ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) 100 ವರ್ಷ ತುಂಬಿದ ಹಿನ್ನೆಲೆ ಅ.1ರಂದು ದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆಯುವ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮೋದಿ ಆರ್‌ಎಸ್‌ಎಸ್ ಕೊಡುಗೆಗಳನ್ನು ಎತ್ತಿ ತೋರಿಸುವ, ವಿಶೇಷವಾಗಿ ವಿನ್ಯಾಸಗೊಳಿಸಲಾದ ಅಂಚೆ ಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಲಿದ್ದಾರೆ. ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದನ್ನೂ ಓದಿ: ದಸರಾ ನೋಡಲು ಹೋಗಿದ್ದ ಉದ್ಯಮಿ ಮನೆಯಲ್ಲಿ ಕಳ್ಳತನ – 12 ಲಕ್ಷ ಮೌಲ್ಯದ ಚಿನ್ನ, 29 ಲಕ್ಷ ಕ್ಯಾಶ್ ಕಳವು
1925ರ ವಿಜಯದಶಮಿಯಂದು ಆರ್‌ಎಸ್‌ಎಸ್ ಸ್ಥಾಪನೆಗೊಂಡಿದ್ದು, 2025ರ ವಿಜಯದಶಮಿಗೆ 100 ವರ್ಷಗಳನ್ನು ಪೂರೈಸಲಿದೆ. ಇತ್ತೀಚಿಗೆ ನಡೆದ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಆರ್‌ಎಸ್‌ಎಸ್ ಸಾಧನೆಯನ್ನು ಹಾಡಿಹೊಗಳಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಕಮಿಷನ್ ದಂಧೆಯಲ್ಲಿ ತೊಡಗಿ ಭ್ರಷ್ಟಾಚಾರದಲ್ಲಿ ಮುಳುಗಿದೆ: ಪ್ರಹ್ಲಾದ್ ಜೋಶಿ ಕಿಡಿ

ತಮ್ಮ 126ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ಆರ್‌ಎಸ್‌ಎಸ್ ಸ್ವಯಂಸೇವಕರ ಪ್ರತಿಯೊಂದು ಕೆಲಸ, ಪ್ರತಿಯೊಂದು ಪ್ರಯತ್ನವೂ ದೇಶ ಮೊದಲು ಎಂಬ ಭಾವನೆಯನ್ನು ಸದಾಕಾಲ ಅತ್ಯುತ್ತಮವಾಗಿರಿಸುತ್ತದೆ. ಈ ಬಾರಿಯ ವಿಜಯದಶಮಿ ಮತ್ತೊಂದು ಕಾರಣದಿಂದ ಬಹಳ ವಿಶೇಷವೆನಿಸುತ್ತದೆ. ಇದೇ ದಿನದಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಸ್ಥಾಪನೆಯ 100ನೇ ವರ್ಷವೂ ಆಗಿದೆ. ಒಂದು ಶತಮಾನದ ಈ ಪ್ರಯಾಣವು ಎಷ್ಟು ಅದ್ಭುತ, ಅಭೂತಪೂರ್ವವಾಗಿದೆ ಮತ್ತು ಅಷ್ಟೇ ಸ್ಫೂರ್ತಿದಾಯಕವಾಗಿದೆ ಎಂದಿದ್ದರು. ಇದನ್ನೂ ಓದಿ: ಗಾಯಕ ಜುಬೀನ್ ಗಾರ್ಗ್ ಸಾವಿನ ತನಿಖೆಗೆ ಸಿಂಗಾಪುರ ಸರ್ಕಾರದ ಸಹಕಾರ: ಅಸ್ಸಾಂ ಸಿಎಂ
100 ವರ್ಷಗಳ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ಥಾಪನೆಯಾದಾಗ, ದೇಶವು ಶತಮಾನಗಳ ಗುಲಾಮಗಿರಿಯ ಸರಪಳಿಯಲ್ಲಿ ಬಂಧಿಸಲ್ಪಟ್ಟಿತ್ತು. ಶತಮಾನಗಳ ಈ ಗುಲಾಮಗಿರಿಯು ನಮ್ಮ ಸ್ವಾಭಿಮಾನ ಮತ್ತು ಆತ್ಮವಿಶ್ವಾಸಕ್ಕೆ ಆಳವಾದ ಗಾಯವುಂಟು ಮಾಡಿತ್ತು. ವಿಶ್ವದ ಅತ್ಯಂತ ಪ್ರಾಚೀನ ನಾಗರಿಕತೆಯ ಮುಂದೆ ಸ್ವಯಂ ಗುರುತು ಇಲ್ಲದಂತಹ ಬಿಕ್ಕಟ್ಟಿನ ಪರಿಸ್ಥಿತಿ ಎದುರಾಗಿತ್ತು. ದೇಶವಾಸಿಗಳು ಕೀಳರಿಮೆಯ ಬಲಿಪಶುಗಳಾಗುತ್ತಿದ್ದರು. ಆದ್ದರಿಂದಲೇ ದೇಶದ ಸ್ವಾತಂತ್ರ‍್ಯದೊಂದಿಗೆ ಸೈದ್ಧಾಂತಿಕ ಗುಲಾಮಗಿರಿಯಿಂದಲೂ ಮುಕ್ತವಾಗುವುದು ಅಗತ್ಯವಾಗಿತ್ತು. ಇಂತಹ ಪರಿಸ್ಥಿತಿಯಲ್ಲಿ ಪರಮಪೂಜ್ಯ ಡಾ. ಹೆಡ್ಗೆವಾರ್ ಅವರು ಈ ವಿಷಯ ಕುರಿತು ಚಿಂತಿಸಲಾರಂಭಿಸಿದರು ಮತ್ತು ಈ ಭಗೀರಥ ಕಾರ್ಯಕ್ಕಾಗಿ ಅವರು 1925ರಲ್ಲಿ ವಿಜಯದಶಮಿಯ ಪವಿತ್ರ ಸಂದರ್ಭದಲ್ಲಿ ‘ರಾಷ್ಟ್ರೀಯ ಸ್ವಯಂಸೇವಕ ಸಂಘ’ ಸ್ಥಾಪಿಸಿದರು ಎಂದು ಹೇಳಿದ್ದರು. ಇದನ್ನೂ ಓದಿ: ವಿಶ್ವಕರ್ಮ ಮಂಡಳಿ ಮಾಡಿ ಸರ್ಕಾರ ಮರೆತಂತಿದೆ: ಶಂಕರಾತ್ಮಾನಂದ ಸರಸ್ವತಿ ಶ್ರೀ ಕಿಡಿ
ಡಾಕ್ಟರ್ ಹೆಡ್ಗೆವಾರ್ ಅವರ ನಿಧನಾನಂತರ, ಪರಮಪೂಜ್ಯ ಗುರೂಜಿ ಅವರು ರಾಷ್ಟ್ರ ಸೇವೆಯ ಈ ಮಹಾಯಜ್ಞವನ್ನು ಮುನ್ನಡೆಸಿದರು. ಪರಮ ಪೂಜ್ಯ ಗುರೂಜಿಯವರು ‘ರಾಷ್ಟ್ರಾಯ ಸ್ವಾಹಾ, ರಾಷ್ಟ್ರಾಯ ಇದಂ ನ ಮಮ’ ಎನ್ನುತ್ತಿದ್ದರು. ಅಂದ್ರೆ, ಇದು ನನ್ನದಲ್ಲ, ಇದು ರಾಷ್ಟ್ರದ್ದು ಎಂದರ್ಥ. ಇದರಲ್ಲಿ ಸ್ವಾರ್ಥವನ್ನು ತೊರೆದು ರಾಷ್ಟ್ರಕ್ಕಾಗಿ ಸಮರ್ಪಣಾ ಭಾವದಿಂದ ಕೆಲಸ ಮಾಡುವಂತಹ ಪ್ರೇರಣೆ ಅಡಗಿದೆ. ಗುರೂಜಿ ಗೋಲ್ವಾಲ್ಕರ್ ಅವರ ಈ ವಾಕ್ಯವು ಲಕ್ಷಾಂತರ ಸ್ವಯಂ ಸೇವಕರಿಗೆ ತ್ಯಾಗ ಮತ್ತು ಸೇವೆಯ ಹಾದಿ ತೋರಿಸಿತು. ಏಕೆಂದ್ರೆ ತ್ಯಾಗ ಮತ್ತು ಸೇವಾ ಭಾವನೆ ಹಾಗೂ ಶಿಸ್ತಿನ ಬೋಧನೆಯ ಸಂಘದ ನಿಜವಾದ ಶಕ್ತಿಯಾಗಿದೆ. ಇಂದು ಆರ್‌ಎಸ್‌ಎಸ್ ನೂರು ವರ್ಷಗಳಿಂದ ಅವಿಶ್ರಾಂತವಾಗಿ, ಅವಿರತವಾಗಿ ರಾಷ್ಟ್ರದ ಸೇವಾ ಕಾರ್ಯದಲ್ಲಿ ತೊಡಗಿಕೊಂಡಿದೆ. ಆದ್ದರಿಂದಲೇ ದೇಶದಲ್ಲಿ ಯಾವುದೇ ನೈಸರ್ಗಿಕ ವಿಕೋಪ ಎಲ್ಲಿಯೇ ಎದುರಾಗಲಿ, ಆರ್‌ಎಸ್‌ಎಸ್‌ನ ಸ್ವಯಂಸೇವಕರು ಎಲ್ಲರಿಗಿಂತ ಮೊದಲು ಅಲ್ಲಿಗೆ ತಲುಪುತ್ತಾರೆ ಎಂದು ಶ್ಲಾಘಿಸಿದ್ದರು. ಇದನ್ನೂ ಓದಿ: ಪ್ರವಾಹ ಪೀಡಿತ ಕಲ್ಯಾಣ ಕರ್ನಾಟಕದಲ್ಲಿ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ









