Tag: Srinagar

  • ಯೋಧರಿಗಾಗಿ ಹಾಡು ಹಾಡಿದ ಕ್ಯಾಪ್ಟನ್ ಕೂಲ್: ವಿಡಿಯೋ ನೋಡಿ

    ಯೋಧರಿಗಾಗಿ ಹಾಡು ಹಾಡಿದ ಕ್ಯಾಪ್ಟನ್ ಕೂಲ್: ವಿಡಿಯೋ ನೋಡಿ

    ಶ್ರೀನಗರ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್ ಧೋನಿ ಅವರು ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಧೋನಿ ಸೈನಿಕರ ಜೊತೆ ವಾಲಿಬಾಲ್ ಆಡಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಈಗ ಯೋಧರಿಗಾಗಿ ಹಾಡು ಹಾಡಿದ ವಿಡಿಯೋ ಸಾಕಷ್ಟು ವೈರಲ್ ಆಗುತ್ತಿದೆ.

    ಟೆರಿಟೋರಿಯಲ್ ಆರ್ಮಿ ಅವರ ಮುಂದೆ ಧೋನಿ ಹಾಡನ್ನು ಹಾಡಿದ್ದಾರೆ. ಈ ಮೊದಲು ಧೋನಿ ಸೇನೆ ಜೊತೆ ವಾಲಿಬಾಲ್ ಆಡಿದ ವಿಡಿಯೋ ಹಾಗೂ ಶೂ ಪಾಲೀಶ್ ಮಾಡಿದ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋದಲ್ಲಿ ಧೋನಿ ಯೋಧರಿಗೆ ಹಾಡು ಹಾಡುವ ಮೂಲಕ ಮನರಂಜನೆ ನೀಡಿದ್ದಾರೆ. ಧೋನಿ ಬಾಲಿವುಡ್‍ನ ‘ಕಭಿ ಕಭಿ’ ಚಿತ್ರದ ‘ಮೇ ಪಲ್ ದೋ ಪಲ್ ಕಾ ಶಾಯರ್ ಹು’ ಹಾಡನ್ನು ಹಾಡಿದ್ದಾರೆ.

    https://twitter.com/readubey/status/1157673418344452096?ref_src=twsrc%5Etfw%7Ctwcamp%5Etweetembed%7Ctwterm%5E1157673418344452096&ref_url=https%3A%2F%2Fwww.bhaskarhindi.com%2Fnews%2Flt-col-ms-dhoni-turns-singer-to-entertain-army-men-80447

    ಆಗಸ್ಟ್ 15 ರವರೆಗೆ ವಿಕ್ಟರ್ ಫೋರ್ಸ್ ನ ಭಾಗವಾಗಿ ಎಂ.ಎಸ್.ಧೋನಿ ಕಾಶ್ಮೀರ ಕಣಿವೆಯಲ್ಲಿರುವ ಘಟಕದೊಂದಿಗೆ ಇರಲಿದ್ದಾರೆ. ಅಧಿಕಾರಿಗಳ ಕೋರಿಕೆಯಂತೆ ಮತ್ತು ಸೇನಾ ಕೇಂದ್ರ ಕಚೇರಿಯಿಂದ ಅನುಮೋದನೆ ಪಡೆದಂತೆ ಎಂ.ಎಸ್ ಧೋನಿ ಗಸ್ತು, ಕಾವಲು ಮತ್ತು ಪೋಸ್ಟ್ ಡ್ಯೂಟಿ ಮಾಡುತ್ತಿದ್ದಾರೆ.

    ವಿಶ್ವಕಪ್ ಬಳಿಕ ಸೇನೆ ಸೇರಿದ ಧೋನಿ ಆರಂಭದ ಮೂರು ದಿನ ಸೇನೆಯ ಪ್ರಾಥಮಿಕ ತರಬೇತಿಯನ್ನು ಪಡೆದಿದ್ದರು. ಈ ವೇಳೆ ಸೇನೆಯ ಬಗ್ಗೆ ಮಾಹಿತಿ, ಫೈರಿಂಗ್ ಸಹ ಹೇಳಿಕೊಡಲಾಗಿತ್ತು. ವೆಸ್ಟ್ ಇಂಡೀಸ್ ಪ್ರವಾಸದಿಂದ ರಜೆ ಪಡೆದುಕೊಂಡಿರುವ ಧೋನಿ ಆಗಸ್ಟ್ 15ರವರೆಗೆ ಕಾಶ್ಮೀರದಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ಧೋನಿ ಸೈನಿಕರೊಂದಿಗೆ ಆಚರಿಸಲಿದ್ದಾರೆ.

    ಭಾರತೀಯ ಸೇನೆಯ ಪ್ಯಾರಾಚೂಟ್ ರೆಜಿಮೆಂಟ್‍ನ ಟೆರಿಟೊರಿಯಲ್ ಆರ್ಮಿ ಯೂನಿಟ್‍ನಲ್ಲಿ 38 ವರ್ಷದ ಧೋನಿ ಅವರಿಗೆ 2011 ರಲ್ಲಿ ಗೌರವ ಲೆಫ್ಟಿನೆಂಟ್ ಕರ್ನಲ್ ಹುದ್ದೆ ನೀಡಲಾಗಿತ್ತು. ವಿಶೇಷ ಎಂದರೆ 2015 ರಲ್ಲಿ ಆಗ್ರಾದಲ್ಲಿ ಪ್ಯಾರಾಚೂಟ್ ರೆಜಿಮೆಂಟ್ ಸೇನಾ ತಂಡದೊಂದಿಗೆ ಧೋನಿ ತರಬೇತಿ ಪಡೆದಿದ್ದರು. ಧೋನಿ 2020 ರ ಫೆಬ್ರವರಿಯಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ಆಡಲಿದ್ದಾರೆ ಎಂಬ ಮಾಹಿತಿ ಇದೆ. ಇದರ ಜೊತೆ ಮುಂದಿನ ವರ್ಷದ ಐಪಿಎಲ್ ಟೂರ್ನಿಯನ್ನು ಆಡಲಿದ್ದಾರೆ ಎಂದು ಹೇಳಲಾಗಿದೆ.

  • ಅಮರನಾಥ ಯಾತ್ರೆ ನಿಲ್ಲಿಸಿ, ಕಾಶ್ಮೀರ ತೊರೆಯಿರಿ – ಯಾತ್ರಿಗಳಿಗೆ ಸರ್ಕಾರ ಸೂಚನೆ

    ಅಮರನಾಥ ಯಾತ್ರೆ ನಿಲ್ಲಿಸಿ, ಕಾಶ್ಮೀರ ತೊರೆಯಿರಿ – ಯಾತ್ರಿಗಳಿಗೆ ಸರ್ಕಾರ ಸೂಚನೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಅಮರನಾಥ ಯಾತ್ರೆಯಲ್ಲಿ ತೊಡಗಿರುವ ಯಾತ್ರಿಗಳನ್ನೇ ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಲು ಹೊಂಚು ಹಾಕಿರುವ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ.

    ಗುಪ್ತಚರ ಇಲಾಖೆಯಿಂದ ಖಚಿತ ಮಾಹಿತಿಯ ಸಿಕ್ಕಿದ ಹಿನ್ನೆಲೆಯಲ್ಲಿ ಪವಿತ್ರ ಅಮರನಾಥ ಯಾತ್ರೆಯನ್ನು ನಿಲ್ಲಿಸಿ ಕಾಶ್ಮೀರ ತೊರೆದು ತಮ್ಮ ಊರುಗಳಿಗೆ ಮರಳಿ ಹೋಗಿ ಎಂದು ಜಮ್ಮು ಕಾಶ್ಮೀರದ ಗೃಹ ಸಚಿವಾಲಯ ಯಾತ್ರಿಗಳಿಗೆ ಸೂಚಿಸಿದೆ.

    ಯಾಕೆ ಈ ಸೂಚನೆ?
    ಅಮರನಾಥ ಯಾತ್ರೆಗೆ ಸಾಗುವ ಮಾರ್ಗಗಳಲ್ಲಿ ವಿದೇಶಿ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ. ಅಮೆರಿಕದ ಎಂ-24 ಸ್ನೈಪರ್ ರೈಫಲ್ ಅನ್ನು ಸೇನೆ ವಶಪಡಿಸಿಕೊಂಡಿದೆ. ಪತ್ತೆಯಾಗಿರುವ ಶಸ್ತ್ರಾಸ್ತ್ರಗಳ ಮೇಲೆ ಪಾಕಿಸ್ತಾನದ ಶಸ್ತ್ರಾಸ್ತ್ರ ಘಟಕದ ಚಿಹ್ನೆ ಪತ್ತೆಯಾಗಿದೆ. ಹೀಗಾಗಿ ಅಮರನಾಥ ಯಾತ್ರಿಕರು ಕೂಡಲೇ ಜಮ್ಮು ಕಾಶ್ಮೀರ ಬಿಟ್ಟು ತೆರಳುವಂತೆ ಸೂಚನೆ ರವಾನಿಸಲಾಗಿದೆ. ಈ ಮೂಲಕ ಪಾಕಿಸ್ತಾನ ಉಗ್ರರಿಗೆ ಸಹಾಯ ಮಾಡುತ್ತಿದೆ ಎನ್ನುವ ಭಾರತದ ವಾದಕ್ಕೆ ಪುಷ್ಠಿ ಸಿಕ್ಕಿದೆ.

    ಈ ವಿಚಾರ ಬಗ್ಗೆ ಇಂದು ಸುದ್ದಿಗೋಷ್ಠಿ ನಡೆಸಿದ ಲೆಫ್ಟಿನೆಂಟ್ ಜನರಲ್ ಸರಬ್‍ಜೀತ್ ಸಿಂಗ್ ಧಿಲ್ಲಾನ್, ಕಾಶ್ಮೀರದ ಶಾಂತಿಯನ್ನು ಕದಡಲು ನಾವು ಅವಕಾಶ ನೀಡುವುದಿಲ್ಲ. ಯಾವುದೇ ಕಾರಣಕ್ಕೂ ಉಗ್ರರು ಹಾಗೂ ಪಾಕಿಸ್ತಾನದ ಹೊಂಚು ಯಶಸ್ವಿಯಾಗಲು ಬಿಡುವುದಿಲ್ಲ. ಇದು ಕಾಶ್ಮೀರ ಜನತೆಗೆ ಹಾಗೂ ದೇಶಕ್ಕೆ ನಾವು ನೀಡುವ ವಾದ ಎಂದು ಭರವಸೆ ನೀಡಿದ್ದಾರೆ.

    ಕಾಶ್ಮೀರದಲ್ಲಿ ನಮ್ಮ ಭದ್ರತಾ ಪಡೆಯು ಹೆಚ್ಚು ಜಾಗೃತೆಯಿಂದ ಕೆಲಸ ನಿರ್ವಹಿಸುತ್ತಿದೆ. ಇಲ್ಲಿ ನಡೆದ ಚುನಾವಣೆಗಳು, ಸಭೆ ಸಮಾರಂಭಗಳು ಹಾಗೂ ಈಗ ನಡೆಯುತ್ತಿರುವ ಅಮರನಾಥ ಯಾತ್ರೆಯಲ್ಲಿ ಯಾವ ಅಹಿತಕರ ಘಟನೆ ನಡೆಯದಂತೆ ಕಳೆದ 9 ತಿಂಗಳುಗಳಿಂದ ನಿಗಾವಹಿಸಿದ್ದೇವೆ. ಇದುವರೆಗೂ ಪಾಕ್ ಹಾಗೂ ಉಗ್ರರು ಗಡಿಯಲ್ಲಿ ನುಸುಳುವ ಯತ್ನ ಹಾಗೂ ಅವರ ಕುತಂತ್ರವನ್ನು ಯಶಸ್ವಿಯಾಗಲು ನಾವು ಬಿಟ್ಟಿಲ್ಲ. ನಮ್ಮ ಭದ್ರತಾ ಪಡೆ ಹೆಚ್ಚು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ನಾವು ಉಗ್ರರನ್ನು ಸದೆಬಡಿಯುತ್ತೇವೆ ಎಂದು ಧಿಲ್ಲಾನ್ ಅವರು ಹೇಳಿದ್ದಾರೆ.

    ಕಾಶ್ಮೀರದಲ್ಲಿ ಉಗ್ರ ಚಟುವಟಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ 10 ಸಾವಿರ ಹೆಚ್ಚುವರಿ ಯೋಧರನ್ನು ನಿಯೋಜಿಸಲಾಗಿದೆ. ಉಗ್ರರ ದಾಳಿ ಬಗ್ಗೆ ಮಾಹಿತಿ ದೊರಕಿದ ಮೇಲೆ 25 ಸಾವಿರಕ್ಕೂ ಹೆಚ್ಚುವರಿ ಯೋಧರನ್ನು ನಿಯೋಜಿಸಲಾಗಿದೆ. ಕೆಲ ಆಂತರಿಕ ವಿಚಾರವಾಗಿ ಕಣಿವೆ ರಾಜ್ಯಕ್ಕೆ ಹೆಚ್ಚುವರಿ ಯೋಧರನ್ನು ಕಳುಹಿಸಲಾಗಿದೆ ಎಂದ ಧಿಲ್ಲಾನ್ ಅವರು ಸ್ಪಷ್ಟಪಡಿಸಿದ್ದಾರೆ.

    ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯಾದ ಜೈಶ್-ಎ-ಮೊಹಮ್ಮದ್‍ಗೆ ಸೇರಿದ ಐದು ಉಗ್ರರು ಕಾಶ್ಮೀರಕ್ಕೆ ನುಸುಳಿದ್ದಾರೆ ಎಂಬ ಗುಪ್ತಚರ ಇಲಾಖೆ ಮಾಹಿತಿ ಮೇರೆಗೆ ಕಾಶ್ಮೀರದ ಕಣಿವೆ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

    ಭಾರತಕ್ಕೆ ನುಸುಳಿರುವ ಭಯೋತ್ಪಾದಕರು ಹೆಚ್ಚು ತರಬೇತಿ ಪಡೆದವರು ಮತ್ತು ಅವರು ಭದ್ರತಾ ಪಡೆಗಳ ಮೇಲೆ ದಾಳಿ ಮಾಡಬಹುದು ಎಂದು ಮೂಲಗಳು ತಿಳಿಸಿರುವ ಕಾರಣ ಕೇಂದ್ರ ಸರ್ಕಾರ ಕಾಶ್ಮೀರ ಕಣಿವೆ ಪ್ರದೇಶಕ್ಕೆ ಹೆಚ್ಚಿನ ಸೈನಿಕರು ಮತ್ತು ವಾಯು ಪಡೆಯನ್ನು ನಿಯೋಜನೆ ಮಾಡಿ ತೀವ್ರ ಎಚ್ಚರಿಕೆ ವಹಿಸಲಾಗಿದೆ.

    ಈ ವಿಷಯ ತಿಳಿಯುತ್ತಿದ್ದಂತೆ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಗುರುವಾರ ಸಂಜೆಯಿಂದ ಸೂಕ್ಷ್ಮ ಪ್ರದೇಶದಲ್ಲಿ ಗಸ್ತು ತಿರುಗುತ್ತಿದೆ. ಹೆಚ್ಚಿನ ಭದ್ರತೆಗೆ ಸೇನೆಯನ್ನು ಸಿದ್ಧಗೊಳಿಸಲಾಗಿದೆ. ಕಾಶ್ಮೀರ ಕಣಿವೆಗಳಲ್ಲಿ ಭದ್ರತಾ ಪಡೆಗಳ 280 ಗುಂಪುಗಳನ್ನು ನಿಯೋಜನೆ ಮಾಡಲಾಗಿದೆ. ಕಾಶ್ಮೀರದ ನಗರ ಭಾಗದ ಕೆಲ ದುರ್ಬಲ ಸ್ಥಳಗಳಲ್ಲಿ ಸಿಆರ್‍ಪಿಎಫ್ ಸಿಬ್ಬಂದಿಯನ್ನು ನೇಮಕ ಮಾಡಿದ್ದೇವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

    ನಗರದ ಎಲ್ಲಾ ಪ್ರಮುಖ ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿ ಕೇಂದ್ರ ಸಶಸ್ತ್ರ ಅರೆಸೈನಿಕ ಪಡೆ (ಸಿಎಪಿಎಫ್) ಮತ್ತು ಸ್ಥಳೀಯ ಪೊಲೀಸರನ್ನು ನೇಮಿಸಲಾಗಿದೆ. ಭಯೋತ್ಪಾದಕರು ಪೊಲೀಸ್ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲಿದ್ದಾರೆ ಎಂಬ ಗುಪ್ತಚರ ಇಲಾಖೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪ್ರಾರ್ಥನಾ ಮಂದಿರಕ್ಕೆ ನೀಡಿದ್ದ ಭದ್ರತೆಯನ್ನು ಹಿಂತೆಗೆದುಕೊಳ್ಳಲಾಗಿದೆ. ರಾಜ್ಯದ ಶಾಲೆಗಳಿಗೆ 10 ದಿನಗಳವರೆಗೆ ರಜೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • ಕಾಶ್ಮೀರದಲ್ಲಿ ಧೋನಿ – ಮೊದಲ ಫೋಟೋ ವೈರಲ್

    ಕಾಶ್ಮೀರದಲ್ಲಿ ಧೋನಿ – ಮೊದಲ ಫೋಟೋ ವೈರಲ್

    ಶ್ರೀನಗರ: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಸೇನಾ ಕರ್ತವ್ಯದಲ್ಲಿ ತಮ್ಮ ಕಾರ್ಯವನ್ನು ಆರಂಭಿಸಿದ್ದಾರೆ. ಇದರ ನಡುವೆ ಸೇನಾ ಕರ್ತವ್ಯಕ್ಕೆ ತೆರಳಿದ ಬಳಿಕ ಧೋನಿರ ಮೊದಲ ಫೋಟೋ ಭಾರೀ ವೈರಲ್ ಆಗಿದೆ.

    ಫೋಟೋದಲ್ಲಿ ಸೇನಾ ಸಮವಸ್ತ್ರ ಧರಿಸಿರುವ ಧೋನಿ ಬ್ಯಾಟಿನ ಮೇಲೆ ಸಹಿ ಹಾಕುತ್ತಿರುವುದನ್ನು ಕಾಣಬಹುದಾಗಿದೆ. ಧೋನಿ ನಮ್ಮ ಬೆಟಾಲಿಯನ್‍ಗೆ ಸೇರ್ಪಡೆಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. 106ನೇ ಟೆರಿಟೋರಿಯಲ್ ಆರ್ಮಿ ಬೆಟಾಲಿಯನ್ ಪ್ಯಾರಾ ಕಮಾಂಡೋ ಯೂನಿಟ್ ನಲ್ಲಿ ಧೋನಿ ಕಾರ್ಯ ನಿರ್ವಹಿಸುತ್ತಿದ್ದಾರೆ.

    ಇದರೊಂದಿಗೆ ಧೋನಿ ಸೈನಿಕರಾಗಿ ತೆರಳಿರುವುದರಿಂದ ಅವರ ರಕ್ಷಣೆಯ ಬಗ್ಗೆ ಕೆಲವರು ಆತಂಕ ವ್ಯಕ್ತಪಡಿಸಿದ್ದರು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಸೇನಾ ಮುಖ್ಯಸ್ಥರು, ಯಾವುದೇ ಪ್ರಜೆ ಮಿಲಿಟರಿ ಸಮವಸ್ತ್ರ ಧರಿಸಿ ಕರ್ತವ್ಯ ಮಾಡಲು ಬಯಸಿದಾಗ ಅವರಿಗೆ ನೀಡಲಾಗುವ ಕಾರ್ಯವನ್ನು ಪೂರೈಸಲು ಅಗತ್ಯ ತರಬೇತಿ ನೀಡಲಾಗಿರುತ್ತದೆ. ಧೋನಿ ಅವರು ಕೂಡ ತಮ್ಮ ಕಾರ್ಯವನ್ನು ಪೂರ್ಣಗೊಳಿಸಲು ಬೇಕಾದ ತರಬೇತಿಯನ್ನು ಕೈಗೊಂಡಿದ್ದಾರೆ ಎಂದಿದ್ದಾರೆ.

    ಧೋನಿ ಅವರು ಮಂಗಳವಾರದಿಂದ ಸೇನಾ ಕರ್ತವ್ಯಕ್ಕೆ ತೆರಳಿದ್ದಾರೆ. ವೆಸ್ಟ್ ಇಂಡೀಸ್ ಪ್ರವಾಸದಿಂದ ರಜೆ ಪಡೆದುಕೊಂಡಿರುವ ಧೋನಿ ಇಂದಿನಿಂದ ಆಗಸ್ಟ್ 15ರವರೆಗೆ ಕಾಶ್ಮೀರದಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಈ ಬಾರಿಯ ಸ್ವತಂತ್ರ ದಿನಾಚರಣೆಯನ್ನು ಧೋನಿ ಸೈನಿಕರೊಂದಿಗೆ ಆಚರಿಸಲಿದ್ದಾರೆ. ಭಾರತೀಯ ಸೇನೆಯ ಪ್ಯಾರಾಚೂಟ್ ರೆಜಿಮೆಂಟ್‍ನ ಟೆರಿಟೊರಿಯಲ್ ಅರ್ಮಿ ಯೂನಿಟ್‍ನಲ್ಲಿ 38 ವರ್ಷದ ಧೋನಿ ಅವರಿಗೆ 2011 ರಲ್ಲಿ ಗೌರವ ಲೆಫ್ಟಿನೆಂಟ್ ಕರ್ನಲ್ ಹುದ್ದೆ ನೀಡಲಾಗಿತ್ತು. ವಿಶೇಷ ಎಂದರೆ 2015 ರಲ್ಲಿ ಆಗ್ರಾದಲ್ಲಿ ಪ್ಯಾರಾಚೂಟ್ ರೆಜಿಮೆಂಟ್ ಸೇನಾ ತಂಡದೊಂದಿಗೆ ಧೋನಿ ತರಬೇತಿ ಪಡೆದಿದ್ದರು.

  • ಕದನ ವಿರಾಮ ಉಲ್ಲಂಘಿಸಿದ ಪಾಕ್ – ಗುಂಡೇಟಿಗೆ 10 ದಿನದ ಕಂದಮ್ಮ ಬಲಿ

    ಕದನ ವಿರಾಮ ಉಲ್ಲಂಘಿಸಿದ ಪಾಕ್ – ಗುಂಡೇಟಿಗೆ 10 ದಿನದ ಕಂದಮ್ಮ ಬಲಿ

    ಶ್ರೀನಗರ: ಗಡಿಯಲ್ಲಿ ಮತ್ತೆ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿ ದಾಳಿ ನಡೆಸಿದ್ದು, ಈ ಗುಂಡಿನ ಚಕಮಕಿಯಲ್ಲಿ 10 ದಿನದ ಶಿಶು ಸಾವನ್ನಪ್ಪಿ, ಇಬ್ಬರು ಸಾರ್ವಜನಿಕರು ಗಾಯಗೊಂಡಿದ್ದಾರೆ.

    ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯ (ಎಲ್‍ಒಸಿ) ಪಕ್ಕದ ಕೃಷ್ಣ ಕಣಿವೆ, ಮೆಂದರ್ ಮತ್ತು ಮಂಕೋಟ್ ವಲಯದಲ್ಲಿ ಪಾಕಿಸ್ತಾನ ಮತ್ತೆ ಗುಂಡಿನ ದಾಳಿ ನಡೆಸಿದೆ. ಭಾನುವಾರ ರಾತ್ರಿ ಈ ದಾಳಿ ನಡೆಸಿದ್ದು, ಗುಂಡೇಟಿಗೆ 10 ದಿನ ಶಿಶು ಮೃತಪಟ್ಟು, ಇಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಪ್ರಚೋದನೆಯಿಲ್ಲದೆ ಗುಂಡು ಹಾರಿಸುವ ಮೂಲಕ ಪಾಕಿಸ್ತಾನವು ಭಾರತೀಯ ಚೆಕ್‍ಪೋಸ್ಟ್ ಗಳು ಮತ್ತು ವಸತಿ ಪ್ರದೇಶಗಳನ್ನು ಗುರಿಯಾಗಿಸಿದೆ. ದಾಳಿಯಲ್ಲಿ ಒಟ್ಟು ಮೂವರು ಗಾಯಗೊಂಡಿದ್ದರು. ಅವರನ್ನು ಕೂಡಲೇ ಪೂಂಚ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಗುಂಡೇಟು ತಗುಲಿ ಮಗುವಿನ ಸ್ಥಿತಿ ಚಿಂತಾಜನಕವಾಗಿತ್ತು. ಹೀಗಾಗಿ ಚಿಕಿತ್ಸೆ ಫಲಕಾರಿಯಾಗದೇ ಪ್ರಾಣಬಿಟ್ಟಿದೆ. ಸದ್ಯ ಗಾಯಗೊಂಡ ಇಬ್ಬರನ್ನು ಜಮ್ಮುವಿಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಪಾಕ್ ಸೈನ್ಯ ಏಕಾಏಕಿ ದಾಳಿ ನಡೆಸಲು ಆರಂಭಿಸಿದ ಕೂಡಲೇ ಭಾರತೀಯ ಯೋಧರು ಕೂಡ ಪ್ರತಿದಾಳಿ ನಡೆಸಿ ತಕ್ಕ ಉತ್ತರ ನೀಡಿದ್ದಾರೆ. ಕಳೆದ ಜುಲೈ 22ರಂದು ರಾಜೌರಿ ಪ್ರದೇಶದಲ್ಲಿ ಪಾಕ್ ನಡೆಸಿದ ದಾಳಿಗೆ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದರು. ಕೆಲವು ಸಾರ್ವಜನಿಕರು ಕೂಡ ಈ ದಾಳಿಯಲ್ಲಿ ಗಾಯಗೊಂಡಿದ್ದರು.

    ಪದೇ ಪದೇ ಗಡಿಯಲ್ಲಿ ಭಾರತ- ಪಾಕ್ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಕಾಶ್ಮೀರದಲ್ಲಿ ಭದ್ರತೆಯನ್ನು ಬಿಗಿಗೊಳಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಉನ್ನತ ಮಟ್ಟದ ಸಭೆ ನಡೆಸಿದ್ದರು. ಈ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದ ಅನ್ವಯ ಮುಂಜಾಗೃತಾ ಕ್ರಮವಾಗಿ 10 ಸಾವಿರ ಯೋಧರನ್ನು ಕಾಶ್ಮೀರ ಕಣಿವೆ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ.

    ಭಾರತದ ಮೇಲೆ ಪಾಕಿಸ್ತಾನ ಸೇನೆ ಹಾಗೂ ಉಗ್ರರು ದೊಡ್ಡ ಮಟ್ಟದಲ್ಲಿ ದಾಳಿ ನಡೆಸಲು ಯೋಜನೆ ಹೂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲದೆ ಅಮರನಾಥ ಯಾತ್ರೆಗೆ ಬರುವ ಯಾತ್ರಾರ್ಥಿಗಳ ಮೇಲೆ ಕೂಡ ಉಗ್ರರು ದಾಳಿ ಮಾಡಲು ಹೊಂಚು ಹಾಕಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.

  • ಕಿಡ್ನಾಪ್ ಮಾಡಿ ಯೋಧನ ಹತ್ಯೆ – ಸೇಡು ತೀರಿಸಿಕೊಳ್ಳಲು ಸೇನೆ ಸೇರಿದ ಕಾಶ್ಮೀರಿ ಸಹೋದರರು

    ಕಿಡ್ನಾಪ್ ಮಾಡಿ ಯೋಧನ ಹತ್ಯೆ – ಸೇಡು ತೀರಿಸಿಕೊಳ್ಳಲು ಸೇನೆ ಸೇರಿದ ಕಾಶ್ಮೀರಿ ಸಹೋದರರು

    ಶ್ರೀನಗರ: ಕಳೆದ ವರ್ಷ ಈದ್‍ಗೆ ಎಂದು ಮನೆಗೆ ಬರುತ್ತಿದ್ದ ಯೋಧನನ್ನು ಉಗ್ರರು ಕಿಡ್ನಾಪ್ ಮಾಡಿ ಹತ್ಯೆ ಮಾಡಿದ್ದರು. ಈಗ ಯೋಧನ ಹತ್ಯೆಯ ಸೇಡು ತೀರಿಸಿಕೊಳ್ಳಲು ಅವರ ಇಬ್ಬರು ತಮ್ಮಂದಿರು ಸೇನೆಗೆ ಸೇರಿದ್ದಾರೆ.

    ಕಳೆದ ವರ್ಷ ಜೂನ್ 14 ರಂದು ಈದ್ ಹಬ್ಬ ಆಚರಿಸಲು ಯೋಧ ಔರಂಗಜೇಬ್ ಅವರು ಮನೆಗೆ ತೆರಳುತ್ತಿದ್ದರು. ಈ ವೇಳೆ ಜಮ್ಮು -ಕಾಶ್ಮೀರದ ಉಗ್ರರು ಪ್ಲ್ಯಾನ್ ಮಾಡಿ ಯೋಧ ಔರಂಗಜೇಬ್ ಅವರನ್ನು ಕಿಡ್ನಾಪ್ ಮಾಡಿ ಹತ್ಯೆ ಮಾಡಿದ್ದರು. ಹುತಾತ್ಮ ಯೋಧ ಔರಂಗಜೇಬ್ ಹತ್ಯೆಯ ಸೇಡು ತೀರಿಸಿಕೊಳ್ಳಲು ಈಗ ಅವರ ಇಬ್ಬರು ಸಹೋದರರಾದ ಮೊಹಮ್ಮದ್ ತಾರೀಕ್ ಹಾಗೂ ಮೊಹಮ್ಮದ್ ಶಬ್ಬೀರ್ ಸೇನೆಗೆ ಸೇರಿದ್ದಾರೆ.

    ನಾವು ದೇಶಪ್ರೇಮಕ್ಕಾಗಿ ಹಾಗೂ ನಮ್ಮ ಸಹೋದರನ ಹತ್ಯೆಯ ಸೇಡು ತೀರಿಸಿಕೊಳ್ಳಲು ಸೇನೆಗೆ ಸೇರಿದ್ದೇವೆ. ದಕ್ಷಿಣ ಕಾಶ್ಮೀರದಲ್ಲಿ ಹಿಜ್‍ಬುಲ್ ಉಗ್ರರು ನನ್ನ ಸಹೋದರನನ್ನು ಹತ್ಯೆ ಮಾಡಿದ್ದರು ಎಂದು ಮೊಹಮ್ಮದ್ ಶಬ್ಬೀರ್ ಹೇಳಿದ್ದಾರೆ. ಇದನ್ನೂ ಓದಿ: ಮೇಜರ್ ಆದಿತ್ಯ ಕುಮಾರ್, ರೈಫಲ್‍ಮ್ಯಾನ್ ಔರಂಗಜೇಬ್‍ಗೆ ಶೌರ್ಯ ಚಕ್ರ ಪುರಸ್ಕಾರ

    ವರದಿಗಳ ಪ್ರಕಾರ ಔರಂಗಜೇಬ್ ಅವರ ಸಹೋದರ ಮೊಹಮ್ಮದ್ ತಾರೀಕ್ ಅವರು ಪಂಜಾಬ್ ರೆಜಿಮೆಂಟ್‍ನಲ್ಲಿ ತರಬೇತಿ ಪಡೆಯಲಿದ್ದಾರೆ. ಈ ವೇಳೆ ಅವರು ಮಾತನಾಡಿ, ನಾವು ಪ್ರತಿಯೊಂದು ಲಿಖಿತ, ವೈದ್ಯಕೀಯ, ದೈಹಿಕ ಪರೀಕ್ಷೆಯಲ್ಲಿ ಪಾಸ್ ಆಗಿದ್ದೇವೆ. ಕಳೆದ ವರ್ಷ ಜೂನ್ 14ರಂದು ಉಗ್ರರು ನನ್ನ ಅಣ್ಣನನ್ನು ಹತ್ಯೆ ಮಾಡಿದ ನಂತರ ನಾವು ಸೇನೆ ಸೇರಲು ನಿರ್ಧರಿಸಿದ್ದೇವು ಎಂದು ತಿಳಿಸಿದ್ದಾರೆ.

    ತಾರೀಕ್ ಹಾಗೂ ಶಬ್ಬೀರ್ ಅವರು ಮೇ ತಿಂಗಳಿನಲ್ಲಿ ಪೂಂಚ್‍ನ ಸುರಂಕೋಟೆಯಲ್ಲಿ ನಡೆದ ಸೇನಾ ನೇಮಕಾತಿ ಅಭಿಯಾನದಲ್ಲಿ ಆಯ್ಕೆ ಆಗಿದ್ದರು. ತಾರೀಕ್ ಹಾಗೂ ಶಬ್ಬೀರ್ ಅವರ ತಂದೆ ಮೊಹಮ್ಮದ್ ಹನೀಫ್ ಸೇನೆಯಲ್ಲಿ ಕಾರ್ಯ ನಿರ್ವಹಿಸಿದ್ದರು. ಇದೇ ವರ್ಷ ಅಂದರೆ ಫೆಬ್ರವರಿ 3ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜಮ್ಮು ರ‍್ಯಾಲಿಯಲ್ಲಿ ಹನೀಫ್ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದರು.

    ನನ್ನ ಇಬ್ಬರು ಮಕ್ಕಳಾದ ತಾರೀಕ್ ಹಾಗೂ ಶಬ್ಬೀರ್ ತಮ್ಮ ಸಹೋದರ ಔರಂಗಜೇಬ್ ಸಾಹಸದಿಂದ ಪ್ರೇರಣೆಗೊಂಡಿದ್ದಾರೆ. ಉಗ್ರರು ನನ್ನ ಮಗನಿಗೆ ಮೋಸ ಮಾಡಿ ಹತ್ಯೆ ಮಾಡಿದ್ದಾರೆ. ನನ್ನ ಮಗ ಉಗ್ರರ ಜೊತೆ ಸೆಣಸಾಡಿ ಹುತ್ಮಾತನಾಗಿದ್ದರೆ, ನನಗೆ ಬೇಸರವಾಗುತ್ತಿರಲಿಲ್ಲ. ಆದರೆ ಅವರು ಮೋಸದಿಂದ ನನ್ನ ಮಗನ ಹತ್ಯೆ ಮಾಡಿದ್ದಾರೆ. ನನ್ನ ಇಬ್ಬರು ಮಕ್ಕಳು ಸೇನೆಗೆ ಸೇರಿರುವುದರಿಂದ ನನಗೆ ಹೆಮ್ಮೆ ಇದೆ. ನನ್ನ ಎದೆಯ ಮೇಲಿನ ಗಾಯ ಹಾಗೆಯೇ ಇದೆ. ನನ್ನ ಮಗನನ್ನು ಹತ್ಯೆ ಮಾಡಿದ ಉಗ್ರರ ಜೊತೆ ನಾನೇ ಹೋರಾಡಬೇಕು ಎಂದು ಒಮ್ಮೊಮ್ಮೆ ಅನಿಸುತ್ತದೆ. ಆದರೆ ಈಗ ನನ್ನ ಇಬ್ಬರು ಪುತ್ರರು ಈ ಉಗ್ರರನ್ನು ಮಟ್ಟಹಾಕುತ್ತಾರೆ ಎಂಬ ವಿಶ್ವಾಸವಿದೆ ಎಂದು ಹನೀಫ್ ಹೇಳಿದ್ದಾರೆ.

    ಸೋಮವಾರ ರಜೌರಿಯಲ್ಲಿ ಭಾರತೀಯ ಸೇನೆ 100 ಹೊಸ ಯೋಧರನ್ನು ನೇಮಕಾತಿ ಮಾಡಿಕೊಂಡಿದೆ. ಇದರಲ್ಲಿ ತಾರೀಕ್ ಹಾಗೂ ಶಬ್ಬೀರ್ ಅವರು ಸೇರಿದ್ದಾರೆ. ತಾರೀಕ್ ಹಾಗೂ ಶಬ್ಬೀರ್ ಗೆ 16 ವರ್ಷದ ತಮ್ಮನಿದ್ದು ಆತ ಕೂಡ ಸೇನೆ ಸೇರಿ ದೇಶದ ಸೇವೆ ಮಾಡುತ್ತೇನೆ ಎಂದು ಹೇಳಿದ್ದಾನೆ.

     

  • ನದಿಗೆ ಹಾರಿ ಸಿಆರ್‌ಪಿಎಫ್ ಯೋಧರಿಂದ ಬಾಲಕಿಯ ರಕ್ಷಣೆ: ವಿಡಿಯೋ

    ನದಿಗೆ ಹಾರಿ ಸಿಆರ್‌ಪಿಎಫ್ ಯೋಧರಿಂದ ಬಾಲಕಿಯ ರಕ್ಷಣೆ: ವಿಡಿಯೋ

    ಶ್ರೀನಗರ್: ನದಿಗೆ ಹಾರಿ ಸಿಆರ್‌ಪಿಎಫ್ ಯೋಧರು ಬಾಲಕಿಯನ್ನು ರಕ್ಷಿಸಿದ ಘಟನೆ ಇಂದು ಜಮ್ಮು- ಕಾಶ್ಮೀರದ ಟ್ಯಾಂಗ್‍ಮಾರ್ಗ್ ಪಟ್ಟಣದ ಬಾರಾಮುಲ್ಲಾದಲ್ಲಿ ನಡೆದಿದೆ.

    ಯೋಧರು ಬಾಲಕಿಯನ್ನು ರಕ್ಷಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬಾಲಕಿ ಕಿರುಚುತ್ತಿದ್ದ ಶಬ್ಧ ಕೇಳಿ ಐವರು ಯೋಧರು ಕಲ್ಲಿನ ಮೇಲೆ ಓಡಿ ಹೋಗುತ್ತಾ ನದಿಯತ್ತ ತೆರಳಿದ್ದಾರೆ. ಈ ವೇಳೆ ಯೋಧರು ಬಾಲಕಿ ನದಿಯಲ್ಲಿ ಕೊಚ್ಚಿ ಹೋಗುತ್ತಿರುವುದನ್ನು ಗಮನಿಸಿದ್ದಾರೆ.

    ಬಾಲಕಿ ನದಿಯಲ್ಲಿ ಕೊಚ್ಚಿ ಹೋಗುತ್ತಿರುವುದನ್ನು ನೋಡಿದ ಸಿಆರ್‌ಪಿಎಫ್ ಯೋಧರಲ್ಲಿ ಇಬ್ಬರು ನದಿಗೆ ಹಾರಿ ಆಕೆಯನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಬಳಿಕ ಉಳಿದ ಯೋಧರು ಕೂಡ ನದಿಗೆ ಹಾರಿ ಮಾನವ ಸರಪಳಿಯನ್ನು ನಿರ್ಮಿಸಿದರು.

    ಯೋಧರು ಸಿಆರ್‌ಪಿಎಫ್ ನ 176ನೇ ಬೆಟಾಲಿಯನ್‍ಗೆ ಸೇರಿದ್ದು, ಕೊನೆಗೆ ಬಾಲಕಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದ್ದು, ಯೋಧರ ಸಾಹಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

  • ಬ್ಯಾಟಿಂಗ್ ಮಾಡುವಾಗ ಚೆಂಡು ಬಡಿದು ಯುವ ಆಟಗಾರ ಸಾವು

    ಬ್ಯಾಟಿಂಗ್ ಮಾಡುವಾಗ ಚೆಂಡು ಬಡಿದು ಯುವ ಆಟಗಾರ ಸಾವು

    ಶ್ರೀನಗರ: ಬ್ಯಾಟಿಂಗ್ ಮಾಡುವಾಗ ಕುತ್ತಿಗೆಗೆ ಚೆಂಡು ಬಡಿದು ಯುವ ಕ್ರಿಕೆಟ್ ಆಟಗಾರ ಮೃತಪಟ್ಟ ಘಟನೆ ಗುರುವಾರ ದಕ್ಷಿಣ ಕಾಶ್ಮೀರದ ಅನಂತ್ ನಾಗ್‍ನಲ್ಲಿ ನಡೆದಿದೆ.

    ಜಹಂಗೀರ್ ಅಹ್ಮದ್ ವಾರ್ (18) ಮೃತಪಟ್ಟ ಆಟಗಾರ. ಜಹಂಗೀರ್ ಅಹ್ಮದ್ ಉತ್ತರ ಕಾಶ್ಮೀರದ ಬರಮುಲ್ಲಾ ಜಿಲ್ಲೆಯ ನಿವಾಸಿಯಾಗಿದ್ದು, ಅನಂತ್‍ನಾಗ್‍ನಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಟೂರ್ನಮೆಂಟ್‍ನಲ್ಲಿ ಆಟವಾಡುತ್ತಿದ್ದರು.

    ಹೆಲ್ಮೆಟ್ ಧರಿಸಿ ಆಟವಾಡುತ್ತಿದ್ದರೂ ಚೆಂಡು ಅಹ್ಮದ್ ಕುತ್ತಿಗೆಗೆ ಬಡಿದಿದೆ. ಇದರಿಂದ ಅವರು ಸ್ಥಳದಲ್ಲೇ ಪ್ರಜ್ಞೆ ತಪ್ಪಿದ್ದಾರೆ. ಬಳಿಕ ಅಹ್ಮದ್‍ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅಷ್ಟರಲ್ಲಿ ಅಹ್ಮದ್ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದರು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

    ಜಮ್ಮು- ಕಾಶ್ಮೀರ ರಾಜ್ಯಪಾಲ ಎಸ್.ಪಿ ಮಲ್ಲಿಕ್ ಅವರು ಜಹಂಗೀರ್ ಅಹ್ಮದ್ ಸಾವಿಗೆ ದುಃಖ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಜಹಂಗೀರ್ ಅಹ್ಮದ್ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರವನ್ನು ನೀಡಿದ್ದರು. ಎಸ್.ಪಿ ಮಲ್ಲಿಕ್ ಮೃತ ಆಟಗಾರ ಅಹ್ಮದ್ ಮಲ್ಲಿಕ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.

  • ಬಸ್ ಕಂದಕಕ್ಕೆ ಉರುಳಿ 33 ಮಂದಿ ಸಾವು, 13 ಜನರಿಗೆ ಗಾಯ

    ಬಸ್ ಕಂದಕಕ್ಕೆ ಉರುಳಿ 33 ಮಂದಿ ಸಾವು, 13 ಜನರಿಗೆ ಗಾಯ

    ಶ್ರೀನಗರ್: ಬಸ್ ಕಂದಕಕ್ಕೆ ಉರುಳಿ 33ಕ್ಕೂ ಹೆಚ್ಚು ಮಂದಿ ಮೃತಪಟ್ಟು, 13 ಮಂದಿ ಗಾಯಗೊಂಡಿರುವ ಘಟನೆ ಜಮ್ಮು- ಕಾಶ್ಮೀರದ ಕಿಶ್ತಾವರ್ ಜಿಲ್ಲೆಯಲ್ಲಿ ನಡೆದಿದೆ.

    ಇಂದು ಬೆಳಗ್ಗೆ ಸುಮಾರು 7.30ಕ್ಕೆ ಈ ಘಟನೆ ನಡೆದಿದೆ. 45 ಮಂದಿ ಪ್ರಯಾಣಿಕರಿದ್ದ ಬಸ್ ಕಿಶ್ತಾವರ್ ನಿಂದ ಕೇಶವನ್ ಕಡೆಗೆ ಸಂಚರಿಸುತಿತ್ತು. ಈ ವೇಳೆ ಶ್ರೀಗ್ವಾರಿ ಬಳಿ ಬಸ್ ಜಾರಿ ಆಳವಾದ ಕಂದಕಕ್ಕೆ ಉರುಳಿದೆ. ಪರಿಣಾಮ 33 ಮಂದಿ ಮೃತಪಟ್ಟು, 13 ಮಂದಿ ಗಾಯಗೊಂಡಿದ್ದಾರೆ.

    ಬಸ್‍ನಲ್ಲಿ ಓವರ್ ಲೋಡ್ ಮಾಡಲಾಗಿತ್ತು. ಅಲ್ಲದೆ ಓವರ್ ಸ್ಪೀಡ್ ಹಾಗೂ ಸರಿಯಾದ ರಸ್ತೆ ಇಲ್ಲದ ಕಾರಣ ಈ ಅಪಘಾತವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಅಲ್ಲದೆ ಈ ಅಪಘಾತದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳುತ್ತಿದ್ದಾರೆ.

    ಪೊಲೀಸರು ಪರಿಹಾರ ಹಾಗೂ ರಕ್ಷಣಾ ಕಾರ್ಯಚರಣೆಯನ್ನು ನಡೆಸುತ್ತಿದ್ದಾರೆ. ಅಲ್ಲದೆ ಈ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಬಗ್ಗೆ ಗೃಹ ಸಚಿವ ಅಮಿತ್ ಶಾ, ಜಮ್ಮು- ಕಾಶ್ಮೀರದ ಹಿರಿಯ ರಾಜಕಾರಣಿಗಳಾದ ಮೆಹಬೂಬ ಮುಫ್ತಿ ಹಾಗೂ ಒಮರ್ ಅಬ್ದುಲ್ಲಾ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

  • ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರು ಹತ

    ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರು ಹತ

    ಶ್ರೀನಗರ: ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ದರಂದೋರಾ ಕೀಗಮ್‍ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ.

    ಭಯೋತ್ಪಾದಕರು ತಂಗಿರುವ ಕುರಿತ ಖಚಿತ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿಯು ಶೋಪಿಯನ್ ಜಿಲ್ಲೆಯಲ್ಲಿ ಶೋಧ ಕಾರ್ಯ ಪ್ರಾರಂಭಿಸಿದ್ದಾರೆ. ಭಯೋತ್ಪಾದಕರು ಭದ್ರತಾ ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಎನ್‍ಕೌಂಟರ್ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಉಗ್ರರ ಅಡಗುತಾಣಗಳ ಮೇಲೆ ಕಾರ್ಯಾಚರಣೆ ಕೇಂದ್ರೀಕರಿಸಲಾಗಿತ್ತು. ಭದ್ರತಾ ಪಡೆ ಅಡಗುತಾಣವನ್ನು ಸುತ್ತುವರಿಯುತ್ತಿದ್ದಂತೆ ಭಯೋತ್ಪಾದಕರು ಗುಂಡು ಹಾರಿಸಿದರು. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆ ಗುಂಡಿನ ದಾಳಿ ನಡೆಸಿತು. ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ ಎಂದು ಪೊಲೀಸ್ ಅಧಿಕಾರಿಗಳು ವಿವರಿಸಿದ್ದಾರೆ.

    ಹತರಾದ ಭಯೋತ್ಪಾದಕರು ಯಾವ ಸಂಘಟನೆಯ ಸದಸ್ಯರು ಎನ್ನುವ ಬಗ್ಗೆ ಪತ್ತೆ ಹಚ್ಚಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಹುತಾತ್ಮನ ಮಗನನ್ನು ಎತ್ತಿಕೊಂಡು ಕಣ್ಣೀರು ಹಾಕಿದ ಹಿರಿಯ ಅಧಿಕಾರಿ

    ಹುತಾತ್ಮನ ಮಗನನ್ನು ಎತ್ತಿಕೊಂಡು ಕಣ್ಣೀರು ಹಾಕಿದ ಹಿರಿಯ ಅಧಿಕಾರಿ

    ಶ್ರೀನಗರ: ಜಮ್ಮು-ಕಾಶ್ಮೀರದ ಅನಂತ್‍ನಾಗ್‍ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಇನ್ಸ್ ಪೆಕ್ಟರ್ ಅರ್ಷದ್ ಖಾನ್ ಅವರ ಮಗನನ್ನು ಎತ್ತಿಕೊಂಡು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಕಣ್ಣೀರು ಹಾಕಿದ ಫೋಟೋವೊಂದು ವೈರಲ್ ಆಗುತ್ತಿದೆ.

    ಸೋಮವಾರ ಶ್ರೀನಗರದ ಜಿಲ್ಲಾ ಪೊಲೀಸ್ ಮಾರ್ಗದಲ್ಲಿ ನಡೆದ ಮಾರ್ಲಪಾಣಾ ಕಾರ್ಯಕ್ರಮದಲ್ಲಿ ಈ ಫೋಟೋವನ್ನು ಕ್ಲಿಕ್ಕಿಸಲಾಗಿದೆ. ಹಿರಿಯ ಅಧಿಕಾರಿ ಹಾಸೀಬ್ ಮುಗಲ್ ಹುತಾತ್ಮರಾದ ಅರ್ಷದ್ ಖಾನ್ ಅವರ 4 ವರ್ಷದ ಮಗ ಉಹ್ಬಾನ್‍ನನ್ನು ಎತ್ತಿಕೊಂಡು ಕಣ್ಣೀರು ಹಾಕಿದ್ದಾರೆ.

    ಅರ್ಷದ್ ಖಾನ್ ಅನಂತ್‍ನಾಗ್‍ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಗೊಂಡ ಅವರನ್ನು ದೆಹಲಿಯ ಎಐಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅರ್ಷದ್ ಭಾನುವಾರ ಹುತಾತ್ಮರಾಗಿದ್ದಾರೆ.

    ಅರ್ಷದ್ ಖಾನ್ ಅನಂತ್‍ನಾಗ್ ನಗರದ ಸರ್ದಾರ್ ಪೊಲೀಸ್ ಠಾಣೆಯಲ್ಲಿ ಎಸ್‍ಎಚ್‍ಒ ಆಗಿ ನೇಮಕರಾಗಿದ್ದರು. ಅರ್ಷದ್ ಅವರು ತಮ್ಮ ಪತ್ನಿ, ಇಬ್ಬರು ಗಂಡು ಮಕ್ಕಳು, ಪೋಷಕರು ಹಾಗೂ ಕಿರಿಯ ಸಹೋದರನನ್ನು ಅಗಲಿದ್ದಾರೆ.

    ಜಮ್ಮು-ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯಲ್ಲಿ ಸೈನಿಕರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಐವರು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದರು. ಅಲ್ಲದೆ ಪ್ರತಿ ದಾಳಿಯಲ್ಲಿ ಒಬ್ಬ ಉಗ್ರನನ್ನು ಸೈನಿಕರು ಹತ್ಯೆ ಮಾಡಿದ್ದರು.