Tag: Srirangapatna

  • ಎಕ್ಸ್‌ಪ್ರೆಸ್ ವೇಯಲ್ಲಿ ಸರಣಿ ಅಪಘಾತ – ಹಲವರಿಗೆ ಗಾಯ

    ಎಕ್ಸ್‌ಪ್ರೆಸ್ ವೇಯಲ್ಲಿ ಸರಣಿ ಅಪಘಾತ – ಹಲವರಿಗೆ ಗಾಯ

    ಮಂಡ್ಯ: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ (Expressway) ಮೂರು ಕಾರುಗಳ ನಡುವೆ ಸರಣಿ ಅಪಘಾತ (Accident) ಸಂಭವಿಸಿದ ಪರಿಣಾಮ ಹಲವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

    ಶ್ರೀರಂಗಪಟ್ಟಣ (Srirangapatna) ಬಳಿಯ ಗೌರಿಪುರದ (Gouripura) ಬಳಿ ಘಟನೆ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಪಘಾತ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ (Traffic Jam) ಉಂಟಾಗಿದ್ದು, ಸುಮಾರು ಒಂದು ಕಿಲೋಮೀಟರ್ ಉದ್ದಕ್ಕೂ ವಾಹನಗಳು ನಿಂತಿದ್ದವು. ಸರಣಿ ಅಪಘಾತದಿಂದ ರಸ್ತೆ ಸಂಪೂರ್ಣ ಬಂದ್ ಆಗಿದ್ದು, ಹಲವು ನಿಮಿಷಗಳ ಬಳಿಕ ಮತ್ತೆ ರಸ್ತೆ ಸಂಚಾರ ಪ್ರಾರಂಭವಾಗಿದೆ. ಇದನ್ನೂ ಓದಿ: ಕೊಡಲಿಯಿಂದ ಹಲ್ಲೆಗೈದು ಹೊರಹಾಕಿ ಮನೆಯೊಳಗೆ ಮಲಗಿದ- ಬೆಳಗೆದ್ದು ನೋಡಿದಾಗ ಪತ್ನಿ ಸಾವು

    ಸರಣಿ ಅಪಘಾತದ ವೇಳೆ ಒಂದು ಕಾರು ಹೊತ್ತಿ ಉರಿದಿದೆ. ಈ ವೇಳೆ ಕಾರಿನಲ್ಲಿ ಇದ್ದವರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಕಿಟಕಿ ಗಾಜು ಹೊಡೆದು ಕಾರಿನಲ್ಲಿದ್ದವರನ್ನು ರಕ್ಷಣೆ ಮಾಡಲಾಗಿದೆ. ಅಪಘಾತದ ವೇಳೆ ಮಂಡ್ಯ ಎಸ್‌ಪಿ ವಾಹನಕ್ಕೂ ಕಾರು ಡಿಕ್ಕಿಯಾಗಿದೆ. ಎಸ್‌ಪಿ ಯತೀಶ್ ಶ್ರೀರಂಗಪಟ್ಟಣ ಕಡೆಗೆ ಹೋಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಈ ಕುರಿತು ಮಂಡ್ಯ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ – ಬಸ್‌ಗೆ ಸಿಲುಕಿ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟಿಕ್‌ಟಾಕ್ ಸುಂದರಿಗೆ ಕಂಟಕವಾಯ್ತು ಮೊಬೈಲ್ ಗೀಳು – ಪ್ರೀತಿಸಿ ಮದ್ವೆಯಾಗಿದ್ದ ಮಡದಿಯನ್ನೇ ಕೊಂದ ಪತಿ

    ಟಿಕ್‌ಟಾಕ್ ಸುಂದರಿಗೆ ಕಂಟಕವಾಯ್ತು ಮೊಬೈಲ್ ಗೀಳು – ಪ್ರೀತಿಸಿ ಮದ್ವೆಯಾಗಿದ್ದ ಮಡದಿಯನ್ನೇ ಕೊಂದ ಪತಿ

    -ಶವ ಸಾಗಿಸಲು ಅಳಿಯನಿಗೆ ಮಾವನಿಂದಲೇ ಸಾಥ್

    ಮಂಡ್ಯ: ಪರಪುರುಷರೊಂದಿಗೆ ಅನೈತಿಕ ಸಂಬಂಧ (Immoral Relationship) ಹೊಂದಿರುವ ಶಂಕೆಯ ಮೇಲೆ ಪ್ರೀತಿಸಿ ಮದುವೆಯಾಗಿದ್ದ ಹೆಂಡತಿಯನ್ನೇ (Wife) ಗಂಡ (Husband) ಕೊಲೆ ಮಾಡಿದ ಘಟನೆ ಮಂಡ್ಯ (Mandya) ಜಿಲ್ಲೆ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಮಂಡ್ಯಕೊಪ್ಪಲು ಗ್ರಾಮದಲ್ಲಿ ನಡೆದಿದೆ.

    ಪೂಜಾ (26) ಪತಿಯಿಂದ ಕೊಲೆಯಾದ ಮಹಿಳೆಯಾಗಿದ್ದು, ಶ್ರೀನಾಥ್ (33) ವೇಲ್‌ನಿಂದ ತನ್ನ ಪತ್ನಿಯ ಕುತ್ತಿಗೆ ಬಿಗಿದು ಕೊಲೆಗೈದಿದ್ದಾನೆ. ಪೂಜಾ ಹಾಗೂ ಶ್ರೀನಾಥ್ 9 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಆರಂಭದಲ್ಲಿ ಅನ್ಯೋನ್ಯವಾಗಿದ್ದ ದಂಪತಿಗೆ ಒಂದು ಹೆಣ್ಣುಮಗು ಇದೆ. ಕಳೆದ ಕೆಲವು ವರ್ಷಗಳಿಂದ ಪೂಜಾ ಟಿಕ್‌ಟಾಕ್ (TikTok) ಗೀಳು ಬೆಳೆಸಿಕೊಂಡಿದ್ದಳು. ರೀಲ್ಸ್ (Reels) ಮಾಡುವ ಜೊತೆಗೆ ಸ್ನೇಹಿತರೊಂದಿಗೆ ಚಾಟಿಂಗ್ ಹುಚ್ಚನ್ನೂ ಬೆಳೆಸಿಕೊಂಡಿದ್ದಳು. ಅತಿಯಾದ ಮೊಬೈಲ್ ಬಳಕೆಯಿಂದಾಗಿ ಗಂಡನಿಗೆ ಅನುಮಾನ ಶುರುವಾಗಿದ್ದು, ದಂಪತಿ ಮಧ್ಯೆ ಪದೇ ಪದೇ ಜಳವಾಗುತ್ತಿತ್ತು. ಇದನ್ನೂ ಓದಿ: ಟಿವಿ ನೋಡ್ತಿದ್ದ ವೇಳೆ ಹೃದಯಾಘಾತದಿಂದ ಉಪನ್ಯಾಸಕ ಸಾವು

    ಪರಪುಷರೊಂದಿಗೆ ಸಂಬಂಧದ ಶಂಕೆಯಿಂದ ಜಗಳ ತೆಗೆಯುತ್ತಿದ್ದ ಶ್ರೀನಾಥ್ ಪೂಜಾಳ ಕುತ್ತಿಗೆಗೆ ವೇಲ್‌ನಿಂದ ಬಿಗಿದು ಹತ್ಯೆಮಾಡಿದ್ದಾನೆ. ಕೊಲೆಗೈದ ಬಳಿಕ ಶ್ರೀನಾಥ್ ಮಾವ ಶೇಖರ್‌ಗೆ ಕರೆ ಮಾಡಿ ಕೊಲೆ ಮಾಡಿರುವುದಾಗಿ ಹೇಳಿದ್ದು, ಮಗಳ ಹತ್ಯೆಯ ಬಗ್ಗೆ ತಿಳಿದರೂ ಮಾವ ಪೊಲೀಸರಿಗೆ ಹೇಳದೆ ಅಳಿಯನಿಗೆ ಸಾಥ್ ನೀಡಿದ್ದಾರೆ. ಪೂಜಾಳ ತಂದೆ ಅಳಿಯನೊಂದಿಗೆ ಸೇರಿ ಆಕೆಯ ಮೃತದೇಹವನ್ನು ಮನೆಯಿಂದ ಬೈಕ್‌ನಲ್ಲಿ ಸಾಗಿಸಿ ಬಳಿಕ ಮೃತದೇಹಕ್ಕೆ ಭಾರವಾದ ಕಲ್ಲನ್ನು ಕಟ್ಟಿ ಕಾವೇರಿ ನದಿಗೆ (Kaveri River) ಎಸೆದಿದ್ದಾರೆ. ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ಅಪ್ರಾಪ್ತೆಯರ ಅಶ್ಲೀಲ ವೀಡಿಯೋ ಅಪ್ಲೋಡ್ – ಆರೋಪಿ ಅರೆಸ್ಟ್

    ಪತ್ನಿಯನ್ನು ಕೊಲೆಗೈದು ಶ್ರೀನಾಥ್ ಮನೆಯಲ್ಲಿಯೇ ಇದ್ದ. ಮಗಳ ಶವವನ್ನು ನದಿಗೆಸೆದ ಬಳಿಕ ಮಾವ ರಾಜಶೇಖರ್ ಹೊಟೇಲ್ ಕೆಲಸದಲ್ಲಿ ತೊಡಗಿದ್ದ. ಶ್ರೀನಾಥ್ ನಿಮಿಷಾಂಬ ದೇವಸ್ಥಾನಕ್ಕೆ ಹೋಗಿಬರುವುದಾಗಿ ತೆರಳಿದ್ದು, ದೇವರ ದರ್ಶನದ ಬಳಿಕ ಪೊಲೀಸರಿಗೆ ಕರೆ ಮಾಡಿ ಶರಣಾಗಿದ್ದಾನೆ. ಅಲ್ಲದೇ ಶವ ಸಾಗಿಸಲು ಸಾಥ್ ನೀಡಿದ ಮಾವನ ಬಗ್ಗೆಯೂ ಪೊಲೀಸರಿಗೆ ಮಾಹಿತಿ ನೀಡಿದ್ದು, ಸದ್ಯ ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಅರಕೆರೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಅಪಾರ್ಟ್‍ಮೆಂಟ್ ಹೊರಗೆ ನಡೆದುಕೊಂಡು ಹೋಗ್ತಿದ್ದ ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಸಿ ನಾಲೆಗೆ ಬಿತ್ತು ಕಾರು – ನಾಲ್ವರು ಮಹಿಳೆಯರು ಸ್ಥಳದಲ್ಲೇ ಸಾವು

    ವಿಸಿ ನಾಲೆಗೆ ಬಿತ್ತು ಕಾರು – ನಾಲ್ವರು ಮಹಿಳೆಯರು ಸ್ಥಳದಲ್ಲೇ ಸಾವು

    ಮಂಡ್ಯ: ವಿಸಿ ನಾಲೆಗೆ (VC Canal ) ಕಾರು ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ. ಕಾರು ನಾಲೆಗೆ ಬಿದ್ದ ಪರಿಣಾಮ ನಾಲ್ಕು ಮಂದಿ ಮಹಿಳೆಯರು ಮೃತಪಟ್ಟ ಘಟನೆ ದೊಡ್ಡಮುಲಗೂಡು ಮತ್ತು ಗಾಮನಹಳ್ಳಿ ನಡುವೆ ಶನಿವಾರ ರಾತ್ರಿ ನಡೆದಿದೆ.

    ಶ್ರೀರಂಗಪಟ್ಟಣ ತಾಲೂಕು ಗಾಮನಹಳ್ಳಿ ಗ್ರಾಮದ ಹೊರವಲಯದ ತುರುಗನೂರು ಬ್ರಾಂಚ್‌ನ ವಿಶ್ವೇಶ್ವರಯ್ಯ ಉಪ ನಾಲೆಗೆ ಇಂಡಿಕಾ ಕಾರು (Indica Car) ಉರುಳಿ ಬಿದಿದೆ. ರಾತ್ರಿ 8 ಗಂಟೆಯ ಸುಮಾರಿಗೆ ನಡೆದ ಈ ದುರ್ಘಟನೆಯಲ್ಲಿ ಟಿ.ನರಸೀಪುರ ತಾಲೂಕು ಗೊರವನಹಳ್ಳಿ ಗ್ರಾಮದ ದೊಡ್ಡಯ್ಯ ಎಂಬುವರ ಪತ್ನಿ ಮಹದೇವಮ್ಮ, ಸಂಬಂಧಿಕರಾದ ರೇಖಾ, ಸಂಜನಾ, ಮಹದೇವಿ ಮೃತಪಟ್ಟಿದ್ದಾರೆ.

    ನಾಲ್ವರು ಮಹಿಳೆಯರು ನಾಲೆಯ ನೀರಿನಲ್ಲೇ ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಕಾರು ಚಾಲಕ ಮನೋಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ನಾಲ್ವರು ಮಹಿಳೆಯರ ಶವವನ್ನು ನೀರಿನಿಂದ ಹೊರ ತೆಗೆದಿದ್ದಾರೆ‌. ಇದನ್ನೂ ಓದಿ: ಪ್ರದೀಪ್ ಈಶ್ವರ್ Vs ಸುಧಾಕರ್ ಟಾಕ್‍ಫೈಟ್ – ಹಾಲಿ, ಮಾಜಿ ಶಾಸಕರ ಬೆಂಬಲಿಗರ ವಿರುದ್ದ ಎಫ್‌ಐಆರ್‌ ದಾಖಲು

    ತಡೆಗೋಡೆಗೆ ಡಿಕ್ಕಿ ಹೊಡೆದು ನಾಲೆಗೆ ಕಾರು ಬಿದ್ದಿದೆ. ಚಾಲಕ ವೇಗವಾಗಿ ಕಾರನ್ನು ಚಲಾಯಿಸಿದ್ದರಿಂದ ಈ ದುರ್ಘಟನೆ ಸಂಭವಿಸರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮೃತದೇಹಗಳ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಕುಮಾರ್, ಎಸ್ಪಿ ಯತೀಶ್ ಭೇಟಿ ನೀಡಿದ್ದಾರೆ.

     

    ಆದಿಚುಂಚನಗಿರಿಯಲ್ಲಿ ಮಹದೇವಮ್ಮ ಅವರ ಮನೆಯವರು ಆಯೋಜನೆ ಮಾಡಲಿದ್ದ ದೇವರ ಕಾರ್ಯಕ್ಕೆ ಸಂಬಂಧಿಕರನ್ನು ಆಹ್ವಾನಿಸಲು ಗೊರವನಹಳ್ಳಿಯಿಂದ ದೊಡ್ಡಮಲಗೂಡಿಗೆ ಚಾಲಕ ಸೇರಿ ಐದು ಮಂದಿ ಹೋಗುತ್ತಿದ್ದರು. ಘಟನೆ ಸಂಬಂಧ ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಮಂಡ್ಯ ತಾಲೂಕು ತಿಬ್ಬನಹಳ್ಳಿ ಬಳಿ ವಿಶ್ವೇಶ್ವರಯ್ಯ ನಾಲೆಗೆ ಗುರುವಾರ ಕಾರು ಮಗುಚಿ ಬಿದ್ದು ಶಿವಳ್ಳಿ ಗ್ರಾಮದ ಲೋಕೇಶ್ ಮೃತಪಟ್ಟಿದ್ದರು. 2018ರಲ್ಲಿ ಮಂಡ್ಯ ಜಿಲ್ಲೆಯ ಕನಗನಮರಡಿ ಗ್ರಾಮದ ಕಾವೇರಿ ನದಿಯ ವಿಸಿ ನಾಲೆಗೆ ಬಸ್‌ ಉರುಳಿ 30 ಮಂದಿ ಸಾವನ್ನಪ್ಪಿದ್ದರು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • KRS ಡ್ಯಾಂ 3 ಅಡಿ ಭರ್ತಿ – 29,552 ಕ್ಯೂಸೆಕ್ ನೀರು ಒಳಹರಿವು

    KRS ಡ್ಯಾಂ 3 ಅಡಿ ಭರ್ತಿ – 29,552 ಕ್ಯೂಸೆಕ್ ನೀರು ಒಳಹರಿವು

    ಮಂಡ್ಯ: ಕೆಲ ದಿನಗಳ ಹಿಂದೆ ಬಣಗುತ್ತಿದ್ದ ಕೆಆರ್‌ಎಸ್ ಡ್ಯಾಂಗೆ (KRS Dam) ಉತ್ತಮ ಮಳೆಯಿಂದಾಗಿ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ.

    ಕಾವೇರಿ ಜಲಾನಯನ ಪ್ರದೇಶದಲ್ಲಿ (Cauvery Basin) ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಕಳೆದ 12 ಗಂಟೆಗಳ ಅವಧಿಯಲ್ಲಿ ಕೆಆರ್‌ಎಸ್ ಡ್ಯಾಂ 3 ಅಡಿ ಭರ್ತಿಯಾಗಿದ್ದು, ನೀರಿನ ಮಟ್ಟ 95 ಅಡಿಗೆ ಏರಿಕೆಯಾಗಿದೆ. ಅಲ್ಲದೇ ಕಳೆದ 12 ಗಂಟೆಗಳ ಅವಧಿಯಲ್ಲಿ 2 ಟಿಎಂಸಿ ನೀರು ಹರಿದು ಬಂದಿದ್ದು, 19.139 ಟಿಎಂಸಿಯಷ್ಟು ನೀರು ಶೇಖರಣೆಯಾಗಿದೆ. ಇದನ್ನೂ ಓದಿ: ಕಾವೇರಿ ನೀರಿಗೆ ತಮಿಳುನಾಡು ಬೇಡಿಕೆ – ಯಾವ ತಿಂಗಳು ಎಷ್ಟು ನೀರು ಬಿಡಬೇಕು?

    ಇನ್ನೂ ಡ್ಯಾಂನ ಒಳಹರಿವಿನ ಪ್ರಮಾಣದಲ್ಲೂ ಭಾರೀ ಏರಿಕೆ ಕಂಡಿದೆ. ಸದ್ಯ ಡ್ಯಾಂಗೆ 29,552 ಕ್ಯೂಸೆಕ್ ನೀರು ಒಳಹರಿವಿದ್ದು, ಹೊರಹರಿವು 5,297 ಕ್ಯೂಸೆಕ್ ನಷ್ಟಿದೆ. ಇದನ್ನೂ ಓದಿ: ಗುಡ್‌ನ್ಯೂಸ್‌ – 24 ಗಂಟೆಗಳಲ್ಲಿ KRSನಲ್ಲಿ 2.50 ಅಡಿ ನೀರು ಭರ್ತಿ

    ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ

    ಗರಿಷ್ಠ ಮಟ್ಟ – 124.80 ಅಡಿಗಳು
    ಇಂದಿನ ಮಟ್ಟ – 95.00 ಅಡಿಗಳು
    ಗರಿಷ್ಠ ಸಾಂದ್ರತೆ – 49.452 ಟಿಎಂಸಿ
    ಇಂದಿನ ಸಾಂದ್ರತೆ – 19.139 ಟಿಎಂಸಿ
    ಒಳ ಹರಿವು – 29,552 ಕ್ಯೂಸೆಕ್
    ಹೊರ ಹರಿವು – 5,297 ಕ್ಯೂಸೆಕ್

    ಆಲಮಟ್ಟಿ ಜಲಾಶಯಷ

    ಗರಿಷ್ಠ ಮಟ್ಟ- 123.081 ಟಿಎಂಸಿ
    ಇಂದಿನ ಮಟ್ಟ – 62.534 ಟಿಎಂಸಿ
    ಒಳ ಹರಿವು – 1,14,445 ಕ್ಯೂಸೆಕ್
    ಹೊರ ಹರಿವು – 6,761 ಕ್ಯೂಸೆಕ್

    ತುಂಗಭದ್ರಾ ಜಲಾಶಯ

    ಗರಿಷ್ಠ ಮಟ್ಟ – 1,633 ಅಡಿಗಳು
    ಇಂದಿನ ಮಟ್ಟ – 1,602.84 ಅಡಿಗಳು
    ಗರಿಷ್ಠ ಟಿಎಂಸಿ – 105.788 ಟಿಎಂಸಿ
    ಇಂದಿನ ಟಿಎಂಸಿ – 25.417 ಟಿಎಂಸಿ
    ಒಳ ಹರಿವು – 47,294 ಕ್ಯೂಸೆಕ್
    ಹೊರ ಹರಿವು – 213 ಕ್ಯೂಸೆಕ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • KRS ಒಳಹರಿವಿನ ಪ್ರಮಾಣ ಕುಸಿತ

    KRS ಒಳಹರಿವಿನ ಪ್ರಮಾಣ ಕುಸಿತ

    ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದ್ದು ಶ್ರೀರಂಗಪಟ್ಟಣದ (Srirangapatna) ಕೆಆರ್‌ಎಸ್ ಡ್ಯಾಂ (KRS DAM) ಒಳಹರಿವಿನ ಪ್ರಮಾಣ ಇಳಿಕೆಯಾಗಿದೆ.

    ಕಳೆದ ವಾರ 15,000 ಕ್ಯೂಸೆಕ್ ಇದ್ದ ಒಳಹರಿವಿನ ಪ್ರಮಾಣ 2,459 ಕ್ಯೂಸೆಕ್‍ಗೆ ಇಳಿದಿದೆ. ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಡ್ಯಾಂ ಒಳಹರಿವಿನಲ್ಲೂ ಕುಸಿತ ಕಂಡಿದೆ. ಕಳೆದ 8 ದಿನಗಳಿಂದ ಡ್ಯಾಂಗೆ 5 ಟಿಎಂಸಿ ನೀರು ಮಾತ್ರ ಹರಿದು ಬಂದಿದೆ. ಕಳೆದ ವಾರ 10 ಟಿಎಂಸಿ ನೀರಿತ್ತು. ಶುಕ್ರವಾರ (ಇಂದು) ಡ್ಯಾಮ್‍ನಲ್ಲಿ ಶೇಖರಣೆಗೊಂಡಿರುವ ನೀರಿನ ಮಟ್ಟ 15.224 ಟಿಎಂಸಿ ಆಗಿದೆ. ಇದರಿಂದ ತಾತ್ಕಾಲಿಕವಾಗಿ ಕುಡಿಯುವ ನೀರಿನ ಸಮಸ್ಯೆ ಪರಿಹಾರವಾದಂತಾಗಿದೆ. ಇದನ್ನೂ ಓದಿ: ನಿಮ್ಮ ರೂಮ್‍ನಲ್ಲಿ ಡ್ರಗ್ಸ್ ಇದೆ – ಪೊಲೀಸರಂತೆ ನುಗ್ಗಿ ಯುವಕರ ರೂಮ್ ದರೋಡೆ!

    3 ತಿಂಗಳಿಗೆ ಕುಡಿಯುವ ನೀರು ಪೂರೈಕೆಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ಕೃಷಿಗೆ ನೀರು ಕೊಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ರೈತರಲ್ಲಿ ಆತಂಕ ಶುರುವಾಗಿದೆ. ನೀರಿಲ್ಲದೆ ಮಂಡ್ಯ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಸ್ಥಗಿತಗೊಂಡಿವೆ. ಇದನ್ನೂ ಓದಿ: ವಿಧಾನಸೌಧದಲ್ಲಿ ನಕಲಿ ಪಾಸ್‌ ಹಾವಳಿ – 4 ದಿನದಲ್ಲಿ 300ಕ್ಕೂ ಹೆಚ್ಚು ನಕಲಿ ಪಾಸ್‌

    ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ

    ಗರಿಷ್ಠ ಮಟ್ಟ – 124.80 ಅಡಿ
    ಇಂದಿನ ಮಟ್ಟ – 88.78 ಅಡಿ
    ಗರಿಷ್ಠ ಸಂಗ್ರಹ ಸಾಮಥ್ರ್ಯ – 49.452 ಟಿಎಂಸಿ
    ಇಂದು ಡ್ಯಾಂನಲ್ಲಿರುವ ನೀರು – 15.224 ಟಿಎಂಸಿ
    ಒಳಹರಿವು – 2459 ಕ್ಯೂಸೆಕ್
    ಹೊರಹರಿವು – 393 ಕ್ಯೂಸೆಕ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೆಂಡತಿ ಮೊಬೈಲ್‌ನಲ್ಲಿ ಮಾತಾಡ್ತಾಳೆ ಅಂತ ಮಕ್ಕಳನ್ನು ಕೊಂದ ಪಾಪಿ ತಂದೆ

    ಹೆಂಡತಿ ಮೊಬೈಲ್‌ನಲ್ಲಿ ಮಾತಾಡ್ತಾಳೆ ಅಂತ ಮಕ್ಕಳನ್ನು ಕೊಂದ ಪಾಪಿ ತಂದೆ

    – ಕೌಟುಂಬಿಕ ಕಲಹ ಪ್ರಕರಣಕ್ಕೆ ಟ್ವಿಸ್ಟ್

    ಮಂಡ್ಯ: ಕೌಟುಂಬಿಕ ಕಲಹ (Family Feud) ಹಿನ್ನೆಲೆ ಸ್ವಂತ ತಂದೆಯೇ ತನ್ನ ಇಬ್ಬರು ಮಕ್ಕಳ ಕತ್ತು ಸೀಳಿ ಹತ್ಯೆಗೈದ (Murder) ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಲಬುರಗಿ (Kalaburagi) ಜಿಲ್ಲೆಯ ಜೇವರ್ಗಿಯಲ್ಲಿ (Jevargi) ಪೊಲೀಸರು ಬಂಧಿಸಿದ್ದಾರೆ.

    ಶ್ರೀಕಾಂತ್ ಬಂಧಿತ ಆರೋಪಿ. ಈತ ಕಲಬುರಗಿ ಜಿಲ್ಲೆಯ ಗಾಣಗಪುರದವನಾಗಿದ್ದು, ಲಕ್ಷ್ಮಿ ಎಂಬಾಕೆಯನ್ನು ವರಿಸಿದ್ದ. ಮದುವೆಯಾದಾಗಿನಿಂದ ಇವರಿಬ್ಬರ ಮಧ್ಯೆ ಒಂದಲ್ಲ ಒಂದು ವಿಚಾರಕ್ಕೆ ಗಲಾಟೆ ನಡೆಯುತ್ತಲೇ ಇತ್ತು. ಬುಧವಾರ ಈತ ತನ್ನ ತಂದೆ-ತಾಯಿಯೊಂದಿಗೆ ಜಗಳ ಮಾಡಿಕೊಂಡು ಶ್ರೀರಂಗಪಟ್ಟಣ (Srirangapatna) ಸಮೀಪದ ಮರಳಗಾಲ ಗ್ರಾಮದ ವಿರೂಪಾಕ್ಷ ಎಂಬವರ ತೋಟದ ಮನೆಯಲ್ಲಿ ಕೆಲಸ ಮಾಡುತ್ತಿದ್ದ. ನಂತರ ಅತ್ತೆ-ಮಾವನ ಮನೆಗೆ ಬಂದಿದ್ದ. ಅಲ್ಲದೇ ನಮಗೆ ಇಲ್ಲಿಯೇ ಕೆಲಸ ಕೊಡಿಸಿ, ಕೆಲಸ ಮಾಡಿಕೊಂಡು ಇಲ್ಲಿಯೇ ಇರುತ್ತೇವೆ ಎಂದು ಶ್ರೀಕಾಂತ್ ಹೇಳಿದ್ದ. ಇದನ್ನೂ ಓದಿ: 3 ವರ್ಷದ ಹಿಂದಿನ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ – ಮಹಿಳೆಯ ಅಸ್ತಿಪಂಜರ ಸೆಪ್ಟಿಕ್ ಟ್ಯಾಂಕ್‍ನಲ್ಲಿ ಪತ್ತೆ

    ಇದಕ್ಕೆ ಒಪ್ಪಿಕೊಂಡ ಅವರ ಅತ್ತೆ-ಮಾವ ಊಟ ಮಾಡಿ ಮಲಗಿದ್ದರು. ಗುರುವಾರ ಬೆಳಗ್ಗಿನ ಜಾವ ಏಕಾಏಕಿ ಶ್ರೀಕಾಂತ್ ತನ್ನ ಹೆಂಡತಿಗೆ ಸುತ್ತಿಗೆಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಅಲ್ಲೇ ಪಕ್ಕದಲ್ಲಿದ್ದ ಆದರ್ಶ್ (4) ಮತ್ತು ಅಮೂಲ್ಯ (2) ಎಂಬ ತನ್ನ ಇಬ್ಬರು ಮಕ್ಕಳ ಕತ್ತು ಸೀಳಿ ಕೊಲೆ ಮಾಡಿ ಅಲ್ಲಿಂದ ಪರಾರಿಯಾಗಿದ್ದ. ಕೊಲೆ ಮಾಡಿದ ಪಾಪಿ ಶ್ರೀಕಾಂತ್ ಪರಾರಿಯಾಗಿ ತನ್ನ ಹುಟ್ಟೂರಾದ ಜೇವರ್ಗಿಗೆ ಬಂದು ಯಾವುದೇ ಪಾಪಪ್ರಜ್ಞೆ ಇಲ್ಲದೇ ಕುಡಿದು ಮಲಗಿದ್ದ. ಟಿವಿಯಲ್ಲಿ ಹತ್ಯೆ ವಿಚಾರ ತಿಳಿದ ಈತನ ತಂದೆ-ತಾಯಿ ಮನೆಯಲ್ಲಿ ಶ್ರೀಕಾಂತ್ ಇರುವಿಕೆಯ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪತ್ನಿಯ ಜೊತೆ ಅಕ್ರಮ ಸಂಬಂಧ – ಪ್ರಿಯಕರನ ಕತ್ತು ಸೀಳಿ ರಕ್ತ ಕುಡಿದ ಗಂಡ

    ಮಾಹಿತಿ ಆಧಾರದ ಮೇಲೆ ಪೊಲೀಸರು ಆರೋಪಿ ಶ್ರೀಕಾಂತ್‌ನನ್ನು ಜೇವರ್ಗಿಯಲ್ಲಿ ಬಂಧಿಸಿದ್ದಾರೆ. ವಿಚಾರಣೆ ವೇಳೆ ಕೊಲೆಯ ಅಸಲಿ ಸತ್ಯವನ್ನು ಶ್ರೀಕಾಂತ್ ಬಾಯಿ ಬಿಟ್ಟಿದ್ದಾನೆ. ತನ್ನ ಹೆಂಡತಿ ಯಾವಾಗಲೂ ಯಾರದ್ದೋ ಜೊತೆ ಫೋನ್‌ನಲ್ಲಿ ಗಂಟೆಗಟ್ಟಲೆ ಮಾತನಾಡುತ್ತಿದ್ದಳು. ಈ ಹಿನ್ನೆಲೆ ಪತ್ನಿಯ ಶೀಲ ಶಂಕಿಸಿ ಮಕ್ಕಳನ್ನು ಕೊಲೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಪ್ರತಿದಿನ ಲಕ್ಷ್ಮಿ ಶೀಲ ಶಂಕಿಸಿ ಮನೆಯಲ್ಲಿ ಗಲಾಟೆ ನಡೆಯುತ್ತಿತ್ತು. ಇಬ್ಬರು ಮಕ್ಕಳು ನನ್ನದಲ್ಲ ಎಂದು ಸದಾ ಮಕ್ಕಳು ಮತ್ತು ಹೆಂಡತಿಯ ಮೇಲೆ ಹಲ್ಲೆ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಇದೀಗ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಇದನ್ನೂ ಓದಿ: ಲೇಡಿಸ್ ಪಿಜಿಗಳೇ ಟಾರ್ಗೆಟ್ – ಸ್ನಾನ ಮಾಡುವುದನ್ನು ಕದ್ದುಮುಚ್ಚಿ ವೀಡಿಯೋ ಮಾಡುತ್ತಿದ್ದಾಗಲೇ ಕಿರಾತಕ ಲಾಕ್

  • ಕೌಟುಂಬಿಕ ಕಲಹ – ಮಕ್ಕಳ ಕತ್ತು ಸೀಳಿ ಕೊಲೆಗೈದ ಪಾಪಿ ತಂದೆ

    ಕೌಟುಂಬಿಕ ಕಲಹ – ಮಕ್ಕಳ ಕತ್ತು ಸೀಳಿ ಕೊಲೆಗೈದ ಪಾಪಿ ತಂದೆ

    – ಪತ್ನಿಯ ಮೇಲೆ ಸುತ್ತಿಗೆಯಿಂದ ಮಾರಣಾಂತಿಕ ಹಲ್ಲೆ

    ಮಂಡ್ಯ: ಕೌಟುಂಬಿಕ ಕಲಹ (Family Feud) ಹಿನ್ನೆಲೆ ಪಾಪಿ ತಂದೆ ಇಬ್ಬರು ಪುಟ್ಟ ಮಕ್ಕಳ ಕುತ್ತಿಗೆ ಸೀಳಿ ಕೊಲೆ (Murder) ಮಾಡಿದ್ದು, ತನ್ನ ಮಡದಿಗೂ (Wife) ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದಲ್ಲಿ ಜರುಗಿದೆ.

    ಆದರ್ಶ (4) ಹಾಗೂ ಅಮೂಲ್ಯ (2) ತಂದೆಯಿಂದ ಕೊಲೆಯಾದ ದುರ್ದೈವಿ ಮಕ್ಕಳು. ಶ್ರೀಕಾಂತ್ ತನ್ನ ಇಬ್ಬರು ಮಕ್ಕಳನ್ನು ಕೊಂದು ತನ್ನ ಪತ್ನಿ ಲಕ್ಷ್ಮಿಗೆ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಶ್ರೀಕಾಂತ್ ಗುಲ್ಬರ್ಗ (Gulbarga) ಜಿಲ್ಲೆಯ ಗಾಣಗಪುರ ಗ್ರಾಮದವನಾಗಿದ್ದು, ಲಕ್ಷ್ಮಿಯನ್ನು ವರಿಸಿ 6 ವರ್ಷಗಳಾಗಿತ್ತು. ಮದುವೆಯಾದಾಗಿನಿಂದ ಒಂದಲ್ಲಾ ಒಂದು ವಿಚಾರಕ್ಕೆ ಗಲಾಟೆಯಾಗುತ್ತಿತ್ತು. ಬುಧವಾರ ಶ್ರೀಕಾಂತ್ ತನ್ನ ತಂದೆ, ತಾಯಿ ಜೊತೆ ಗಲಾಟೆ ಮಾಡಿಕೊಂಡು ಶ್ರೀರಂಗಪಟ್ಟಣ (Srirangapatna) ಸಮೀಪದ ಮರಳಗಾಲ ಗ್ರಾಮದ ವಿರುಪಾಕ್ಷ ಎಂಬವರ ತೋಟದ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಅತ್ತೆ-ಮಾವನ ಮನೆಗೆ ಬಂದಿದ್ದಾರೆ. ಬಳಿಕ ಇಲ್ಲೇ ಒಂದು ಕೆಲಸ ಕೊಡಿಸಿ ನಾವು ಇಲ್ಲಿಯೇ ಇರುತ್ತೇವೆ ಎಂದು ಶ್ರೀಕಾಂತ್ ಹೇಳಿದ್ದಾನೆ. ಇದನ್ನೂ ಓದಿ: ಬಾಡಿಗೆದಾರರ ಕಿರುಕುಳ – ಮನೆ ಒಡತಿ ಆತ್ಮಹತ್ಯೆ, ಮಗಳ ಸಾವಿನ ಸುದ್ದಿ ಕೇಳಿ ತಾಯಿಯೂ ಸಾವು

    ಇದಕ್ಕೆ ಅತ್ತೆ-ಮಾವ ಸರಿ ಎಂದು ಹೇಳಿ ಎಲ್ಲರೂ ಊಟ ಮಾಡಿ ಪ್ರತ್ಯೇಕ ಮನೆಯಲ್ಲಿ ಮಲಗಿದ್ದಾರೆ. ಬೆಳಗಿನ ಜಾವ ಇದ್ದಕ್ಕಿದ್ದ ಹಾಗೆ ಶ್ರೀಕಾಂತ್ ತನ್ನ ಪತ್ನಿ ಲಕ್ಷ್ಮಿಗೆ ಸುತ್ತಿಗೆಯಿಂದ (Hammer) ಹೊಡೆದಿದ್ದಾನೆ. ಹೊಡೆದ ರಭಸಕ್ಕೆ ಲಕ್ಷ್ಮಿ ರಕ್ತದ ಮಡುವಿನಲ್ಲಿ ಒದ್ದಾಡಿದ್ದಾಳೆ. ಬಳಿಕ ಪಕ್ಕದಲ್ಲೇ ಇದ್ದ ಮಕ್ಕಳ ಕುತ್ತಿಗೆ ಕೊಯ್ದು ಹತ್ಯೆ ಮಾಡಿ ಶ್ರೀಕಾಂತ್ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಹೆಂಡತಿ ಹೆದರಿಸಲು ಬೆಂಕಿ ಹಚ್ಚಿಕೊಂಡ ಭೂಪ

    ಲಕ್ಷ್ಮಿ ತಾಯಿ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಮಾರಣಾಂತಿಕ ಹಲ್ಲೆಗೊಳಗಾದ ಲಕ್ಷ್ಮಿಯನ್ನು ಮೈಸೂರಿನ (Mysuru) ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ಏನು ತಪ್ಪು ಮಾಡದ ಎರಡು ಮುದ್ದಾದ ಜೀವಗಳು ತಂದೆಯ ಕ್ರೌರ್ಯಕ್ಕೆ ಬಲಿಯಾಗಿವೆ. ಈ ಬಗ್ಗೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಶ್ರೀಕಾಂತ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಈ ಪ್ರಕರಣ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದು, ಆರೋಪಿಯ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಬಸ್ ನಿಲ್ಲಿಸದೇ ಮಹಿಳೆ ಜೊತೆ ಅನುಚಿತ ವರ್ತನೆ – ನಿರ್ವಾಹಕನ ಮೇಲೆ ಸಂಬಂಧಿಕರಿಂದ ಹಲ್ಲೆ

  • ಕಲ್ಲಿನಿಂದ ಜಜ್ಜಿ ಮಹಿಳೆಯ ಬರ್ಬರ ಹತ್ಯೆ

    ಕಲ್ಲಿನಿಂದ ಜಜ್ಜಿ ಮಹಿಳೆಯ ಬರ್ಬರ ಹತ್ಯೆ

    ಮಂಡ್ಯ: ಮಹಿಳೆಯ ತಲೆಯನ್ನು ಕಲ್ಲಿನಿಂದ ಜಜ್ಜಿ ಬರ್ಬರ ಹತ್ಯೆ ಮಾಡಿರುವ ಘಟನೆ ಮಂಡ್ಯದ (Mandya) ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ಗ್ರಾಮದಲ್ಲಿ ನಡೆದಿದೆ.

    ತಮಿಳುನಾಡು (Tamil Nadu) ಮೂಲದ ಗಂಗಾ (38) ಕೊಲೆಯಾದ ದುರ್ದೈವಿ. ಇವರು ಹಕ್ಕಿಪಿಕ್ಕಿ ಜನಾಂಗದವರಾಗಿದ್ದು, ನಿಮಿಷಾಂಬ ದೇವಾಲಯದ (Nimishamba Temple) ಬಳಿಯ ಕಾವೇರಿ ನದಿಯಲ್ಲಿ (Kaveri River) ಕಾಸು ಹೆಕ್ಕುವ ಕಾಯಕವನ್ನು ಮಾಡುತ್ತಿದ್ದರು. ಅಲ್ಲದೇ ಇವರು ಮೈಸೂರು – ಬೆಂಗಳೂರು ಮೇಲ್ಸೇತುವೆಯ ಕೆಳಗೆ ತಮ್ಮ ಗುಂಪಿನೊಂದಿಗೆ ವಾಸಿಸುತ್ತಿದ್ದರು. ಇವರ ಗುಂಪಿನ ಸದಸ್ಯರೆಲ್ಲರೂ ನಿರಾಶ್ರಿತರಾಗಿದ್ದು, ಮಹಿಳೆಯ ಹತ್ಯೆಯ ಬಳಿಕ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಕೆಲಸದ ನೆಪದಲ್ಲಿ ಕರೆದೊಯ್ದು ಕಾರಿನಲ್ಲಿ ಕಿರುಕುಳ- ಬೈಕಲ್ಲಿ ಬಂದವ್ರಿಂದ ಮಹಿಳೆ ರಕ್ಷಣೆ

    ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಐತಿಹಾಸಿಕ ಬಾವಿಗೆ ಬಿದ್ದು ಯುವಕ ಆತ್ಮಹತ್ಯೆ

  • ಪತ್ನಿ ನೇಣುಬಿಗಿದುಕೊಂಡ ಬೆನ್ನಲ್ಲೇ ಪತಿಯೂ ಸೂಸೈಡ್

    ಪತ್ನಿ ನೇಣುಬಿಗಿದುಕೊಂಡ ಬೆನ್ನಲ್ಲೇ ಪತಿಯೂ ಸೂಸೈಡ್

    ಮಂಡ್ಯ: ಕೌಟುಂಬಿಕ ಕಲಹದಿಂದ ಮನನೊಂದು ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಪುರುಷೋತ್ತಮ (45), ವಿದ್ಯಾ(32) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಪತಿ ಕೆಲಸಕ್ಕೆ ತೆರಳಿದ್ದಾಗ ಪತ್ನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿಷಯ ತಿಳಿದು ಮನೆಗೆ ಬಂದ ಪತಿ ಮನೆ ಪಕ್ಕದ ಜಮೀನಿಗೆ ತೆರಳಿ ನೇಣಿಗೆ ಶರಣಾಗಿದ್ದಾನೆ. ಇದನ್ನೂ ಓದಿ: ನಡುರಸ್ತೆಯಲ್ಲಿ `ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ಯುವಕ – ವೆಬ್ ಸೀರಿಸ್ ತಂದಿಟ್ಟ ಸಂಕಷ್ಟ

    ಮೈಸೂರಿನ ಖಾಸಗಿ ಕಂಪನಿಯಲ್ಲಿ ಪುರುಷೋತ್ತಮ್ ಉದ್ಯೋಗ ಮಾಡುತ್ತಿದ್ದ. ದಂಪತಿ ನಡುವೆ ಆಗಾಗ ಕಲಹಗಳು ನಡೆಯುತ್ತಿತ್ತು. ಇದರಿಂದ ಬೇಸತ್ತು ಆತ್ಮಹತ್ಯೆಗೆ ಶರಾಣಾಗಿದ್ದಾರೆ ಎಂದು ತಿಳಿದು ಬಂದಿದೆ. ಮೃತ ದಂಪತಿಗೆ 7 ಹಾಗೂ 5 ವರ್ಷದ ಮಕ್ಕಳಿದ್ದಾರೆ.

    ಸ್ಥಳಕ್ಕೆ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆ (Srirangapatna Rural Station) ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನ ಶವ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • 4 ವರ್ಷಗಳ ಬಳಿಕ ಬೇಗನೆ 100 ಅಡಿಗೆ ಕುಸಿದ KRS ಡ್ಯಾಂ ನೀರಿನ ಮಟ್ಟ

    4 ವರ್ಷಗಳ ಬಳಿಕ ಬೇಗನೆ 100 ಅಡಿಗೆ ಕುಸಿದ KRS ಡ್ಯಾಂ ನೀರಿನ ಮಟ್ಟ

    ಮಂಡ್ಯ: ಹಳೇ ಮೈಸೂರು (Mysuru) ಭಾಗದ ಜೀವನಾಡಿಯಾಗಿರುವ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ (Srirangapatna) ತಾಲೂಕಿನ KRS ಡ್ಯಾಂನ ನೀರಿನ ಮಟ್ಟ 100 ಅಡಿಗೆ ಕುಸಿತ ಕಂಡಿದೆ.

    ಕಳೆದ ವರ್ಷ ಉತ್ತಮ ಮಳೆಯಾದ ಪರಿಣಾಮ ಕೆಆರ್‌ಎಸ್ ಜಲಾಶಯ ಎರಡು ಬಾರಿ ಸಂಪೂರ್ಣ ಭರ್ತಿಯಾಗಿತ್ತು. ಹೀಗಿದ್ದರೂ ಸಹ ಮಾರ್ಚ್ ಮೂರನೇ ವಾರಕ್ಕೆ ಕೆಆರ್‌ಎಸ್‌ನ ನೀರಿನ ಮಟ್ಟ 100 ಅಡಿಗೆ ತಲುಪಿದೆ. 4 ವರ್ಷದ ಬಳಿಕ ಬೇಗನೆ ಡ್ಯಾಂ ನೀರಿನ ಮಟ್ಟ 100 ಅಡಿಗೆ ಕುಸಿತ ಕಂಡಿದೆ. 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಡ್ಯಾಂನಲ್ಲಿ ಸದ್ಯ 100 ಅಡಿ ನೀರು ಮಾತ್ರ ಸಂಗ್ರಹವಾಗಿದೆ. ಇದನ್ನೂ ಓದಿ: ಇಬ್ಬರು ಹೆಂಡಿರನ್ನು ಮ್ಯಾನೇಜ್ ಮಾಡಲು ಹೋದ ಪೇದೆ – ಪತ್ನಿಯಿಂದಲೇ ಬರ್ಬರ ಹತ್ಯೆ

    ಡ್ಯಾಂನಲ್ಲಿ ನೀರು 100 ಅಡಿಗೆ ಕಡಿಮೆಯಾದರೂ ಸಹ ಜೂನ್‌ವರೆಗೂ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಒಂದು ವೇಳೆ ಮುಂಗಾರು ಮಳೆ ತಡವಾದ್ರೆ ಕಾವೇರಿ ನೀರಿಗೆ ಅವಲಂಬಿತವಾಗಿರುವ ಜನರಿಗೆ ನೀರಿನ ಹಾಹಾಕಾರ ಎದುರಾಗಬಹುದು.

    ಮೇ ತಿಂಗಳ ಅಂತ್ಯಕ್ಕೆ ಕೃಷಿಗೆ ನೀರು ಕೊಡುವುದು ಕಷ್ಟವಾಗಿದ್ದು, ನೀರಿನ ಸಮಸ್ಯೆಯಿಂದಾಗಿ ಡ್ಯಾಂನ ಅಚ್ಚುಕಟ್ಟು ರೈತರಲ್ಲಿ ಸ್ವಲ್ಪ ಆತಂಕ ಎದುರಾಗಬಹುದು. ಭತ್ತ ಕಾಳುಕಟ್ಟುವ ವೇಳೆಗೆ ನೀರಿನ ಅಭಾವ ಸೃಷ್ಟಿ ಸಾಧ್ಯತೆ ಇದ್ದು, ಮುಂಗಾರು ನಿಗದಿತ ಸಮಯಕ್ಕೆ ಮಳೆ ಸುರಿದರೆ ಕಾವೇರಿ ಕೊಳ್ಳದ ರೈತರಿಗೆ ಹಾಗೂ ಜನರಿಗೆ ನೀರಿನ ಸಮಸ್ಯೆ ಉದ್ಭವಿಸುವುದಿಲ್ಲ. ಇದನ್ನೂ ಓದಿ: ಬೆಂಗಳೂರಲ್ಲಿ ಸಿಗರೇಟ್‌ ವಿಚಾರಕ್ಕೆ ನಡೆದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯ