Tag: Sriram Sena

  • ಶಿವಮೊಗ್ಗ ಗಲಭೆ ಹಿಂದೆ ಪಾಕಿಸ್ತಾನ, ರಾಜ್ಯ ಸರ್ಕಾರದ ಕೈವಾಡವಿದೆ: ಸಿದ್ದಲಿಂಗ ಸ್ವಾಮೀಜಿ ಆರೋಪ

    ಶಿವಮೊಗ್ಗ ಗಲಭೆ ಹಿಂದೆ ಪಾಕಿಸ್ತಾನ, ರಾಜ್ಯ ಸರ್ಕಾರದ ಕೈವಾಡವಿದೆ: ಸಿದ್ದಲಿಂಗ ಸ್ವಾಮೀಜಿ ಆರೋಪ

    ಕಲಬುರಗಿ: ಶಿವಮೊಗ್ಗ ರಾಗಿಗುಡ್ಡದಲ್ಲಿ ನಡೆದ ಘಟನೆ (Shivamogga Riots) ಹಿಂದೆ ಪಾಕಿಸ್ತಾನ, ನಿಷೇಧಿತ ಪಿಎಫ್ಐ ಹಾಗೂ ರಾಜ್ಯ ಸರ್ಕಾರದ ಕೈವಾಡವಿದೆ ಎಂದು ಶ್ರೀರಾಮ ಸೇನೆಯ (Sri Ram Sena) ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ.

    ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಹಾದಿ ಮನಸ್ಥಿತಿ ಹೊಂದಿರುವ ಮುಸ್ಲಿಮರು (Muslims),  ಹಿಂದೂಗಳ ಮನೆಗಳನ್ನ ಗುರಿಯಾಗಿಸಿ ಕಲ್ಲು ತೂರಾಟ ನಡೆಸಿದ್ದಾರೆ. 2047ಕ್ಕೆ ದೇಶಕ್ಕೆ ಸ್ವಾತಂತ್ರ್ಯ ಬಂದು 100 ವರ್ಷ ಪೂರೈಸುವ ಹೊತ್ತಿಗೆ, ಭಾರತದಲ್ಲಿ ಇಸ್ಲಾಮಿಕ್‌ ರಾಜ್ಯ ಮಾಡಬೇಕೆಂಬ ಉದ್ದೇಶ ಹೊಂದಿದ್ದಾರೆ. ಈ ಕೃತ್ಯಗಳಿಗೆ ರಾಜ್ಯ ಕಾಂಗ್ರೆಸ್‌ ಸರ್ಕಾರ (Congress Government) ಕುಮ್ಮಕ್ಕು ನೀಡುತ್ತಿದೆ ಎಂದು ಕಿಡಿ ಕಾರಿದ್ದಾರೆ.

    ಗಣೇಶ ಹಬ್ಬಕ್ಕೆ (Ganesha Festival) ಗಣಪತಿ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕಾದರೆ ಹಲವು ಅನುಮತಿಗಳನ್ನು ಪಡೆಯಬೇಕು. ಆದ್ರೆ ಅನ್ಯ ಕೋಮಿನವರಿಗೆ ಎಲ್ಲೆಂದರಲ್ಲಿ ಕಟೌಟ್‌, ಬ್ಯಾನರ್‌ ಹಾಕಲು ಅನುಮತಿ ಬೇಕಾಗಿಲ್ಲ. ಇದು ಯಾವ ನ್ಯಾಯ? ಕೇವಲ ವೋಟ್‌ಬ್ಯಾಂಕ್‌ ರಾಜಕೀಯ ಮಾಡುವುದರಲ್ಲಿ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೊಸ ಮದ್ಯ ನೀತಿ ಪ್ರಕರಣದ ಕಿಂಗ್‌ಪಿನ್ ಸರದಿಯೂ ಬರಲಿದೆ; ದೆಹಲಿ ಸಿಎಂಗೆ ಪರೋಕ್ಷವಾಗಿ ಎಚ್ಚರಿಕೆ ಕೊಟ್ಟ ಅನುರಾಗ್ ಠಾಕೂರ್

    ಶಿವಮೊಗ್ಗದಲ್ಲಿ ನಡೆದ ಘಟನೆ ರಾಜ್ಯದ ಗೃಹ ಸಚಿವರಿಗೆ ಸಣ್ಣ ಘಟನೆ ಎನಿಸಿದೆ. ಪೊಲೀಸರ ಮೇಲೆ ಕಲ್ಲು ತೂರಾಟ ಮಾಡುವ, ಪೊಲೀಸರ ಎದುರೇ ಆವಾಜ್‌ ಹಾಕುವ ಸನ್ನಿವೇಶಗಳು ನಡೆದರೂ ಗೃಹ ಸಚಿವರ ಉಡಾಫೆ ಹೇಳಿಕೆ ನೋಡಿದ್ರೆ ಅನುಮಾನ ಹುಟ್ಟೋದು ಸಹಜ. ಹಾಗಾಗಿ ನಾಲಿಗೆಗೆ ಬಣ್ಣ ಹಚ್ಚಿಕೊಂಡು ಉಡಾಫೆ ಹೇಳಿಕೆ ನೀಡುವುದನ್ನು ತಕ್ಷಣವೇ ನಿಲ್ಲಿಸಿ ಪುಂಡರಿಗೆ ತಕ್ಕ ಪಾಠ ಕಲಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: 10 ಜನ ಸೇರಿಕೊಂಡು ಒಬ್ಬನನ್ನು ಹೊಡೆದಿದ್ದಾರೆ ಸರ್‌: ಬಿಜೆಪಿ ನಾಯಕರ ಮುಂದೆ ಸ್ಥಳೀಯರ ಕಣ್ಣೀರು

    ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಮಹೇಶ್ ಗೊಬ್ಬರ, ಶರಣು ಗುತ್ತೇದಾರ್, ಅಂಬಾರಾಯ್, ಬಸವರಾಜ, ಪರಮೇಶ್ವರ್, ಮಲ್ಲು ಹಾಜರಿದ್ದರು. ಇದನ್ನೂ ಓದಿ: ಚುನಾವಣೆ ಬಂದರೆ ಬಿಜೆಪಿಯವರಿಗೆ ಮಸೀದಿ, ಪಾಕಿಸ್ತಾನ ನೆನಪಾಗುತ್ತದೆ: ಶಿವರಾಜ್ ತಂಗಡಗಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉದಯನಿಧಿ ಸ್ಟಾಲಿನ್‌ ಇನ್ನೂ ಬಚ್ಚ – ಮುತಾಲಿಕ್ ಕಿಡಿ

    ಉದಯನಿಧಿ ಸ್ಟಾಲಿನ್‌ ಇನ್ನೂ ಬಚ್ಚ – ಮುತಾಲಿಕ್ ಕಿಡಿ

    ಧಾರವಾಡ: ಸನಾತನ ಧರ್ಮ ಶಾಂತಿಯ ಸಂದೇಶ ಸಾರುತ್ತದೆ ಹೊರತು, ಅದು ಡೆಂಗ್ಯೂ, ಮಲೇರಿಯಾದಂತೆ ರೋಗ ಹರಡುವ ಸೊಳ್ಳೆಯಲ್ಲ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ (Pramod Muthalik) ತಿಳಿಸಿದ್ದಾರೆ.

    ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುತಾಲಿಕ್‌, ಸನಾತನ ಧರ್ಮ (Sanatan Dharma) ಡೆಂಗ್ಯೂ, ಮಲೇರಿಯಾ ಇದ್ದಂತೆ ಎಂಬ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ (Udhayanidhi Stalin) ಹೇಳಿಕೆಗೆ ತಿರುಗೇಟು ಕೊಟ್ಟಿದ್ದಾರೆ.

    ಉದಯನಿಧಿ ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಸನಾತನ ಧರ್ಮವನ್ನ ಡೆಂಗ್ಯೂ, ಮಲೇರಿಯಾದಂತೆ ನಾಶ ಮಾಡಬೇಕು ಎಂದು ಹೇಳುವುದು ಜಾತಿಗಳ ಮಧ್ಯೆ ವೈಷಮ್ಯ ಮೂಡಿಸುತ್ತದೆ. ಇದನ್ನು ನಾವು ಖಂಡಿಸುತ್ತೇವೆ. ಉದಯನಿಧಿ ಇನ್ನೂ ಬಚ್ಚ, ಇನ್ನೂ ಕಣ್ಣೇ ಬಿಟ್ಟಿಲ್ಲ, ಆದ್ರೆ ಅತ್ಯಂತ ಕೀಳುಮಟ್ಟದ ಹೇಳಿಕೆ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ಸನಾತನ ಧರ್ಮ ಶಾಂತಿಯ ಸಂದೇಶ ಸಾರುತ್ತದೆಯೇ ಹೊರತು, ಅದು ಡೆಂಗ್ಯೂ, ಮಲೇರಿಯಾದಂತೆ ರೋಗ ಹರಡುವ ಸೊಳ್ಳೆಯಲ್ಲ. ಸನಾತನ ಧರ್ಮ ಗಂಧದ ಮರ ಇದ್ದಂತೆ. ಅದನ್ನು ನಾಶ ಮಾಡಲು ಹೋದಷ್ಟೂ ಸುಗಂಧ ಹರಡುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಉದಯನಿಧಿ ಸ್ಟಾಲಿನ್ ವಿರುದ್ಧ ಆಕ್ರೋಶ; ಆನ್‌ಲೈನ್ ಮೂಲಕ ದೂರು ದಾಖಲಿಸಲು ಮುಂದಾದ ಹಿಂದೂ ಸಂಘಟನೆಗಳು

    ಪೆರಿಯಾರ್‌ನಿಂದ ಹಿಡಿದು ಇಲ್ಲಿಯವರೆಗೂ ನಾಸ್ತಿಕವಾದ ಮಾಡುತ್ತಾ ಬಂದಿದ್ದಾರೆ. ಇವರ ಈ ಹೇಳಿಕೆಯಿಂದ ದೊಡ್ಡ ಅನಾಹುತ ಆಗುತ್ತದೆ. ನಿಮ್ಮ ರಾಜಕೀಯ ವ್ಯವಸ್ಥೆ ನಾಶವಾಗುತ್ತದೆ. ಅವರು ತಮ್ಮ ಹೇಳಿಕೆಯನ್ನ ವಾಪಸ್ ಪಡೆಯಬೇಕು. ಈ ಸಂಬಂಧ ಅವರ ವಿರುದ್ಧ ಧಾರವಾಡ, ಬೆಂಗಳೂರು ಹಾಗೂ ಕಲಬುರ್ಗಿ ಕೋರ್ಟ್‌ಗಳಲ್ಲಿ ಕೇಸ್ ದಾಖಲಿಸಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಅಶ್ಲೀಲ ವಿಡಿಯೋ ಹರಿಬಿಡುವ ಬೆದರಿಕೆ – ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಉದಯನಿಧಿ ಸ್ಟಾಲಿನ್ ಹೇಳಿದ್ದೇನು?
    ಲೇಖಕರ ಸಮಾವೇಶವೊಂದರಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್, ಸನಾತನನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು. ಈ ಪರಿಕಲ್ಪನೆಯು ಅಂತರ್ಗತವಾಗಿ ಹಿಂದುಳಿದಿದೆ. ಇದು ಜಾತಿ ಮತ್ತು ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ. ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಎಂದು ಹೇಳಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಳಗಾವಿಯಲ್ಲಿ ಹಿಂದೂಪರ ಸಂಘಟನೆ ಮುಖಂಡನ ಮೇಲೆ ಫೈರಿಂಗ್

    ಬೆಳಗಾವಿಯಲ್ಲಿ ಹಿಂದೂಪರ ಸಂಘಟನೆ ಮುಖಂಡನ ಮೇಲೆ ಫೈರಿಂಗ್

    ಬೆಳಗಾವಿ: ಹಿಂದೂಪರ ಸಂಘಟನೆ ಮುಖಂಡನ (Hindu Organisation Leader) ಮೇಲೆ ಫೈರಿಂಗ್ (Firing) ಆಗಿರುವ ಘಟನೆ ಬೆಳಗಾವಿ (Belagavi) ತಾಲೂಕಿನ ಹಿಂಡಲಗಾ ಗ್ರಾಮದಲ್ಲಿ ನಡೆದಿದ್ದು, ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಾಹಾನಿ ಸಂಭವಿಸಿಲ್ಲ.

    ತಾಲೂಕಿನ ಹಿಂಡಲಗಾ ಗ್ರಾಮದ ಶ್ರೀರಾಮಸೇನೆ (Sriram Sena) ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ಫೈರಿಂಗ್ ಆಗಿದ್ದು, ಅದೃಷ್ಟವಶಾತ್ ರವಿ ಮತ್ತು ಚಾಲಕ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ. ಇದನ್ನೂ ಓದಿ: ಅಸಲಿ ಚಿನ್ನವನ್ನು ನಕಲಿ ಎಂದು ಭಾವಿಸಿ ಕಸದ ರಾಶಿಗೆ ಎಸೆದ ಕಳ್ಳರು

    ಶನಿವಾರ ಸಂಜೆ ವಾಹನದಲ್ಲಿ ಚಲಿಸುತ್ತಿದ್ದ ಅಪರಿಚಿತರಿಂದ, ರವಿ ವಾಹನದ ಮೇಲೆ ಫೈರಿಂಗ್ ಮಾಡಲಾಗಿದೆ. ರವಿ ಕೋಕಿತಕರ್ ಗಡ್ಡಕ್ಕೆ ಬುಲೆಟ್ ತಗುಲಿ ಚಾಲಕನ ಕೈಗೆ ತಗುಲಿದೆ. ಚಾಲಕನ ಕೈಯಲ್ಲಿ ಬುಲೆಟ್ ಸಿಕ್ಕಿದ್ದು ಸದ್ಯ ಗಾಯಾಳುಗಳನ್ನ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದಾರೆ.

    ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಹಿಂದೂಪರ ಕಾರ್ಯಕರ್ತರು ಜಮಾಯಿಸುತ್ತಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಬಿಗಿ‌ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಇದನ್ನೂ ಓದಿ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯನ ಸಹೋದರನ ಮೇಲೆ ಗುಂಡಿನ ದಾಳಿ

    ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ಫೈರಿಂಗ್ ಮಾಡಿದ ಆರೋಪಿಗಳ ಪತ್ತೆಗೆ ನಾಲ್ಕು ಪ್ರತ್ಯೇಕ ತಂಡಗಳ ರಚನೆ ಮಾಡಲಾಗಿದೆ ‌ಎಂದು ನಗರ ಪೊಲೀಸ್ ಆಯುಕ್ತ ಬೋರಲಿಂಗಯ್ಯ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಇದು ಕಾಂಗ್ರೆಸ್, ನೆಹರು, ಸರ್ಕಾರ ಅಲ್ಲ, ಮೋದಿಯ 56 ಇಂಚಿನ ಛಾತಿ ಇರುವ ಸರ್ಕಾರ- ಮುತಾಲಿಕ್

    ಇದು ಕಾಂಗ್ರೆಸ್, ನೆಹರು, ಸರ್ಕಾರ ಅಲ್ಲ, ಮೋದಿಯ 56 ಇಂಚಿನ ಛಾತಿ ಇರುವ ಸರ್ಕಾರ- ಮುತಾಲಿಕ್

    – ಚೀನಾಗೆ ನಮ್ಮ ಸೈನಿಕರು ತಕ್ಕ ಉತ್ತರ ಕೊಡ್ತಾರೆ
    – ಚೀನಾ ಅಧ್ಯಕ್ಷನ ಭಾವಚಿತ್ರ ದಹಿಸಿ ಆಕ್ರೋಶ

    ಧಾರವಾಡ: ಚೀನಾದ ಉದ್ಧಟತನದಿಂದ ನಮ್ಮ 20 ಯೋಧರು ಹುತಾತ್ಮರಾಗಿದ್ದಾರೆ. ನಮ್ಮ ಯೋಧರು 20ಕ್ಕೆ ಡಬಲ್ 43 ಜನರನ್ನು ಹೊಡೆದು ಚೀನಾಗೆ ತಕ್ಕ ಉತ್ತರ ಕೊಟ್ಟಿದ್ದಾರೆ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ನಗರದ ಜಿಲ್ಲಾಧಿಕಾರಿ ಕಚೇರಿ ಬಳಿಯ ಕಾರ್ಗಿಲ್ ಸ್ತೂಪದ ಬಳಿ ಶ್ರೀರಾಮ ಸೇನೆ ಹಾಗೂ ವಿವಿಧ ಸಂಘಟನೆಗಳಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಿ ಮೌನಾಚರಣೆ ಮಾಡಲಾಯಿತು. ಈ ವೇಳೆ ಮಾತನಾಡಿದ ಮುತಾಲಿಕ್, ಇದು ಕಾಂಗ್ರೆಸ್, ನೆಹರು, ರಾಹುಲ್ ಸರ್ಕಾರ ಅಲ್ಲ, ನರೇಂದ್ರ ಮೋದಿಯ 56 ಇಂಚಿನ ಛಾತಿ ಇರುವ ಸರ್ಕಾರ. ಚೀನಾ ಏನಾದರೂ ಉದ್ಧಟತನ ತೋರಿಸಿದರೆ ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

    ಗಡಿ ದಾಟಿ ಬರುವ ಪ್ರಯತ್ನ ಮಾಡಿದರೆ ಸೈನಿಕರು ತಕ್ಕ ಉತ್ತರ ಕೊಡುತ್ತಾರೆ. ಕೇಂದ್ರ ಸರ್ಕಾರ ಮತ್ತು ಸೇನೆ ಯುದ್ಧಕ್ಕೆ ಸನ್ನದ್ಧವಾಗಿದೆ ಎಂದು ಕಿಡಿಕಾರಿದರು.

    ಇದೇ ವೇಳೆ ಚೀನಾ ಅಧ್ಯಕ್ಷನ ಭಾವಚಿತ್ರ ದಹಿಸಿ ಧಾರವಾಡದಲ್ಲಿ ಪ್ರತಿಭಟನೆ ನಡೆಸಲಾಯಿತು. ಕಾರ್ಗಿಲ್ ಸ್ತೂಪದ ಬಳಿ ಕರವೇ, ಶ್ರೀರಾಮ ಸೇನೆ, ವಿಎಚ್‍ಪಿ ಹಾಗೂ ಭಜರಂಗದಳದ ಕಾರ್ಯಕರ್ತರು ಚೀನಾ ಅಧ್ಯಕ್ಷನ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತ ಪಡಿಸಿದರು. ಚೀನಾ ವಿರುದ್ಧ ಘೋಷಣೆ ಕೂಗಿದರು. ಸುರಿಯುವ ಮಳೆಯಲ್ಲೇ ಪ್ರತಿಭಟಿಸಿ ಚೀನಾ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು.

  • ಕಟ್ಟುನಿಟ್ಟಾಗಿ ಸಿಎಎ ಕಾಯ್ದೆ ಜಾರಿಗಾಗಿ ಶ್ರೀರಾಮ್ ಸೇನೆ ಒತ್ತಾಯ

    ಕಟ್ಟುನಿಟ್ಟಾಗಿ ಸಿಎಎ ಕಾಯ್ದೆ ಜಾರಿಗಾಗಿ ಶ್ರೀರಾಮ್ ಸೇನೆ ಒತ್ತಾಯ

    ಕಲಬುರಗಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಈಗಾಗಲೇ ದೇಶದಾದ್ಯಂತ ತೀವ್ರ ಸ್ವರೂಪದ ಹೋರಾಟಗಳು ನಡೆಯುತ್ತಿವೆ. ಇತ್ತ ಕಲಬುರಗಿಯಲ್ಲಿಯೂ ಸಿಎಎ ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ.

    ಆದರೆ ಕಲಬುರಗಿಯ ಶ್ರೀರಾಮ್ ಸೇನೆ ಜಿಲ್ಲಾ ಘಟಕ ಪೌರತ್ವ ತಿದ್ದುಪಡಿ ಕಾಯ್ದೆ ಕಟ್ಟು ನಿಟ್ಟಾಗಿ ಜಾರಿಗೊಳಿಸಬೇಕೆಂದು ಆಗ್ರಹಿಸಿದೆ. ಪೌರತ್ವ ತಿದ್ದುಪಡಿ ಮಸೂದೆ ಅಂಗೀಕರಿಸಿದ್ದಕ್ಕೆ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು. ಅಲ್ಲದೆ ಪೌರತ್ವ ವಿರುದ್ಧದ ಹೋರಾಟಕ್ಕೆ ಮಣಿದು ಯಾವುದೇ ಕಾರಣಕ್ಕೂ ಮಸೂದೆ ಹಿಂಪಡೆಯಬಾರದು. ಸಿಎಎ ಮಸೂದೆಯನ್ನು ಯಥಾವತ್ತಾಗಿ ಕಟ್ಟು ನಿಟ್ಟಾಗಿ ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

    ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಲು ಶ್ರೀರಾಮ್ ಸೇನೆ ಮುಖಂಡರು, ಕಾರ್ಯಕರ್ತರು ಪ್ಲ್ಯಾನ್ ಮಾಡಿಕೊಂಡಿದ್ದರು. ಆದರೆ ಪೊಲೀಸರು ಮೆರವಣಿಗೆಗೆ ಅವಕಾಶ ನೀಡದ ಕಾರಣ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಡಿಸಿ ಮುಖಾಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಿದ್ದಾರೆ.