Tag: Srisailappa Bidarura

  • ರಾತ್ರೋರಾತ್ರಿ ಆಪರೇಷನ್ ಹಸ್ತ – ಕಮಲ ಬಿಟ್ಟು ‘ಕೈ’ ಹಿಡಿದ ಮಾಜಿ ಶಾಸಕ

    ರಾತ್ರೋರಾತ್ರಿ ಆಪರೇಷನ್ ಹಸ್ತ – ಕಮಲ ಬಿಟ್ಟು ‘ಕೈ’ ಹಿಡಿದ ಮಾಜಿ ಶಾಸಕ

    ಗದಗ: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕಮಲ ಬಿಟ್ಟು ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ ಕಾಂಗ್ರೆಸ್ ಸೇರ್ಪಡೆಯಾಗುವ ಮೂಲಕ ರಾತ್ರೋರಾತ್ರಿ ನಡೆದ ಆಪರೇಷನ್ ಹಸ್ತ ಯಶಸ್ವಿಯಾಗಿದೆ.

    ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬಿಜೆಪಿ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ ಅವರು ಬೆಂಗಳೂರಿನ ಸಿದ್ದರಾಮಯ್ಯ ಮನೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ಶಾಲು ಹಾಕಿ ಕಾಂಗ್ರೆಸ್ ಪಕ್ಷಕ್ಕೆ ಸಿದ್ದರಾಮಯ್ಯ ಬರಮಾಡಿಕೊಂಡಿದ್ದಾರೆ.

    ಮೂರು ಬಾರಿ ಶ್ರೀಶೈಲಪ್ಪ ಬಿದರೂರ ಶಾಸಕರಾಗಿದ್ದರು. ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗದಗ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಬಿದರೂರ ಅವರು ಅಸಮಾಧಾನಗೊಂಡಿದ್ದರು. ಶ್ರೀಶೈಲಪ್ಪ ಬಿದರೂರ ಅವರು ಗದಗ ಮತ್ತು ರೋಣ ಕ್ಷೇತ್ರದಲ್ಲಿ ಹಿಡಿತ ಹೊಂದಿದ್ದು, ಅಪಾರ ಅಭಿಮಾನಿ, ಕಾರ್ಯಕರ್ತರನ್ನು ಹೊಂದಿದ್ದಾರೆ. ಈಗ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಹಿನ್ನೆಲೆಯಲ್ಲಿ ಗದಗ ಮತ್ತು ರೋಣ ಎರಡು ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆಯಾಗುವ ಸಾಧ್ಯತೆ ಇದೆ.

    ಗದಗದಲ್ಲಿ ಕಾಂಗ್ರೆಸ್ ನಾಯಕರು ಭಾನುವಾರ ರಾತ್ರೋರಾತ್ರಿ ಮಾಜಿ ಸಚಿವ ಎಚ್.ಕೆ.ಪಾಟೀಲ್ ಗದಗ ಲಿಂಗಾಯತ ಪ್ರಭಾವಿ ನಾಯಕರ ಜೊತೆ ಮಾತನಾಡಿದ್ದರು. ಎರಡು ದಿನದ ಹಿಂದೆ ಶ್ರೀಶೈಲಪ್ಪ ಬಿದರೂರ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ ಪಾಟೀಲ್ ಮಾತುಕತೆ ಮಾಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು.

  • ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಬಿಗ್ ಶಾಕ್!

    ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಬಿಗ್ ಶಾಕ್!

    ಗದಗ: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಗದಗ ರಾಜಕಾರಣದಲ್ಲಿ ಬಿಗ್ ಶಾಕ್ ಎದುರಾಗಿದೆ.

    ಗದಗದಲ್ಲಿ ಕಾಂಗ್ರೆಸ್ ನಾಯಕರು ರಾತ್ರೋರಾತ್ರಿ ನಡೆಸಿದ ಆಪರೇಷನ್ ಹಸ್ತ ಸಕ್ಸಸ್ ಆಗಿದೆ. ಬಿಜೆಪಿ ಮತಬ್ಯಾಂಕ್‍ಗೆ ಗಾಳ ಹಾಕಿದ್ದ ಮಾಜಿ ಸಚಿವ ಎಚ್.ಕೆ.ಪಾಟೀಲ್ ಗದಗ ಲಿಂಗಾಯತ ಪ್ರಭಾವಿ ನಾಯಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಮಲ ಬಿಟ್ಬು ಕೈ ಹಿಡಿಯಲು ಬಿಜೆಪಿ ಮಾಜಿ ಶಾಸಕ ಮತ್ತು ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರ ಸಜ್ಜಾಗಿದ್ದಾರೆ.

    ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶ್ರೀಶೈಲಪ್ಪ ಬಿದರೂರ ಅವರು ಬಿಜೆಪಿ ಟಿಕೆಟ್ ಕೈ ತಪ್ಪಿದಕ್ಕೆ ತಟಸ್ಥವಾಗಿ ಉಳಿದಿದ್ದರು. ಈಗ ಬಿಜೆಪಿ ಸೋಲಿಸಲು ಕಾಂಗ್ರೆಸ್ ಜೊತೆ ಕೈ ಮಿಲಾಯಿಸಲು ಶ್ರೀಶೈಲಪ್ಪ ಮುಂದಾಗಿದ್ದಾರೆ. ಶ್ರೀಶೈಲಪ್ಪ ಬಿದರೂರ ಅವರು ಗದಗ ಮತ್ತು ರೋಣ ಕ್ಷೇತ್ರದಲ್ಲಿ ಹಿಡಿತ ಹೊಂದಿದ್ದು, ಅಪಾರ ಅಭಿಮಾನಿ, ಕಾರ್ಯಕರ್ತರನ್ನು ಹೊಂದಿದ್ದಾರೆ.

    ಈಗಾಗಲೇ ಶ್ರೀಶೈಲಪ್ಪ ಬಿದರೂರ, ಕೆಪಿಸಿಸಿ ಪ್ರಚಾರಸಮಿತಿ ಅಧ್ಯಕ್ಷ ಎಚ್.ಕೆ ಪಾಟೀಲ್ ಮಾತುಕತೆ ಮಾಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಸದ್ಯಕ್ಕೆ ಕಾಂಗ್ರೆಸ್ ಪಕ್ಷ ಸೇರಲು ಲಿಂಗಾಯತ ನಾಯಕ ಬಿದರೂರ ಒಲವು ತೋರಿದ್ದು, ಇದರಿಂದ ಬಿಜೆಪಿಗೆ ಸಂಕಷ್ಟ ಸಾಧ್ಯತೆ ಇದೆ.