Tag: Star Campaigner

  • ಇಂಡಿಯಾದಲ್ಲಿ ಮೋದಿ ಸಾಹೇಬ್ರು ಒಬ್ಬರೇ ಸ್ಟಾರ್ ಪ್ರಚಾರಕರು: ಸಂತೋಷ್ ಲಾಡ್

    ಇಂಡಿಯಾದಲ್ಲಿ ಮೋದಿ ಸಾಹೇಬ್ರು ಒಬ್ಬರೇ ಸ್ಟಾರ್ ಪ್ರಚಾರಕರು: ಸಂತೋಷ್ ಲಾಡ್

    ರಾಯಚೂರು: ಇಂಡಿಯಾದಲ್ಲಿ ಒಬ್ಬರೇ ಸ್ಟಾರ್ ಪ್ರಚಾರಕರಿದ್ದಾರೆ, ಅವರೇ ಮೋದಿ (Narendra Modi) ಸಾಹೇಬ್ರು. ಎಲ್ಲಾ ಪಾರ್ಟಿ ಪ್ರಚಾರನೂ ಅವರಿಗೆ ಕೊಟ್ಟು ಬಿಡುತ್ತೇವೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ಹೇಳಿದ್ದಾರೆ.

    ರಾಯಚೂರಿನಲ್ಲಿ ನಡೆದ ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾತನಾಡಿದ ಅವರು, ದೆಹಲಿ ಚುನಾವಣೆಯಲ್ಲಿ ಸ್ಟಾರ್ ಪ್ರಚಾರಕರ ಲಿಸ್ಟ್ನಲ್ಲಿ ಸಿಎಂ ಸಿದ್ದರಾಮಯ್ಯ ಹೆಸರು ಇಲ್ಲದ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಸಿಎಂ ಸಿದ್ದರಾಮಯ್ಯ ಸಾಮಾನ್ಯವಾಗಿ ಬೇರೆ ರಾಜ್ಯಕ್ಕೆ ಹೋಗಲ್ಲ. ಇಂಡಿಯಾದಲ್ಲಿ ಒಬ್ಬರೇ ಸ್ಟಾರ್ ಪ್ರಚಾರಕರಿದ್ದಾರೆ, ಅವರೇ ಮೋದಿ ಎಂದರು. ಇದನ್ನೂ ಓದಿ: ಕೋಲ್ಕತ್ತಾ ಟ್ರೈನಿ ವೈದ್ಯೆ ಅತ್ಯಾಚಾರ & ಕೊಲೆ ಕೇಸ್‌ – ಅಪರಾಧಿ ಸಂಜಯ್‌ ರಾಯ್‌ಗೆ ಜೀವಾವಧಿ ಶಿಕ್ಷೆ

    ಅವರಿಗೆ ಫುಲ್ ಟೈಂ ಇದೆ. ಇಡೀ ದೇಶದಲ್ಲಿ, ರಾಜ್ಯಗಳಲ್ಲಿ ಓಡಾಡೋಕೆ, ಎಲ್ಲಾ ಚುನಾವಣೆ ಭಾಷಣ ಮಾಡಲು ಟೈಂ ಇದೆ. ಒಂದೊಂದು ರಾಜ್ಯಕ್ಕೆ ಮೂವತ್ತು, ನಲವತ್ತು, ಐವತ್ತು ಸಾರಿ ಬರೋಕೆ ಟೈಂ ಇದೆ. ಹಾಗಾಗಿ ಅವರೊಬ್ಬರೇ ಸ್ಟಾರ್ ಪ್ರಚಾರಕರು ಎಂದು ಹೇಳಿದರು. ಇದನ್ನೂ ಓದಿ: ಮೊದಲು ಕಾಂಗ್ರೆಸ್ ಶಾಸಕರನ್ನ ಉಳಿಸಿಕೊಳ್ಳಲಿ: ಎಂ.ಬಿ ಪಾಟೀಲ್‌ಗೆ ವಿಜಯೇಂದ್ರ ಟಕ್ಕರ್

    ಇನ್ನೂ ಬೆಳಗಾವಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ತ್ಯಾಗದ ಬಗ್ಗೆ ಮಾತನಾಡಿರೊ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ವಿಷಯ ಡಿಕೆ ಶಿವಕುಮಾರ್ ಹೇಳಿದ್ದು, ಅವರನ್ನೇ ಕೇಳಿ. ನನ್ನನ್ನು ಕೇಳಿದರೆ ಹೇಗೆ? ನಾನು ಹೇಗೆ ಹೇಳಲಿ? ಅವರಿಗೆ ಈ ಪ್ರಶ್ನೆ ಕೇಳಿ. ನೀವು ಎಷ್ಟೇ ಚಾವಿ (ಕೀ) ಕೊಟ್ಟರೂ ನಾನು ಹೇಳಲ್ಲ ಎಂದು ನುಡಿದರು. ಇದನ್ನೂ ಓದಿ: ಕಾರ್ಮಿಕರ ಹಲ್ಲೆ ಖಂಡನೀಯ, ಆರೋಪಿಗಳ ಬಂಧನಕ್ಕೆ ಸೂಕ್ತ ಕ್ರಮ – ಎಂ.ಬಿ ಪಾಟೀಲ್

  • Breaking- ಕಿಚ್ಚ ಸುದೀಪ್ ಬಿಜೆಪಿ ಸ್ಟಾರ್ ಪ್ರಚಾರಕ : ಆಪ್ತರ ಮಾಹಿತಿ

    Breaking- ಕಿಚ್ಚ ಸುದೀಪ್ ಬಿಜೆಪಿ ಸ್ಟಾರ್ ಪ್ರಚಾರಕ : ಆಪ್ತರ ಮಾಹಿತಿ

    ಟ ಸುದೀಪ್ (Sudeep) ಇಂದು ಬಿಜೆಪಿಗೆ (BJP) ಸೇರ್ಪಡೆಯಾಗಲಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿ ( Basavaraja Bommai) ನೇತೃತ್ವದಲ್ಲಿ ಅವರು ಪಕ್ಷವನ್ನು ಸೇರಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಸುದೀಪ್ ಅವರ ಆಪ್ತರ ಪ್ರಕಾರ ಅಧಿಕೃತವಾಗಿ ಬಿಜೆಪಿಗೆ ಸೇರದೆ ಸ್ಟಾರ್ ಪ್ರಚಾರಕರಾಗಿ (Star Campaigner) ಉಳಿಯಲಿದ್ದಾರೆ ಎನ್ನಲಾಗುತ್ತಿದೆ.

    ಈಗಾಗಲೇ ಸುದೀಪ್ ತಾವು ಯಾವುದೇ ಪಕ್ಷದ ಜೊತೆ ಗುರುತಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಎಲ್ಲ ಪಕ್ಷಗಳಲ್ಲೂ ಅವರ ಆಪ್ತರು ಇರುವುದರಿಂದ ಒಂದು ಪಕ್ಷವನ್ನು ಬೆಂಬಲಿಸುವುದಿಲ್ಲ ಎನ್ನುವ ಮಾತನ್ನು ಪದೇ ಪದೇ ಆಡುತ್ತಾ ಬಂದಿದ್ದಾರೆ. ಆ ಮಾತನ್ನು ಅವರು ಉಳಿಸಿಕೊಳ್ಳುತ್ತಾರೆ ಎನ್ನುವುದು ಆಪ್ತರ ಮಾತು. ಬಿಜೆಪಿ ಪಕ್ಷದಲ್ಲಿ ಸುದೀಪ್ ಅವರ ಹಲವಾರು ಸ್ನೇಹಿತರು ಇದ್ದಾರೆ. ಈ ಕಾರಣಕ್ಕಾಗಿ ಬೆಂಬಲಿಸಬಹುದು ಎನ್ನುವುದು ಆಪ್ತರ ಅನಿಸಿಕೆ. ಇದನ್ನೂ ಓದಿ: ಕಿಸ್ಸಿಂಗ್ ಪ್ರಕರಣ: 16 ವರ್ಷಗಳ ನಂತರ ಶಿಲ್ಪಾ ಶೆಟ್ಟಿಗೆ ಬಿಗ್ ರಿಲೀಫ್

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಾಸಕ ರಾಜುಗೌಡ, ‘ಸುದೀಪ್ ನನ್ನ ಸಹೋದರನಿದ್ದಂತೆ. ಅವರೊಂದಿಗೆ ಸಾಕಷ್ಟು ಒಡನಾಟ ಹೊಂದಿದ್ದೇನೆ. ಎರಡ್ಮೂರು ಬಾರಿ ನಾನು ಕೂಡ ಬಿಜೆಪಿಗೆ ಸೇರುವಂತೆ ಅವರೊಂದಿಗೆ ಮಾತನಾಡಿದ್ದೇನೆ. ಆದರೆ, ಅವರು ಸ್ಪಷ್ಟ ಅಭಿಪ್ರಾಯವನ್ನು ವ್ಯಕ್ತ ಪಡಿಸಿರಲಿಲ್ಲ. ಇಂದು ಮಾಧ್ಯಮಗಳಲ್ಲಿ ಸುದ್ದಿ ನೋಡಿ, ನಾನೇ ಅವರಿಗೆ ಬೆಳಗ್ಗೆ ಫೋನ್ ಮಾಡಿದ್ದೆ. ಒಂದು ರೀತಿಯಲ್ಲಿ ಸಸ್ಪನ್ಸ್ ಸಿನಿಮಾದಂತೆ ಆ ವಿಷಯವನ್ನು ಇಟ್ಟಿದ್ದಾರೆ’ ಎಂದಿದ್ದಾರೆ.

    ಈ ಹಿಂದೆ ರಮ್ಯಾ ಮೂಲಕ ಕಾಂಗ್ರೆಸ್‍ ಗೆ ಕರೆತರುವ ಪ್ರಯತ್ನ ಕೂಡ ನಡೆದಿತ್ತು. ಸುದೀಪ್ ಮನೆಗೆ ಸ್ವತಃ ಡಿ.ಕೆ. ಶಿವಕುಮಾರ್  ಭೇಟಿ ನೀಡಿ ಚರ್ಚೆ ನಡೆಸಿದ್ದರು. ಅಲ್ಲದೇ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೂಡ ಕಾಂಟ್ಯಾಕ್ಟ್ ಮಾಡಿದ್ದರು ಎಂದು ಹೇಳಲಾಗುತ್ತಿದೆ. ಈ ಎಲ್ಲ ಸಂದರ್ಭದಲ್ಲೂ ಕಿಚ್ಚ ರಾಜಕೀಯ ಪ್ರವೇಶ ಮಾಡಿಲ್ಲ ಎಂದೇ ಹೇಳಿದ್ದರು. ಆ ಮಾತನ್ನು ಇವತ್ತು ಉಳಿಸಿಕೊಳ್ಳುತ್ತಾರಾ ಕಾದು ನೋಡಬೇಕು.

  • ಕಂಗನಾ ಬಿಹಾರದ ಬಿಜೆಪಿಯ ಸ್ಟಾರ್ ಪ್ರಚಾರಕಿಯೇ? – ಫಡ್ನವಿಸ್ ಉತ್ತರ

    ಕಂಗನಾ ಬಿಹಾರದ ಬಿಜೆಪಿಯ ಸ್ಟಾರ್ ಪ್ರಚಾರಕಿಯೇ? – ಫಡ್ನವಿಸ್ ಉತ್ತರ

    – ಮುಂಬೈನಿಂದ ವಾಪಸ್ ಹೊರಟ ಕ್ವೀನ್

    ಮುಂಬೈ: ನಟಿ ಕಂಗನಾ ರಣಾವತ್ ಬಿಹಾರದಲ್ಲಿ ಬಿಜೆಪಿ ಪರ ಸ್ಟಾರ್ ಪ್ರಚಾರಕಿಯೇ ಎಂದು ಕೇಳಿದ ಪ್ರಶ್ನೆಗೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಉತ್ತರ ಕೊಟ್ಟಿದ್ದಾರೆ.

    ಮುಂದಿನ ಅಕ್ಟೋಬರ್ ತಿಂಗಳಲ್ಲಿ ಬಿಹಾರದ ವಿಧಾನಸಭೆ ಚುನಾವಣೆ ನಡೆಯಲಿದೆ. ಇದೇ ವೇಳೆ ಸಾವನ್ನಪ್ಪಿದ ಬಿಹಾರ ಮೂಲದ ನಟ ಸುಶಾಂತ್ ಸಿಂಗ್ ರಜಪೂತ್ ಹೆಸರನ್ನು ಚುನಾವಣೆ ಪ್ರಚಾರದಲ್ಲಿ ಬಿಜೆಪಿ ಬಳಿಸಿಕೊಳ್ಳುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಇದರ ನಡುವೆ ಸುಶಾಂತ್ ಸಿಂಗ್ ಅನ್ನು ಬಾಲಿವುಡ್ ಮೂವಿ ಮಾಫಿಯಾ ಪ್ಲಾನ್ ಮಾಡಿ ಮರ್ಡರ್ ಮಾಡಿದೆ ಎಂದು ಆರೋಪ ಮಾಡಿದ್ದ ನಟಿ ಕಂಗನಾರನ್ನು ಬಿಜೆಪಿ ಸ್ಟಾರ್ ಪ್ರಚಾರಕಿಯಾಗಿ ಆಯ್ಕೆ ಮಾಡಿದೆ ಎಂದು ಹೇಳಲಾಗಿದೆ.

    ಮುಂದಿನ ತಿಂಗಳು ಇರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದೆ. ಈಗಾಗಲೇ ಆಡಳಿತದಲ್ಲಿರುವ ಬಿಜೆಪಿ ಅಧಿಕಾರವನ್ನು ಮುಂದುವರಿಸಲು ಪ್ಲಾನ್ ಮಾಡಿಕೊಂಡಿದೆ. ಅಂತಯೇ ಬಿಜೆಪಿಯ ಹಿರಿಯ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರು ಬಿಹಾರ ಚುನಾವಣೆಯ ಜವಾಬ್ದಾರಿಯನ್ನು ತೆಗೆದುಕೊಂಡಿದ್ದಾರೆ. ಅವರಿಗೆ ರಾಜ್ಯದ ಪ್ರಸ್ತುತ ಸಿಎಂ ನಿತೀಶ್ ಕುಮಾರ್ ಸಾಥ್ ನೀಡಲಿದ್ದಾರೆ.

    ಮೋದಿ ಇರುವಾಗ ಯಾರು ಬೇಡ: ಹೀಗಾಗಿ ಬಿಹಾರ ಚುನಾವಣೆಗೆ ಬಗ್ಗೆ ಮಾತನಾಡಿರುವ ಫಡ್ನವೀಸ್, ಈ ಬಾರಿಯೂ ಬಿಹಾರದಲ್ಲಿ ಗೆದ್ದು, ಅಧಿಕಾರವನ್ನು ಮುಂದುವರಿಸಲಿದ್ದೇವೆ ಎಂದು ಹೇಳಿದ್ದಾರೆ. ಇದೇ ವೇಳೆ ಕಂಗನಾ ರಣಾವತ್ ಬಿಹಾರದ ಬಿಜೆಪಿಯ ಸ್ಟಾರ್ ಪ್ರಚಾರಕಿಯೇ ಎಂದು ಅವರನ್ನು ಪ್ರಶ್ನೆ ಮಾಡಲಾಗಿದೆ. ಇದಕ್ಕೆ ಉತ್ತರಿಸಿರುವ ಫಡ್ನವೀಸ್ ಪ್ರಧಾನಿ ನರೇಂದ್ರ ಮೋದಿಯಂತಹ ಸ್ಟಾರ್ ಪ್ರಚಾರಕರೂ ನಮ್ಮಲ್ಲಿ ಇರುವಾಗ ಬೇರೆ ಯಾರೂ ಬೇಡ ಎಂದು ಹೇಳಿದ್ದಾರೆ. ಇದನ್ನು ಓದಿ: ರಿಯಾ ನನ್ನ ಮಗನಿಗೆ ಹಂತ ಹಂತವಾಗಿ ವಿಷ ನೀಡಿ ಕೊಂದ್ಳು: ಸುಶಾಂತ್ ತಂದೆ

    ಸುಶಾಂತ್ ಸಾವಿನ ಪ್ರಕರಣ ಈಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಬಿಜೆಪಿ ಚುನಾವಣಾ ಪ್ರಚಾರದಲ್ಲಿ ನಟ ಸುಶಾಂತ್ ಫೋಟೋವನ್ನು ಬಳಿಸಿಕೊಂಡಿತ್ತು. ಜೊತೆಗೆ ಸುಶಾಂತ್ ಪೋಷಕರ ದೂರಿನಂತೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ನಟನ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಿದ್ದರು. ಈ ಎಲ್ಲದರ ನಡುವೆ ಸುಶಾಂತ್ ಪ್ರೇಯಸಿ ರಿಯಾ ಚಕ್ರವರ್ತಿ ಪರ ಪಶ್ಚಿಮಾ ಬಂಗಾಳದಲ್ಲಿ ಕಾಂಗ್ರೆಸ್ ಪಕ್ಷ ಪ್ರತಿಭಟನೆ ಮಾಡಿತ್ತು. ಇದನ್ನು ಓದಿ: ನಟಿಗೆ ಸುಶಾಂತ್ ಕಿಸ್- ಸೋಶಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್

    ಮುಂಬೈನಿಂದ ಹೊರಟ ಮಣಿಕರ್ಣಿಕಾ: ಇತ್ತ ಕಂಗನಾ ಮತ್ತು ಮಹಾರಾಷ್ಟ್ರದ ಸರ್ಕಾರದ ನಡುವೆ ಜಟಾಪಟಿ ಮುಂದುವರೆದಿದೆ. ಅಕ್ರಮವಾಗಿ ಕಟ್ಟಡ ನಿರ್ಮಿಸಲಾಗಿದೆ ಎಂದು ಕಂಗನಾ ಆಫೀಸ್ ಮತ್ತು ಮನೆಯನ್ನು ಬಿಎಂಸಿ ಒಡೆದು ಹಾಕಿದೆ. ಈಗ ಈ ಪ್ರಕರಣ ಕೋರ್ಟಿನಲ್ಲಿದೆ. ಹಲವಾರ ವಿರೋಧದ ನಡುವೆಯೂ ವೈ ಪ್ಲಸ್ ಭದ್ರತೆಯೊಂದಿಗೆ ಮುಂಬೈಗೆ ಬಂದಿದ್ದ ಕಂಗನಾ ಇಂದು ವಾಪಸ್ ತಮ್ಮ ತವರು ರಾಜ್ಯ ಹಿಮಾಚಲ ಪ್ರದೇಶಕ್ಕೆ ಪ್ರಯಾಣ ಬೆಳಸಿದ್ದಾರೆ.

    ಜೂನ್ 14ರಂದು ಸುಶಾಂತ್ ಮೃತದೇಹ ಅವರ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆರಂಭದಲ್ಲಿ ಆತ್ಮಹತ್ಯೆ ಎಂದು ಹೇಳಲಾಗಿದ್ರೂ ಅಭಿಮಾನಿಗಳು ನಟನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಸುಶಾಂತ್ ನಿಧನ ಬಾಲಿವುಡ್ ನಲ್ಲಿರುವ ಸ್ವಜನಪಕ್ಷಪಾತದಿಂದ ಆಗಿದ್ದು, ಸೂಕ್ತ ತನಿಖೆ ನಡೆಸಬೇಕೆಂದು ನಟಿ ಕಂಗನಾ ರಣಾವತ್ ಆಗ್ರಹಿಸಿದ್ದರು. ಸುಶಾಂತ್ ನಿಧನದ ಒಂದು ತಿಂಗಳ ಬಳಿ ಕಂಗನಾಗೆ ನಟಿ ಅಂಕಿತಾ ಲೋಖಂಡೆ ಸಾಥ್ ನೀಡಿ, ಮಾಜಿ ಪ್ರಿಯಕರನ ಸಾವಿನ ರಹಸ್ಯ ಬಹಿರಂಗವಾಗ ಬೇಕೆಂದು ಒತ್ತಾಯಿಸಿದ್ದರು. ಇದನ್ನೂ ಓದಿ: ಪ್ರಕರಣಕ್ಕೆ ಹೊಸ ತಿರುವು ನೀಡಿದ ಸುಶಾಂತ್ ಪಕ್ಕದ್ಮನೆ ಮಹಿಳೆ ಹೇಳಿಕೆ

    ಇನ್ನಿಬ್ಬರು ನಟಿಯರಿಗೆ ಎನ್‍ಸಿಬಿ ಸಮನ್ಸ್: ಕಳೆದ ಮೂರು ತಿಂಗಳಲ್ಲಿ ಹಲವು ಮಜಲುಗಳಲ್ಲಿ ಸಾಗಿದ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ತನಿಖೆಯನ್ನ ಸಿಬಿಐ ನಡೆಸುತ್ತಿದೆ. ಸಿಬಿಐ ತನಿಖೆ ವೇಳೆ ಡ್ರಗ್ಸ್ ದಂಧೆಯ ಸುಳಿವು ಲಭ್ಯವಾಗಿದ್ದರಿಂದ ಎನ್‍ಸಿಬಿ ಸಹ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ. ಎನ್‍ಸಿಬಿ ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಶಾಂತ್ ಗೆಳತಿ ರಿಯಾ ಚಕ್ರವರ್ತಿ ಸೇರಿದಂತೆ ಹಲವರನ್ನ ಬಂಧಿಸಿದೆ. ಇತ್ತ ಬಾಲಿವುಡ್ ನಟಿಯರಾದ ಸಾರಾ ಅಲಿ ಖಾನ್ ಮತ್ತು ರಕುಲ್ ಪ್ರೀತ್ ಸಿಂಗ್ ಗೂ ಎನ್‍ಸಿಬಿ ಸಮನ್ಸ್ ನೀಡಿರುವ ಬಗ್ಗೆ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.