓ ತಿಳಿಸಿದೆ. ಅಲ್ಲದೆ ಹತ್ಯೆಗೀಡಾದ ಇಬ್ಬರು ಭಯೋತ್ಪಾದಕರಿಂದ ಭದ್ರತಾ ಸಿಬ್ಬಂದಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸಹ ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

    ಈ ವಿಚಾರದ ಬಗ್ಗೆ ಮಾತನಾಡಿರುವ ಬಾರಾಮುಲ್ಲಾ ವಿಭಾಗದ ಜನರಲ್ ಕಮಾಂಡಿಂಗ್ ಆಫೀಸರ್ ವೀರೇಂದ್ರ ವ್ಯಾಟ್ಸ್ ಅವರು, ನೌಗಂನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಜೊತೆಗೆ ಅವರಿಂದ 1.5 ಲಕ್ಷ ಭಾರತೀಯ ಮತ್ತು ಪಾಕಿಸ್ತಾನಿ ಹಣವನ್ನು ವಶಕ್ಕೆ ಪಡೆದಿದ್ದೇವೆ. ಜೊತೆಗೆ ಎರಡು ಎಕೆ47 ಗನ್ ಮತ್ತು ಒಂದು ಪಿಸ್ತೂಲ್ ಸೇರಿದಂತೆ ಅಪಾರ ಪ್ರಮಾಣದ ಮದ್ದುಗುಂಡುಗಳು ಮತ್ತು ವೈದ್ಯಕೀಯ ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದರು.

  • ಯೋಧ, 6 ವರ್ಷದ ಬಾಲಕನನ್ನು ಹತ್ಯೆ ಮಾಡಿದ್ದ ಉಗ್ರ ಮಟಾಷ್

    ಯೋಧ, 6 ವರ್ಷದ ಬಾಲಕನನ್ನು ಹತ್ಯೆ ಮಾಡಿದ್ದ ಉಗ್ರ ಮಟಾಷ್

    ಶ್ರೀನಗರ: ಕಳೆದ ವಾರ ಯೋಧ ಮತ್ತು 6 ವರ್ಷದ ಬಾಲಕನನ್ನು ಹತ್ಯೆಗೈದ ಉಗ್ರನನ್ನು ಭಾರತೀಯ ಸೇನೆ ಹೊಡೆದು ಹಾಕಿದೆ.

    ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಅನಂತ್‍ನಾಗ್‍ನಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿ.ಆರ್.ಪಿ.ಎಫ್) ಜವಾನ್ ಮತ್ತು ಆರು ವರ್ಷದ ಬಾಲಕನನ್ನು ಭಯೋತ್ಪಾದಕ ಹತ್ಯೆ ಮಾಡಿದ್ದನು. ಈತನನ್ನು ಗುರುವಾರ ರಾತ್ರಿ ಶ್ರೀನಗರದಲ್ಲಿ ನಡೆದ ಎನ್‍ಕೌಂಟರ್ ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

    ಭಾರತೀಯ ಸೇನೆ ಅನಂತ್‍ನಾಗ್‍ನಲ್ಲಿ ಮಂಗಳವಾರ ಉಗ್ರ ಜಾಹಿದ್ ದಾಸ್‍ಗಾಗಿ ಶೋಧಕಾರ್ಯ ನಡೆಸಿತ್ತು. ಆದರೆ ಅಂದು ಆತ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದ. ಈ ಉಗ್ರನಿಗಾಗಿ ಭಾರತೀಯ ಸೇನೆ ವಿಶೇಷ ಕಾರ್ಯಾಚರಣೆ ತಂಡ ಮತ್ತು ಸಿ.ಆರ್.ಪಿ.ಎಫ್‍ನ ಯೋಧರು ಕಳೆದ ರಾತ್ರಿ ಶ್ರೀನಗರದ ಮಾಲ್‍ಬಾಗ್ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ್ದರು. ಈ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಕೂಡ ಹುತಾತ್ಮರಾಗಿದ್ದು, ಉಗ್ರನನ್ನು ಕೊಲ್ಲಲಾಗಿದೆ.

    ಕಳೆದ ವಾರ ಅನಂತ್‍ನಾಗ್‍ನ ಬಿಜ್ಬೆಹರಾ ಪ್ರದೇಶದ ಪಾಡ್‍ಶಾಹಿ ಬಾಗ್ ಸೇತುವೆ ಬಳಿ ರಸ್ತೆಯಲ್ಲಿ ಉಗ್ರರು ಗುಂಡಿನ ದಾಳಿ ಮಾಡಿದ್ದರು. ಈ ದಾಳಿಯಲ್ಲಿ ಸಿ.ಆರ್.ಪಿ.ಎಫ್ ಯೋಧ ಹುತಾತ್ಮರಾಗಿದ್ದರು. ಜೊತೆಗೆ ಜೂನ್ 26ರಂದು ನಡೆದ ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ಗುಂಡು ತಗುಲಿ ಆರು ವರ್ಷದ ಬಾಲಕ ನಿಹಾನ್ ಭಟ್ ಮೃತಪಟ್ಟಿದ್ದ. ಈ ಎರಡು ಪ್ರಕರಣದಲ್ಲೂ ಜಾಹಿನ್ ದಾಸ್ ಪ್ರಮುಖ ಆರೋಪಿಯಾಗಿದ್ದ.

    ಎರಡು ಘಟನೆಯ ನಂತರ ಜಾಹೀನ್ ದಾಸ್ ಫೋಟೋ ಬಿಡುಗಡೆ ಮಾಡಿದ್ದ ಜಮ್ಮು ಕಾಶ್ಮೀರದ ಪೊಲೀಸರು, ಈತ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಗೆ ಸೇರಿದ ಉಗ್ರ ಎಂದು ಘೋಷಣೆ ಮಾಡಿತ್ತು. ಜೊತೆಗೆ ಆತನ ಶೋಧಕಾರ್ಯದಲ್ಲಿ ತೊಡಗಿತ್ತು. ಇದಾದ ನಂತರ ಮಂಗಳವಾರ ಜಾಹೀದ್ ದಾಸ್ ಮೇಲೆ ಭಾರತೀಯ ಸೇನೆ ಅಟ್ಯಾಕ್ ಮಾಡಿತ್ತು. ಆದರೆ ಈ ದಾಳಿಯಲ್ಲಿ ಜಾಹೀದ್ ಇಬ್ಬರು ಸಹಚರರು ಬಲಿಯಾಗಿದ್ದರು. ಆದರೆ ಆತ ತಪ್ಪಿಸಿಕೊಂಡಿದ್ದ ಆದರೆ ಇಂದು ಹತನಾಗಿದ್ದಾನೆ.

    ಕಳೆದ ತಿಂಗಳಿನಿಂದ ನಡೆದ ಪ್ರತ್ಯೇಕ ಗುಂಡಿನ ದಾಳಿಯಲ್ಲಿ ಸುಮಾರು 48 ಉಗ್ರರನ್ನು ಕೊಲ್ಲಲಾಗಿದೆ. ಈ ವಿಚಾರದ ಬಗ್ಗೆ ಮಾತನಾಡಿರುವ ಕಾಶ್ಮೀರದ ಡಿಜಿಪಿ, ದಿಲ್ಭಾಗ್ ಸಿಂಗ್, ಕಳೆದ ಐದಾರು ತಿಂಗಳುಗಳಲ್ಲಿ, 100ಕ್ಕೂ ಹೆಚ್ಚು ಭಯೋತ್ಪಾದಕರನ್ನು ಕೊಲ್ಲಲಾಗಿದೆ. ಅವರಲ್ಲಿ 50 ಹೆಚ್ಚು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆ ಉಗ್ರರು, 20 ಲಷ್ಕರ್-ಎ-ತೈಬಾ ಉಗ್ರರು, 20 ಜೈಶ್-ಎ-ಮೊಹಮ್ಮದ್ ಮತ್ತು ಸಣ್ಣ ಉಗ್ರ ಸಂಘಟನೆಗಳಾದ ಅಲ್-ಬದ್ರ್, ಅನ್ಸಾರ್ ಗಜ್ವಾತುಲ್ ಹಿಂದ್‍ನಿಂದ 20 ಉಗ್ರರನ್ನು ಕೊಂದಿದ್ದೇವೆ ಎಂದು ಹೇಳಿದ್ದಾರೆ.

  • ಪುಲ್ವಾಮಾದಲ್ಲಿ ಗುಂಡಿನ ಚಕಮಕಿ- ಇಬ್ಬರು ಉಗ್ರರು ಮಟಾಷ್

    ಪುಲ್ವಾಮಾದಲ್ಲಿ ಗುಂಡಿನ ಚಕಮಕಿ- ಇಬ್ಬರು ಉಗ್ರರು ಮಟಾಷ್

    – ಓರ್ವ ಯೋಧ ಹುತಾತ್ಮ

    ಶ್ರೀನಗರ: ಇಂದು ಮುಂಜಾನೆ ಜಮ್ಮು ಮತ್ತು ಕಾಶ್ಮೀರಾದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಭಾರತೀಯ ಸೇನೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. ಜೊತೆಗೆ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿ.ಆರ್.ಪಿ.ಎಫ್)ಯ ಓರ್ವ ಸೈನಿಕ ಹುತಾತ್ಮರಾಗಿದ್ದಾರೆ.

    ಪುಲ್ವಾಮಾ ಜಿಲ್ಲೆಯ ಬಾಂಡ್‍ಜೊ ಗ್ರಾಮದಲ್ಲಿ ಭಾರತೀಯ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಇಂದು ಮುಂಜಾನೆ ಗುಂಡಿನ ಚಕಮಕಿ ನಡೆದಿದೆ. ಪುಲ್ವಾಮಾ-ಶೋಪಿಯಾನ್ ರಸ್ತೆಯ ಪುಲ್ವಾಮಾ ಪಟ್ಟಣದಿಂದ ಒಂದು ಕಿಲೋಮೀಟರ್ ದೂರದಲ್ಲಿರುವ ಬಾಂಡ್‍ಜೊ ಗ್ರಾಮದಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಬಾಂಡ್‍ಜೊ ಗ್ರಾಮದಲ್ಲಿ ಉಗ್ರರಿದ್ದಾರೆ ಎಂಬುದರ ಬಗ್ಗೆ ಖಚಿತ ಮಾಹಿತಿಯ ನಂತರ, ಸ್ಥಳೀಯ ಪೊಲೀಸರು, ರಾಷ್ಟ್ರೀಯ ರೈಫಲ್ಸ್ ಮತ್ತು ಸಿ.ಆರ್.ಪಿ.ಎಫ್ ಸೇರಿದಂತೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು. ಈ ವೇಳೆ ಸೈನಿಕರ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ. ಈ ಕಾಳಗದಲ್ಲಿ ನಮ್ಮ ಓರ್ವ ಯೋಧ ಗಂಭೀರವಾಗಿ ಗಾಯಗೊಂಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೈನಿಕ ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಘಟನಾ ಸ್ಥಳದಲ್ಲಿ ಯಾವುದೇ ಗುಂಡಿನ ಚಕಮಕಿ ನಡೆಯುತ್ತಿಲ್ಲ. ಜೊತೆಗೆ ಈ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿ ಇದ್ದು, ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಭಾನುವಾರಷ್ಟೇ ಜಮ್ಮು-ಕಾಶ್ಮೀರದ ಖಾದಿಬಾಲ್ ಸೌರಾ ಪ್ರದೇಶದಲ್ಲಿ ಭಾರತೀಯ ಭದ್ರತಾ ಪಡೆ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಿತ್ತು.