Tag: Srirama Sene

  • ಬಾಂಬ್ ಸ್ಫೋಟವಾಗಲು ಎರಡೂ ರಾಷ್ಟ್ರೀಯ ಪಕ್ಷದವರು ಕಾರಣ: ಪ್ರಮೋದ್ ಮುತಾಲಿಕ್

    ಬಾಂಬ್ ಸ್ಫೋಟವಾಗಲು ಎರಡೂ ರಾಷ್ಟ್ರೀಯ ಪಕ್ಷದವರು ಕಾರಣ: ಪ್ರಮೋದ್ ಮುತಾಲಿಕ್

    ಕಾರವಾರ: ಬೆಂಗಳೂರು ಬಾಂಬ್ ಸ್ಪೋಟ ಪೂರ್ವಯೋಜಿತ ಕೃತ್ಯ. ಸತ್ಯಾಸತ್ಯತೆ ಹೊರಬರಬೇಕಾದ್ರೆ NIA ತನಿಖೆಗೆ ವಹಿಸಬೇಕು. ಎರಡೂ ರಾಷ್ಟ್ರೀಯ ಪಕ್ಷಗಳು ಬಾಯಿ ಮುಚ್ಚಿಕೊಂಡು ಕೂರಬೇಕು. ನಿಮ್ಮ ನಿಮ್ಮ ಕಾಲದಲ್ಲಿ ಏನೇನು ಆಗಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಿ. ಬಾಂಬ್ ಸ್ಫೋಟ ಆಗಲು ಎರಡೂ ಪಕ್ಷದವರು ಕಾರಣ ಇದ್ದೀರಿ. ನಿಮ್ಮ ರಾಜಕೀಯ ಲಾಭಕ್ಕಾಗಿ ಇಲ್ಲಸಲ್ಲದ ಹೇಳಿಕೆ ಕೊಡಬೇಡಿ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದರು. ‌

    ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಪಕ್ಷಗಳ ಹೇಳಿಕೆಗಳು ತನಿಖೆಯ ದಾರಿ ತಪ್ಪಿಸಲಿದೆ. ಬಿಜೆಪಿ ಅವಧಿಯಲ್ಲಿಯೂ ಸ್ಫೋಟ ನಡೆದಿತ್ತು. ಕಾಂಗ್ರೆಸ್ ಅವಧಿಯಲ್ಲೂ ನಡೆದಿದೆ. ರಾಜಕೀಯ ಪಕ್ಷಗಳ ನಿರ್ಲಕ್ಷ್ಯದ ಪರಿಣಾಮವೇ ಪದೇ ಪದೇ ಬಾಂಬ್ ಸ್ಫೋಟಕ್ಕೆ ಕಾರಣ. ರಾಜ್ಯ ಸರ್ಕಾರದ ಬದಲು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕು. ರಾಜ್ಯ ಸರ್ಕಾರ ಪೊಲೀಸರ ಕೈ ಕಟ್ಟಿಹಾಕಿದೆ. ಪೊಲೀಸರನ್ನು ಫ್ರೀಯಾಗಿ ತನಿಖೆಗೆ ಬಿಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಯಾರ ಅನುಮತಿ ಪಡೆದು ಪರೀಕ್ಷೆ ಮಾಡಿದ್ದಾರೆ- ಖಾಸಗಿ ಎಫ್‌ಎಸ್‌ಎಲ್‌ ವರದಿಗೆ ಪರಮೇಶ್ವರ್‌ ಗರಂ

    ಪಾಕಿಸ್ತಾನ ಪರ ಘೋಷಣೆ ಕೂಗುವವರು ದೇಶದ ಪಾಲಿಗೆ ಕ್ಯಾನ್ಸರ್ ವೈರಸ್ ಇದ್ದಂತೆ. ಮೊದಲು ನಾಸಿರ್ ಹುಸೇನ್ ಮೇಲೆ ಕ್ರಮ ಕೈಗೊಳ್ಳಬೇಕು. ಭಟ್ಕಳಕ್ಕೆ ಪಾಕಿಸ್ತಾನದ ನಂಟಿದೆ ಎಂದು ಜಗನ್ನಾಥ ಶೆಟ್ಟಿ ಆಯೋಗ ವರದಿ ನೀಡಿತ್ತು. ವರದಿಯನ್ನು ಬಿಜೆಪಿ ಅಧಿಕಾರದಲ್ಲಿದ್ದಾಗಲೇ ಒಪ್ಪಲಿಲ್ಲ. ಬಿಜೆಪಿ, ಕಾಂಗ್ರೆಸ್ ಗೆ ಹೆಚ್ಚು ವ್ಯತ್ಯಾಸವಿಲ್ಲ ಎಂದರು. ಇದನ್ನೂ ಓದಿ: ರಾಜಕೀಯ ಪ್ರವೇಶಕ್ಕೆ ಮಂಜುನಾಥ್ ಸಮ್ಮತಿ ಸೂಚಿಸುವುದಿಲ್ಲ: ಹೆಚ್‌ಡಿಡಿ ಅಚ್ಚರಿಯ ಹೇಳಿಕೆ

    ಜಾತಿ ಗಣತಿ ವರದಿಗೆ ವಿರೋಧವಿದೆ. ದೇಶದಲ್ಲಿ ಒಟ್ಟಾಗಿ ಸಾಗಬೇಕಿದೆ. ರಾಜಕೀಯ ಪಕ್ಷಗಳು ಸಮುದಾಯಗಳನ್ನು ಒಡೆದು ಆಳಲು ಈ ವರದಿ ಸಿದ್ದಪಡಿಸಿವೆ. ಇದೊಂದು ಅವೈಜ್ಞಾನಿಕ ವರದಿ ಎಂದರು.

    ದೇಶಕ್ಕೆ ಒಳಿತಾಗಬೇಕೆಂದರೆ ರಾಜ್ಯದ ಕೆಲ ಬಿಜೆಪಿ ನಾಯಕರು ಸ್ವಯಂ ನಿವೃತ್ತಿ ತೆಗೆದುಕೊಂಡು ಬೇರೆಯವರಿಗೆ ಮಾದರಿಯಾಗಲಿ. ಆದರೆ ನಿವೃತ್ತಿ ಆಗಬೇಕಾದವರ ಹೆಸರು ಬಹಿರಂಗವಾಗಿ ಹೇಳುವುದಿಲ್ಲ ಎಂದು ಹೇಳಿದರು.

  • ಲವ್ ಜಿಹಾದ್‍ಗೆ ಪ್ರೇರಣೆ ನೀಡುತ್ತೆ- ಆನ್‍ಲೈನ್ ವಿವಾಹ ನೋಂದಣಿಗೆ ಶ್ರೀರಾಮಸೇನೆ ಖಂಡನೆ

    ಲವ್ ಜಿಹಾದ್‍ಗೆ ಪ್ರೇರಣೆ ನೀಡುತ್ತೆ- ಆನ್‍ಲೈನ್ ವಿವಾಹ ನೋಂದಣಿಗೆ ಶ್ರೀರಾಮಸೇನೆ ಖಂಡನೆ

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಶುಕ್ರವಾರ ಮಂಡಿಸಿದ್ದ ರಾಜ್ಯ ಬಜೆಟ್‍ನಲ್ಲಿ (Karnataka Budget 2023) ಆನ್‍ಲೈನ್ ವಿವಾಹ ನೋಂದಣಿ (Online Marriage Registration) ಜಾರಿಗೆ ತರುವುದಾಗಿ ಘೋಷಿಸಿದ್ದಾರೆ. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಇದೀಗ ಶ್ರೀರಾಮ ಸೇನೆ ತೀವ್ರ ವಿರೋಧ ವ್ಯಕ್ತಪಡಿಸಿದೆ.

    ಈ ಸಂಬಂಧ ಮಾತನಾಡಿರುವ ಶ್ರೀರಾಮಸೇನೆಯ (SriramaSene) ಅಧ್ಯಕ್ಷ ಪ್ರಮೋದ್ ಮುತಾಲಿಕ್ (Pramod Muthalik), ಲವ್ ಜಿಹಾದ್ (Love Jihad) ಪ್ರಕರಣ ಹೆಚ್ಚಾಗ್ತಿರುವ ನಡುವೆ ಈ ಆನ್‍ಲೈನ್ ವಿವಾಹ ನೋಂದಣಿ ಕುಮ್ಮಕ್ಕು ಕೊಡುತ್ತಿದೆ. ಹೀಗಾಗಿ ಇದನ್ನು ಶ್ರೀರಾಮ ಸೇನೆ ತೀವ್ರವಾಗಿ ಖಂಡಿಸುತ್ತದೆ. ಅಲ್ಲದೆ ಇದರ ವಿರುದ್ಧ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

    ತಂದೆ-ತಾಯಿಗೆ ಗೊತ್ತಾಗದೇ ಮುಸ್ಲಿಂ, ಕ್ರಿಶ್ಚಿಯನ್ ಹಾಗೂ ಹಿಂದೂಗಳು ಆನ್‍ಲೈನ್ ನಲ್ಲಿ ನೋಂದಣಿ ಮಾಡಿಕೊಳ್ಳುವ ಮೂಲಕ ಸುಲಭವಾಗಿ ಮದುವೆ ಆಗುತ್ತಾರೆ. ಹೀಗಾಗಿ ಇದರಿಂದ ದೋಖಾ ಆಗುತ್ತದೆ. ನೇರವಾಗಿ ರಿಜಿಸ್ಟ್ರಾರ್ ಆಫೀಸ್ ಗೆ ತೆರಳಿ ನೋಂದಣಿ ಮಾಡುವ ಪದ್ಧತಿಯೇ ಯೋಗ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಆನ್‍ಲೈನ್ ನೋಂದಣಿ ರದ್ದು ಮಾಡಬೇಕು ಹೊರತು ಜಾರಿ ಮಾಡಬಾರದು ಎಂದು ಆಗ್ರಹಿಸಿದರು. ಇದನ್ನೂ ಓದಿ: ಅಚ್ಚರಿಯಾದ್ರೂ ಸತ್ಯ- ಅದಾನಿಗೆ ಸೇರಿದ 6 ಸಾವಿರ ಕೆ.ಜಿಯ ಸೇತುವೆ ಕಳ್ಳತನ!

    ಆಫ್‍ಲೈನ್ ನೋಂದಣಿಯಲ್ಲಿ ಏನಾದರೂ ಸಮಸ್ಯೆ ಇದ್ದರೆ ಆಕ್ಷೇಪಣೆಗೆ ಅವಕಾಶ ಇತ್ತು. ಆದರೆ ಆನ್‍ಲೈನ್ ನೋಂದಣಿಯಲ್ಲಿ ಆಕ್ಷೇಪಣೆಗೆ ಅವಕಾಶ ಇಲ್ಲ. ಇದರಿಂದ ವಿವಾಹ ವಿಚಾರದಲ್ಲಿ ಮೋಸ ಆಗುವ ಸಾಧ್ಯತೆಗಳು ಹೆಚ್ಚಿವೆ. ಹೀಗಾಗಿ ಆನ್‍ಲೈನ್ ವಿವಾಹ ನೋಂದಣಿ ವಾಪಸ್ ಪಡೆಯದಿದ್ದರೆ ಹೋರಾಟ ಮಾಡುವುದಾಗಿ ಮುತಾಲಿಕ್ ತಿಳಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾರ್ಕಳದಿಂದಲೇ ಸ್ಪರ್ಧೆ- ಸುನೀಲ್‌ ಕುಮಾರ್‌ಗೆ ಸೆಡ್ಡು

    ಕಾರ್ಕಳದಿಂದಲೇ ಸ್ಪರ್ಧೆ- ಸುನೀಲ್‌ ಕುಮಾರ್‌ಗೆ ಸೆಡ್ಡು

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕ್ಲಬ್‌ಹೌಸ್‌ನಲ್ಲಿ ಪಾಕಿಸ್ತಾನ ಪರ ಘೋಷಣೆ- ವಿಕೃತಿ ಮೆರೆದ ಕಿಡಿಗೇಡಿಗಳ ವಿರುದ್ಧ FIR

    ಕ್ಲಬ್‌ಹೌಸ್‌ನಲ್ಲಿ ಪಾಕಿಸ್ತಾನ ಪರ ಘೋಷಣೆ- ವಿಕೃತಿ ಮೆರೆದ ಕಿಡಿಗೇಡಿಗಳ ವಿರುದ್ಧ FIR

    ಬೆಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದಂದು ಕ್ಲಬ್ ಹೌಸ್‌ನಲ್ಲಿ ಕಿಡಿಗೇಡಿಗಳ ಗುಂಪೊಂದು ಪಾಕ್ ಧ್ವಜ ಹಾಕಿ ಉದ್ಧಟತನ ಪ್ರದರ್ಶಿಸಿದೆ.

    ಪಾಕಿಸ್ತಾನ ಜಿಂದಾಬಾದ್, ಭಾರತಕ್ಕೆ ನಿಂದನೆ ಮಾಡುವ ಕಾಮೆಂಟ್‌ಗಳನ್ನ ಕನ್ನಡದಲ್ಲಿ ಹಾಕಿ ವಿಕೃತಿ ಮೆರೆದಿದ್ರು. ಪಾಕಿಸ್ತಾನದ ರಾಷ್ಟ್ರಗೀತೆ ಸಹ ಅಪ್ಲೋಡ್ ಮಾಡಿದ್ರು, ನಮ್ಮನ್ನ ಏನೂ ಮಾಡೋಕೆ ಆಗಲ್ಲ ಅಂತ ಜಂಬ ಮೆರೆದಿದ್ದಾರೆ. ಇದೀಗ ಕಿಡಿಗೇಡಿಗಳ ವಿರುದ್ಧ ಐಪಿಸಿ 353A ಅಡಿ ಸಂಪಿಗೆಹಳ್ಳಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸದ್ಯ ಕಿಡಿಗೇಡಿಗಳ ಎಸ್ಕೇಪ್ ಆಗಿದ್ದು ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಜನರನ್ನು ದಾರಿ ತಪ್ಪಿಸಬೇಡಿ: ಬಾಬಾ ರಾಮದೇವ್‌ ವಿರುದ್ಧ ದೆಹಲಿ ಹೈಕೋರ್ಟ್‌ ಕಿಡಿ

    ಆಜಾನ್ ಸಮರಕ್ಕೆ ಕರೆ: ರಾಜ್ಯದಲ್ಲಿ ಮತ್ತೆ ಮೈಕ್ ದಂಗಲ್ ಶುರುವಾಗಿದೆ. ಆಜಾನ್‌ಗೆ ಬಳಸೋ ಧ್ವನಿವರ್ಧಕ ವಿರುದ್ಧ ಮತ್ತೊಂದು ಸುತ್ತಿನ ಹೋರಾಟಕ್ಕೆ ಶ್ರೀರಾಮಸೇನೆ ಸಜ್ಜಾಗಿದೆ. ಆಗಸ್ಟ್ 23 ರಂದು ರಾಜ್ಯದ ಎಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಮಾಡೋದಾಗಿ ಕಲಬುರಗಿಯಲ್ಲಿ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮಿ ಹೇಳಿದ್ದಾರೆ.  ಇದನ್ನೂ ಓದಿ: ರೀಲ್ಸ್ ಮಾಡಲು ಮಹಿಳೆಯ ಕತ್ತು ಸೀಳಿ ಮೊಬೈಲ್ ಕದ್ದ ಅಪ್ರಾಪ್ತ

    ರಾಜ್ಯದಲ್ಲಿ ಅನಧಿಕೃತವಾಗಿ ಆಜಾನ್‌ಗೆ ಮೈಕ್ ಗಳನ್ನು ಬಳಸಲಾಗುತ್ತಿದೆ. ಸರ್ಕಾರದ ಸುತ್ತೋಲೆಯಂತೆ ಕಡಿಮೆ ಡೆಸಿಬಲ್ ಬಳಸುತ್ತಿಲ್ಲ. ಹೀಗಾಗಿ ಆಗಸ್ಟ್ 23 ರಂದು ಬೃಹತ್ ಪ್ರತಿಭಟನೆ ನಡೆಸುತ್ತೇವೆ ಅಂತ ಸಿದ್ದಲಿಂಗ ಸ್ವಾಮಿ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶಿವು ಉಪ್ಪಾರ್ ಕೇಸ್ – ನ್ಯಾಯಕ್ಕಾಗಿ `ಬೆಳಗಾವಿ ಚಲೋ’ಗೆ ಕರೆ ನೀಡಿದ ಶ್ರೀರಾಮ ಸೇನೆ

    ಶಿವು ಉಪ್ಪಾರ್ ಕೇಸ್ – ನ್ಯಾಯಕ್ಕಾಗಿ `ಬೆಳಗಾವಿ ಚಲೋ’ಗೆ ಕರೆ ನೀಡಿದ ಶ್ರೀರಾಮ ಸೇನೆ

    ದಾವಣಗೆರೆ: ಗೋ ರಕ್ಷಕ ಶಿವು ಉಪ್ಪಾರ್ ಸಾವಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿ ಜುಲೈ 8ರಂದು ಬೆಳಗಾವಿ ಚಲೋ ಕಾರ್ಯಕ್ರಮ ನಡೆಸುತ್ತಿದ್ದೇವೆ. ಆರೋಪಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲವೆಂದರೆ ಹೋರಾಟ ನಡೆಸುತ್ತೇವೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಎಚ್ಚರಿಗೆ ನೀಡಿದ್ದಾರೆ.

    ದಾವಣಗೆರೆಯಲ್ಲಿ ಮಾತನಾಡಿದ ಅವರು, ಗೋ ರಕ್ಷಕ ಶಿವು ಉಪ್ಪಾರ್ ಸಾವು ಆತ್ಮಹತ್ಯೆಯಿಂದ ಆಗಿದಲ್ಲ, ಅವನನ್ನು ಹತ್ಯೆ ಮಾಡಿದ್ದಾರೆ. ಹತ್ಯೆ ಮಾಡಿದವರನ್ನು ಕೂಡಲೇ ಬಂಧಿಸಬೇಕು. ಈ ಸಂಬಂಧ ಎಲ್ಲಾ ಸಾಕ್ಷಿಗಳಿದ್ದರೂ ಆರೋಪಿಗಳನ್ನು ಯಾಕೆ ಬಂಧಿಸುತ್ತಿಲ್ಲ ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದರು.

    ಈ ಸಂಬಂಧ ಗೋ ರಕ್ಷಕನ ಸಾವಿಗೆ ನ್ಯಾಯ ನೀಡಲು ಜುಲೈ 8ಕ್ಕೆ ಶ್ರೀರಾಮ ಸೇನೆ ನೇತೃತ್ವದಲ್ಲಿ ಎಲ್ಲಾ ಹಿಂದೂ ಸಂಘಟನೆಗಳು ಸೇರಿ ಬೆಳಗಾವಿ ಚಲೋ ಹಮ್ಮಿಕೊಂಡಿದ್ದು, ಇದರಲ್ಲಿ 25 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರಿಂದ ಕೇಂದ್ರ ಸಚಿವ ಸುರೇಶ್ ಅಂಗಡಿಗೆ ಘೇರಾವ್ ಹಾಕಲಾಗುವುದು ಎಂದು ತಿಳಿಸಿದರು.

    ಆರೋಪಿಗಳ ವಿರುದ್ಧ ಕ್ರಮ ತೆಗೆದುಕೊಂಡು ಸರ್ಕಾರ ಶಿವು ಕುಟುಂಬಕ್ಕೆ ಹತ್ತು ಲಕ್ಷ ರೂಪಾಯಿ ಪರಿಹಾರ ನೀಡಬೇಕು. ಸರ್ಕಾರ ಆರೋಪಿಗಳನ್ನು ಬಂಧಿಸದಿದ್ದರೆ ಡಿಸಿ ಕಚೇರಿಗೆ ಘೇರಾವ್ ಹಾಕಲು ನಿರ್ಧಾರಿಸಿದ್ದೇವೆ. ಈ ಕೊಲೆ ಪ್ರಕರಣದ ಸಮಗ್ರ ತನಿಖೆ ನಡೆಸದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಗೆ ಕೊಟ್ಟರು.

    ಬಿಜೆಪಿ, ಕಾಂಗ್ರೆಸ್ ಸೇರಿ ಎಲ್ಲಾ ಪಕ್ಷದವರಿಗೂ ಒಂದು ಹಸುವಿಗೆ ಇಂತಿಷ್ಟು ಹಣ ಎಂದು ಮಾಮೂಲಿ ಹೋಗುತ್ತಿದೆ. ಕಸಾಯಿಖಾನೆಗಳಿಗೆ ಹಸು ಸಾಗಾಟಕ್ಕೆ ತಡೆ ಹಾಕಲೇಬೇಕು. ಇಲ್ಲದಿದ್ದರೆ ಶ್ರೀರಾಮ ಸೇನೆ ನೇತೃತ್ವದಲ್ಲಿ ತಡೆ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

  • ರಾಮಮಂದಿರ ಮಾಡದೆ ಇದ್ದರೆ ಮೋದಿ ಹಿಂದೂಗಳಿಗೆ ದ್ರೋಹ ಬಗೆದಂತೆ: ಪ್ರಮೋದ್ ಮುತಾಲಿಕ್

    ರಾಮಮಂದಿರ ಮಾಡದೆ ಇದ್ದರೆ ಮೋದಿ ಹಿಂದೂಗಳಿಗೆ ದ್ರೋಹ ಬಗೆದಂತೆ: ಪ್ರಮೋದ್ ಮುತಾಲಿಕ್

    ಧಾರವಾಡ: ರಾಮಮಂದಿರ ನಿರ್ಮಾಣ ಮಾಡದೇ ಇದ್ದರೆ, ಪ್ರಧಾನಿ ನರೇಂದ್ರ ಮೋದಿಯವರು ಹಿಂದೂಗಳಿಗೆ ದ್ರೋಹ ಬಗೆದಂತಾಗುತ್ತದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.

    ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣ ಆಗಬೇಕೆಂದು 100 ಕೋಟಿ ಹಿಂದೂಗಳ ಆಶಯವಾಗಿದೆ. ಆದರೆ ಇದು ಬಿಜೆಪಿಯವರಿಗೆ ಲಾಭ ಆಗುತ್ತಿದೆ. ಬಿಜೆಪಿಯವರು ರಾಮ ಮಂದಿರ ನಿರ್ಮಿಸುತ್ತೇವೆ ಎಂದು ತಮ್ಮ ಪ್ರಣಾಳಿಕೆಯಲ್ಲಿ ಹಾಕಿದ್ದರು. ಅಲ್ಲದೇ ಜನರು, ಸಂತರೂ ಸಹ ಈಗ ಒತ್ತಾಯ ಮಾಡುತ್ತಿದ್ದಾರೆ. ಮುಂಬರುವ ಚುನಾವಣೆ ವೇಳೆಗೆ ರಾಮ ಮಂದಿರ ನಿರ್ಮಾಣವಾಗಬೇಕು. ಈ ಬಾರಿ ಮಾಡದೇ ಇದ್ದರೆ, ಪ್ರಧಾನಿ ಮೋದಿಯವರು ಹಿಂದೂಗಳಿಗೆ ದ್ರೋಹ ಬಗೆದಂತಾಗುತ್ತದೆ. ಈ ಹಿಂದೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಇದೇ ರೀತಿ ಮಾಡಿದ್ದರು. ಹೀಗಾಗಿ ನಾವು ಅವರನ್ನು ಕೆಳಗೆ ಇಳಿಸಿದ್ದೇವು ಎಂದರು.

    ಇದೇ ವೇಳೆ ಗೋರಕ್ಷಕರ ಮೇಲೆ ಹಲ್ಲೆ ಕುರಿತು ಪ್ರತಿಕ್ರಿಯಿಸಿ, ಹಿಂದೂ ಕಾರ್ಯಕರ್ತರಿಗೆ ಗೋಮಾಂಸ ಸಾಗಾಟದ ವಿಷಯ ಗೊತ್ತಾಗುತ್ತದೆ. ಆದರೆ ಪೊಲೀಸರಿಗೆ ಸಾಗಾಟದ ಬಗ್ಗೆ ಮಾಹಿತಿ ಗೊತ್ತಿರಲಿಲ್ಲವೇ? ಪೊಲೀಸರ ಕೆಲಸ ಇರೋದೆ ಪತ್ತೆ ಮಾಡುವುದಕ್ಕೆ. ಹಾಗಾದರೇ ಅವರು ಏನು ಕತ್ತೆ ಕಾಯುತ್ತಿದ್ದರಾ ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದರು.

    ರಾಜ್ಯ ಪೊಲೀಸ್ ಇಲಾಖೆ ವಿರುದ್ಧ ಹರಿಹಾಯ್ದ ಅವರು, ಅಕ್ರಮವಾಗಿ ಗೋಮಾಂಸವನ್ನು ಸಾಗಿಸುತ್ತಾರೆ. ಅವರ ಹಿಂದೆ ಕಾರುಗಳನ್ನು ಫಾಲೋ ಮಾಡಿ, ಅದು ಬಿಟ್ಟು ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದೆ. ಅಕ್ರಮ ಚಟುವಟಿಕೆಗಳನ್ನು ನಿಲ್ಲಿಸಲು ನಿಮ್ಮನ್ನು ನೇಮಿಸಲಾಗಿದೆ. ಆದರೆ ಈ ಬಗ್ಗೆ ಪೊಲೀಸರನ್ನು ಪ್ರಶ್ನಿಸಿದರೆ, ಅಕ್ರಮ ಇಲ್ಲ ಪರವಾನಿಗೆ ಇದೆ ಎಂದು ಹೇಳುತ್ತಿದ್ದಾರೆ. ಹಾಗಾದರೆ ಪರವಾನಿಗೆ ಇದ್ದಿದ್ದರೆ, ಅದನ್ನು ತೋರಿಸಬೇಕಿತ್ತು. ಕದ್ದು ಮುಚ್ಚಿ ಏಕೆ ಹೋಗಬೇಕಿತ್ತು ಎಂದು ಪ್ರಶ್ನಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮತಾಂಧ ಟಿಪ್ಪು ದಿನಾಚರಣೆ ಮಾಡುತ್ತಿರುವುದು ಖಂಡನೀಯ: ಪ್ರಮೋದ್ ಮುತಾಲಿಕ್

    ಮತಾಂಧ ಟಿಪ್ಪು ದಿನಾಚರಣೆ ಮಾಡುತ್ತಿರುವುದು ಖಂಡನೀಯ: ಪ್ರಮೋದ್ ಮುತಾಲಿಕ್

    ವಿಜಯಪುರ: ಟಿಪ್ಪು ಓರ್ವ ಮತಾಂಧ, ಕನ್ನಡ ದ್ರೋಹಿ. ಅಂತವನ ಜಯಂತಿ ಆಚರಣೆ ಮಾಡುತ್ತಿರುವುದು ದುರದೃಷ್ಟದ ಸಂಗತಿಯೆಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

    ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಮುಸ್ಲಿಂ ಮತಗಳ ಓಲೈಕೆಗಾಗಿ ಕಾಂಗ್ರೆಸ್ ಟಿಪ್ಪು ಜಯಂತಿಯನ್ನು ಶುರು ಮಾಡುತ್ತಿದೆ. ಬಿಜೆಪಿಯು ಸಹ ಇದನ್ನು ಸಮಯಕ್ಕೆ ತಕ್ಕ ಹಾಗೆ ಬಳಸಿಕೊಳ್ಳುತ್ತಿದೆ. ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆ ಮಾಡಲು ಸಿದ್ಧತೆ ನಡೆಸಿದ್ದರೂ, ಸಿಎಂ ಕುಮಾರಸ್ವಾಮಿ ಜಯಂತಿಯಿಂದ ದೂರ ಉಳಿದಿದ್ದು ಒಳ್ಳೆಯ ಸಂಗತಿ. ಕನ್ನಡಿಗರ ಮಾನ ಉಳಿಸಿದ್ದಕ್ಕೆ ನಾನು ಸಿಎಂ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

    ಕಳೆದ ಎರಡು ವರ್ಷಗಳಿಂದಲೂ ನಾನು ಟಿಪ್ಪು ಜಯಂತಿ ವಿರೋಧಿಸುತ್ತಾ ಬಂದಿದ್ದೇನೆ. ಏಕೆಂದರೆ ಟಿಪ್ಪು ಒಬ್ಬ ಮತಾಂಧ, ತನ್ನ ಅಧಿಕಾರದ ಅವಧಿಯಲ್ಲಿ ಸಾವಿರಾರು ಹಿಂದೂ ದೇವಸ್ಥಾನಗಳನ್ನು ಕೆಡವಿ, ಮಸೀದಿಗಳನ್ನು ಕಟ್ಟಿಸಿದ್ದ. ಅಲ್ಲದೇ ಲಕ್ಷಾಂತರ ಹಿಂದೂಗಳು ಹಾಗೂ ಕ್ರಿಶ್ಚಿಯನ್ನರನ್ನು ಇಸ್ಲಾಂಗೆ ಬಲವಂತವಾಗಿ ಮತಾಂತರ ಮಾಡಿದ್ದ. ಈಗಲೂ ಸಹ ಕೊಡಗು, ದಕ್ಷಿಣ ಕನ್ನಡ ಹಾಗೂ ಕೇರಳದ ಮಲಬಾರ್ ಗಳಲ್ಲಿ ಮತಾಂತರವಾಗಿದ್ದವರನ್ನು ನೋಡಬಹುದು. ಇದಲ್ಲದೇ ಮೈಸೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಉರ್ದು ಹೆಸರನ್ನಿಡುವ ಮೂಲಕ ಕನ್ನಡಕ್ಕೆ ಅಪಮಾನ ಮಾಡಿದ್ದ. ಅವನೊಬ್ಬ ಕನ್ನಡ ದ್ರೋಹಿ. ಅವನು ಯಾವುದೇ ಮಹಾತ್ಮನಲ್ಲ, ಅವನೊಬ್ಬ ಕ್ರೂರಿ ಎಂದು ಆಕ್ರೋಶ ಹೊರಹಾಕಿದರು.

    ಮುಸ್ಲಿಂ ಬಾಂಧವರಲ್ಲಿ ನಾನು ಕೇಳುವುದೇನೆಂದರೆ, ಇಸ್ಲಾಂ ಹಾಗೂ ಕುರಾನ್ ನಲ್ಲಿ ನೀವುಗಳು ಅಲ್ಲಾನನ್ನು ಹೊರತು ಪಡಿಸಿ, ಯಾರೊಬ್ಬರ ಜಯಂತಿಯನ್ನು ಆಚರಣೆ ಮಾಡುವಂತಿಲ್ಲ. ಆದರೆ ಈಗ ಟಿಪ್ಪು ಜಯಂತಿ ಆಚರಣೆ ಮಾಡುವ ಮೂಲಕ ಅಲ್ಲಾನಿಗೆ ದ್ರೋಹ ಮಾಡುತ್ತಿದ್ದೀರಿ. ಸಾಮಾಜಿಕ ಜಾಲತಾಣದಲ್ಲಿ ಟಿಪ್ಪು ಜಯಂತಿ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡವರ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ತನ್ನ ದಬ್ಬಾಳಿಕೆಯ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದಮನ ಮಾಡುತ್ತಿದೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ನೀಡಿದ್ದ ಸ್ವಾತಂತ್ರ್ಯವನ್ನು ಕಾಂಗ್ರೆಸ್ ದಬ್ಬಾಳಿಕೆಯಿಂದ ಕಿತ್ತುಕೊಳ್ಳುತ್ತಿದೆ ಎಂದು ಕಿಡಿಕಾರಿದರು.

    ರಾಜ್ಯಾದ್ಯಂತ ಶ್ರೀರಾಮ ಸೇನೆಯು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಟಿಪ್ಪು ಜಯಂತಿ ಮಾಡದಂತೆ ಮನವಿ ಪತ್ರಗಳನ್ನು ಸಲ್ಲಿಸಿದೆ. ಅಲ್ಲದೇ ಖುದ್ದು ಸಿಎಂ ಕುಮಾರಸ್ವಾಮಿಯವರಿಗೆ ಟಿಪ್ಪು ಜಯಂತಿ ತಡೆ ಬಗ್ಗೆ ಕೇಳಿಕೊಂಡಿದ್ದೇವೆ. ನಮ್ಮ ಹೋರಾಟದಿಂದಾಗಿ ರಾಜ್ಯ ಸರ್ಕಾರ ಟಿಪ್ಪು ಜಯಂತಿಯ ಸಾರ್ವಜನಿಕ ಸಭೆ ಹಾಗೂ ಮೆರವಣಿಗೆಗಳನ್ನು ತಡೆ ಹಿಡಿದಿದ್ದಾರೆ. ಮುಂಬರುವ ದಿನಗಳಲ್ಲಿ ಟಿಪ್ಪು ಜಯಂತಿ ಕಾರ್ಯಕ್ರಮ ಸಂಪೂರ್ಣವಾಗಿ ನಿಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/

  • ರಾಜಕೀಯ ಸ್ವಾರ್ಥಕ್ಕಾಗಿ ಬಿಜೆಪಿ ಹಿಂದುತ್ವ ಬಳಕೆ ಮಾಡ್ತಿದೆ: ಪ್ರಮೋದ್ ಮುತಾಲಿಕ್

    ರಾಜಕೀಯ ಸ್ವಾರ್ಥಕ್ಕಾಗಿ ಬಿಜೆಪಿ ಹಿಂದುತ್ವ ಬಳಕೆ ಮಾಡ್ತಿದೆ: ಪ್ರಮೋದ್ ಮುತಾಲಿಕ್

    ಚಿಕ್ಕಮಗಳೂರು: ಬಿಜೆಪಿ ತನ್ನ ರಾಜಕೀಯ ಸ್ವಾರ್ಥಕ್ಕಾಗಿ ಹಿಂದುತ್ವವನ್ನು ಬಳಕೆ ಮಾಡುತ್ತಿದೆ. ಗೋರಕ್ಷಣೆ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ ಅಂತ ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ವಿಧಾನಸಭಾ ಚುನಾವಣೆಗೆ ಶಿವಸೇನೆ ಜೊತೆ ಶ್ರೀರಾಮಸೇನೆ ಕಣಕ್ಕಿಳಿಯಲಿದೆ. ಒಟ್ಟು 60 ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧೆ ಮಾಡಲಿದ್ದೇವೆ. ನಾನು ಶೃಂಗೇರಿ ಅಥವಾ ತೇರದಾಳ ಕ್ಷೇತ್ರದಿಂದ ಸ್ಪರ್ಧಿಸಲು ಇಚ್ಛಿಸಿದ್ದೇನೆ. ಇನ್ನೆರಡು ದಿನಗಳಲ್ಲಿ ಅಂತಿಮವಾಗುವ ಸಾಧ್ಯತೆಗಳಿವೆ ಅಂತ ಅಂದ್ರು.

    ಇತ್ತ ಜೇವರ್ಗಿ ಕ್ಷೇತ್ರದಿಂದ ಸಿದ್ದಲಿಂಗಸ್ವಾಮೀಜಿ ಸ್ಪರ್ಧೆ ಮಾಡ್ತಿದ್ದಾರೆ. ಈಗಾಗಲೇ ಆಕಾಂಕ್ಷಿಗಳ ಪಟ್ಟಿಯನ್ನು ಮುಂಬೈಗೆ ಕಳುಹಿಸಲಾಗಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ರೂ, ಗೋ ಮಾಂಸ ರಫ್ತು ಮಾಡುವ ನಂ.1 ದೇಶವಾಗಿದೆ. ಬಿಜೆಪಿಗೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಬೆಂಬಲ ನೀಡುವುದಿಲ್ಲ. ಕಾರಣ ಶಿವಸೇನೆಯದ್ದು ಕೂಡ ಹಿಂದುತ್ವ ಪ್ರಮುಖ ಅಜೆಂಡವಾಗಿದೆ ಎಂದು ಮುತಾಲಿಕ್ ಹೇಳಿದ್ರು.

  • ತಾಕತ್ತಿದ್ರೆ ಶ್ರೀರಾಮಸೇನೆ ಬ್ಯಾನ್ ಮಾಡ್ಲಿ – ಸರ್ಕಾರಕ್ಕೆ ಪ್ರಮೋದ್ ಮುತಾಲಿಕ್ ಸವಾಲ್

    ತಾಕತ್ತಿದ್ರೆ ಶ್ರೀರಾಮಸೇನೆ ಬ್ಯಾನ್ ಮಾಡ್ಲಿ – ಸರ್ಕಾರಕ್ಕೆ ಪ್ರಮೋದ್ ಮುತಾಲಿಕ್ ಸವಾಲ್

    ಬೆಂಗಳೂರು/ಚಿಕ್ಕಮಗಳೂರು: ತಾಕತ್ತಿದ್ರೆ ಶ್ರೀರಾಮಸೇನೆ ಬ್ಯಾನ್ ಮಾಡ್ಲಿ. ಅದರ ಪರಿಣಾಮ ಎದುರಿಸಬೇಕಾಗುತ್ತೆ ಅಂತ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ.

    ಈ ಬಗ್ಗೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಮುಸ್ಲಿಂ ಸಂಘಟನೆಗಳಾದ ಪಿಎಫ್‍ಐ, ಕೆಎಫ್‍ಡಿ ದೇಶದ್ರೋಹಿ ಸಂಘಟನೆಗಳು. ಅವನ್ನ ಬ್ಯಾನ್ ಮಾಡಲಿ. ಹಿಂದು ಸಂಘಟನೆಗಳು ದೇಶ ದ್ರೋಹಿ ಸಂಘಟನೆಗಳಲ್ಲ. ಸರ್ಕಾರಕ್ಕೆ ತಾಕತ್ತಿದ್ರೆ ಶ್ರೀರಾಮ ಸೇನೆ ಬ್ಯಾನ್ ಮಾಡಲಿ. ಗಂಭೀರ ಪರಿಣಾಮ ಎದುರಿಸಬೇಕಾಗುತ್ತೆ ಅಂದ್ರು.

    ಎರಡು ರಾಷ್ಟ್ರೀಯ ಪಕ್ಷಗಳು ನಿರ್ಲಜ್ಜ ಪಕ್ಷಗಳು. ಸಾವಿನಲ್ಲಿ ರಾಜಕಾರಣ ಮಾಡುತ್ತಿವೆ. ಬಿಜೆಪಿಯವರದು ದ್ವಿಮುಖ ನೀತಿ. ಅಧಿಕಾರ ಇದ್ದಾಗ ಒಂದು, ಇಲ್ಲದಾಗ ಒಂದು. ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಪಿಎಫ್‍ಐ ಸಂಘಟನೆಯನ್ನ ಯಾಕೆ ಬ್ಯಾನ್ ಮಾಡಲಿಲ್ಲ. ಗೃಹ ಸಚಿವ ಅಶೋಕ್ ಗೆ ಸ್ವತಃ ನಾನೇ ಹೇಳಿದ್ದೆ. ಆದರೆ ಇವಾಗ ನಾಟಕ ಮಾಡೋಕೆ ನಾಚಿಕೆ ಆಗಲ್ವ ಅಂತ ವಾಗ್ದಾಳಿ ನಡೆಸಿದ್ರು.

    ಸಂಘಟನೆಗಳ ನಡುವೆ ಗಲಾಟೆ ನಿಲ್ಲಿಸಬೇಕು. ಪೇಜಾವರ ಶ್ರೀಗಳು, ವೀರೇಂದ್ರ ಹೆಗ್ಗಡೆ ಬಳಿ ನಾನು ಮಾತನಾಡುತ್ತೇನೆ. ಮುಲ್ಲಾ ಮೌಲ್ವಿಗಳು ಜೊತೆ ಸೇರಿ ಶಾಂತಿ ಸಂಧಾನ ಸಭೆ ನಡೆಸಲು ಕೇಳಿಕೊಳ್ಳುತ್ತೇನೆ. ಬಿಜೆಪಿ ಹಿಂದೂ ಸಂಘಟನೆಗಳ ತಲೆ ಮೇಲೆ ಕಾಲಿಟ್ಟು ರಾಜಕೀಯ ಮಾಡುತ್ತಿದೆ. ಬಿಜೆಪಿ ಅಧಿಕಾರದಲ್ಲಿದ್ದಾಗಲೇ ನನ್ನ ವಿರುದ್ಧ 13 ಕೇಸು ಹಾಕಿದ್ರು. ಶ್ರೀರಾಮ ಸೇನೆ ಬ್ಯಾನ್‍ಗೆ ಮುಂದಾದ್ರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತೆ ಅಂತ ಹೇಳಿದ್ರು.

    ಕೋಮುಭಾವನೆ ಕೆರಳಿಸುವ ಸಂಘಟನೆಗಳ ವಿರುದ್ಧ ಕ್ರಮ ಎಂದ ಸಿಎಂ: ಕೋಮುಭಾವನೆ ಕೆರಳಿಸುವಂತಹಾ ಎಲ್ಲಾ ಸಂಘಟನೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಆ ಸಂಘಟನೆ ಯಾವುದೇ ಧರ್ಮಕ್ಕೆ ಸೇರಿರಲಿ. ಆ ಸಂಘಟನೆಗಳು ಪಿಎಫ್‍ಐ, ಬಜರಂಗದಳ, ಶ್ರೀರಾಮಸೇನೆ ಯಾವುದೇ ಆಗಿರಬಹುದು ಎಲ್ಲದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ಯಾರೂ ಸಾಯಬಾರದು. ಎಲ್ಲರ ಜೀವವೂ ಅಮೂಲ್ಯವಾದದ್ದು. ಸತ್ತವರ ಕುಟುಂಬದ ಬಗ್ಗೆ ನಮಗೆ ಸಿಂಪಥಿ ಇದೆ. ಅವರ ಕುಟುಂಬಕ್ಕೆ ಸರ್ಕಾರದಿಂದ ಸಿಗಬೇಕಾದ ಎಲ್ಲಾ ಸೌಲಭ್ಯಗಳು ಸಿಗಲಿದೆ ಎಂದ್ರು.

    ಆದ್ರೆ ಈ ಬಿಜೆಪಿಯವ್ರು ಅಲ್ಲಿಗೆ ಹೋಗಿ ಗಲಾಟೆ ಮಾಡುತ್ತಿದ್ದಾರೆ. ಅವರಿಗೆ ಗಲಾಟೆ ಮಾಡಲು ಹೇಳಿದ್ದು ಯಾರು? ಅವರೇನು ಹಿಂದುತ್ವವನ್ನ ಗುತ್ತಿಗೆ ಪಡೆದಿದ್ದಾರಾ? ನಾವೆಲ್ಲಾ ಹಿಂದುಗಳಲ್ವಾ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಕೂಲಂಕುಶವಾಗಿ ಪರಿಶೀಲಿಸಿ ಅವುಗಳನ್ನ ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇವೆ ಎಂದ್ರು.

  • ಎಕ್ಸಾಂಗೆಂದು ಕಾರ್ ಬುಕ್ ಮಾಡಿ, ಮಾರ್ಗ ಮಧ್ಯೆಯೇ ಕುತ್ತಿಗೆಗೆ ಹಗ್ಗ ಬಿಗಿದು ಹಿಂದೂ ಕಾರ್ಯಕರ್ತನ ಕೊಲೆಗೈದ್ರು!

    ಎಕ್ಸಾಂಗೆಂದು ಕಾರ್ ಬುಕ್ ಮಾಡಿ, ಮಾರ್ಗ ಮಧ್ಯೆಯೇ ಕುತ್ತಿಗೆಗೆ ಹಗ್ಗ ಬಿಗಿದು ಹಿಂದೂ ಕಾರ್ಯಕರ್ತನ ಕೊಲೆಗೈದ್ರು!

    ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ನೇಲೋಗಿ ಗ್ರಾಮದ ಜಮೀನಿನಲ್ಲಿ ಹಿಂದೂ ಕಾರ್ಯಕರ್ತರೊಬ್ಬರನ್ನು ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಲಾಗಿದೆ.

    30 ವರ್ಷದ ಶರಣು ಕೊಲೆಯಾದ ಹಿಂದೂ ಕಾರ್ಯಕರ್ತ. ಶರಣು ಕಲಬುರಗಿಯ ಶ್ರೀರಾಮ ಸೇನೆಯಲ್ಲಿ ಸಕ್ರೀಯ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು. ಶರಣು ಕಲಬುರಗಿ ನಗರದ ದೇವಿ ಕಾಲೋನಿಯ ನಿವಾಸಿಯಾಗಿದ್ದರು. ಮೂರು ದಿನಗಳ ಹಿಂದೆ ನೆಲೋಗಿ ಗ್ರಾಮದ ಬಸವರಾಜ್ ಗುಜಗೊಂಡ ಎಂಬವರ ಜಮೀನಿನಲ್ಲಿ ಶರಣು ಅವರ ಶವ ಪತ್ತೆಯಾಗಿತ್ತು. ಆದರೆ ಅಂದು ಶವವನ್ನು ಯಾರು ಗುರುತು ಹಿಡಿದಿರಲಿಲ್ಲ. ಇದೀಗ ಇಂದು ಕೊಲೆಯಾದ ಯುವಕನ ಗುರುತು ಪತ್ತೆಯಾಗಿದೆ.

    ಎಕ್ಸಾಂಗೆಂದು ಕಾರ್ ಬುಕ್ ಮಾಡಿದ್ರು: ಶರಣು ನಗರದಲ್ಲಿ ಕಾರ್ ಚಾಲಕರಾಗಿ ಕೆಲಸ ಮಾಡಿಕೊಂಡಿದ್ದರು. ನವೆಂಬರ್ 17ರಂದು ಶರಣು ಬಳಿ ಬಂದು ಮೂವರು ಧಾರವಾಡಕ್ಕೆ ಪರೀಕ್ಷೆಗಾಗಿ ಹೋಗಬೇಕು ಎಂದು ಕಾರ್ ಬುಕ್ ಮಾಡಿದ್ದಾರೆ. ಈ ವೇಳೆ ಮಾರ್ಗ ಮಧ್ಯೆಯೇ ಶರಣು ಕೊಲೆಯಾಗಿದೆ. ಆದರೆ ಶರಣು ಕೊಲೆ ಇದೇ ಕಾರಣಕ್ಕೆ ನಡೆದಿದೆ ಎಂಬುದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಕಾರ್ ಬುಕ್ ಮಾಡಲು ಬಂದಿದ್ದ ಮೂವರನ್ನು ಸ್ನೇಹಿತರು ಗುರುತು ಹಿಡಿದಿದ್ದಾರೆ ಎಂದು ಹೇಳಲಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

    ಮೃತದೇಹ ಪತ್ತೆಯಾದ ಬಳಿಕ ಮಾಧ್ಯಮಗಳಲ್ಲಿ ಮತ್ತು ಪತ್ರಿಕೆಗಳಲ್ಲಿ ಅಪರಿಚಿತ ಶವ ಎಂದು ಸುದ್ದಿ ಪ್ರಸಾರಗೊಂಡಿತ್ತು. ಸುದ್ದಿ ನೀಡಿದ ಕುಟುಂಬಸ್ಥರು ಶರಣು ಮೃತ ದೇಹವನ್ನು ಗುರುತಿಸಿದ್ದಾರೆ. ಶರಣು ಮೃತದೇಹವನ್ನು ಜಿಲ್ಲಾಸ್ಪತ್ರೆಯಲ್ಲಿ ಇರಿಸಲಾಗಿದ್ದು, ಇಂದು ಕುಟುಂಬಸ್ಥರಿಗೆ ಶವವನ್ನು ಹಸ್ತಾಂತರಿಸಲಾಗುವುದು. ಶವಾಗಾರದ ಮುಂದೆ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

    ಈ ಸಂಬಂಧ ನೇಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.