Tag: Srinivasa Prasad

  • ಶ್ರೀನಿವಾಸಪ್ರಸಾದ್ ಬಿಜೆಪಿ ತೊರೆಯುವ ಯೋಚನೆ ಮಾಡಿರಲಿಲ್ಲ; `ಕೈ’ ವಿರುದ್ಧ ಸಿಡಿದ ಅಳಿಯ ಹರ್ಷವರ್ಧನ್!

    ಶ್ರೀನಿವಾಸಪ್ರಸಾದ್ ಬಿಜೆಪಿ ತೊರೆಯುವ ಯೋಚನೆ ಮಾಡಿರಲಿಲ್ಲ; `ಕೈ’ ವಿರುದ್ಧ ಸಿಡಿದ ಅಳಿಯ ಹರ್ಷವರ್ಧನ್!

    – ಪ್ರಸಾದ್‌ಗೆ ಮೋದಿ ಬಗ್ಗೆ ಗೌರವವಿತ್ತು ಎಂದ ಮಾಜಿ ಶಾಸಕ

    ಚಾಮರಾಜನಗರ: ಸಂಸದ ದಿವಂಗತ ವಿ. ಶ್ರೀನಿವಾಸಪ್ರಸಾದ್ (Srinivasa Prasad) ಅವರು ಬಿಜೆಪಿ ತೊರೆಯುವ ಬಗ್ಗೆ ಯೋಚನೆ ಮಾಡಿರಲಿಲ್ಲ. ಆದರೂ ಅವರು ಬಿಜೆಪಿ ಬಗ್ಗೆ ಬೇಸರ ಮಾಡಿಕೊಂಡಿದ್ದಾರೆ ಅಂತ ಸುಳ್ಳು ಹಬ್ಬಿಸಿದರು ಎಂದು ಪ್ರಸಾದ್ ಅಳಿಯ, ಮಾಜಿ ಶಾಸಕ ಹರ್ಷವರ್ಧನ್ (Harshavardhan) ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಚಾಮರಾಜನಗರದಲ್ಲಿ (Chamarajanagara) ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಹರ್ಷವರ್ಧನ್, ಶ್ರೀನಿವಾಸಪ್ರಸಾದ್ ಅವರು ಬಿಜೆಪಿ (BJP) ತೊರೆಯುವ ಬಗ್ಗೆ ಯೋಚನೆಯೇ ಮಾಡಿರಲಿಲ್ಲ. ಅವರ ಭಾವನೆಗಳನ್ನು ಕೆಲವರು ಬೇರೆ ರೀತಿ ಅರ್ಥಮಾಡಿಕೊಂಡರು. ತಮಗೆ ಲಾಭ ಆಗುವ ರೀತಿಯಲ್ಲಿ ಬಳಸಿಕೊಂಡರು. ಚುನಾವಣೆ ಸಂದರ್ಭದಲ್ಲಿ ಗೊಂದಲ ಮೂಡಿಸಿದ್ರು. ಶ್ರೀನಿವಾಸಪ್ರಸಾದ್‌ಗೆ ಬಿಜೆಪಿ ಬಗ್ಗೆ ಬೇಸರವಿದೆ ಅಂತ ಸುಳ್ಳು ಹಬ್ಬಿಸಿದ್ರು ಎಂದು ಕಿಡಿ ಕಾರಿದ್ದಾರೆ.

    ಪ್ರಸಾದ್ ಅವರಿಗೆ ಬೇಸರ ಇದ್ದಿದ್ದರೆ, ಬಿಜೆಪಿಗೆ ರಾಜೀನಾಮೆ ನೀಡುತ್ತಿದ್ದರು. ಆದ್ರೆ ಅವರಿಗೆ ಆ ಯೋಚನೆ ಬಂದಿಲ್ಲ. ಏಕೆಂದರೆ ಪ್ರಸಾದ್ ಅವರಿಗೆ ಮೋದಿ ಅವರ ಬಗ್ಗೆ ಅಪಾರ ಗೌರವ ಇತ್ತು. ಅಂಬೇಡ್ಕರ್ ಅವರ 5 ಪುಣ್ಯ ಸ್ಥಳಗಳನ್ನು ಅಭಿವೃದ್ಧಿಪಡಿಸಿದ್ದಕ್ಕೆ ಮೋದಿ ಬಗ್ಗೆ ಅವರಿಗೆ ಹೆಮ್ಮೆ ಇತ್ತು. ಕಾಂಗ್ರೆಸ್ ಮಾಡದ ಕೆಲಸವನ್ನು ಮಾಡಿ ತೋರಿಸಿದೆ ಅಂತಾ ಬಿಜೆಪಿಯನ್ನು ತುಂಬಾ ಹಚ್ಚಿಕೊಂಡಿದ್ದರು ಎಂದು ನುಡಿದಿದ್ದಾರೆ.

    ಕೆಲವರು ಪ್ರಸಾದ್ ಅವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದರು. ಸಿದ್ದರಾಮಯ್ಯ (Siddaramaiah) ಅವರು ಪ್ರಸಾದ್ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ ಅಂತ ಹೇಳಿದ್ದರು. ತಮ್ಮ ಸಚಿವ ಸಂಪುಟದಿಂದ ಶ್ರೀನಿವಾಸಪ್ರಸಾದ್‌ರನ್ನ ತೆಗೆದಾಗ ಏನಾಗಿತ್ತು? ಆಗ ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದು ಸಿದ್ದರಾಮಯ್ಯಗೆ ತಿಳಿದಿರಲಿಲ್ಲವೇ? ಸಂದರ್ಭ ಬರಲಿ, ಇದಕ್ಕೆಲ್ಲ ಉತ್ತರಿಸುತ್ತೇನೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

  • ಬೌದ್ಧ ಧರ್ಮದ ವಿಧಿ-ವಿಧಾನದಂತೆ ಶ್ರೀನಿವಾಸ್ ಪ್ರಸಾದ್ ಅಂತ್ಯಕ್ರಿಯೆ

    ಬೌದ್ಧ ಧರ್ಮದ ವಿಧಿ-ವಿಧಾನದಂತೆ ಶ್ರೀನಿವಾಸ್ ಪ್ರಸಾದ್ ಅಂತ್ಯಕ್ರಿಯೆ

    ಮೈಸೂರು: ಅನಾರೋಗ್ಯದಿಂದ ಮೃತಪಟ್ಟ ಸಂಸದ ವಿ.ಶ್ರೀನಿವಾಸ್ ಪ್ರಸಾದ್ (Srinivasa Prasad) ಅವರ ಅಂತ್ಯಕ್ರಿಯೆ ಅಶೋಕಪುರಂನ ಡಾ.ಬಿ.ಆರ್ ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಬೌದ್ಧ ಧರ್ಮದ ವಿದಿ-ವಿಧಾನದಂತೆ ನೆರವೇರಿತು.

    ಅಂತ್ಯಕ್ರಿಯೆ (Srinivasa Prasad Funeral) ವೇಳೆ ಬೆಂಗಳೂರಿನ ಮಹಾಬೋಧಿಯ ಆನಂದ ಬಂತೇಜಿ, ಮೈಸೂರಿನ ವಿಶ್ವಮೈತ್ರಿ ಬುದ್ಧ ವಿಹಾರದ ಕಲ್ಯಾಣಸಿರಿ ಬಂತೇಜಿ ನೇತೃತ್ವದಲ್ಲಿ ವಿಧಿ-ವಿಧಾನಗಳು ನೆರವೇರಿತು. ಈ ವೇಳೆ ಸುಮಾರು 15ಕ್ಕೂ ಹೆಚ್ಚು ಬೌದ್ಧ ಬಿಕ್ಕುಗಳಿಂದ ಪ್ರಾರ್ಥನೆ ಸಲ್ಲಿಸಲಾಯಿತು. ಬೌದ್ಧ ಬಂತೇಜಿಗಳಿಗೆ ವಸ್ತ್ರದಾನ, ಹಣ್ಣುಗಳ ಅರ್ಪಣೆ, ಪುಣ್ಯಾನುಮೋದನೆ ಬಳಿಕ ಕುಟುಂಬಸ್ಥರು ಗೌರವ ಸಲ್ಲಿಸಿದ ಬಳಿಕ ಅಂತ್ಯಕ್ರಿಯೆ ನೆರವೇರಿಸಲಾಯಿತು. ಇದನ್ನೂ ಓದಿ: ಮರೆಯಾದ ನಿಷ್ಕಳಂಕ ರಾಜಕಾರಣಿ – ಸಿಎಂ, ಡಿಸಿಎಂ ಸೇರಿದಂತೆ ಗಣ್ಯರಿಂದ ಶ್ರೀನಿವಾಸ್ ಪ್ರಸಾದ್ ಅಂತಿಮ ದರ್ಶನ

    ಅಂತ್ಯಕ್ರಿಯೆಗೂ ಮುನ್ನ ಅಶೋಕಪುರಂನ ಪ್ರಮುಖ ರಸ್ತೆಗಳಲ್ಲಿ ಮೃತರ ಪಾರ್ಥಿವ ಶರೀರದ ಮೆರವಣಿಗೆ ನಡೆಯಿತು. ಈ ವೇಳೆ ಸಾವಿರಾರು ಜನ ಸೇರಿದ್ದು, ಅಹಿತಕರ ಘಟನೆಗಳು ಜರುಗದಂತೆ ಪೊಲೀಸ್ ಇಲಾಖೆ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿತ್ತು. ಅಂತ್ಯಕ್ರಿಯೆಗೂ ಮುನ್ನ ಸಚಿವ ಮಹದೇವಪ್ಪ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೈಸೂರು – ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ವಡೆಯರ್, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಗಣ್ಯರು ಅಂತಿಮ ದರ್ಶನ ಪಡೆದಿದ್ದಾರೆ.

    ಮೈಸೂರಿನ ಅಶೋಕಪುರಂನ ಶ್ರೀನಿವಾಸ ಪ್ರಸಾದ್ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ನಂಜನಗೂಡು ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದರು. ಕೇಂದ್ರ ಮತ್ತು ರಾಜ್ಯದಲ್ಲಿ ಒಮ್ಮೆ ಸಚಿವರಾಗಿ ಕೆಲಸ ಮಾಡಿ ಕಳೆದ ತಿಂಗಳು ರಾಜಕೀಯ ನಿವೃತ್ತಿ ಪಡೆದು ವಿಶ್ರಾಂತಿ ಜೀವನ ಆರಂಭಿಸಿದ್ದರು. ಶ್ರೀನಿವಾಸ್ ಪ್ರಸಾದ್ ಅವರಿಗೆ ಪತ್ನಿ ಹಾಗೂ ಮೂವರು ಹೆಣ್ಣು ಮಕ್ಕಳಿದ್ದಾರೆ. ಇದನ್ನೂ ಓದಿ: ಶ್ರೀನಿವಾಸ್‌ ಪ್ರಸಾದ್‌ ವಿಧಿವಶ – ಪ್ರಭಾವಿ ದಲಿತ ನಾಯಕನ ರಾಜಕೀಯ ಏಳು-ಬೀಳಿನ ಹಾದಿ ಹೇಗಿತ್ತು?

  • ಮರೆಯಾದ ನಿಷ್ಕಳಂಕ ರಾಜಕಾರಣಿ – ಸಿಎಂ, ಡಿಸಿಎಂ ಸೇರಿದಂತೆ ಗಣ್ಯರಿಂದ ಶ್ರೀನಿವಾಸ್ ಪ್ರಸಾದ್ ಅಂತಿಮ ದರ್ಶನ

    ಮರೆಯಾದ ನಿಷ್ಕಳಂಕ ರಾಜಕಾರಣಿ – ಸಿಎಂ, ಡಿಸಿಎಂ ಸೇರಿದಂತೆ ಗಣ್ಯರಿಂದ ಶ್ರೀನಿವಾಸ್ ಪ್ರಸಾದ್ ಅಂತಿಮ ದರ್ಶನ

    – ಮಂಗಳವಾರ ಬೌದ್ಧ ಧರ್ಮದ ಪ್ರಕಾರ ಶ್ರೀನಿವಾಸ್ ಅಂತ್ಯಕ್ರಿಯೆ

    ಮೈಸೂರು: ಹಳೆ ಮೈಸೂರು ಭಾಗದ ಪ್ರಭಾವಿ ದಲಿತ ಮುಖಂಡ, ಸ್ವಾಭಿಮಾನಿ ರಾಜಕಾರಣಿ, ದಲಿತ ಸಮುದಾಯದ ಬಹುದೊಡ್ಡ ಧ್ವನಿ, ನಿಷ್ಕಳಂಕ ರಾಜಕೀಯ ಜೀವನ ಪೂರೈಸಿದ್ದ ವಿ. ಶ್ರೀನಿವಾಸ್ ಪ್ರಸಾದ್ (V Srinivasa Prasad) ಅಸ್ತಂಗತರಾಗಿದ್ದಾರೆ. ಈ ಮೂಲಕ ರಾಜ್ಯ ರಾಜಕೀಯದ ಮಹಾನ್ ಕೊಂಡಿ ಕಳಚಿದಂತಾಗಿದೆ.

    ಮೈಸೂರಿನ (Mysuru) ಅಶೋಕಪುರಂನ ಶ್ರೀನಿವಾಸ ಪ್ರಸಾದ್ ಚಾಮರಾಜನಗರ (Chamarajanagar) ಮೀಸಲು ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ನಂಜನಗೂಡು ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದರು. ಕೇಂದ್ರ ಮತ್ತು ರಾಜ್ಯದಲ್ಲಿ ಒಮ್ಮೆ ಸಚಿವರಾಗಿ ಕೆಲಸ ಮಾಡಿ ಕಳೆದ ತಿಂಗಳು ರಾಜಕೀಯ ನಿವೃತ್ತಿ ಪಡೆದು ವಿಶ್ರಾಂತಿ ಜೀವನ ಆರಂಭಿಸಿದ್ದರು. ಶ್ರೀನಿವಾಸ್ ಪ್ರಸಾದ್ ಅವರಿಗೆ ಪತ್ನಿ ಹಾಗೂ ಮೂವರು ಹೆಣ್ಣು ಮಕ್ಕಳಿದ್ದಾರೆ. ಇದನ್ನೂ ಓದಿ: ಪ್ರವಾಸಿಗರೇ ಗಮನಿಸಿ – ಊಟಿ, ಕೊಡೈಕೆನಾಲ್‌ಗೆ ಹೋಗಬೇಕಾದ್ರೆ ಇ-ಪಾಸ್‌ ಕಡ್ಡಾಯ

    ರಾಜ್ಯಶಾಸ್ತ್ರದಲ್ಲಿ ಎಂ.ಎ ಮಾಡಿದ್ದ ಶ್ರೀನಿವಾಸ್ ಪ್ರಸಾದ್ 1974ರಲ್ಲಿ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ಚುನಾವಣಾ ರಾಜಕೀಯ ಪ್ರವೇಶಿಸಿದ್ದರು. ಮೊದಲ ಚುನಾವಣೆಯಲ್ಲಿ ಸೋತಿದ್ದರು. 1978ರಲ್ಲಿ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದರು. ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಕಣಕ್ಕೆ ಇಳಿದು ನಾಲ್ಕು ಬಾರಿ ಗೆದ್ದರು. ಒಮ್ಮೆ ಜೆಡಿಯು ಅಭ್ಯರ್ಥಿಯಾಗಿ ಗೆದ್ದು ಕೇಂದ್ರದ ಮಂತ್ರಿಯಾಗಿದ್ದರು. 2019ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸಂಸದನಾಗಿ ಆಯ್ಕೆ ಆಗಿದ್ದರು. ಅಲ್ಲದೆ ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ 2008 ಹಾಗೂ 2013 ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಕಂದಾಯ ಸಚಿವರಾಗಿದ್ದ ಶ್ರೀನಿವಾಸ್ ಪ್ರಸಾದ್ ಅವಿವಾಹಿತ ಮಹಿಳೆಯರಿಗೆ ಮಾಶಾಸನ ನೀಡುವ ಮಹತ್ವದ ಮನಸ್ವಿನಿ ಯೋಜನೆಯನ್ನು ಜಾರಿಗೆ ತಂದಿದ್ದರು. ಇದನ್ನೂ ಓದಿ: ಬೈರತಿ ಬಸವರಾಜ್ ಕಾರು ಪಲ್ಟಿ – ಚಾಲಕ, ಗನ್ ಮ್ಯಾನ್‍ಗೆ ಗಾಯ

    ತಮ್ಮ ಸಂಪುಟದಿಂದ ಕೈ ಬಿಟ್ಟ ಕಾರಣ ಕೋಪಗೊಂಡಿದ್ದ ಶ್ರೀನಿವಾಸ್ ಪ್ರಸಾದ್ ಸಿದ್ದರಾಮಯ್ಯ ವಿರುದ್ಧ ಬೇಸರಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರ್ಪಡೆಯಾದರು. ಬಳಿಕ 2018ರಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಇದನ್ನೂ ಓದಿ: ಮುರುಘಾ ಶ್ರೀಗೆ ಮೇ 27ರವರೆಗೆ ನ್ಯಾಯಾಂಗ ಬಂಧನ

    ಆರು ಬಾರಿ ಸಂಸದರು ಹಾಗೂ ಎರಡು ಬಾರಿ ಶಾಸಕರಾಗಿ 40 ವರ್ಷಗಳ ಕಾಲ ಅಧಿಕಾರ ಇದ್ದರೂ ಕೂಡ ಎಂದಿಗೂ ಹೆಸರು ಕೆಡಿಸಿಕೊಳ್ಳದೇ ಕಳಂಕರಹಿತ ರಾಜಕೀಯ ಮಾಡಿದ್ದ ಖ್ಯಾತಿ ಶ್ರೀನಿವಾಸ್ ಪ್ರಸಾದ್ ಅವರಿಗಿದೆ. ದೀರ್ಘಕಾಲ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀನಿವಾಸ್ ಪ್ರಸಾದ್ ಇತ್ತೀಚಿಗೆ ಸಂಪೂರ್ಣ ವಿಶ್ರಾಂತಿಗೆ ಮೊರೆ ಹೋಗಿದ್ದರು. ಮೂತ್ರಪಿಂಡ ಕಾಯಿಲೆ ಉಲ್ಪಣಗೊಂಡು ಕೆಲ ದಿನಗಳ ಹಿಂದೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಇದನ್ನೂ ಓದಿ: ಅಮಿತ್‌ ಶಾ ಫೇಕ್‌ ವಿಡಿಯೋ ಕೇಸ್‌ – ರೇವಂತ್‌ ರೆಡ್ಡಿಗೆ ಸಮನ್ಸ್‌, ಓರ್ವ ಕಾಂಗ್ರೆಸ್‌ ಕಾರ್ಯಕರ್ತ ಅರೆಸ್ಟ್‌

    ಸುತ್ತೂರು ಶ್ರೀಗಳು, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಶ್ರೀನಿವಾಸ್ ಪ್ರಸಾದ್ ಅವರಿಗೆ ಅಂತಿಮ ನಮನ ಸಲ್ಲಿಸಿದರು. ನಾಳೆ (ಮಂಗಳವಾರ) ಶ್ರೀನಿವಾಸ್ ಪ್ರಸಾದ್ ಅವರ ಕುಟುಂಬದ ಟ್ರಸ್ಟ್ ಜಾಗದಲ್ಲಿ ಬೌದ್ಧ ಧರ್ಮದ ಪ್ರಕಾರ ಅಂತಿಮ ಸಂಸ್ಕಾರ ನಡೆಯಲಿದೆ. ಇದನ್ನೂ ಓದಿ: ಬಾಗಲಕೋಟೆಯಲ್ಲಿ ಬಾಲಾಕೋಟ್ ಏರ್‌ಸ್ಟ್ರೈಕ್‌ ರಹಸ್ಯ ರಿವೀಲ್‌ ಮಾಡಿದ ಮೋದಿ

  • ಬೇರೆ ರಾಜ್ಯಕ್ಕೆ ಹೋಲಿಸಿದರೆ ಕರ್ನಾಟಕ ಅತ್ಯಂತ ಸುರಕ್ಷಿತವಾಗಿದೆ: ಮೋದಿ ಆರೋಪಕ್ಕೆ ಡಿಕೆಶಿ ತಿರುಗೇಟು

    ಬೇರೆ ರಾಜ್ಯಕ್ಕೆ ಹೋಲಿಸಿದರೆ ಕರ್ನಾಟಕ ಅತ್ಯಂತ ಸುರಕ್ಷಿತವಾಗಿದೆ: ಮೋದಿ ಆರೋಪಕ್ಕೆ ಡಿಕೆಶಿ ತಿರುಗೇಟು

    ಬೆಳಗಾವಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಪ್ರಧಾನಿ (Narendra Modi) ಆರೋಪಕ್ಕೆ ಯಾವ ಕಾನೂನು ಹದಗೆಟ್ಟಿದೆ ಎಂದು ಅವರೇ ಹೇಳಬೇಕು. ಬೇರೆ ರಾಜ್ಯಕ್ಕೆ ಹೋಲಿಸಿದರೆ ನಮ್ಮ ರಾಜ್ಯ ಅತ್ಯಂತ ಸುರಕ್ಷಿತವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಪ್ರಧಾನಿ ನರೇಂದ್ರ ಮೋದಿಯವರಿಗೆ ತಿರುಗೇಟು ನೀಡಿದರು.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಟಲ್ ಬಿಹಾರಿ ವಾಜಪೇಯಿ ಬೆಂಗಳೂರು (Bengaluru) ಬಗ್ಗೆ ಹೇಳಿದರು. ವಿಶ್ವದ ನಾಯಕರು ಬೆಂಗಳೂರಿಗೆ ಬಂದು ದೆಹಲಿಗೆ ಹೋಗುತ್ತಾರೆ. ಅವರಿಗೆ ನಮ್ಮ ರಾಜ್ಯದಲ್ಲಿ ಮತ ಬರಲಿಲ್ಲ ಎಂದು ಈ ರೀತಿ ಮಾತನಾಡಿದ್ದಾರೆ. ಪ್ರಧಾನಿ ಆರೋಪ ಸರಿಯಿಲ್ಲ. ಉತ್ತಮ ಆಡಳಿತ ಹೊಂದಿರುವ ರಾಜ್ಯ ಕರ್ನಾಟಕವಾಗಿದೆ ಎಂದರು. ಇದನ್ನೂ ಓದಿ: ರಾಹುಲ್ ಗಾಂಧಿ ಯುವಕರಿಗೆ ಆದರ್ಶ: ರೇವಂತ್ ರೆಡ್ಡಿ

    ಪ್ರಜ್ವಲ್ ಪೆನ್‌ಡ್ರೈವ್‌ ತನಿಖೆ ಬಗ್ಗೆ ಹೆಚ್‌ಡಿಕೆ ಸ್ವಾಗತ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇದು ನನ್ನ ವಶದಲ್ಲಿ ಇಲ್ಲ. ಈಗೇನಿದ್ದರೂ ತನಿಖಾಧಿಕಾರಿಗಳು ನೋಡಿಕೊಳ್ಳುತ್ತಾರೆ. ಅಶೋಕ್, ವಿಜಯೇಂದ್ರ ನುಣುಚಿಕೊಳ್ಳುವ ಕೆಲಸ ಮಾಡಿದ್ದಾರೆ. ಬಿಜೆಪಿಯ (BJP) ನಿಲುವು ಏನು ಎಂಬುದು ನನ್ನ ಪ್ರಶ್ನೆಯಾಗಿದೆ. ಕುಮಾರಸ್ವಾಮಿ ಕುಟುಂಬ, ಪಕ್ಷದ ಬಗ್ಗೆ ಏನು ಬೇಕಾದರೂ ಹೇಳಲಿ. ಬಿಜೆಪಿಯ ನಿಲುವು ಏನು ಎಂಬುದು ನಮ್ಮ ಪ್ರಶ್ನೆಯಾಗಿದೆ. ಶೆಟ್ಟರ್, ಮಂಗಳಾ ಅಂಗಡಿ ಬಗ್ಗೆ ಬಿಜೆಪಿ ನಾಯಕರಿಗೆ ಕೇಳಿ. ನಿಮ್ಮ ನಿಲುವು ಏನು ಎಂದು ಪ್ರಶ್ನೆ ಮಾಡಬೇಕು. ಜೆಡಿಎಸ್ ಶಾಸಕ ಪತ್ರದ ಬಗ್ಗೆ ಮಾಧ್ಯಮದಲ್ಲಿ ನೋಡಿದ್ದೇನೆ. ಬಿಜೆಪಿ ಮೈತ್ರಿಯ ನಿಲುವು ಏನು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಇಂಡಿಗನತ್ತ ಗ್ರಾಮದಲ್ಲಿ ಮರು ಮತದಾನಕ್ಕೆ ನೀರಸ ಪ್ರತಿಕ್ರಿಯೆ- ಗ್ರಾಮ ಖಾಲಿ ಖಾಲಿ

    ಇನ್ನೂ ಶ್ರೀನಿವಾಸ್ ಪ್ರಸಾದ್ (Srinivasa Prasad) ನಿಧನದ ಕುರಿತು ಮಾತನಾಡಿ, ವಿಚಾರ ತಿಳಿದ ಬಳಿಕ ದು:ಖ ಆಗಿದೆ. ನಾನು ಅವರ ಕೈ ಕೆಳಗೆ ಕೆಲಸ ಮಾಡಿದ್ದೆ. ರಾಜೀವ್ ಗಾಂಧಿ ಕಾಲದಲ್ಲಿ ನನಗೆ ಸಹಾಯ ಮಾಡಿದ್ದರು. ನಾವೆಲ್ಲ ಜೊತೆಗೆ ಒಂದೇ ಹಾಸ್ಟೆಲ್‌ನಲ್ಲಿ ಇದ್ದೆವು. ಅನೇಕ ವರ್ಷಗಳ ಕಾಲ ಒಟ್ಟಿಗೆ ರಾಜಕೀಯ ಮಾಡಿಕೊಂಡು ಬಂದಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ನಾಲ್ಕೈದು ವರ್ಷಗಳ ಕಥೆ ತಂದು ಈಗ ದೂರು ಕೊಟ್ರೆ ಏನರ್ಥ? – ಪೆನ್‌ಡ್ರೈವ್‌ ಕೇಸ್‌ ಬಗ್ಗೆ ಹೆಚ್.ಡಿ ರೇವಣ್ಣ ಫಸ್ಟ್ ರಿಯಾಕ್ಷನ್

    ಶ್ರೀನಿವಾಸ್ ಪ್ರಸಾದ್ ಭಿನ್ನಾಭಿಪ್ರಾಯದಿಂದ ಬೇರೆ ಪಕ್ಷಕ್ಕೂ ಹೋಗಿದ್ದರು. ಬಳಿಕ ಜೊತೆಗೆ ಸಂಪುಟದಲ್ಲಿ ಕೆಲಸ ಮಾಡಿದ್ದೇವೆ. ಓರ್ವ ಧೀಮಂತ ನಾಯಕನನ್ನು ನಾವು ಕಳೆದುಕೊಂಡಿದ್ದೇವೆ. ನಮ್ಮ ಕಷ್ಟ ಕಾಲದಲ್ಲಿ ಜೊತೆಗೆ ಇದ್ದ ವ್ಯಕ್ತಿಯಾಗಿದ್ದರು. ಮೈಸೂರು ಭಾಗದಲ್ಲಿ ಪ್ರಭಾವಿ ಆಗಿದ್ದರು. ಬಳ್ಳಾರಿ ಸಮಾವೇಶದ ಬಳಿಕ ನಾನು ಅಂತ್ಯಕ್ರಿಯೆಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಸಂತಾಪ ಸೂಚಿಸಿದರು. ಇದನ್ನೂ ಓದಿ: ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ: ಮೋದಿ

  • 15 ದಿನಗಳಿಂದ ಮಾಗಡಿ ತಹಶೀಲ್ದಾರ್ ನಾಪತ್ತೆ‌

    15 ದಿನಗಳಿಂದ ಮಾಗಡಿ ತಹಶೀಲ್ದಾರ್ ನಾಪತ್ತೆ‌

    ರಾಮನಗರ: ಲಂಚ ಪ್ರಕರಣದ (Corruption Case) ಆರೋಪ ಹೊತ್ತಿರುವ ಮಾಗಡಿ (Magadi) ತಹಶೀಲ್ದಾರ್ (Tahsildar) ಶ್ರೀನಿವಾಸ್ ಪ್ರಸಾದ್ (Srinivasa Prasad) ಕಳೆದ 15 ದಿನಗಳಿಂದ ನಾಪತ್ತೆಯಾಗಿದ್ದಾರೆ.

    ಮೊಬೈಲ್‌ ಸ್ವಿಚ್ ಆಫ್ ಆಗಿದ್ದು, ವಾಟ್ಸಪ್‌ನಿಂದಲೂ ಕಣ್ಮರೆಯಾಗಿದ್ದಾರೆ. ಜನವರಿ 3 ರಂದು ಮಾಗಡಿಯ ತಾಲೂಕು ಕಚೇರಿಯಲ್ಲಿ ಮಧ್ಯವರ್ತಿಯಾಗಿದ್ದ ಮಂಜುನಾಥ್ ಎಂಬಾತ ಸಾರ್ವಜನಿಕರೊಬ್ಬರಿಂದ 60 ಸಾವಿರಕ್ಕೆ ಬೇಡಿಕೆ ಇಟ್ಟಿದ್ದು, ಮುಂಗಡವಾಗಿ 20 ಸಾವಿರ ಹಣವನ್ನು ಪಡೆದುಕೊಂಡಿದ್ದ. ಉಳಿದ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಇದನ್ನೂ ಓದಿ: ಕೆಳ ಮನೆಯಲ್ಲಿದ್ದ ವಿವಾಹಿತೆ, ಮೇಲಿನ ಮನೆಯಲ್ಲಿದ್ದ ವಿವಾಹಿತನ ಜೊತೆಗೆ ಎಸ್ಕೇಪ್!

    ತಾಲೂಕು ಕಚೇರಿ ಆವರಣದಲ್ಲಿಯೇ ಈ ಘಟನೆ ನಡೆದಿತ್ತು. ಹೀಗಾಗಿ ಅಂದೇ ತಹಶೀಲ್ದಾರ್ ಹೇಳಿಕೆಯನ್ನು ಪಡೆದು, ದೂರವಾಣಿ ಮೂಲಕ ಮಾತನಾಡಿದ್ದರು. ಅಂದಿನಿಂದ ಫೋನ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿರುವ ತಹಶೀಲ್ದಾರ್ ಈವರೆಗೂ ಪತ್ತೆಯಾಗಿಲ್ಲ. ತಹಸೀಲ್ದಾರ್‌ರನ್ನು ಎ2 ಆರೋಪಿಯನ್ನಾಗಿ ಪ್ರಕರಣ ದಾಖಲಿಸಲಾಗಿದೆ.

    ಜ.3ರ ಸಂಜೆ ವಾಟ್ಸಪ್‌ ಮೂಲಕ ರಾಮನಗರ ಜಿಲ್ಲಾಕಾರಿಗಳಿಗೆ ರಜೆ ಬೇಕು ಎಂದು ಮೆಸೇಜ್‌ ಮಾಡಿದ್ದಾರೆ. ಆದರೆ ತಹಶೀಲ್ದಾರ್‌ಗೆ ರಜೆ ಮಂಜೂರಾಗಿಲ್ಲ. ಅನೇಕ ಬಾರಿ ಅಧಿಕಾರಿಗಳು ಕರೆಗೆ ಪ್ರಯತ್ನಿಸಿದರೂ ತಹಶೀಲ್ದಾರ್‌ ಸಂಪರ್ಕಕ್ಕೆ ಸಿಕ್ಕಿಲ್ಲ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಿದ್ದರಾಮಯ್ಯ ಬಾದಾಮಿ, ಗೋಡಂಬಿಗೆ ಹೋಗಿ ಈಗ ನಾಟಿಕೋಳಿ, ಮುದ್ದೆ ತಿನ್ನಲು ವರುಣಾಗೆ ಬರ್ತಿದ್ದಾರೆ: ಶ್ರೀನಿವಾಸ್ ಪ್ರಸಾದ್ ವ್ಯಂಗ್ಯ

    ಸಿದ್ದರಾಮಯ್ಯ ಬಾದಾಮಿ, ಗೋಡಂಬಿಗೆ ಹೋಗಿ ಈಗ ನಾಟಿಕೋಳಿ, ಮುದ್ದೆ ತಿನ್ನಲು ವರುಣಾಗೆ ಬರ್ತಿದ್ದಾರೆ: ಶ್ರೀನಿವಾಸ್ ಪ್ರಸಾದ್ ವ್ಯಂಗ್ಯ

    ಚಾಮರಾಜನಗರ: ಸಿದ್ದರಾಮಯ್ಯ (Siddaramaiah) ಬಾದಾಮಿ, ಗೋಡಂಬಿ ಕ್ಷೇತ್ರಕ್ಕೆ ಹೋಗಿ ಇದೀಗ ನಾಟಿಕೋಳಿ, ರಾಗಿಮುದ್ದೆ ತಿನ್ನಲು ವರುಣಾಗೆ ಬರುತ್ತಿದ್ದಾರೆ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ (Srinivasa Prasad) ವ್ಯಂಗ್ಯವಾಡಿದ್ದಾರೆ.

    ಚಾಮರಾಜನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ವರುಣಾದಲ್ಲಿ ನಿಲ್ಲುವುದಾಗಿ ಇತ್ತೀಚೆಗೆ ಹೇಳಿದ್ದಾರೆ. ಈಗಾಗಲೇ ಒಂದು ಸುತ್ತು ವರುಣಾ ಕ್ಷೇತ್ರಕ್ಕೆ ಹೋಗಿ ಬಂದಿದ್ದಾರೆ. ಅಂತಿಮವಾಗಿ ಬೇರೆಡೆ ಬಿಟ್ಟು ವರುಣಾದಲ್ಲಿ ನಿಲ್ಲುವ ತೀರ್ಮಾನಕ್ಕೆ ಬಂದ ಹಾಗೆ ಕಾಣಿಸುತ್ತಿದೆ. ಅವರನ್ನು ಸೋಲಿಸಲು ನಾವು ಹೋರಾಟ ಮಾಡುತ್ತೇವೆ. ಅವರ ವಿರುದ್ಧ ಅಭ್ಯರ್ಥಿ ಯಾರಾಗ್ತಾರೆ ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು. ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಮೈಲಿಗಲ್ಲು – ರಾಜ್ಯಾದ್ಯಂತ 114 ಕ್ಲಿನಿಕ್‌ಗೆ ಚಾಲನೆ

    ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಒಂದೇ ಚುನಾವಣೆಗೆ ಹೆದರಿ ಬಾದಾಮಿಗೆ ಓಡಿಹೋದ್ರು. ಇದೀಗ ಬಾದಾಮಿ, ಗೋಡಂಬಿ ಕ್ಷೇತ್ರಕ್ಕೆ ಹೋಗಿ ಮತ್ತೆ ರಾಗಿಮುದ್ದೆ, ನಾಟಿಕೋಳಿಗಾಗಿ ಇಲ್ಲಿಗೆ ಬರುತ್ತಿದ್ದಾರೆ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ಝಿಕಾ ವೈರಸ್‌ಗೆ ಹೆಚ್ಚಿದ ಆತಂಕ – ಮಕ್ಕಳ ಸಣ್ಣ ಜ್ವರಕ್ಕೂ ಹೆದರುತ್ತಿದ್ದಾರೆ ಪೋಷಕರು

    ಹೆಚ್ ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆ ವಿಚಾರದ ಬಗ್ಗೆ ನಾನೇನೂ ಪ್ರತಿಕ್ರಿಯೆ ನೀಡಲ್ಲ. ನನಗೂ ಅವರಿಗೂ ಈಗ ಸಂಬಂಧವಿಲ್ಲ. ನಮ್ಮ ಬಳಿ ಅವರು ಮಾತನಾಡಿಲ್ಲ. ಮಾತನಾಡುವುದೂ ಇಲ್ಲ ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ಒಂಟಿಕೊಪ್ಪಲ್ ಪಂಚಾಂಗದಲ್ಲಿ ಸಿದ್ದರಾಮೋತ್ಸವ ಸೇರಿಸಲಿ: ಶ್ರೀನಿವಾಸ್ ಪ್ರಸಾದ್ ವ್ಯಂಗ್ಯ

    ಒಂಟಿಕೊಪ್ಪಲ್ ಪಂಚಾಂಗದಲ್ಲಿ ಸಿದ್ದರಾಮೋತ್ಸವ ಸೇರಿಸಲಿ: ಶ್ರೀನಿವಾಸ್ ಪ್ರಸಾದ್ ವ್ಯಂಗ್ಯ

    ಚಾಮರಾಜನಗರ: ನಾವು ಬೇರೆ ಬೇರೆ ಉತ್ಸವಗಳನ್ನು ಕೇಳಿದ್ದೇವೆ. ಇನ್ನು ಮೇಲೆ ಒಂಟಿಕೊಪ್ಪಲ್ ಪಂಚಾಂಗದಲ್ಲಿ ಸಿದ್ದರಾಮೋತ್ಸವವನ್ನು ಸೇರಿಸಬೇಕು ಎಂದು ಚಾಮರಾಜನಗರದ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ವ್ಯಂಗ್ಯವಾಡಿದ್ದಾರೆ.

    ಚಾಮರಾಜನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಜಾತಿಯವರು ಶಕ್ತಿ ಪ್ರದರ್ಶನ ಮಾಡಬೇಕು ಎಂದು ಹೊರಟಿದ್ದರು. ಆದರೆ ಅದಕ್ಕೆ ಅವರ ಪಕ್ಷದಲ್ಲಿ ವಿರೋಧ ಬಂತು. ಹೀಗಾಗಿ ಪಕ್ಷದ ವತಿಯಿಂದ ಕಾರ್ಯಕ್ರಮ ಮಾಡಬೇಕು ಎಂದು ದೊಡ್ಡ ಸಮಿತಿ ರಚಿಸಿಕೊಂಡಿದ್ದಾರೆ. ಇವೆಲ್ಲವನ್ನೂ ಪ್ರಚಾರಕ್ಕೋಸ್ಕರ ಮಾಡುತ್ತಿದ್ದಾರೆ. ಇನ್ನು ಏನೇನು ಆಟ ಆಡಬೇಕು ಆಡಲಿ ಎಂದು ಕುಹಕವಾಡಿದರು. ಇದನ್ನೂ ಓದಿ: ವಿಶ್ವ ಅಥ್ಲೆಟಿಕ್ಸ್ – ಚಿನ್ನ ಗೆದ್ದು ಭಾರತಕ್ಕೆ ಹೆಮ್ಮೆ ತಂದ 94ರ ಅಜ್ಜಿ

    Siddaramaiah

    ಮೋದಿ ಸರ್ಕಾರ ತೊಲಗಿದರೆ ದೇಶಕ್ಕೆ ಒಳ್ಳೆಯದು ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಶ್ರೀನಿವಾಸ ಪ್ರಸಾದ್, ಮೋದಿ ಜನಾದೇಶದ ಮೇಲೆ ಅಧಿಕಾರಕ್ಕೆ ಬಂದಿದ್ದಾರೆ. ಸಿದ್ದರಾಮಯ್ಯನನ್ನು ಕೇಳಿಕೊಂಡು ಬಂದಿಲ್ಲ. ಸಿದ್ದರಾಮಯ್ಯ ಪ್ರಚಾರಕ್ಕೋಸ್ಕರ ಕಿರುಚಾಡಿ ಮೈ ಪರಚಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: 5 ಎಕ್ರೆ ಜಾಗಕ್ಕೆ ಕಿರಿಕ್ – ಚಂದ್ರಶೇಖರ್ ಗುರೂಜಿ ಹತ್ಯೆ ಕೇಸ್‌ಗೆ ಮತ್ತೊಂದು ಟ್ವಿಸ್ಟ್

    ನಿಮ್ಮ ಸ್ಥಿತಿ ಏನು ಎಂದು ಅರ್ಥ ಮಾಡಿಕೊಂಡು ಮಾತನಾಡಿ. ನೀವು 36 ಸಾವಿರ ಮತಗಳಿಂದ ಸೋತಾಯ್ತು. 17 ಜನರನ್ನು ಕಳುಹಿಸಿ ಸರ್ಕಾರವನ್ನು ಕೆಡವಿದ್ದಾಯ್ತು. 28 ಕ್ಷೇತ್ರಗಳಲ್ಲಿ ಒಂದೇ ಒಂದು ಕ್ಷೇತ್ರ ಗೆದ್ದಿರುವುದು. ಇನ್ನಾದರೂ ಹೀಗೆ ಮಾತನಾಡುವುದನ್ನು ಬಿಡಪ್ಪಾ ಎಂದು ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು.

    Live Tv
    [brid partner=56869869 player=32851 video=960834 autoplay=true]

  • ಮೋದಿ ಬಗ್ಗೆ ಟೀಕಿಸಲು ಕಾಂಗ್ರೆಸ್‍ಗೆ ಹಕ್ಕಿಲ್ಲ: ಶ್ರೀನಿವಾಸ್ ಪ್ರಸಾದ್

    ಮೋದಿ ಬಗ್ಗೆ ಟೀಕಿಸಲು ಕಾಂಗ್ರೆಸ್‍ಗೆ ಹಕ್ಕಿಲ್ಲ: ಶ್ರೀನಿವಾಸ್ ಪ್ರಸಾದ್

    ಚಾಮರಾಜನಗರ: ಪ್ರಧಾನಿ ಮೋದಿ ಬಗ್ಗೆ ಟೀಕಿಸಲು ಕಾಂಗ್ರೆಸ್‍ಗೆ ಹಕ್ಕೇನಿದೆ? ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಕಾಂಗ್ರೆಸ್ ಪಕ್ಷಕ್ಕೆ ಪ್ರಶ್ನೆ ಮಾಡಿದ್ದಾರೆ.

    ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಮಾತನಾಡಿದ ಅವರು, ಮೋದಿಯವರ ವಿರುದ್ಧ ಹೆಬ್ಬೆಟ್ ಗಿರಾಕಿ ಎಂಬ ಪದ ಬಳಸಿ ಮಾಡಿರುವ ಟ್ವೀಟ್‍ಗೆ ತಿರುಗೇಟನ್ನು ಕೊಟ್ಟರು.

    ಕಾಂಗ್ರೆಸ್ ಪಕ್ಷ ದಿವಾಳಿಯಾಗಿದೆ. ಪಕ್ಷದಲ್ಲಿ ಸರಿಯಾದ ನಾಯಕರಿಲ್ಲ. ಪಾರ್ಲಿಮೆಂಟ್ ಹಾಗೂ ಅಸೆಂಬ್ಲಿಗಳಲ್ಲಿ ಸರಿಯಾಗಿ ಮಾತನಾಡುವವರಿಲ್ಲ. ಪರಿಸ್ಥಿತಿ ಬಹಳ ಕೆಟ್ಟದಾಗಿದೆ. ಅದರ ಬಗ್ಗೆ ಆಲೋಚಿಸಬೇಕು. ಆ ಮೂಲಕ ಪಕ್ಷ ಸಂಘಟನೆಗೆ ಒತ್ತು ಕೊಡಲಿ ಅಂತಾ ತಾಕೀತು ಮಾಡಿದರು. ಇದನ್ನೂ ಓದಿ: ಹೆಬ್ಬೆಟ್‍ಗಿರಾಕಿ ಮೋದಿ ತನ್ನ ಹೆಸರನ್ನು ‘ಮೌನೇಂದ್ರ ಮೋದಿ’ ಎಂದು ಬದಲಿಸಿಕೊಳ್ಳಲಿ: ಕಾಂಗ್ರೆಸ್

    ವಾಸ್ತವಗಳ ಬಗ್ಗೆ ಮಾತನಾಡದ ಪ್ರಧಾನಿ ತಮ್ಮ ಹೆಸರನ್ನು ಮೌನೇಂದ್ರ ಮೋದಿ ಎಂದು ಬದಲಿಸಿಕೊಳ್ಳಲಿ.
    * ಬೆಲೆ ಏರಿಕೆಯ ಬಗ್ಗೆ -ಮೌನ
    * ಕಾಶ್ಮೀರದ ದಳ್ಳುರಿಗೆ -ಮೌನ
    * ಚೀನಾ ಅತಿಕ್ರಮಣಕ್ಕೆ -ಮೌನ
    * ರೈತರ ಹತ್ಯೆಗೆ -ಮೌನ
    * ಅದಾನಿ ಡ್ರಗ್ಸ್ ದಂಧೆಯ ಬಗ್ಗೆ -ಮೌನ
    * ನಿರುದ್ಯೋಗದ ಬಗ್ಗೆ -ಮೌನ
    * ಪತ್ರಿಕಾಗೋಷ್ಠಿಗೆ -ಮೌನ
    #ಹೆಬ್ಬೆಟ್ ಗಿರಾಕಿಮೋದಿ ಎಂದು ಕಾಂಗ್ರೆಸ್ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿತ್ತು. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ನಿಲ್ಲದ ಪುಂಡರ ಕುಚೇಷ್ಟೆ – ಕಾರಿನಲ್ಲಿ ಹೋಗ್ತಿದ್ದ ದಂಪತಿಗೆ ಅಡ್ಡಗಟ್ಟಿ ಧಮ್ಕಿ

    ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಇಂದು ಪೆಟ್ರೋಲ್ 66, ಡೀಸೆಲ್ 55 ಕ್ಕೆ ದೊರಕುತ್ತಿತ್ತು. ಜನರನ್ನು ದೋಚಿ, ಉದ್ಯಮಿಗಳ ಹೊಟ್ಟೆ ತುಂಬಿಸುವ ಯೋಜನೆ ಹೊಂದಿರುವ ಬಿಜೆಪಿ ಸರ್ಕಾರದ ತೆರಿಗೆ ಭಯೋತ್ಪಾದನೆಯಿಂದ ಎಲ್ಲಾ ಅಗತ್ಯ ವಸ್ತುಗಳು ದುಬಾರಿಯಾಗಿವೆ. ಜನರ ಕಷ್ಟಗಳನ್ನು ತಿಳಿಯದ #ಹೆಬ್ಬೆಟ್ ಗಿರಾಕಿ ಮೋದಿಯಿಂದ ದೇಶ ನಲುಗುತ್ತಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.

  • ಸಿದ್ದರಾಮಯ್ಯ ಸಿಎಂ ಆಗೋದು ಕನಸಿನ ಮಾತು: ಶ್ರೀನಿವಾಸ್ ಪ್ರಸಾದ್

    ಸಿದ್ದರಾಮಯ್ಯ ಸಿಎಂ ಆಗೋದು ಕನಸಿನ ಮಾತು: ಶ್ರೀನಿವಾಸ್ ಪ್ರಸಾದ್

    ಚಾಮರಾಜನಗರ: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗೋದು ಕನಸಿನ ಮಾತು, ಅವರು ಅತ್ತುಕರೆದು ವಿರೋಧಪಕ್ಷದ ನಾಯಕರಾಗಿದ್ದಾರೆ, ಆ ಕೆಲಸ ಮಾಡಿಕೊಂಡಿರಲಿ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹರಿಹಾಯ್ದಿದ್ದಾರೆ.

    ಜಿಲ್ಲೆಯ ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಬಿಜೆಪಿ ಸ್ಥಿರ ಸರ್ಕಾರವಿದೆ, ಚುನಾವಣೆಗೆ ಇನ್ನೂ ಎರಡುವರೆ ವರ್ಷ ಇದೆ. ಆದರೆ ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಚುನಾವಣೆ ಬಂದಾಗ ಅವರ ಪಕ್ಷದವರು ಇಷ್ಟಪಟ್ಟರೆ ಮುಖ್ಯಮಂತ್ರಿ ಮಾಡಲಿ ಎಂದು ಅವರು ವ್ಯಂಗ್ಯವಾಡಿದರು.

    ಯಾವುದೇ ಸಿಎಂ ಎರಡು ಕಡೆ ಸ್ಪರ್ಧಿಸುವುದಿಲ್ಲ. ಆದರೆ ಸಿದ್ದರಾಮಯ್ಯ ಬಾದಾಮಿ, ಚಾಮುಂಡೇಶ್ವರಿ ಎರಡೂ ಕಡೆ ಸ್ಪರ್ಧಿಸಿದ್ದರು. ಬಾದಮಿಯಲ್ಲಿ 1,600 ಮತಗಳಿಂದ ಗೆಲ್ಲದಿದ್ದರೆ ಹೆಚ್.ಸಿ.ಮಹದೇವಪ್ಪ, ಧ್ರುವನಾರಾಯಣ್ ತರ ಅವಿತುಕೊಂಡಿರುತ್ತಿದ್ದರು ಎಂದು ಶ್ರೀನಿವಾಸಪ್ರಸಾದ್ ಲೇವಡಿ ಮಾಡಿದರು.

  • ಸಂಸದ ಶ್ರೀನಿವಾಸ್ ಪ್ರಸಾದ್‍ಗೆ ಕೊರೊನಾ ಪಾಸಿಟಿವ್

    ಸಂಸದ ಶ್ರೀನಿವಾಸ್ ಪ್ರಸಾದ್‍ಗೆ ಕೊರೊನಾ ಪಾಸಿಟಿವ್

    ಮೈಸೂರು: ಚಾಮರಾಜನಗರದ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್‍ಗೆ ಕೊರೊನಾ ಪಾಸಿಟಿವ್ ಬಂದಿದೆ.

    ಇಂದು ಮೈಸೂರು ನಿವಾಸದಲ್ಲಿರುವ ಶ್ರೀನಿವಾಸ್ ಪ್ರಸಾದ್ ಅವರಿಗೆ ಕೊರೊನಾ ಪರೀಕ್ಷೆ ಮಾಡಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿದೆ. ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೊತೆಗೆ ಅವರು ನಿನ್ನೆ ತಾನೇ ಸಿಎಂ ಪುತ್ರ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್, ಶಾಸಕ ಪ್ರೀತಂ ಗೌಡ ಭೇಟಿ ಮಾಡಿದ್ದರು.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ವಿಜಯೇಂದ್ರ ಅವರು, ಹಿರಿಯ ನಾಯಕರು, ಸಂಸತ್ ಸದಸ್ಯರಾದ ಶ್ರೀ ವಿ.ಶ್ರೀನಿವಾಸ್ ಪ್ರಸಾದ್ ರವರು ಶೀಘ್ರದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಅವರ ಸಂಪರ್ಕಕ್ಕೆ ಬಂದಿದ್ದರಿಂದ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದು, ಗೃಹ ಕ್ವಾರಂಟೈನ್ ನಲ್ಲಿದ್ದೇನೆ. ಜೊತೆಗಿದ್ದವರು ಎಲ್ಲ ಮುಂಜಾಗ್ರತೆ ವಹಿಸಬೇಕು ಎಂದು ಈ ಮೂಲಕ ಕೋರುತ್ತೇನೆ ಎಂದಿದ್ದಾರೆ.

    ಜೊತೆಗೆ ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್ ಅವರು ಟ್ವೀಟ್ ಮಾಡಿ, ಹಿರಿಯ ನಾಯಕರು, ಮಾಜಿ ಕೇಂದ್ರ ಸಚಿವರು, ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಶ್ರೀನಿವಾಸ ಪ್ರಸಾದ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿರುವುದು ನೋವುಂಟು ಮಾಡಿದೆ. ಅವರು ಶ್ರೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

    ಹಿರಿಯ ರಾಜಕಾರಣಿ ಹಾಗೂ ಚಾಮರಾಜನಗರ ಸಂಸದ ವಿ. ಶ್ರೀನಿವಾಸ ಪ್ರಸಾದ್‍ಗೆ ಕೊರೊನಾ ಸೋಂಕು ತಗುಲಿರುವುದು ಅತ್ಯಂತ ನೋವಿನ ಸಂಗತಿ. ಶ್ರೀಯುತರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಡಿಸಿಎಂ ಲಕ್ಷ್ಮಣ ಸವದಿಯವರು ಕೂಡ ಟ್ವೀಟ್ ಮಾಡಿದ್ದಾರೆ.