ನವದೆಹಲಿ: ಸಿ.ಟಿ ರವಿ (CT Ravi) ಮೊದಲು ಲೂಟಿ ರವಿಯಾದರು, ಲೂಟಿ ರವಿಯಿಂದ ಕೋಟಿ ರವಿಯಾದರು, ಕೋಟಿ ರವಿಯಿಂದ ಈಗ ಕೆಟ್ಟ, ಕೊಳಕು ರವಿಯಾಗಿದ್ದಾರೆ. ಮಹಿಳೆ ವಿರುದ್ಧ ಅಸಭ್ಯವಾಗಿ ಮಾತನಾಡಿದ ಅವರನ್ನು ಬಿಜೆಪಿ ನಾಯಕರು ಮಾನ ಮರ್ಯಾದಿ ಇಲ್ಲದೆ ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ ಶ್ರೀನಿವಾಸ್ (BV Srinivas) ವಾಗ್ದಾಳಿ ನಡೆಸಿದ್ದಾರೆ.
ಗೃಹಲಕ್ಷಿ ಯೋಜನೆಯನ್ನು ಅನುಷ್ಠಾನ ಮಾಡಿರುವುದನ್ನು ಬಿಜೆಪಿ ಸಹಿಸುತ್ತಿಲ್ಲ. ಹೀಗಾಗಿ ಲಕ್ಷ್ಮಿ ಹೆಬ್ಬಾಳ್ಕರ್ ತೇಜೋವಧೆಗೆ ಇಳಿದಿದ್ದಾರೆ. ಭಾರತ ಮಾತಾಕೀ ಜೈ ಎನ್ನುವ ಸಿ.ಟಿ ರವಿ ಮಹಿಳೆಯರ ಬಗ್ಗೆ ಅಶ್ಲಿಲವಾಗಿ ಮಾತಾಡಿದ್ದಾರೆ. ಬಿಜೆಪಿ ನಾಯಕರು ಇನ್ನು ಪರಿಶೀಲನೆ ಮಾಡಬೇಕಿತ್ತು ಎನ್ನುತ್ತಿದ್ದಾರೆ. ನಿಮ್ಮ ಮನೆ ಹೆಣ್ಣುಮಕ್ಕಳಿಗೆ ಈ ಮಾತು ಹೇಳಿದರೆ ಪರಿಶೀಲನೆ ಮಾಡುತ್ತಾ ಕೂರುತ್ತಿದ್ದಿರಾ? ಕೂಡಲೇ ಸಿ.ಟಿ ರವಿ ಮತ್ತು ಬಿಜೆಪಿ ನಾಯಕರು ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸಿ.ಟಿ ರವಿ ಕೇಸ್ ಬೆಂಗಳೂರಿಗೆ ಶಿಫ್ಟ್ – ಬೆಳಗಾವಿ ಕೋರ್ಟ್ ಆದೇಶ
ನವದೆಹಲಿ: ಭಾರತೀಯ ಯುವ ಕಾಂಗ್ರೆಸ್ (Congress) ಅಧ್ಯಕ್ಷ ಬಿವಿ ಶ್ರೀನಿವಾಸ್ (BV Srinivas) ಅವರ ವಿರುದ್ಧದ ಕಿರುಕುಳ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ (Supreme Court) ಬುಧವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ಸಂಜಯ್ ಕರೋಲ್ ಅವರಿದ್ದ ಪೀಠವು ಜಾಮೀನು ನೀಡಿದೆ.
ಜಾಮೀನು ಅರ್ಜಿ ವಿಚಾರಣೆ ವೇಳೆ ಪ್ರಕರಣದ ಎಫ್‍ಐಆರ್ ದಾಖಲಿಸಲು ವಿಳಂಬ ಮಾಡಿರುವುದನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದೆ. ಅಲ್ಲದೆ ನಿರೀಕ್ಷಣಾ ಜಾಮೀನು ಪಡೆಯಲು ಶ್ರೀನಿವಾಸ್ ಅವರು ಅರ್ಹರು ಎಂದು ಕೋರ್ಟ್ ಹೇಳಿದೆ. 50,000 ರೂ. ಬಾಂಡ್ ಪಡೆದು ಜಾಮೀನು ನೀಡಿದ ನ್ಯಾಯಾಲಯ ತನಿಖೆಗೆ ಸಹಕರಿಸುವಂತೆ ಸೂಚಿಸಿತು. ಈ ವೇಳೆ ಅಸ್ಸಾಂ ಸರ್ಕಾರಕ್ಕೆ ಸುಪ್ರೀಂ ನೋಟಿಸ್ ಜಾರಿ ಮಾಡಿದೆ. ಇದನ್ನೂ ಓದಿ: ಹಿಂಡನ್‍ಬರ್ಗ್ ಪ್ರಕರಣ – ಮೂರು ತಿಂಗಳಲ್ಲಿ ತನಿಖೆಯ ಪ್ರಗತಿ ತೋರಿಸಲು ಸೆಬಿಗೆ ಸುಪ್ರೀಂ ಸೂಚನೆ
ಶ್ರೀನಿವಾಸ್ ತಮ್ಮ ವಿರುದ್ಧ ದಾಖಲಾಗಿರುವ ಎಫ್‍ಐಆರ್ ರದ್ದುಗೊಳಿಸುವಂತೆ ಗುವಾಹಟಿ ಹೈಕೋರ್ಟ್ (Gauhati High Court) ಮೆಟ್ಟಿಲೇರಿದ್ದರು. ಎಫ್‍ಐಆರ್ ದಾಖಲಿಸಲು ಅಸ್ಸಾಂ (Assam) ಪೊಲೀಸರಿಗೆ ಯಾವುದೇ ಅಧಿಕಾರವಿಲ್ಲ ಎಂದು ಆರೋಪಿಸಿದ್ದರು. ಆದರೆ ಹೈಕೋರ್ಟ್ ಮನವಿಯನ್ನು ತಿರಸ್ಕರಿಸಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅವರು ಸುಪ್ರೀಂ ಮೊರೆ ಹೋಗಿದ್ದರು.
ಮಾ. 25 ರಂದು ರಾಯ್‍ಪುರದ ಮೇಫೇರ್ ಹೋಟೆಲ್‍ನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಸರ್ವಸದಸ್ಯರ ಅಧಿವೇಶನದ ವೇಳೆ ಶ್ರೀನಿವಾಸ್ ಹೋಟೆಲ್‍ನಲ್ಲಿ ಥಳಿಸಿದ್ದರು. ತನ್ನ ತೋಳುಗಳನ್ನು ಹಿಡಿದುಕೊಂಡು ದೌರ್ಜನ್ಯ ಎಸಗಿದ್ದರು. ಅಶ್ಲೀಲ ಮಾತುಗಳಿಂದ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಅಸ್ಸಾಂ ಯುವ ಕಾಂಗ್ರೆಸ್‍ನ ಮಾಜಿ ಅಧ್ಯಕ್ಷೆ ಅಂಗಿತಾ ದತ್ತಾ ಅವರು ದೂರು ನೀಡಿದ್ದರು. ಅಲ್ಲದೆ ಅವರ ವರ್ತನೆ ಬಗ್ಗೆ ಕಾಂಗ್ರೆಸ್‍ನ ಉನ್ನತ ನಾಯಕರಿಗೆ ತಿಳಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದತ್ತಾ ಆರೋಪಿಸಿದ್ದರು.
ನವದೆಹಲಿ: ಲೈಂಗಿಕ ಕಿರುಕುಳ ಆರೋಪದ ಮೇಲೆ ದಾಖಲಾದ ಎಫ್‍ಐಆರ್ ರದ್ದುಗೊಳಿಸುವಂತೆ ಯುವ ಕಾಂಗ್ರೆಸ್ (Youth Congress) ಘಟಕದ ಅಧ್ಯಕ್ಷ ಶ್ರೀನಿವಾಸ್ ಬಿವಿ (Srinivas BV) ಸೋಮವಾರ ಸುಪ್ರೀಂ (Supreme Court) ಮೊರೆ ಹೋಗಿದ್ದಾರೆ. ಕಳೆದ ವಾರ ಗುವಾಹಾಟಿ ಹೈಕೋರ್ಟ್ (Gauhati High Court) ನಿರೀಕ್ಷಣಾ ಜಾಮೀನು ಹಾಗೂ ಎಫ್‍ಐಆರ್ (FIR) ರದ್ದುಗೊಳಿಸಲು ನಿರಾಕರಿಸಿದ ನಂತರ ಅವರು ಬಂಧನದ ಭೀತಿ ಎದುರಿಸುತ್ತಿದ್ದಾರೆ.
ಅರ್ಜಿದಾರರ ಪರ ಹಿರಿಯ ವಕೀಲ ದೇವದತ್ತ ಕಾಮತ್ ಅವರು ತುರ್ತು ವಿಚಾರಣೆ ಕೋರಿ ಸಿಜೆಐ (CJI) ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ.ಎಸ್ ನರಸಿಂಹ ಮತ್ತು ಜೆ.ಬಿ ಪರ್ದಿವಾಲಾ ಅವರ ಪೀಠದ ಮುಂದೆ ಈ ಮನವಿಯನ್ನು ಪ್ರಸ್ತಾಪಿಸಿದ್ದಾರೆ. ಪೀಠವು ಮುಂದಿನ ವಾರ ವಿಚಾರಣೆ ನಡೆಸುವ ಸಾಧ್ಯತೆಯಿದೆ. ಇದನ್ನೂ ಓದಿ: ಶ್ರೀನಿವಾಸ್ ಬಿವಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ – ಕಾಂಗ್ರೆಸ್ ಯುವ ನಾಯಕಿಗೆ ಗೇಟ್ ಪಾಸ್
ಛತ್ತೀಸ್‍ಗಢದಲ್ಲಿ ನಡೆದಿದೆ ಎನ್ನಲಾದ ಅಪರಾಧವನ್ನು ತನಿಖೆ ಮಾಡಲು ಅಥವಾ ಎಫ್‍ಐಆರ್ ದಾಖಲಿಸಲು ಅಸ್ಸಾಂ (Assam) ಪೊಲೀಸರಿಗೆ ಯಾವುದೇ ಅಧಿಕಾರವಿಲ್ಲ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಶ್ರೀನಿವಾಸ್ ನಿರಂತರವಾಗಿ ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು. ಅಶ್ಲೀಲ ಮಾತುಗಳಿಂದ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಅಸ್ಸಾಂ ಯುವ ಕಾಂಗ್ರೆಸ್‍ನ (Youth Congress) ಮಾಜಿ ಅಧ್ಯಕ್ಷೆ ಅಂಗಿತಾ ದತ್ತಾ ಅವರು ದೂರು ನೀಡಿದ್ದರು. ಅಲ್ಲದೆ ಅವರ ವರ್ತನೆ ಬಗ್ಗೆ ಕಾಂಗ್ರೆಸ್‍ನ ಉನ್ನತ ನಾಯಕರಿಗೆ ತಿಳಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದತ್ತಾ ಆರೋಪಿಸಿದ್ದರು.
ದೂರಿನ ಮೇರೆಗೆ ಶ್ರೀನಿವಾಸ್ ವಿರುದ್ಧ ಐಪಿಸಿ ಸೆಕ್ಷನ್ 352 (ಆಕ್ರಮಣ ಅಥವಾ ಕ್ರಿಮಿನಲ್ ಬಲ ಪ್ರಯೋಗ), 354 (ಹಲ್ಲೆ), ಮತ್ತು 354ಎ (ಲೈಂಗಿಕ ಕಿರುಕುಳ) ಅಡಿಯಲ್ಲಿ ಎಫ್‍ಐಆರ್ ದಾಖಲಾಗಿದೆ.
ಶ್ರೀನಿವಾಸ್ ಅವರಿಗೆ ಅಧಿಕಾರಿಗಳ ಮುಂದೆ ಖುದ್ದಾಗಿ ಹಾಜರಾಗುವಂತೆ ದಿಸ್ಪುರ್ ಪೊಲೀಸರು ನೋಟಿಸ್ ನೀಡಿದ್ದರು. ಈ ವೇಳೆ ರಾಜಕೀಯ ವಿವಾದಗಳಿಂದ ತಮ್ಮ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಅವರು ಆರೋಪಿಸಿದ್ದರು. ಅಲ್ಲದೆ ನಿರೀಕ್ಷಣಾ ಜಾಮೀನು ಪಡೆಯಲು ಹಾಗೂ ವಿಚಾರಣೆಗೆ ತಡೆ ನೀಡುವಂತೆ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಎಫ್‍ಐಆರ್ ರಾಜಕೀಯ ಪ್ರೇರಿತವಾಗಿ ಕಂಡು ಬರುತ್ತಿಲ್ಲ ಎಂದು ಅವರ ಮನವಿಯನ್ನು ತಿರಸ್ಕರಿಸಿತ್ತು.
ನವದೆಹಲಿ: ಭಾರತೀಯ ಯುವ ಕಾಂಗ್ರೆಸ್ (Congress) ಅಧ್ಯಕ್ಷ ಶ್ರೀನಿವಾಸ್ ಬಿ.ವಿ ವಿರುದ್ಧ ಕಿರುಕುಳ ಮತ್ತು ತಾರತಮ್ಯ ಆರೋಪ ಮಾಡಿದ್ದ ಅಸ್ಸಾಂ ಕಾಂಗ್ರೆಸ್ ತನ್ನ ಯುವ ಘಟಕದ ಮುಖ್ಯಸ್ಥೆ ಅಂಗಿತಾ ದತ್ತಾ (Angkita Dutta) ಅವರನ್ನು ಅಮಾನತುಗೊಳಿಸಿದೆ. ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ.
ಯುವ ನಾಯಕಿ ಬುಧವಾರ ಶ್ರೀನಿವಾಸ್ ವಿರುದ್ಧ ದಿಸ್ಪುರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಗುರುವಾರ ಅಸ್ಸಾಂ ಪೊಲೀಸರ ಅಪರಾಧ ತನಿಖಾ ಇಲಾಖೆ (CID) ಅವರನ್ನು ಕರೆಸಿತ್ತು. ಈ ವೇಳೆ ಕಾಂಗ್ರೆಸ್ ನಾಯಕನನ್ನು ಕಾಮುಕ ಮತ್ತು ಕೋಮುವಾದಿ ಎಂದು ಅವರು ಆರೋಪಿಸಿದ್ದರು. ಆರೋಪದ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗವೂ ಅಸ್ಸಾಂ ಪೊಲೀಸರಿಗೆ ತನಿಖೆ ನಡೆಸುವಂತೆ ಹೇಳಿತ್ತು.
ಕಾಂಗ್ರೆಸ್, ಕರ್ನಾಟಕ ವಿಧಾನಸಭಾ ಚುನಾವಣೆಯವರೆಗೆ ಕಾಯುವಂತೆ ಅವರನ್ನು ಕೇಳಿಕೊಂಡಿತ್ತು. ಚುನಾವಣೆಯ ನಂತರ ಪಕ್ಷದ ಹೈಕಮಾಂಡ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೊಂದಿಗೆ ವಿಷಯವನ್ನು ಚರ್ಚಿಸುವುದಾಗಿ ಹೇಳಿತ್ತು. ಆದರೆ ಅವರು ಕಾಯದೇ ಪೊಲೀಸ್ ದೂರು ನೀಡಿದ್ದಾರೆ. ನಂತರ ಸಿಐಡಿವರೆಗೆ ವಿಚಾರವನ್ನು ತೆಗೆದುಕೊಂಡು ಹೋಗಿದ್ದಾರೆ. ಪಕ್ಷವು ಇದನ್ನು ಪಕ್ಷದ ಘನತೆಗೆ ಧಕ್ಕೆ ತರಲು ಎಂದು ಭಾವಿಸುತ್ತದೆ. ಶೋಕಾಸ್‍ಗೆ ಅವರ ಉತ್ತರವು ತೃಪ್ತಿಕರವಾಗಿಲ್ಲ ಎಂದು ಅಸ್ಸಾಂ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ದೇಬಬ್ರತ ಸೈಕಿಯಾ ಹೇಳಿದ್ದಾರೆ.
ಯುವ ನಾಯಕಿಯ ದೂರಿನ ಆಧಾರದ ಮೇಲೆ ಸಿಐಡಿ (CID) ಶ್ರೀನಿವಾಸ್ ವಿರುದ್ಧ ಎಫ್‍ಐಆರ್ ದಾಖಲಿಸುವ ಸಾಧ್ಯತೆಯಿದೆ ಮತ್ತು ಈ ವಿಷಯದ ಬಗ್ಗೆ ಸಮಗ್ರ ತನಿಖೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.
ಐವೈಸಿ (IYC) ನಾಯಕ ವರ್ಧನ್ ಯಾದವ್ ಮೇಲೂ ಆರೋಪ ಮಾಡಿದ್ದು, ತಮ್ಮ ಲಿಂಗದ ಆಧಾರದ ಮೇಲೆ ತನ್ನ ವಿರುದ್ಧ ತಾರತಮ್ಯ ಮಾಡಿದ್ದಾರೆ ಮತ್ತು ಬೆದರಿಕೆ ಹಾಕಲು ಅಸಭ್ಯ ಭಾಷೆ ಬಳಸಿದ್ದಾರೆ ಎಂದು ಯುವ ನಾಯಕಿ ದೂರಿದ್ದರು.
ಈ ವಿಷಯದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ (Priyanka Gandhi ) ಸೇರಿದಂತೆ ಪಕ್ಷದ ನಾಯಕರಿಗೆ ತಿಳಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಹೇಳಿದ್ದರು.
ಕಾಂಗ್ರೆಸ್ ಪಕ್ಷವು ಗುರುವಾರ ಆಕೆಗೆ ಶೋಕಾಸ್ ನೋಟಿಸ್ ಜಾರಿ ಮಾಡಿ, 24 ಗಂಟೆಯೊಳಗೆ ಆಕೆಯ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವ ಎಚ್ಚರಿಕೆ ನೀಡಿ ವಿವರಣೆ ಕೇಳಿತ್ತು.
ಮುಂಬರುವ ಚುನಾವಣೆಯಲ್ಲಿ (Election) ಕರ್ನಾಟಕ (Karnataka) ಕಾಂಗ್ರೆಸ್ ಪರವಾಗಿ ಪ್ರಚಾರ ನಡೆಸುತ್ತಿರುವ ಶ್ರೀನಿವಾಸ್ ಅವರು ತಮ್ಮ ವಿರುದ್ಧ ಅಸಂಸದೀಯ ಮತ್ತು ಮಾನಹಾನಿಕರ ಪದಗಳನ್ನು ಬಳಸಿದ್ದಕ್ಕಾಗಿ ದೂರುದಾರರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಮತ್ತು ಆರೋಪಗಳನ್ನು ನಿರಾಕರಿಸಿದ್ದಾರೆ.
ದಿಸ್ಪುರ್: ಭಾರತೀಯ ಯುವ ಕಾಂಗ್ರೆಸ್ (Indian Youth Congress ) ಅಧ್ಯಕ್ಷ ಶ್ರೀನಿವಾಸ್ ಬಿ.ವಿ (Srinivas BV) ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ ತನ್ನ ಲಿಂಗದ ಬಗ್ಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಐವೈಸಿ ಅಸ್ಸಾಂ ಘಟಕದ ಮುಖ್ಯಸ್ಥೆ ಅಂಗಿತಾ ದತ್ತಾ (Angkita Dutta) ಆರೋಪಿಸಿದ್ದಾರೆ.
ಶ್ರೀನಿವಾಸ್ ವಿರುದ್ಧ ದೂರುಗಳಿದ್ದರೂ ಯಾವುದೇ ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ (Priyanka Gandhi) ಹಾಗೂ ಅವರ ಸಹೋದರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ (Rahul Gandhi) ವಿರುದ್ಧ ಸಹ ದತ್ತಾ ಅವರು ಸರಣಿ ಟ್ವೀಟ್‍ಗಳಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಅಣ್ಣಾಮಲೈ ವಿರುದ್ಧವೂ ಕಿಡಿಕಾರಿದ ಜಗದೀಶ್ ಶೆಟ್ಟರ್
ಅಸ್ಸಾಂನ ತರುಣ್ ಗೊಗೊಯ್ ಅವರ ಸರ್ಕಾರದಲ್ಲಿ ಸಚಿವರಾಗಿದ್ದ ಮತ್ತು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥರಾಗಿದ್ದ ಅಂಜನ್ ದತ್ತಾ ಅವರ ಪುತ್ರಿಯಾಗಿರುವ ಅಂಗಿತಾ ದತ್ತಾ ಅವರ ಈ ಆರೋಪ ಈಗ ಯುವ ಕಾಂಗ್ರೆಸ್‍ನಲ್ಲಿ ಬಿರುಗಾಳಿ ಎಬ್ಬಿಸಿದೆ.
ಶ್ರೀನಿವಾಸ್ ಬಿ.ವಿ, ನನಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ. ಮತ್ತು ನನ್ನ ಲಿಂಗದ ಆಧಾರದ ಮೇಲೆ ತಾರತಮ್ಯ ಮಾಡುತ್ತಿದ್ದಾರೆ. ಈ ಬಗ್ಗೆ ಅನೇಕ ಬಾರಿ ಪಕ್ಷದ ರಾಷ್ಟ್ರೀಯ ನಾಯಕರ ಗಮನಕ್ಕೆ ತರಲಾಗಿದೆ. ಆದರೂ ಈ ಬಗ್ಗೆ ಕ್ರಮ ಕೈಗೊಂಡಿಲ್ಲ ಎಂದು ದತ್ತಾ ಅವರು ದೂರಿದ್ದಾರೆ. ಅಲ್ಲದೆ ಅವರು ತಮ್ಮ ರಾಹುಲ್ ಗಾಂಧಿ, ಕೆ.ಸಿ ವೇಣುಗೋಪಾಲ್ ಮತ್ತು ಪ್ರಿಯಾಂಕಾ ಗಾಂಧಿಯವರಿಗೆ ಟ್ವೀಟ್ ಮಾಡಿ ಟ್ಯಾಗ್ ಮಾಡಿದ್ದಾರೆ.
ಕಿರುಕುಳ ನೀಡಿದ ಶ್ರೀನಿವಾಸ್ ವಿರುದ್ಧ ಕ್ರಮ ಕೈಗೊಳ್ಳುತ್ತಾರೆ ಎಂದು ಹಲವಾರು ತಿಂಗಳಿಂದ ಸುಮ್ಮನಿದ್ದೆ. ಆದರೂ ಈ ಬಗ್ಗೆ ಯಾರು ಕ್ರಮಕ್ಕೆ ಮುಂದಾಗುತ್ತಿಲ್ಲ. ನಿರಂತರವಾಗಿ ಕಿರುಕುಳ ನೀಡುವ ಒಬ್ಬ ಕಾಮುಕ ಹಾಗೂ ಕೋಮುವಾದಿಯನ್ನು ಹೇಗೆ ಸಹಿಸುವುದು? ಪ್ರಿಯಾಂಕಾ ಗಾಂಧಿಯವರ ಮಹಿಳೆಯರ ಪರ ನಿಲುವುಗಳು ಈಗ ಏನಾಯಿತು? ಪಕ್ಷದ ಭಾರತ್ ಜೋಡೋ (Bharat Jodo Yatra) ಯಾತ್ರೆಯ ಸಂದರ್ಭದಲ್ಲಿ ಜಮ್ಮುವಿನಲ್ಲಿ (Jammu) ರಾಹುಲ್ ಗಾಂಧಿ ಅವರನ್ನು ಸಂಪರ್ಕಿಸಿದ್ದೆ ಅವರ ಮೇಲೆ ಬಹಳ ನಂಬಿಕೆ ಇತ್ತು. ಆದರೆ ಗಮನಕ್ಕೆ ತಂದು ಹಲವು ತಿಂಗಳು ಕಳೆದರೂ ಈ ಬಗ್ಗೆ ವಿಚಾರಣೆ ಆಗಿಲ್ಲ ಎಂದು ಹೇಳಿಕೊಂಡಿದ್ದಾರೆ.
ಮಹಿಳಾ ನಾಯಕಿಯಾದ ನಾನೇ ಕಿರುಕುಳಕ್ಕೆ ಒಳಗಾಗಿದ್ದು, ಕಾಂಗ್ರೆಸ್ ಸೇರಲು ಮಹಿಳೆಯರನ್ನು ಹೇಗೆ ಪ್ರೋತ್ಸಾಹಿಸಬೇಕು? ಇದು ಸುರಕ್ಷಿತ ಸ್ಥಳವೇ? ಎಂದು ಪ್ರಶ್ನಿಸಿದ್ದಾರೆ.
ಹಿಂದಿನ ಅಧ್ಯಕ್ಷ ಕೇಶವ್ ಕುಮಾರ್ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಾಗ ಅವರನ್ನು ತೆಗೆದುಹಾಕಲು ಒತ್ತಾಯಿಸಲಾಯಿತು. ಈಗ ಆರು ತಿಂಗಳಿಂದ ಶ್ರೀನಿವಾಸ್ ಅವರಿಂದ ಮಾನಸಿಕ ಕಿರುಕುಳ ಮತ್ತು ತಾರತಮ್ಯಕ್ಕೆ ಒಳಗಾಗಿದ್ದರೂ, ನನಗೆ ಮೌನವಾಗಿರಲು ಹೇಳಲಾಗಿದೆ ಮತ್ತು ಯಾವುದೇ ವಿಚಾರಣೆಯನ್ನು ಪ್ರಾರಂಭಿಸಿಲ್ಲ. ಶ್ರೀನಿವಾಸ್ ಬಹಳ ಪ್ರಭಾವಶಾಲಿ ವ್ಯಕ್ತಿ, ದೊಡ್ಡ ನಾಯಕರ ಕೃಪೆ ಹೊಂದಿದ್ದಾರೆ ಎಂದು ಅಸಮಧಾನ ಹೊರ ಹಾಕಿದ್ದಾರೆ.
ಶ್ರೀನಿವಾಸ್ ವಿರುದ್ಧ ಕ್ಷುಲ್ಲಕ ಆರೋಪ ಮಾಡಲಾಗಿದೆ. ಅವರ ವಿರುದ್ಧ ಮಾನಹಾನಿ ಹಾಗೂ ಅಸಂಸದೀಯ ಪದಗಳನ್ನು ಬಳಕೆ ಮಾಡಲಾಗಿದೆ. ಅದಕ್ಕಾಗಿ ದತ್ತಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಪಕ್ಷದ ಕಾನೂನು ವಿಭಾಗ ಟ್ವೀಟ್‍ನಲ್ಲಿ ತಿಳಿಸಿದೆ.
ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ, ಶ್ರೀನಿವಾಸ್ ವಿರುದ್ಧ ದತ್ತಾ ಅವರ ಸರಣಿ ಟ್ವೀಟ್ ಬಳಸಿ, ಮಹಿಳೆಯರಿಗೆ ಕಿರುಕುಳ ನೀಡುವುದು ಕಾಂಗ್ರೆಸ್‍ನಲ್ಲಿ ಸರ್ವೇಸಾಮಾನ್ಯವಾಗಿದೆ ಎಂದು ಬರೆದುಕೊಂಡಿದ್ದಾರೆ.
ನವದೆಹಲಿ: ಜಾರಿ ನಿರ್ದೇಶನಾಲಯದ ಕಚೇರಿ ಹೊರ ಭಾಗ ಕಾಂಗ್ರೆಸ್ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದು, ಈ ನಡುವೆ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿವಿ ಪೊಲೀಸರಿಂದ ತಪ್ಪಿಸಕೊಳ್ಳಲು ಎದ್ನೋ ಬಿದ್ನೋ ಎಂಬತೆ ಓಟಕ್ಕಿತ್ತಿರುವ ವೀಡಿಯೋವೊಂದು ಭಾರೀ ವೈರಲ್ ಆಗಿದೆ.
ವಿಪರ್ಯಾಸವೆಂದರೆ ಇದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಶ್ರೀನಿವಾಸ್, ತಾವು ಪೊಲೀಸರಿಗೆ ಎಂದೂ ಹೆದರುವುದಿಲ್ಲ, ಹಣಕಾಸಿನ ವಿಚಾರದಲ್ಲಿ ಇಡಿ ಹಗರಣಕ್ಕೆ ಸಿಲುಕಿರುವ ರಾಹುಲ್ ಗಾಂಧಿಯವರನ್ನು ಬೆಂಬಲಿಸಲು ಕಾಂಗ್ರೆಸ್ ಕಾರ್ಯಕರ್ತರು ಖಂಡಿತವಾಗಿಯೂ ಮೆರವಣಿಗೆ ನಡೆಸಲಿದ್ದಾರೆ ಎಂದು ಹೇಳಿದ್ದರು. ಇದನ್ನೂ ಓದಿ: ED ವಿಚಾರಣೆಗೆ ರಾಹುಲ್ ಹಾಜರ್ – ಪಾದಯಾತ್ರೆ ಮೂಲಕ ಕಾರ್ಯಕರ್ತರಿಂದ ಬೆಂಬಲ
ನವದೆಹಲಿ: ಕೇಂದ್ರ ಸರ್ಕಾರ ಕೃಷಿ ಕಾನೂನು ವಾಪಸ್ ಪಡೆದುಕೊಂಡಿರುವುದು ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಯೂಥ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಹೇಳಿದ್ದಾರೆ.
ದೆಹಲಿಯಲ್ಲಿ ಪಬ್ಲಿಕ್ ಟಿವಿಗೆ ಜೊತೆಗೆ ಮಾತನಾಡಿದ ಅವರು, ಗಾಂಧಿಯ ಶಾಂತಿಯ ತತ್ವ ಮತ್ತೊಮ್ಮೆ ಸಾಬೀತಾಗಿದೆ. ಶಾಂತಿಯುತ ಹೋರಾಟದಿಂದ ಎಲ್ಲವನ್ನೂ ಗೆಲ್ಲಬಹುದಾಗಿದೆ, ಅನ್ನದಾತರು ಇದನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಸರ್ಕಾರ ಅನ್ನದಾತನ ಮುಂದೆ ಮಂಡಿಯೂರಿದೆ: ಡಿ.ಕೆ. ಶಿವಕುಮಾರ್
अब तक काले कृषि कानूनों के
फायदे बताने वाले सरकारी पत्रकार,
ನೂರಾರು ರೈತರು ಹುತಾತ್ಮರಾದರೂ ಅನ್ನದಾತರು ಶಾಂತಿಯುತ ಪ್ರತಿಭಟನೆ ನಡೆಸಿದರು. ಮುಂಬರುವ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ನಿರ್ಧಾರ ಬಿಜೆಪಿ ತೆಗೆದುಕೊಂಡಿದೆ. ಬೈ ಎಲೆಕ್ಷನ್ ನಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಆತಂರಿಕ ವರದಿಯಲ್ಲಿ ನೆಗೆಟಿವ್ ರಿಪೋರ್ಟ್ ಬಂದಿದೆ. ಇದಕ್ಕೆ ಬೆದರಿರುವ ಮೋದಿ ಸರ್ಕಾರ ಕಾನೂನು ವಾಪಸ್ ಪಡೆದಿದೆ. ಇದು ರೈತರ ಹೋರಾಟಕ್ಕೆ ಸಂದ ಅತಿದೊಡ್ಡ ಜಯವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೃಷಿ ಕಾಯ್ದೆ ವಾಪಸ್ ಪಡೆದ ಮೋದಿ ಸರ್ಕಾರ