Tag: Srinagar

  • ಜಮ್ಮು & ಕಾಶ್ಮೀರ | ಸೇನೆಯ ಗುಂಡಿಗೆ ಉಗ್ರ ಬಲಿ – ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

    ಜಮ್ಮು & ಕಾಶ್ಮೀರ | ಸೇನೆಯ ಗುಂಡಿಗೆ ಉಗ್ರ ಬಲಿ – ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕುಪ್ವಾರ (Kupwara) ಜಿಲ್ಲೆಯಲ್ಲಿ ಭದ್ರತಾ ಪಡೆಗಳು (Indian Army) ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತ್ಯೆಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕಾರ್ಯಾಚರಣೆ ನಡೆದ ಸ್ಥಳದಿಂದ ಎಕೆ 47 ರೈಫಲ್‌, ಎರಡು ಹ್ಯಾಂಡ್ ಗ್ರೆನೇಡ್‌, ನಾಲ್ಕು ಮ್ಯಾಗಜೀನ್‌ಗಳು, ಮದ್ದುಗುಂಡುಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಲೋಲಾಬ್ ಪ್ರದೇಶದಲ್ಲಿ ಮಂಗಳವಾರ ಕಾರ್ಯಾಚರಣೆ ಆರಂಭವಾಗಿತ್ತು. ಬುಧವಾರ ಸಹ ಈ ಕಾರ್ಯಾಚರಣೆ ಮುಂದುವರೆದಿತ್ತು. ಓರ್ವ ಉಗ್ರನ ಹತ್ಯೆಯ ನಂತರ ಈ ಕಾರ್ಯಾಚರಣೆ ನಿಲ್ಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಮಂಗಳವಾರ ಬಂಡಿಪೋರಾ ಜಿಲ್ಲೆಯ ಕೆತ್ಸುನ್ ಅರಣ್ಯದಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆಗೈಯ್ಯಲಾಗಿತ್ತು. ಆ ಪ್ರದೇಶದಲ್ಲಿ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ.

    ಕಾಶ್ಮೀರದಲ್ಲಿ ನೂತನ ಸರ್ಕಾರ ರಚನೆಯಾದಗಿನಿಂದ ಭಯೋತ್ಪಾದಕರು ತಮ್ಮ ಚಟುವಟಿಕೆಗಳನ್ನು ಹೆಚ್ಚಿಸಿದ್ದಾರೆ. ನವೆಂಬರ್ 2 ರಂದು, ಹಳೆಯ ಶ್ರೀನಗರ ನಗರದ ಖನ್ಯಾರ್ ಪ್ರದೇಶದಲ್ಲಿ ನಡದ ಕಾರ್ಯಾಚರಣೆಯಲ್ಲಿ ಎಲ್ಇಟಿಯ ಕಮಾಂಡರ್‌ನನ್ನು ಹತ್ಯೆಗೈಯ್ಯಲಾಗಿತ್ತು. ಈ ಕಾರ್ಯಾಚರಣೆ ವೇಳೆ ಇಬ್ಬರು ಸ್ಥಳೀಯ ಪೊಲೀಸರು ಮತ್ತು ಇಬ್ಬರು ಸಿಆರ್‌ಪಿಎಫ್ ಯೋಧರು ಗಾಯಗೊಂಡಿದ್ದರು.

    ಕಳೆದ ತಿಂಗಳು ಗಂದರ್‌ಬಾಲ್ ಜಿಲ್ಲೆಯ ಗಗಂಗೀರ್ ಪ್ರದೇಶದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಆರು ಕಾರ್ಮಿಕರು ಮತ್ತು ಸ್ಥಳೀಯ ವೈದ್ಯರನ್ನು ಸಾವನ್ನಪ್ಪಿದ್ದರು.

  • ‌ಬಿಸ್ಕೆಟ್‌ ಬಳಸಿ ಉಗ್ರನ ಬೇಟೆ – ಏನಿದು ಯೋಧರ ಹೊಸ ತಂತ್ರ?

    ‌ಬಿಸ್ಕೆಟ್‌ ಬಳಸಿ ಉಗ್ರನ ಬೇಟೆ – ಏನಿದು ಯೋಧರ ಹೊಸ ತಂತ್ರ?

    – ಉಗ್ರನ ಬೇಟೆಯಾಡುವ ಮುನ್ನ ಬೀದಿ ನಾಯಿಗಳ ಬಾಯಿಮುಚ್ಚಿಸಿದ್ದು ಏಕೆ?

    ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ (Jammu-Kashmir) ಶ್ರೀನಗರದಲ್ಲಿ  ಶನಿವಾರ ಪಾಕ್ ಮೂಲದ ಲಷ್ಕರ್ ಉಗ್ರ ಸಂಘಟನೆಯ ಕಮಾಂಡರ್ ಉಸ್ಮಾನ್ ಭಾಯಿಯನ್ನು (Usman Bhai) ಯೋಧರು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಶ್ರೀನಗರ ಸಿಟಿಯಲ್ಲಿ 2 ವರ್ಷದಲ್ಲಿ ನಡೆದ ಮೊದಲ ಉಗ್ರ ನಿಗ್ರಹ ಕಾರ್ಯಾಚರಣೆ ಆಗಿದೆ.

    ಉಸ್ಮಾನ್ ಹತ್ಯೆಯಲ್ಲಿ ಕುರುಕುಲು ತಿಂಡಿಯಾದ ‘ಬಿಸ್ಕೆಟ್’ ಮಹತ್ವದ ಪಾತ್ರ ವಹಿಸಿದೆ. ಆತ ವಾಸವಿದ್ದ ಸ್ಥಳದಲ್ಲಿ ಅಪಾರ ಸಂಖ್ಯೆಯಲ್ಲಿ ಬೀದಿ ನಾಯಿಗಳು ಇದ್ದು, ಅವುಗಳ ಬೊಗಳುವಿಕೆಯಿಂದ ಉಗ್ರ ಎಚ್ಚೆತ್ತುಕೊಂಡು ಪರಾರಿಯಾಗುವ ಸಾಧ್ಯತೆಯಿತ್ತು. ಹೀಗಾಗಿ ಯೋಧರು ʼಬಿಸ್ಕೆಟ್‌ʼ ನೀಡಿ ಬೊಗಳುವ ನಾಯಿಗಳ ಬಾಯಿ ಮುಚ್ಚಿಸಿ ತಮ್ಮ ಗುರಿ ತಲುಪುವಲ್ಲಿ ಯಶಸ್ವಿ ಆಗಿದ್ದಾರೆ. ಇದನ್ನೂ ಓದಿ: ಆನೇಕಲ್‌ನಲ್ಲಿ ಡಬಲ್ ಬ್ಯಾರಲ್ ಗನ್ ಸದ್ದು – ಜಗಳ ಬಿಡಿಸಲು ಹೋದವನಿಗೆ ಗುಂಡೇಟು!

    ಹತ್ಯೆ ಹೇಗೆ?:
    ಇನ್ಸ್ಪೆಕ್ಟರ್ ಮನ್ಸೂರ್ ವಾನಿ ಹತ್ಯೆ ಸೇರಿ ಹಲವು ಪ್ರಕರಣಗಳಲ್ಲಿ ಉಸ್ಮಾನ್ ಭಾಗಿಯಾಗಿದ್ದ, ಹಲವು ವರ್ಷಗಳಿಂದ ರಾಜ್ಯದಲ್ಲಿ ಸಕ್ರಿಯನಾಗಿದ್ದ ಉಸ್ಮಾನ್, ಶ್ರೀನಗರದ ಜನನಿಬಿಡ ಖಾನ್ಯಾರ್ ಎಂಬಲ್ಲಿ ಅವಿತುಕೊಂಡಿದ್ದಾನೆ ಎಂಬ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಶನಿವಾರ ಕಾರ್ಯಾಚರಣೆ ನಡೆಸಿವೆ. ಈ ವೇಳೆ ನಡೆದ ಕಾರ್ಯಾಚರಣೆಯಲ್ಲಿ ಆತನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ. ನಾಯಿಗಳು ಬೊಗಳುವುದನ್ನು ತಪ್ಪಿಸಲು ಬಿಸ್ಕೆಟ್ ಬಳಸಿವೆ. ಇದನ್ನೂ ಓದಿ: ಕೇರಳದಲ್ಲೂ ವಕ್ಫ್ ವಿವಾದ – ಒಂದೇ ಗ್ರಾಮದ 610 ಕುಟುಂಬಗಳಿಗೆ ಆಸ್ತಿ ಕಳೆದುಕೊಳ್ಳುವ ಭೀತಿ

    ಇದು ಶ್ರೀನಗರ (Srinagar) ಸಿಟಿಯಲ್ಲಿ 2 ವರ್ಷದಲ್ಲಿ ನಡೆದ ಮೊದಲ ಕಾರ್ಯಾಚರಣೆ ಆಗಿದ್ದು, ಈತನ ಹತ್ಯೆ ನಮಗೆ ಒಂದು ದೊಡ್ಡ ಯಶಸ್ಸು. ಲಷ್ಕರ್‌ನ ಅತಿ ಹಿರಿಯ ಕಮಾಂಡರ್ ಆಗಿದ್ದ ಆತನ ಹತ್ಯೆ ಲಷ್ಕರ್‌ಗೆ ದೊಡ್ಡ ಹೊಡೆತ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಇದೇ ವೇಳೆ, ಅನಂತ್‌ನಾಗ್ ಜಿಲ್ಲೆಯಲ್ಲಿ ನಡೆದ ಮತ್ತೊಂದು ದಾಳಿಯಲ್ಲಿ ಜೈಷ್ ಎ ಮೊಹಮ್ಮದ್ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ. ಇದನ್ನೂ ಓದಿ: ವಕ್ಫ್‌ ಆಸ್ತಿ ವಿವಾದದ ಕಿಚ್ಚು – ರಾಜ್ಯಾದ್ಯಂತ ಇಂದು ಬಿಜೆಪಿ ಪ್ರತಿಭಟನೆ

  • ಜಮ್ಮು & ಕಾಶ್ಮೀರದ ಪ್ರವಾಸೋದ್ಯಮ ಕಚೇರಿ ಬಳಿ ಗ್ರೆನೇಡ್ ದಾಳಿ – 10 ಮಂದಿಗೆ ಗಾಯ

    ಜಮ್ಮು & ಕಾಶ್ಮೀರದ ಪ್ರವಾಸೋದ್ಯಮ ಕಚೇರಿ ಬಳಿ ಗ್ರೆನೇಡ್ ದಾಳಿ – 10 ಮಂದಿಗೆ ಗಾಯ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪ್ರವಾಸೋದ್ಯಮ ಕಚೇರಿ (Tourism office) ಬಳಿ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಕನಿಷ್ಠ 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಶ್ರೀನಗರದ (Srinagar) ಪ್ರವಾಸಿ ಸ್ವಾಗತ ಕೇಂದ್ರದ ಸಮೀಪ ಇರುವ ಚಿಗಟ ಮಾರುಕಟ್ಟೆಯಲ್ಲಿ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆದಿದೆ. ಸ್ಫೋಟದ ನಂತರ ವೈದ್ಯಕೀಯ ತಂಡಗಳೊಂದಿಗೆ ಭದ್ರತಾ ಪಡೆಗಳು (Indian Army) ತಕ್ಷಣವೇ ಸ್ಥಳಕ್ಕೆ ತೆರಳಿವೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಶ್ರೀನಗರದ ಖನ್ಯಾರ್ ಪ್ರದೇಶದಲ್ಲಿ ಇತ್ತೀಚೆಗೆ ಭದ್ರತಾ ಪಡೆಗಳು ಉಗ್ರ ಸಂಘಟನೆ ಎಲ್‌ಇಟಿಯ ಪಾಕಿಸ್ತಾನಿ ಕಮಾಂಡರ್‌ನ್ನು ಹೊಡೆದುರುಳಿಸಿದ್ದರು. ಇದಾದ ಒಂದು ದಿನದ ನಂತರ ಭಾರೀ ಭದ್ರತೆಯ ಪ್ರವಾಸಿ ಸ್ವಾಗತ ಕೇಂದ್ರದ (ಟಿಆರ್‌ಸಿ) ಬಳಿ ಈ ದಾಳಿ ನಡೆದಿದೆ. ಸ್ಫೋಟದಿಂದಾಗಿ ವ್ಯಾಪಾರಸ್ಥರು ಹಾಗೂ ಜನರು ಭಯಭೀತರಾಗಿದ್ದಾರೆ.

    ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ, ಉಗ್ರರ ನಡುವೆ ಗುಂಡಿನ ಚಕಮಕಿ

    ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ, ಉಗ್ರರ ನಡುವೆ ಗುಂಡಿನ ಚಕಮಕಿ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಖನ್ಯಾರ್ (Khanyar) ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ವೇಳೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.

    ಅಧಿಕಾರಿಗಳ ಮಾಹಿತಿ ಪ್ರಕಾರ, ಶನಿವಾರ (ನ.02) ಬೆಳಗ್ಗೆ ಕಾಶ್ಮೀರದ ಖನ್ಯಾರ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯ ವೇಳೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: US Election 2024 | ಮತ ಎಣಿಕೆ ಯಾವಾಗ? ಸಂಖ್ಯೆ 270ಕ್ಕೆ ಯಾಕೆ ಮಹತ್ವ?

    ಒಂದು ದಿನದ ಹಿಂದೆಯಷ್ಟೇ ವಲಸೆ ಕಾರ್ಮಿಕರ ಮೇಲೆ ನಡೆದ ಗುಂಡಿನ ದಾಳಿಯ ಬಳಿಕ ಉಗ್ರರು ಖನ್ಯಾರ್ ಪ್ರದೇಶದಲ್ಲಿ ಇರುವುದಾಗಿ ಭದ್ರತಾ ಪಡೆಗಳಿಗೆ ಖಚಿತ ಮಾಹಿತಿ ಲಭಿಸಿತ್ತು. ಇದರಿಂದ ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದರು. ಈ ವೇಳೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ದಾಳಿ ನಡೆದಿದೆ.

    ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಮಗಮ್ ಪ್ರದೇಶದಲ್ಲಿ ಇಬ್ಬರು ವಲಸೆ ಕಾರ್ಮಿಕರ ಮೇಲೆ ಭಯೋತ್ಪಾದಕರು ಶುಕ್ರವಾರ ಗುಂಡಿನ ದಾಳಿ ನಡೆಸಿದ್ದರು. ಈ ಘಟನೆಯಲ್ಲಿ ಉತ್ತರ ಪ್ರದೇಶ ಮೂಲದ ಇಬ್ಬರು ವಲಸೆ ಕಾರ್ಮಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.

    ಇದಕ್ಕೂ ಮುನ್ನ ಗಂದರ್‌ಬಾಲ್ ಜಿಲ್ಲೆಯ ಸೋನಾಮಾರ್ಗ್ ಪ್ರದೇಶದಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಒಬ್ಬ ವೈದ್ಯ ಮತ್ತು ಆರು ವಲಸೆ ಕಾರ್ಮಿಕರು ಸಾವನ್ನಪ್ಪಿದ್ದರು. ಇದಾದ 12 ದಿನಗಳ ನಂತರ ದಾಳಿ ಸಂಭವಿಸಿತ್ತು. ದಾಳಿಗೊಳಗಾದ ವೈದ್ಯ ಮತ್ತು ಕಾರ್ಮಿಕರು ಸೆಂಟ್ರಲ್ ಕಾಶ್ಮೀರದ ಗಂದರ್‌ಬಾಲ್‌ನಲ್ಲಿರುವ ಗಗನೀರ್‌ನಿಂದ ಸೋನಾಮಾರ್ಗ್ಗೆ ಸಂಪರ್ಕ ಕಲ್ಪಿಸುವ Z-ಮೋರ್ಹ್ ಸುರಂಗದಲ್ಲಿ ಕೆಲಸ ಮಾಡುವ ತಂಡದಲ್ಲಿದ್ದವರಾಗಿದ್ದರು.ಇದನ್ನೂ ಓದಿ: ಹೆಚ್‌ಡಿಕೆ ಒಂದು ದಿನವೂ ರಾಷ್ಟ್ರಧ್ವಜ, ಕನ್ನಡ ಧ್ವಜಕ್ಕೆ ಗೌರವ ಕೊಟ್ಟಿಲ್ಲ: ಕುಮಾರಸ್ವಾಮಿ ವಿರುದ್ಧ ಡಿಕೆಶಿ ಕೆಂಡ

  • ಕಾಶ್ಮೀರದ ಬಾರಾಮುಲ್ಲಾ ಕೋರ್ಟ್‌ನಲ್ಲಿ ಗ್ರೆನೇಡ್ ಸ್ಫೋಟ – ಪೊಲೀಸ್‌ ಸಿಬ್ಬಂದಿಗೆ ಗಾಯ

    ಕಾಶ್ಮೀರದ ಬಾರಾಮುಲ್ಲಾ ಕೋರ್ಟ್‌ನಲ್ಲಿ ಗ್ರೆನೇಡ್ ಸ್ಫೋಟ – ಪೊಲೀಸ್‌ ಸಿಬ್ಬಂದಿಗೆ ಗಾಯ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಬಾರಾಮುಲ್ಲಾ (Baramulla) ಜಿಲ್ಲಾ ನ್ಯಾಯಾಲಯದಲ್ಲಿ (Court) ಸಾಕ್ಷಿಗಾಗಿ ತಂದಿದ್ದ ಗ್ರೆನೇಡ್ ಸ್ಫೋಟಗೊಂಡು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದುಅಧಿಕಾರಿಗಳು ತಿಳಿಸಿದ್ದಾರೆ.

    ಬಾರಾಮುಲ್ಲಾ ಪಟ್ಟಣದ ನ್ಯಾಯಾಲಯದ ಸಾಕ್ಷ್ಯ ಕೊಠಡಿ ಒಳಗೆ ಪ್ರಕರಣ ಒಂದರ ಸಾಕ್ಷ್ಯವಾಗಿ ಗ್ರೆನೇಡ್ ಸಂಗ್ರಹಿಸಿಲಾಗಿತ್ತು. ಅದು ಆಕಸ್ಮಿಕವಾಗಿ ಸ್ಫೋಟಗೊಂಡ ಪರಿಣಾಮ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಮಧ್ಯಾಹ್ನ 1:5ರ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯಲ್ಲಿ ಗಾಯಗೊಂಡಿರುವ ಪೋಲೀಸ್‌ ಸಿಬ್ಬಂದಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಕೋರ್ಟ್‌ ಬಳಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಯಾವುದೇ ವದಂತಿಗಳಿಗೂ ಕಿವಿಗೊಡದಂತೆ ನಾಗರಿಕರಿಗೆ ಪೊಲೀಸರು ಮನವಿ ಮಾಡಿದ್ದಾರೆ.

  • ಜಮ್ಮು-ಕಾಶ್ಮೀರ| ಕಾರ್ಮಿಕನ ಮೇಲೆ ಭಯೋತ್ಪಾದಕರ ಗುಂಡಿನ ದಾಳಿ

    ಜಮ್ಮು-ಕಾಶ್ಮೀರ| ಕಾರ್ಮಿಕನ ಮೇಲೆ ಭಯೋತ್ಪಾದಕರ ಗುಂಡಿನ ದಾಳಿ

    – ಒಂದೇ ವಾರದಲ್ಲಿ ಮೂರನೇ ದಾಳಿ

    ಶ್ರೀನಗರ: ಜಮ್ಮು (Jammu) ಮತ್ತು ಕಾಶ್ಮೀರದ (Kashmir) ತ್ರಾಲ್‌ನಲ್ಲಿ ವಲಸೆ ಕಾರ್ಮಿಕನ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಒಂದೇ ವಾರದಲ್ಲಿ ಕಾಶ್ಮೀರದಲ್ಲಿ ವಲಸೆ ಕಾರ್ಮಿಕರ ಮೇಲೆ ನಡೆಯುತ್ತಿರುವ ಮೂರನೇ ದಾಳಿ ಇದಾಗಿದ್ದು, ಕಾರ್ಮಿಕರು ಆತಂಕದಲ್ಲಿದ್ದಾರೆ.

    ಭಯೋತ್ಪಾದಕರು ಉತ್ತರ ಪ್ರದೇಶದ (Uttar Pradesh) ಬಿಜ್ನೋರ್ ಮೂಲದ ಶುಭಂ ಕುಮಾರ್ ಮೇಲೆ ದಾಳಿ ನಡೆಸಿದ್ದಾರೆ. ತ್ರಾಲ್‌ನ ಬಟಗುಂಡ್ ಗ್ರಾಮದಲ್ಲಿ ಭಯೋತ್ಪಾದಕರು ಗುಂಡು ಹಾರಿಸಿದ ಬಳಿಕ ಶುಭಂ ಕುಮಾರ್ ಕೈಗೆ ಗಾಯಗಳಾಗಿವೆ. ಗಾಯಾಳು ಕಾರ್ಮಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಇದನ್ನೂ ಓದಿ: ಸಿಜೆಐ ಸೋಗಿನಲ್ಲಿ ವೃದ್ಧನಿಗೆ 1.26 ಕೋಟಿ ವಂಚನೆ – ನಾಲ್ವರು ಆರೋಪಿಗಳ ಬಂಧನ

    ಅ.20ರಂದು ಗಂಡರ್ಬಾಲ್ ಜಿಲ್ಲೆಯ ಸೋನಾಮಾರ್ಗ್ ಪ್ರದೇಶದ ನಿರ್ಮಾಣ ಸ್ಥಳದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ನಂತರ ಒಬ್ಬ ವೈದ್ಯ ಮತ್ತು ಆರು ವಲಸೆ ಕಾರ್ಮಿಕರು ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದರು. ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾದ ಅಂಗಸಂಸ್ಥೆ ದಿ ರೆಸಿಸ್ಟೆನ್ಸ್ ಫ್ರಂಟ್ ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು. ಇದನ್ನೂ ಓದಿ: ಪರಿಷತ್‌ ಉಪ ಚುನಾವಣೆ| ಬಿಜೆಪಿಯ ಕಿಶೋರ್ ಕುಮಾರ್‌ಗೆ ಭರ್ಜರಿ ಜಯ

    ಅ.18 ರಂದು ಶೋಪಿಯಾನ್ ಜಿಲ್ಲೆಯಲ್ಲಿ ಭಯೋತ್ಪಾದಕರು ಬಿಹಾರದ ವಲಸೆ ಕಾರ್ಮಿಕನ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಇದನ್ನೂ ಓದಿ: ಪೂಜಾ ಕೈಂಕರ್ಯದೊಂದಿಗೆ ಹಾಸನಾಂಬೆ ಗರ್ಭಗುಡಿ ಓಪನ್ – ನ.3ಕ್ಕೆ ಜಾತ್ರಾ ಮಹೋತ್ಸವ

  • ಜಮ್ಮು-ಕಾಶ್ಮೀರದ ಉಗ್ರದಾಳಿಯ ಹೊಣೆ ಹೊತ್ತ ಪಾಕ್ ಟಿಆರ್‌ಎಫ್ ಸಂಘಟನೆ

    ಜಮ್ಮು-ಕಾಶ್ಮೀರದ ಉಗ್ರದಾಳಿಯ ಹೊಣೆ ಹೊತ್ತ ಪಾಕ್ ಟಿಆರ್‌ಎಫ್ ಸಂಘಟನೆ

    ಶ್ರೀನಗರ: 6 ಮಂದಿ ಕಾರ್ಮಿಕರು ಸೇರಿದಂತೆ ಓರ್ವ ವೈದ್ಯನ ಮೇಲೆ ಭಾನುವಾರ ನಡೆದ ಭಯೋತ್ಪಾದಕ ದಾಳಿಯ ಜವಾಬ್ದಾರಿಯನ್ನು ಪಾಕಿಸ್ತಾನ (Pakistan) ಮೂಲದ ಭಯೋತ್ಪಾದಕ ಸಂಘಟನೆ ರೆಸಿಸ್ಟೆನ್ಸ್ ಫ್ರಂಟ್ (TRF) ವಹಿಸಿಕೊಂಡಿದೆ ಎಂದು ಸೇನಾ ಅಧಿಕೃತ ಮೂಲಗಳು ದೃಢಪಡಿಸಿವೆ.

    ಟಿಆರ್‌ಎಫ್ ಮುಖ್ಯಸ್ಥ ಶೇಖ್ ಸಜ್ಜದ್ ಗುಲ್ ಈ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದು, ಗುಂಪಿನ ಸ್ಥಳೀಯ ಘಟಕವು ಆತನ ಆದೇಶದಂತೆ ಕಾಶ್ಮೀರಿಗಳು ಮತ್ತು ಕಾಶ್ಮೀರೇತರರನ್ನು ಗುರಿಯಾಗಿಸಿ ಮೊದಲ ಬಾರಿಗೆ ದಾಳಿ ನಡೆಸಿದೆ. ಟಿಆರ್‌ಎಫ್ ಕಾಶ್ಮೀರದಲ್ಲಿ ಸಕ್ರಿಯವಾಗಿದೆ ಮತ್ತು ಕಳೆದ ಒಂದೂವರೆ ವರ್ಷಗಳಲ್ಲಿ ಕಾಶ್ಮೀರಿ ಪಂಡಿತರು, ಸಿಖ್ಖರು ಮತ್ತು ಸ್ಥಳೀಯರಲ್ಲದವರನ್ನು ಗುರಿಯಾಗಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಟಿಕೆಟ್ ಸಿಗದಿದ್ದರೆ ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆ: ಸಿಪಿ ಯೋಗೇಶ್ವರ್

    ಕೇಂದ್ರ ಗೃಹ ಸಚಿವಾಲಯದ ಮೂಲಗಳ ಪ್ರಕಾರ, ಭಯೋತ್ಪಾದನಾ ನಿಗ್ರಹ ಘಟಕದ ನಾಲ್ವರು ಸದಸ್ಯರ ತಂಡ, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಇಂದು ಮಧ್ಯಾಹ್ನ ದಾಳಿ ನಡೆದ ಸ್ಥಳಕ್ಕೆ ಭೇಟಿ ನೀಡಲಿದೆ. ಭಾನುವಾರದ ದಾಳಿಯ ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಡಿಕೆಶಿ ವಿರುದ್ಧದ ಅಕ್ರಮ ಆಸ್ತಿಗಳಿಕೆ ಕೇಸ್‌ – ಲೋಕಾ ತನಿಖೆ ಪ್ರಶ್ನಿಸಿ ಸಿಬಿಐನಿಂದ ಸುಪ್ರೀಂಗೆ ಅರ್ಜಿ ಸಲ್ಲಿಕೆ

    ಭಾನುವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ (Jammu-Kashmir) ಗಂದರ್‌ಬಾಲ್ ಜಿಲ್ಲೆಯ ಸೋನಾಮಾರ್ಗ್ ಪ್ರದೇಶದಲ್ಲಿ ಆರು ಮಂದಿ ಕಾರ್ಮಿಕರನ್ನು ಮತ್ತು ವೈದ್ಯರೊಬ್ಬರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ ಮೂಲಗಳ ಪ್ರಕಾರ, ದಾಳಿಗೊಳಗಾದ ಕಾರ್ಮಿಕರು ಝಡ್ ಮೋರ್ಹ್ ಸುರಂಗದಲ್ಲಿ ಕೆಲಸ ಮಾಡುವ ತಂಡದ ಭಾಗವಾಗಿದ್ದರು. ಈ ಸುರಂಗ ಮಾರ್ಗವು ಗಗನೀರ್‌ನಿಂದ ಮಧ್ಯ ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯ ಸೋನಾಮಾರ್ಗ್ಗೆ ಸಂಪರ್ಕಿಸುತ್ತದೆ. ಇದನ್ನೂ ಓದಿ: ದಾಂಪತ್ಯ ವಿರಸ- ಮೂವರು ಮಕ್ಕಳಿಗೆ ವಿಷ ಕುಡಿಸಿ, ಆತ್ಮಹತ್ಯೆಗೆ ಯತ್ನಿಸಿದ ತಾಯಿ

    ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ದಾಳಿಯನ್ನು ಖಂಡಿಸಿದ್ದು, ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ವೈದ್ಯರು ಮತ್ತು ವಲಸೆ ಕಾರ್ಮಿಕರು ಸೇರಿದಂತೆ ಅನೇಕ ಜನರ ಹತ್ಯೆಯು ಅತ್ಯಂತ ಹೇಡಿತನ ಮತ್ತು ಅಕ್ಷಮ್ಯ ಅಪರಾಧವಾಗಿದೆ. ಭಯೋತ್ಪಾದಕರ ಈ ದಿಟ್ಟತನವು ಜಮ್ಮು ಮತ್ತು ಕಾಶ್ಮೀರದ ಜನರ ನಂಬಿಕೆಯನ್ನು ಎಂದಿಗೂ ಮುರಿಯಲು ಸಾಧ್ಯವಿಲ್ಲ. ಭಯೋತ್ಪಾದನೆ ವಿರುದ್ಧದ ಈ ಹೋರಾಟದಲ್ಲಿ ಇಡೀ ದೇಶವು ಒಗ್ಗೂಡಿದೆ ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಲಾರಿ-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

  • ಕಾಶ್ಮೀರದಲ್ಲಿ 2ನೇ ಹಂತದ ಚುನಾವಣೆ- 26 ಕ್ಷೇತ್ರಗಳ 239 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ

    ಕಾಶ್ಮೀರದಲ್ಲಿ 2ನೇ ಹಂತದ ಚುನಾವಣೆ- 26 ಕ್ಷೇತ್ರಗಳ 239 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ

    ಶ್ರೀನಗರ: ದಶಕಗಳ ಬಳಿಕ ಜಮ್ಮು (Jammu) ಮತ್ತು ಕಾಶ್ಮೀರದಲ್ಲಿ (Kashmir) ನಡೆದ ಚುನಾವಣೆಯಲ್ಲಿ (Election) ಇಂದು ಎರಡನೇ ಹಂತದ ಚುನಾವಣೆ ನಡೆಯುತ್ತಿದೆ. 6 ಜಿಲ್ಲೆಗಳ 26 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.

    ಈ ಹಂತದಲ್ಲಿ ಪೀರ್ ಪಂಜಾಲ್ ಪರ್ವತ ಶ್ರೇಣಿಯ ಎರಡೂ ಬದಿಯಲ್ಲಿರುವ ಶ್ರೀನಗರ, ಬುದ್ಗಾಮ್, ರಾಜೌರಿ, ಪೂಂಚ್, ಗಂದರ್ಬಾಲ್ ಮತ್ತು ರಿಯಾಸಿ ಸೇರಿದಂತೆ ಒಟ್ಟು 26 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. 25.78 ಲಕ್ಷ ಮತದಾರರು, 239 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ಇದನ್ನೂ ಓದಿ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪ್ರಚೋದನಕಾರಿ ಹೇಳಿಕೆ – ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್

    ಒಟ್ಟು 3,502 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದ್ದು, ಇವುಗಳಲ್ಲಿ 1,056 ಮತಗಟ್ಟೆಗಳು ನಗರ ಪ್ರದೇಶದಲ್ಲಿ ಮತ್ತು 2,446 ಮತಗಟ್ಟೆಗಳು ಗ್ರಾಮೀಣ ಪ್ರದೇಶದಲ್ಲಿವೆ. ಪಾರದರ್ಶಕ ಚುನಾವಣೆಗಾಗಿ ಎಲ್ಲ ಮತಗಟ್ಟೆ ಕೇಂದ್ರಗಳಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದ್ದು. ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.

    ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಬಿಜೆಪಿ (BJP) ಜಮ್ಮು ಮತ್ತು ಕಾಶ್ಮೀರ ಮುಖ್ಯಸ್ಥ ರವೀಂದರ್ ರೈನಾ, ಪ್ರದೇಶ ಕಾಂಗ್ರೆಸ್ (Congress) ಸಮಿತಿ ಅಧ್ಯಕ್ಷ ತಾರಿಕ್ ಹಮೀದ್ ಕರ್ರಾ, ಸೇರಿದಂತೆ ಪ್ರಮುಖ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಇದನ್ನೂ ಓದಿ: ಪಿಜಿ ಮುಂದೆ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿದ್ದ ಆರೋಪಿ ಅರೆಸ್ಟ್

    ಮೊದಲ ಹಂತ ವಿಧಾನಸಭಾ ಚುನಾವಣೆ ಸೆಪ್ಟೆಂಬರ್ 18ರಂದು ಶಾಂತಿಯುತವಾಗಿ ನಡೆದಿದ್ದು. ಅಕ್ಟೋಬರ್ 01ರಂದು ಮೂರನೇ ಹಾಗೂ ಕೊನೆಯ ಹಂತದ ಮತದಾನ ನಡೆಯಲಿದೆ. ಇದನ್ನೂ ಓದಿ: ವಾರದ ರಜೆ ದಿನ ಮಹಾಲಕ್ಷ್ಮಿ ಕೊಲೆ? – ಸೆಪ್ಟೆಂಬರ್ 1, 2, 3ರ ಮರ್ಡರ್ ಮಿಸ್ಟ್ರಿಯ ಎಕ್ಸ್‌ಕ್ಲೂಸಿವ್‌ ಮಾಹಿತಿ

  • ಜಮ್ಮು-ಕಾಶ್ಮೀರಕ್ಕಿಂದು ಮೋದಿ ಭೇಟಿ – 30,000 ಕಾರ್ಯಕರ್ತರನ್ನುದ್ದೇಶಿಸಿ ಭಾಷಣ

    ಜಮ್ಮು-ಕಾಶ್ಮೀರಕ್ಕಿಂದು ಮೋದಿ ಭೇಟಿ – 30,000 ಕಾರ್ಯಕರ್ತರನ್ನುದ್ದೇಶಿಸಿ ಭಾಷಣ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ (Jammu and Kashmir Assembly Election) ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಇಂದು (ಸೆ.19) ಶ್ರೀನಗರದ ಶೇರ್ ಇ ಪಾರ್ಕ್‌ನಲ್ಲಿ ಆಯೋಜಿಸಲಾಗಿರುವ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

    ಬುಧವಾರ ನಡೆದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನದ ಬಳಿಕ ಬಹುಭದ್ರತೆಯ ನಡುವೆ ಪ್ರಧಾನಿ ಮೋದಿ ಗುರುವಾರ ಶ್ರೀನಗರದ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ.ಇದನ್ನೂ ಓದಿ: ಗಡಿಭಾಗದ ಮಕ್ಕಳನ್ನು ಶಾಲೆಗೆ ಸೆಳೆಯೋಕೆ ಶಿಕ್ಷಕರ ಪ್ಲ್ಯಾನ್‌ – ಸ್ವಂತ ಖರ್ಚಿನಲ್ಲಿ ಎಲ್‌ಕೆಜಿ, ಯುಕೆಜಿ

    ಶ್ರೀನಗರದ ಶೇರ್ ಇ ಕಾಶ್ಮೀರ ಪಾರ್ಕ್‌ನಲ್ಲಿ (Sher-e-Kashmir Park) ರ‍್ಯಾಲಿ ನಡೆಯಲಿದ್ದು, ಪಕ್ಷದ 30 ಸಾವಿರ ಕಾರ್ಯಕರ್ತರು ಹಾಗೂ ಬೆಂಬಲಿಗರು ಭಾಗವಹಿಸುವ ಸಾಧ್ಯತೆಯಿದೆ. ಬಿಜೆಪಿ ಪ್ರಚಾರದ ಭಾಗವಾಗಿ ಈ ರ‍್ಯಾಲಿ ನಡೆಯಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿದೆ.

    ಈ ಸಂಬಂಧ ಬಿಜೆಪಿ ನಾಯಕ ಅಲ್ತಾಫ್ ಠಾಕೂರ್ (Altaf Thakur) ಮಾತನಾಡಿ, ರ‍್ಯಾಲಿಯನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ನರೇಂದ್ರ ಮೋದಿ, 19 ಅಭ್ಯರ್ಥಿಗಳನ್ನು ಭೇಟಿ ಮಾಡಲಿದ್ದಾರೆ. ಜೊತೆಗೆ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ. ಇದು ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಲಿದೆ ಎಂದು ತಿಳಿಸಿದರು.

    ಈ ಬಾರಿಯ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು ಕಾಶ್ಮೀರದ 45 ಸ್ಥಾನಗಳ ಪೈಕಿ 19 ಕ್ಷೇತ್ರಗಳಲ್ಲಿ ಬಿಜೆಪಿ (BJP)ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, 2014ರ ಚುನಾವಣೆಗಿಂತ ಈ ಬಾರಿ ಕಡಿಮೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.ಇದನ್ನೂ ಓದಿ: ವೈಎಸ್‌ಆರ್‌ ಕಾಂಗ್ರೆಸ್‌ ಸರ್ಕಾರದಲ್ಲಿ ತಿರುಪತಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬು ಬಳಕೆ: ಆಂಧ್ರ ಸಿಎಂ ಆರೋಪ

    ಒಟ್ಟು ಮೂರು ಹಂತಗಳಲ್ಲಿ ಮತದಾನ ನಡೆಯಲಿದ್ದು, ಬುಧವಾರ ಮೊದಲ ಹಂತದ ಮತದಾನ ಪೂರ್ಣಗೊಂಡಿದೆ. ಮೊದಲ ಹಂತದ ಮತದಾನದಲ್ಲಿ 24 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಪೂರ್ಣಗೊಂಡಿದೆ. ಇನ್ನೂ ಎರಡು ಹಂತಗಳಲ್ಲಿ ಮತದಾನ ಬಾಕಿಯಿದ್ದು, ಸೆ.25 ಹಾಗೂ ಅ.1 ರಂದು ಮತದಾನ ನಡೆಯಲಿದೆ. ಅ.8 ರಂದು ಮತ ಎಣಿಕೆ ನಡೆಯಲಿದೆ.

  • ಹಿರಿಯ ಅಧಿಕಾರಿ ವಿರುದ್ಧ IAF ಫ್ಲೈಯಿಂಗ್‌ ಸ್ಕ್ವಾಡ್‌ ಮಹಿಳಾಧಿಕಾರಿಯಿಂದ ಅತ್ಯಾಚಾರ ಆರೋಪ – ಕೇಸ್‌ ದಾಖಲು

    ಹಿರಿಯ ಅಧಿಕಾರಿ ವಿರುದ್ಧ IAF ಫ್ಲೈಯಿಂಗ್‌ ಸ್ಕ್ವಾಡ್‌ ಮಹಿಳಾಧಿಕಾರಿಯಿಂದ ಅತ್ಯಾಚಾರ ಆರೋಪ – ಕೇಸ್‌ ದಾಖಲು

    – ಸಂಭೋಗಕ್ಕೆ ಒತ್ತಾಯಿಸುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖ

    ಶ್ರೀನಗರ: ಕೋಲ್ಕತ್ತಾದಲ್ಲಿ (Kolkata) ಆರ್‌.ಜಿ ಕರ್‌ ವೈದ್ಯಕೀಯ ಕಾಲೇಜಿನ ಟ್ರೈನಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ದೇಶಾದ್ಯಂತ ಸದ್ದು ಮಾಡುತ್ತಿದೆ. ಈ ಬೆನ್ನಲ್ಲೇ ಇದೀಗ ಭಾರತೀಯ ವಾಯುಪಡೆಯಲ್ಲೂ ಅಧಿಕಾರಿಯೊಬ್ಬರ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ.

    ಭಾರತೀಯ ವಾಯುಪಡೆಯ ಫ್ಲೈಯಿಂಗ್‌ ಸ್ಕ್ವಾಡ್‌ ಮಹಿಳಾ ಅಧಿಕಾರಿಯೊಬ್ಬರು (IAF Officer) ವಿಂಗ್‌ ಕಮಾಂಡರ್‌ ಮೇಲೆ ಅತ್ಯಾಚಾರ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್‌ ಪೊಲೀಸ್‌ (udgam Police) ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇಬ್ಬರೂ ಅಧಿಕಾರಿಗಳು ಶ್ರೀನಗರದಲ್ಲಿ (Srinagar) ನೆಲೆಸಿದ್ದಾರೆ. ಇದನ್ನೂ ಓದಿ: Haryana Poll | ಬಿಜೆಪಿಯಿಂದ 21 ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್‌ – ವಿನೇಶ್‌ ವಿರುದ್ಧ ಪ್ರಬಲ ಅಭ್ಯರ್ಥಿ ಅಖಾಡಕ್ಕೆ

    ಪ್ರಕರಣ ದಾಖಲಾಗುತ್ತಿದ್ದಂತೆ ಸ್ಥಳೀಯ ಬುಡ್ಗಾಮ್ ಠಾಣೆಯ ಪೊಲೀಸರು ವಾಯುಪಡೆಯ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ. ವಾಯುಪಡೆಯ ಅಧಿಕಾರಿಗಳು ಸಹ ಅಧಿಕಾರಿಗಳ ವಿಚಾರಣೆಗೆ ಸಹಕಾರ ನೀಡಿರುವುದಾಗಿ ವರದಿಯಾಗಿದೆ. ಕಳೆದ 2 ವರ್ಷಗಳಿಂದ ಕಿರುಕುಳ, ಲೈಂಗಿಕ ದೌರ್ಜನ್ಯ ಮತ್ತು ಮಾನಸಿಕ ಹಿಂಸೆ ಅನುಭವಿಸುತ್ತಿದ್ದೇನೆ ಎಂದು ಫ್ಲೈಯಿಂಗ್‌ ಸ್ಕ್ವಾಡ್‌ನ ಮಹಿಳಾ ಅಧಿಕಾರಿ ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಪ್ರತಿಭಟನೆ ನಿಲ್ಲಿಸಿ, ದುರ್ಗಾಪೂಜೆಗೆ ಗಮನ ಹರಿಸಿ – ದೀದಿ ಹೇಳಿಕೆಗೆ ಮೃತ ಟ್ರೈನಿ ವೈದ್ಯೆಯ ತಾಯಿ ಆಕ್ರೋಶ

    ದೂರಿನಲ್ಲಿ ಏನಿದೆ?
    2023ರ ಡಿಸೆಂಬರ್‌ 31ರ ಮಧ್ಯರಾತ್ರಿ ಹೊಸ ವರ್ಷದ ಪಾರ್ಟಿ ವೇಳೆ ವಿಂಗ್‌ ಕಮಾಂಡರ್‌ ತನಗೆ ಉಡುಗೊರೆ ನೀಡುವುದಾಗಿ ತನ್ನ ಕೋಣೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಮಹಿಳೆ ನಿಮ್ಮ ಕುಟುಂಬ ಎಲ್ಲಿದೆ ಎಂದು ಕೇಳಿದಾಗ, ಪುರುಷ ಅಧಿಕಾರಿ ಅವರು ಬೇರೆಡೆ ನೆಲೆಸಿದ್ದಾರೆ ಎಂದು ಹೇಳಿದ್ದರು. ಆ ದಿನ ರಾತ್ರಿ ತನ್ನೊಂದಿಗೆ ಸಂಭೋಕ್ಕೆ ಒತ್ತಾಯಿಸಿ, ಕಿರುಕುಳ ನೀಡಿದರು. ನಾನೂ ಇದು ಸರಿಯಿಲ್ಲ ಎಂದು ಪದೇ ಪದೇ ಹೇಳಿದೆ. ಸಾಧ್ಯವಾದಷ್ಟು ವಿರೋಧಿಸಲು ಪ್ರಯತ್ನಿಸಿದೆ, ಆದ್ರೆ ಅವರು ನನ್ನ ಮಾತು ಕೇಳದೇ ಮೇಲೆರಗಲು ಬಂದರು. ಆಗ ನಾನು ಅವರನ್ನು ತಳ್ಳಿ ಅಲ್ಲಿಂದ ಓಡಿ ಹೋದೆ. ಇದಾದ ನಂತರ ಅವರ ಕುಟುಂಬದೊಂದಿಗೆ ಮತ್ತೆ ಭೇಟಿಯಾಗೋಣ ಎಂದು ಕೇಳಿದ್ದರು. ಇದೇ ರೀತಿ ಅನೇಕ ಸಂದರ್ಭಗಳಲ್ಲಿ ಕಿರುಕುಳ ನೀಡುತ್ತಿದ್ದರು.

    ಆತನಿಂದ ನನ್ನ ಮಾನಸಿಕ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಿದೆ. ನಿರಂತರ ಭಯದಲ್ಲಿ ಬದುಕುತ್ತಿದ್ದೇನೆ. ಹಲವು ಬಾರಿ ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದು ಯೋಚಿಸಿದ್ದೆ. ಇದರಿಂದ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಬಹಳ ಸಮಯದಿಂದ ಈ ಚಿತ್ರಹಿಂದೆ ಸಹಿಸಿಕೊಂಡಿದ್ದೇನೆ. ಕೊನೆಗೆ ವಿಧಿಯಿಲ್ಲದೇ ದೂರು ನೀಡಿದೆ ಎಂದು ಹೇಳಿಕೊಂಡಿದ್ದಾರೆ. ಅಲ್ಲದೇ ತಮ್ಮ ವಿರುದ್ಧ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಅನೇಕ ಸಂರ್ಭಗಳನ್ನು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಅಭಿವೃದ್ಧಿ ವಿಷಯದಲ್ಲಿ ಸಂಘರ್ಷ ಬೇಡ – ಸಚಿವ ಎಂ.ಬಿ ಪಾಟೀಲ್‌ಗೆ ಕೇಂದ್ರ ಸಚಿವ ಹೆಚ್‌ಡಿಕೆ HD ಕುಮಾರಸ್ವಾಮಿ ಭರವಸೆ