Tag: Sriram Sene

  • ನಾನು ಸಹ ನಗರ ನಕ್ಸಲ್ ಬೋರ್ಡ್ ಪ್ರದರ್ಶಿಸಿದ್ದ ಕಾರ್ನಾಡ್ ವಿರುದ್ಧ ದೂರು

    ನಾನು ಸಹ ನಗರ ನಕ್ಸಲ್ ಬೋರ್ಡ್ ಪ್ರದರ್ಶಿಸಿದ್ದ ಕಾರ್ನಾಡ್ ವಿರುದ್ಧ ದೂರು

    ಬೆಂಗಳೂರು: ಗೌರಿ ಸಂಸ್ಮರಣಾ ದಿನದ ಆಚರಣೆ ವೇಳೆ ಸಾಹಿತಿ ಗಿರೀಶ್ ಕಾರ್ನಾಡ್ ಅವರು ನಾನು ಸಹ ನಗರ ನಕ್ಸಲ್ ಎಂಬ ಅಡಿಬರಹವಿದ್ದ ಬೋರ್ಡನ್ನು ಹಾಕಿಕೊಂಡು ಪರೋಕ್ಷವಾಗಿ ನಕ್ಸಲ್ ಚಟುವಟಿಕೆಗಳಿಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

    ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಗಿರೀಶ್ ಕಾರ್ನಾಡ್ ಸಾಹಿತಿಯಾಗಿದ್ದುಕೊಂಡು ಹಿಂಸೆಗೆ ಪರೋಕ್ಷವಾಗಿ ಪ್ರಚೋದನೆ ನೀಡುತ್ತಿದ್ದಾರೆ. ಈ ರೀತಿ ಮಾಡುವ ಮೂಲಕ ಅವರು ಉಗ್ರವಾದಿ ವ್ಯಕ್ತಿಗೆ ಸಮನಾಗಿದ್ದಾರೆ. ನಾನು ಒಬ್ಬ ನಕ್ಸಲ್ ಎನ್ನುವ ಹೇಳುವ ಮೂಲಕ ನಕ್ಸಲರಿಗೆ ಪ್ರಚೋದನೆ ನೀಡುತ್ತಿದ್ದಾರೆ. ಒಂದು ವೇಳೆ ಹಿಂದೂ ಸಂಘಟನೆಗಳು ಇಂತಹ ಹೇಳಿಕೆಗಳನ್ನು ನೀಡಿದ್ದರೆ, ಕೂಡಲೇ ಸ್ವಯಂಪ್ರೇರಿತ ಕೇಸ್ ದಾಖಲಿಸುತ್ತಿದ್ದರು ಎಂದು ಕಿಡಿಕಾರಿದರು.

    ಪ್ರಚೋದನೆಗೆ ಹೇಳಿಕೆ ನೀಡುವ ಹೇಳಿಕೆಗಳನ್ನು ನೀಡುತ್ತಿದ್ದರೂ, ಗಿರೀಶ್ ಕಾರ್ನಾಡ್ ವಿರುದ್ಧ ಸುಮೋಟೋ ಕೇಸ್ ಹಾಕಿಲ್ಲ. ನಮಗೊಂದು ಕಾನೂನು, ಅವರಿಗೊಂದು ಕಾನೂನು ಇದೆಯೇ ಎಂದು ಪ್ರಶ್ನಿಸಿದರು. ಅಲ್ಲದೇ ಶೀಘ್ರವೇ ಅವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ, ಕಾರ್ನಾಡ್ ಅವರ ಮನೆ ಮುಂದೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು.

    ಕಳೆದ ಬುಧವಾರ ಸೆಂಟ್ರಲ್ ಕಾಲೇಜಿನ ಜ್ಞಾನ ಜ್ಯೋತಿ ಸಂಭಾಗಣದಲ್ಲಿ ಗೌರಿ ಡೇ ಆಚರಣೆಯ ಕಾರ್ಯಕ್ರಮದಲ್ಲಿ ಗಿರೀಶ್ ಕಾರ್ನಾಡ್‍ರವರು `ನಾನು ಒಬ್ಬ ನಗರ ನಕ್ಸಲ್’ ಎನ್ನುವ ಬೋರ್ಡ್ ಹಾಕಿಕೊಳ್ಳುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಾವಿರಕ್ಕೂ ಅಧಿಕ ಶ್ರೀರಾಮಸೇನೆ ಕಾರ್ಯಕರ್ತರ ಸಾಮೂಹಿಕ ರಾಜೀನಾಮೆ!

    ಸಾವಿರಕ್ಕೂ ಅಧಿಕ ಶ್ರೀರಾಮಸೇನೆ ಕಾರ್ಯಕರ್ತರ ಸಾಮೂಹಿಕ ರಾಜೀನಾಮೆ!

    ಬೆಳಗಾವಿ: ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ನಡೆಗೆ ಬೇಸತ್ತು, ಒಂದು ಸಾವಿರಕ್ಕೂ ಅಧಿಕ ಸೇನಾ ಕಾರ್ಯಕರ್ತರು ನಗರದ ಖಾಸಬಾಗ್ ನಲ್ಲಿರುವ ಸಾಯಿ ಭವನದಲ್ಲಿ ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ.

    ಈ ಕುರಿತು ಮಾತನಾಡಿದ ಶ್ರೀರಾಮ ಸೇನೆಯ ಮಾಜಿ ಜಿಲ್ಲಾಧ್ಯಕ್ಷ ರಮಾಕಾಂತ್ ಕೊಂಡುಸ್ಕರ್ ರವರು, ಶ್ರೀರಾಮ ಸೇನೆಗೆ ಸೇರುವ ಮುನ್ನ ಯಾವುದೇ ರಾಜಕೀಯ ಪಕ್ಷಗಳ ಅಡಿಯಲ್ಲಿ ಕೆಲಸ ಮಾಡಬಾರದೆಂದು ಪ್ರಮಾಣ ಮಾಡಿದ್ದೇವು. ಆದರೆ ಶ್ರೀರಾಮ ಸೇನೆಯ ಮುಖ್ಯಸ್ಥರಾದ ಪ್ರಮೋದ್ ಮುತಾಲಿಕ್‍ರವರು ತಮಗೆ ಬೇಕಾದ ರಾಜಕೀಯ ಪಕ್ಷಗಳಿಗೆ ಬೆಂಬಲ ನೀಡುವಂತೆ ಹೇಳುತ್ತಾರೆ. ಅಲ್ಲದೇ ಬಿಜೆಪಿಯಲ್ಲಿ ಟಿಕೆಟ್ ನೀಡದಿದ್ದಾಗ, ಬಿಜೆಪಿಗೆ ವಿರೋಧ ಮಾಡಿ ಅನ್ನುತ್ತಾರೆ. ಮತ್ತೊಂದು ದಿನ ಅದೇ ಪಕ್ಷಕ್ಕೆ ಬೆಂಬಲ ನೀಡಬೇಕು ಎಂದು ಹೇಳುತ್ತಾರೆ. ಹೀಗಾಗಿ ಅವರ ನಡೆಗೆ ಬೇಸತ್ತು ಸಂಘಟನೆಯಿಂದ ಹೊರಬರಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.

    ಪ್ರಮೋದ್ ಮುತಾಲಿಕ್‍ರವರು ಕಾರ್ಯಕರ್ತರನ್ನು ತಮಗೆ ಬೇಕಾದ ಹಾಗೇ ಬಳಕೆ ಮಾಡಿಕೊಂಡು, ಆಮೇಲೆ ಕೈ ಬಿಡುತ್ತಾರೆ. ಹೀಗಾಗಿ ಜಿಲ್ಲೆಯ ಬಹುತೇಕ ಕಾರ್ಯಕರ್ತರು ಇಂದು ಸಾಮೂಹಿಕ ರಾಜೀನಾಮೆ ನೀಡಿದ್ದೇವೆ. ಇನ್ನು ಮುಂದೆ ಶ್ರೀರಾಮಸೇನೆ ಹಿಂದೂಸ್ಥಾನ ಎನ್ನುವ ಹೊಸ ಸಂಘಟನೆಯ ಮೂಲಕ ಕೆಲಸಗಳನ್ನು ಮುಂದುವರಿಸಿಕೊಂಡು ಹೋಗುತ್ತೇವೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಿಜೆಪಿಯವರಿಗೆ ಹಿಂದೂವಾದಿಗಳು ಬೇಕಾಗಿಲ್ಲ: ಪ್ರಮೋದ್ ಮುತಾಲಿಕ್

    ಬಿಜೆಪಿಯವರಿಗೆ ಹಿಂದೂವಾದಿಗಳು ಬೇಕಾಗಿಲ್ಲ: ಪ್ರಮೋದ್ ಮುತಾಲಿಕ್

    ಹಾಸನ: ಬಿಜೆಪಿಯವರಿಗೆ ಹಿಂದೂವಾದಿಗಳು ಬೇಕಾಗಿಲ್ಲ, ಕೇವಲ ಭ್ರಷ್ಟರು, ನೀಚರು ಹಾಗೂ ಕೊಲೆಗಡುಕರು ಬೇಕೆಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗುಡುಗಿದ್ದಾರೆ.

    ಸಕಲೇಶಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲ್ಲ, ಸದ್ಯದ ರಾಜಕೀಯ ಕುಲಗೆಟ್ಟು ಹೋಗಿದೆ. ಹಿಂದೂಪರ ಪಕ್ಷವೆಂದು ಗುರುತಿಸಿಕೊಂಡಿರುವ ಬಿಜೆಪಿಗೆ ಹಿಂದೂವಾದಿಗಳು ಬೇಕಾಗಿಲ್ಲ. ಕೇವಲ ಅವರಿಗೆ ಎಸ್.ಎಂ.ಕೃಷ್ಣ ಹಾಗೂ ಯೋಗೇಶ್ವರ್ ಅವರಂತಹ ಭ್ರಷ್ಟರು, ನೀಚರು ಹಾಗೂ ಕೊಲೆಗಡುಕರು ಬೇಕಾಗಿದ್ದಾರೆ. ನಮ್ಮಂಥ ಹಿಂದೂವಾದಿಗಳಿಗೆ ಬಿಜೆಪಿಯಲ್ಲಿ ಅವಕಾಶವಿಲ್ಲ. ಹೀಗಾಗಿ ನಾನು ಯಾವುದೇ ಪಕ್ಷಕ್ಕೂ ಸಹ ಹೋಗುವುದಿಲ್ಲವೆಂದು ಹೇಳಿದ್ದಾರೆ.

    ಈ ವೇಳೆ ಮಾಧ್ಯಮಗಳು ಬಸವಣ್ಣ ಹಾಗೂ ವಿವೇಕಾನಂದರ ಸಾವಿನ ಬಗ್ಗೆ ಪ್ರೋ.ಕೆ.ಎಸ್.ಭಗವಾನ್ ವಿವಾದಾತ್ಮಕ ಹೇಳಿಕೆ ವಿಚಾರ ಪ್ರಸ್ತಾಪಿಸಿದಾಗ, ಬಸವಣ್ಣ ಮತ್ತು ವಿವೇಕಾನಂದರ ಕೊಲೆಯಾಗಿದೆ ಅನ್ನೋದು ಹಾಸ್ಯಾಸ್ಪದ ಹಾಗೂ ಮೂರ್ಖತನದ ಹೇಳಿಕೆ. ಅವರು ಭಗವಾನ್ ಅಲ್ಲ ಸೈತಾನಾಗಿರಬೇಕು, ಹಾಗಾಗಿ ಅಂತಹ ಹೇಳಿಕೆಗಳನ್ನು ನೀಡಿದ್ದಾರೆ. ಇಬ್ಬರು ಮಹಾನ್ ವ್ಯಕ್ತಿಗಳ ಬಗ್ಗೆ ಮಾತನಾಡುವ ಯೋಗ್ಯತೆ ಅವರಿಗಿಲ್ಲ. ಅವರು ಶುದ್ಧ ಅಯೋಗ್ಯರು ಎಂದು ಕಿಡಿಕಾರಿದರು.

    ನಂತರ ಮಾತನಾಡಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಲ್ಲಿ ಶ್ರೀರಾಮ ಸೇನೆ ಅಥವಾ ಹಿಂದೂ ಸಂಘಟನೆಗಳ ಯಾವುದೇ ಪಾತ್ರ ಇಲ್ಲ. ಆದರೂ ತನಿಖೆಯ ದಿಕ್ಕನ್ನು ತಪ್ಪಿಸಲಾಗುತ್ತಿದೆ. ಸರ್ಕಾರಕ್ಕೆ ನಿಜವಾದ ಹಂತಕರು ಬೇಕಿಲ್ಲ, ಕೇವಲ ಹಿಂದೂ ಸಂಘಟನೆಗಳನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ಈ ಬಗ್ಗೆ ನಕ್ಸಲರ ಮೇಲೆ ಸಂಶಯ ಹೊಂದಿದ್ದರೂ, ಆ ನಿಟ್ಟಿನಲ್ಲಿ ತನಿಖೆ ಮಾಡುತ್ತಿಲ್ಲ ಎಂದು ಆರೋಪಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಕ್ರಮ ಬಾಂಗ್ಲಾನಿವಾಸಿಗಳನ್ನು ಗಡಿಪಾರು ಮಾಡಿ: ಶ್ರೀರಾಮ ಸೇನೆ

    ಅಕ್ರಮ ಬಾಂಗ್ಲಾನಿವಾಸಿಗಳನ್ನು ಗಡಿಪಾರು ಮಾಡಿ: ಶ್ರೀರಾಮ ಸೇನೆ

    ಯಾದಗಿರಿ: ದೇಶದಲ್ಲಿರುವ ಅಕ್ರಮ ಬಾಂಗ್ಲಾ ನಿವಾಸಿಗಳನ್ನು ಗಡಿಪಾರು ಮಾಡುವಂತೆ ನಗರದ ಜಿಲ್ಲಾಡಳಿತ ಕಚೇರಿ ಮುಂಭಾಗ ಶ್ರೀರಾಮ ಸೇನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

    ದೇಶದಲ್ಲಿ ಅಕ್ರಮವಾಗಿ ವಾಸವಾಗಿರುವ ಬಾಂಗ್ಲಾ ದೇಶದ ವಲಸಿಗರು ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ, ಕೊಲೆ, ದರೋಡೆ ಸೇರಿದಂತೆ ಇನ್ನಿತರ ಅನೈತಿಕ ಚಟುವಟಿಕೆಗಳಲ್ಲಿ ಹೆಚ್ಚಾಗಿ ಭಾಗಿಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಅವರನ್ನೆಲ್ಲಾ ಗಡಿ ಪಾರು ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.

    ಬೆಂಗಳೂರು ನಗರ ಸೇರಿದಂತೆ ಇತರ ಜಿಲ್ಲೆಯಲ್ಲಿ ಡ್ರಗ್ಸ್ ಮಾಫಿಯಾದಲ್ಲಿ ಬಾಂಗ್ಲಾ ವಲಸಿಗರು ಹೆಚ್ಚಾಗಿ ಗುರುತಿಸಿಕೊಂಡಿದ್ದಾರೆ. ಇಂತಹ ಅಕ್ರಮ ವಲಸಿಗರು ನಮ್ಮ ದೇಶದಲ್ಲಿದ್ದರೆ ನಮ್ಮ ದೇಶಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ. ಈ ಹಿನ್ನಲೆಯಲ್ಲಿ ಅವರನ್ನು ನಮ್ಮ ರಾಜ್ಯ, ದೇಶದಿಂದ ಹೊರಹಾಕಬೇಕು, ಅವರಿಗೆ ಯಾವುದೇ ಸೌಲಭ್ಯಗಳನ್ನು ನೀಡದೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಕ್ರೋಶ ಹೊರಹಾಕಿದರು.

    ರಾಜ್ಯ ಸರ್ಕಾರ ಬಾಂಗ್ಲಾ ನಿವಾಸಿಗಳಿಗೆ ವೀಸಾ ನೀಡಬಾರದು. ಇನ್ನಷ್ಟು ಜನರನ್ನು ಹಾಳು ಮಾಡುವ ಮುನ್ನ ಅವರನ್ನು ರಾಜ್ಯದಿಂದ ಮತ್ತು ದೇಶದಿಂದ ಗಡಿಪಾರು ಮಾಡಬೇಕೆಂದು ಶ್ರೀರಾಮ ಸೇನೆಯ ಕಾರ್ಯಕರ್ತರು ಪ್ರತಿಭಟನೆ ಮಾಡುವ ಮೂಲಕ ಸರ್ಕಾರಕ್ಕೆ ಒತ್ತಾಯ ಮಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews