ಬೆಂಗಳೂರು: ಕುರುಬರನ್ನು (Kuruba Community) STಗೆ ಸೇರಿಸಿದರೆ ST ಮೀಸಲಾತಿ (Reservation) ಪ್ರಮಾಣ ಹೆಚ್ಚಾಗಬೇಕು. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು ಅಂತ ಮೊದಲ ಬಾರಿಗೆ ಕುರುಬ ಸಮುದಾಯವನ್ನು STಗೆ ಸೇರಿಸೋ ಬಗ್ಗೆ ಸಿಎಂ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯೆ ನೀಡಿದರು. ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಈ ಬಗ್ಗೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಾಜಿ ಸಂಸದ ಉಗ್ರಪ್ಪ ಮಾತಾನಾಡಿ ST ಸಮುದಾಯಕ್ಕೆ ಕುರುಬರನ್ನ ಸೇರಿಸಿ ನಮ್ಮ ತಟ್ಟೆಗೆ ಸಿದ್ದರಾಮಯ್ಯ ಕೈ ಹಾಕಬಾರದು. ಕುರುಬರನ್ನ STಗೆ ಸೇರಿಸಬೇಕಾದ್ರೆ ಮೀಸಲಾತಿ ಪ್ರಮಾಣ ಹೆಚ್ವಳ ಮಾಡಬೇಕು. ಇಲ್ಲದೆ ಹೋದ್ರೆ ಹೋರಾಟ ಮಾಡೋ ಎಚ್ಚರಿಕೆ ಕೊಟ್ಟರು. ಈ ವಿಚಾರಕ್ಕೆ ಸಿಎಂ ಉತ್ತರ ಕೊಟ್ಟಿದ್ದಾರೆ. ಇದನ್ನೂ ಓದಿ: ಜಾತಿಗಣತಿ ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ – ಎಲ್ಲಾ ಸರ್ಕಾರಿ ಶಾಲೆಗಳಿಗೆ ಅ.18 ರವರೆಗೆ ರಜೆ
ವೇದಿಕೆ ಮೇಲೆ ಮಾತನಾಡಿದ ಸಿಎಂ, ಕುರುಬರನ್ನು STಗೆ ಸೇರಿಸಿದರೆ ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಎನ್ನುವುದಕ್ಕೆ ನನ್ನ ಬೆಂಬಲ, ಸಹಮತವೂ ಇದೆ. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು. ಯಾರೂ ಯಾರ ಅವಕಾಶಗಳನ್ನೂ ಕಿತ್ತುಕೊಳ್ಳಬಾರದು ಎನ್ನುವುದು ನನ್ನ ಬದ್ಧತೆ ಎಂದು ಸ್ಪಷ್ಟಪಡಿಸಿದರು. ಕುರುಬರನ್ನು STಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದು ಬೊಮ್ಮಾಯಿ ಸರ್ಕಾರ. ಆ ಶಿಫಾರಸ್ಸಿನ ಬಗ್ಗೆ ಕೆಲವು ಸ್ಪಷ್ಟನೆಗಳನ್ನು ಕೇಂದ್ರ ಕೇಳಿದೆ. ಅದಷ್ಟೇ ನಮ್ಮೆದುರಿಗಿದೆ ಎಂದು ಅವರು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಹಾಸನಾಂಬಾ ಉತ್ಸವ ವಿಐಪಿ ಸಂಪ್ರದಾಯಕ್ಕೆ ಬ್ರೇಕ್, ಜನಸ್ನೇಹಿ ಉತ್ಸವಕ್ಕೆ ಅಂಕಿತ: ಕೃಷ್ಣ ಬೈರೇಗೌಡ
ಬಳ್ಳಾರಿ: ಕುರುಬ ಸಮುದಾಯವನ್ನು (Kuruba Community) ಎಸ್‌ಟಿ ಪಟ್ಟಿಗೆ (ST List) ಸೇರ್ಪಡೆ ಮಾಡಲು ಮುಂದಾಗುತ್ತಿರುವ ಸಿಎಂ ಸಿದ್ದರಾಮಯ್ಯನವರ (Siddaramaiah) ವಿರುದ್ಧ ಅಖಂಡ ಕರ್ನಾಟಕ ವಾಲ್ಮೀಕಿ ನಾಯಕ ಒಕ್ಕೂಟ ಅಕ್ರೋಶ ಹೊರಹಾಕಿದೆ.
ಅಖಂಡ ಕರ್ನಾಟಕ ವಾಲ್ಮೀಕಿ ನಾಯಕರ ಒಕ್ಕೂಟ ಇಂದು ಸಭೆ ನಡೆಸಿ ಕುರುಬ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರ್ಪಡೆ ಮಾಡುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸಿತು.
ಸುದ್ದಿಗೋಷ್ಠಿ ನಡೆಸಿ ಅಧ್ಯಕ್ಷ ತಿಮ್ಮಪ್ಪ ಮಾತನಾಡಿ, ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಎಸ್‌ಟಿ ನಾಯಕರನ್ನು ತುಳಿಯುವ ಕಾರ್ಯ ಮಾಡುತ್ತಿದ್ದಾರೆ. ರಾಜಣ್ಣ, ನಾಗೇಂದ್ರ ಅವರನ್ನು ಸಿದ್ದರಾಮಯ್ಯ ಬಲಿಪಶು ಮಾಡಿದ್ದಾರೆ ಎಂದು ಸಿಟ್ಟು ಹೊರಹಾಕಿದರು.
ಬುಡಕಟ್ಟು ಸಮಾಜದವರು ಎಸ್‌ಟಿಗೆ ಸೇರಲು ನಮ್ಮ ವಿರೋಧ ಇಲ್ಲ. ಆದರೆ ಸಿದ್ದರಾಮಯ್ಯ ವಾಲ್ಮೀಕಿ ಸಮಾಜವನ್ನು ತುಳಿಯುತ್ತಿದ್ದಾರೆ. ವಾಲ್ಮೀಕಿ ಸಮಾಜ ನಶಿಸಿ ಹೋಗಬೇಕು, ಇವರನ್ನ ಜೀವಂತವಾಗಿ ತುಳಿಯಬೇಕು ಎಂಬ ಕಾರಣಕ್ಕೆ ಕುರುಬ ಸಮಾಜವನ್ನು ಎಸ್‌ಟಿಗೆ ಸೇರಿಸಲು ಹುನ್ನಾರ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
ಸಿದ್ದರಾಮಯ್ಯನವರೇ ಶೇ.50 ಮೀಸಲಾತಿ ನಮಗೆ ಕೊಟ್ಟು ಎಲ್ಲಾ ಸಮಾಜವನ್ನೂ ಸೇರಿಸಿಬಿಡಿ. ಬಳಿಕ ಒಳ ಮೀಸಲಾತಿ ವಾಲ್ಮಿಕಿಗೆ ಕೊಡಿ ಆಗ ನಮ್ಮವಿರೋಧ ಇರಲ್ಲ. ಕುರುಬ ಸಮಾಜದವರು ಶೈಕ್ಷಣಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಮುಂದುವರೆದಿದ್ದಾರೆ. ಕೆಲ ವರ್ಷಗಳಿಂದ ನಮ್ಮ ಸಮಾಜ ಮುಂದೆ ಬರುತ್ತಿದೆ ಅಷ್ಟೇ. ಆದರೆ ಇದನ್ನು ಸಹಿಸದ ಸಿದ್ದರಾಮಯ್ಯ ನಮ್ಮ ಸಮಾಜವನ್ನು ತುಳಿಯಲು ಮುಂದಾಗುತ್ತಿದ್ದಾರೆ. ವಾಲ್ಮೀಕಿ ಸಮುದಾಯದ ಶಾಸಕರು, ಸಚಿವರು, ಸಂಸದರು, ಮಾಜಿ ಶಾಸಕರು ಸೇರಿ ಎಲ್ಲರೂ ಸರ್ಕಾರದ ಈ ನಿರ್ಧಾರವನ್ನು ವಿರೋಧ ಮಾಡಬೇಕು ಎಂದು ತಿಮ್ಮಪ್ಪ ಒತ್ತಾಯಿಸಿದರು.
ಬೆಂಗಳೂರು: ಕುರುಬ ಸಮುದಾಯವನ್ನು (Kuruba Community) ಎಸ್‌ಟಿ ಪಟ್ಟಿಗೆ (ST List) ಸೇರಿಸುವ ವಿಚಾರ ಜಾತಿ ಜಟಾಪಟಿಗೆ ವೇದಿಕೆ ಆಗಿದೆ. ಎಸ್‌ಟಿಗೆ ಸೇರ್ಪಡೆ ಮಾಡುವ ಅಂತಿಮ ತೀರ್ಮಾನಕ್ಕೂ ಮುನ್ನವೇ ವಾಲ್ಮೀಕಿ ಸಮುದಾಯ (Valmiki Community) ಮಹತ್ವದ ಸಭೆ ಕರೆದಿದೆ.
ಸೆಪ್ಟಂಬರ್ 18ರಂದು ಹರಿಹರ ವಾಲ್ಮೀಕಿ ಗುರುಪೀಠದಲ್ಲಿ ಸಭೆ ಕರೆಯಲಾಗಿದ್ದು, ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ. ಮೂರು ಪ್ರಮುಖ ವಿಚಾರಗಳ ಕುರಿತು ಚರ್ಚಿಸಲು ಸಭೆ ಕರೆಯಲಾಗಿದ್ದು, ಸಭೆಗೆ ವಾಲ್ಮೀಕಿ ಸಮುದಾಯದ ಸಚಿವರು, ಶಾಸಕರು, ಮಾಜಿ ಶಾಸಕರು, ಎಂಎಲ್‌ಸಿ, ಮಾಜಿ ಎಂಎಲ್‌ಸಿ, ಧರ್ಮದರ್ಶಿಗಳು, ಜಿಲ್ಲಾಧ್ಯಕ್ಷರು, ತಾಲೂಕು ಅಧ್ಯಕ್ಷರಿಗೆ ಸಭೆಗೆ ಆಹ್ವಾನಿಸಲಾಗಿದೆ. ಇದನ್ನೂಓದಿ: ಈ ಸರ್ಕಾರ 47 ಹೊಸ ಜಾತಿಗಳನ್ನು ಸೃಷ್ಟಿ ಮಾಡಿದೆ: ಸುನಿಲ್ ಕುಮಾರ್ ಕಿಡಿ
ಸಭೆಯ ಅಜೆಂಡಾ ಏನು?
ವಾಲ್ಮೀಕಿ ನಾಯಕ ಜಾತಿಗೆ ಇತರೆ ಮೇಲ್ವರ್ಗದ ಜಾತಿಗಳನ್ನು ಸೇರ್ಪಡೆ ಮಾಡುತ್ತಿರುವ ಸರ್ಕಾರದ ನಡೆ ಬಗ್ಗೆ ತೀರ್ಮಾನ.
ನಾಯಕ ತಳವಾರ ಹೆಸರಿನಲ್ಲಿ ಇತರೆ ಜಾತಿಯ ತಳವಾರರು ತೆಗೆದುಕೊಳ್ಳುತ್ತಿರುವ ನಕಲಿ ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವುದನ್ನು ತಡೆಯಲು ಸರ್ಕಾರಕ್ಕೆ ಒತ್ತಾಯ.
ರಾಜ್ಯ ಸರ್ಕಾರ ಜಾತಿ ಗಣತಿ ಪ್ರಕ್ರಿಯೆಗೆ ಚಾಲನೆ ನೀಡಿದ್ದು ಜಾತಿ ಕಾಲಂ ನಲ್ಲಿ ಜಾತಿ ಹೆಸರನ್ನು ನಮೂದಿಸುವ ಕುರಿತು ಚರ್ಚೆ.
ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಸುಳ್ಳು ಆಪಾದನೆಗಳನ್ನು ಮಾಡುತ್ತಿದ್ದಾರೆ. ಪರಿಶಿಷ್ಟ ಪಂಗಡಗಳ (ST) ಸಮುದಾಯ ಸಿಎಂ ಸಿದ್ದರಾಮಯ್ಯ ಪರ ನಿಲ್ಲಬೇಕು ಎಂದು ಸಚಿವ ಕೆಎನ್ ರಾಜಣ್ಣ (KN Rajanna) ಸಮುದಾಯದ ಜನರಿಗೆ ಕರೆ ನೀಡಿದರು.
ವಿಧಾನಸೌಧದಲ್ಲಿ ನಡೆದ ವಾಲ್ಮೀಕಿ ಜಯಂತಿ (Valmiki Jayanthi) ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದರು. 2014-15ರಲ್ಲಿ ಆಂಧ್ರಪ್ರದೇಶ ಹೊರತುಪಡಿಸಿ ನಮ್ಮ ರಾಜ್ಯದಲ್ಲಿ ಮಾತ್ರ SCSP-TSP ಕಾಯ್ದೆ ಜಾರಿ ಮಾಡಿದ ಕೀರ್ತಿ ಸಿದ್ದರಾಮಯ್ಯ ಮತ್ತು ಆಂಜನೇಯಗೆ ಸಲ್ಲಬೇಕು. ಅಲ್ಲಿಂದ ಇಲ್ಲಿಯವರೆಗೆ 86 ಸಾವಿರ ಕೋಟಿ ಹಣ ಈ ಸಮುದಾಯದ ಜನರಿಗೆ ಅಭಿವೃದ್ಧಿಗೆ ಮೀಸಲು ಇರಿಸಲಾಗಿದೆ. ನಾವು ಸಿದ್ದರಾಮಯ್ಯಗೆ ಋಣಿಯಾಗಿ ಇರಬೇಕು. ಅವರಿಗೆ ಬೆಂಬಲ ಕೊಡಬೇಕು ಎಂದರು. ಇದನ್ನೂ ಓದಿ: ಹಾಲಿನ ದರ ಏರಿಕೆ ಆಗುತ್ತಾ? – ಸಚಿವ ಕೆ.ವೆಂಕಟೇಶ್ ಹೇಳಿದ್ದೇನು?
ಸಿದ್ದರಾಮಯ್ಯ ಮೇಲೆ ಸುಳ್ಳು ಆಪಾದನೆ ತಂದಿದ್ದಾರೆ. ನಾವು ಸಿದ್ದರಾಮಯ್ಯ ಪರ ನಿಲ್ಲಬೇಕು. ಬಡವರ ಪರ ಕೆಲಸ ಮಾಡೋ ನಾಯಕನಿಗೆ ಅಪವಾದ ತರುವ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಮೇಲೆ ಅಪವಾದ ತರುವವರಿಗೆ ಮುಂದಿನ ದಿನಗಳಲ್ಲಿ ನಾವು ಪಾಠ ಕಲಿಸಬೇಕು ಎಂದು ಕರೆ ಕೊಟ್ಟರು. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್- ಎ13 ಆರೋಪಿ ದೀಪಕ್ ರಿಲೀಸ್
ಪರಿಶಿಷ್ಟ ಪಂಗಡದ ಸಮುದಾಯದವರು ವಿದ್ಯಾವಂತರಾಗಬೇಕು. ಈ ಮೂಲಕ ರಾಜಕೀಯ ಪ್ರಾತಿನಿಧ್ಯ ಪಡೆಯಲು ಮುಂದಾಗಬೇಕು. ಪಟ್ಟಭದ್ರ ಹಿತಾಸಕ್ತಿಗಳ ಪಿತೂರಿ ಹಿಮ್ಮೆಟ್ಟಿಸುವ ಕೆಲಸ ನಾವು ಮಾಡಬೇಕು ಎಂದು ಹೇಳಿದರು. ಇದನ್ನೂ ಓದಿ: ದೀಪಾವಳಿಗೆ ರಾಜ್ಯದಲ್ಲಿ ವಿಶೇಷ ರೈಲು ಸಂಚಾರ: ಸೋಮಣ್ಣ
ನವದೆಹಲಿ: ಕಾಡುಗೊಲ್ಲ ಸಮುದಾಯವನ್ನು (Kadugolla Community) ಪರಿಶಿಷ್ಟ ಪಂಗಡಕ್ಕೆ (ST) ಸೇರ್ಪಡೆ ಮಾಡುವ ಕುರಿತು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ (TB Jayachandra) ಅವರು ಕೇಂದ್ರ ಸಚಿವ ವಿ ಸೋಮಣ್ಣ (V Somanna) ಅವರನ್ನು ದೆಹಲಿಯಲ್ಲಿ (New Delhi) ಭೇಟಿ ಮಾಡಿ ಚರ್ಚೆ ಮಾಡಿದರು.
ಕರ್ನಾಟಕ ಭವನದಲ್ಲಿ ಭೇಟಿ ಮಾಡಿದ ಅವರು, ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ತ್ವರಿತವಾಗಿ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲು ಸಹಾಯ ಮಾಡುವಂತೆ ಟಿ.ಬಿ ಜಯಚಂದ್ರ ಅವರು ಕೇಂದ್ರ ಸಚಿವ ವಿ ಸೋಮಣ್ಣ ಅವರಲ್ಲಿ ಮನವಿ ಮಾಡಿದರು. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದಿದ್ದು ಸರಿಯಾಗಿದೆ: ಮಧು ಬಂಗಾರಪ್ಪ
ತುಮಕೂರು, ಚಿತ್ರದುರ್ಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಕಾಡುಗೊಲ್ಲ ಸಮುದಾಯದ ಜನತೆ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವುದರಿಂದ ಆ ಸಮುದಾಯಕ್ಕೆ ಉದ್ಯೋಗ, ಶಿಕ್ಷಣ ಹಾಗೂ ಇತರ ಕ್ಷೇತ್ರಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಹೆಚ್ಚಿನ ಸವಲತ್ತುಗಳು ದೊರೆಯಲಿವೆ ಎಂದು ಜಯಚಂದ್ರ ಅವರು ಇದೇ ವೇಳೆ ಕೇಂದ್ರ ಸಚಿವರ ಗಮನಕ್ಕೆ ತಂದರು. ಇದನ್ನೂ ಓದಿ: ದರ್ಶನ್ ಇಂದೇ ಹೈಕೋರ್ಟ್ ಮೊರೆ ಹೋಗ್ತಾರಾ? – ಅರ್ಜಿ ಸಲ್ಲಿಸಿದ್ರೆ ಮುಂದೇನು?
ನವದೆಹಲಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ನೀಡಲಾಗಿರುವ ಮೀಸಲಾತಿ (SC, ST for reservation) ಒಳಗಡೆಯೇ ಮೀಸಲಾತಿ ನೀಡಲು ಸುಪ್ರೀಂ ಕೋರ್ಟ್ (Supreme Court ) ಒಪ್ಪಿಗೆ ನೀಡಿದೆ. ಒಳ ಮೀಸಲಾತಿ (Sub-Classification) ಕಾನೂನು ಬದ್ಧ ಎಂದು ಹೇಳುವ ಮೂಲಕ ಐತಿಹಾಸಿಕ ತೀರ್ಪು ಪ್ರಕಟಿಸಿದೆ.
ಸರ್ಕಾರಿ ಉದ್ಯೋಗಗಳಲ್ಲಿ ಯಾವ ಜಾತಿ, ಪಂಗಡಗಳಿಗೆ ಒಳ ಮೀಸಲಾತಿ ನೀಡಬೇಕೆಂಬ ಅಧಿಕಾರವನ್ನು ಕೋರ್ಟ್ ರಾಜ್ಯಗಳ ವಿವೇಚನೆಗೆ ನೀಡಿದೆ.
ನ್ಯಾಯಮೂರ್ತಿ ಬೇಲಾ ತ್ರಿವೇದಿ ಭಿನ್ನ ತೀರ್ಪು ನೀಡಿ ಅಂತಹ ಉಪ-ವರ್ಗೀಕರಣವನ್ನು ಅನುಮತಿಸಲಾಗುವುದಿಲ್ಲ ಎಂದು ತೀರ್ಪು ಪ್ರಕಟಿಸಿದರು.
ಒಳ ಮೀಸಲಾತಿ ಸಂಬಂಧ ಪಂಜಾಬ್ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ (ಸೇವೆಗಳಲ್ಲಿ ಮೀಸಲಾತಿ) ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಈ ಮಹತ್ವದ ಆದೇಶ ಪ್ರಕಟಿಸಿತು. ಪಂಜಾಬ್, ತಮಿಳುನಾಡು ಮತ್ತು ಇತರ ರಾಜ್ಯಗಳಲ್ಲಿ ಅಂತಹ ಉಪ-ವರ್ಗೀಕರಣವನ್ನು ಒದಗಿಸುವ ಕಾನೂನುಗಳ ಸಿಂಧುತ್ವವನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಇದನ್ನೂ ಓದಿ: ಇಂದಿನಿಂದ 130 Kmph ವೇಗಕ್ಕಿಂತ ಜಾಸ್ತಿ ಸ್ಪೀಡ್ ಹೋದರೆ ದಂಡದ ಜೊತೆ ಜೈಲು!
ಪಂಜಾಬ್ ಸರ್ಕಾರ (Government of Punjab) ರಚನೆ ಮಾಡಿದ್ದ ಕಾಯ್ದೆಯನ್ನು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ರದ್ದು ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಪಂಜಾಬ್ ಸರ್ಕಾರ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಿತ್ತು.
ಕೋರ್ಟ್ ಆದೇಶದಲ್ಲಿ ಏನಿದೆ? ಎಸ್‌ಸಿ/ಎಸ್‌ಟಿ ಜನರು ಎದುರಿಸುತ್ತಿರುವ ವ್ಯವಸ್ಥಿತ ತಾರತಮ್ಯದಿಂದಾಗಿ ಸಮಾಜದಲ್ಲಿ ಮೇಲಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ಸಂವಿಧಾನದ 14ನೇ ವಿಧಿ ಜಾತಿಯ ಉಪ-ವರ್ಗೀಕರಣವನ್ನು ಅನುಮತಿಸುತ್ತದೆ. ಮೀಸಲಾತಿ ಪಟ್ಟಿಗೆ ಸಮುದಾಯಗಳ ಸೇರ್ಪಡೆ ಅಥವಾ ತೆಗೆಯಲು ತುಷ್ಟೀಕರಣ ರಾಜಕೀಯ ಮಾಡಬಾರದು.
ಪರಿಶಿಷ್ಟ ಜಾತಿಗಳು ಏಕರೂಪದ ಗುಂಪಲ್ಲ. ಎಸ್‌ಸಿಗಳಲ್ಲಿ ಹೆಚ್ಚು ತಾರತಮ್ಯವನ್ನು ಅನುಭವಿಸಿದವರಿಗೆ 15% ಮೀಸಲಾತಿಯಲ್ಲಿ ಹೆಚ್ಚಿನ ಅವಕಾಶ ನೀಡಲು ಸರ್ಕಾರಗಳು ಅವರನ್ನು ಉಪವರ್ಗೀಕರಿಸಬಹುದು.
ಎಸ್‌ಸಿಗಳಲ್ಲಿ ಜಾತಿಗಳ ಉಪ-ವರ್ಗೀಕರಣವು ಅವರ ತಾರತಮ್ಯದ ಮಟ್ಟವನ್ನು ಆಧರಿಸಿರಬೇಕು. ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಅವರ ಪ್ರಾತಿನಿಧ್ಯದ ಕುರಿತು ಪ್ರಾಯೋಗಿಕ ಡೇಟಾವನ್ನು ಸಂಗ್ರಹಿಸುವ ಮೂಲಕ ರಾಜ್ಯಗಳು ಮಾಡಬಹುದು.
– ಬ್ಯಾಂಕ್ ವಿರುದ್ಧ ದೂರು ನೀಡಿದ ಎಂಡಿ ರಾಜಶೇಖರ್ – ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಮೇಲ್, ಮೆಸೇಜ್ ಬಂದಿಲ್ಲ – ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಅಧೀಕ್ಷಕ ಚಂದ್ರಶೇಖರನ್ (Chandrashekaran) ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ (Union Bank of India) ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ.
ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಅವರು ಯೂನಿಯನ್ ಬ್ಯಾಂಕ್ ನ ಎಂಡಿ ಹಾಗೂ ಸಿಇಓ ಮನಿಮೇಖಲೈ, ಕಾರ್ಯನಿರ್ವಾಹಕ ನಿರ್ದೇಶಕ ನಿತೇಶ್ ರಂಜನ್, ರಾಮಸುಬ್ರಮಣ್ಯಂ, ಸಂಜಯ್ ರುದ್ರ, ಪಂಕಜ್ ದ್ವಿವೇದಿ, ಸುಶಿಚಿತ ರಾವ್ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ದೂರಿನ ಆಧಾರದಲ್ಲಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ವಿರುದ್ಧ ಐಪಿಸಿ ಸೆಕ್ಷನ್ 149 (ಒಂದೇ ಉದ್ದೇಶವನ್ನು ಇಟ್ಟುಕೊಂಡು ಗುಂಪಿನಲ್ಲಿರುವ ಪ್ರತಿಯೊಬ್ಬ ಸದಸ್ಯ ಕೃತ್ಯ ಎಸಗಿರುವುದು), 409( ಸರ್ಕಾರಿ ನೌಕರ ಅಥವಾ ಬ್ಯಾಂಕರ್‌ನಿಂದ ನಂಬಿಕೆ ದ್ರೋಹ), 420 (ವಂಚನೆ), 467 (ಬೆಲೆಯುಳ್ಳ ಭದ್ರತಾ ಪತ್ರ ಇತ್ಯಾದಿಗಳ ಸುಳ್ಳು ಸ್ಪಷ್ಟನೆ), 468 (ವಂಚಿಸುವ ಉದ್ದೇಶದಿಂದಲೇ ಸುಳ್ಳು ಸ್ಪಷ್ಟನೆ), 471(ಸುಳ್ಳು ಸ್ಪಷ್ಟನೆಯ ದಾಖಲೆಯನ್ನು ನೈಜವೆಂದು ಬಳಸುವುದು) ಅಡಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಣ ಐಟಿ ಕಂಪನಿ ಖಾತೆಗೆ ಅಕ್ರಮ ವರ್ಗಾವಣೆ!
ದೂರಿನಲ್ಲಿ ಏನಿದೆ?
ನಿಗಮದ ಹೆಸರಲ್ಲಿ ವಸಂತನಗರದಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್‌ನಲ್ಲಿ ಖಾತೆ ಇತ್ತು. ಫೆ.19, 2024 ರಂದು ಎಂಜಿ ರಸ್ತೆಯಲ್ಲಿರುವ ಬ್ರ್ಯಾಂಚ್ ಖಾತೆಯನ್ನು ವರ್ಗಾವಣೆ ಮಾಡಲಾಗಿರುತ್ತದೆ.
ಫೆ.26 ರಂದು ಬ್ಯಾಂಕಿನವರು ನಿಗಮದ ಎಂಡಿ ಹಾಗೂ ಲೆಕ್ಕಾಧಿಕಾರಿಗಳ ಸಹಿಯನ್ನು ಪಡೆದುಕೊಂಡಿರುತ್ತಾರೆ. ನಂತರ ಈ ಖಾತೆಗೆ ನಿಗಮ ಮಾರ್ಚ್ 3 ರಂದು 25 ಕೋಟಿ ರೂ., ಮಾರ್ಚ್ 6 ರಂದು 44 ಕೋಟಿ ರೂ., ಮಾರ್ಚ್ 21 ರಂದು 33 ಕೋಟಿ ರೂ., ಮಾರ್ಚ್ 22 ರಂದು 33 ಕೋಟಿ ರೂ., ಮಾರ್ಚ್ 21 ರಂದು 50 ಕೋಟಿ ರೂ. ಹಣವನ್ನು ವರ್ಗಾವಣೆ ಮಾಡಿತ್ತು. ಒಟ್ಟು 187.33 ಕೋಟಿ ರೂ. ಹಣ ವರ್ಗಾವಣೆಯಾಗಿತ್ತು
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇದ್ದ ಹಿನ್ನೆಲೆಯಲ್ಲಿ ಬ್ಯಾಂಕ್ ಜೊತೆ ನಿಗಮದಿಂದ ಯಾವುದೇ ಪತ್ರ ವ್ಯವಹಾರ ನಡೆಸಿರುವುದಿಲ್ಲ. ಹೀಗಿದ್ದರೂ ನಕಲಿ ದಾಖಲೆ ಸೃಷ್ಟಿಸಿ 94,73,08,500 ರೂ. ಹಣವನ್ನು ವರ್ಗಾವಣೆ ಮಾಡಲಾಗಿದೆ. ಇಷ್ಟೊಂದು ಹಣ ವರ್ಗಾವಣೆಯಾದರೂ ನಿಗಮದ ನೊಂದಾಯಿಸಿದ ಇಮೇಲ್, ಮೊಬೈಲಿಗೆ ಯಾವುದೇ ಮಸೇಜ್ ಬಂದಿರುವುದಿಲ್ಲ.
ಚಂದ್ರಶೇಖರನ್ ಅವರು ಬ್ಯಾಂಕ್ ದೃಢೀಕರಣ ಚೆಕ್, ಆರ್‌ಟಿಜಿಎಸ್, ಬ್ಯಾಂಕ್ ಹೇಳಿಕೆಗಳನ್ನು ಸಮನ್ವಯಗೊಳಿಸುವ ಕೆಲಸ ಮಾಡುತ್ತಿದ್ದರು. ಈ ರೀತಿ ಹಣ ವರ್ಗಾವಣೆಯಾದ ವಿಚಾರ ಗೊತ್ತಾದ ಬಳಿಕ ನಿಗಮ ಪ್ರಶ್ನೆ ಮಾಡಿದ್ದಕ್ಕೆ ಬ್ಯಾಂಕ್ ತಕ್ಷಣ 5 ಕೋಟಿ ರೂ. ಹಣವನ್ನು ಖಾತೆಗೆ ಹಾಕಿದೆ. ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಗಳನ್ನು ನೀಡುವಂತೆ ಕೋರಿದ್ದು ಇಲ್ಲಿಯವರೆಗೆ ಬ್ಯಾಂಕ್ ಯಾವುದೇ ಸಿಸಿಟಿವಿ ದೃಶ್ಯ ನೀಡಿಲ್ಲ.
ಬ್ಯಾಂಕ್‌ನ ಲೋಪದಿಂದಲೇ ಈ ಅಕ್ರಮ ವ್ಯವಹಾರ ನಡೆದಿದೆ. ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ನಡೆದ ಈ ಲೋಪಗಳಿಗೆ ಮುನ್ನೆಚ್ಚರಿಕೆ ತಗೆದುಕೊಳ್ಳುವಲ್ಲಿ ಬ್ಯಾಂಕ್ ಆಫ್ ಇಂಡಿಯಾದ ಉನ್ನತ ಆಡಳಿತವೇ ಜವಾಬ್ದಾರರಾಗಿದ್ದಾರೆ. ಯಾವುದೇ ಪರಿಶೀಲನೆ ನಡೆಸದೇ ಬ್ಯಾಂಕ್‌ನಿಂದ ಓವರ್ ಡ್ರಾಫ್ಟ್ ಸೌಲಭ್ಯವನ್ನು ಸೃಷ್ಟಿಸಿ ಹಾಗೂ ನಕಲಿ ದಾಖಲೆ ಸೃಷ್ಟಿಸಿ ಅಧಿಕೃತವಾಗಿ ಬೇರೆ ಬೇರೆ ಖಾತೆಗಳಿಗೆ ಹಣ ವರ್ಗಾವಣೆ ಮಾಡಿ ನಿಗಮಕ್ಕೆ ಭಾರೀ ಆರ್ಥಿಕ ನಷ್ಟ ಉಂಟಾಗಿದೆ. ಈ ಕೃತ್ಯಕ್ಕೆ ಕಾರಣದವರ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡುತ್ತಿದ್ದೇನೆ.
– ಪ್ರಾಥಮಿಕ ತನಿಖೆಯಲ್ಲಿ 87 ಕೋಟಿ ರೂ. ವರ್ಗಾವಣೆ – ಅಕೌಂಟೆಂಟ್ ಪರುಶುರಾಮ್ ಕಚೇರಿಗೆ ಬೀಗ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ಸಾಫ್ಟ್‌ವೇರ್ ಕಂಪನಿಯೊಂದರ (Information Technology) ಬ್ಯಾಂಕ್ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ ಎನ್ನಲಾಗುತ್ತಿದೆ.
ಯೂನಿಯನ್ ಬ್ಯಾಂಕ್‌ನ ಎಂ.ಜಿ. ರಸ್ತೆಯ ಶಾಖೆಯಲ್ಲಿ ನಿಗಮದ ಬ್ಯಾಂಕ್ ಖಾತೆ ಇದೆ. ಆ ಖಾತೆಯಲ್ಲಿ ನಿಗಮವು 187 ಕೋಟಿ ರೂ. ಹಣವನ್ನು ಇರಿಸಿತ್ತು. ಮಾರ್ಚ್ 1 ರಿಂದ ಮಾರ್ಚ್ 31ರ ಅವಧಿಯಲ್ಲಿ 87 ಕೋಟಿ ಮೊತ್ತವನ್ನು ಯೂನಿಯನ್ ಬ್ಯಾಂಕ್‌ನ ಬೇರೆ ಶಾಖೆಗಳ ಕೆಲವು ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ. ಇಲ್ಲಿಂದ ಐಟಿ ಕಂಪನಿಯೊಂದರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ ಎಂಬ ಮಾಹಿತಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಅವರಿಗೆ ನಿಗಮದ ಅಧಿಕಾರಿಗಳು ಸಲ್ಲಿಸಿರುವ ಪ್ರಾಥಮಿಕ ವರದಿಯಲ್ಲಿದೆ ಇದೆ ಎನ್ನಲಾಗುತ್ತಿದೆ.
ಈ ಪ್ರಕರಣವನ್ನು ಈಗ ಸಿಐಡಿಗೆ ನೀಡಿರುವುದರಿಂದ ತನಿಖೆಯಲ್ಲಿ ಸಂಪೂರ್ಣ ಅಕ್ರಮ ಹಣ ವರ್ಗಾವಣೆಯ ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದೆ.
ಕಚೇರಿಗೆಬೀಗ:
ಅವ್ಯವಹಾರ ಬೆನ್ನಲ್ಲೇ ನಿಗಮದ ಎಲ್ಲಾ ಕಚೇರಿ ತೆರೆಯಲಾಗಿದ್ದು ಅಕೌಂಟೆಂಟ್ ಪರುಶುರಾಮ್ ಕಚೇರಿ ಬೀಗ ಹಾಕಲಾಗಿದೆ. ಕಳೆದ ಶುಕ್ರವಾರ ಲಾಕ್ ಆಗಿರುವ ಕಚೇರಿ ಇವತ್ತಿನವರೆಗೂ ಓಪನ್ ಆಗಿಲ್ಲ.
ಅಧೀಕ್ಷಕ ಚಂದ್ರಶೇಖರನ್ ಅವರು ತನ್ನ ಡೆತ್‌ನೋಟ್‌ನಲ್ಲಿ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ಜೆಜೆ ಮತ್ತು ಅಕೌಂಟೆಂಟ್ ಪರಶುರಾಮ್ ಹೆಸರು ಬರೆದಿದ್ದರು. ಪದ್ಮನಾಭ ಜೆಜೆ ಕಚೇರಿ ಓಪನ್ ಇದ್ದರೂ ಅವರು ಇನ್ನೂ ಕಚೇರಿಗೆ ಬಂದಿಲ್ಲ. ಚಂದ್ರಶೇಖರ್ ಮೃತಪಟ್ಟ ನಂತರ ಪರುಶುರಾಮ್ ಅವರು ಕಚೇರಿಗೆ ಬಂದೇ ಇಲ್ಲ.
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೇಲೆ ನಡೆಯುವ ಜಾತಿ ದೌರ್ಜನ್ಯ ಪ್ರಕರಣಗಳನ್ನು ಕಡಿಮೆ ಮಾಡುವ ಜೊತೆಗೆ ದಾಖಲಾದ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಪೊಲೀಸ್ ಇಲಾಖೆ, ಕಾನೂನು ಇಲಾಖೆ, ಸಮಾಜಕಲ್ಯಾಣ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಸೂಚನೆ ನೀಡಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಬಳಿಕ ಅಧಿಕಾರಿಗಳಿಗೆ ಸೂಚನೆ ನೀಡಿದರು. ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಜಾತಿ ದೌರ್ಜನ್ಯ ಪ್ರಕರಣಗಳಿಗೆ ಸೂಕ್ತ ನ್ಯಾಯ ಒದಗಿಸಲು ಸಾಧ್ಯ ಆಗುವುದಿಲ್ಲ ಎನ್ನುವ ಕಾರಣದಿಂದ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ, ನಾಗರಿಕ ಹಕ್ಕು ರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಸರ್ಕಾರ ಈ ಕಾಯ್ದೆಗೆ ಹೆಚ್ಚಿನ ಮಹತ್ವ ನೀಡಿ ಗಂಭೀರವಾಗಿ ಪರಿಗಣಿಸುತ್ತದೆ. ಸಂತ್ರಸ್ತರಿಗೆ ರಕ್ಷಣೆ ಸಿಗಬೇಕು. ಈ ಉದ್ದೇಶ ಸಫಲವಾಗಲು ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಪ್ರಾಸಿಕ್ಯೂಷನ್ ಇಲಾಖೆ, ಕಂದಾಯ ಇಲಾಖೆ ಸಮನ್ವಯದೊಂದಿಗೆ ಕೆಲಸ ಮಾಡಬೇಕು. ಸಮನ್ವಯ ಇದ್ದಾಗ ಮಾತ್ರ ವ್ಯವಸ್ಥಿತವಾಗಿ ಈ ವರ್ಗದ ಜನರಿಗೆ ನ್ಯಾಯ ಸಿಗಲು ಸಾಧ್ಯವಾಗುತ್ತದೆ ಎಂದರು.
ಪೊಲೀಸ್ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಎರಡು ತಿಂಗಳೊಳಗೆ ಚಾರ್ಜ್ ಶೀಟ್ ಹಾಕುವ ಬಗ್ಗೆ ಎಸ್‌ಪಿಗಳಿಗೆ, ಡಿಸಿಪಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಪೊಲೀಸರು ಜಾಗರೂಕತೆಯಿಂದ ತನಿಖೆ ಮಾಡಬೇಕು. ಇವುಗಳನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಶಿಕ್ಷೆ ಕೊಡಿಸಲು ಎಲ್ಲ ಪ್ರಯತ್ನ ಮಾಡಬೇಕು. ರಾಜ್ಯದಲ್ಲಿ ಶಿಕ್ಷೆ ಪ್ರಮಾಣ 3.44% ರಷ್ಟಿರುವುದು ನಾಚಿಕೆಯ ಸಂಗತಿ. ಇದನ್ನು ಇನ್ನಷ್ಟು ಹೆಚ್ಚಿಸುವಂತೆ ಸೂಚಿಸಿದರು.
ಪ್ರಜ್ಞಾವಂತ ಸಮಾಜವಿರುವ ನಮ್ಮ ರಾಜ್ಯದಲ್ಲಿ ಇಷ್ಟು ಕಡಿಮೆ ಇರುವುದು ತಲೆ ತಗ್ಗಿಸುವ ವಿಚಾರ. ತಹಸೀಲ್ದಾರರು, ಉಪವಿಭಾಗಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಇದರ ಪ್ರಗತಿ ಪರಿಶೀಲನೆ ಮಾಡಬೇಕು. ಪೊಲೀಸ್ ವರಿಷ್ಠಾಧಿಕಾರಿಗಳು ಈ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಿ, ಡಿಜಿಪಿ ಅವರಿಗೆ ವರದಿ ಕಳುಹಿಸಬೇಕು ಎಂದು ಖಡಕ್ ಸೂಚನೆ ನೀಡಿದರು.
ತಾಲೂಕು, ಜಿಲ್ಲಾ ಮಟ್ಟದ ಕೆಡಿಪಿ ಸಭೆಗಳಲ್ಲಿ ಈ ವಿಷಯದ ಕುರಿತು ಕಡ್ಡಾಯವಾಗಿ ಪ್ರಗತಿ ಪರಿಶೀಲನೆ ಆಗಬೇಕು. ಚಾರ್ಜ್ ಶೀಟ್ ಸಲ್ಲಿಕೆಯನ್ನು ಯಾವುದೇ ಕಾರಣಕ್ಕೆ ವಿಳಂಬ ಮಾಡಬಾರದು. ಸಾಕ್ಷ್ಯ ವಿಫಲ ಆಗದಂತೆ ಪೊಲೀಸರು ಹೆಚ್ಚಿನ ಗಮನ ಕೊಡಬೇಕು. ರಾಜಕಾರಣಿಗಳು ಈ ದೌರ್ಜನ್ಯ ಪ್ರಕರಣಗಳಲ್ಲಿ ಮಧ್ಯ ಪ್ರವೇಶಿಸದೆ ಪೊಲೀಸರಿಗೆ ಸಹಕಾರ ನೀಡಬೇಕು. ಪ್ರತಿ ಪ್ರಕರಣ ದಾಖಲಿಸುವಾಗ ಪೊಲೀಸರು ತಮ್ಮ ವಿವೇಚನೆಯನ್ನು ಬಳಸಬೇಕು. ಚಾರ್ಜ್ ಶೀಟ್ ಸಲ್ಲಿಕೆ ವಿಳಂಬವಾದರೆ ಆರೋಪಿಗಳು ಜಾಮೀನು ಪಡೆದು ಹೊರಬಂದು ಮತ್ತೊಮ್ಮೆ ಅಪರಾಧ ಎಸಗುವ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದರು.
ಮುಂದಿನ ಸಭೆಯಲ್ಲಿ ವಿಚಾರಣೆ ಬಾಕಿ ಇರುವ ಪ್ರಕರಣಗಳ ಅವಧಿ ಮತ್ತು ಇತರ ಮಾಹಿತಿಯನ್ನು ಒದಗಿಸಬೇಕು. ಹೆಚ್ಚು ಪ್ರಕರಣಗಳು ಬಾಕಿ ಇರುವಲ್ಲಿ ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸುವ ಬಗ್ಗೆ ಪರಿಶೀಲಿಸಲಾಗುವುದು. ಅನುಕಂಪ ಆಧಾರದ ಉದ್ಯೋಗ ನೀಡುವುದರಲ್ಲಿ 54 ಅರ್ಜಿಗಳು ಇತ್ಯರ್ಥಕ್ಕೆ ಬಾಕಿ ಇದೆ. ಬಹಳಷ್ಟು ಅರ್ಜಿಗಳು ತಿರಸ್ಕೃತಗೊಂಡಿವೆ. ಇದಕ್ಕೆ 2 ವರ್ಷದೊಳಗೆ ಅರ್ಜಿ ಸಲ್ಲಿಸಬೇಕೆಂಬ ಷರತ್ತಿನ ಬಗ್ಗೆ ಮುಖ್ಯ ಕಾರ್ಯದರ್ಶಿಗಳೊಂದಿಗೆ ಚರ್ಚಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ಭಾರತದ ಭವಿಷ್ಯ ಬದಲಾಯಿಸಿ ಅಂದ್ರೆ, ಹೆಸರು ಬದಲಾಯಿಸಲು ಬಿಜೆಪಿ ಹೊರಟಿದೆ – ಪ್ರಿಯಾಂಕ್ ಖರ್ಗೆ ಕಿಡಿ
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ @siddaramaiah ಅವರ ಮಾತುಗಳು.
ಕಳೆದ ಐದು ವರ್ಷಗಳಲ್ಲಿ ದಾಖಲಾದ 10,893 ಪ್ರಕರಣಗಳಲ್ಲಿ 1100 ಪ್ರಕರಣಗಳಲ್ಲಿ 120 ದಿನಗಳಲ್ಲಿಯೂ ಚಾರ್ಜ್ ಶೀಟ್ ಹಾಕಿಲ್ಲ. ಇದು ಪರಿಶಿಷ್ಟ ಜಾತಿ, ಪಂಗಡದವರ ಬಗ್ಗೆ ಅಧಿಕಾರಿಗಳ… pic.twitter.com/PAEO7RifYE
ಈ ಬಾರಿ ಆಯವ್ಯಯದಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯವನ್ನು ಬಲಪಡಿಸುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಗೃಹ ಸಚಿವರು ನನ್ನೊಂದಿಗೆ ಚರ್ಚಿಸಿದ್ದಾರೆ. ಇದನ್ನು ಸಚಿವ ಸಂಪುಟ ಸಭೆಗೆ ಮಂಡಿಸುವಂತೆ ಸಚಿವರಿಗೆ ಸೂಚಿಸಿದರು. ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಸಭೆ ಕರೆಯಲಾಗುವುದು. ಕಾನೂನು ಬಾಹಿರವಾಗಿ ನಡೆಯುವ ದೌರ್ಜನ್ಯಗಳನ್ನು ತಡೆಯಲು ನಮ್ಮ ಸರ್ಕಾರ ಬದ್ಧವಾಗಿದೆ. ನಿಯಮಕ್ಕೆ ತಿದ್ದುಪಡಿ ಮಾಡಿ ಈ ಸಮುದಾಯಗಳ ಎಲ್ಲ ಸಚಿವರು, ಸಂಸದರು, ಶಾಸಕರನ್ನು ಸಭೆಗೆ ಆಹ್ವಾನಿಸಲಾಗಿದೆ. ಈ ದೌರ್ಜನ್ಯ ತಡೆಯಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಅಧಿಕಾರಿಗಳು ತಮ್ಮ ಧೋರಣೆಯನ್ನು ಬದಲಿಸಿಕೊಂಡು ಕಾರ್ಯನಿರ್ವಹಿಸಬೇಕು. 6 ತಿಂಗಳಿಗೊಮ್ಮೆ ಈ ಸಭೆ ಕರೆಯುವಂತೆ ತಿಳಿಸಿದರು.
ಪ್ರಸಕ್ತ ಆಯವ್ಯಯದಲ್ಲಿ ಘೋಷಿಸಿದಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (CRE cell) ಬಲ ಪಡಿಸುವ ಕುರಿತು ವರದಿ ಸಿದ್ಧಪಡಿಸಲಾಗಿದ್ದು, ಕಡತವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸುವುದಾಗಿ ಸಮಾಜ ಕಲ್ಯಾಣ ಸಚಿವರು ಸಭೆಯಲ್ಲಿ ತಿಳಿಸಿದರು. ಕಳೆದ 5 ವರ್ಷಗಳಲ್ಲಿ 53 ಕೊಲೆ ಪ್ರಕರಣಗಳಲ್ಲಿಯೂ ಚಾರ್ಜ್ ಶೀಟ್ ಹಾಕದಿರುವ ಕುರಿತು ಆಕ್ಷೇಪಿಸಿದ ಮುಖ್ಯಮಂತ್ರಿಗಳು, ಅಂತಹ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಸೂಚಿಸಿದರು. ಸಭೆ ಬಳಿಕ ಮಾತನಾಡಿದ ಸಚಿವ ಮಹದೇವಪ್ಪ ಸಭೆಯಲ್ಲಿ SC-ST ಸಮುದಾಯದ ದೌರ್ಜನ್ಯ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲು ಸಿಎಂ ಸೂಚನೆ ನೀಡಿದ್ದಾರೆ ಎಂದರು. ಇದನ್ನೂ ಓದಿ: ಕಾನೂನು ವಿರುದ್ಧ ಕೆಲಸ ಮಾಡಿದ್ರೆ ಯಾವುದೇ ಪಕ್ಷದವರಾದ್ರೂ ಕ್ರಮ: ಪರಮೇಶ್ವರ್
ಈ ಹಿಂದೆ ಮೈಸೂರು, ಚಾಮರಾಜನಗರ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ಇದ್ದ ಕಾಡು ಕುರುಬರನ್ನು ಮಾತ್ರವೇ ಎಸ್‌ಟಿ ಪಂಗಡಕ್ಕೆ ಸೇರಿಸಲಾಗಿತ್ತು. ಬಳಿಕ 2020-21ರಲ್ಲಿ ರಾಜ್ಯಾದ್ಯಂತ ಎಲ್ಲಾ ಕುರುಬ ಸಮುದಾಯದವರನ್ನು ಎಸ್‌ಟಿ ಸಮುದಾಯಕ್ಕೆ ಸೇರಿಸುವಂತೆ ನಿರಂಜನಾನಂದ ಪುರಿ ಸ್ವಾಮೀಜಿ ಹಾಗೂ ಸಮುದಾಯದ ಮುಖಂಡರು ಕಾಗಿನೆಲೆಯಿಂದ ಬೆಂಗಳೂರಿನವರೆಗೂ ಬೃಹತ್ ಪಾದಯಾತ್ರೆ ನಡೆಸಿದ್ದರು. ಇದನ್ನೂ ಓದಿ: ಭಾರತದ ಶ್ರೀಮಂತ ಶಾಸಕರಲ್ಲಿ ಡಿ.ಕೆ. ಶಿವಕುಮಾರ್ ನಂ.1
ಈಗ ರಾಜ್ಯಾದ್ಯಂತ ಎಲ್ಲ ಕುರುಬ ಸಮುದಾಯದವರನ್ನು ಎಸ್‌ಟಿಗೆ ಸೇರಿಸುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿದೆ.