Tag: Srinivasa Prasad

  • ಜೈಲಿಂದ ಬಂದ್ಮೇಲೆ ಡಿಕೆಶಿ ಬುದ್ಧಿ ಸ್ಥಿಮಿತದಲ್ಲಿಲ್ಲ: ಸಂಸದ ಶ್ರೀನಿವಾಸ್ ಪ್ರಸಾದ್

    ಜೈಲಿಂದ ಬಂದ್ಮೇಲೆ ಡಿಕೆಶಿ ಬುದ್ಧಿ ಸ್ಥಿಮಿತದಲ್ಲಿಲ್ಲ: ಸಂಸದ ಶ್ರೀನಿವಾಸ್ ಪ್ರಸಾದ್

    – ಸೋತವರು, ಸತ್ತವರಿ ಮಂತ್ರಿಗಿರಿ ಇಲ್ಲ
    – ವಿಶ್ವನಾಥ್‍ಗೆ ಶ್ರೀನಿವಾಸ್ ಪ್ರಸಾದ್ ಟಾಂಗ್

    ಚಾಮರಾಜನಗರ: ಮಾಜಿ ಸಚಿವ, ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಅವರು ಜೈಲಿಗೆ ಹೋಗಿ ಬಂದ ಬಳಿಕ ಬುದ್ಧಿ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.

    ಯೇಸು ಪ್ರತಿಮೆ ನಿರ್ಮಾಣ ಕುರಿತು ಕೊಳ್ಳೇಗಾಲದಲ್ಲಿ ಮಾತನಾಡಿದ ಸಂಸದರು, ಡಿ.ಕೆ.ಶಿವಕುಮಾರ್ ಅವರು ನೀಡುತ್ತಿರುವ ಹೇಳಿಕೆಗಳಿಗೆ ಹಾಗೂ ಪ್ರತಿಮೆ ನಿರ್ಮಾಣದ ವಿಷಯಕ್ಕೆ ಸಂಬಂಧವೇ ಇಲ್ಲವಾಗಿದೆ. ಸಚಿವರು ಏನು ಹೇಳಲು ಹೊರಟಿದ್ದಾರೆ ಎನ್ನುವುದು ಅರ್ಥವಾಗುತ್ತಿಲ್ಲ ಎಂದು ಕಿಡಿಕಾರಿದರು.

    ಇದೇ ವೇಳೆ ದೇಶಾದ್ಯಂತ ಹಬ್ಬಿರುವ ಪೌರತ್ವ ತಿದ್ದುಪಡೆ ಕಾಯ್ದೆ ಕಿಚ್ಚಿನ ಕುರಿತು ಮಾತನಾಡಿದ ಅವರು, ಸಿಎಎ ಸಂವಿಧಾನ ವಿರೋಧಿಯಲ್ಲ. ಈ ಕಾಯ್ದೆಯ ಬಗ್ಗೆ ಸಂಸತ್ತಿನಲ್ಲಿ ಸುದೀರ್ಘವಾಗಿ ಚರ್ಚಿಸಲಾಗಿದೆ. ಲೋಕಸಭೆಯಲ್ಲೂ ಚರ್ಚಿಸಲಾಗಿದೆ. ರಾಷ್ಟ್ರಪತಿಗಳ ಅಂಕಿತವೂ ಬಿದ್ದಿದೆ. ಸಿಎಎ ಕಾಯ್ದೆಯಿಂದ ನಮ್ಮ ದೇಶದ ಮುಸ್ಲಿಂ ಮತ್ತು ದಲಿತ ಸಮುದಾಯಗಳಿಗೆ ಯಾವುದೇ ತೊಂದರೆ ಇಲ್ಲ. ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಬರುವ ವಲಸಿಗರಿಗೆ ಮಾತ್ರ ಸಿಮೀತವಾದದ್ದು ಎಂದು ಹೇಳಿದರು.

    ಪೌರತ್ವ ತಿದ್ದುಪಡೆ ಕಾಯ್ದೆಯಿಂದ ಭಾರತ ದೇಶದ ಯಾವುದೇ ಜನಾಂಗಕ್ಕೂ ಎಳ್ಳಷ್ಟು ಸಮಸ್ಯೆಯಿಲ್ಲ. ದೇಶದ ಭದ್ರತೆ ದೃಷ್ಟಿಯಿಂದ ಈ ಕಾಯ್ದೆ ಅನುಷ್ಠಾನ ಮಾಡಲಾಗುತ್ತಿದೆ. ಸಿಎಎ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್​ಸಿ) ಕಾಯ್ದೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಪರ ಮತ್ತು ವಿರೋಧವಾಗಿ ಮಾತನಾಡುವ ಹಕ್ಕು ಪ್ರಜೆಗಳಿಗೆ ಇದೆ. ಪ್ರತಿಭಟನೆ ಹಿಂಸಾತ್ಮಕ ಮಾರ್ಗ ಹಿಡಿಯಬಾರದು, ಶಾಂತಿಯೂತವಾಗಿ ಹೋರಾಟ ಮಾಡಬೇಕು ಎಂದರು.

    ದೇಶದ ಜನರು ಪ್ರಚೋದನಾತ್ಮಕ ಹೇಳಿಕೆಗಳಿಗೆ ಕಿವಿ ಕೊಡಬಾರದು. ಶಾಂತಿಯುತವಾಗಿ ಹೋರಾಟ ಮಾಡಬೇಕು. ಭಾರತ ದೇಶದಲ್ಲಿರುವ ಮುಸ್ಲಿಂ, ದಲಿತ ಹಾಗೂ ಇನ್ನಿತರೆ ಯಾವುದೇ ಧರ್ಮಕ್ಕೆ ಸಿಎಎಯಿಂದ ತೊಂದರೆಯಿಲ್ಲ ಎಂದು ತಿಳಿಸಿದರು.

    ವಿಶ್ವನಾಥ್‍ಗೆ ಟಾಂಗ್:
    ಉಪಚುನಾವಣೆಯಲ್ಲಿ ಗೆದ್ದವರಿಗೆಲ್ಲ ಮಂತ್ರಿ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈಗಾಗಲೇ ಹೇಳಿದ್ದಾರೆ. ಧನುರ್ಮಾಸ ಮುಗಿದ ಕೂಡಲೇ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಗೆದ್ದು ಶಾಸಕರಾದ ನಂತರವೇ ಮಂತ್ರಿಯಾಗಬೇಕು ಎಂದು ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ಸ್ಪಷ್ಟವಾಗಿ ಹೇಳಿದೆ. ಹುಣಸೂರು ಉಪಚುನಾವಣೆಯಲ್ಲಿ ಎಚ್.ವಿಶ್ವನಾಥ್ ಅವರು ಸೋತಿದ್ದಾರೆ. ಹೀಗಾಗಿ ಗೆದ್ದವರು ಮಾತ್ರ ಮಂತ್ರಿಯಾಗುತ್ತಾರೆ. ಸೋತವರು, ಸತ್ತವರಿಗೆ ಮಂತ್ರಿಗಿರಿ ಇಲ್ಲ ಎಂದು ಹೇಳಿದರು.

  • ಐಟಿಯವರು ಪರಮೇಶ್ವರ್ ಮನೆಯಲ್ಲಿ ಊಟ ಮಾಡಲು ಹೋಗಿದ್ರಾ- ಶ್ರೀನಿವಾಸ್ ಪ್ರಸಾದ್ ವ್ಯಂಗ್ಯ

    ಐಟಿಯವರು ಪರಮೇಶ್ವರ್ ಮನೆಯಲ್ಲಿ ಊಟ ಮಾಡಲು ಹೋಗಿದ್ರಾ- ಶ್ರೀನಿವಾಸ್ ಪ್ರಸಾದ್ ವ್ಯಂಗ್ಯ

    ಮೈಸೂರು: ಎರಡು ದಿನ ಐಟಿಯವರು ಪರಮೇಶ್ವರ್ ಮನೆಯಲ್ಲಿ ಊಟ ಮಾಡಲು ಹೋಗಿದ್ದರಾ ಎಂದು ಪ್ರಶ್ನಿಸುವ ಮೂಲಕ ಐಟಿ ದಾಳಿ ಕುರಿತು ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ವ್ಯಂಗ್ಯವಾಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಟಿಯವರು ಸುಖಾಸುಮ್ಮನೆ ಪರಮೇಶ್ವರ್ ಮನೆ ಮೇಲೆ ದಾಳಿ ಮಾಡಿಲ್ಲ. ಅವರ ಬಗ್ಗೆ ದೂರು ಬಂದ ಕಾರಣ ದಾಖಲೆಗಳನ್ನು ಸಂಗ್ರಹಿಸಿ ನಂತರ ದಾಳಿ ಮಾಡಿದ್ದಾರೆ. ಇದರಲ್ಲಿ ರಾಜಕೀಯ ಎಲ್ಲಿಂದ ಬಂತು, ಐಟಿ ಮತ್ತು ಇಡಿಯವರು ದೇಶದಲ್ಲಿ ದಿನಕ್ಕೆ ಸಾವಿರಾರು ದಾಳಿ ಮಾಡುತ್ತಾರೆ. ಎಲ್ಲಾ ದಾಳಿಗಳ ಎಲ್ಲಾ ವಿವರವನ್ನು ಎಲ್ಲರಿಗೂ ನೀಡಲಾಗುತ್ತದೆಯೇ? ಮೂರು ಜನ ಕಾಂಗ್ರೆಸ್ ನವರ ಮೇಲೆ ದಾಳಿ ಮಾಡಿದ ಕೂಡಲೇ ಇದು ರಾಜಕೀಯ ಪ್ರೇರಿತ ಎನ್ನುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

    ಹಿಂದೆ ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ್ ಮನೆ ಮೇಲೆ ದಾಳಿಯಾಗಿರಲಿಲ್ಲವೇ, ಎಸ್.ಎಂ.ಕೃಷ್ಣ ಅಳಿಯನ ಮನೆ ಮೇಲೆ ದಾಳಿಯಾಗಿರಲಿಲ್ಲವೇ, ಹೀಗಿರುವಾಗ ಐಟಿ ದಾಳಿ ಬಿಜೆಪಿ ಪ್ರೇರಿತ ಎನ್ನುವುದು ಬಾಲಿಶತನ. ದಾಳಿ ಮಾಡಿದ ಕೂಡಲೇ ಅವರು ಅಪರಾಧಿಗಳಲ್ಲ. ಅದರ ಮೇಲೆ ಕೋರ್ಟ್ ಇರುತ್ತದೆ. ಕೋರ್ಟಿನಲ್ಲಿ ವಾದ ಮಾಡಿಕೊಳ್ಳಬಹುದು. ಸ್ವತಂತ್ರ ಸಂಸ್ಥೆ ಬಗ್ಗೆ ಆಧಾರ ರಹಿತ ಆರೋಪ ಮಾಡಬಾರದು ಎಂದು ತಿಳಿಸಿದರು.

    ಬಿಜೆಪಿ ಮೇಲೆ ಸುಳ್ಳು ಆರೋಪ ಮಾಡಿ ದೇಶದಲ್ಲಿ ಕಾಂಗ್ರೆಸ್ ಹೇಳ ಹೆಸರಿಲ್ಲದಂತಾಗಿದೆ. ರಾಹುಲ್ ಗಾಂಧಿ ಎಲ್ಲೋ ತಲೆಮರೆಸಿಕೊಂಡು ಓಡಿ ಹೋಗಿದ್ದಾರೆ. ಪಕ್ಷ ನಿಭಾಯಿಸಲಾಗದೆ ಅಧ್ಯಕ್ಷ ಸ್ಥಾನವನ್ನು ಬಿಟ್ಟಿದ್ದಾರೆ. ರಾಜ್ಯದಲ್ಲೂ ಕಾಂಗ್ರೆಸ್ ಸ್ಥಿತಿ ಹೀನಾಯವಾಗಿದೆ. ಆಂತರಿಕ ಕಚ್ಚಾಟಗಳು ಕಾಂಗ್ರೆಸ್ ಪಕ್ಷದೊಳಗೆ ಹೆಚ್ಚಾಗಿವೆ. ಇಷ್ಟಾದರೂ ಕಾಂಗ್ರೆಸ್‍ಗೆ ಬುದ್ಧಿ ಬಂದಿಲ್ಲ. ಇನ್ನಾದರು ಬಿಜೆಪಿ ಮೇಲೆ ಸುಳ್ಳು ಆರೋಪ ಮಾಡುವುದನ್ನು ನಿಲ್ಲಿಸಲಿ. ಜನರ ವಿಶ್ವಾಸ ಗಳಿಸುವ ಪ್ರಯತ್ನ ಮಾಡಲಿ ಎಂದು ಐಟಿ ದಾಳಿ ಬಿಜೆಪಿ ಪ್ರೇರಿತ ಎಂಬ ಕಾಂಗ್ರೆಸ್ ಮುಖಂಡರ ಹೇಳಿಕೆಗೆ ವಿ.ಶ್ರೀನಿವಾಸ್ ಪ್ರಸಾದ್ ತಿರುಗೇಟು ನೀಡಿದ್ದಾರೆ.

    ಕಲಾಪಗಳಿಗೆ ಮಾಧ್ಯಮಗಳನ್ನು ಹೊರಗೆ ಇಟ್ಟಿದ್ದು ಸರಿಯಲ್ಲ. ಸ್ಪೀಕರ್ ತಮ್ಮ ಕ್ರಮವನ್ನು ವಾಪಸ್ ಪಡೆಯಬೇಕು. ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುವುದು ನ್ಯಾಯ ಸಮ್ಮತವಲ್ಲ. ಮಾಧ್ಯಮದವರಿಂದ ಕಲಾಪದೊಳಗಿನ ಶಾಸಕರಿಗೆ ವ್ಯಕ್ತಿಗತವಾಗಿ ತೊಂದರೆಯಾದರೆ ಸ್ಪೀಕರ್ ಬಳಿ ಅವರು ದೂರು ಸಲ್ಲಿಸಬಹುದು. ಇದಕ್ಕಾಗಿ ಮಾಧ್ಯಮವನ್ನು ಕಲಾಪದಿಂದ ದೂರ ಇಡುವುದು ನನಗೆ ಸರಿ ಕಾಣುತ್ತಿಲ್ಲ. ಇದು ತಪ್ಪು ಸಂದೇಶ ರವಾನೆ ಮಾಡುತ್ತಿದೆ. ಹಿಂದೊಮ್ಮೆ ಇದೆ ವಿಚಾರದಲ್ಲಿ ಬಿಜೆಪಿಯವರೇ ಮಾಧ್ಯಮದ ಪರವಾಗಿ ನಿಂತಿದ್ದರು. ಈಗ ಅಧಿಕಾರಕ್ಕೆ ಬಂದಾಗ ವಿರೋಧಿ ಆಶಯ ತಳೆಯುವುದು ಸರಿಯಲ್ಲ ಸದನದಲ್ಲಿ ಖಾಸಗಿ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.