Tag: stab

  • ಲೋಕಾಯುಕ್ತರಿಗೆ ಚಾಕು ಇರಿದ ಆರೋಪಿಯನ್ನ ಇಂದು ಕೋರ್ಟ್ ಮುಂದೆ ಹಾಜರುಪಡಿಸಲಿರೋ ಪೊಲೀಸರು

    ಲೋಕಾಯುಕ್ತರಿಗೆ ಚಾಕು ಇರಿದ ಆರೋಪಿಯನ್ನ ಇಂದು ಕೋರ್ಟ್ ಮುಂದೆ ಹಾಜರುಪಡಿಸಲಿರೋ ಪೊಲೀಸರು

    ಬೆಂಗಳೂರು: ಬುಧವಾರದಂದು ಲೋಕಾಯುಕ್ತ ನ್ಯಾ. ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕುವಿನಿಂದ ಇರಿದ ಆರೋಪಿ ತೇಜ್ ರಾಜ್ ಗೆ ಬೌರಿಂಗ್ ಆಸ್ಪತ್ರೆ ವೈದ್ಯರು ಫಿಟ್ ಆಂಡ್ ಫೈನ್ ರಿಪೋರ್ಟ್ ನೀಡಿದ್ದಾರೆ.

    ವಿಚಾರಣೆ ನಡೆಸಬಹುದು ಅಂತ ವೈದ್ಯರು ವರದಿ ನೀಡಿದ್ದು, ಇಂದು ಮಧ್ಯಾಹ್ನದ ವೇಳೆಗೆ ಆರೋಪಿ ತೇಜ್ ರಾಜ್ ಶರ್ಮನನ್ನ ಪೊಲೀಸರು ಕೋರ್ಟ್ ಗೆ ಕರೆದೊಯ್ಯಲಿದ್ದಾರೆ. ಇದನ್ನೂ ಓದಿ: ದೂರುಗಳ ಮೇಲೆ ದೂರು ಕೊಟ್ಟರೂ ಪ್ರಯೋಜನ ಆಗಿಲ್ಲ- ಪೊಲೀಸ್ ಮುಂದೆ ತಪ್ಪೊಪ್ಪಿಕೊಂಡ ತೇಜರಾಜ್

    8ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಆರೋಪಿ ತೇಜರಾಜ್ ಶರ್ಮನನ್ನ ಹಾಜರುಪಡಿಸಲಿದ್ದು, ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಮಾಡಲಿದ್ದಾರೆ. ಸದ್ಯ ಆರೋಪಿ ಶರ್ಮಾ ಅಶೋಕನಗರ ಪೊಲೀಸರ ವಶದಲ್ಲಿದ್ದಾನೆ. ಇದನ್ನೂ ಓದಿ: ಅಧಿಕಾರಿಗಳ ವಿರುದ್ಧ ದೂರು ನೀಡಿದ್ದಕ್ಕೆ ತೇಜರಾಜ್‍ನನ್ನೇ ಪ್ರಕರಣದಲ್ಲಿ ಸಿಲುಕಿಸುವ ಸಂಚು ನಡೆದಿತ್ತು!

    ಚಾಕು ಇರಿತಕ್ಕೆ ಒಳಗಾಗಿದ್ದ ಲೋಕಾಯುಕ್ತ ನ್ಯಾ. ವಿಶ್ವನಾಥ್ ಶೆಟ್ಟಿ ಅವರಿಗೆ ಮಲ್ಯ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಇದನ್ನೂ ಓದಿ: ಲೋಕಾಯುಕ್ತರಿಗೆ ಎಲ್ಲೆಲ್ಲಿ ಇರಿಯಲಾಗಿದೆ? ಈಗ ಹೇಗಿದ್ದಾರೆ: ಮಲ್ಯ ಆಸ್ಪತ್ರೆ ವೈದ್ಯರು ಹೇಳ್ತಾರೆ ಓದಿ

     

  • ಲೋಕಾಯುಕ್ತರಿಗೆ ಈ ಪರಿಸ್ಥಿತಿಯಾದ್ರೆ, ರಾಜ್ಯದ ಜನರ ಪಾಡೇನು: ಉಡುಪಿಯಲ್ಲಿ ವಿಶ್ವನಾಥ ಶೆಟ್ಟಿ ಅತ್ತಿಗೆ ವಿಷಾದ

    ಲೋಕಾಯುಕ್ತರಿಗೆ ಈ ಪರಿಸ್ಥಿತಿಯಾದ್ರೆ, ರಾಜ್ಯದ ಜನರ ಪಾಡೇನು: ಉಡುಪಿಯಲ್ಲಿ ವಿಶ್ವನಾಥ ಶೆಟ್ಟಿ ಅತ್ತಿಗೆ ವಿಷಾದ

    ಉಡುಪಿ: ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿಗೆ ಚೂರಿ ಇರಿತಕ್ಕೆ ಸಂಬಂಧಪಟ್ಟಂತೆ ಕುಟುಂಬಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಮೂಲತಃ ಉಡುಪಿ ಜಿಲ್ಲೆಯ ಉಪ್ಪೂರಿನವರಾದ ವಿಶ್ವನಾಥ ಶೆಟ್ಟಿಯವರ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿದೆ. ವಿಶ್ವನಾಥ ಶೆಟ್ಟಿ ತಮ್ಮನ ಹೆಂಡತಿ ಅಂದ್ರೆ ಅತ್ತಿಗೆ ಜಯಂತಿ ಉಡುಪಿಯಲ್ಲಿದ್ದಾರೆ. ಭದ್ರತಾ ವೈಫಲ್ಯವೇ ಈ ಘಟನೆಗೆ ಕಾರಣ ಎಂದು ಅವರು ನೋವು ವ್ಯಕ್ತಪಡಿಸಿದರು. ಇದನ್ನೂ ಓದಿ: ಲೋಕಾಯುಕ್ತರಿಗೆ ಚಾಕು ಇರಿತ ಹೇಗಾಯ್ತು? ಇರಿದ ಆರೋಪಿ ಯಾರು?

    ಸರ್ಕಾರ ಲೋಕಾಯುಕ್ತರಿಗೆ ಸೂಕ್ತ ಭಧ್ರತೆ ಕೊಡಬೇಕಿತ್ತು. ಲೋಕಾಯುಕ್ತರಿಗೆ ಈ ಪರಿಸ್ಥಿತಿಯಾದ್ರೆ, ರಾಜ್ಯದ ಜನರ ಪಾಡೇನು ಅಂತ ಪ್ರಶ್ನಿಸಿದ್ದಾರೆ. ವಿಶ್ವನಾಥ ಶೆಟ್ಟಿ ಬಹಳ ಸಾಧು ಸ್ವಭಾವದ ವ್ಯಕ್ತಿ. ಅವರು ಯಾವತ್ತೂ ಜೋರಾಗಿ ಮಾತನಾಡಿದವರೇ ಅಲ್ಲ. ಎಲ್ಲವನ್ನೂ ಸಮಾಧಾನವಾಗಿ- ಸಾವಕಾಶವಾಗಿ ತೀರ್ಮಾನ ಮಾಡುವ, ತೀರ್ಪು ಕೊಡುವವರು ಅಂತ ಅವರು ಹೇಳಿದರು.  ಇದನ್ನೂ ಓದಿ: ತಂದೆ ಮೇಲಿನ ಇರಿತ ಸುದ್ದಿ ಕೇಳಿದ್ರೂ ಹಾರ್ಟ್ ಆಪರೇಷನ್ ಪೂರ್ಣಗೊಳಿಸಿದ ಮಗ ರವಿಶಂಕರ್

    ವಿಶ್ವನಾಥ ಶೆಟ್ಟರು ಕುಟುಂಬಸ್ಥರ ಜೊತೆಗೂ ಹಾಗೆಯೇ ನಡೆದುಕೊಳ್ಳುವವರು, ಬಹಳ ತಾಳ್ಮೆ ಇರುವ ವ್ಯಕ್ತಿ. ಅಂತ ಹೇಳಿದ್ದಾರೆ. ಸಮಸ್ಯೆ ಹೇಳಿಕೊಂಡು ಬರುವವರಿಗೆ ಹಲವು ಕಾನೂನು ರೀತಿಯ ಸಲಹೆಗಳನ್ನು ಕೊಡುತ್ತಾರೆ. ಅನ್ಯಾಯದ ವಿರುದ್ಧ ತನ್ನ ವೃತ್ತಿ ಜೀವನದಲ್ಲಿ ನಿರಂತರ ಹೋರಾಟ ಮಾಡಿದವರು ಎಂದು ಹೇಳಿದರು. ಟಿವಿ ನೋಡಿ ಅಂತ ಬೆಂಗಳೂರಿನಿಂದ ಪರಿಚಯಸ್ಥರು ಫೋನ್ ಮಾಡಿದಾಗಲೇ ಗೊತ್ತಾಯ್ತು. ಇದನ್ನೂ ಓದಿ: ಲೋಕಾಯುಕ್ತದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದ ತೇಜಸ್ ಶರ್ಮಾ

    10 ವರ್ಷ ಹೈಕೋರ್ಟಲ್ಲಿ, ನಂತರ ಸುಪ್ರೀಂ ಕೋರ್ಟ್ ನಲ್ಲಿ ವೃತ್ತಿ ಮಾಡುತ್ತಿದ್ದಾಗ ಒಂದೇ ಒಂದು ತಪ್ಪು ನಡೆಗಳನ್ನ ಇಟ್ಟವರಲ್ಲ. ಎಲ್ಲವನ್ನೂ ಅಳೆದು ತೂಗೆಯೇ ತೀರ್ಪು ಕೊಡುತ್ತಿದ್ದರು. ಕಳೆದ ತಿಂಗಳು ಉಡುಪಿಗೆ ಬಂದಿದ್ದರು. ದೇವರ ಮೇಲೆ ಬಹಳ ನಂಬಿಕೆ ಇಟ್ಟುಕೊಂಡಿದ್ದರು. ಧಾರ್ಮಿಕ ಆಚರಣೆಗಳಲ್ಲೂ ಪಾಲ್ಗೊಳ್ಳುತ್ತಿದ್ದರು. ಇದನ್ನೂ ಓದಿ: ಕೊಲೆ ಮಾಡಲೆಂದೇ ವಿಶ್ವನಾಥ್ ಶೆಟ್ಟಿ ಅವರ ಮೇಲೆ ದಾಳಿ ಮಾಡಿದ್ದಾನೆ, ತನಿಖೆಗೆ ಸೂಚಿಸಿದ್ದೇನೆ- ಸಿಎಂ

  • ಲೋಕಾಯುಕ್ತರಿಗೆ ಚಾಕು ಇರಿತ ಹೇಗಾಯ್ತು? ಇರಿದ ಆರೋಪಿ ಯಾರು?

    ಲೋಕಾಯುಕ್ತರಿಗೆ ಚಾಕು ಇರಿತ ಹೇಗಾಯ್ತು? ಇರಿದ ಆರೋಪಿ ಯಾರು?

    ಬೆಂಗಳೂರು: ಲೋಕಾಯುಕ್ತ ಕಚೇರಿಯಲ್ಲಿ ಆರೋಪಿಯಿಂದ ಇರಿತಕ್ಕೆ ಒಳಗಾದ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಅಂಬೇಡ್ಕರ್ ರಸ್ತೆಯಲ್ಲಿರುವ ಲೋಕಾಯುಕ್ತ ಕಚೇರಿಯಲ್ಲಿ ತುಮಕೂರು ಮೂಲದ ತೇಜ ರಾಜ ಶರ್ಮಾ ಎಂಬಾತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕು ಇರಿದಿದ್ದ. ಕೂಡಲೇ ವಿಶ್ವನಾಥ್ ಶೆಟ್ಟಿ ಅವರನ್ನು ಮಲ್ಯ ಆಸ್ಪತ್ರೆಗೆ ದಾಖಲು ಮಾಡಿದ್ದು, ಪ್ರಾಣಾಪಾಯದಿಂದ  ಪಾರಾಗಿದ್ದಾರೆ.

    ಘಟನೆ ಹೇಗಾಯ್ತು?
    ತುಮಕೂರಿನ ಎಸ್‍ಎಸ್‍ಪುರಂ ನಿವಾಸಿಯಾಗಿರುವ ತೇಜ ರಾಜ ಶರ್ಮಾ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ವಾಸಂತಿ ಉಪ್ಪಾರ ಹಾಗೂ ಬಾಲಮಂದಿರದಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ದೂರು ಕೊಟ್ಟಿದ್ದನು. ಅಲ್ಲದೇ ಬಾಲಮಂದಿರದಲ್ಲಿ ಬಟ್ಟೆ ಖರೀದಿಯಲ್ಲಿ ಅವ್ಯವಹಾರ ಸೇರಿದಂತೆ ಹಲವು ಹಗರಣ ವಿರುದ್ಧ ದೂರು ನೀಡಿದ್ದನು. ಅರ್ಜಿ ಲೋಕಾಯುಕ್ತದಲ್ಲಿ ವಜಾಗೊಂಡಿತ್ತು. ಈ ಅರ್ಜಿಯ ಬಗ್ಗೆ ಇಂದು ಮಧ್ಯಾಹ್ನ 12.45ಕ್ಕೆ ಆರೋಪಿ ಲೋಕಾಯುಕ್ತ ಕಚೇರಿಗೆ ಬಂದು ರಿಜಿಸ್ಟ್ರಾರ್ ನಲ್ಲಿ ಸಹಿ ಹಾಕಿ ಲೋಕಾಯುಕ್ತರನ್ನು ಭೇಟಿ ಮಾಡಬೇಕು ಎಂದು ಹೇಳಿದ್ದಾನೆ. ಮಧ್ಯಾಹ್ನ 1.30ರ ವೇಳೆಗೆ ಲೋಕಾಯುಕ್ತರ ಭೇಟಿಗೆ ಅನುಮತಿ ಸಿಕ್ಕಿದೆ.

    ಕೊಠಡಿಯ ಹೊರಗಡೆ ಇದ್ದ ಪೊಲೀಸರು ತೇಜ ರಾಜ ಶರ್ಮಾನನ್ನು ಒಳಗಡೆ ಬಿಟ್ಟಿದ್ದಾರೆ. ಒಳಗಡೆ ಬಿಟ್ಟ ನಂತರ ಲೋಕಾಯುಕ್ತರು ಮತ್ತು ತೇಜ ರಾಜನ ನಡುವೆ ಏನು ಮಾತುಕತೆ ನಡೆದಿದೆ ಎನ್ನುವ ಮಾಹಿತಿ ಸಿಕ್ಕಿಲ್ಲ. ಮಧ್ಯಾಹ್ನ 1.45ರ ವೇಳೆಗೆ ಲೋಕಾಯಕ್ತರಿಗೆ ಆರೋಪಿ ಮೂರು ಬಾರಿ ಚಾಕು ಇರಿದಿದ್ದಾನೆ.

    ಕಿಬ್ಬೊಟ್ಟೆಗೆ 3 ಬಾರಿ ಚಾಕುವಿನಿಂದ ಇರಿದ ಪರಿಣಾಮ ಚಾಕುವೇ ಮುರಿದಿದೆ. ಘಟನೆಯಿಂದಾಗಿ ಲೋಕಾಯುಕ್ತರು ಸ್ಥಳದಲ್ಲೇ ಕುಸಿದು, ರಕ್ತದ ಮಡುವಿನಲ್ಲಿ ಬಿದ್ದಿದ್ದಾರೆ. ಕೂಡಲೇ ವಿಧಾನ ಸೌಧ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ನ್ಯಾಯಮೂರ್ತಿಗಳನ್ನು ಕೂಡಲೇ ಮಲ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಇತ್ತ ಚಾಕುವಿನಿಂದ ಇರಿದ ಆರೋಪಿ ತೇಜರಾಜ ಶರ್ಮಾನನ್ನು ವಿಧಾನಸೌಧ ಠಾಣೆಯ ಪೊಲೀಸರು ಕೂಡಲೇ ಬಂಧಿಸಿದ್ದಾರೆ.

    ಲೋಕಾಯುಕ್ತ ಕಚೇರಿಯಲ್ಲಿ ಭದ್ರತಾ ಲೋಪವಿರುವುದೇ ಈ ಘಟನೆಗೆ ಕಾರಣ ಎನ್ನಲಾಗಿದೆ. ಯಾವುದೇ ಒಂದು ಕಚೇರಿಯೊಳಗೆ ವ್ಯಕ್ತಿ ಪ್ರವೇಶ ಮಾಡುವುದಕ್ಕೂ ಮುಂಚೆ ತಪಾಸಣೆ ಮಾಡಲಾಗುತ್ತದೆ. ಅದರಲ್ಲೂ ಸರ್ಕಾರಿ ಕಚೇರಿ ಪ್ರವೇಶಕ್ಕೂ ಮುನ್ನ ಪ್ರವೇಶದ್ವಾರದಲ್ಲಿ ಮೆಟನ್ ಸ್ಕ್ಯಾನರ್ ಅಳವಡಿಸಲಾಗುತ್ತದೆ. ಆದರೆ ಇಲ್ಲಿ ಇರುವ ತಪಸಣಾ ಯಂತ್ರ ಕೆಟ್ಟೊಗಿದ್ದು, ಅದನ್ನು ಸರಿಪಡಿಸುವ ಯತ್ನವಾಗಿಲ್ಲ. ಹೀಗಾಗಿ ಆರೋಪಿ ಈ ಕೃತ್ಯ ಎಸಗಲು ಸಾಧ್ಯವಾಗಿದೆ ಎನ್ನುವ ಮಾತು ಕೇಳಿ ಬಂದಿದೆ. ತುಮಕೂರು ಎಂ.ಜಿ ರಸ್ತೆಯ ನಿವಾಸಿ ತೇಜ್ ರಾಜ್ ಶರ್ಮಾ ಕರುನಾಡು ಸೇನೆಯ ಸದಸ್ಯನಾಗಿದ್ದ ಎನ್ನುವ ವಿವರ ಈಗ ಲಭ್ಯವಾಗಿದೆ.

    ಲೋಕಾಯುಕ್ತರ ಜೊತೆ ಒಟ್ಟು 5 ನಿಮಿಷ ಮಾತುಕತೆ ನಡೆದಿದ್ದು, ಈ ವೇಳೆ ತಾನು ಕೊಟ್ಟ ದೂರಗಳು ಬಗ್ಗೆ ಮಾತನಾಡಿದ್ದಾನೆ. ಸಾಕಷ್ಟು ಸಾಕ್ಷಿ ಒದಗಿಸಿದ್ದರೂ ದೂರನ್ನು ವಜಾ ಮಾಡಿದ್ದು ಯಾಕೆ ಎಂದು ಪ್ರಶ್ನೆ ಕೇಳಿದ್ದಾನೆ. ಎಲ್ಲ ಪ್ರಶ್ನೆಗಳಿಗೆ ವಿಶ್ವನಾಥ್ ಶೆಟ್ಟಿ ಅವರು ನಗುತ್ತಾ ಉತ್ತರ ನೀಡಿದ್ದಾರೆ. ಎಷ್ಟೇ ದೂರು ಕೊಟ್ಟರೂ ಭ್ರಷ್ಟರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಸಿಟ್ಟಾಗಿ ಚಾಕು ಇರಿದಿದ್ದಾನೆ ಎಂದು ಲೋಕಾಯುಕ್ತ ಕಚೇರಿ ಸಿಬ್ಬಂದಿಯೊಬ್ಬರು ಹೇಳಿಕೆ ನೀಡಿದ್ದಾರೆ.

  • ಕೊಲೆ ಮಾಡಲೆಂದೇ ವಿಶ್ವನಾಥ್ ಶೆಟ್ಟಿ ಅವರ ಮೇಲೆ ದಾಳಿ ಮಾಡಿದ್ದಾನೆ, ತನಿಖೆಗೆ ಸೂಚಿಸಿದ್ದೇನೆ- ಸಿಎಂ

    ಕೊಲೆ ಮಾಡಲೆಂದೇ ವಿಶ್ವನಾಥ್ ಶೆಟ್ಟಿ ಅವರ ಮೇಲೆ ದಾಳಿ ಮಾಡಿದ್ದಾನೆ, ತನಿಖೆಗೆ ಸೂಚಿಸಿದ್ದೇನೆ- ಸಿಎಂ

    ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

    ಮಧ್ಯಾಹ್ನ ಮಲ್ಯ ಆಸ್ಪತ್ರೆಗೆ ಭೇಟಿ ನೀಡಿ ವಿಶ್ವನಾಥ್ ಶೆಟ್ಟಿ ಅವರ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಅವರು, ಮೇಲ್ನೋಟಕ್ಕೆ ವಿಶ್ವನಾಥ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ ಎಂದು ತಿಳಿಸಿದರು.

    ಆರೋಪಿ ತೇಜ ರಾಜ್ ಶರ್ಮಾ ಯಾವುದೋ ಟೆಂಡರ್‍ಗೆ ಹಾಕಿದ್ದ. ಅದು ಆತನಿಗೆ ಸಿಕ್ಕಿರಲಿಲ್ಲ. ಅಧಿಕಾರಿಯಿಂದ ಮೋಸವಾಗಿದೆ, ಈ ಬಗ್ಗೆ ತನಿಖೆ ಮಾಡಿ ಎಂದು ದೂರು ನೀಡಿದ್ದ. ಆದ್ರೆ ಅವರು ವಿಚಾರಣೆ ಮುಗಿದಿದೆ ಎಂದು ಎಂಡಾರ್ಸ್‍ಮೆಂಟ್ ಕೊಟ್ಟಿದ್ದಾರೆ. ಹೀಗಾಗಿ ಆತ ಲೋಕಾಯುಕ್ತರನ್ನ ಭೇಟಿ ಮಾಡಬೇಕೆಂದು ಹೋಗಿ ಚಾಕುವಿನಿಂದ ಇರಿದಿದ್ದಾನೆ. ಕೊಲೆ ಮಾಡಲೆಂದೇ ಆತ ದಾಳಿ ನಡೆಸಿರುವುದು ಸ್ಪಷ್ಟವಾಗಿ ಕಾಣುತ್ತದೆ. ಚಾಕು ಕೂಡ ದೊಡ್ಡದಾಗಿತ್ತು. ಹೀಗಾಗಿ ಇದು ಕೊಲೆ ಪ್ರಯತ್ನ ಎಂಬುದು ಸ್ಪಷ್ಟ ಎಂದು ಹೇಳಿದ್ರು.

    ಆರೋಪಿಯನ್ನ ಬಂಧಿಸಲಾಗಿದ್ದು, ತನಿಖೆ ಮುಂದುವರೆಸಿದ್ದಾರೆ. ಈ ಹಿಂದೆ ಯಾವತ್ತೂ ಹೀಗೆ ಆಗಿರಲಿಲ್ಲ. ಹೀಗಾಗಿ ಈ ಬಗ್ಗೆ ಕೂಲಂಕುಷವಾಗಿ ತನಿಖೆ ಮಾಡಲು ಡಿಜಿಪಿಗೆ ಹೇಳಿದ್ದೇನೆ. ಆರೋಪಿ ಯಾರು, ಆತನ ಹಿನ್ನೆಲೆ ಇತ್ಯಾದಿಯ ಬಗ್ಗೆ ತನಿಖೆ ಮಾಡುವಂತೆ ಸೂಚಿಸಿದ್ದೇನೆ. ವಿಶ್ವನಾಥ್ ಶೆಟ್ಟಿ ಅವರನ್ನು ಚೆನ್ನಾಗಿ ನೊಡಿಕೊಳ್ಳುವಂತೆ ವೈದ್ಯರಿಗೂ ಮನವಿ ಮಾಡಿದ್ದೇನೆ ಎಂದರು.

    ಭದ್ರತಾ ವೈಫಲ್ಯವಿದೆಯಾ ಎಂಬುದನ್ನು ಪರಿಶೀಲಿಸಲು ಹೇಳಿದ್ದೇನೆ. ವೈಫಲ್ಯವಿದ್ದರೆ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದೇನೆ. ಸಾಮಾನ್ಯವಾಗಿ ಭೇಟಿ ಮಾಡಬೇಕೆಂದು ಚೀಟಿ ಕೊಡುತ್ತಾರೆ, ಅವರು ಒಳಗೆ ಕರೆದಿದ್ದಾರೆ. ಆತ ಒಳಗೆ ಹೋದಾಗ ಚಾಕು ಚುಚ್ಚಿದ್ದಾನೆ. ನನ್ನನ್ನೂ ಸಾಕಷ್ಟು ಜನ ಭೇಟಿಯಾಗಲು ಬರುತ್ತಾರೆ. ನಮಗೇನು ಗೊತ್ತಿರುತ್ತೆ ಆಯುಧ ತೆಗೆದುಕೊಂಡು ಬಂದರೆ? ಗನ್ ಮ್ಯಾನ್ ಹೊರಗೆ ಇರುತ್ತಾರೆ, ಸಿಸಿಟಿವಿ ಕೂಡ ಇರುತ್ತದೆ. ಈತ ಚೇಂಬರ್ ಒಳಗೆ ಹೋಗಿ ಈ ಕೃತ್ಯವೆಸಗಿದ್ದಾನೆ. ವಿಶ್ವನಾಥ್ ಶೆಟ್ಟಿ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದರು.

    ನಡೆದಿದ್ದೇನು?: ಇಂದು ಮಧ್ಯಾಹ್ನ 12.45ರ ಸುಮಾರಿಗೆ ನಗರದ ಅಂಬೇಡ್ಕರ್ ರಸ್ತೆಯಲ್ಲಿರುವ ಲೋಕಾಯುಕ್ತ ಕಚೇರಿಗೆ ಲೋಕಾಯುಕ್ತರನ್ನ ಭೇಟಿಯಾಗಲು ಆರೋಪಿ ತೇಜ ರಾಜ್ ಶರ್ಮಾ ಬಂದಿದ್ದ. ರಿಜಿಸ್ಟರ್ ಪುಸ್ತಕದಲ್ಲಿ ತನ್ನ ಹೆಸರು, ವಾಹನ ನೋಂದಣಿ ಸಂಖ್ಯೆ ಎಲ್ಲವನ್ನೂ ಬರೆದು ಕಚೇರಿ ಒಳಗೆ ಹೋದ ಶರ್ಮಾ, ವಿಶ್ವನಾಥ್ ಶೆಟ್ಟಿ ಅವರ ಮೇಲೆ ದಾಳಿ ಮಾಡಿ ಚಾಕುವಿನಿಂದ ಇರಿದಿದ್ದಾನೆ. ಬಳಿಕ ಆರೋಪಿಯನ್ನ ವಿಧಾನ ಸೌಧ ಪೊಲೀಸರು ಬಂಧಿಸಿದ್ದಾರೆ.

    ವಿಶ್ವನಾಥ್ ಶೆಟ್ಟಿ ಅವರು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

  • ಪತ್ನಿ, ಮಗಳಿಗೆ ಚಾಕುವಿನಿಂದ ಇರಿದು ವ್ಯಕ್ತಿ ಆತ್ಮಹತ್ಯೆ

    ಪತ್ನಿ, ಮಗಳಿಗೆ ಚಾಕುವಿನಿಂದ ಇರಿದು ವ್ಯಕ್ತಿ ಆತ್ಮಹತ್ಯೆ

    ನವದೆಹಲಿ: ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಮಗಳಿಗೆ ಚಾಕುವಿನಿಂದ ಇರಿದು ಬಳಿಕ ತಾನೂ ಇರಿದುಕೊಂಡಿರುವ ಘಟನೆ ದೆಹಲಿಯ ಸಂಗಮ್ ವಿಹಾರ್‍ನಲ್ಲಿ ಶುಕ್ರವಾರದಂದು ನಡೆದಿದೆ.

    ಜಿತೇಂದರ್ ಹಣಕಾಸಿನ ಸಮಸ್ಯೆಯಿಂದಾಗಿ ಈ ಕೃತ್ಯವೆಸಗಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪತ್ನಿ ಹಾಗೂ ಮಗಳ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದು, ಬಳಿಕ ತಾನು ಇರಿದುಕೊಂಡಿದ್ದಾನೆ. ತೀವ್ರವಾದ ಗಾಯಗಳಿಂದ ಜಿತೇಂದರ್ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ಅವರು ಹೇಳಿದ್ದಾರೆ.

    ಅದೇ ಆಸ್ಪತ್ರೆಯಲ್ಲಿ ಜಿತೇಂದರ್‍ನ ಪತ್ನಿ ಹಾಗೂ ಮಗಳು ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಸುಧಾರಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

     

  • 10ಕ್ಕೂ ಹೆಚ್ಚು ಬೈಕ್‍ಗಳಲ್ಲಿ ಬಂದು ಯುವಕನಿಗೆ 50 ಬಾರಿ ಇರಿದು, ರಾಡ್‍ನಿಂದ ಹೊಡೆದ್ರು

    10ಕ್ಕೂ ಹೆಚ್ಚು ಬೈಕ್‍ಗಳಲ್ಲಿ ಬಂದು ಯುವಕನಿಗೆ 50 ಬಾರಿ ಇರಿದು, ರಾಡ್‍ನಿಂದ ಹೊಡೆದ್ರು

    ನವದೆಹಲಿ: ಸುಮಾರು 20 ವರ್ಷ ಅಸಾಪಾಸಿನ ಯುವಕನಿಗೆ ಹಾಡಹಗಲೇ 50 ಬಾರಿ ಇರಿದು, ರಾಡ್‍ನಿಂದ ಹೊಡೆದು ಹಲ್ಲೆ ಮಾಡಿರುವ ಘಟನೆ ದೆಹಲಿಯ ಖಾನ್‍ಪುರ್ ಪ್ರದೇಶದಲ್ಲಿ ನಡೆದಿದೆ.

    ಆಶಿಶ್ ಹಲ್ಲೆಗೊಳಗಾದ ಯುವಕ. ಗುರುವಾರ ಸಂಜೆ ಸುಮಾರು 4 ಗಂಟೆ ವೇಳೆಗೆ ಆಶಿಶ್ ಜಿಮ್ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ ಬೈಕ್‍ಗಳಲ್ಲಿ ಬಂದ ಸುಮಾರು 20 ಯುವಕರು ದುಗ್ಗಲ್ ಕಾಲೋನಿಯ ಬೀದಿಯಲ್ಲಿ ಆಶಿಶ್ ಮೇಲೆ ದಾಳಿ ನಡೆಸಿದ್ದಾರೆ. ಈ ಎಲ್ಲಾ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅಪರಿಚತ ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

    ಕಪ್ಪು ಬಣ್ಣದ ಶರ್ಟ್ ಧರಿಸಿದ್ದ ಆಶಿಶ್‍ನನ್ನು ಇಬ್ಬರು ವ್ಯಕ್ತಿಗಳು ತಡೆದಿದ್ದಾರೆ. ಕೆಲವೇ ಕ್ಷಣಗಳಲ್ಲಿ 10ಕ್ಕೂ ಹೆಚ್ಚು ಬೈಕ್‍ಗಳು ಒಂದರ ಹಿಂದೆ ಒಂದು ಬಂದಿದ್ದು, ಆಶಿಶ್‍ನನ್ನು ಸುತ್ತುವರೆದಿದ್ದಾರೆ. ನಂತರ ಆಶಿಶ್‍ಗೆ ಸುಮಾರು 50 ಬಾರಿ ಇರಿದಿದ್ದು, ರಾಡ್‍ಗಳಿಂದ ಹೊಡೆದಿದ್ದಾರೆ. ಈ ವೇಳೆ ನೆರೆಹೊರೆಯವರು ಇದನ್ನ ತಡೆಯಲು ಮುಂದಾಗಲಿಲ್ಲ. ಆಶಿಶ್ ರಸ್ತೆ ಮೇಲೆ ಬಿದ್ದಿದ್ದು, ದುಷ್ಕರ್ಮಿಗಳು ಬೈಕ್‍ಗಳಲ್ಲಿ ಚಾಕು ಹಾಗೂ ರಾಡ್‍ಗಳನ್ನ ಹಿಡಿದು ಪರಾರಿಯಾಗೋದನ್ನ ವಿಡಿಯೋದಲ್ಲಿ ಕಾಣಬಹುದು.

    ದಾಳಿ ಮಾಡಿದ ತಂಡ ಸ್ಥಳದಿಂದ ಕಾಲ್ಕಿತ್ತ ನಂತರ ಸ್ಥಳೀಯರು ಆಶಿಶ್‍ನನ್ನು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಸದ್ಯ ಆಶಿಶ್ ಪರಿಸ್ಥಿತಿ ಚಿಂತಾಜನಕವಾಗಿದ್ದು, ಕನಿಷ್ಟ 50 ಇರಿತದ ಗಾಯಗಳಾಗಿವೆ ಎಂದು ವೈದ್ಯರು ಹೇಳಿದ್ದಾರೆ. ಘಟನೆ ಬಗ್ಗೆ ವಿಷಯ ತಿಳಿಸಿದ 1 ಗಂಟೆ ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿದ್ರು ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.

    ಆಶಿಶ್ ಮೇಲೆ ದಾಳಿ ನಡೆದಿದ್ದು ಯಾಕೆ ಎಂಬುದು ಸ್ಪಷ್ಟವಾಗಿಲ್ಲ. ಆದ್ರೆ ಸ್ಥಳಿಯ ನಿವಾಸಿಗಳು ಹೇಳುವ ಪ್ರಕಾರ ಗುರುವಾರ ಬೆಳಗ್ಗೆ ನಡೆದ ಜಗಳದ ನಂತರ ಯುವಕರ ಗುಂಪು ಆಶಿಶ್ ಮೇಲೆ ದಾಳಿ ಮಾಡಿದೆ. ಬಾಲಕನೊಬ್ಬ ಹೋಳಿ ಪ್ರಯುಕ್ತ ನೀರಿನ ಬಲೂನ್‍ಗಳನ್ನ ಎಸೆದಿದ್ದಕ್ಕೆ ಯುವಕರು ಆತನಿಗೆ ಹೊಡೆಯುತ್ತಿದ್ದರು. ಈ ವೇಳೆ ಆಶಿಶ್ ಮಧ್ಯಪ್ರವೇಶಿಸಿ ಬಾಲಕನಿಗೆ ಹೊಡೆಯೋದನ್ನ ತಡೆದಿದ್ದ ಎಂದು ಹೇಳಲಾಗಿದೆ.

  • ದೇವಸ್ಥಾನದ ಎದುರು ಭಿಕ್ಷೆ ಬೇಡೋ ವಿಷ್ಯಕ್ಕೆ ಜಗಳ – ವೃದ್ಧ ಭಿಕ್ಷುಕನಿಗೆ ಚಾಕುವಿನಿಂದ ಇರಿತ

    ದೇವಸ್ಥಾನದ ಎದುರು ಭಿಕ್ಷೆ ಬೇಡೋ ವಿಷ್ಯಕ್ಕೆ ಜಗಳ – ವೃದ್ಧ ಭಿಕ್ಷುಕನಿಗೆ ಚಾಕುವಿನಿಂದ ಇರಿತ

    ಮೈಸೂರು: ಭಿಕ್ಷೆ ಬೇಡೋ ಜಾಗಕ್ಕಾಗಿ ಇಬ್ಬರು ಭಿಕ್ಷುಕರ ಮಧ್ಯೆ ಮಾರಾಮಾರಿ ನಡೆದಿರುವ ಘಟನೆ ಮೈಸೂರಿನ ಅಗ್ರಹಾರದ ತ್ಯಾಗರಾಜ ರಸ್ತೆಯಲ್ಲಿ ನಡೆದಿದೆ.

    ಸಾಯಿಬಾಬಾ ದೇಗುಲದ ಮುಂಭಾಗ ಭಿಕ್ಷುಕ ಮತ್ತೊಬ್ಬ ಭಿಕ್ಷುಕನಿಗೆ ಚಾಕುವಿನಿಂದ ಇರಿದಿದ್ದಾನೆ. ಚಾಕು ಇರಿತದಿಂದ ವೃದ್ಧನ ಬಟ್ಟೆಯೆಲ್ಲ ರಕ್ತಮಯವಾಗಿದ್ದು ಸ್ಥಳೀಯರು ಆಂಬುಲೆನ್ಸ್‍ಗೆ ಕರೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಚಾಕು ಹಾಕಿದ ಭಿಕ್ಷುಕನನ್ನು ಕೆ.ಆರ್. ಪೊಲೀಸರು ವಶಕ್ಕೆ ಪಡೆದಿದ್ದಾರೆ.

  • ಕತ್ತು, ಹೊಟ್ಟೆಗೆ ಚಾಕುವಿನಿಂದ ಇರಿದು ಸ್ನೇಹಿತನಿಂದ್ಲೇ ಯುವಕನ ಬರ್ಬರ ಕೊಲೆ

    ಕತ್ತು, ಹೊಟ್ಟೆಗೆ ಚಾಕುವಿನಿಂದ ಇರಿದು ಸ್ನೇಹಿತನಿಂದ್ಲೇ ಯುವಕನ ಬರ್ಬರ ಕೊಲೆ

    ಚಿಕ್ಕಬಳ್ಳಾಪುರ: ಹಳೆ ದ್ವೇಷ ಮತ್ತು ಒಂದೇ ಹುಡುಗಿಯನ್ನ ಇಬ್ಬರು ಪ್ರೀತಿಸುತ್ತಿದ್ದ ಹಿನ್ನೆಲೆಯಲ್ಲಿ ಪ್ರೇಮಿಗಳ ದಿನವೇ ಸ್ನೇಹಿತನನ್ನು ಚಾಕುವಿನಿಂದ ಇರಿದು ಕೊಲೆಗೈದ ಅಮಾನವೀಯ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕಂಚಿಗನಹಾಳ ಗ್ರಾಮದಲ್ಲಿ ನಡೆದಿದೆ.

    21 ವರ್ಷದ ಹರೀಶ್ ಸ್ನೇಹಿತನಿಂದಲೇ ಕೊಲೆಯಾದ ದುರ್ದೈವಿ ಯುವಕ. ಮಂಗಳವಾರ ತಡರಾತ್ರಿ ಹರೀಶ್ ಸ್ನೇಹಿತ ಅಂಬರೀಶ್ ಎಂಬವನ ಜೊತೆ ಗ್ರಾಮದ ರಸ್ತೆಯಲ್ಲಿ ನಡದುಕೊಂಡು ಹೊಗುತ್ತಿದ್ದ ವೇಳೆ ಎದುರಿನಿಂದ ಬಂದ ಸಂತೋಷ್, ಹರೀಶ್ ಕತ್ತು ಮತ್ತು ಹೊಟ್ಟೆಗೆ ಚಾಕುವಿನಿಂದ ಇರಿದಿದ್ದಾನೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಹರೀಶ್ ಕುಸಿದು ಬಿದ್ದು ಸ್ಥಳದಲ್ಲೇ ಒದ್ದಾಡಿದ್ದಾನೆ. ಈ ವೇಳೆ ಇದನ್ನು ಗಮನಿಸಿದ ಸ್ಥಳೀಯರು ಆತನನ್ನು ಕೂಡಲೇ ಆಸ್ಪತ್ರೆಗೆ ಒಯ್ದಿದ್ದಾರೆ. ಆದ್ರೆ ಹರೀಶ್ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ.

    ಚಾಕುವಿನಿಂದ ಇರಿದ ಬಳಿಕ ಸಂತೋಷ್ ಸ್ಥಳದಿಂದ ಪರಾರಿಯಾಗಿದ್ದಾನೆ. ಪ್ರಕರಣ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮೊಬೈಲ್ ಕೊಡದಿದ್ದಕ್ಕೆ ಯುವಕನ ತೊಡೆಗೆ ಚಾಕುವಿನಿಂದ ಇರಿದು ಬರ್ಬರ ಹತ್ಯೆ

    ಮೊಬೈಲ್ ಕೊಡದಿದ್ದಕ್ಕೆ ಯುವಕನ ತೊಡೆಗೆ ಚಾಕುವಿನಿಂದ ಇರಿದು ಬರ್ಬರ ಹತ್ಯೆ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ನೆತ್ತರು ಹರಿದಿದೆ. ದಾರಿಯಲ್ಲಿ ನಡೆದು ಹೋಗುತ್ತಿದ್ದ ಯುವಕನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸಿಟಿ ಮಾರ್ಕೆಟ್ ಬಳಿ ನಡೆದಿದೆ.

    ಕೊಲೆಯಾದ ದುರ್ದೈವಿಯನ್ನು ರಾಜಸ್ಥಾನ ಮೂಲದ ಬಬ್ರರಾಮ್ ದೇವಾಸಿ ಅಂತ ಗುರುತಿಸಲಾಗಿದೆ. ರಾಜಸ್ಥಾನದ ಬಬ್ರರಾಮ್ ದೇವಾಸಿ 3 ದಿನಗಳ ಹಿಂದಷ್ಟೆ ಬೆಂಗಳೂರಿಗೆ ಬಂದಿದ್ದವ ಸ್ನೇಹಿತರ ರೂಮ್‍ನಲ್ಲಿ ವಾಸವಿದ್ದರು.

    ಸೋಮವಾರ ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ಅಂಗಡಿಯೊಂದರಲ್ಲಿ ಕೆಲ್ಸ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಕಳ್ಳರು ಮೊಬೈಲ್ ಕಿತ್ತುಕೊಳ್ಳೋಕೆ ಪ್ರಯತ್ನಿಸಿದ್ದಾರೆ. ಈ ವೇಳೆ ದೇವಾಸಿ ಮೊಬೈಲ್ ಕೊಡೋದಕ್ಕೆ ನಿರಾಕರಿಸಿದ್ದಾರೆ. ಇದರಿಂದ ಕುಪಿತಗೊಂಡ ಆರೋಪಿಗಳು ಬಬ್ರರಾಮ್ ದೇವಾಸಿ ತೊಡೆಗೆ ಚಾಕುವಿನಿಂದ ಇರಿದಿದ್ದಾರೆ.

    ಘಟನೆಯಿಂದ ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವಕನನ್ನು ಸ್ಥಳೀಯರು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿದ್ರು. ಆದ್ರೆ ತೀವ್ರ ರಕ್ತಸ್ರಾವವಾಗಿದ್ದರಿಂದ ದೇವಾಸಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನೆ ಬಳಿಕ ಸಿಟಿ ಮಾರ್ಕೆಟ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

    ಸದ್ಯ ಪ್ರಕರಣ ದಾಖಲಿಸಿಕೊಂಡಿರೋ ಸಿಟಿ ಮಾರ್ಕೇಟ್ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬಿಸಿದ್ದಾರೆ.

     

  • ಪತ್ನಿಯನ್ನ 21 ಬಾರಿ ಇರಿದು ಕೊಂದವನಿಗೆ ಜೀವಾವಧಿ ಶಿಕ್ಷೆ!

    ಪತ್ನಿಯನ್ನ 21 ಬಾರಿ ಇರಿದು ಕೊಂದವನಿಗೆ ಜೀವಾವಧಿ ಶಿಕ್ಷೆ!

    ನವದೆಹಲಿ: 6 ವರ್ಷಗಳ ಹಿಂದೆ ಪತ್ನಿಯನ್ನ ಚಾಕುವಿನಿಂದ 21 ಬಾರಿ ಇರಿದು, ತಲೆಗೆ ಇಟ್ಟಿಗೆಯಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿದ ವ್ಯಕ್ತಿಗೆ ದೆಹಲಿ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

    ಮಹಿಳೆಯ ತಲೆ ಮೇಲೆ ಎಷ್ಟು ಬರ್ಬರವಾಗಿ ಹಲ್ಲೆ ಮಾಡಲಾಗಿತ್ತೆಂದರೆ ತಲೆಬುರುಡೆಯ ಮೂಳೆಯೇ ಮುರಿದುಹೋಗಿತ್ತು. 2012ರ ಅಕ್ಟೋಬರ್ 31 ಹಾಗೂ ನವೆಂಬರ್ 1ರ ಮಧ್ಯರಾತ್ರಿ ದೇವೇಂದ್ರ ದಾಸ್ ತನ್ನ ಹೆಂಡತಿಯೊಂದಿಗೆ ಜಗಳವಾಡಿದ್ದು, ಬಳಿಕ ಆಕೆಯನ್ನ 21 ಬಾರಿ ಚಾಕುವಿನಿಂದ ಇರಿದು, ತಲೆ ಮೇಲೆ ಇಟ್ಟಿಗೆಯಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದ. ಮನೆ ಮಾಲೀಕ ಪೊಲೀಸರಿಗೆ ವಿಷಯ ತಿಳಿಸಿದ ಮೇಲೆ ಪ್ರಕರಣ ಬೆಳಕಿಗೆ ಬಂದಿತ್ತು. ಯಾವುದೇ ಪ್ರಚೋದನೆ ಇಲ್ಲದೆ ವ್ಯಕ್ತಿ ಇಷ್ಟೊಂದು ಕ್ರೂರವಾಗಿ ವರ್ತಿಸಿದ್ದಾನೆ ಎಂಬುದನ್ನ ಮನಗಂಡ ಕೋರ್ಟ್ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

    ದಾಸ್ ತನ್ನ ಹೆಂಡತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು ಸ್ಪಷ್ಟ. ಆದ್ದರಿಂದ ನಮ್ಮ ಪ್ರಕಾರ ದಾಸ್ ಮಾಡಿದ ಅಪರಾಧ ಕೊಲೆಯ ಉದ್ದೇಶವಿಲ್ಲದೆ ಮಾಡಿದ ಕೃತ್ಯ ಎಂದು ಹೇಳಲು ಸಾಧ್ಯವಿಲ್ಲ. ಇದೊಂದು ಬರ್ಬರ ಹತ್ಯೆ ಎಂದು ಕೋರ್ಟ್ ಹೇಳಿದೆ.

    ಈ ಪ್ರಕರಣದಲ್ಲಿ ನನ್ನ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ದಾಸ್ ವಾದಿಸಿದ್ದ. ಆದ್ರೆ ಆತನ ಮನವಿಯನ್ನ ತಿರಸ್ಕರಿಸಿದ ನ್ಯಾ. ಸುನಿಲ್ ಗೌರ್ ಹಾಗೂ ಪ್ರತಿಭಾ ಎಂ ಸಿಂಗ್ ಅವರ ಪೀಠ, ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.