Tag: Srinagar

  • ಅಮರನಾಥ ಯಾತ್ರೆ ಮೇಲೆ ದಾಳಿಗೆ ಸಂಚು ರೂಪಿಸಿದ್ದ ಮೂವರು ಉಗ್ರರ ಹತ್ಯೆ

    ಅಮರನಾಥ ಯಾತ್ರೆ ಮೇಲೆ ದಾಳಿಗೆ ಸಂಚು ರೂಪಿಸಿದ್ದ ಮೂವರು ಉಗ್ರರ ಹತ್ಯೆ

    ಶ್ರೀನಗರ: ಅಮರನಾಥ ಯಾತ್ರೆ ಮೇಲೆ ದಾಳಿಗೆ ಯೋಜನೆ ಮಾಡಿದ್ದ ಪಾಕಿಸ್ತಾನದ ಭಯೋತ್ಪಾದಕ ಸೇರಿದಂತೆ ಇಬ್ಬರು ಎಲ್‍ಇಟಿ ಭಯೋತ್ಪಾದಕರನ್ನು ಪೊಲೀಸರು ಎನ್‍ಕೌಂಟರ್ ಮಾಡಿ ಹತ್ಯೆ ಮಾಡಿದ್ದಾರೆ.

    ಶ್ರೀನಗರದ ಬೆಮಿನಾ ಪ್ರದೇಶದಲ್ಲಿ ಒಬ್ಬ ಪಾಕಿಸ್ತಾನದ ಭಯೋತ್ಪಾದಕ ಸೇರಿದಂತೆ ಇಬ್ಬರು ಎಲ್‍ಇಟಿ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಕಾಶ್ಮೀರ ಐಜಿಪಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 4 ಸಾವಿರ ಕಿ.ಮೀಟರ್ ಕ್ರಮಿಸಿ ಮರಳಿ ದುಬಾರೆಗೆ ಬಂದ ಕುಶ

    ಮೃತ ಭಯೋತ್ಪಾದಕರು ಜೂನ್ 6 ರಂದು ಸೊಪೂರ್ ಅರಣ್ಯದಲ್ಲಿ ಸಿಕ್ಕ ಗುಂಪಿನ ಭಾಗವಾಗಿದ್ದರು. ಗುಂಡಿನ ದಾಳಿಯಲ್ಲಿನ ಒಬ್ಬ ಪಾಕಿಸ್ತಾನಿ ಭಯೋತ್ಪಾದಕ ಹಂಜಲ್ಲಾ ಮೃತಪಟ್ಟಿದ್ದಾನೆ. ಮುಂಬರುವ ಅಮರನಾಥ ಯಾತ್ರೆಯ ಮೇಲೆ ದಾಳಿ ನಡೆಸಲು ಪಾಕಿಸ್ತಾನ ಉಗ್ರರ ಗುಂಪೊಂದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

    ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಮಾತನಾಡಿ, ಶ್ರೀನಗರ ಪೊಲೀಸರು ಶ್ರೀನಗರದ ಬೆಮಿನಾ ಪ್ರದೇಶದಲ್ಲಿ ಒಬ್ಬ ಪಾಕಿಸ್ತಾನದ ಭಯೋತ್ಪಾದಕ ಸೇರಿದಂತೆ ಇಬ್ಬರು ಎಲ್‍ಇಟಿ ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ. ಇದೇ ಭಯೋತ್ಪಾದಕರ ಗುಂಪು, ಸೊಪೂರ್ ಎನ್‍ಕೌಂಟರ್‌ನಿಂದ ತಪ್ಪಿಸಿಕೊಂಡಿತ್ತು. ನಾವು ಅವರ ಚಲನವಲನದ ಮೇಲೆ ನಿಗಾ ಇರಿಸಿ ಹತ್ಯೆ ಮಾಡಲಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ:  ಪೊಲೀಸ್ ಇಲಾಖೆ ಸಿಬ್ಬಂದಿ ವಿರುದ್ಧ ಪೋಸ್ಟ್ – ಕಾನ್ಸ್‌ಟೇಬಲ್ ಅಮಾನತು

  • ಕಾಶ್ಮೀರಿ ಪಂಡಿತರ ಮೇಲೆ ದಾಳಿ – 177 ಶಿಕ್ಷಕರ ವರ್ಗಾವಣೆ

    ಕಾಶ್ಮೀರಿ ಪಂಡಿತರ ಮೇಲೆ ದಾಳಿ – 177 ಶಿಕ್ಷಕರ ವರ್ಗಾವಣೆ

    ಶ್ರೀನಗರ: ಕಾಶ್ಮೀರಿ ಪಂಡಿತರು ಮತ್ತು ವಲಸೆ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಸರಣಿ ಹತ್ಯೆ ಮಾಡುತ್ತಿದ್ದಾರೆ. ಪರಿಣಾಮ 177 ಕಾಶ್ಮೀರಿ ಪಂಡಿತ ಶಿಕ್ಷಕರನ್ನು ಶ್ರೀನಗರದಿಂದ ಇತರೆ ಪ್ರದೇಶಗಳಿಗೆ ವರ್ಗಾವಣೆ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿದೆ.

    ಭಯೋತ್ಪಾದಕರ ಸರಣಿ ದಾಳಿಯ ಹಿನ್ನೆಲೆ ಕೇಂದ್ರಾಡಳಿತ ಪ್ರದೇಶದಲ್ಲಿ ಭದ್ರತಾ ಪರಿಸ್ಥಿತಿಯನ್ನು ಅವಲೋಕಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಭೆಯ ನಂತರ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಇದನ್ನೂ ಓದಿ:  ಶ್ರೀರಂಗಪಟ್ಟಣ ಮಸೀದಿ ವಿವಾದ – ಹಿಂದೂ, ಮುಸ್ಲಿಮರ ವಾದ ಏನು?

    BJP State leaders' meet with Amit Shah put off

    2012 ರಲ್ಲಿ ಪ್ರಧಾನಮಂತ್ರಿಗಳ ವಿಶೇಷ ಪ್ಯಾಕೇಜ್ ಅಡಿಯಲ್ಲಿ ಕಾಶ್ಮೀರಿ ಪಂಡಿತರು ಉದ್ಯೋಗಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆದರೆ ಕಳೆದ ಮೇ 12 ರಂದು ಮಧ್ಯ ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಚದೂರ ಪ್ರದೇಶದಲ್ಲಿ ಭಯೋತ್ಪಾದಕರ ಗುಂಡಿಗೆ ರಾಹುಲ್ ಭಟ್ ಹತ್ಯೆಯಾಗಿದ್ದರು.

    Kashmiri Pandits hold rally in US to support revocation of Article 370

    ಘಟನೆಯಿಂದ ತಲ್ಲಣಗೊಂಡಿದ್ದ ಪಂಡಿತರು, ವರ್ಗಾವಣೆ ಮಾಡಿ ಇಲ್ಲದಿದ್ದರೆ, ಸಾಮೂಹಿಕ ವಲಸೆ ಹೋಗುವ ಬೆದರಿಕೆ ಹಾಕಿ ಪ್ರತಿಭಟನೆಗಳನ್ನು ನಡೆಸುತ್ತಿದ್ದರು. ಭಟ್ ಹತ್ಯೆಯ ನಂತರ ಸುಮಾರು 6,000 ಸಿಬ್ಬಂದಿ ವರ್ಗಾವಣೆ ಕೋರಿ ಮನವಿ ಮಾಡಿದ್ದರು. ಆದರೆ ಸರ್ಕಾರ ಯಾವುದೇ ಕ್ರಮಗಳನ್ನು ತೆಗೆದುಕೊಂಡಿರಲಿಲ್ಲ. ಆದರೆ ನಿಯೋಜಿತ ದಾಳಿಗಳು ಹೆಚ್ಚಿದ ಹಿನ್ನೆಲೆ ಸರ್ಕಾರ ವರ್ಗಾವಣೆ ಮಾಡಲು ಆದೇಶಿಸಿದೆ.

    ಗುರುವಾರ ಬ್ಯಾಂಕ್ ಉದ್ಯೋಗಿ ಮತ್ತು ಓರ್ವ ಇಟ್ಟಿಗೆ ಗೂಡು ಕಾರ್ಮಿಕರನ್ನು ಎರಡು ಪ್ರತ್ಯೇಕ ಘಟನೆಗಳಲ್ಲಿ ಹತ್ಯೆ ಮಾಡಲಾಗಿತ್ತು. ಮೇ 1 ರಿಂದ ಕಾಶ್ಮೀರದಲ್ಲಿ ನಡೆಯುತ್ತಿರುವ ಉದ್ದೇಶಿತ ಹತ್ಯೆಗಳಿಗೆ ಬ್ಯಾಂಕ್ ಮ್ಯಾನೇಜರ್ ಎಂಟನೇ ಮತ್ತು ಕಾರ್ಮಿಕ ಒಂಬತ್ತನೇ ಬಲಿಪಶುವಾಗಿದ್ದರು. ಇದನ್ನೂ ಓದಿ:  ಇಂದು ಹಿಂದೂ ಸಂಘಟನೆಗಳಿಂದ ಶ್ರೀರಂಗಪಟ್ಟಣ ಚಲೋ – 144 ಸೆಕ್ಷನ್ ಜಾರಿ 

    ಮಂಗಳವಾರ ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಶಾಲೆಯೊಂದರಲ್ಲಿ ಭಯೋತ್ಪಾದಕರ ಗುಂಡಿಗೆ ಮಹಿಳಾ ಶಿಕ್ಷಕಿಯೊಬ್ಬರು ಬಲಿಯಾಗಿದ್ದಾರೆ. ಮೇ 18 ರಂದು, ಭಯೋತ್ಪಾದಕರು ಉತ್ತರ ಕಾಶ್ಮೀರದ ಬಾರಾಮುಲ್ಲಾದಲ್ಲಿ ವೈನ್ ಶಾಪ್‍ಗೆ ನುಗ್ಗಿ ಗ್ರೆನೇಡ್ ಎಸೆದಿದ್ದರು. ಅಲ್ಲದೇ ಜಮ್ಮು ಪ್ರದೇಶದ ಒಬ್ಬ ವ್ಯಕ್ತಿಯನ್ನು ಕೊಂದಿದ್ದು, ಮೂವರು ಗಾಯಗೊಂಡಿದ್ದರು.

  • ಯೋಧರು ಪ್ರಯಾಣಿಸುತ್ತಿದ್ದ ವಾಹನ ಸ್ಫೋಟ: 3 ಸೈನಿಕರ ಸ್ಥಿತಿ ಗಂಭೀರ

    ಯೋಧರು ಪ್ರಯಾಣಿಸುತ್ತಿದ್ದ ವಾಹನ ಸ್ಫೋಟ: 3 ಸೈನಿಕರ ಸ್ಥಿತಿ ಗಂಭೀರ

    ಶ್ರೀನಗರ: ಯೋಧರು ಪ್ರಯಾಣಿಸುತ್ತಿದ್ದ ವಾಹನ ಸ್ಫೋಟಗೊಂಡಿದ್ದು, ಮೂವರು ಸೈನಿಕರ ಸ್ಥಿತಿ ಗಂಭಿರವಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದಿದೆ.

    ಶೋಪಿಯಾನ್ ಜಿಲ್ಲೆಯಲ್ಲಿ ಖಾಸಗಿ ಬಾಡಿಗೆ ವಾಹನದಲ್ಲಿ ಮೂವರು ಸೈನಿಕರು ಪ್ರಯಾಣ ಮಾಡುತ್ತಿದ್ದರು. ಈ ವೇಳೆ ವಾಹನ ದಿಢೀರ್ ಸ್ಫೋಟಗೊಂಡಿದ್ದು, 3 ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಸ್ತುತ ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಹಾಸನ ಕಟ್ಟಿನಕೆರೆ ಮಾರುಕಟ್ಟೆ ಬಂದ್ – 500ಕ್ಕೂ ಹೆಚ್ಚು ಪೊಲೀಸರಿಂದ ಬಂದೋಬಸ್ತ್

    ಕಾಶ್ಮೀರದ ಪೆÇಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಈ ಕುರಿತು ಟ್ವೀಟ್ ಮಾಡಿದ್ದು, ಮೂವರು ಸೈನಿಕರು ಖಾಸಗಿ ವಾಹನದಲ್ಲಿ ಪ್ರಯಾಣಿಸುತ್ತಿದ್ದು, ದಿಢೀರ್ ಎಂದು ವಾಹನ ಸ್ಫೋಟಗೊಂಡಿದೆ. ಈ ಹಿನ್ನೆಲೆ ಅವರಿಗೆ ಗಂಭೀರವಾಗಿ ಗಾಯವಾಗಿದೆ. ಸ್ಫೋಟಕ್ಕೆ ಕಾರಣವೇನು ಎಂಬುದರ ಬಗ್ಗೆ ತನಿಖೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

    ಈ ಸ್ಫೋಟ ಗ್ರೆನೇಡ್‍ನಿಂದಾಗಿ ಅಥವಾ ವಾಹನದೊಳಗೆ ಈಗಾಗಲೇ ಐಇಡಿ(ಸುಧಾರಿತ ಸ್ಫೋಟಕ ಸಾಧನ) ಅಳವಡಿಸಲಾಗಿದೆಯೇ ಅಥವಾ ಬ್ಯಾಟರಿ ಕಾರಣದಿಂದ ಈ ಸ್ಫೋಟ ಸಂಭವಿಸಿದ್ಯಾ ಎಂಬುದನ್ನು ಕುರಿತು ತನಿಖೆ ಮಾಡಲಾಗುತ್ತಿದೆ ಎಂದು ಹೇಳಿದರು.

    ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಾಹನ ಸುಟ್ಟು ಹೋಗಿದೆ. ಸ್ಫೋಟದ ತೀವ್ರತೆ ನೋಡಿದರೆ ಬ್ಯಾಟರಿ ಕಾರಣದಿಂದ ಸಂಭವಿಸಿರುವ ಸಾಧ್ಯತೆಯಿಲ್ಲ ಎಂದು ಮೂಲಗಳು ತಿಳಿಸಿವೆ. ಆದರೂ ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ ಎಂದು ಟ್ವೀಟ್ ಮಾಡಲಾಗಿದೆ. ಇದನ್ನೂ ಓದಿ: ಚಿನ್ನಿದಾಂಡು ಆಟದಿಂದ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ 

    ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಕೃತ್ಯ ಹೆಚ್ಚಾಗುತ್ತಿದೆ. ಅದರಲ್ಲಿಯೂ ಕಾಶ್ಮೀರಿ ಪಂಡಿತರನ್ನು ಉದ್ದೇಶಿಸಿ ಈ ದಾಳಿಗಳು ಹೆಚ್ಚಾಗುತ್ತಿವೆ. ಪರಿಣಾಮ ಜಮ್ಮು ಮತ್ತು ಕಾಶ್ಮೀರದಾದ್ಯಂತ ಬಿಗಿ ಬಂದೋಬಸ್ತ್ ಹಾಕಲಾಗುತ್ತಿದೆ.

  • ಅಮ್ರಿನ್ ಭಟ್‌ ಹತ್ಯೆಗೈದಿದ್ದ ಇಬ್ಬರು ಸೇರಿ ನಾಲ್ವರು ಲಷ್ಕರ್ ಉಗ್ರರ ಹತ್ಯೆ

    ಅಮ್ರಿನ್ ಭಟ್‌ ಹತ್ಯೆಗೈದಿದ್ದ ಇಬ್ಬರು ಸೇರಿ ನಾಲ್ವರು ಲಷ್ಕರ್ ಉಗ್ರರ ಹತ್ಯೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಮತ್ತು ಶ್ರೀನಗರ ಜಿಲ್ಲೆಗಳ ಸೌರಾ ಪ್ರದೇಶದಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ನಡೆದ ಎನ್‍ಕೌಂಟರ್‌ ದಾಳಿ ವೇಳೆ ಕಾಶ್ಮೀರ ಪೊಲೀಸರು ನಾಲ್ವರು ಎಲ್‍ಇಟಿ ಉಗ್ರರನ್ನು ಹತ್ಯಗೈದ ಘಟನೆ ನಡೆದಿದೆ.

    ಹತ್ಯೆಯಾದ ಎಲ್‍ಇಟಿ ಉಗ್ರರನ್ನು ಶಾಕಿರ್ ಅಹ್ಮದ್ ವಾಜಾ ಮತ್ತು ಅಫ್ರೀನ್ ಅಫ್ತಾಬ್ ಮಲಿಕ್ ಎಂದು ಗುರುತಿಸಲಾಗಿದ್ದು, ಇಬ್ಬರೂ ಟ್ರೆಂಜ್ ಶೋಪಿಯಾನ್ ಗ್ರಾಮದ ನಿವಾಸಿಗಳಾಗಿದ್ದರು. 4 ಉಗ್ರರ ಹತ್ಯೆಯಲ್ಲಿ, ಇಬ್ಬರು ಕಿರುತೆರೆ ನಟಿಯ ಹತ್ಯೆಯಲ್ಲಿ ಭಾಗಿಯಾಗಿರುವ ಬಗ್ಗೆ ಪೊಲೀಸರು ತಿಳಿಸಿದ್ದಾರೆ.

    ಪೊಲೀಸರು ಅವರಿಂದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಇದರ ಜೊತೆಗೆ ಒಂದು ಎಕೆ-47 ಮತ್ತು ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ನಾಯಿ ವಾಕಿಂಗ್‍ಗೆ ಸ್ಟೇಡಿಯಂ ಖಾಲಿ ಮಾಡಿಸಿದ್ದ ಐಎಎಸ್ ಅಧಿಕಾರಿ ವರ್ಗಾವಣೆ

    ಈ ಬಗ್ಗೆ ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಮಾತನಾಡಿ, ಕಳೆದ ಮೂರು ದಿನಗಳಲ್ಲಿ ನಡೆದ ಎನ್‍ಕೌಂಟರ್‌ಗಳಲ್ಲಿ ಒಟ್ಟು 10 ಉಗ್ರರನ್ನು ಹತ್ಯೆ ಮಾಡಲಾಗಿದೆ. ಅವರಲ್ಲಿ ಏಳು ಮಂದಿ ಲೆಟ್‍ಗೆ ಸೇರಿದವರಾಗಿದ್ದರೆ, ಮೂವರು ಜೈಶ್-ಎ-ಮೊಹಮ್ಮದ್‍ಗೆ ಸೇರಿದವರು ಎಂದು ತಿಳಿಸಿದರು. ಇದನ್ನೂ ಓದಿ: ವೇಶ್ಯಾವಾಟಿಕೆ ಅಕ್ರಮವಲ್ಲ – ಸುಪ್ರೀಂಕೋರ್ಟ್ ಮಹತ್ವದ ತೀರ್ಪು

  • ಇಬ್ಬರು ‘ಹೈಬ್ರೀಡ್’ ಉಗ್ರರ ಬಂಧನ- ಶಸ್ತ್ರಾಸ್ತ್ರಗಳು ವಶ

    ಇಬ್ಬರು ‘ಹೈಬ್ರೀಡ್’ ಉಗ್ರರ ಬಂಧನ- ಶಸ್ತ್ರಾಸ್ತ್ರಗಳು ವಶ

    ಶ್ರೀನಗರ: ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್ ಎ ತೊಯ್ಬಾ(ಎಲ್‍ಇಟಿ)ದ ಇಬ್ಬರು ಸ್ಥಳೀಯ ‘ಹೈಬ್ರೀಡ್’ ಉಗ್ರರನ್ನು ಸೋಮವಾರ ಶ್ರೀನಗರದಲ್ಲಿ ಬಂಧಿಸಲಾಗಿದ್ದು, ಶಸ್ತ್ರಾಸ್ತ್ರ ಹಾಗೂ ಮದ್ದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

    ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್‍ಇಟಿ, ಟಿಆರ್‌ಎಫ್‍ನ ಇಬ್ಬರು ಸ್ಥಳೀಯ ಉಗ್ರರನ್ನು ಶ್ರೀನಗರ ಪೊಲೀಸರು ಬಂಧಿಸಿದ್ದಾರೆ. 15 ಪಿಸ್ತೂಲ್‍ಗಳು, 300ಕ್ಕೂ ದೋಷಾರೋಪಣೆಯ ಸಾಮಗ್ರಿಗಳು ಹಾಗೂ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ತಿಳಿಸಿದ್ದಾರೆ.

    ಉಗ್ರರ ಚಲನವಲನದ ಬಗ್ಗೆ ಖಚಿತ ಮಾಹಿತಿ ಆಧರಿಸಿ ಚೆಕ್‌ಪೋಸ್ಟ್ ನಿರ್ಮಿಸಲಾಗಿತ್ತು. ಚೆಕ್‌ಪೋಸ್ಟ್ ಬಳಿಗೆ ಬಂದ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದ ರೀತಿಯಲ್ಲಿ ವರ್ತಿಸಿದ್ದರು. ಅಧಿಕಾರಿಗಳ ಕಣ್ತಪ್ಪಿಸಿ ಪರಾರಿಯಾಗಲು ಯತ್ನಿಸಿದಾಗ ಅವರನ್ನು ಬೆನ್ನತ್ತಿದ್ದ ಜಂಟಿ ಕಾರ್ಯಾಚರಣೆ ಪಡೆ ಬಂಧಿಸಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಗೋಮಾಂಸ ತಿನ್ನೋದಾದ್ರೆ ತಿನ್ನಲಿ, ವಕೀಲಿಕೆ ಮಾಡೋದು ಬೇಡ: ಛಲವಾದಿ ನಾರಾಯಣಸ್ವಾಮಿ  

    ಈ ಬಗ್ಗೆ ಐಜಿಪಿ ಮಾತನಾಡಿ, ಟಿಆರ್‌ಎಫ್ ಅಥವಾ ದಿ ರೆಸಿಸ್ಟೆನ್ಸ್ ಫ್ರಂಟ್ ಎಇಟಿಯ ಒಂದು ಶಾಖೆಯಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಇದು ಪೊಲೀಸರಿಗೆ ದೊಡ್ಡ ಯಶಸ್ಸು ಎಂದು ಹೇಳಿದರು. ಇದನ್ನೂ ಓದಿ: ಎಷ್ಟು ಹೇಳಿದ್ರೂ ಓದ್ಲಿಲ್ಲ, ಸತ್ತವರ ಮನೆ ಮುಂದೆ ತಮಟೆ ಬಡಿಯಲು ಹೋಗ್ತಿದ್ರಿ – ಶಿಕ್ಷಕರ ಕ್ಲಾಸ್

  • ಜಮ್ಮು ಸುರಂಗ ಕುಸಿತ – 10 ಮೃತದೇಹಗಳು ಪತ್ತೆ

    ಜಮ್ಮು ಸುರಂಗ ಕುಸಿತ – 10 ಮೃತದೇಹಗಳು ಪತ್ತೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಗುರುವಾರ ಸುರಂಗ ಕುಸಿತವಾಗಿದ್ದು, 36 ಗಂಟೆಗಳ ಸುದೀರ್ಘ ರಕ್ಷಣಾ ಕಾರ್ಯಚರಣೆ ಬಳಿಕ ಇಲ್ಲಿಯವರೆಗೆ ಅವಶೇಷಗಳಿಂದ 10 ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಶ್ರೀನಗರ-ಜಮ್ಮು ಹೆದ್ದಾರಿಯ ಖೋನಿನಲ್ಲ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಭಾರೀ ಭೂಕುಸಿತ ಉಂಟಾಗಿತ್ತು. ಪರಿಣಾಮ ಕಾರ್ಮಿಕರು ಅವಶೇಷಗಳಡಿ ಹೂತು ಹೋಗಿದ್ದರು. ಇದನ್ನೂ ಓದಿ: ಈಡೇರಿದ ಬೆಂಗ್ಳೂರು ಅಭಿಮಾನಿಗಳ ಬಯಕೆ – ಆರ್‌ಸಿಬಿ ಪ್ಲೇ ಆಫ್‍ಗೆ ಡೆಲ್ಲಿ ಮನೆಗೆ

    ಸುರಂಗ ನಿರ್ಮಿಸುತ್ತಿದ್ದ ಕಂಪನಿ ರಕ್ಷಣಾ ಮಾನದಂಡಗಳನ್ನು ಅನುಸರಿಸದಿರುವುದೇ ದುರಂತಕ್ಕೆ ಕಾರಣವಿರಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕಂಪನಿ ನಿರ್ಲಕ್ಷ್ಯಕ್ಕೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಇಂದು 155 ಕೇಸ್ – 166 ಮಂದಿ ಆಸ್ಪತ್ರೆಯಿಂದ ಬಿಡುಗಡೆ

    ಗುರುವಾರ ತಡರಾತ್ರಿ ಸುರಂಗದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ಸಂದರ್ಭ ಬೃಹತ್ ಬಂಡೆಗಳು ಕುಸಿದಿದ್ದವು. ಅವಶೇಷಗಳಿಂದ ಪಶ್ಚಿಮ ಬಂಗಾಳದ ಐವರು, ನೇಪಾಳದ ಇಬ್ಬರು, ಅಸ್ಸಾಂನ ಒಬ್ಬ ಹಾಗೂ ಜಮ್ಮು ಮತ್ತು ಕಾಶ್ಮೀರದ ಇಬ್ಬರ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • ಜಮ್ಮು-ಕಾಶ್ಮಿರದಲ್ಲಿ ಕಾಶ್ಮೀರಿ ಪಂಡಿತರ ಹತ್ಯೆ ಮುಂದುವರಿಯುತ್ತಿದೆ: ಒಮರ್ ಅಬ್ದುಲ್ಲಾ

    ಜಮ್ಮು-ಕಾಶ್ಮಿರದಲ್ಲಿ ಕಾಶ್ಮೀರಿ ಪಂಡಿತರ ಹತ್ಯೆ ಮುಂದುವರಿಯುತ್ತಿದೆ: ಒಮರ್ ಅಬ್ದುಲ್ಲಾ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್‍ನಲ್ಲಿ ಭಯೋತ್ಪಾದಕರಿಂದ ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಹತ್ಯೆ ನಡೆದಿದೆ. ಈ ಹಿನ್ನೆಲೆ ಜಮ್ಮು-ಕಾಶ್ಮೀರದ ಮಾಜಿ ಸಿಎಂ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಖಂಡಿಸಿದ್ದಾರೆ. ಈ ಹಿನ್ನೆಲೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ.

    Omar Abdullah

    ಟ್ವೀಟ್‍ನಲ್ಲಿ ಒಮರ್ ಅಬ್ದುಲ್ಲಾ ಅವರು, ರಾಹುಲ್ ಭಟ್ ಮೇಲಿನ ಹಂತಕ ಉಗ್ರಗಾಮಿ ದಾಳಿಯನ್ನು ನಾನು ನಿಸ್ಸಂದಿಗ್ಧವಾಗಿ ಖಂಡಿಸುತ್ತೇನೆ. ತಹಸಿಲ್ ಕಚೇರಿಯಲ್ಲಿ ಸರ್ಕಾರಿ ನೌಕರನಾಗಿದ್ದ ರಾಹುಲ್ ಅವರ ಮೇಲೆ ದಾಳಿ ನಡೆಸಲಾಯಿತು. ಈ ಹತ್ಯೆಯನ್ನು ಉದ್ದೇಶಪೂರ್ವಕವಾಗಿಯೇ ಮಾಡಲಾಗಿದೆ. ಇದು ಮುಂದುವರಿಯುತ್ತೆ. ಇದರಿಂದ ಜಮ್ಮು-ಕಾಶ್ಮೀರದಲ್ಲಿ ಭಯದ ಭಾವನೆ ಬೆಳೆಯುತ್ತ ಹೋಗುತ್ತೆ. ರಾಹುಲ್ ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಸಂತಾಪ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ನಡು ರಸ್ತೆಯಲ್ಲಿ ಉಪನ್ಯಾಸಕನ ಬರ್ಬರ ಹತ್ಯೆ 

    ಭಟ್ ಅವರ ಜೀವನವು ಇಂದು ಕ್ರೂರವಾಗಿ ನಶಿಸಿರುವುದು ದುರಂತ. ರಾಹುಲ್ ಭಟ್ ವಿಶ್ರಾಂತಿ ಪಡೆಯಿರಿ ಎಂದು ಬರೆದುಕೊಂಡಿದ್ದಾರೆ.

    ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಸರ್ಕಾರಿ ನೌಕರಾಗಿದ್ದರು. ಚದೂರ ಪ್ರದೇಶದಲ್ಲಿನ ಅವರ ಕಚೇರಿಯಲ್ಲಿಯೇ ಭಯೋತ್ಪಾದಕರು ನುಗ್ಗಿ ಅವರ ಮೇಲೆ ಗುಂಡು ಹಾರಿಸಿದ್ದಾರೆ. ಈ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಫಲಕಾರಿಯಾಗದೆ ಪ್ರಾಣ ಬಿಟ್ಟರು.

    ಪೊಲೀಸರು ಈ ಕುರಿತು ಮಾಹಿತಿ ಕೊಟ್ಟಿದ್ದು, ಭಟ್ ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಶ್ರೀನಗರದ ಎಸ್‍ಎಂಎಚ್‍ಎಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು. ಪ್ರಾಥಮಿಕ ತನಿಖೆಯಿಂದ ಇಬ್ಬರು ಭಯೋತ್ಪಾದಕರು ಈ ಘೋರ ಅಪರಾಧದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಕೃತ್ಯಕ್ಕೆ ಪಿಸ್ತೂಲ್ ಬಳಸಿದ್ದಾರೆ ಎಂದು ವಿವರಿಸಿದರು. ಇದನ್ನೂ ಓದಿ:  ಪಾಕ್‍ನಲ್ಲಿ ಹಿಂದೂ ದೇವಾಲಯ ಧ್ವಂಸ ಮಾಡಿದ 22 ಮಂದಿಗೆ 5 ವರ್ಷ ಜೈಲು ಶಿಕ್ಷೆ 

    ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಕೂಡ ರಾಹುಲ್ ಭಟ್ ಅವರ ಬರ್ಬರ ಹತ್ಯೆಯನ್ನು ಖಂಡಿಸಿದ್ದಾರೆ. ಈ ಹೇಯ ಭಯೋತ್ಪಾದನಾ ದಾಳಿಯ ಹಿಂದಿರುವವರನ್ನು ಶಿಕ್ಷಿಸಲೇ ಬೇಕು. ದುಃಖತಪ್ತ ಕುಟುಂಬದೊಂದಿಗೆ ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಒಗ್ಗಟ್ಟಿನಿಂದ ನಿಂತಿದೆ ಎಂದು ಭರವಸೆ ಕೊಟ್ಟರು.

  • ಗುಂಡಿನ ದಾಳಿ ನಡೆಸಿ ಕಾಶ್ಮೀರಿ ಪಂಡಿತನನ್ನು ಹತ್ಯೆಗೈದ ಉಗ್ರರು

    ಗುಂಡಿನ ದಾಳಿ ನಡೆಸಿ ಕಾಶ್ಮೀರಿ ಪಂಡಿತನನ್ನು ಹತ್ಯೆಗೈದ ಉಗ್ರರು

    ಶ್ರೀನಗರ: ಕಾಶ್ಮೀರಿ ಪಂಡಿತರೊಬ್ಬರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಹತ್ಯೆಗೈದಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಕಂದಾಯ ಇಲಾಖೆಯ ಕಚೇರಿಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.

    ಕಾಶ್ಮೀರಿ ಪಂಡಿತ್ ಸಮುದಾಯದ ರಾಹುಲ್ ಭಟ್ ಹತ್ಯೆಗೀಡಾದ ವ್ಯಕ್ತಿ. ಮೃತರು ಕಂದಾಯ ಇಲಾಖೆಯ ನೌಕರರಾಗಿದ್ದರು. ಕೇಂದ್ರ ಕಾಶ್ಮೀರದ ಚದೂರದಲ್ಲಿರುವ ತಹಸೀಲ್ದಾರ್ ಕಚೇರಿಯಲ್ಲಿಯೇ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಶ್ರೀನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡಿ ಸಾವನ್ನಪ್ಪಿದ್ದಾರೆ.

    ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿ, ಬುದ್ಗಾಮ್‍ನ ತಹಸೀಲ್ದಾರ್ ಕಚೇರಿ ಚದೂರದಲ್ಲಿ ಅಲ್ಪಸಂಖ್ಯಾತ ಸಮುದಾಯದ ರಾಹುಲ್ ಭಟ್ ಎಂಬ ನೌಕರನ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬೇಲ್‌ನಿಂದ ಹೊರಬಂದು ಮದುವೆಯಾಗು ಎಂದ – ರೌಡಿ ಅಂತ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರೇಯಸಿಯನ್ನೇ ಕೊಂದ

    ಘಟನೆಯ ನಂತರ, ಭದ್ರತಾ ಪಡೆಗಳು ಘಟನೆ ನಡೆದ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಘಟನೆಯ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಅಶ್ವನಿ ಹಂಡಾ, ಕಣಿವೆಯಲ್ಲಿ ಕಾಶ್ಮೀರಿ ಪಂಡಿತರಿಗೆ ಭದ್ರತೆ ಒದಗಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ತಾಜ್‌ ಮಹಲ್‌ ಹಿಂದೆ ʼತೇಜೋ ಮಹಾಲಯʼವಾಗಿತ್ತು, ಅಲ್ಲಿ ಹಿಂದೂ ವಿಗ್ರಹಗಳಿವೆ – ತನಿಖೆಗಾಗಿ ಕೋರ್ಟ್‌ಗೆ ಮನವಿ

    ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಉಗ್ರರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದರು

  • ಎನ್‍ಕೌಂಟರ್‌ನಲ್ಲಿ ಮೂರು ಭಯೋತ್ಪಾದಕರ ಪೈಕಿ ಒಬ್ಬ ಬದುಕುಳಿದ

    ಎನ್‍ಕೌಂಟರ್‌ನಲ್ಲಿ ಮೂರು ಭಯೋತ್ಪಾದಕರ ಪೈಕಿ ಒಬ್ಬ ಬದುಕುಳಿದ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರಿಗಾಗಿ ಶೋಧಕಾರ್ಯ ನಡೆದಿದೆ. ಈ ವೇಳೆ 3 ಭಯೋತ್ಪಾದಕರಲ್ಲಿ ಒಬ್ಬ ಬದುಕುಳಿದ್ದಾನೆ ಎಂದು ಪೊಲೀಸರು ತಿಳಿಸಿದರು.

    ಅಮರನಾಥ ಯಾತ್ರೆಯ ಪ್ರಮುಖ ಮಾರ್ಗವಾದ ಅನಂತನಾಗ್ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‍ನಲ್ಲಿ ಭದ್ರತಾ ಪಡೆಗಳು ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ. ಈ ಮಾರ್ಗದಲ್ಲಿ ಸಂಭವನೀಯ ಭಯೋತ್ಪಾದಕ ದಾಳಿಗಳನ್ನು ತಡೆಯುವಲ್ಲಿ ಪೊಲೀಸರ ಇಂದಿನ ಎನ್‍ಕೌಂಟರ್ ದೊಡ್ಡ ಯಶಸ್ಸು ಎಂದು ಕರೆದುಕೊಂಡಿದ್ದಾರೆ. ಇದನ್ನೂ ಓದಿ:  ಉತ್ತರ ಕರ್ನಾಟಕದಲ್ಲಿ ನಾಲ್ಕು ದಿನ ಗುಡುಗು ಗಾಳಿ ಸಹಿತ ಮಳೆ: ಹವಾಮಾನ ಇಲಾಖೆ 

    ಇಂದು ಗುಂಡಿಕ್ಕಿ ಕೊಲ್ಲಲ್ಪಟ್ಟ ಮೂವರು ಭಯೋತ್ಪಾದಕರ ಪೈಕಿ ಒಬ್ಬ ಬದುಕುಳಿದಿದ್ದು, ಆತ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕರಲ್ಲಿ ಒಬ್ಬ ಎಂದು ಪೊಲೀಸರು ತಿಳಿಸಿದ್ದಾರೆ.

    ಅಶ್ರಫ್ ಮೋಲ್ವಿ(ಎಚ್‍ಎಂ ಭಯೋತ್ಪಾದಕ ಸಂಘಟನೆಯ ಅತ್ಯಂತ ಹಳೆಯ ಭಯೋತ್ಪಾದಕರಲ್ಲಿ ಒಬ್ಬರು) ಜೊತೆಗೆ ಇಬ್ಬರು ಭಯೋತ್ಪಾದಕರನ್ನು ಎನ್‍ಕೌಂಟರ್ ಮಾಡಲಾಯಿತು. ಯಾತ್ರಾ ಮಾರ್ಗದಲ್ಲಿ ಯಶಸ್ವಿ ಕಾರ್ಯಾಚರಣೆಯು ನಮಗೆ ದೊಡ್ಡ ಯಶಸ್ಸು ಎಂದು ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.

    ಪಹಲ್ಗಾಮ್‍ನ ಕಾಡಿನಲ್ಲಿ ಭಯೋತ್ಪಾದಕರು ಇದ್ದಾರೆ ಎಂಬ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ, ಭದ್ರತಾ ಪಡೆಗಳು ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಈ ವೇಳೆ ಅಡಗಿರುವ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ ನಂತರ ಈ ಕಾರ್ಯಾಚರಣೆಯು ಎನ್‍ಕೌಂಟರ್‍ಗೆ ತಿರುಗಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: WHO ಡೇಟಾ, ಕಾಂಗ್ರೆಸ್ ಬೇಟಾ ಎರಡೂ ತಪ್ಪು: ಬಿಜೆಪಿ ಆರೋಪ 

    ದಕ್ಷಿಣ ಕಾಶ್ಮೀರದ ಪ್ರವಾಸಿ ತಾಣವಾದ ಪಹಲ್ಗಾಮ್ ಅಮರನಾಥ ಯಾತ್ರೆಯ ಮೂಲ ಶಿಬಿರಗಳಲ್ಲಿ ಒಂದಾಗಿ ಕಾರ್ಯನಿರ್ವಹಿಸುತ್ತದೆ. ಇದು ಸುಮಾರು ಎರಡು ವರ್ಷಗಳ ನಂತರ ಮತ್ತೆ ಜೂನ್ 30 ರಿಂದ ಯಾತ್ರೆ ಪ್ರಾರಂಭವಾಗಲಿದೆ.

  • ಸೊಪೋರ್‌ನಲ್ಲಿ ಮೂವರು ಲಷ್ಕರ್ ಉಗ್ರರು ಅರೆಸ್ಟ್

    ಸೊಪೋರ್‌ನಲ್ಲಿ ಮೂವರು ಲಷ್ಕರ್ ಉಗ್ರರು ಅರೆಸ್ಟ್

    ಶ್ರೀನಗರ: ಉತ್ತರ ಕಾಶ್ಮೀರದ ಸೊಪೋರ್‌ನಲ್ಲಿ ಲಷ್ಕರ್-ಇ-ತೊಯ್ಬಾ (ಎಲ್‍ಇಟಿ) ಸಂಘಟನೆಗೆ ಸೇರಿದ ಮೂವರು ಭಯೋತ್ಪಾದಕರನ್ನು ಬಂಧಿಸಿರುವುದಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸೋಮವಾರ ತಿಳಿಸಿದ್ದಾರೆ.

    ಪೊಲೀಸರು ಇತ್ತೀಚೆಗೆ ಸ್ಥಳೀಯರಲ್ಲದ ಕಾರ್ಮಿಕರ ಹತ್ಯೆಗಳು ಮತ್ತು ಅನೇಕ ಸ್ಥಳಗಳಲ್ಲಿ ಗ್ರೆನೇಡ್ ದಾಳಿಗಳ ಬಗ್ಗೆ ತನಿಖೆ ನಡೆಸಿದ್ದರು. ಈ ವೇಳೆ ವಿವಿಧ ಸ್ಥಳಗಳಿಂದ ಶಂಕಿತ ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಶಂಕಿತ ವ್ಯಕ್ತಿಗಳ ನಿರಂತರ ವಿಚಾರಣೆಯಿಂದ ಈ ಎಲ್ಲಾ ಹತ್ಯೆಗಳ ಹಿಂದೆ ಎಲ್‍ಇಟಿ ಸಂಘಟನೆಯ ಕೈವಾಡವಿತ್ತು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪತಿಯ ಕಿರುಕುಳ ತಾಳಲಾರದೇ ಪತ್ನಿ ನೇಣಿಗೆ ಶರಣು

    ಮೇ 2 ರಂದು ಹೈಗಮ್‍ನಲ್ಲಿ ಮೂವರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದರು. ಭದ್ರತಾ ಪಡೆಗಳು ಅವರನ್ನು ವಿಚಾರಣೆ ನಡೆಸಲು ಮುಂದಾದಾಗ ಅವರು ತೋಟದ ನಿರ್ಜನ ಪ್ರದೇಶಗಳಿಗೆ ಓಡಿ ಪರಾರಿಯಾಗಿದ್ದರು.

    ಈ ವೇಳೆ ಎಂವಿಸಿಪಿ (ಮೊಬೈಲ್ ವೆಹಿಕಲ್ ಚೆಕ್ ಪೋಸ್ಟ್) ಮೂವರು ವ್ಯಕ್ತಿಗಳನ್ನು ಬೆನ್ನಟ್ಟಿತ್ತು. ಪರಾರಿಯಾದ ಮೂವರು ಆ ಸ್ಥಳವನ್ನು ಬಿಟ್ಟು ತೆರಳದಂತೆ ಸೈನಿಕರು ನಿಗಾ ವಹಿಸಿದ್ದರು. ಅಂತಿಮವಾಗಿ ಭದ್ರತಾ ಪಡೆ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

    ಉಸ್ಮಾನ್-ಬಾದ್ ವಾರ್ಪೋರಾದ ತಫ್ಹೀಮ್ ರೆಯಾಜ್, ಬ್ರತ್ ಕಲಾನ್ ಸೋಪೋರ್‌ನ ಸೀರತ್ ಶಾಬಾಜ್ ಮಿರ್ ಮತ್ತು ಮಿರ್ಪೋರಾ ಬ್ರತ್‍ಕಲನ್‍ನ ರಮೀಜ್ ಅಹ್ಮದ್ ಖಾನ್ ಬಂಧಿತ ಉಗ್ರರು.

    ಬಂಧಿತ ಉಗ್ರರಿಂದ ಮೂರು ಚೀನೀ ಪಿಸ್ತೂಲ್‍ಗಳು, ಮದ್ದುಗುಂಡುಗಳು ಮತ್ತು ಮೊಬೈಲ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ರಂಜಾನ್ ಮುನ್ನಾ ದಿನವೇ ಎರಡು ಗುಂಪುಗಳ ಮಧ್ಯೆ ಗಲಾಟೆ – ಇಂಟರ್ನೆಟ್ ಸ್ಥಗಿತ

    ಇದರ ಮಧ್ಯೆ, ಗಂದರ್‍ಬಾಲ್‍ನಲ್ಲಿ ಸ್ಕಾರ್ಪಿಯೋ ಕಾರಿನಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ. ಒಬ್ಬ ಲಷ್ಕರ್ ಇ ತೊಯ್ಬಾ ಉಗ್ರಗಾಮಿ ಸಹಚರನನ್ನು ಸಹ ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.