Tag: srinivas

  • ಕೊಹ್ಲಿ ಆಯ್ಕೆ ಮಾಡಿದ್ದಕ್ಕೆ ನನ್ನ ಉದ್ಯೋಗ ಹೋಯ್ತು: ವೆಂಗ್‍ಸರ್ಕರ್

    ಕೊಹ್ಲಿ ಆಯ್ಕೆ ಮಾಡಿದ್ದಕ್ಕೆ ನನ್ನ ಉದ್ಯೋಗ ಹೋಯ್ತು: ವೆಂಗ್‍ಸರ್ಕರ್

    ನವದೆಹಲಿ: ಎಸ್ ಬದರಿನಾಥ್ ಬದಲು ವಿರಾಟ್ ಕೊಹ್ಲಿ ಅವರನ್ನು ರಾಷ್ಟ್ರೀಯ ತಂಡಕ್ಕೆ ಆಯ್ಕೆ ಮಾಡಿ ನಾನು ವೃತ್ತಿಜೀವನನ್ನು ತ್ಯಾಗ ಮಾಡಬೇಕಾಯಿತು ಎಂಬ ಸ್ಫೋಟಕ ಮಾಹಿತಿಯನ್ನು ಟೀಂ ಇಂಡಿಯಾ ಮಾಜಿ ನಾಯಕ, ಮಾಜಿ ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ದಿಲೀಪ್ ವೆಂಗ್ ಸರ್ಕರ್ ಬಿಚ್ಚಿಟ್ಟಿದ್ದಾರೆ.

    ಮುಂಬೈ ಕಾರ್ಯಕ್ರಮವೊಂದರಲ್ಲಿ ಬುಧವಾರ ಮಾತನಾಡಿದ ಅವರು, 2008 ರಲ್ಲಿ ಟೀಂ ಇಂಡಿಯಾ ಆಯ್ಕೆ ಸಮಿತಿಯ ಮುಖ್ಯಸ್ಥರಾಗಿದ್ದ ವೇಳೆ ವಿರಾಟ್ ಕೊಹ್ಲಿ ರನ್ನು ರಾಷ್ಟ್ರೀಯ ತಂಡಕ್ಕೆ ಆಯ್ಕೆ ಮಾಡಿದೆ. ಆದರೆ ಈ ವೇಳೆ ಬಿಸಿಸಿಐ ಖಜಾಂಚಿಯಾಗಿದ್ದ ಶ್ರೀನಿವಾಸ್ ಅವರು ತಮ್ಮ ಮಾಲೀಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ತಮಿಳುನಾಡು ಆಟಗಾರರ ಎಸ್ ಬದರಿನಾಥ್ ಅವರನ್ನು ಆಯ್ಕೆ ಮಾಡಲು ಮನಸ್ಸು ಮಾಡಿದ್ದರು ಎಂದು ಹೇಳಿದ್ದಾರೆ.

    2008 ಅಂಡರ್ 19 ವಿಶ್ವಕಪ್ ಬಳಿಕ ಟೀಂ ಇಂಡಿಯಾ ಶ್ರೀಲಂಕಾ ಪ್ರವಾಸ ಆಯೋಜನೆಯಾಗಿತ್ತು. ಈ ಸರಣಿಗೆ ಶ್ರೀನಿವಾಸ್ ಅವರು 29 ವರ್ಷದ ಬದರಿನಾಥ್ ಅವರನ್ನು ಆಯ್ಕೆ ಮಾಡಲು ಇಚ್ಛಿಸಿದ್ದರು. ಆದರೆ ನಾನು 19 ವರ್ಷದ ಕೊಹ್ಲಿ ರನ್ನು ಆಯ್ಕೆ ಮಾಡಿದೆ. ಬಳಿಕ ನನಗೆ ಕರೆ ಮಾಡಿದ್ದ ಶ್ರೀನಿವಾಸ್ ಅವರು ಈ ಆಯ್ಕೆ ಕುರಿತು ಅಸಮಾಧಾನವನ್ನು ಹೊರಹಾಕಿದ್ದರು. ಇದಾದ ಬಳಿಕ ನಾನು ಆಯ್ಕೆ ಸಮಿತಿಯ ಮುಖ್ಯಸ್ಥ ಸ್ಥಾನ ಕಳೆದು ಕೊಳ್ಳಬೇಕಾಯಿತು ಎಂದು ಅಂದಿನ ಘಟನೆಯನ್ನು ನೆನಪಿಸಿಕೊಂಡಿದ್ದಾರೆ.

    ಅಂದು ನಾನು ಕೊಹ್ಲಿ ಅವರಿಗೆ ಅವಕಾಶ ನೀಡದೆ ಹೋಗಿದ್ದರೆ ಮತ್ತೆ ಅವರಿಗೆ ಅವಕಾಶ ಸಿಗುತಿತ್ತೋ ಗೊತ್ತಿಲ್ಲ. ಆದರೆ ಅಂದು ನಾನು ಕೊಹ್ಲಿ ಅವರ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದೆ. ನನ್ನ ನಿರ್ಧಾರ ಅಂದು ಟೀಂ ಇಂಡಿಯಾ ನಾಯಕರಾಗಿದ್ದ ಧೋನಿ ಹಾಗೂ ಕೋಚ್ ಆಗಿದ್ದ ಗ್ಯಾರಿ ಕಸ್ಟರ್ನ್ ಅವರಿಗೂ ಸಹಮತವಿರಲಿಲ್ಲ. ಆದರೆ ನನ್ನ ಅಭಿಪ್ರಾಯಕ್ಕೆ ಆಯ್ಕೆ ಸಮಿತಿಯ ಸಹಮತವಿತ್ತು. ಆದರೆ ಮರುದಿನ ಆಯ್ಕೆ ಸಮಿತಿ ಅಧ್ಯಕ್ಷ ಸ್ಥಾನದಿಂದ ನನ್ನನ್ನು ಕೈ ಬಿಟ್ಟು ಶ್ರೀಕಾಂತ್ ರನ್ನು ನೇಮಕ ಮಾಡಿದ್ದರು ಎಂದು ಹೇಳಿದರು.  ಇದನ್ನೂ ಓದಿ:  ಧೋನಿಗಿಂತಲೂ ಹೆಚ್ಚು ಸಂಬಳ ಪಡೆಯಲಿದ್ದಾರೆ ಭುವಿ! ಯಾರಿಗೆ ಎಷ್ಟು ಸಂಬಳ? ಇಲ್ಲಿದೆ ಪೂರ್ಣ ಪಟ್ಟಿ

    61 ವರ್ಷದ ವೆಂಗ್ ಸರ್ಕರ್ ಟೀಂ ಇಂಡಿಯಾ ಪರ 116 ಟೆಸ್ಟ್, 129 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಅಲ್ಲದೇ 1983ರ ವಿಶ್ವಕಪ್ ಗೆದ್ದ ತಂಡದ ಸದಸ್ಯರಾಗಿದ್ದರು. 2006 ರಲ್ಲಿ ಆಯ್ಕೆ ಸಮಿತಿ ಮುಖ್ಯಸ್ಥರಾಗಿ 2 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಇದನ್ನೂ ಓದಿ: ಧೋನಿಯನ್ನು ಹಾಡಿ ಹೊಗಳಿದ ಸೌರವ್ ಗಂಗೂಲಿ

  • ಅಗ್ನಿ ಶ್ರೀಧರ್ ಮನೆ ಮೇಲೆ ದಾಳಿ ಹೇಗಾಯ್ತು? ಏನೇನು ಸಿಕ್ಕಿದೆ?

    ಬೆಂಗಳೂರು: ಕಾಂಗ್ರೆಸ್ ಮುಖಂಡ, ಎಪಿಎಂಸಿ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್ ಶೂಟೌಟ್ ಪ್ರಕರಣದಲ್ಲಿ ಇವತ್ತು ಬೆಂಗಳೂರಿನ ಅಂಡರ್ ವರ್ಲ್ಡ್ ಗಢಗಢ ನಡುಗಿದೆ.

    ಈಗಾಗಲೇ ಪೊಲೀಸರ ವಶದಲ್ಲಿರುವ ಬಿಜೆಪಿ ಶಾಸಕರ ಬಲಗೈ ಬಂಟ ಸತೀಶ್ ನೀಡಿದ ಮಾಹಿತಿ ಮೇರೆಗೆ ಇವತ್ತು ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ನೇತೃತ್ವದಲ್ಲಿ ಖ್ಯಾತ ಪತ್ರಕರ್ತ ಅಗ್ನಿ ಶ್ರೀಧರ್ ಅವರ ಇಸ್ರೋ ಲೇಔಟ್ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ

    ಐವರು ಡಿಸಿಪಿಗಳ ತಂಡ ದಾಳಿ ನಡೆಸಿ ರೌಡಿ ಒಂಟೆ ರೋಹಿತ್, ಸೈಲೆಂಟ್ ಸುನೀಲ ಸೇರಿದಂತೆ ಕೆಲ ಆರೋಪಿಗಳನ್ನು ಹುಡುಕಾಡಿದೆ. ಪೊಲೀಸ್ ದಾಳಿ ವೇಳೆ ಅಗ್ನಿ ಶ್ರೀಧರ್ ಮಧ್ಯಾಹ್ನ 3.30ರ ವೇಳೆಗೆ ಲಘು ಹೃದಯಾಘಾತವಾಗಿದ್ದು ಆಂಬುಲೆನ್ಸ್‍ನಲ್ಲೇ ಕುಮಾರಸ್ವಾಮಿ ಲೇಔಟ್‍ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಚ್ಚನ್ ಸೇರಿದಂತೆ ಪೊಲೀಸರು 7 ಮಂದಿಯನ್ನು ಅರೆಸ್ಟ್ ಮಾಡಿದ್ದಾರೆ.

    ದಾಳಿ ಹೇಗಾಯ್ತು?
    ಟಾಟಾ ರಮೇಶ್ ಹಾಗೂ ಕಡಬಗೆರೆ ಶ್ರೀನಿವಾಸ್‍ಗೆ ಒಂಟೆ ರೋಹಿತ್, ಸೈಲೆಂಟ್ ಸುನೀಲ ಬೆದರಿಕೆ ಹಾಕಿದ್ದರು. ಇವರಿಬ್ಬರ ಮೊಬೈಲ್ ಟವರ್ ಲೊಕೇಶನ್ ಬೆನ್ನತ್ತಿದ್ದಾಗ ಇಬ್ಬರು ಪತ್ರಕರ್ತ ಅಗ್ನಿ ಶ್ರೀಧರ್ ಮನೆಯಲ್ಲಿದ್ದಾರೆ ಎನ್ನುವ ಶಂಕೆ ಆಧಾರದಲ್ಲಿ ದಾಳಿ ನಡೆಸಲಾಯಿತು.

    ತಕ್ಷಣ ಸರ್ಚ್ ವಾರೆಂಟ್ ಪಡೆದು ಐವರು ಡಿಸಿಪಿಗಳ ತಂಡದಿಂದ ಏಕಕಾಲಕ್ಕೆ ದಾಳಿ ನಡೆಯುತ್ತದೆ. ಸರ್ಚ್ ವಾರೆಂಟ್ ಇಲ್ಲದ ಕಾರಣ 10 ನಿಮಿಷ ಗೇಟ್ ಮುಂದೆ ಪೊಲೀಸರನ್ನು ಅಗ್ನಿ ಶ್ರೀಧರ್ ನಿಲ್ಲಿಸುತ್ತಾರೆ. ಈ ವೇಳೆ ಅಗ್ನಿ ಶ್ರೀಧರ್ ಮನೆಯಲ್ಲಿದ್ದ 10ಕ್ಕೂ ಹೆಚ್ಚು ಯುವಕರನ್ನು ಪೊಲೀಸರು ವಶಕ್ಕೆ ಪಡೆಯುತ್ತಾರೆ.

    ದಾಳಿ ವೇಳೆ ಮನೆಯಲ್ಲಿ ಲೈಸೆನ್ಸ್ ಇಲ್ಲದ ಗನ್, ಮಾರಕಾಸ್ತ್ರಗಳು ಹಾಗೂ 70 ವಿದೇಶಿ ಮದ್ಯದ ಬಾಟಲ್‍ಗಳು, ಗಾಂಜಾ ಹಾಗೂ ಚಿನ್ನಾಭರಣ ಪತ್ತೆಯಾಗಿದೆ. ಈ ಸಂಬಂಧ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕಾಯ್ದೆಯಡಿ ಅಗ್ನಿ ಶ್ರೀಧರ್ ಮೇಲೆ ಎಫ್‍ಐಆರ್ ದಾಖಲಾಗಿದೆ.

    ಅಗ್ನಿ ಶ್ರೀಧರ್ ಆಪ್ತ, ಭೂಗತಪಾತಕಿ ಚೋಟಾ ರಾಜನ್ ಸಹಚರನಾಗಿದ್ದ ಅಮಾನ್ ಅಲಿಯಾಸ್ ಸೈಯದ್ ಅಮಾನುಲ್ಲಾ ಬಚ್ಚನ್ ನನ್ನು ಪೊಲೀಸರು ಬಂಧಿಸಿದ್ದಾರೆ. ದಯಾನಂದ ಸಾಗರ್ ಆಸ್ಪತ್ರೆಯಲ್ಲಿ ಅಗ್ನಿ ಶ್ರೀಧರ್ ನೋಡಲು ಬಂದ ವೇಳೆ ರಾತ್ರಿ 8.30ರ ವೇಳೆ ಸೈಲೆಂಟ್ ಸುನೀಲನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಸೈಲೆಂಟ್ ಸುನೀಲನ ಗಾಯತ್ರಿನಗರ, ಪ್ರಕಾಶ್ ನಗರ, ಕುಮಾರಸ್ವಾಮಿ ಲೇಔಟ್‍ನ ಮನೆಗಳ ಮೇಲೆ ಪೊಲೀಸರು ಶೋಧ ನಡೆಸಿದ್ದರು.

  • ಮನೆಯಲ್ಲಿ ಪೊಲೀಸರ ಶೋಧ: ಅಗ್ನಿ ಶ್ರೀಧರ್‍ಗೆ ಲಘು ಹೃದಯಾಘಾತ

    ಬೆಂಗಳೂರು: ಬರಹಗಾರ ಅಗ್ನಿ ಶ್ರೀಧರ್‍ಗೆ ಲಘು ಹೃದಯಾಘಾತವಾಗಿದ್ದು, ಕುಮಾರಸ್ವಾಮಿ ಲೇಔಟ್‍ನಲ್ಲಿರುವ ಸಾಗರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಕಡಬಗೆರೆ ಶ್ರೀನಿವಾಸ್ ಹತ್ಯೆ ಸಂಚು ಕೇಸ್‍ನಲ್ಲಿ ರೌಡಿ ಶೀಟರ್ ರೋಹಿತ್ ಕೈವಾಡದ ಶಂಕೆ ಇರುವ ಹಿನ್ನೆಲೆಯಲ್ಲಿ ಇಸ್ರೋ ಲೇಔಟ್‍ನಲ್ಲಿರುವ ಅಗ್ನಿ ಶ್ರೀಧರ್ ಮನೆಯ ಮೇಲೆ ಮಂಗಳವಾರ ಬೆಳಗ್ಗೆ ಪೊಲೀಸರು ದಾಳಿ ನಡೆಸಿ ಶೋಧ ಆರಂಭಿಸಿದ್ದರು.

    ಬೆಳಗ್ಗೆಯಿಂದ ಪೊಲೀಸರ ವಿಚಾರಣೆ ಉತ್ತರಿಸುತ್ತಿದ್ದ ಅಗ್ನಿ ಶ್ರೀಧರ್‍ಗೆ ಮಧ್ಯಾಹ್ನ 3.30ರ ವೇಳೆಗೆ ಲಘು ಹೃದಯಾಘಾತಕ್ಕೆ ತುತ್ತಾದರು. ಕೂಡಲೇ ಅವರನ್ನು ಅಂಬುಲೆನ್ಸ್ ನಲ್ಲಿ ಸಮೀಪದಲ್ಲಿದ್ದ ಸಾಗರ್ ಆಸ್ಪತ್ರೆಗೆ ದಾಖಲಿಸಲಾಯಿತು.

    ಎಪಿಎಂಸಿ ಅಧ್ಯಕ್ಷ ಕಡಬಗೆರೆ ಸೀನ ಹತ್ಯೆಗೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಯಲಹಂಕ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಬಲಗೈ ಬಂಟ ಸತೀಶ್ ಬಂಧನವಾಗಿತ್ತು. ವಿಚಾರಣೆ ವೇಳೆ ಸತೀಶ್ ರೋಹಿತ್ ಮತ್ತು ಸೈಲೆಂಟ್ ಸುನೀಲ್ ಅಗ್ನಿ ಶ್ರೀಧರ್ ಮನೆಯಲ್ಲಿ ಇರುವುದಾಗಿ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

    ಕೋರ್ಟ್‍ನಿಂದ ಸರ್ಚ್ ವಾರೆಂಟ್ ಪಡೆದು ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್, ಡಿಸಿಪಿಗಳಾದ ಹರ್ಷ, ನಾರಾಯಣ್, ಶರಣಪ್ಪ, ಅನುಚೇತ್ ನೇತೃತ್ವದಲ್ಲಿ ಪೊಲೀಸರು ಇಂದು ಫೀಲ್ಡಿಗೆ ಇಳಿದು ಶೋಧ ಆರಂಭಿಸಿದ್ದರು.

  • ಕಡಬಗೆರೆ ಶೂಟೌಟ್ ಕೇಸ್: ಅಗ್ನಿ ಶ್ರೀಧರ್ ಮನೆಯಲ್ಲಿ ಪೊಲೀಸರ ಶೋಧ

    ಬೆಂಗಳೂರು: ಕಡಬಗೆರೆ ಶ್ರೀನಿವಾಸ್ ಹತ್ಯೆ ಸಂಚು ಕೇಸ್‍ನಲ್ಲಿ ರೌಡಿ ಶೀಟರ್ ರೋಹಿತ್ ಕೈವಾಡದ ಶಂಕೆ ಇರುವ ಹಿನ್ನೆಲೆಯಲ್ಲಿ ಬರಹಗಾರ ಅಗ್ನಿ ಶ್ರೀಧರ್ ಮನೆಯ ಮೇಲೆ ಬೆಂಗಳೂರು ಪೊಲೀಸರು ದಾಳಿ ನಡೆಸಿ ಶೋಧ ಆರಂಭಿಸಿದ್ದಾರೆ.

    ಕಡಬಗೆರೆ ಸೀನನ ಆಪ್ತ ರಮೇಶ್‍ಗೆ ರೌಡಿ ರೋಹಿತ್ ಬೆದರಿಕೆ ಹಾಕಿದ್ದ. ಶೂಟೌಟ್ ನಡೆಯುವುದಕ್ಕೂ 4 ದಿನ ಮೊದಲು ರಮೇಶ್ ಮತ್ತು ಕಡಬಗೆರೆ ಶ್ರೀನಿವಾಸ್ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

    ಶೂಟೌಟ್ ನಡೆದ ಬಳಿಕ ಅಗ್ನಿ ಶ್ರೀಧರ್ ಮನೆಯಲ್ಲಿ ರೋಹಿತ್ ಮತ್ತು ಸೈಲೆಂಟ್ ಸುನೀಲ್ ಅಡಗಿರಬಹುದು ಎನ್ನುವ ಶಂಕೆಯ ಆಧಾರದಲ್ಲಿ ಪೊಲೀಸರು ಕೋರ್ಟ್‍ನಿಂದ ಸಂರ್ಚ್ ವಾರೆಂಟ್ ಪಡೆದು ಕುಮಾರಸ್ವಾಮಿ ಲೇಔಟ್ ನಲ್ಲಿರುವ ಮನೆಯಲ್ಲಿ ಶೋಧ ಆರಂಭಿಸಿದ್ದಾರೆ.

    ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್, ಡಿಸಿಪಿಗಳಾದ ಹರ್ಷ, ನಾರಾಯಣ್, ಶರಣಪ್ಪ, ಅನುಚೇತ್ ನೇತೃತ್ವದಲ್ಲಿ ಪೊಲೀಸರು ಇಂದು ಫೀಲ್ಡಿಗೆ ಇಳಿದು ಶೋಧ ಆರಂಭಿಸಿದ್ದಾರೆ.

    ಶ್ರೀಧರ್ ಮನೆಯಲ್ಲಿ ಶೋಧ ಯಾಕೆ?
    ಎಪಿಎಂಸಿ ಅಧ್ಯಕ್ಷ ಕಡಬಗೆರೆ ಸೀನ ಹತ್ಯೆಗೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಯಲಹಂಕ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಬಲಗೈ ಬಂಟ ಸತೀಶ್ ಬಂಧನವಾಗಿತ್ತು. ವಿಚಾರಣೆ ವೇಳೆ ಸತೀಶ್ ರೋಹಿತ್ ಮತ್ತು ಸೈಲೆಂಟ್ ಸುನೀಲ್ ಅಗ್ನಿ ಶ್ರೀಧರ್ ಮನೆಯಲ್ಲಿ ಇರುವುದಾಗಿ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಮೂಲಗಳು ಮಾಹಿತಿ ನೀಡಿವೆ.