Tag: SSLV

  • ಆಜಾದಿ ಸ್ಯಾಟ್ ಉಪಗ್ರಹ ಉಡಾವಣೆ ವಿಫಲ: ಇಸ್ರೋ

    ಆಜಾದಿ ಸ್ಯಾಟ್ ಉಪಗ್ರಹ ಉಡಾವಣೆ ವಿಫಲ: ಇಸ್ರೋ

    ನವದೆಹಲಿ: ಭಾನುವಾರ ಶ್ರೀಹರಿಕೋಟಾ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಮೊದಲ ಬಾರಿ ಉಡಾವಣೆಗೊಂಡ ಸಣ್ಣ ಉಪಗ್ರಹ ಉಡಾವಣಾ ವಾಹನ(ಎಸ್‌ಎಸ್‌ಎಲ್‌ವಿ) ತನ್ನ ಉದ್ದೇಶಿತ ಗುರಿಯನ್ನು ತಲುಪಲಿಲ್ಲ. ಇಒಎಸ್-02 ಉಪಗ್ರಹ ಉಡಾವಣೆ ವಿಫಲವಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ತಿಳಿಸಿದೆ.

    ವೆಲೋಸಿಟಿ ಟ್ರಿಮ್ಮಿಂಗ್ ಮಾಡ್ಯುಲ್(ವಿಟಿಎಂ) ಉಪಗ್ರಹವನ್ನು ತನ್ನ ಕಕ್ಷೆಗೆ ಸೇರಿಸಬೇಕಿತ್ತು. ಆದರೆ ಅದು ಟರ್ಮಿನಲ್ ಹಂತದಲ್ಲಿ ಉರಿದಿರಲಿಲ್ಲ. ವಿಟಿಎಂ 30 ಸೆಕೆಂಡುಗಳ ಕಾಲ ಉರಿಯಬೇಕಿತ್ತು. ಆದರೆ ಅದು ಸರಿಯಾಗಿ ಉರಿಯದೇ ಇದ್ದುದು ವೈಫಲ್ಯಕ್ಕೆ ಕಾರಣವಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಮಣಿಪುರದಲ್ಲಿ ಹಿಂಸಾಚಾರ – 5 ದಿನ ಇಂಟರ್‌ನೆಟ್ ಸ್ಥಗಿತ

    ಇಸ್ರೋ ಮೊದಲಿಗೆ ಉಪಗ್ರಹ ಉಡಾವಣೆ ಹಂತ ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದು ಘೋಷಿಸಿತ್ತು. ಆದರೆ ತಾಂತ್ರಿಕ ದೋಷದ ಸುಳಿವು ಮೊದಲೇ ಸಿಕ್ಕಿದ್ದರಿಂದ ಮಿಷನ್ ಯಶಸ್ವಿಯಾಗಿದೆ ಎಂದು ತಕ್ಷಣವೇ ಘೋಷಿಸಿರಲಿಲ್ಲ. ಇದನ್ನೂ ಓದಿ: ಮಹಿಳೆಯರ ಹಾಕಿಯಲ್ಲಿ ರೋಚಕ ಕಾದಾಟ – ಪೆನಾಲ್ಟಿ ಶೂಟೌಟ್‍ನಲ್ಲಿ ಗೆದ್ದು ಕಂಚು ಮುಡಿಗೇರಿಸಿಕೊಂಡ ಭಾರತ

    ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ನೆನಪಿನಾರ್ಥವಾಗಿ ಗ್ರಾಮೀಣ ಭಾಗದ 75 ಸರ್ಕಾರಿ ಶಾಲೆಗಳ 750 ವಿದ್ಯಾರ್ಥಿನಿಯರು ಸೇರಿ 8 ಕೆಜಿ ತೂಕದ ಆಜಾದಿ ಸ್ಯಾಟ್ ಉಪಗ್ರಹವನ್ನು ಹೊತ್ತ ಎಸ್‌ಎಸ್‌ಎಲ್‌ವಿ ಇಂದು ಬೆಳಗ್ಗೆ 9:18ರ ವೇಳೆಗೆ ಉಡಾವಣೆಗೊಂಡಿತ್ತು.

    Live Tv
    [brid partner=56869869 player=32851 video=960834 autoplay=true]

  • ಅಮೃತ ಮಹೋತ್ಸವಕ್ಕೆ 750 ಗ್ರಾಮೀಣ ಹೆಣ್ಣುಮಕ್ಕಳೇ ತಯಾರಿಸಿದ ಆಜಾದಿ ಉಪಗ್ರಹ ಉಡಾವಣೆ – ಏನಿದರ ವಿಶೇಷತೆ?

    ಅಮೃತ ಮಹೋತ್ಸವಕ್ಕೆ 750 ಗ್ರಾಮೀಣ ಹೆಣ್ಣುಮಕ್ಕಳೇ ತಯಾರಿಸಿದ ಆಜಾದಿ ಉಪಗ್ರಹ ಉಡಾವಣೆ – ಏನಿದರ ವಿಶೇಷತೆ?

    ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಆ.7 ರಂದು ಗ್ರಾಮೀಣ ಶಾಲೆಯ 750 ಹೆಣ್ಣುಮಕ್ಕಳೇ ತಯಾರಿಸಿರುವ ಅತ್ಯಂತ ಚಿಕ್ಕ ಆಜಾದಿ ಉಪಗ್ರಹಗಳನ್ನು `ಸ್ಮಾಲ್ ಸ್ಯಾಟಲೈಟ್ ಲಾಂಚ್ ವೆಹಿಕಲ್’ (SSLV) ವಾಹಕದ ಮೂಲಕ ಹಾರಿಬಿಡುತ್ತಿದೆ.

    ಭಾರತ 75ನೇ ಅಮೃತ ಮಹೋತ್ಸವ ಆಚರಿಸುತ್ತಿರುವ ನೆನಪಿನಾರ್ಥವಾಗಿ ಗ್ರಾಮೀಣ ಭಾಗದ 75 ಸರ್ಕಾರಿ ಶಾಲೆಗಳ 750 ವಿದ್ಯಾರ್ಥಿನಿಯರು ಸೇರಿ ತಯಾರಿಸಿರುವ 8 ಕೇಜಿ ತೂಕದ `ಆಜಾದಿ ಸ್ಯಾಟ್’ ಉಪಗ್ರಹವನ್ನು ಕಕ್ಷೆಗೆ ಕೊಂಡೊಯ್ಯಲಿದೆ. ಈ ವಾಹಕವು ತ್ರಿವರ್ಣ ಧ್ವಜವನ್ನೂ ನಭಕ್ಕೆ ಹೊತ್ತೊಯ್ಯಲಿದೆ. ಈ ಹೊಸ ಪ್ರಯತ್ನದ ಮೂಲಕ ವಿಶ್ವದ ಚಿಕ್ಕ ರಾಕೆಟ್‌ಗಳ ಮಾರುಕಟ್ಟೆಗೆ ಅಡಿ ಇಡಲು ಇಸ್ರೋ ಸಜ್ಜಾಗಿದೆ. ಇದು ಎಸ್‌ಎಸ್‌ಎಲ್‌ವಿಯ ಮೊದಲ ಉಡಾವಣೆಯಾಗಿದ್ದು, 145 ಕೆಜಿ ತೂಕದ ಭೂ ಪರಿವೀಕ್ಷಣಾ ಉಪಗ್ರಹ ಹಾಗೂ `ಆಜಾದಿ ಸ್ಯಾಟ್’ಗಳನ್ನು ಹೊತ್ತೊಯ್ಯಲಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಪಕ್ಷ ಗೆದ್ದ ಬಳಿಕವೇ ಮುಖ್ಯಮಂತ್ರಿ ವಿಚಾರ – ಮುಂದಿನ ಸಿಎಂ ಚರ್ಚೆಗೆ ರಾಹುಲ್ ಗಾಂಧಿ ಬ್ರೇಕ್

    ಅಲ್ಲದೇ ಎಸ್‌ಎಸ್‌ಎಲ್‌ವಿ ಕಡಿಮೆ ಸುತ್ತುವ ಅವಧಿಯನ್ನು ಹೊಂದಿದ್ದು, ಕಡಿಮೆ ಎತ್ತರದ ಕಕ್ಷೆಗಳಿಗೆ ಉಪಗ್ರಹವನ್ನು ಸೇರಿಸುವ ಬಾಹ್ಯಾಕಾಶ ಬೇಡಿಕೆಯನ್ನು ಯಶಸ್ವಿಯಾಗಿ ಪೂರೈಸಲಿದೆ ಎಂದು ಇಸ್ರೋ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ದರ್ಗಾಕ್ಕೆ ತೆರಳಿ ವಾಪಸ್ಸಾಗ್ತಿದ್ದಾಗ ಅಪಘಾತ- ಒಂದೇ ಕುಟುಂಬದ 6 ಮಂದಿ ದುರ್ಮರಣ

    ಆ.7ರಂದು ಮುಂಜಾನೆ 9.18ಕ್ಕೆ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಉಡ್ಡಯನ ಕೇಂದ್ರದಿಂದ ಈ ರಾಕೆಟ್ ಅನ್ನು ಉಡಾವಣೆ ಮಾಡಲಾಗುತ್ತದೆ. ಸುಮಾರು 13.2 ನಿಮಿಷಗಳ ಹಾರಾಟದ ಬಳಿಕ ಉಪಗ್ರಹಗಳನ್ನು ಈ ರಾಕೆಟ್ ಕಕ್ಷೆಗೆ ತಲುಪಿಸಲಿದೆ.

    ಆಜಾದಿ ಸ್ಯಾಟ್ ವಿಷೇಷತೆ: ಸ್ವಾತಂತ್ರ‍್ಯ ದೊರಕಿ 75 ವರ್ಷ ಆದ ಕಾರಣ ದೇಶ ಇಂದು ಸ್ವಾತಂತ್ರ‍್ಯದ ಅಮೃತ ಮಹೋತ್ಸವ ಆಚರಿಸುತ್ತಿದೆ. ಇದೇ ಸಂದರ್ಭದಲ್ಲಿ ವಿಶೇಷವಾಗಿ 75 ಪೇಲೋಡ್ ಇರುವ 75 ಗ್ರಾಮೀಣ ಸರ್ಕಾರಿ ಶಾಲೆಗಳ 750 ಮಕ್ಕಳು ಆಜಾದಿ ಸ್ಯಾಟ್ ಉಪಗ್ರಹ ಸಿದ್ಧಪಡಿಸಿದ್ದಾರೆ. ಇದು `ಆಜಾದಿ ಸ್ಯಾಟ್’ ವಿಶೇಷತೆ. ಈ ಮೂಲಕ ಬಾಹ್ಯಾಕಾಶ ಅಧ್ಯಯನದಲ್ಲಿ ಬಾಲಕಿಯರಿಗೂ ಪ್ರೇರಣೆ ನೀಡುವುದು ಇದರ ಹಿಂದಿನ ಉದ್ದೇಶ.

    ಎಸ್‌ಎಸ್‌ಎಲ್‌ವಿ ವಿಶೇಷತೆ: ಇಸ್ರೋದ ವರ್ಕ್ಹಾರ್ಸ್ ಎಂದೇ ಖ್ಯಾತಿ ಪಡೆದಿರುವ ಪಿಎಸ್‌ಎಲ್‌ವಿಗಿಂತ ಬರೋಬ್ಬರಿ 10 ಮೀ. ಚಿಕ್ಕದಾಗಿರುವ ಎಸ್‌ಎಸ್‌ಎಲ್‌ವಿ ಕೇವಲ 34 ಮೀ. ಉದ್ದ ಹಾಗೂ 2 ಮೀ. ವ್ಯಾಸವನ್ನು ಹೊಂದಿದೆ. ಈ ರಾಕೆಟ್ ಒಟ್ಟು 120 ಟನ್ ತೂಕವಿದ್ದು, ಸುಮಾರು 500 ಕೇಜಿ ಪೇಲೋಡ್ ಅನ್ನು 500 ಕಿ.ಮೀ. ದೂರದಲ್ಲಿರುವ ಕಕ್ಷೆಗೆ ತಲುಪಿಸುವ ಸಾಮರ್ಥ್ಯ ಹೊಂದಿದೆ.

    Live Tv
    [brid partner=56869869 player=32851 video=960834 autoplay=true]