Tag: sriramulu

  • ಬಿಜೆಪಿ ಕೋರ್‌ ಕಮಿಟಿ ಸಭೆ – ರಾಮುಲುಗೆ ರಾಧಾಮೋಹನ್‌ ದಾಸ್‌ ಕ್ಲಾಸ್‌!

    ಬಿಜೆಪಿ ಕೋರ್‌ ಕಮಿಟಿ ಸಭೆ – ರಾಮುಲುಗೆ ರಾಧಾಮೋಹನ್‌ ದಾಸ್‌ ಕ್ಲಾಸ್‌!

    ಬೆಂಗಳೂರು: ಕೋರ್ ಕಮಿಟಿ ಸಭೆಯಲ್ಲಿ ಮಾಜಿ ಸಂಸದ ಶ್ರೀರಾಮುಲುಗೆ (Sriramulu) ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ (Radha Mohan Das Agarwal) ಕ್ಲಾಸ್ ಮಾಡಿರುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ಸಭೆಯಲ್ಲಿ ಸಂಡೂರು ವಿಧಾನಸಭಾ ಕ್ಷೇತ್ರದ ಉಪ-ಚುನಾವಣೆಯಲ್ಲಿ (Sandur By Election) ಬಂಗಾರು ಹನುಮಂತು (Bangaru Hanumanthu) ಸೋಲಿನ ಬಗ್ಗೆ ಚರ್ಚೆ ನಡೆಯಿತು. ಚುನಾವಣೆಯ ಫಲಿತಾಂಶದ ಬಳಿಕ ಶ್ರೀರಾಮುಲು ವಿರುದ್ಧ ಬಿಜೆಪಿ ನಾಯಕರಿಗೆ ಬಂಗಾರು ಹನುಮಂತು ದೂರು ನೀಡಿದ್ದರು.

     

    ಬಂಗಾರು ಹನುಮಂತು ದೂರನ್ನು ಆಧರಿಸಿ, ಕೋರ್ ಕಮಿಟಿ ಸಭೆಯಲ್ಲಿ ರಾಧಾಮೋಹನ್ ದಾಸ್ ಅಗರ್‌ವಾಲ್ ರಾಮುಲು ಅವರ ಕಾರ್ಯವೈಖರಿ ಪ್ರಶ್ನಿಸಿದ್ದಾರೆ. ನೀವು ಉಪ-ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಸರಿಯಾಗಿ ಕಾರ್ಯನಿರ್ವಹಣೆ ಮಾಡಿಲ್ಲ ಎಂಬ ದೂರು ಬಂದಿದೆ. ಇದಕ್ಕೆ ಉತ್ತರಿಸಿ ಎಂದು ಕೇಳಿದ್ದಾರೆ. ಇದನ್ನೂ ಓದಿ: ದೇಹದ ಮೇಲೆ ತರಕಾರಿ ಬಿದ್ದಿತ್ತು, 1 ಗಂಟೆ ನಂತ್ರ ಜನ ಇರೋದು ಗೊತ್ತಾಯ್ತು- 9 ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ರು: ಎಸ್‌ಪಿ

    ಅಗರ್‌ವಾಲ್ ಅವರ ಶಾಕಿಂಗ್‌ ಪ್ರಶ್ನೆಗೆ ಗಲಬಿಲಿಗೊಂಡ ಶ್ರೀರಾಮುಲು ನಾನು ಕಷ್ಟಪಟ್ಟು ಶ್ರಮವಹಿಸಿ, ಉಪ-ಚುನಾವಣೆಯಲ್ಲಿ ಕೆಲಸ ಮಾಡಿದ್ದೇನೆ. ನನ್ನ ವಿರುದ್ಧ ಸುಖಾಸುಮ್ಮನೆ ದೂರು ನೀಡಲಾಗಿದೆ, ಇದು ಸರಿಯಲ್ಲ. ಇಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಣೆ ಮಾಡುವವರಿಗೆ ಬೆಲೆಯೇ ಸಿಗುವುದಿಲ್ಲ ರಾಮುಲು ಅಸಮಾಧಾನ ಹೊರಹಾಕಿದ್ದಾರೆ. ರಾಮುಲು ಮಾತಿಗೆ ಏನೂ ಪ್ರತಿಕ್ರಿಯೆ ನೀಡದೇ ರಾಧಾಮೋಹನ್ ದಾಸ್ ಅಗರ್‌ವಾಲ್ ಸುಮ್ಮನಾಗಿದ್ದರು. ಈ ಮೂಲಕ ಬಳ್ಳಾರಿ ಬಿಜೆಪಿ ಘಟಕದ ಒಳ‌ ಕಚ್ಚಾಟ ಕೋರ್ ಕಮಿಟಿ ಸಭೆಯಲ್ಲೂ ಬಹಿರಂಗವಾಯಿತು.

    ಕೋರ್ ಕಮಿಟಿ ಸಭೆ ಮುಕ್ತಾಯವಾಗುತ್ತಿದ್ದಂತೆ ಮಾಧ್ಯಮಗಳ ಮುಂದೆ ಬಂದು ಹೇಳಿಕೆ ನೀಡಲು ಶ್ರೀರಾಮುಲು ನಿಂತಿದ್ದರು. ಈ ವೇಳೆ ರಾಮುಲು ಅವರನ್ನು ಸಿ.ಟಿ. ರವಿ ಹಾಗೂ ವಿಜಯೇಂದ್ರ ತಡೆದರು. ರವಿ ಹೇಳಿಕೆಯ ಬಳಿಕ ರಾಮುಲು ಅವರನ್ನು ಸಮಾಧಾನಪಡಿಸಲು ವಿಜಯೇಂದ್ರ, ಸಿ.ಟಿ.ರವಿ ಪಕ್ಕಕ್ಕೆ ಕರೆದುಕೊಂಡು ಹೋದರು.

    ಸದ್ಯ ಮಾಧ್ಯಮಗಳ ಮುಂದೆ ಯಾವುದೇ ವಿಚಾರವನ್ನು ಪ್ರಸ್ತಾಪ ಮಾಡದೇ ಹೊರಡುವಂತೆ ರಾಮುಲುಗೆ ವಿಜಯೇಂದ್ರ ಸೂಚಿಸಿದ್ದಾರೆ. ನಂತರ ಬೇಸರದಿಂದಲೇ ಬಿಜೆಪಿ ಕಚೇರಿಯಿಂದ ರಾಮುಲು ಹೊರಟರು.

  • ವಿಜಯೇಂದ್ರ ಕೆಳಗಿಳಿಸಲು ಆಗಲ್ಲ, ಒಂದು ಸಾರಿ ಅಧ್ಯಕ್ಷರಾದ್ರೆ ಎಲ್ರೂ ಒಪ್ಪಿಕೊಳ್ಳಲೇಬೇಕು: ಯತ್ನಾಳ್‌ಗೆ ಶ್ರೀರಾಮುಲು ಟಾಂಗ್

    ವಿಜಯೇಂದ್ರ ಕೆಳಗಿಳಿಸಲು ಆಗಲ್ಲ, ಒಂದು ಸಾರಿ ಅಧ್ಯಕ್ಷರಾದ್ರೆ ಎಲ್ರೂ ಒಪ್ಪಿಕೊಳ್ಳಲೇಬೇಕು: ಯತ್ನಾಳ್‌ಗೆ ಶ್ರೀರಾಮುಲು ಟಾಂಗ್

    ಬೀದರ್: ಯಾರೇ ಹೇಳಿದರೂ ವಿಜಯೇಂದ್ರರನ್ನು ಕೆಳಗಿಳಿಸಲು ಆಗಲ್ಲ, ಒಂದು ಸಾರಿ ಅಧ್ಯಕ್ಷರಾದರೆ ಎಲ್ಲರೂ ಒಪ್ಪಿಕೊಳ್ಳಲೇಬೇಕು ಎಂದು ಮಾಜಿ ಸಚಿವ ಶ್ರೀರಾಮುಲು (Sriramulu), ಬಿವೈ ವಿಜಯೇಂದ್ರ (BY  Vijayendra) ಪರ ಬ್ಯಾಟಿಂಗ್ ಮಾಡಿದ್ದಾರೆ.ಇದನ್ನೂ ಓದಿ: ಮೋಹಕ ತಾರೆ ಫ್ಯಾನ್ಸ್‌ಗೆ ಗುಡ್‌ ನ್ಯೂಸ್-‌ ಉಪೇಂದ್ರ ಜೊತೆ ‘ರಕ್ತ ಕಾಶ್ಮೀರ’ದ ಕಥೆ ಹೇಳಲು ಸಜ್ಜಾದ ರಮ್ಯಾ

    ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಈಗ ಎರಡು ಬಣಗಳು ಇರಬಹುದು. ಆದರೆ ಎಲ್ಲಾ ಭಿನ್ನಮತವನ್ನು ಹೈಕಮಾಂಡ್ ಸರಿಪಡಿಸುತ್ತದೆ. ಯತ್ನಾಳ್ ಮೇಲೆ ಯಾವುದೇ ಶಿಸ್ತು ಕ್ರಮವಾಗಲ್ಲ. ಯಾಕೆಂದರೆ ಅವರು ವೈಯಕ್ತಿಕ ಹೋರಾಟ ಮಾಡುತ್ತಿಲ್ಲ. ಹೀಗಾಗಿ ಯತ್ನಾಳ್ ಉಚ್ಚಾಟನೆ ಪ್ರಶ್ನೆ ಇಲ್ಲ ಎಂದು ತೇಪೆ ಹಾಕಿದರು.

    ದೆಹಲಿಗೆ ತೆರಳಿದ ಆರ್.ಅಶೋಕ್ (R Ashok) ವಿಚಾರವಾಗಿ ಮಾತನಾಡಿ, ಅಶೋಕ್ ಸೇರಿದಂತೆ ಎಲ್ಲರನ್ನು ಕರೆದು ಭಿನ್ನಮತದ ಬಗ್ಗೆ ಹೈಕಮಾಂಡ್ ಮಾಹಿತಿ ಪಡೆಯುತ್ತಿದೆ. ಎರಡು ಬಣಗಳಾಗಿದ್ದರೂ ನಮ್ಮ ಹೋರಾಟ ಒಂದಾಗಿದೆ. ಶಿಸ್ತು ಸಮಿತಿ ಮುಂದೆ ಯತ್ನಾಳ್ (Basanagouda Patil Yatnal) ಎಲ್ಲಾ ಸ್ಪಷ್ಟನೆ ನೀಡುತ್ತಾರೆ. ಮುಂದೆ ಎಲ್ಲಾ ಬಣಗಳು ಒಂದಾಗುತ್ತವೆ ಎಂದರು.ಇದನ್ನೂ ಓದಿ: ದೇವೇಂದ್ರ ಫಡ್ನವೀಸ್‌ಗೆ ‘ಮಹಾ’ ಸಿಎಂ ಪಟ್ಟ – ನಾಳೆ ಪ್ರಮಾಣವಚನ ಸ್ವೀಕಾರ

  • ಗುರುವಾರ ಬಿಎಸ್‌ವೈ, ರಾಮುಲುಗೆ ಬಿಗ್‌ ಡೇ!

    ಗುರುವಾರ ಬಿಎಸ್‌ವೈ, ರಾಮುಲುಗೆ ಬಿಗ್‌ ಡೇ!

    ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ (Yediyurappa), ಮಾಜಿ ಆರೋಗ್ಯ ಮಂತ್ರಿ ಶ್ರೀರಾಮುಲು (Sriramulu ಪಾಲಿಗೆ ನಾಳೆ ಬಿಗ್ ಡೇ. ಕಾರಣ ಕೋವಿಡ್ ಅಕ್ರಮ ಪ್ರಕರಣದಲ್ಲಿ (Covid Scam) ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ವರದಿ ಆಧರಿಸಿ ಸಿದ್ದರಾಮಯ್ಯ (Siddaramaiah) ಸರ್ಕಾರ ವಿಶೇಷ ತನಿಖಾ ತಂಡದ (SIT) ತನಿಖೆಗೆ ಆದೇಶ ನೀಡುವ ಸಂಭವ ಇದೆ.

    ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಗೃಹ ಸಚಿವ ಪರಮೇಶ್ವರ್‌ ಅವರು ಕ್ಯಾಬಿನೆಟ್‌ನಲ್ಲಿ ಈ ಬಗ್ಗೆ ಚರ್ಚೆ ನಡೆಯುವುದಿಲ್ಲ ಎಂದು ಹೇಳಿದ್ದಾರೆ.  ಇದನ್ನೂ ಓದಿ: ನಾಲಗೆ ಕಚ್ಚಿ, ಜೋರು ಗದರಿ ಕೈ ಎತ್ತಿದ ಸಿದ್ದರಾಮಯ್ಯ

     

    ಕೋವಿಡ್ ಔಷಧಿ ಖರೀದಿ ಮತ್ತು ನಿರ್ವಹಣೆಯಲ್ಲಿ 340 ಕೋಟಿ ರೂ.ನಷ್ಟು ಅವ್ಯವಹಾರ ನಡೆದಿದೆ. ಇದನ್ನು ವಸೂಲಿ ಮಾಡಿ ಈ ಖರೀದಿ ಒಪ್ಪಂದ ಮಾಡಿಕೊಂಡವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ತನಿಖೆ ನಡೆಸಬೇಕು ಎಂದು ಸರ್ಕಾರ ಕುನ್ಹಾ ಆಯೋಗ (Michael D Kunha Commission) ಶಿಫಾರಸು ಮಾಡಿದೆ.

    ಕೋವಿಡ್ ಅಕ್ರಮದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಏನಂತಾರೆ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರೆ ತನಿಖೆ ನಡೆಯಲಿ. ಉಪ್ಪು ತಿಂದವರು ನೀರು ಕುಡಿಯಲಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೆಹಲಿಯಲ್ಲಿ ಟಕ್ಕರ್ ನೀಡಿದ್ದಾರೆ.

     

  • ಬಿಜೆಪಿಯವರ ದುಡ್ಡಿನ ದುರಾಸೆಯಿಂದ ಕರ್ನಾಟಕದಲ್ಲಿ ಹತ್ಯಾಕಾಂಡ ನಡೆದಿದೆ: ಪ್ರಿಯಾಂಕ್‌ ಖರ್ಗೆ ಬಾಂಬ್‌

    ಬಿಜೆಪಿಯವರ ದುಡ್ಡಿನ ದುರಾಸೆಯಿಂದ ಕರ್ನಾಟಕದಲ್ಲಿ ಹತ್ಯಾಕಾಂಡ ನಡೆದಿದೆ: ಪ್ರಿಯಾಂಕ್‌ ಖರ್ಗೆ ಬಾಂಬ್‌

    ಬೆಂಗಳೂರು: ಬಿಜೆಪಿಯವರು ಹೆಣದ ಮೇಲೆ ಹಣ ಮಾಡೋದನ್ನ ಆದ್ಯತೆ ಮಾಡಿಕೊಂಡಿದ್ದರು. 4.26 ಲಕ್ಷ ಜನ ಸತ್ತಿದ್ದಾರಲ್ಲ ಇದಕ್ಕೆ ಯಾರು ಜವಾಬ್ದಾರಿ? ನನ್ನ ಪ್ರಕಾರ ಇದು ಹತ್ಯಾಕಾಂಡ, ಬಿಜೆಪಿಯವರ ದುಡ್ಡಿನ ದುರಾಸೆಯಿಂದ ಹತ್ಯಾಕಾಂಡ ನಡೆದಿದೆ. ಇದು ನಾನು ಹೇಳುತ್ತಿರುವುದಲ್ಲ. ಕೇಂದ್ರ ಸರ್ಕಾರದ ಅಂಕಿ ಅಂಶ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಬಾಂಬ್‌ ಸಿಡಿಸಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವರದಿಯನ್ನ ನಾನು ಅಧ್ಯಯನ ಮಾಡಿದ್ದೇನೆ. ಕುನ್ಹಾ ವರದಿ ಪ್ರಕಾರ, ಯಡಿಯೂರಪ್ಪ, ಶ್ರೀರಾಮುಲು ಯಾವ ರೀತಿ ಹೆಣದ ಮೇಲೆ ಹಣ ಮಾಡಿದ್ದಾರೆ ಅನ್ನೋದನ್ನ ಹೇಳುತ್ತವೆ. 2020ರಲ್ಲಿ 416.48 ಕೋಟಿ ರೂ. ಮೌಲ್ಯದ ಔಷಧಿ, ವೈದ್ಯಕೀಯ ಸಲಕರಣೆಗಳ ಖರೀದಿ, 12 ಲಕ್ಷ ಪಿಪಿಇ ಕಿಟ್‌ಗಳನ್ನು ಒಂದು ರೇಟ್ ಫಿಕ್ಸ್ ಮಾಡಿರುತ್ತಾರೆ. ಚೀನಾದ ಎರಡು ಕಂಪನಿಗಳಿವೆ. ಅವರಿಂದ ವೈದ್ಯಕೀಯ ಸಲಕರಣೆಗಳನ್ನು ಖರೀದಿ ಮಾಡಿದ್ದಾರೆ. ಚೀನಾದಿಂದ ಏನನ್ನೂ ಖರೀದಿ ಮಾಡಬಾರದು ಎಂದು ಮೋದಿ ಹೇಳಿದ್ದರು. ಮೇಕ್ ಇನ್ ಇಂಡಿಯಾ ಮಾಡಬೇಕು ಎಂದಿದ್ದರು. ಪ್ರಧಾನಿ ಅವರ ಆದೇಶ ಉಲ್ಲಂಘನೆ ಮಾಡಿ ಚೀನಾದಿಂದ ಸಲಕರಣೆಗಳನ್ನ ಖರೀದಿಸಿದ್ದೀರಿ. ಇದು ಒಂದು ರೀತಿ ದೇಶದ್ರೋಹ ಚಟುವಟಿಕೆ ಅಲ್ಲವಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್‌ – ಬಿಷ್ಣೋಯ್‌ ಗ್ಯಾಂಗ್‌ ಜೊತೆ ನಂಟು ಸಾಬೀತು!

    ಚೀನಾದಿಂದ ಖರೀದಿ ಮಾಡುವ ಅಗತ್ಯ ಏನಿತ್ತು? ಬಿಜೆಪಿ ಅವರ ನಿರ್ಲಕ್ಷ್ಯದಿಂದ ಜನ ಸತ್ತಿರೋದು ಹೊರತು ಕೊರೊನಾದಿಂದ ಜನ ಸತ್ತಿಲ್ಲ ಅನಿಸುತ್ತಿದೆ. ಇದು ಬಿಜೆಪಿಯವರ ಹತ್ಯಾಕಾಂಡ. ಇವರು ಕೊರೊನಾದಿಂದ 37 ಸಾವಿರ ಜನ ಸತ್ತಿದಾರೆ ಎನ್ನುತ್ತಾರೆ. ಆದರೆ ಕೇಂದ್ರ ಸರ್ಕಾರದ ವರದಿಯಲ್ಲಿ ರಾಜ್ಯದಲ್ಲಿ ಕೊರೊನಾದಿಂದ 4.25 ಲಕ್ಷ ಜನ ಸತ್ತಿದ್ದಾರೆ ಎಂದು ಉಲ್ಲೇಖಿಸಲಾಗಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಚಲುವರಾಯಸ್ವಾಮಿ ಮೇಲೆ ಹಲ್ಲೆ ಆಗಿದ್ಯಾ? ಕುಮಾರಸ್ವಾಮಿ ಆರೋಪ ಅಲ್ಲಗಳೆದ ಕೃಷಿ ಸಚಿವ

    ಅಂದಿನ ಬಿಜೆಪಿ ಸರ್ಕಾರ ಕೊರೊನಾ ನಿರ್ವಹಣೆ ಮಾಡೋದನ್ನ ಬಿಟ್ಟು, ಜನರ ಜೀವನ ಉಳಿಸಿದೋದನ್ನ ಬಿಟ್ಟು ಹಣ ಮಾಡಿದೆ. ತಂತ್ರಜ್ಞಾನ ಯುಗದಲ್ಲಿ ಯಾಕೆ ಪ್ರಧಾನಿ ಮೋದಿಯವರು ಅವೈಜ್ಞಾನಿಕ ಭಾವನೆಯನ್ನ ಹಬ್ಬಿಸುತ್ತಿದ್ದರು ಎಂದು ಈಗ ಗೊತ್ತಾಗಿದೆ. ತಾಲಿ ಬಜಾವ್ ದೀಪ್ ಚಲಾವ್ ಇವೆಲ್ಲಾ ಭ್ರಷ್ಟಾಚಾರ, ಹತ್ಯಾಕಾಂಡ ಮುಚ್ಚಿಹಾಕೋದಕ್ಕೆ ಮಾಡುತ್ತಿದ್ದರು. ಎಂದು ಕಾಣದಂತಹ ಪರಿಸ್ಥಿತಿ ಇತ್ತು. ಸರ್ಕಾರವನ್ನು ಜನ ನಂಬಿದ್ದರು. ಔಷಧ, ವ್ಯಾಕ್ಸಿನ್, ಬೆಡ್ ಹಂಚಿಕೆ, ಮಾಸ್ಕ್ ವಿತರಣೆ, ಪಿಪಿಇ ಕಿಟ್ ವಿತರಣೆ ಸರ್ಕಾರ ಮಾಡಿದೆ. ಬಿಜೆಪಿಯವರು ಹೆಣದ ಮೇಲೆ ಹಣ ಮಾಡಿದ್ದರು ಎಂದು ರಿಪೋರ್ಟ್‌ನಲ್ಲಿ ಗೊತ್ತಾಗಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: Tumakuru| ಮಗನನ್ನು ಜೈಲಿಗೆ ಹಾಕಿ, ಇಲ್ಲ ಸಾಯಿಸಲು ಅನುಮತಿ ಕೊಡಿ: ಹೆತ್ತ ತಾಯಿ ಅಳಲು

    ಪ್ರಧಾನಿಯವರು 700 ಕೋಟಿ ಹಗರಣ ಆಗಿದೆ ಎಂದು ಆರೋಪ ಮಾಡುತ್ತಿದ್ದಾರೆ. ನಮ್ಮ ತೆರಿಗೆ ಬೇಕು, ಸಂಪನ್ಮೂಲ ಬೇಕು ಮತ್ತೆ ಅವಮಾನ ಮಾಡುತ್ತೀರಿ. ಅವರ ಸರ್ಕಾರ ಇದ್ದಾಗ ಏನಾಯ್ತು, ಇದಕ್ಕೆ ಅವರು ಉತ್ತರ ಕೊಡಬೇಕು. ಮೋದಿಯವರು ಕೆಂಪು ಕೋಟೆ ಮೇಲೆ ಭಾಷಣ ಮಾಡುತ್ತಾರೆ. ಆದರೆ ಇಲ್ಲಿ ಬಿಜೆಪಿಯವರೇ ಹಾಳು ಮಾಡುತ್ತಾರೆ. ದೇಶದಲ್ಲಿ ಲೋಕಲ್ ಮಾರ್ಕೆಟ್‌ನಲ್ಲಿ ಪಿಪಿಇ ಕಿಟ್ ಇದ್ರೂ ಕೂಡ ಚೀನಾದಿಂದ ಯಾಕೆ ಖರೀದಿ ಮಾಡಿದ್ದೀರಿ? 333 ರೂಪಾಯಿ ಖರೀದಿಸಬೇಕಾಗಿದ್ದ ಕಿಟ್‌ಗಳನ್ನ 2 ಸಾವಿರ ಕೊಟ್ಟು ಖರೀದಿಸಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಕಾರವಾರ ಕದಂಬ ನೌಕಾನೆಲೆ ವ್ಯಾಪ್ತಿಯಲ್ಲಿ ಟ್ರ್ಯಾಕರ್‌ ಅಳವಡಿಸಿದ ರಣ ಹದ್ದು ಪತ್ತೆ!

  • ಕೋವಿಡ್ ಹಗರಣ – ಬಿಎಸ್‍ವೈ, ರಾಮುಲು ವಿರುದ್ಧ ಸರ್ಕಾರದ ಪ್ರಾಸಿಕ್ಯೂಷನ್ ಅಸ್ತ್ರ

    ಕೋವಿಡ್ ಹಗರಣ – ಬಿಎಸ್‍ವೈ, ರಾಮುಲು ವಿರುದ್ಧ ಸರ್ಕಾರದ ಪ್ರಾಸಿಕ್ಯೂಷನ್ ಅಸ್ತ್ರ

    ಬೆಂಗಳೂರು: ಕೋವಿಡ್ ಸಮಯದಲ್ಲಿ ನಡೆದಿದೆ ಎನ್ನಲಾದ ಅಕ್ರಮದ ವಿಚಾರವಾಗಿ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಾಜಿ ಸಚಿವ ಶ್ರೀರಾಮುಲು ವಿರುದ್ಧ‌ ಪ್ರಾಸಿಕ್ಯೂಷನ್ ಅಸ್ತ್ರ ಪ್ರಯೋಗಿಸಲು ರಾಜ್ಯ ಸರ್ಕಾರ ತಯಾರಿ ನಡೆಸಿದೆ. ನ್ಯಾ.ಮೈಕಲ್ ಡಿ ಕುನ್ನಾ ವರದಿ ಆಧಾರದ ಮೇಲೆ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

    ಚೀನಾದಿಂದ ಪಿಪಿಇ ಕಿಟ್ ಖರೀದಿಸಿದ ವಿಚಾರವೇ ಈಗ ಕಾಂಗ್ರೆಸ್ ಸರ್ಕಾರದ ಪಾಲಿಗೆ ಬ್ರಹ್ಮಾಸ್ತ್ರವಾಗಿದೆ. ಇನ್ನೂ ನ್ಯಾ.ಮೈಕಲ್ ಡಿ ಕುನ್ನಾ ವರದಿಯಲ್ಲಿ ಯಡಿಯೂರಪ್ಪ ಹಾಗೂ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್‌ಗೆ ಶಿಫಾರಸು ಮಾಡಿರುವ ಅಂಶ ಬೆಳಕಿಗೆ ಬಂದಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಕೇಸ್ ದಾಖಲಿಸಿ ತನಿಖೆಗೆ ವರದಿಯಲ್ಲಿ ಶಿಫಾರಸು ಮಾಡಲಾಗಿದೆ.

    2020 ಏಪ್ರಿಲ್‍ನಲ್ಲಿ ಚೀನಾದ ಎರಡು ಕಂಪನಿಗಳಿಂದ ಪಿಪಿಇ ಕಿಟ್ ಖರೀದಿಸುವಲ್ಲಿ ಅಕ್ರಮ ಎಸಗಲಾಗಿದೆ ಎಂಬುದು ವರದಿಯಲ್ಲಿ ಉಲ್ಲೇಖವಾಗಿದೆ. ಅಂದಿನ ಸಿಎಂ, ಅಂದಿನ ಆರೋಗ್ಯ ಸಚಿವರ ವಿರುದ್ಧ ತನಿಖೆಗೆ ಶಿಫಾರಸು ಮಾಡಲಾಗಿದೆ. ಉಪಚುನಾವಣೆ ಮುಗಿದ ಬಳಿಕ ರಾಜ್ಯ ಸರ್ಕಾರದಿಂದ ಮುಂದಿನ ಪ್ರಕ್ರಿಯೆಯ ಬಗ್ಗೆ ತೀರ್ಮಾನಿಸುವ ಸಾಧ್ಯತೆ ಇದೆ.

    ಡಿ.ಕೆ.ಶಿವಕುಮಾರ್ ನೇತೃತ್ವದ ಸಂಪುಟ ರಚನೆಯಾಗಿದ್ದು, ಮೊದಲ ಸಭೆಯಲ್ಲಿ ಪ್ರಾಥಮಿಕ ಅಂಶಗಳ ಬಗ್ಗೆ ಚರ್ಚೆ ನಡೆದಿದೆ. ಉಪಚುನಾವಣೆ ಬಳಿಕ ಸಂಪುಟ ಉಪಸಮಿತಿಯ ಎರಡನೇ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಯಡಿಯೂರಪ್ಪ, ರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಪ್ರಕ್ರಿಯೆ ಬಗ್ಗೆ ತೀರ್ಮಾನ ಮಾಡಿ ಸಂಪುಟ ಸಭೆ ಶಿಫಾರಸು ಮಾಡಲಿದೆ. ಬಳಿಕ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

    ಜಸ್ಟೀಸ್ ಕುನ್ನಾ ಮಧ್ಯಂತರ ವರದಿ ಶಿಫಾರಸು ಏನು?

    > 2020, ಏಪ್ರಿಲ್‍ನಲ್ಲಿ ಪಿಪಿಇ ಕಿಟ್ ಖರೀದಿಯಲ್ಲಿ ಅಕ್ರಮ
    > ಚೀನಾದ ಎರಡು ಕಂಪನಿಗಳಿಂದ ಪಿಪಿಇ ಕಿಟ್ ಖರೀದಿ
    > ಸುಮಾರು 3 ಲಕ್ಷ ಪಿಪಿಇ ಕಿಟ್‍ಗಳನ್ನ ದುಬಾರಿ ಬೆಲೆಗೆ ಖರೀದಿಸಿದ್ದಾರೆ
    > ಪಿಪಿಇ ಕಿಟ್ ಖರೀದಿಯಲ್ಲೇ ಸುಮಾರು 14 ಕೋಟಿ ಅಕ್ರಮ ಆಗಿದೆ
    > ಟೆಂಡರ್ ಕರೆದಿಲ್ಲ, ಖರೀದಿ ನಿಯಮಗಳು, ಕಾರ್ಯವಿಧಾನ ಅನುಸರಿಸಿಲ್ಲ
    > ಅಂದಿನ ಸಿಎಂ ಯಡಿಯೂರಪ್ಪ, ಅಂದಿನ ಆರೋಗ್ಯ ಸಚಿವ ರಾಮುಲು ಅವರ ಆದೇಶದ ಮೇರೆಗೆ ಖರೀದಿ
    > ಹಾಗಾಗಿ ಅಂದಿನ ಸಿಎಂ, ಆರೋಗ್ಯ ಸಚಿವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ, ಸೆಕ್ಷನ್ 7ರ ಅಡಿ ತನಿಖೆ ನಡೆಸಬೇಕು, ಕ್ರಿಮಿನಲ್ ಕೇಸ್ ದಾಖಲಿಸಬೇಕು ಎಂದು ಉಲ್ಲೇಖಿಸಲಾಗಿದೆ.

  • ಸಂಡೂರು ಉಪಚುನಾವಣೆ; ರಾಮುಲು-ಜನಾರ್ದನ ರೆಡ್ಡಿ ಜಂಟಿ ಪ್ರಚಾರ, ದೂರ ಉಳಿದ ಕಾಂಗ್ರೆಸ್ ಶಾಸಕರು

    ಸಂಡೂರು ಉಪಚುನಾವಣೆ; ರಾಮುಲು-ಜನಾರ್ದನ ರೆಡ್ಡಿ ಜಂಟಿ ಪ್ರಚಾರ, ದೂರ ಉಳಿದ ಕಾಂಗ್ರೆಸ್ ಶಾಸಕರು

    ಬಳ್ಳಾರಿ: ಸಂಡೂರು ಉಪಚುನಾವಣೆ (Sandur By Election) ಅಖಾಡ ರಂಗೇರಿದ್ದು, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು (Bangaru Hanumanthu) ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ಇದುವರೆಗೂ ಪ್ರಚಾರದಿಂದ ದೂರವೇ ಉಳಿದಿದ್ದ ಮಾಜಿ ಸಚಿವ ಶ್ರೀರಾಮುಲು ಕೊನೆಗೂ ಸಂಡೂರು ಉಪಚುನಾವಣೆ ಪ್ರಚಾರಕ್ಕೆ ಎಂಟ್ರಿ ಕೊಟ್ಟಿದ್ದು, ಜನಾರ್ದನ ರೆಡ್ಡಿ ಜೊತೆ ಜಂಟಿ ಪ್ರಚಾರ ಆರಂಭಿಸಿದ್ದಾರೆ.

    2023ರ ಚುನಾವಣೆ ವೇಳೆ ಶ್ರೀರಾಮುಲು (Sriramulu) ಹಾಗೂ ಜನಾರ್ದನ ರೆಡ್ಡಿ (Janardhan Reddy) ಆಂತರಿಕ ಭಿನ್ನಾಭಿಪ್ರಾಯದಿಂದ ದೂರವಾಗಿದ್ದರು. ಸಂಡೂರು ಚುನಾವಣೆ ವೇಳೆ ಶ್ರೀರಾಮುಲುಗಿಂತ ಮುಂಚೆನೇ ಜನಾರ್ದನ ರೆಡ್ಡಿ ಪ್ರಚಾರದ ಅಖಾಡಕ್ಕೆ ಧುಮುಕಿದ್ದರು. ಆಂತರಿಕ ಸಮಸ್ಯೆಯಿಂದ ಹಿಂದೆ ಸರಿದಿದ್ದ ರಾಮುಲು ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮನವೊಲಿಸಿದ್ದರು. ನಾಮಪತ್ರ ಸಲ್ಲಿಕೆ ಬಳಿಕ ಪ್ರಚಾರಕ್ಕೆ ಬರುತ್ತೇನೆ ಎಂದಿದ್ದ ರಾಮುಲು ಇದೀಗ ಪ್ರಚಾರಕ್ಕೆ ಬಂದಿದ್ದಾರೆ. ಆದರೆ ರಾಮುಲು- ಜನಾರ್ದನ ರೆಡ್ಡಿ ಜಂಟಿ ಪ್ರಚಾರದ ನಡುವೆಯೂ ಬಿಜೆಪಿ ನಾಯಕರಿಗೆ ಒಳೇಟಿನ ಆತಂಕ ಕಾಡುತ್ತಿದೆ. ಇದನ್ನೂ ಓದಿ: ಡಿಕೆಶಿಗೆ ಸಿಎಂ ಆಗುವ ಅವಕಾಶ ಇದೆ, ಯೋಗೇಶ್ಬರ್ ಗೆಲ್ಲಿಸಿದ್ರೆ ಶಕ್ತಿ ಬರುತ್ತೆ: ಎಂಎಲ್‌ಸಿ ಪುಟ್ಟಣ್ಣ

    ಇತ್ತ ಕಾಂಗ್ರೆಸ್‌ನಲ್ಲೂ ಎಲ್ಲವೂ ಸರಿ ಇಲ್ಲ ಅನ್ನೋದು ಸ್ಪಷ್ಟವಾಗಿದೆ. ಜಿಲ್ಲೆಯಲ್ಲಿ ನಾಲ್ವರು ಕಾಂಗ್ರೆಸ್ ಶಾಸಕರಿದ್ದರೂ ಯಾರೊಬ್ಬರೂ ಇದುವರೆಗೂ ಪ್ರಚಾರ ಕಾರ್ಯದಲ್ಲಿ ತೊಡಗಿಲ್ಲ. ಸಂಸದ ತುಕಾರಾಂ ಹಾಗೂ ಪತ್ನಿ ಅನ್ನಪೂರ್ಣ ತುಕಾರಾಂ ಮಾತ್ರ ಪ್ರಚಾರ ಮಾಡುತ್ತಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ಮನೆದೇವ್ರು ದುರ್ಯೋಧನ, ಲಾಂಛನ ನಾಗರಹಾವು ಅಂದಿದ್ದು ಯಡಿಯೂರಪ್ಪ: ಬಾಲಕೃಷ್ಣ

  • ED ದಾಳಿಯಿಂದ ಇನ್ನಷ್ಟು ಕರ್ಮಕಾಂಡಗಳು ಹೊರಬರಲಿದೆ: ಶ್ರೀರಾಮುಲು

    ED ದಾಳಿಯಿಂದ ಇನ್ನಷ್ಟು ಕರ್ಮಕಾಂಡಗಳು ಹೊರಬರಲಿದೆ: ಶ್ರೀರಾಮುಲು

    ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣ (Valmiki Scam) ಸಂಬಂಧ ಇಡಿ (ED) ದಾಳಿಯಿಂದ ಇನ್ನಷ್ಟು ಕರ್ಮಕಾಂಡಗಳು ಹೊರಕ್ಕೆ ಬರಲಿದೆ ಎಂದು ರಾಜ್ಯದ ಮಾಜಿ ಸಚಿವ ಬಿ.ಶ್ರೀರಾಮುಲು (B Sriramulu) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ರಾಜ್ಯ ಬಿಜೆಪಿ (BJP) ಕಚೇರಿಯಲ್ಲಿ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, `ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತೆ’ ಅನ್ನೋ ತರ ಈ ಸರ್ಕಾರ ವರ್ತಿಸುತ್ತಿದೆ. ಕರ್ನಾಟಕದಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮವನ್ನು ಬುಡಕಟ್ಟು ಸಮುದಾಯ, ಪರಿಶಿಷ್ಟ ಸಮುದಾಯಕ್ಕೆ ಆರ್ಥಿಕ ಮತ್ತು ಸಾಮಾಜಿಕವಾಗಿ ಬಲಪಡಿಸುವ ಉದ್ದೇಶದಿಂದ ರಚಿಸಲಾಗಿತ್ತು ಎಂದು ನೆನಪಿಸಿದರು. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ; ಜು.15 ಕ್ಕೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ತೀರ್ಮಾನ

    ಬಿಜೆಪಿ ಅಧಿಕಾರಕ್ಕೆ ಬಂದಾಗೆಲ್ಲಾ ಎಸ್ಸಿ, ಎಸ್ಟಿ ಸಮುದಾಯಕ್ಕೆ ನ್ಯಾಯ ಕೊಡುವ ಕೆಲಸ ಮಾಡಿದೆ. ವಾಲ್ಮೀಕಿ ನಿಗಮದ ಹಗರಣ ಸಂಬಂಧ ಹಲವು ತಿಂಗಳಿನಿಂದ ಬಿಜೆಪಿ ಹೋರಾಟ ನಡೆದಿದೆ. ನಾಗೇಂದ್ರ ಅವರ ಮನೆಯ ಮೇಲೆ, ಆಸ್ತಿಗಳ ಮೇಲೆ ಇ.ಡಿ ದಾಳಿ ಮಾಡಿದೆ. ಅನೇಕ ದಾಖಲಾತಿಗಳ ಪರಿಶೀಲನೆ ನಡೆದಿದೆ ಎಂದು ವಿವರಿಸಿದರು. ಇದನ್ನೂ ಓದಿ: ಆಕಳು ಮೈ ತೊಳೆಯಲು ನದಿಗೆ ಹೋಗಿದ್ದ ಯುವಕ ನೀರುಪಾಲು

    ಒಂದೆಡೆ ಎಸ್‌ಐಟಿ ವಿಚಾರಣೆಯೂ ಇದೆ ಎಂದ ಅವರು, ಇಡಿ 18 ಕಡೆಗಳಲ್ಲಿ ದಾಳಿ ನಡೆಸಿದೆ. ಯೂನಿಯನ್ ಬ್ಯಾಂಕಿನವರು ಸಿಬಿಐಗೆ ದೂರು ಕೊಟ್ಟ ಕಾರಣ ಅದರ ಆಧಾರದಲ್ಲಿ ಇ.ಡಿ ದಾಳಿ ನಡೆಯುತ್ತಿರಬಹುದು. ವಾಲ್ಮೀಕಿ ನಿಗಮದಿಂದ ನಾಗೇಂದ್ರರ ಪಿ.ಎ ಆಗಿದ್ದ ಹರೀಶ್ ಎಂಬವರ ಖಾತೆಗೆ 80 ಲಕ್ಷ ಹಣ ವರ್ಗಾವಣೆ ಆಗಿದೆ ಎಂದ ಅವರು, ಇ.ಡಿಯನ್ನು ಆಹ್ವಾನಿಸಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ದಾಳಿ ಬಗ್ಗೆ ಗೊತ್ತಿಲ್ಲ ಎಂದಿದ್ದಾರೆ. ಸರ್ಕಾರವು ಈ ದೊಡ್ಡ ಹಗರಣದ ಭಾಗೀದಾರ ಎಂದು ಆರೋಪಿಸಿದರು. ರಾಜ್ಯದ ಜನರು ನಾಚಿಕೆ ಇಲ್ಲದ ಸರ್ಕಾರ ಎನ್ನುತ್ತಿದ್ದಾರೆ. ಕಳ್ಳರ ಸರ್ಕಾರ ಎಂದು ಮಾತನಾಡುತ್ತಿದ್ದಾರೆ. ದರೋಡೆ ನಡೆದ ನಂತರ ಕಳ್ಳರನ್ನು ಹಿಡಿಯಬೇಕಿದೆ. ಇ.ಡಿಯವರು ಬಂದು ಕಳ್ಳರ ಉಪಾಧ್ಯಕ್ಷನನ್ನು ಹಿಡಿದಿದ್ದಾರೆ. ಅಧ್ಯಕ್ಷರು ಯಾರು ಎಂದು ಗೊತ್ತಾಗಿಲ್ಲ. ಅಧ್ಯಕ್ಷರ ಪತ್ತೆಗೆ ಇ.ಡಿ ಮುಂದಾಗಿದೆ ಎಂದರು. ಇದನ್ನೂ ಓದಿ: ಗ್ಯಾರಂಟಿಗೆ 65 ಸಾವಿರ ಕೋಟಿ ಹಣ ಬೇಕು, ಅಭಿವೃದ್ಧಿಗೆ ಹಣ ಇಲ್ಲ – ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ

    ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಮಾಜಿ ಶಾಸಕ ರಾಜು ಗೌಡ, ಎಸ್.ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು, ವಿಧಾನಪರಿಷತ್ ಸದಸ್ಯರಾದ ಶ್ರೀಮತಿ ಹೇಮಲತಾ ನಾಯಕ್, ಶಾಂತರಾಮ ಸಿದ್ದಿ, ವಿಧಾನಪರಿಷತ್ ಮಾಜಿ ಸದಸ್ಯ ಸಿದ್ದರಾಜು ಪಾಲ್ಗೊಂಡಿದ್ದರು. ಇದನ್ನೂ ಓದಿ: ಕರ್ನಾಟಕಕ್ಕೆ ಮತ್ತೆ ‘ಕಾವೇರಿ’ ಶಾಕ್‌ – ತಮಿಳುನಾಡಿಗೆ ನಿತ್ಯ 1 ಟಿಎಂಸಿ ನೀರು ಹರಿಸಲು ಸಿಡಬ್ಲ್ಯೂಆರ್‌ಸಿ ಸೂಚನೆ

  • ತುಕಾರಂ ʼಕೈʼ ಹಿಡಿದ ಬಳ್ಳಾರಿ ಜನ – ಶ್ರೀರಾಮುಲುಗೆ ಸೋಲು

    ತುಕಾರಂ ʼಕೈʼ ಹಿಡಿದ ಬಳ್ಳಾರಿ ಜನ – ಶ್ರೀರಾಮುಲುಗೆ ಸೋಲು

    ಬಳ್ಳಾರಿ: ಕಾಂಗ್ರೆಸ್‌ ಅಭ್ಯರ್ಥಿ ತುಕಾರಂ (Tukaram) ಅವರು ಬಿಜೆಪಿಯ ಶ್ರೀರಾಮುಲು (Sriramulu) ವಿರುದ್ಧ 98 ಸಾವಿರಕ್ಕೂ ಅಧಿಕ ಮತಗಳಿಂದ ಜಯಗಳಿಸಿದ್ದಾರೆ.

    ತುಕರಾಂ ಅವರಿಗೆ 7,30,845 ಮತಗಳು ಬಿದ್ದರೆ ಶ್ರೀರಾಮುಲು ಅವರಿಗೆ 6,31,853 ಮತಗಳು ಬಿದ್ದಿವೆ. ಇದನ್ನೂ ಓದಿ: ಮೈತ್ರಿ ಅಭ್ಯರ್ಥಿ ಎಂದಲ್ಲ, ಜೆಡಿಎಸ್ ಅಭ್ಯರ್ಥಿ ಎಂದು ಭಾವಿಸಿ ಮತ ನೀಡಿದ್ದಾರೆ: ಕೆ.ಸುಧಾಕರ್

    2019ರಲ್ಲಿ ಬಿಜೆಪಿ 25 ಸಾವಿರಕ್ಕೂ ಹೆಚ್ಚು ಮತಗಳಿಂದ ಜಯಗಳಿಸಿತ್ತು. ದೇವೇಂದ್ರಪ್ಪ 6,01,388 ಮತಗಳು ಪಡೆದರೆ ಉಗ್ರಪ್ಪ 5,75,681 ಮತಗಳನ್ನು ಪಡೆದಿದ್ದರು.

    2014ರ ಚುನಾವಣೆಯಲ್ಲಿ ಶ್ರೀರಾಮುಲು 85 ಸಾವಿರ ಮತಗಳಿಂದ ಜಯಗಳಿಸಿದ್ದರು. ಶ್ರೀರಾಮುಲು 5,34,406 ಮತಗಳನ್ನು ಪಡೆದರೆ ಕಾಂಗ್ರೆಸ್‌ ಎನ್‌ವೈ ಹನುಮಂತಪ್ಪ 4,49,262 ಮತಗಳನ್ನು ಪಡೆದಿದ್ದರು.

  • ನಾಗಸಾಧು ಭೇಟಿ ಮಾಡಿ ಪ್ರಚಾರ ಆರಂಭ ಮಾಡಿದ ಶ್ರೀರಾಮುಲು

    ನಾಗಸಾಧು ಭೇಟಿ ಮಾಡಿ ಪ್ರಚಾರ ಆರಂಭ ಮಾಡಿದ ಶ್ರೀರಾಮುಲು

    ಬಳ್ಳಾರಿ: ಬಿಜೆಪಿಯಿಂದ (BJP) ಟಿಕೆಟ್‌ ಘೋಷಣೆ ಬೆನ್ನಲ್ಲೇ ಶ್ರೀರಾಮುಲು (Sriramulu) ನಾಗಸಾಧುವನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.

    ಸಂಡೂರು ತಾಲೂಕಿನ ಜೋಗ ಗ್ರಾಮದಲ್ಲಿರುವ ದೇವರಕೊಳ್ಳ ಮಠದ ಜೋಗದ ದಿಗಂಬರ ರಾಜ ಭಾರತಿ ನಾಗಸಾಧು ಅವರನ್ನು ಶ್ರೀರಾಮುಲು ಭೇಟಿ ಮಾಡಿದ್ದಾರೆ. ಇದನ್ನೂ ಓದಿ: ನಾನು ಮೋದಿ ಮುಖ ನೋಡಿ ಕೆಲಸ ಮಾಡಲ್ಲ: ಮಾಧುಸ್ವಾಮಿ

    ಟಿಕೆಟ್‌ ಖಚಿತವಾದ ಬಳಿಕ ನಾಗ ಸಾಧು ಆಶೀರ್ವಾದ ಪಡೆದ ಶ್ರೀರಾಮುಲು ಅಧಿಕೃತವಾಗಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಡಿಕೆಶಿ ಶಿವಕುಮಾರ್‌ ಸೇರಿದಂತೆ ಅನೇಕರು ಈ ನಾಗಸಾಧು ರನ್ನ ಪ್ರಮುಖ ಕೆಲಸ ಇದ್ದಾಗ ಆಗಲೆಂದು ಭೇಟಿ ಮಾಡಿ ಆಶ್ರೀವಾದ ಪಡೆಯುತ್ತಾರೆ. ಇದನ್ನೂ ಓದಿ: ಆಸ್ಪತ್ರೆಗೆ ದಾಖಲಾದ ಬಿಗ್ ಬಿ: ಆಂಜಿಯೋಪ್ಲ್ಯಾಸ್ಟಿಗೆ ಒಳಗಾದ ನಟ ಅಮಿತಾಭ್ ಬಚ್ಚನ್

  • ಜನ ಆಶೀರ್ವಾದ ಮಾಡಿದ್ದಾರೆ, ಕಾಂಗ್ರೆಸ್‌ ಸರ್ಕಾರ 5 ವರ್ಷ ನಡೆಯಲಿ – ಶ್ರೀರಾಮುಲು

    ಜನ ಆಶೀರ್ವಾದ ಮಾಡಿದ್ದಾರೆ, ಕಾಂಗ್ರೆಸ್‌ ಸರ್ಕಾರ 5 ವರ್ಷ ನಡೆಯಲಿ – ಶ್ರೀರಾಮುಲು

    ಕೋಲಾರ: ರಾಜ್ಯದ ಜನ ಕಾಂಗ್ರೆಸ್‌ಗೆ (Congress) ಹೆಚ್ಚಿನ ಸಂಖ್ಯೆಯಲ್ಲಿ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ 5 ವರ್ಷಗಳ ಕಾಲ ನಡೆಯಲಿ ಬಿಡಿ. ಸರ್ಕಾರಕ್ಕೆ ಧಕ್ಕೆ ತರುವ ಕೆಲಸ ಯಾರೂ ಮಾಡಬಾರದು ಎಂದು ಬಿಜೆಪಿ ಮಾಜಿ ಸಚಿವ ಶ್ರೀರಾಮುಲು (Sriramulu) ಹೇಳಿದ್ದಾರೆ.

    ಕೋಲಾರದ (Kolar) ಮುಳಬಾಗಿಲಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ (Lok Sabha Elections) ನಂತರ ಕಾಂಗ್ರೆಸ್‌ ಪಕ್ಷಕ್ಕೆ ಉಳಿಗಾಲವಿಲ್ಲ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಸರ್ಕಾರ ಬೀಳುತ್ತೆ ಅನ್ನೋದನ್ನ ನಾನು ಒಪ್ಪಲ್ಲ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಆ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ 5 ವರ್ಷಗಳ ಕಾಲ ನಡಿಯಲಿ ಬಿಡಿ. ಇನ್ನೂ ಯಾವುದೇ ಆಪರೇಷನ್ ಕಮಲ ಮಾಡುವುದಕ್ಕೆ ಹೋಗುವುದಿಲ್ಲ, ಬಹುಮತದೊಂದಿಗೆ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅದಕ್ಕೆ ಧಕ್ಕೆ ತರುವ ಕೆಲಸ ಯಾರೂ ಮಾಡಬಾರದು ಎಂದು ನುಡಿದಿದ್ದಾರೆ.

    ಡಿಕೆಶಿ ಸಿಬಿಐ ಕೇಸ್‌ ವಾಪಸ್‌ ವಿಚಾರ ಕುರಿತು ಮಾತನಾಡಿದ ಅವರು, ಸಿಬಿಐ ತನಿಖೆ (CBI Investigation) ಆಗಬೇಕಿದ್ದ ಡಿಕೆ ಶಿವಕುಮಾರ್ ಅವರ ಪ್ರಕರಣವನ್ನ ಕ್ಯಾಬಿನೆಟ್‌ ವಾಪಸ್ ಪಡೆಯಲು ಅನುಮತಿ ನೀಡಿರುವುದು ನಮಗೆ ಭಯವಾಗಿದೆ. ಸರ್ಕಾರವನ್ನ ಬೊಂಬೆಯಂತೆ ಅವರು ನಡೆಸಿಕೊಳ್ಳುತ್ತಿದ್ದು, ಸರ್ಕಾರವೇ ಅವರಿಗೆ ತಲೆಬಾಗಿದೆಯಾ ಅನ್ನೋ ಪ್ರಶ್ನೆ ಮೂಡಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಚೀನಾದಲ್ಲಿ ಮತ್ತೊಂದು ವೈರಸ್; ಆಸ್ಪತ್ರೆಗಳಲ್ಲಿ ತುರ್ತುಕ್ರಮ ಪರಿಶೀಲಿಸುವಂತೆ ರಾಜ್ಯಗಳಿಗೆ ಖಡಕ್‌ ವಾರ್ನಿಂಗ್‌

    ಡಿಕೆಶಿ ಅವರಿಗೆ ಕಾನೂನಿನ ಬಗ್ಗೆ ಗೌರವ ಇದ್ದಿದ್ದರೇ, ಪ್ರಕರಣದಿಂದ ನ್ಯಾಯಯುತವಾಗಿ ಹೊರಬರುವ ವಿಶ್ವಾಸ ಇದ್ದಿದ್ದರೇ ಈ ರೀತಿಮಾಡುತ್ತಿರಲಿಲ್ಲ. ಕ್ಯಾಬಿನೆಟ್ ನಲ್ಲಿ ಈ ರೀತಿಯ ವಿಚಾರಗಳೇ ಚರ್ಚೆಗೆ ಬರುವುದಿಲ್ಲ. ಇತಿಹಾಸದಲ್ಲಿ ಇದೇ ಮೊದಲಬಾರಿಗೆ ಇಂತಹ ವಿಷಯ ಚರ್ಚೆಯಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಇದೇ ವೇಳೆ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿರುವ ಬಗ್ಗೆ ಹಿರಿಯ ನಾಯಕರಲ್ಲಿ ಅಸಮಾಧಾನ ವ್ಯಕ್ತವಾದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯ ಹಿರಿಯರು ಸೇರಿ ವಿಜಯೇಂದ್ರ ಅವರಿಗೆ ಅಧಿಕಾರ ಕೊಟ್ಟಿದ್ದಾರೆ, ಹೀಗಾಗಿ ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಪಕ್ಷ ಮುನ್ನಡೆಸುವ ಕೆಲಸ ಮಾಡುತ್ತೇವೆ. ಅಸಮಾಧಾನ ಆಗಿರುವ ಯತ್ನಾಳ್ ಸೋಮಣ್ಣ ಅವರೂ ಸಮಧಾನ ಆಗುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಾಲಕಿಯ ಅಚ್ಚರಿ ಬದುಕು- 14 ವರ್ಷದಿಂದ ಕೇವಲ ಬೆಲ್ಲ, ಹಾಲು ಸೇವಿಸ್ತಿದ್ದಾಳೆ ಈಕೆ!

    ಇನ್ನೂ ಜನಾರ್ದನ ರೆಡ್ಡಿ ಅವರು ಬಿಜೆಪಿಗೆ ಸೇರುವ ವಿಚಾರವಾಗಿ ಮಾತನಾಡಿ, ನಮ್ಮ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ. ಅವರು ಪಕ್ಷಕ್ಕೆ ಬರುವುದರಿಂದ ಪಕ್ಷಕ್ಕೆ ಒಳ್ಳೆಯದಾಗುತ್ತದೆ. ನನ್ನ ಅವರ ಮಧ್ಯೆ ಇರುವುದು ವೈಯಕ್ತಿಕ. ಆದ್ರೆ ರಾಜಕೀಯವಾಗಿ ನನ್ನ ಅವರ ನಡುವೆ ಏನೂ ದ್ವೇಷವಿಲ್ಲ ಎಂದು ತಿಳಿಸಿದ್ದಾರೆ.