ಚೆನ್ನೈ: ತಮಿಳುನಾಡು (Tamil Nadu) ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ (M.K Stalin) ಅವರಿಗೆ ಮುಂಜಾನೆ ವಾಕ್ ಮಾಡುವಾಗ ಸ್ವಲ್ಪ ತಲೆಸುತ್ತು ಬಂದಿದೆ. ಅವರನ್ನು ಚೆನ್ನೈ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಅವರನ್ನು ಪರೀಕ್ಷಿಸಿ, ಅಗತ್ಯ ಟೆಸ್ಟ್‌ಗಳನ್ನು ಮಾಡಿದ್ದಾರೆ.
ಅವರು ಬೇಗನೆ ಚೇತರಿಸಿಕೊಳ್ಳಲಿ ಮತ್ತು ಕರ್ತವ್ಯಗಳನ್ನು ಪುನರಾರಂಭಿಸಲಿ ಎಂದು ಅವರು ಅಭಿಮಾನಿಗಳು ಹಾಗೂ ರಾಜಕೀಯ ನಾಯಕರು ಹಾರೈಸಿದ್ದಾರೆ.
ಚೆನ್ನೈ: ನಮ್ಮ ಸರ್ಕಾರ ದ್ವಿಭಾಷಾ ನೀತಿಗೆ (Two Language Policy) ಬದ್ಧವಾಗಿದೆ. ಕೇಂದ್ರದ 2 ಸಾವಿರ ಕೋಟಿ ರೂ. ನಿಧಿಯನ್ನು ಕಳೆದುಕೊಂಡರೂ ನಾವು ನಮ್ಮ ಸಿದ್ಧಾಂತದಲ್ಲಿ ರಾಜಿಯಾಗುವುದಿಲ್ಲ ಎಂದು ತಮಿಳುನಾಡು (Tamil Nadu) ಸರ್ಕಾರ ತನ್ನ ಬಜೆಟ್‌ನಲ್ಲಿ ಹೇಳಿಕೊಂಡಿದೆ.
ಮುಂದಿನ ವರ್ಷ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ದ್ರಾವಿಡ ಮುನ್ನೇತ್ರ ಕಳಗಂ (DMK) ಸರ್ಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್ (Budget) ಅನ್ನು ಇಂದು ವಿಧಾನಸಭೆಯಲ್ಲಿ ಹಣಕಾಸು ಸಚಿವ ತಂಗಮ್ ತೆನರಸು ಮಂಡಿಸಿದರು. ಇದನ್ನೂ ಓದಿ: ಬಜೆಟ್ ಪ್ರತಿಯಲ್ಲಿ ರೂಪಾಯಿ ಚಿಹ್ನೆ ‘₹’ ಕೈಬಿಟ್ಟ ತಮಿಳುನಾಡು
ಈ ವೇಳೆ ತಮಿಳುನಾಡು ತನ್ನ ಸ್ವಾಭಿಮಾನವನ್ನು ರಕ್ಷಿಸಿಕೊಳ್ಳುವಲ್ಲಿ ದೃಢವಾಗಿ ನಿಲ್ಲುತ್ತದೆ ಮತ್ತು ಕೇಂದ್ರ ಸರ್ಕಾರದ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ತಮಿಳುನಾಡು ಆರ್ಥಿಕ ಸಹಾಯಕ್ಕಾಗಿ ತನ್ನ ನಿಲುವನ್ನು ಕೈಬಿಡುವುದಿಲ್ಲ. ತ್ರಿಭಾಷಾ ನೀತಿಯನ್ನು ಅಳವಡಿಸಿಕೊಳ್ಳಲು ನಾವು ನಿರಾಕರಿಸಿದ ಕಾರಣ ಸಮಗ್ರ ಶಿಕ್ಷಾ ಅಭಿಯಾನ (ಎಸ್‌ಎಸ್‌ಎ) ಯೋಜನೆಯಡಿ ಕೇಂದ್ರವು 2 ಸಾವಿರ ಕೋಟಿ ರೂ.ಗಿಂತ ಹೆಚ್ಚಿನ ಹಣವನ್ನು ತಡೆಹಿಡಿದರೆ ನಮ್ಮ ಸರ್ಕಾರ ಶಾಲೆಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಹಣವನ್ನು ನೀಡುತ್ತದೆ. ಶಿಕ್ಷಕರ ವೇತನವನ್ನು ತನ್ನ ಸ್ವಂತ ಸಂಪನ್ಮೂಲಗಳ ಬಳಸಿ ಪಾವತಿಸುತ್ತದೆ ಎಂದು ಅವರು ತಿಳಿಸಿದರು.
ತಮಿಳುನಾಡು ಸರ್ಕಾರದ ಬಜೆಟ್ ಮಂಡನೆ ವೇಳೆ ಎಐಎಡಿಎಂಕೆ ಸಭಾತ್ಯಾಗ ಮಾಡಿತು.
ಚೆನ್ನೈ : ಕೇಂದ್ರ ಸರ್ಕಾರದೊಂದಿಗಿನ ಭಾಷಾ ವಿವಾದ ನಡೆಸುತ್ತಿರುವ ತಮಿಳುನಾಡು ಈಗ ಮತ್ತೆ ಒಂದು ಹೆಜ್ಜೆ ಮುಂದಕ್ಕೆ ಇಟ್ಟಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ (MK Stalin) 2025-26 ರ ರಾಜ್ಯ ಬಜೆಟ್‌ನಲ್ಲಿ ರೂಪಾಯಿಯ ಅಧಿಕೃತ ಚಿಹ್ನೆ ‘₹’ ಕೈ ಬಿಟ್ಟಿದ್ದು ಬದಲಿಗೆ ‘ರುಬಾಯಿ’ (ತಮಿಳಿನಲ್ಲಿ ರೂಪಾಯಿ) ಯಿಂದ ‘ರು’ ಅನ್ನು ಆಯ್ಕೆ ಮಾಡಿಕೊಂಡು ಹೊಸ ಚರ್ಚೆಯನ್ನು ಹುಟ್ಟು ಹಾಕಿದ್ದಾರೆ.
ನಾಳೆ ರಾಜ್ಯ ವಿಧಾನಸಭೆಯಲ್ಲಿ ಮಂಡಿಸಲಾಗುವ ರಾಜ್ಯ ಬಜೆಟ್‌ನ (State Budget) ಟೀಸರ್ ಅನ್ನು ಸ್ಟಾಲಿನ್ ತಮ್ಮ X ಖಾತೆಯಲ್ಲಿ ಹಂಚಿಕೊಂಡಿದ್ದು, “ಸಮಾಜದ ಎಲ್ಲಾ ವರ್ಗಗಳಿಗೆ ಅನುಕೂಲವಾಗುವ, ತಮಿಳುನಾಡಿನ (Tamil Nadu) ವ್ಯಾಪಕ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳುವ ಬಜೆಟ್” ಎಂದು ಬರೆದುಕೊಂಡಿದ್ದಾರೆ.
The DMK Government’s State Budget for 2025-26 replaces the Rupee Symbol designed by a Tamilian, which was adopted by the whole of Bharat and incorporated into our Currency.
Thiru Udhay Kumar, who designed the symbol, is the son of a former DMK MLA.
ಹಿಂದಿನ ಎರಡು ಬಜೆಟ್‌ಗಳಲ್ಲಿ, ರಾಜ್ಯವು ತನ್ನ ಲೋಗೋಗಳಿಗಾಗಿ ರೂಪಾಯಿ ಚಿಹ್ನೆಯನ್ನು ಬಳಸಿತ್ತು. 2023-24ರ ಬಜೆಟ್‌ನಲ್ಲಿಯೂ ಸಹ ಈ ಚಿಹ್ನೆಯನ್ನು ಪ್ರಮುಖವಾಗಿ ತೋರಿಸಲಾಗಿತ್ತು, ಇದನ್ನು ಐಐಟಿ-ಗುವಾಹಟಿಯ ಪ್ರಾಧ್ಯಾಪಕರೊಬ್ಬರು ವಿನ್ಯಾಸಗೊಳಿಸಿದ್ದರು. ‘₹’ ಯಲ್ಲಿ ಹಿಂದಿಯ ‘ರಾ’ ಹೋಲಿಕೆ ಇರುವ ಹಿನ್ನೆಲೆಯಲ್ಲಿ ಬಳಸದಿರಲು ಸರ್ಕಾರ ನಿರ್ಧರಿಸಿದೆ. ರಾಷ್ಟ್ರೀಯ ಕರೆನ್ಸಿ ಚಿಹ್ನೆಯನ್ನು ರಾಜ್ಯವೊಂದು ತಿರಸ್ಕರಿಸಿರುವುದು ಇದೇ ಮೊದಲು.
ರೂಪಾಯಿ ಚಿಹ್ನೆಯನ್ನು ಬದಲಾಯಿಸುವ ತಮಿಳುನಾಡು ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಮುಖ್ಯಮಂತ್ರಿ ಸ್ಟಾಲಿನ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರೂಪಾಯಿ ಚಿಹ್ನೆಯನ್ನು ವಿನ್ಯಾಸಗೊಳಿಸಿದ್ದು ತಮಿಳುನಾಡಿನ ಉದಯ್ ಕುಮಾರ್, ಉದಯ್ ಕುಮಾರ್, ಮಾಜಿ ಡಿಎಂಕೆ ಶಾಸಕರ ಮಗ ಎನ್ನುವುದು ಇಲ್ಲಿ ಗಮನಿಸಬೇಕು. ನೀವು ಎಷ್ಟು ಮೂರ್ಖರು ಮಿಸ್ಟರ್ ಎಂಕೆ ಸ್ಟಾಲಿನ್ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಉಪಗ್ರಹಗಳ ಅನ್‌ಡಾಕ್ ಕಾರ್ಯ ಯಶಸ್ವಿ – ಇಸ್ರೋ ಮತ್ತೊಂದು ಸಾಧನೆ; ಚಂದ್ರಯಾನ-4ಕ್ಕೆ ದಾರಿ
Udaya Kumar Dharmalingam is an Indian academic and designer, son of a former DMK MLA, who designed the Indian rupee (₹) sign, which was accepted by Bharat.
Chief Minister MK Stalin is insulting Tamilians by dropping the ₹ sign from the Tamil Nadu Budget 2025-26 document.
ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಕೂಡ ಎಂ.ಕೆ ಸ್ಟಾಲಿನ್ ಅವರನ್ನು ಟೀಕಿಸಿದರು. ಉದಯ ಕುಮಾರ್ ಧರ್ಮಲಿಂಗಂ ಒಬ್ಬ ಭಾರತೀಯ ಶಿಕ್ಷಣ ತಜ್ಞ ಮತ್ತು ವಿನ್ಯಾಸಕಾರ, ಮಾಜಿ ಡಿಎಂಕೆ ಶಾಸಕರ ಮಗ, ಅವರು ಭಾರತೀಯ ರೂಪಾಯಿ ಚಿಹ್ನೆಯನ್ನು ವಿನ್ಯಾಸಗೊಳಿಸಿದರು, ಇದನ್ನು ಭಾರತ ಒಪ್ಪಿಕೊಂಡಿತು. 2025-26ರ ತಮಿಳುನಾಡು ಬಜೆಟ್ ದಾಖಲೆಯಿಂದ ಚಿಹ್ನೆಯನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ತಮಿಳರನ್ನು ಅವಮಾನಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
– ಕ್ಷೇತ್ರ ವಿಂಗಡಣೆ 30 ವರ್ಷಗಳ ಕಾಲ ಮುಂದೂಡಿ – ತಮಿಳುನಾಡು ಸರ್ವಪಕ್ಷಗಳ ಸಭೆ ನಿರ್ಣಯ
ಚೆನ್ನೈ: ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆ (Lok Sabha) ಕ್ಷೇತ್ರಗಳ ಪುನರ್‌ವಿಂಗಡಣೆ ಮತ್ತು ತ್ರಿಭಾಷಾ ಸೂತ್ರ (Three Language Formula) ಜಾರಿ ವಿಚಾರದಲ್ಲಿ ತಮಿಳುನಾಡು (Tamil Nadu) ಸರ್ಕಾರ ನಿರ್ಣಾಯಕ ಸಮರ ಸಾರಿದೆ.
ಇಂದು ಸಿಎಂ ಸ್ಟಾಲಿನ್ (CM Stalin) ಕರೆದಿದ್ದ ತಮಿಳುನಾಡು ಸರ್ವ ಪಕ್ಷ ಸಭೆಯಲ್ಲಿ ಮಹತ್ವದ ತೀರ್ಮಾನ ಪ್ರಕಟವಾಗಿದೆ. 2026ರ ಜನಗಣತಿ ಆಧಾರದಡಿ ಲೋಕಸಭೆ ಕ್ಷೇತ್ರಗಳ ಪುನರ್‌ವಿಂಗಡಣೆ ಮಾಡಬಾರದು. ಈ ಪ್ರಕ್ರಿಯೆಯನ್ನು ಮುಂದಿನ 30 ವರ್ಷಕ್ಕೆ ಮುಂದೂಡಬೇಕು. ಅಲ್ಲಿಯವರೆಗೂ 1971ರ ಜನಗಣತಿ ಆಧಾರದ ಮೇಲೆ ಹಾಲಿ ಇರುವ ಲೋಕಸಭೆ ಕ್ಷೇತ್ರಗಳೇ ಮುಂದುವರೆಯಬೇಕು ಎಂದು ಒತ್ತಾಯಿಸಿ ನಿರ್ಣಯ ಕೈಗೊಳ್ಳಲಾಗಿದೆ.
இந்தி எதிர்ப்புப் போர்வையில், வளையலைத் திருடும் குன்னூர் நகர்மன்ற 25-வது வார்டு திமுக கவுன்சிலர் திரு ஜாகிர் உசேன்.
ಈಗ ಏನಾದರೂ ಕ್ಷೇತ್ರಗಳ ಪುನರ್‌ವಿಂಗಡಣೆ ಆದರೆ ತಮಿಳುನಾಡು 12 ಸ್ಥಾನ ಕಳೆದುಕೊಳ್ಳುತ್ತದೆ ಎಂಬ ಆತಂಕನ್ನು ವ್ಯಕ್ತಪಡಿಸಿದೆ. ತ್ರಿಭಾಷಾ ಸೂತ್ರವನ್ನು ತೀವ್ರವಾಗಿ ವಿರೋಧಿಸಿದ ಡಿಎಂಕೆ ತಮಿಳುನಾಡಿನ ಎಲ್ಲಾ ಕೇಂದ್ರ ಕಚೇರಿಗಳಲ್ಲಿ ಹಿಂದಿಯನ್ನು (Hindi) ತೊಲಗಿಸಬೇಕು. ರೈಲುಗಳಿಗೆ ಹಿಂದಿಯಲ್ಲಿ ಹೆಸರಿಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದೆ. ಇದನ್ನೂ ಓದಿ: ಕುಂಭಮೇಳ | ಯುಪಿಯ ಮೂರು ಹೆದ್ದಾರಿಗಳಲ್ಲಿ 40 ಲಕ್ಷ ದಾಖಲೆಯ ವಾಹನಗಳ ಸಂಚಾರ
ಹಿಂದಿ ಹೇರಿಕೆ ಖಂಡಿಸಿ ನಡೆಸಲಾದ ಪ್ರತಿಭಟನೆಯಲ್ಲಿ ಡಿಎಂಕೆ ಕೌನ್ಸಿಲರ್ ಜಾಕೀರ್ ಹುಸೇನ್ (DMK Councillor Zakir Hussain) ತಮ್ಮ ಪಕ್ಕ ನಿಂತಿದ್ದ ಮಹಿಳೆಯ ಕೈ ಬಳೆ ಎಳೆಯುತ್ತಿರುವ ವಿಡಿಯೋ ವೈರಲ್ ಆಗಿದೆ.
ಈ ವಿಡಿಯೋವನ್ನು ಇಟ್ಟುಕೊಂಡು ಬಿಜೆಪಿ ಡಿಎಂಕೆ ವಿರುದ್ಧ ಕಿಡಿಕಾರಿದೆ. ಹಿಂದಿ ವಿರೋಧಿ ಪ್ರತಿಜ್ಞೆ ಹೆಸರಲ್ಲಿ ಬಳೆ ಕಳ್ಳತನಕ್ಕೆ ಇಳಿದಿದ್ದಾರೆ..ಕಳ್ಳರಿಗೂ ಡಿಎಂಕೆಗೂ ವ್ಯತ್ಯಾಸವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಟೀಕಿಸಿದ್ದಾರೆ.
ಚೆನ್ನೈ: ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (Stalin) ಅವರ ಪುತ್ರ, ತಮಿಳುನಾಡು (Tamil Nadu) ಸಚಿವ ಉದಯನಿಧಿ ಸ್ಟಾಲಿನ್ (Udhayanidhi Stalin) ಅವರು ಉಪಮುಖ್ಯಮಂತ್ರಿ ಹುದ್ದೆಗೆ ಏರುವ ಸಾಧ್ಯತೆಯಿದೆ.
ಉದಯನಿಧಿ ಅವರ ನೇಮಕದ ಕುರಿತು ಶೀಘ್ರವೇ ಘೋಷಣೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳನ್ನು ಆಧಾರಿಸಿ ವರದಿ ತಿಳಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಉದಯನಿಧಿ ಅವರು, ಇದು ಕೇವಲ ವಂದತಿ ಅಷ್ಟೇ. ನೀವು ಸಿಎಂ ಅವರಿಗೆ ಪ್ರಶ್ನೆ ಕೇಳಿ. ಈ ಬಗ್ಗೆ ಸಿಎಂ ಮಾತ್ರ ನಿರ್ಧಾರ ಕೈಗೊಳ್ಳುವ ಹಕ್ಕು ಹೊಂದಿದ್ದಾರೆ ಎಂದು ಉತ್ತರಿಸಿದರು.
ಈ ವರ್ಷದ ಜುಲೈನಲ್ಲಿ ನಮ್ಮ ಸರ್ಕಾರದ ಎಲ್ಲಾ ಮಂತ್ರಿಗಳು ಉಪಮುಖ್ಯಮಂತ್ರಿಗಳು ಎಂದು ಉದಯನಿಧಿ ಸ್ಟಾಲಿನ್ ಪ್ರತಿಕ್ರಿಯಿಸಿದ್ದರು.
2026ರ ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಉದಯನಿಧಿ ಅವರನ್ನು ಉಪಮುಖ್ಯಮಂತ್ರಿ ಹುದ್ದೆಗೆ ಏರಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಈಗಲೇ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದರೆ ಚುನಾವಣೆಯಲ್ಲಿ ಪಕ್ಷಕ್ಕೆ ಲಾಭವಾಗಲಿದೆ ಎಂದು ತಿಳಿಸಿದ್ದಾರೆ
ಉದಯನಿಧಿ ಅವರು ಕ್ರೀಡಾ ಮತ್ತು ಯುವ ಕಲ್ಯಾಣ ಸಚಿವರಾಗಿರುವುದರ ಜೊತೆಗೆ ವಿಶೇಷ ಕಾರ್ಯಕ್ರಮ ಅನುಷ್ಠಾನದ ಪ್ರಮುಖ ಖಾತೆಯನ್ನು ನಿಭಾಯಿಸುತ್ತಾರೆ.
– ಕರ್ನಾಟಕದಲ್ಲಿ ಮೇಕೆದಾಟು ಯೋಜನೆಗೆ ಪಾದಯಾತ್ರೆ ನಡೆಸಿದ್ದ ಕಾಂಗ್ರೆಸ್
ಚೆನ್ನೈ: ಲೋಕಸಭಾ ಚುನಾವಣೆಯಲ್ಲಿ (Lok Sabha Election) INDIA ಒಕ್ಕೂಟ ಗೆದ್ದರೆ ಮೇಕೆದಾಟು ಯೋಜನೆಗೆ (Mekedatu Project) ತಡೆ ಒಡ್ಡುವುದಾಗಿ ಡಿಎಂಕೆ ಘೋಷಣೆ ಮಾಡಿದೆ.
ಲೋಕಸಭಾ ಚುನಾವಣೆಗೆ ತಮಿಳುನಾಡಿನಲ್ಲಿ (Tamil Nadu) ಆಡಳಿತ ನಡೆಸುತ್ತಿರುವ ಸ್ಟಾಲಿನ್ (CM Stalin) ನೇತೃತ್ವದ ಡಿಎಂಕೆ ಪಕ್ಷ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ಕಾವೇರಿ ನದಿಗೆ (Cauvery Water) ಅಡ್ಡಲಾಗಿ ಕರ್ನಾಟಕ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಅಣೆಕಟ್ಟೆ ಯೋಜನೆ ನಿರ್ಮಾಣಕ್ಕೆ ತಡೆ ಒಡ್ಡುವುದಾಗಿ ಹೇಳಿದೆ.
INDIA ಒಕ್ಕೂಟದಲ್ಲಿ ಕಾಂಗ್ರೆಸ್ (Congress) ಪ್ರಧಾನ ಪಕ್ಷವಾಗಿದ್ದು ಕರ್ನಾಟಕದಲ್ಲಿ (Karnataka) ಕಾಂಗ್ರೆಸ್ ಸರ್ಕಾರವೇ ಅಧಿಕಾರ ನಡೆಸುತ್ತಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೊದಲು ಡಿಕೆ ಶಿವಕುಮಾರ್ (DK Shivakumar) ನೇತೃತ್ವದಲ್ಲಿ ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಸಹ ನಡೆಸಿತ್ತು. ಈಗ ಮೈತ್ರಿ ಭಾಗವಾಗಿರುವ ಡಿಎಂಕೆ ಈ ವಿಚಾರವನ್ನೇ ಪ್ರಣಾಳಿಕೆಯಲ್ಲಿ ಸೇರಿಸಿದ್ದು ಬಿರುಗಾಳಿ ಎಬ್ಬಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ಸದ್ಗುರು ಜಗ್ಗಿ ವಾಸುದೇವ್‌ಗೆ ಮೆದುಳಿನ ಶಸ್ತ್ರಚಿಕಿತ್ಸೆ!
ಪ್ರಣಾಳಿಕೆಯಲ್ಲಿ ಏನಿದೆ?
ರಾಜ್ಯಗಳಿಗೆ ಫೆಡರಲ್ ಹಕ್ಕುಗಳನ್ನು ಒದಗಿಸಲು ಭಾರತೀಯ ಸಂವಿಧಾನವನ್ನು ಬದಲಾವಣೆ, ಚೆನ್ನೈನಲ್ಲಿರುವ ಸುಪ್ರೀಂ ಕೋರ್ಟ್ ಪೀಠ ಸ್ಥಾಪನೆ, ಪುದುಚೇರಿಗೆ ರಾಜ್ಯ ಸ್ಥಾನಮಾನ, ರಾಷ್ಟ್ರೀಯ ಶಿಕ್ಷಣ ನೀತಿ (NEP) ಹಿಂಪಡೆಯಲಾಗುವುದು, ಮಹಿಳೆಯರಿಗೆ 33% ಮೀಸಲಾತಿ ಜಾರಿ, ಸರ್ಕಾರಿ ಶಾಲೆಗಳಿಗೆ ಬೆಳಗಿನ ಉಪಾಹಾರ ಯೋಜನೆ, NEET ನಿಷೇಧ, ಭಾರತದಾದ್ಯಂತ ಮಹಿಳೆಯರಿಗೆ ಪ್ರತಿ ತಿಂಗಳು 1,000 ರೂ. ನೀಡಲಾಗುತ್ತದೆ.
ಹೆದ್ದಾರಿಗಳಲ್ಲಿರುವ ಟೋಲ್ ಗೇಟ್ ರದ್ದು, ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (ಸಿಎಎ) ತೆಗೆದುಹಾಕಲಾಗುತ್ತದೆ. ರಾಜ್ಯಪಾಲರಿಗೆ ಅಧಿಕಾರ ನೀಡುವ 361ನೇ ವಿಧಿಯನ್ನು ರದ್ದು, ರಾಜ್ಯಪಾಲರನ್ನು ನೇಮಿಸುವ ಅಧಿಕಾರವನ್ನು ಮುಖ್ಯಮಂತ್ರಿಗೆ ನೀಡುವುದು.
ಚೆನ್ನೈ: ತಮಿಳುನಾಡು (Tamilnadu), ಪಶ್ಚಿಮ ಬಂಗಾಳದಲ್ಲಿ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷ ತಾರಕಕ್ಕೆ ಏರಿದೆ. ತಮಿಳುನಾಡಿನಲ್ಲಿ ಇಂದಿನಿಂದ ಬಜೆಟ್ ಅಧಿವೇಶನ (Budget Session) ಆರಂಭ ಆಗಿದೆ.
ಮೊದಲ ದಿನವಾದ ಇಂದು ಗವರ್ನರ್ ಅಧಿವೇಶನ ಉದ್ದೇಶಿಸಿ ಮಾತನಾಡಬೇಕಿತ್ತು. ಆದರೆ ಭಾಷಣ ಮಾಡಲು ನಿರಾಕರಿಸಿದ್ದಾರೆ. ರಾಷ್ಟ್ರಗೀತೆಯನ್ನ ಸ್ಟಾಲಿನ್ ಸರ್ಕಾರ ಗೌರವಿಸಿಲ್ಲ ಎಂದು ಆರೋಪಿಸಿ ಕೆಲವೇ ನಿಮಿಷಗಳಲ್ಲಿ ಸದನದಿಂದ ನಿರ್ಗಮಿಸಿದ್ದಾರೆ. ರಾಜ್ಯಪಾಲರ ಭಾಷಣಕ್ಕೆ ಮೊದಲು ರಾಷ್ಟ್ರಗೀತೆ ಹಾಡಿ ಎಂದು ಪದೇ ಪದೇ ಮಾಡಿಕೊಂಡ ಮನವಿಯನ್ನು ನಿರ್ಲಕ್ಷಿಸಲಾಯ್ತು.
ಸರ್ಕಾರ ಬರೆದುಕೊಟ್ಟ ಭಾಷಣದಲ್ಲಿನ ತುಂಬಾ ವಿಷಯಗಳನ್ನು ನಾನು ನೈತಿಕ ಕಾರಣಗಳಿಂದ ಅಂಗೀಕರಿಸಿಲ್ಲ. ಅವುಗಳನ್ನು ವಿರೋಧಿಸಿದ್ದೇನೆ ಕೂಡ. ಭಾಷಣದಲ್ಲಿ ಇವನ್ನು ಪ್ರಸ್ತಾಪ ಮಾಡಿದ್ರೆ ಸಂವಿಧಾನದ ಅಣಕ ಮಾಡಿದಂತೆ. ಅದಕ್ಕೆ ಭಾಷಣ ಇಲ್ಲಿಗೆ ನಿಲ್ಲಿಸ್ತಿದ್ದೇನೆ ಎನ್ನುತ್ತಾ ಸದನದಿಂದ ರಾಜ್ಯಪಾಲ ರವಿ ನಿರ್ಗಮಿಸಿದ್ರು. ಇದನ್ನೂ ಓದಿ: ಇಡಿ, ಸಿಬಿಐ ಮೂಲಕ ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ: ಡಿಕೆಶಿ
ಇತ್ತೀಚಿಗೆ ಕೇರಳ ಗವರ್ನರ್ ಆರೀಫ್ ಮಹ್ಮದ್ ಖಾನ್ ಕೂಡ ಹೀಗೆ ಮಾಡಿದ್ರು ಎನ್ನುವುದು ಗಮನಾರ್ಹ. ಮತ್ತೊಂದ್ಕಡೆ ಮಮತಾ ಸರ್ಕಾರದ ವಿರುದ್ಧ ಬಂಗಾಳ ರಾಜ್ಯಪಾಲ ಆನಂದ್ ಬೋಸ್ ಸಮರ ಸಾರಿದ್ದಾರೆ. ಸಂದೇಶ್‍ಖಲಿಯಲ್ಲಿ ಟಿಎಂಸಿ ನಾಯಕ ಶಾಜಹಾನ್ ಮತ್ತು ಬೆಂಬಲಿಗರು ನಡೆಸಿದ ಲೈಂಗಿಕ ದೌರ್ಜನ್ಯವನ್ನು ರಾಜ್ಯಪಾಲರು ತೀವ್ರವಾಗಿ ಖಂಡಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರಲ್ಲಿ ಧೈರ್ಯ ತುಂಬಿದ ಅವರು, ಈ ಘಟನೆಯಿಂದ ನನಗೆ ಆಘಾತವಾಗಿದೆ ಎಂದಿದ್ದಾರೆ.
ಬೆಂಗಳೂರು: ಸ್ಟಾಲಿನ್ (MK Stalin) ಸ್ನೇಹಕ್ಕಾಗಿ ನೀರು ಹರಿಸಿ ರಾಜ್ಯದ ಜನತೆಗೆ ದ್ರೋಹ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ (Govinda Karajola) ಹೇಳಿದ್ದಾರೆ.
ಕಾವೇರಿ ನೀರು ನಿಯಂತ್ರಣ ಸಮಿತಿಯು (CWRC) ಯಿಂದ ನಿನ್ನೆ ನೀರು ಬಿಡುವ ಆದೇಶ ವಿಚಾರಕ್ಕೆ ಪ್ರತಿಕ್ರಿಯಿಸಿ, ಮಂಗಳವಾರ ಬಂದ್ ಶಾಂತಿಯುತವಾಗಿ ಆಚರಿಸಲಾಗಿದೆ. ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ನೀರು ಬಿಡ್ತಿದೆ. ಸರ್ಕಾರ ಪರಿಸ್ಥಿತಿ ನಿಭಾಯಿಸುವಲ್ಲಿ ವಿಫಲವಾಗಿದೆ. ಸ್ಟಾಲಿನ್ ಸ್ನೇಹಕ್ಕಾಗಿ ನೀರು ಹರಿಸಿ ರಾಜ್ಯದ ಜನತೆಗೆ ದ್ರೋಹ ಮಾಡುತ್ತಿದ್ದಾರೆ ಎಂದರು.
ತಮಿಳುನಾಡಿಗೆ 32 ಟಿಎಂಸಿ ಅಡಿ ನೀರು ಮಾತ್ರ 1.8 ಲಕ್ಷ ಹೆಕ್ಟೇರ್ ಬೆಳೆಗೆ ಹಂಚಿಕೆ ಆಗಿರೋದು. ಆದರೆ ಅವರು 4 ಲಕ್ಷ ಹೆಕ್ಟೇರ್ ಕುರುವೈ ಬೆಳೆ ಬೆಳೆದಿದ್ದಾರೆ. ಈಗಾಗಲೇ ಅಧಿಕ ನೀರು ಹರಿದು ಹೋಗಿದೆ. ಇದನ್ನು ನಮ್ಮವರು ಮನವರಿಕೆ ಮಾಡಿಕೊಡುವಲ್ಲಿ ವಿಫಲವಾಗಿದ್ದಾರೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಕಡಿಮೆ ಮಳೆ ಆಗಿದೆ. ಬಿದ್ದ ಮಳೆ ಎಲ್ಲಕೆ ಆರೆಸ್ ಜಲಾಶಯಕ್ಕೇ ಹರಿದು ಬರಲ್ಲ ಎಂದು ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿಯವರೇ ತಮಿಳುನಾಡಿಗೆ ಹೋಗಿ: ಸಿ.ಟಿ ರವಿ ಆಗ್ರಹ
ಮಳೆ ಆಧಾರದಲ್ಲಿ ನೀರು ಹಂಚಿಕೆ ಮಾಡಿರೋದು ತಪ್ಪು ಅಂತ ಕೋರ್ಟ್‍ಗೆ ಮನವರಿಕೆ ಮಾಡಿ ಕೊಟ್ಟಿಲ್ಲ. ಇವರ ಪಾರ್ಟ್‍ನರ್ ಸ್ಟಾಲಿನ್ ಸರ್ಕಾರಕ್ಕೆ ಅನುಕೂಲ ಮಾಡಿಕೊಡಲು ನೀರು ಬಿಡುತ್ತಿದ್ದಾರೆ. ಅಕ್ಕಿ ಮೇಲೆ ಆಸೆ ನೆಂಟರ ಮೇಲೆ ಪ್ರೀತಿ ಅನ್ನೋ ನಡೆ ತೋರಿಸ್ತಿದೆ ಸರ್ಕಾರ. 3 ಸಾವಿರ ಕ್ಯೂಸೆಕ್ಸ್ ಅಲ್ಲ ಒಂದು ಹನಿಯನ್ನೂ ನೀರು ಬಿಡಬಾರದು. ಮೇಕೆದಾಟು ಪಾದಯಾತ್ರೆ ಮಾಡಿದವರು ಕಾಂಗ್ರೆಸ್‍ನವರು. ಮೇಕೆದಾಟು ಯೋಜನೆ ನಾವು ಅಧಿಕಾರಕ್ಕೆ ಬಂದು ಮಾಡ್ತೇವೆ ಅಂದಿದ್ರು ಡಿಕೆಶಿ, ಯಾರ ನೆರವೂ ಬೇಕಿಲ್ಲ ಅಂದಿದ್ರು. ಈಗ ಅವರದ್ದೇ ಸರ್ಕಾರ ಇದೆ ಮೇಕೆದಾಟು ಯೋಜನೆ ಮಾಡಲಿ. ಇವತ್ತು ಬಿಜೆಪಿಯಿಂದ ಪ್ರತಿಭಟನೆ ನಡೆಸ್ತಿದ್ದೇವೆ, ಆಗಿರುವ ಅನ್ಯಾಯವನ್ನು ಜನತೆಗೆ ತಿಳಿಸ್ತೇವೆ ಎಂದು ತಿಳಿಸಿದರು.
ಚೆನ್ನೈ: ಕರ್ನಾಟಕದಿಂದ ಕಾವೇರಿ ನೀರು (Cauvery Water) ಬಿಡುವಂತೆ ಪ್ರಧಾನಿ ನರೇಂದ್ರ ಮೋದಿ (PM Modi) ಅವರಿಗೆ ತಮಿಳುನಾಡು ಸಿಎಂ ಸ್ಟಾಲಿನ್ (CM Stalin) ಪತ್ರ ಬರೆದಿದ್ದಾರೆ.
ಜೂನ್, ಜುಲೈ ಅವಧಿಯಲ್ಲಿ ಕರ್ನಾಟಕ 40 ಟಿಎಂಸಿ ನೀರನ್ನು ಹರಿಸಬೇಕಿತ್ತು. ಆದರೆ ಇಲ್ಲಿಯವರೆಗೆ ಕೇವಲ 11 ಟಿಎಂಸಿ ನೀರು ಮಾತ್ರ ಹರಿಸಿದೆ. ಕುರುವೈ ಭತ್ತ ಉಳಿಸಿಕೊಳ್ಳಲು ನೀರಿನ ಅಗತ್ಯವಿದೆ. ಕರ್ನಾಟಕದ (Karnataka) ಬಳಿ ನೀರಿದ್ದರೂ ರಾಜ್ಯಕ್ಕೆ ನೀರು ಬಿಡದೇ ಬಾಕಿ ಉಳಸಿಕೊಂಡಿದೆ ಎಂದು ಉಲ್ಲೇಖಿಸಿದ್ದಾರೆ.
ಕೇಂದ್ರ ಜಲಶಕ್ತಿ ಸಚಿವಾಲಯಕ್ಕೂ ಈಗಾಗಲೇ ಮನವಿ ಮಾಡಲಾಗಿದೆ. ನೀವೂ ನಿರ್ದೇಶನ ನೀಡುವಂತೆ ಕೋರಿ ಸ್ಟಾಲಿನ್ ಮನವಿ ಮಾಡಿದ್ದಾರೆ.
ಅಂತಿಮ ಐತೀರ್ಪು ಪ್ರಕಾರ ಯಾರಿಗೆ ಎಷ್ಟು ನೀರು?
ನ್ಯಾ. ಎನ್.ಪಿ.ಸಿಂಗ್, ನ್ಯಾ.ಸುಧೀರ್ ನಾರಿಯನ್, ನ್ಯಾ.ಎನ್.ಎಸ್. ರಾವ್ ಅವರನ್ನು ಒಳಗೊಂಡ ಕಾವೇರಿ ನ್ಯಾಯಾಧಿಕರಣ 2007ರ ಫೆಬ್ರವರಿ 2ರಂದು ಅಂತಿಮ ಐತೀರ್ಪು (ನ್ಯಾಯಾಲಯಗಳು ವಿಚಾರಣೆ ನಡೆಸಿ ತೀರ್ಪು ನೀಡುತ್ತವೆ. ನ್ಯಾಯಾಧಿಕರಣಗಳು ವಿಚಾರಣೆ ನಡೆಸಿ ನೀಡುವ ಮಧ್ಯಂತರ/ಅಂತಿಮ ತೀರ್ಪಿಗೆ ಐತೀರ್ಪು (Award) ಎಂದು ಕರೆಯಲಾಗುತ್ತದೆ) ಪ್ರಕಟಿಸಿತು. ಈ ಐತೀರ್ಪಿನ ಅನ್ವಯ ಕಾವೇರಿ ಕಣಿವೆಯಲ್ಲಿ 740 ಟಿಎಂಸಿ ನೀರಿದೆ ಎಂದು ಲೆಕ್ಕಹಾಕಲಾಯಿತು. ಕರ್ನಾಟಕಕ್ಕೆ 270 ಟಿಎಂಸಿ, ತಮಿಳುನಾಡಿಗೆ 419 ಟಿಎಂಸಿ, ಕೇರಳಕ್ಕೆ 30 ಟಿಎಂಸಿ, ಪುದುಚೇರಿಗೆ 10, ಪರಿಸರ ಸಂರಕ್ಷಣೆಗೆ 10 ಟಿಎಂಸಿ, ಸಮುದ್ರ ಸೇರುವ ನೀರು 4 ಟಿಎಂಸಿ ಟಿಎಂಸಿ ನೀರನ್ನು ಹಂಚಲಾಯಿತು. ಇದರ ಜೊತೆ ಕಾವೇರಿ ನಿರ್ವಹಣಾ ಮಂಡಳಿಯನ್ನು ರಚಿಸುವಂತೆ ಆದೇಶಿಸಿತು.
ಯಾವ ತಿಂಗಳಿನಲ್ಲಿ ತಮಿಳುನಾಡಿಗೆ ಎಷ್ಟು ಟಿಎಂಸಿ ನೀರು?
ಜೂನ್ 10, ಜುಲೈ 34, ಅಗಸ್ಟ್ 50, ಸೆಪ್ಟೆಂಬರ್ 40, ಅಕ್ಟೋಬರ್ 22, ನವೆಂಬರ್ 15, ಡಿಸೆಂಬರ್ 8, ಜನವರಿ 3, ಫೆಬ್ರವರಿ 2.5, ಮಾರ್ಚ್ 2.5, ಏಪ್ರಿಲ್ 2.5, ಮೇ 2.5 ಸೇರಿ ಒಟ್ಟು 192 ಟಿಎಂಸಿ ನೀರನ್ನು ಕನಾಟಕ ಪ್ರತಿವರ್ಷ ತಮಿಳುನಾಡಿಗೆ ಹರಿಸಬೇಕು.
ಕರ್ನಾಟಕದಿಂದ ನೀರು ಹರಿದಿದೆ ಎಂದು ಪತ್ತೆ ಮಾಡೋದು ಹೇಗೆ?
ತಮಿಳುನಾಡಿನ ಭಾಗದಲ್ಲಿರುವ ಬಿಳಿಗುಂಡ್ಲುವಿನಲ್ಲಿ ಎಷ್ಟು ಪ್ರಮಾಣದ ನೀರು ಹರಿದಿದೆ ಎಂದು ಪತ್ತೆ ಮಾಡಲು ಕೇಂದ್ರ ಜಲ ಆಯೋಗದ ಅಧಿಕಾರಿಗಳು ವರ್ಷವಿಡಿ ನೀರಿನ ಲೆಕ್ಕಾಚಾರ ಹಾಕುತ್ತಿರುತ್ತಾರೆ. ಪ್ರತಿದಿನ ಬೆಳಗ್ಗೆ 8ರಿಂದ 10ರವರೆಗೆ ಎರಡು ಗಂಟೆಗಳ ಕಾಲ 160 ಮೀಟರ್ ಪ್ರದೇಶದ 15 ನಿರ್ದಿಷ್ಟ ಸ್ಥಳಗಳಲ್ಲಿ ಈ ಪರೀಕ್ಷೆ ನಡೆಯುತ್ತದೆ. 7 ಮಂದಿ ಸಿಬ್ಬಂದಿ ದೋಣಿ ಮೂಲಕ ಒಂದು ದಂಡೆಯಿಂದ ಮತ್ತೊಂದು ದಂಡೆಗೆ ಸಾಗಿ ತಮ್ಮ ಜೊತೆ ಇರುವ ಉಪಕರಣವನ್ನು ನೀರಿಗೆ ಬಿಡುತ್ತಾರೆ. ಈ ಮೂಲಕ ಪ್ರತಿ ಸೆಕೆಂಡ್‍ಗೆ ಎಷ್ಟು ನೀರು ಕರ್ನಾಟಕದಿಂದ ತಮಿಳುನಾಡಿಗೆ ಹೋಗುತ್ತಿದೆ ಎಂಬುದನ್ನು ಪತ್ತೆ ಮಾಡುತ್ತಾರೆ. ಈ ಸಿಬ್ಬಂದಿಯನ್ನು ಕರ್ನಾಟಕ, ತಮಿಳುನಾಡಿನ ಅಧಿಕಾರಿಗಳು ನೇರವಾಗಿ ಸಂಪರ್ಕಿಸುವಂತಿಲ್ಲ. ರಾಜ್ಯ ಸರ್ಕಾರಗಳು ಅಥವಾ ನ್ಯಾಯಾಲಯಗಳು ಕೇಳಿದರೆ ಮಾತ್ರ ಮಾಹಿತಿಯನ್ನು ನೀಡಲಾಗುತ್ತದೆ.
ಕ್ಯೂಸೆಕ್ ಮತ್ತು ಟಿಎಂಸಿ ಎಂದರೆ ಎಷ್ಟು?
ಕ್ಯೂಸೆಕ್ ಎಂಬುದು Cubic feet per Secondನ ಹ್ರಸ್ವರೂಪ ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.
ಚೆನೈ: ತಮಿಳುನಾಡಿನಲ್ಲಿ ನಡೆಯುತ್ತಿರುವ ವಲಸೆ ಕಾರ್ಮಿಕರ ಮೇಲಿನ ಹಲ್ಲೆಗೆ ಆಡಳಿತ ಪಕ್ಷ ಡಿಎಂಕೆ ಮತ್ತು ಸಿಎಂ ಸ್ಟಾಲಿನ್ (Stalin) ಕಾರಣ ಎಂದು ಆರೋಪಿಸಿದ್ದ ರಾಜ್ಯ ಬಿಜೆಪಿ (BJP) ಅಧ್ಯಕ್ಷ ಅಣ್ಣಾಮಲೈ (Annamalai) ವಿರುದ್ಧ ಸೈಬರ್ ಪೊಲೀಸರು (Cyber Crime Division) ಪ್ರಕರಣ ದಾಖಲಿಸಿದ್ದಾರೆ. ಹಿಂಸಾಚಾರಕ್ಕೆ ಪ್ರಚೋದನೆ ನೀಡುವಂತಹ ಹೇಳಿಕೆ ಕೊಟ್ಟಿದ್ದಾರೆಂದು ಪೊಲೀಸರು ಕೇಸ್ ಹಾಕಿದ್ದಾರೆ.
ಇತ್ತೀಚೆಗೆ ಟ್ವಿಟರ್‌ನಲ್ಲಿ ಹೇಳಿಕೆ ಪ್ರಕಟಿಸಿದ್ದ ಅಣ್ಣಾಮಲೈ, ವಲಸೆ ಕಾರ್ಮಿಕರು ತಮಿಳುನಾಡಿನಲ್ಲಿ ಸುರಕ್ಷಿತವಾಗಿದ್ದಾರೆ. ಆದರೆ ಅವರ ಮೇಲೆ ದ್ವೇಷ ಹೆಚ್ಚಾಗಲು ಮುಖ್ಯಮಂತ್ರಿ ಸ್ಟಾಲಿನ್ ನೇತೃತ್ವದ ಡಿಎಂಕೆ ಹಾಗೂ ಮೈತ್ರಿ ಪಕ್ಷದ ನಾಯಕರು ಕಾರಣ ಎಂದು ಆರೋಪಿಸಿದ್ದರು. ಇದನ್ನೂ ಓದಿ: ಲಕ್ಷಾಂತರ ಮೌಲ್ಯದ ಬ್ರಾಂಡೆಡ್ ಮದ್ಯ ವಶ – ಆರೋಪಿ ಬಂಧನ
ತಮಿಳುನಾಡಿನಲ್ಲಿ (Tamilnadu) ಬಿಹಾರದಿಂದ ವಲಸೆ ಬಂದ ಜನರ ಮೇಲೆ ಹಲ್ಲೆ, ಹಿಂಸಾಚಾರ ನಡೆಸಲಾಗುತ್ತಿದೆ ಎಂದು ಹರಿದಾಡುತ್ತಿದ್ದ ಸುದ್ದಿಯನ್ನು ಅಣ್ಣಾಮಲೈ ವಿರೋಧಿಸಿದ್ದರು. ಇದು ಸುಳ್ಳು ಸುದ್ದಿ ಎಂದು ಹೇಳಿದ್ದರು. ಉತ್ತರ ಬಾರತೀಯರನ್ನು ಪ್ರತ್ಯೇಕಿಸುವುದು ಮತ್ತು ದ್ವೇಷಿಸುವ ಕೆಲಸವನ್ನು ತಮಿಳರು ಮಾಡುವುದಿಲ್ಲ. ಅಂತಹ ಕೃತ್ಯಗಳಿಗೆ ಬೆಂಬಲ ನೀಡುವುದಿಲ್ಲ ಎಂದು ಅಣ್ಣಾಮಲೈ ಸಮರ್ಥಿಸಿಕೊಂಡಿದ್ದರು.
ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡಿದ್ದ ಅಣ್ಣಾಮಲೈ, ಡಿಎಂಕೆ (DMK) ಸಂಸದರು ಮತ್ತು ಸಚಿವರು “ಉತ್ತರ ಭಾರತೀಯರನ್ನು ಪಾನಿಪುರಿ ವಾಲಾ”ಗಳು ಎಂದು ಹೀಯಾಳಿಸಿದ್ದಾರೆ. ಅವರನ್ನು ಕೆಟ್ಟ ಪದಗಳಿಂದ ನಿಂದಿಸಿ, ತಮ್ಮ ನಾಡಿಗೆ ವಾಪಸ್ ಹೋಗುವಂತೆ ವಲಸಿಗರನ್ನು ಒತ್ತಾಯಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು.
ಬಿಹಾರದ (Bihar) ವಲಸೆ ಕಾರ್ಮಿಕರ ನಡುವೆ ತಿರುಪ್ಪೂರ್‍ನಲ್ಲಿ ನಡೆದ ಗಲಾಟೆ ಹಾಗೂ ಕೊಯಮತ್ತೂರಿನಲ್ಲಿ (Coimbatore) ಸ್ಥಳೀಯರ ನಡುವೆ ನಡೆದ ಘರ್ಷಣೆಯ ವೀಡಿಯೋ ತುಣುಕನ್ನು ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆದಿದೆ ಎಂದು ಬಿಂಬಿಸಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಸುದ್ದಿ ಹರಡಲಾಗಿದೆ ಎಂದು ಡಿಜಿಪಿ ಶೈಲೇಂದ್ರ ಬಾಬು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: 10ನೇ ಕ್ಲಾಸ್ ವಿದ್ಯಾರ್ಥಿಯೊಂದಿಗೆ 26 ವರ್ಷದ ಶಿಕ್ಷಕಿ ಪರಾರಿ