Tag: Stabbing

  • ಶಾಲೆಯಲ್ಲೇ ಹಿರಿಯ ವಿದ್ಯಾರ್ಥಿಗೆ ಚಾಕು ಇರಿತ – ಚಿಕಿತ್ಸೆ ಫಲಿಸದೇ ಬಾಲಕ ಸಾವು

    ಶಾಲೆಯಲ್ಲೇ ಹಿರಿಯ ವಿದ್ಯಾರ್ಥಿಗೆ ಚಾಕು ಇರಿತ – ಚಿಕಿತ್ಸೆ ಫಲಿಸದೇ ಬಾಲಕ ಸಾವು

    ಅಹಮದಾಬಾದ್‌: ಶಾಲೆಯಲ್ಲಿ (School) ಜಗಳ ನಡೆಯುವ ವೇಳೆ ಸಹಪಾಠಿಯಿಂದ ಚೂರಿ ಇರಿತಕ್ಕೆ ಒಳಗಾದ ವಿದ್ಯಾರ್ಥಿ (Student) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

    ಅಹಮದಾಬಾದ್‌ನ ಸೆವೆಂತ್-ಡೇ ಅಡ್ವೆಂಟಿಸ್ಟ್ ಶಾಲೆಯಲ್ಲಿ (Ahmedabad School Stabbing) ಮಂಗಳವಾರ 8ನೇ ತರಗತಿಯ ವಿದ್ಯಾರ್ಥಿ ಜೊತೆ 10ನೇ ತರಗತಿಯ ವಿದ್ಯಾರ್ಥಿಗೆ ಜಗಳ ನಡೆದಿತ್ತು. ಈ ವೇಳೆ 8ನೇ ತರಗತಿ ವಿದ್ಯಾರ್ಥಿ ಹಿರಿಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದಿದ್ದ.

    ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಈ ವಿಚಾರ ತಿಳಿದು ಮಕ್ಕಳ ಪೋಷಕರು ಶಾಲೆಗೆ ನುಗ್ಗಿ ಭಾರೀ ಪ್ರತಿಭಟನೆ ನಡೆಸಿದ್ದಾರೆ.  ಇದನ್ನೂ ಓದಿ: 12 ದಿನಗಳ ಹಿಂದೆ ರೈಲಿನಲ್ಲಿ ನಾಪತ್ತೆಯಾಗಿದ್ದ ಹೈಕೋರ್ಟ್‌ ತರಬೇತಿ ವಕೀಲೆ ನೇಪಾಳ ಗಡಿಯಲ್ಲಿ ಪತ್ತೆ!

    ಬಾಲಕ ಕುಟುಂಬಸ್ಥರು, ಸಿಂಧಿ ಸಮುದಾಯದ ಸದಸ್ಯರು ಮತ್ತು ಇತರ ಪೋಷಕರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಕೊಲೆ ಮಾಡಿದ ಬಾಲಕ ಮುಸ್ಲಿಮ್‌ ಧರ್ಮಕ್ಕೆ ಸೇರಿದ್ದರೆ ಕೊಲೆಯಾದ ವಿದ್ಯಾರ್ಥಿ ಹಿಂದೂ ಧರ್ಮಕ್ಕೆ ಸೇರಿದ್ದರಿಂದ ಪ್ರತಿಭಟನೆ ಜೋರಾಗಿದೆ. ಪ್ರತಿಭಟನಾಕಾರರು ಶಾಲೆಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಈಗ ಪೋಷಕರ ಜೊತೆ ಹಿಂದೂ ಸಂಘಟನೆಗಳು ಶಾಲೆಯ ಪ್ರಿನ್ಸಿಪಾಲ್‌ ಮತ್ತು ಆಡಳಿತ ಮಂಡಳಿಯ ವಿರುದ್ಧ ದೂರು ನೀಡಿವೆ.

    ಜಂಟಿ ಪೊಲೀಸ್ ಆಯುಕ್ತ ಜೈಪಾಲ್ ಸಿಂಗ್ ರಾಥೋಡ್ ಪ್ರತಿಕ್ರಿಯಿಸಿ, ಪೊಲೀಸರು ನಿನ್ನೆಯೇ ಎಫ್‌ಐಆರ್ ದಾಖಲಿಸಿದ್ದು ಆರೋಪಿಯನ್ನು ಬಂಧಿಸಲಾಗಿದೆ. ಚಿಕಿತ್ಸೆಯ ಸಮಯದಲ್ಲಿ, ಗಾಯಗೊಂಡಿದ್ದ ಬಾಲಕ ಮೃತಪಟ್ಟಿದ್ದಾನೆ. ನಂತರ ಮೃತನ ಕುಟುಂಬ, ಇತರ ವಿದ್ಯಾಳ ಪೋಷಕರು ಮತ್ತು ಸಿಂಧಿ ಸಮುದಾಯದ ಸದಸ್ಯರು ಒಟ್ಟುಗೂಡಿದ್ದಾರೆ. ಸಾಕಷ್ಟು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.

  • ಇದು ನಮ್ಮ ಸರ್ಕಾರ, ಹಿಂದೂಗಳು ಏನೂ ಮಾಡಲು ಸಾಧ್ಯವಿಲ್ಲ- ಬರ್ತ್ ಡೇ ಆಚರಿಸಿದ್ದಕ್ಕೆ ಚಾಕು ಇರಿತ

    ಇದು ನಮ್ಮ ಸರ್ಕಾರ, ಹಿಂದೂಗಳು ಏನೂ ಮಾಡಲು ಸಾಧ್ಯವಿಲ್ಲ- ಬರ್ತ್ ಡೇ ಆಚರಿಸಿದ್ದಕ್ಕೆ ಚಾಕು ಇರಿತ

    ಮೈಸೂರು: ಹುಟ್ಟುಹಬ್ಬ ಆಚರಣೆ (Birthday Celebration) ವೇಳೆ ಗಲಾಟೆ ನಡೆದು ಅನ್ಯ ಕೋಮಿನವರಿಂದ ಯುವಕನಿಗೆ (Young Man) ಚಾಕು ಇರಿತವಾದ (Stabbing) ಘಟನೆ ಮೈಸೂರು (Mysuru) ಜಿಲ್ಲೆಯ ನಂಜನಗೂಡು ಪಟ್ಟಣದ ನೀಲಕಂಠನಗರದಲ್ಲಿ ನಡೆದಿದೆ.

    ಪ್ರಸಾದ್ (22) ಚಾಕು ಇರಿತಕ್ಕೊಳಗಾದ ಯುವಕ. ಹುಟ್ಟುಹಬ್ಬ ಆಚರಿಸುತ್ತಿದ್ದಕ್ಕೆ ಆಕ್ಷೇಪಿಸಿ, ಇಲ್ಲಿ ಹುಟ್ಟುಹಬ್ಬ ಆಚರಿಸಬೇಡಿ. ಇನ್ನು ಮುಂದೆ ನಿಮ್ಮ ಮನೆಗಳಲ್ಲಿ ಹುಟ್ಟುಹಬ್ಬ ಆಚರಿಸಿ. ಇದು ನಮ್ಮ ಸರ್ಕಾರ, ನೀವು ಹಿಂದೂಗಳು ಏನು ಮಾಡಲಾಗುವುದಿಲ್ಲ ಎಂದು ಅವಾಚ್ಯ ಶಬ್ಧಗಳಿಂದ ಕೆಲ ಯುವಕರು ನಿಂದಿಸಿದ್ದಾರೆ. ಬಳಿಕ ಗಲಾಟೆ ನಡೆದು ಯುವಕನಿಗೆ ಚಾಕುವಿನಿಂದ ಇರಿದಿದ್ದಾರೆ ಎಂದು ಆರೋಪಿಸಲಾಗಿದೆ.

    ಘಟನೆಗೆ ಸಂಬಂಧಿಸಿದಂತೆ 5 ಜನರ ವಿರುದ್ಧ ಪೊಲೀಸರು ಎಫ್‌ಐರ್ ದಾಖಲಿಸಿದ್ದಾರೆ. ಶೋಹೆಬ್, ಶಹೇನಸಾ, ಸಲ್ಮಾನ್, ಇಲ್ಲು ಹಾಗೂ ಜಾಫರ್ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಯುವತಿಯ ಶವ ಕೆರೆಯಲ್ಲಿ ಪತ್ತೆ- ಆತ್ಮಹತ್ಯೆ ಶಂಕೆ

    ಗಾಯಗೊಂಡಿರುವ ಪ್ರಸಾದ್‌ಗೆ ನಂಜನಗೂಡು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈಗಾಗಲೇ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಟಿಪ್ಪರ್, ಕಾರು ಮಧ್ಯೆ ಭೀಕರ ಅಪಘಾತ – ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

  • ಬಸ್ ನಿಲ್ದಾಣ ಜಾಗದ ವಿಚಾರಕ್ಕೆ 2 ಗುಂಪುಗಳ ನಡುವೆ ಮಾರಾಮಾರಿ – ಚಾಕು ಇರಿತದಿಂದ ಯುವಕ ಗಂಭೀರ

    ಬಸ್ ನಿಲ್ದಾಣ ಜಾಗದ ವಿಚಾರಕ್ಕೆ 2 ಗುಂಪುಗಳ ನಡುವೆ ಮಾರಾಮಾರಿ – ಚಾಕು ಇರಿತದಿಂದ ಯುವಕ ಗಂಭೀರ

    ಹಾವೇರಿ: ಬಸ್ ನಿಲ್ದಾಣದ (Bus Stop) ಜಾಗದ ವಿಚಾರಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಘಟನೆಯಲ್ಲಿ ವ್ಯಕ್ತಿಯೊಬ್ಬ ಚಾಕುವಿನಿಂದ ಹಲ್ಲೆ (Stabbing) ಮಾಡಿದ್ದಾನೆ. ಚಾಕು ಇರಿತದಿಂದಾಗಿ ಯುವಕನೊಬ್ಬನ ಸ್ಥಿತಿ ಗಂಭೀರವಾಗಿದ್ದು, ಇನ್ನೂ 8 ಜನರಿಗೆ ಗಾಯಗಳಾಗಿವೆ. ಘಟನೆ ಹಾವೇರಿ (Haveri) ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕಮಲಾನಗರ ತಾಂಡದಲ್ಲಿ ನಡೆದಿದೆ.

    ಚಾಕು, ಕಲ್ಲು ಹಾಗೂ ಬಡಿಗೆಯನ್ನು ಹಿಡಿದುಕೊಂಡು 2 ಗುಂಪುಗಳ ಜನರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಗಲಾಟೆಯ ವೇಳೆ ಓರ್ವ ವ್ಯಕ್ತಿಯಿಂದ ಹಲವರಿಗೆ ಚಾಕು ಇರಿತವಾಗಿದೆ. ಕಲ್ಲಿನಿಂದ ಹೊಡೆದಾಡಿಕೊಂಡಿರುವ ದೃಶ್ಯಗಳು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: RCB ನಾಯಕಿಯಾಗಿ ಸ್ಮೃತಿ ಮಂದಾನ ಆಯ್ಕೆ – ಕೊಹ್ಲಿ ವಿಶೇಷ ಸಂದೇಶ ಏನು?

    ಯುವಕನೊಬ್ಬನ ಎದೆಗೆ ಚಾಕು ಇರಿಯಲಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ. ಹಲ್ಲೆಯಲ್ಲಿ ಆತನ ಕೈ ಬೆರಳುಗಳು ತುಂಡಾಗಿವೆ. ತಲೆಗೆ ಗಂಭೀರವಾದ ಗಾಯಗಳಾಗಿವೆ. ಘಟನೆಯಲ್ಲಿ ಇನ್ನೂ 8 ಜನರಿಗೆ ಗಾಯಗಳಾಗಿದ್ದು, ಅವರೆಲ್ಲರನ್ನೂ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ರಾಜ್ಯಾದ್ಯಂತ ಒಂದೂವರೆ ತಿಂಗಳಲ್ಲಿ 7361 ರೌಡಿಗಳು ರೌಡಿ ಪಟ್ಟಿಯಿಂದ ಔಟ್

    ಸ್ಥಳೀಯ ಸುರೇಶ್ ಲಮಾಣಿ ಚಾಕುವಿನಿಂದ ಇರಿದು ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಗ್ರಾಮದಲ್ಲಿ ಬಸ್ ನಿಲ್ದಾಣದ ಜಾಗದ ಬಗ್ಗೆ 2 ಗುಂಪುಗಳ ನಡುವೆ ಜಗಳವಾಗಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ತಾನೇ ಇರಿದುಕೊಂಡು ಆಸ್ಪತ್ರೆ ದಾಖಲಾದ ವ್ಯಕ್ತಿ ವೈದ್ಯರಿಗೂ ಚಾಕು ಇರಿದ

    ತಾನೇ ಇರಿದುಕೊಂಡು ಆಸ್ಪತ್ರೆ ದಾಖಲಾದ ವ್ಯಕ್ತಿ ವೈದ್ಯರಿಗೂ ಚಾಕು ಇರಿದ

    ಮುಂಬೈ: ಸರ್ಕಾರಿ ಆಸ್ಪತ್ರೆಯೊಂದರಲ್ಲಿ (Government Hospital) ದಾಖಲಾಗಿದ್ದ ರೋಗಿಯೊಬ್ಬ (Patient) ಚಿಕಿತ್ಸೆ ನೀಡಲು ಬಂದ ವೈದ್ಯರಿಗೆ (Doctor) ಚಾಕುವಿನಿಂದ ಇರಿದಿರುವ (Stabbing) ಘಟನೆ ಮಹಾರಾಷ್ಟ್ರದ (Maharashtra) ಯವತ್ಮಾಲ್ ಜಿಲ್ಲೆಯ ಶ್ರೀ ವಸಂತರಾವ್ ನಾಯಕ್ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

    ಹಲ್ಲೆ ನಡೆಸಿದ ವ್ಯಕ್ತಿ ಬುಧವಾರ ತನಗೆ ತಾನೇ ಚಾಕುವಿನಿಂದ ಇರಿದು ಆಸ್ಪತ್ರೆ ದಾಖಲಾಗಿದ್ದ. ಶಸ್ತ್ರಚಿಕಿತ್ಸೆ ವಿಭಾಗದಲ್ಲಿ ದಾಖಲಾಗಿದ್ದ ವ್ಯಕ್ತಿ ಗುರುವಾರ ರಾತ್ರಿ ತನ್ನನ್ನು ಪರೀಕ್ಷಿಸಲು ಬಂದಿದ್ದ ವೈದ್ಯನಿಗೆ ಚಾಕುವಿನಿಂದ ಇರಿದಿದ್ದಾನೆ. ಅವರನ್ನು ರಕ್ಷಿಸಲು ಮುಂದಾದ ಮತ್ತೊಬ್ಬ ವೈದ್ಯರ ಮೇಲೂ ರೋಗಿ ಹಲ್ಲೆ ನಡೆಸಿದ್ದಾನೆ.

    ವರದಿಗಳ ಪ್ರಕಾರ, ಹಣ್ಣುಗಳನ್ನು ಕತ್ತರಿಸಲು ಪಕ್ಕದಲ್ಲಿಟ್ಟಿದ್ದ ಚಾಕುವಿನಿಂದ ವ್ಯಕ್ತಿ ಹಲ್ಲೆ ನಡೆಸಿದ್ದಾನೆ. ಆತನನ್ನು ಪರೀಕ್ಷಿಸಲು ವೈದ್ಯರೊಬ್ಬರು ಬಂದಿದ್ದು, ಈ ವೇಳೆ ಹಣ್ಣು ತಿನ್ನಲು ಬಯಸುತ್ತೀರಾ? ಎಂದು ಕೇಳಿದ್ದಾರೆ. ಬಳಿಕ ತನಗೆ ತಾನೇ ಇರಿದುಕೊಂಡಿರುವ ಗಾಯವನ್ನು ಪರೀಕ್ಷಿಸಲು ವೈದ್ಯ ಮುಂದಾದಾಗ ಆತ ನಿರಾಕರಿಸಿದ್ದಾನೆ. ಬಳಿಕ ಆತ ಚಾಕುವಿನಿಂದ ವೈದ್ಯನಿಗೆ ಇರಿದಿದ್ದಾನೆ. ಇದನ್ನೂ ಓದಿ: ಚಾಮುಂಡಿಬೆಟ್ಟದ ಸಮೀಪ 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್‍ನಲ್ಲಿ ಬೆಂಕಿ!

    ಇದನ್ನು ಗಮನಿಸಿದ ಮತ್ತೊಬ್ಬ ವೈದ್ಯ ಅವರನ್ನು ರಕ್ಷಿಸಲು ಬಂದಾಗ ಅವರ ಮೇಲೂ ವ್ಯಕ್ತಿ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗುತ್ತಿದೆ ಎಂದಿದ್ದಾರೆ.

    ಹಲ್ಲೆ ನಡೆಸಿರುವ ವ್ಯಕ್ತಿ ಮಾನಸಿಕ ಅಸ್ವಸ್ಥ ಎನ್ನಲಾಗಿದೆ. ಸದ್ಯ ಹಲ್ಲೆಗೊಳಗಾದ ವೈದ್ಯರಿಬ್ಬರ ಸ್ಥಿತಿ ಸ್ಥಿರವಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ – 32 ಮಂದಿಗೆ ಗಾಯ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಶ್ದಿ ಆರೋಗ್ಯದಲ್ಲಿ ಚೇತರಿಕೆ – ವೆಂಟಿಲೇಟರ್‌ನಿಂದ ಬಿಡುಗಡೆ

    ರಶ್ದಿ ಆರೋಗ್ಯದಲ್ಲಿ ಚೇತರಿಕೆ – ವೆಂಟಿಲೇಟರ್‌ನಿಂದ ಬಿಡುಗಡೆ

    ವಾಷಿಂಗ್ಟನ್: ಶುಕ್ರವಾರ ನ್ಯೂಯಾರ್ಕ್ನಲ್ಲಿ ನಡೆದ ಸಾಹಿತ್ಯ ಕಾರ್ಯಕ್ರಮವೊಂದರಲ್ಲಿ ಚಾಕು ಇರಿತಕ್ಕೆ ಒಳಗಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಲೇಖಕ ಸಲ್ಮಾನ್ ರಶ್ದಿ ಅವರನ್ನು ನಿನ್ನೆ ರಾತ್ರಿ ವೆಂಟಿಲೇಟರ್‌ನಿAದ ತೆಗೆಯಲಾಗಿದೆ. ರಶ್ದಿ ಅವರು ಇದೀಗ ಮಾತನಾಡುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.

    ಚಾಕು ಇರಿತಕ್ಕೊಳಗಾದ ರಶ್ದಿ ಅವರನ್ನು ವಾಯುವ್ಯ ಪೆನ್ಸಿಲ್ವೇನಿಯಾದ ಆಸ್ಪತ್ರೆಗೆ ಏರ್‌ಲಿಫ್ಟ್ ಮಾಡಲಾಗಿತ್ತು. ದಾಳಿಯಿಂದ ರಶ್ದಿಯ ತೋಳಿನ ನರಗಳು ಹಾಗೂ ಪಿತ್ತಜನಕಾಂಗ ಹಾನಿಗೊಂಡಿತ್ತು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಬಂಧಿತ ಉಗ್ರರ ವಿಚಾರಣೆಯ ವೇಳೆ ಮಾಹಿತಿ ಬಹಿರಂಗ- ಗುಪ್ತಚರ ಇಲಾಖೆಯಿಂದ ಎಚ್ಚರಿಕೆ

    ಸಲ್ಮಾನ್ ರಶ್ದಿ ಅವರನ್ನು ಚಾಕುವಿನಿಂದ ಇರಿದ ಆರೋಪಿ ಹದಿ ಮತರ್ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. ಆತ ಪೂರ್ವಯೋಜಿತ ದಾಳಿ ನಡೆಸಿ, ರಶ್ದಿಗೆ 10 ಬಾರಿ ಚಾಕುವಿನಿಂದ ಇರಿದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಧ್ವಜಾರೋಹಣಕ್ಕೆ ಈದ್ಗಾ ಮೈದಾನದಲ್ಲಿ ಸಿದ್ಧತೆ- ಅಹಿತಕರ ಘಟನೆ ನಡೆಯದಂತೆ ಖಾಕಿ ಭದ್ರತೆ

    ಸದ್ಯ ಇದೀಗ ರಶ್ದಿ ಅವರು ಚೇತರಿಸಿಕೊಳ್ಳುತ್ತಿದ್ದು, ಅವರಿಗೆ ಅಳವಡಿಸಲಾಗಿದ್ದ ವೆಂಟಿಲೇಟರ್ ಅನ್ನು ತೆಗೆಯಲಾಗಿದೆ. ಈಗ ಅವರು ಮಾತನಾಡುತ್ತಿದ್ದಾರೆ. ಅವರು ಬೇಗನೆ ಸಂಪೂರ್ಣವಾಗಿ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸೋಣ ಎಂದು ಷಟೌಕ್ವಾ ಸಂಸ್ಥೆಯ ಅಧ್ಯಕ್ಷ ಮೈಕೆಲ್ ಹಿಲ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]