Tag: Start

  • ಉಕ್ರೇನ್ ಸಂಘರ್ಷದ ಬೆಂಕಿಗೆ ತುಪ್ಪ ಸುರಿದವರು ಪಾಶ್ಚಿಮಾತ್ಯರು – ಪರೋಕ್ಷವಾಗಿ ಅಮೆರಿಕ ದೂಷಿಸಿದ ಪುಟಿನ್

    ಉಕ್ರೇನ್ ಸಂಘರ್ಷದ ಬೆಂಕಿಗೆ ತುಪ್ಪ ಸುರಿದವರು ಪಾಶ್ಚಿಮಾತ್ಯರು – ಪರೋಕ್ಷವಾಗಿ ಅಮೆರಿಕ ದೂಷಿಸಿದ ಪುಟಿನ್

    ಮಾಸ್ಕೋ: ಉಕ್ರೇನ್‌ನಲ್ಲಿ (Ukraine) ಯುದ್ಧದ ಸ್ಥಿತಿ ನಿರ್ಮಾಣವಾಗಲು ಪಾಶ್ಚಿಮಾತ್ಯರೇ ಕಾರಣ. ಸಂಘರ್ಷದ ಬೆಂಕಿಗೆ ತುಪ್ಪ ಸುರಿದವರು ಅವರೇ. ಅದರಿಂದ ಸಂತ್ರಸ್ತರಾದವರು, ಎಲ್ಲದಕ್ಕೂ ಪಾಶ್ಚಿಮಾತ್ಯ ಗುಂಪೇ ಕಾರಣ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಪರೋಕ್ಷವಾಗಿ ಅಮೆರಿಕಾವನ್ನ ದೂಷಿಸಿದ್ದಾರೆ.

    ಅಮೆರಿಕ (USA) ಅಧ್ಯಕ್ಷ ಜೋ ಬೈಡನ್ (Joe Biden) ಉಕ್ರೇನ್‌ಗೆ ಅಚ್ಚರಿ ಭೇಟಿ ನೀಡಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. ಉಕ್ರೇನ್ ಮೇಲಿನ ಸಮರ ಶುರುವಾಗಿ ಒಂದು ವರ್ಷ ಪೂರೈಸುತ್ತಿರುವ ಬೆನ್ನಲ್ಲೇ ರಷ್ಯಾ ಅಸೆಂಬ್ಲಿಯಲ್ಲಿ ಮಾತನಾಡಿದ ಪುಟಿನ್, ಪಾಶ್ಚಿಮಾತ್ಯರು ಸ್ಥಳೀಯ ಬಿಕ್ಕಟ್ಟನ್ನು ಜಾಗತಿಕ ಸಂಘರ್ಷವನ್ನಾಗಿ ಮಾಡಲು ಪ್ರಯತ್ನಿಸುತ್ತಿದ್ದಾರೆ. ಅದಕ್ಕೆ ತಕ್ಕ ರೀತಿಯಲ್ಲಿ ಉತ್ತರಿಸಲಿದ್ದೇವೆ. ರಾಷ್ಟ್ರದ ಉಳಿಯುವಿಕೆಯ ಕುರಿತಾಗಿ ನಾವು ಮಾತನಾಡುತ್ತಿದ್ದೇವೆ ಎಂದು ಪುಟಿನ್ ಎಚ್ಚರಿಸಿದ್ದಾರೆ.

    ಉಕ್ರೇನ್ ಜೊತೆಗೆ ಯುದ್ಧ ತಡೆಯಲು ರಷ್ಯಾ ಎಲ್ಲ ರೀತಿಯ ಪ್ರಯತ್ನಗಳನ್ನೂ ಮಾಡಿದೆ. ಶಾಂತಿಯುತ ಮಾತುಕತೆಯನ್ನೂ ನಡೆಸುತ್ತಿದೆ. ಆದ್ರೆ ನಮ್ಮ ಬೆನ್ನ ಹಿಂದೆಯೇ ನಿಂತು ಅನೇಕ ತಂತ್ರಗಳನ್ನು ಎಣೆಯಲಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಪ್ರಶ್ನೆಪತ್ರಿಕೆಯಲ್ಲಿ ಸಹೋದರ-ಸಹೋದರಿ ಕುರಿತು ಅಶ್ಲೀಲ ಪ್ರಶ್ನೆ; ಪಾಕ್‌ ವಿವಿ ವಿರುದ್ಧ ಆಕ್ರೋಶ

    ಪಾಶ್ಚಿಮಾತ್ಯರು ಜಗತ್ತಿನಾದ್ಯಂತ ಗೊಂದಲ ಮತ್ತು ಯುದ್ಧವನ್ನು ಬಿತ್ತುವ ಕೆಲಸ ಮಾಡಿದರು. ಪಾಶ್ಚಿಮಾತ್ಯರ ಬೆಂಬಲ ಪಡೆದ ಉಕ್ರೇನ್ ಕ್ರಿಮಿಯಾ ಮೇಲೆ ಆಕ್ರಮಣಕ್ಕೆ ಯೋಜನೆ ರೂಪಿಸಿತ್ತು. ಪಾಶ್ಚಿಮಾತ್ಯರು ರಾಜಕೀಯವಾಗಿ, ಆರ್ಥಿಕವಾಗಿ ಹಾಗೂ ಸೇನೆಯ ದೃಷ್ಟಿಯಲ್ಲಿ ಉಕ್ರೇನ್‌ನ್ನು ವಶಕ್ಕೆ ಪಡೆದರು. ಕೀವ್ ಪ್ರಭುತ್ವದಲ್ಲಿ ಸ್ವತಃ ಉಕ್ರೇನ್ ಜನರೇ ಒತ್ತೆಯಾಳುಗಳಾದರು ಎಂದು ಪುಟಿನ್ ಹೇಳಿದ್ದಾರೆ.

    Joe Biden 2

    1991ರಲ್ಲಿ ಸೋವಿಯತ್ ಒಕ್ಕೂಟದ ವಿಭಜನೆಯಾದ ದಿನಗಳಿಂದಲೂ ಉಕ್ರೇನ್ ಬಿಕ್ಕಟ್ಟು ಮುಂದುವರಿದಿದೆ. ಯುದ್ಧದ ಆರಂಭದಿಂದ ಈವರೆಗೂ ರಷ್ಯಾದ ಪಡೆಗಳು ಪ್ರಮುಖವಾಗಿ ಮೂರು ಬಾರಿ ಯುದ್ಧ ಭೂಮಿಯಿಂದ ಹಿಂದಕ್ಕೆ ಮರಳಿವೆ. ಆದರೆ ಈಗಲೂ ಉಕ್ರೇನ್‌ನ 5ನೇ ಒಂದು ಭಾಗದಷ್ಟು ಪ್ರದೇಶವು ರಷ್ಯಾ ನಿಯಂತ್ರಣದಲ್ಲಿದೆ. ಯುದ್ಧದಲ್ಲಿ ಸಾವಿರಾರು ಮಂದಿ ಸಾವಿಗೀಡಾಗಿದ್ದಾರೆ. ಇದನ್ನೂ ಓದಿ: ಟರ್ಕಿ-ಸಿರಿಯಾದಲ್ಲಿ ಮತ್ತೆ ಭೂಕಂಪ; 8 ಸಾವು, 290ಕ್ಕೂ ಹೆಚ್ಚು ಮಂದಿಗೆ ಗಾಯ

    ಇದೀಗ ವಾಷಿಂಗ್ಟನ್‌ನಲ್ಲಿ ಕೆಲವು ಮಂದಿ ಪರಮಾಣು ಪರೀಕ್ಷೆಯನ್ನು ಪುನರಾರಂಭಿಸುವ ಬಗ್ಗೆ ಯೋಚಿಸುತ್ತಿದ್ದಾರೆ. ಹಾಗಾಗಿ ರಷ್ಯಾದ ರಕ್ಷಣಾ ಸಚಿವಾಲಯ ಹಾಗೂ ನ್ಯೂಕ್ಲಿಯರ್ ಕಾರ್ಪೊರೇಷನ್ ಸಹ ರಷ್ಯಾದ ಪರಮಾಣು ಅಸ್ತ್ರಗಳನ್ನು ಪರೀಕ್ಷಿಸಲು ಸಜ್ಜಾಗಬೇಕಿದೆ. ರಷ್ಯಾ-ಅಮೆರಿಕ ನಡುವಿನ ಶಸ್ತ್ರಾಸ್ತ್ರಗಳ ನಿಯಂತ್ರಣ ಒಪ್ಪಂದದಿಂದ (START-ಸ್ಟ್ರಾಟೆಜಿಕ್ ಆರ್ಮ್ಸ್ ರಿಡಕ್ಷನ್ ಟ್ರೀಟಿ) ರಷ್ಯಾ ಅನಿವಾರ್ಯವಾಗಿ ಹಿಂದೆ ಸರಿಯಬೇಕಾಗಿದೆ ಎಂದು ಹೇಳಿದ್ದಾರೆ.

    ಹೊಸ ಸ್ಟಾರ್ಟ್ ಒಪ್ಪಂದಕ್ಕೆ 2010ರಲ್ಲಿ ಸಹಿ ಮಾಡಲಾಗಿತ್ತು. 2011ರಲ್ಲಿ ಒಪ್ಪಂದ ಜಾರಿಗೆ ಬಂದಿತು. 2021ರಲ್ಲಿ ಜೋ ಬೈಡನ್ ಯುಎಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ 5 ವರ್ಷಗಳವರೆಗೆ ವಿಸ್ತರಿಸಲಾಯಿತು. ಈ ಒಪ್ಪಂದವು ಅಮೆರಿಕ ಮತ್ತು ರಷ್ಯಾ ನಿಯೋಜಿಸಬಹುದಾದ ಪರಮಾಣು ಸಿಡಿತಲೆಗಳ ಸಂಖ್ಯೆ, ಜಲಾಂತರ್ಗಾಮಿ ಕ್ಷಿಪಣಿಗಳು ಹಾಗೂ ಬಾಂಬರ್‌ಗಳನ್ನು ಮಿತಿಗೊಳಿಸುತ್ತದೆ.

    ತಜ್ಞರ ಪ್ರಕಾರ ಸುಮಾರು 6,000 ನ್ಯೂಕ್ಲಿಯರ್ ಸಿಡಿತಲೆಗಳನ್ನು ಹೊಂದಿರುವ ರಷ್ಯಾವು ವಿಶ್ವದಲ್ಲೇ ಅತಿ ದೊಡ್ಡ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿದ ದೇಶವಾಗಿದೆ. ಆದ್ರೆ ಅಮೆರಿಕ ಭೂಮಿ ಗ್ರಹವನ್ನ ಹಲವು ಬಾರಿ ನಾಶಮಾಡಲು ಸಾಧ್ಯವಾಗುವಂತ ವಿಶ್ವದ ಶೇ.90 ರಷ್ಟು ಪರಮಾಣು ಸಿಡಿತಲೆಗಳನ್ನು ಹೊಂದಿದೆ ಎಂದು ಹೇಳಲಾಗಿದೆ.

    ಒಂದು ದಿನದ ಹಿಂದೆಯಷ್ಟೇ ಉಕ್ರೇನ್‌ಗೆ ಅಚ್ಚರಿ ಭೇಟಿ ನೀಡಿದ್ದ ಯುಎಸ್ ಅಧ್ಯಕ್ಷ ಜೋ ಬೈಡನ್ ಉಕ್ರೇನ್ ರಕ್ಷಣೆಗೆ ಭಾರೀ ಶಸ್ತ್ರಾಸ್ತ್ರಗಳ ನೆರವು ನೀಡುವುದಾಗಿ ಶ್ವೇತಭವನದ ಹೇಳಿಕೆಯಲ್ಲಿ ಘೋಷಿಸಿದ್ದಾರೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ವಾರದಲ್ಲಿ ಐದು ಬಾರಿ ಮೈಸೂರು-ಬೆಂಗಳೂರು ವಿಮಾನಯಾನ ಆರಂಭ

    ವಾರದಲ್ಲಿ ಐದು ಬಾರಿ ಮೈಸೂರು-ಬೆಂಗಳೂರು ವಿಮಾನಯಾನ ಆರಂಭ

    ಮೈಸೂರು: ಇಂದಿನಿಂದ ವಾರಕ್ಕೆ 5 ಬಾರಿ ಮೈಸೂರು-ಬೆಂಗಳೂರು ನಡುವೆ ವಿಮಾನ ಸೇವೆ ಆರಂಭವಾಗಿದೆ.

    ಕೇಂದ್ರ ಸರ್ಕಾರದ ವಿಮಾನಯಾನದಲ್ಲಿ ಪಗ್ರತಿ ಸಾಧಿಸುವ ದೃಷ್ಟಿಯಿಂದ ಜಾರಿ ಮಾಡಿದ ಅಗ್ಗದ ಬೆಲೆಯ ಉಡಾನ್ (ಉಡೇ ದೇಶ್ ಕಾ ಆಮ್ ನಾಗರಿಕ್) ಯೋಜನೆಯ ಭಾಗವಾಗಿ ಈ ಸೇವೆ ಆರಂಭಗೊಂಡಿದೆ. ಈ ಸೇವೆಗೆ ಉನ್ನತ ಶಿಕ್ಷಣ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ ದೇವೇಗೌಡ ಚಾಲನೆ ನೀಡಿದರು.

    ಇಂಡಿಯನ್ ಏರ್‍ಲೈನ್ಸ್ ಸಂಸ್ಥೆಗೆ ಸೇರಿದ ವಿಮಾನ ವಾರದಲ್ಲಿ 5 ದಿನ ಬೆಳಿಗ್ಗೆ 11.15ಕ್ಕೆ ಮೈಸೂರಿಗೆ ಆಗಮಿಸಿ ಮತ್ತೆ ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿಗೆ ತೆರಳಲಿದೆ. ಆರಂಭವಾದ ಮೊದಲ ದಿನವೇ ಬೆಂಗಳೂರಿಗೆ ಹಲವು ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ. ಈಗಾಗಲೇ ಮೈಸೂರು ಹೈದರಾಬಾದ್ ಹಾಗೂ ಚೆನ್ನೈ ನಡುವೆ ಕೂಡ ವಿಮಾನ ಹಾರಾಟ ಶುರುವಾಗಿದೆ.

    ಈ ಕಾರ್ಯಕ್ರಮದಲ್ಲಿ ಮಾತನಾಡಿದ ಜಿ.ಟಿ ದೇವೇಗೌಡರು, ಇಂದು ಮೈಸೂರು ಟು ಬೆಂಗಳೂರು ಎರಡನೇ ವಿಮಾನಯಾನ ಸೇವೆಗೆ ಚಾಲನೆ ನೀಡಲಾಗಿದೆ. ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ನಾಮಕರಣ ವಿಚಾರ ಕುರಿತು ಸರ್ಕಾರದೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುಲಾಗುವುದು. ಏರ್ ಪೋರ್ಟ್ ವಿಸ್ತರಣೆಗೆ 280 ಎಕರೆ ಭೂಸ್ವಾಧೀನ ಮಾಡಿ ಕೈಗಾರಿಕಾ ಇಲಾಖೆಗೆ ನೀಡಿದ್ದೇವೆ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಸಚಿವ ಸಾರಾ. ಮಹೇಶ್ ಮತ್ತು ಸಂಸದ ಪ್ರತಾಪ್ ಸಿಂಹ ಭಾಗಿಯಾಗಿದ್ದರು. ಇದನ್ನು ಓದಿ: ದೇಶದ ಸಣ್ಣ ವಿಮಾನ ನಿಲ್ದಾಣಗಳಲ್ಲಿ ಮೊಬೈಲ್ ಎಟಿಸಿ: ಹೇಗೆ ಕಾರ್ಯನಿರ್ವಹಿಸುತ್ತೆ? ವಿಡಿಯೋ ನೋಡಿ

    ಏನಿದು ಉಡಾನ್ ಯೋಜನೆ?
    ಅತ್ಯಂತ ಕಡಿಮೆ ದರದಲ್ಲಿ ಸಣ್ಣ ನಗರಗಳ ನಡುವೆ ವಿಮಾನ ಪ್ರಯಾಣ ಮಾಡಬಹುದಾದ ಉಡಾನ್ ಯೋಜನೆ ಕೇಂದ್ರ ಸರ್ಕಾರ 2017ರ ಏಪ್ರಿಲ್‍ನಲ್ಲಿ ಆರಂಭಿಸಿತ್ತು. ಉಡಾನ್‍ನ ವಿಸ್ತೃತ ರೂಪ ಉಡೇ ದೇಶ್ ಕಾ ಆಮ್ ನಾಗರೀಕ್. ಪ್ರದೇಶಿಕ ಸಂಪರ್ಕ ಯೋಜನೆಯಾದ ಉಡಾನ್ ಯೋಜನೆಯಡಿ ಸದ್ಯಕ್ಕೆ ಹೆಚ್ಚು ಸಂಪರ್ಕವಿರದ ಸಣ್ಣ ನಗರಗಳ ನುಡವೆ ಕಡಿಮೆ ದರದಲ್ಲಿ ಪ್ರಯಾಣ ಮಾಡಬಹುದಾಗಿದೆ.

    2014ರ ಏಪ್ರಿಲ್ 24 ರಂದು ಪ್ರಧಾನಿ ಮೋದಿ ದೆಹಲಿ ಹಗೂ ಶಿಮ್ಲಾ ನಡುವಿನ ವಿಮಾನ ಹಾರಾಟಕ್ಕೆ ಚಾಲನೆ ನೀಡಿದ್ದರು. ಚಾಲನೆ ನೀಡಿ ಮಾತನಾಡಿದ್ದ ಮೋದಿ, ಹವಾಯ್ ಚಪ್ಪಲಿ ಧರಿಸುವಂತಹ ವ್ಯಕ್ತಿಯನ್ನೂ ಕೂಡ ವಿಮಾನದಲ್ಲಿ ನೋಡಬೇಕೆಂಬುದು ನನ್ನ ಆಸೆ ಎಂದು ಹೇಳಿದ್ದರು. ಈ ಯೋಜನೆಯಡಿ 45ಕ್ಕೂ ಹೆಚ್ಚು ಸೇವೆ ಒದಗಿಸದ ವಿಮಾನ ನಿಲ್ದಾಣಗಳನ್ನು ಪುನಾರಂಭ ಮಾಡುವ ಉದ್ದೇಶವನ್ನು ಸರ್ಕಾರ ಹೊಂದಿದೆ.

  • ಬಸವನಗುಡಿಯಲ್ಲಿ ಶುರುವಾಯ್ತು ಸಂಭ್ರಮದ ಕಡಲೆಕಾಯಿ ಪರಿಷೆ

    ಬಸವನಗುಡಿಯಲ್ಲಿ ಶುರುವಾಯ್ತು ಸಂಭ್ರಮದ ಕಡಲೆಕಾಯಿ ಪರಿಷೆ

    ಬೆಂಗಳೂರು: ಕಾರ್ತಿಕ ಮಾಸದ ಕಡೆಯ ಸೋಮವಾರವಾದ ಇಂದು ಬಸವನಗುಡಿಯ ಐತಿಹಾಸಿಕ ಕಡಲೆಕಾಯಿ ಪರಿಷೆಗೆ ವಿದ್ಯುಕ್ತವಾಗಿ ಚಾಲನೆ ದೊರೆತಿದೆ.

    ಹೌದು, ರಾಜಧಾನಿಯ ಪ್ರಮುಖ ಹಬ್ಬಗಳಲ್ಲೊಂದಾದ ಕಡಲೆಕಾಯಿ ಪರಿಷೆಗೆ ಸೋಮವಾರ ಚಾಲನೆ ದೊರೆತಿದೆ. ಬಿಬಿಎಂಪಿ ಮಹಾಪೌರರಾದ ಗಂಗಾಬಿಕೆಯವರು ಬೆಳಗ್ಗೆ 10 ಗಂಟೆಗೆ ಬಸವಣ್ಣನಿಗೆ ಕಡಲೆಕಾಯಿ ತುಲಾಭಾರ ಮೂಲಕ ಕಡಲೆಕಾಯಿ ಪರಿಷೆಗೆ ಚಾಲನೆ ನೀಡಿದ್ದಾರೆ.

    ಮುಂಜಾನೆಯಿಂದಲೇ ಭಕ್ತರು ಬಸವನಗುಡಿಯ ದೊಡ್ಡ ಗಣೇಶ ಹಾಗೂ ದೊಡ್ಡ ಬಸವಣ್ಣನ ದರ್ಶನಕ್ಕಾಗಿ ಸಾಲುಗಟ್ಟಿ ನಿಂತಿರುವ ದೃಶ್ಯ ಸಾಮಾನ್ಯವಾಗಿತ್ತು. ಭಕ್ತರು ಕಡಲೆಕಾಯಿಗಳನ್ನು ದೇವರಿಗೆ ಅರ್ಪಿಸುವ ಮೂಲಕ ತಮ್ಮ ಕೋರಿಕೆಯನ್ನು ಬೇಡಿಕೊಂಡಿದ್ದಾರೆ. ಅಲ್ಲದೇ ಗಣೇಶನಿಗೆ ಬೆಣ್ಣೆ ಅಲಂಕಾರದೊಂದಿಗೆ ಕಡಲೆಕಾಯಿ ಅಲಂಕಾರ ಮಾಡುವ ಮೂಲಕ ವಿಶೇಷ ಪೂಜೆ ನೆರವೇರಿಸಲಾಗಿದೆ.

    ಕಡಲೆಕಾಯಿ ಪರಿಷೆಗೆ ಸೇಲಂ, ಯಶವಂತಪುರ, ದೊಡ್ಡಬಳ್ಳಾಪುರ, ಮೈಸರೂ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಕಡಲೆಕಾಯಿ ವ್ಯಾಪಾರಿಗಳು ಆಗಮಿಸಿದ್ದಾರೆ. ಈ ಬಾರಿ ಹಿಂದಿನ ವರ್ಷಕ್ಕಿಂತಲೂ ಅತಿ ಹೆಚ್ಚು ಕಡಲೆಕಾಯಿ ಸ್ಟಾಲ್ ಗಳು ತಲೆ ಎತ್ತಿದೆ.

    ಪರಿಷೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಮೇಯರ್ ಗಂಗಾಬಿಕೆ, ಪ್ರತಿ ವರ್ಷ ಕಡಲೆಕಾಯಿ ಪರಿಷೆ ನಡೆಯುವದರಿಂದ ಬಸವನಗುಡಿಗೆ ಗ್ರಾಮೀಣ ಸೊಗಡು ನೀಡುತ್ತದೆ. ಪರಿಷೆಗೆ ಬರುವ ಪ್ರತಿಯೊಬ್ಬರು ಹಾಗೂ ವ್ಯಾಪಾರಸ್ಥರು ಪ್ಲಾಸ್ಟಿಕ್ ಕವರ್‍ಗಳನ್ನು ಬಳಸಬಾರದು. ಸ್ವಚ್ಛ ಬೆಂಗಳೂರಿಗೆ ಕಡಲೆಕಾಯಿ ಪರಿಷೆ ಅಡಿಪಾಯವಾಗಬೇಕು. ಕಳೆದ ವರ್ಷದ ಪರಿಷೆಯಲ್ಲಿ ದಿವಂಗತ ಅನಂತ ಕುಮಾರ್ ಅವರು ಪಾಲ್ಗೊಂಡಿದ್ದರು. ಆದರೆ ಈ ಬಾರಿ ಅವರು ಇಲ್ಲ ಅನ್ನುವುದು ತುಂಬಾ ದುಃಖಕರ ವಿಚಾರ. ಅವರು ಈ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅಪಾರ. ಅವರ ಕನಸನ್ನು ನನಸಾಗಿಸುವ ಬಗ್ಗೆ ಬಿಬಿಎಂಪಿ ಚಿಂತನೆ ನಡೆಸಲಿದೆ ಎಂದು ಹೇಳಿದ್ರು.

    ಕಡಲೆಕಾಯಿ ಪರಿಷೆ ಉದ್ಘಾಟನಾ ಕಾರ್ಯಕ್ರಮಕ್ಕೆ ಮೇಯರ್ ಗಂಗಾಂಬಿಕೆ, ಶಾಸಕ ಗರುಡಾಚಾರ್, ವಿಧಾನ ಪರಿಷತ್ ಸದಸ್ಯ ಸಿ.ಶರವಣ, ಶಾಸಕ ರವಿ ಸುಬ್ರಹ್ಮಣ್ಯ ಸೇರಿದಂತೆ ಪ್ರಮುಖ ಗಣ್ಯರು ಭಾಗವಹಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಧ್ಯಪ್ರದೇಶ, ಮಿಜೋರಾಂ ಚುನಾವಣೆಗೆ ಮತದಾನ ಆರಂಭ

    ಮಧ್ಯಪ್ರದೇಶ, ಮಿಜೋರಾಂ ಚುನಾವಣೆಗೆ ಮತದಾನ ಆರಂಭ

    ನವದೆಹಲಿ: ಲೋಕಸಭಾ ಚುನಾವಣೆಯ ಸಮರಕ್ಕೆ ದಿಕ್ಸೂಚಿಯೆಂಬಂತೆ ಇಂದು ಮಧ್ಯಪ್ರದೇಶ ಮತ್ತು ಮಿಜೋರಾಂ ವಿಧಾನಸಭೆಗೆ ಚುನಾವನೆಯ ಮತದಾನ ಆರಂಭವಾಗಿದೆ.

    ಮಧ್ಯಪ್ರದೇಶದ 230 ಹಾಗೂ ಮಿಜೋರಾಂ 40 ಸ್ಥಾನಗಳಿಗೆ ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಲಿದೆ. ಎರಡೂ ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು ಸೂಕ್ತ ಭದ್ರತೆ ಒದಗಿಸಲಾಗಿದೆ. ಎರಡು ರಾಜ್ಯಗಳು ಕಾಂಗ್ರೆಸ್-ಬಿಜೆಪಿಗೆ ಪ್ರತಿಷ್ಠೆ ಕಣವಾಗಿದ್ದು ಅಧಿಕಾರದ ಚುಕ್ಕಾಣಿ ಹಿಡಿಯಲು ಈಗಾಗಲೇ ಸಾಕಷ್ಟು ಸರ್ಕಸ್ ಮಾಡಿವೆ.

    ಮಧ್ಯಪ್ರದೇಶದಲ್ಲಿ 52 ಜಿಲ್ಲೆಗಳ 230 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು 65,341 ಬೂತ್‍ಗಳಲ್ಲಿ ಮತದಾನ ನಡೆಯಲಿದೆ. 2005ರಲ್ಲಿ ಮುಖ್ಯಮಂತ್ರಿ ಹುದ್ದೆಗೇರಿದ ಹಾಲಿ ಸಿಎಂ ಶಿವರಾಜ್ ಸಿಂಗ್ ಚೌವ್ಹಾನ್ ನಾಲ್ಕನೇ ಬಾರಿ ಮುಖ್ಯಮಂತ್ರಿಯಾಗಲು ಶ್ರಮಿಸುತ್ತಿದ್ದಾರೆ. ಇತ್ತ ಮಿಜೋರಾಂನ 40 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಏಳು ಲಕ್ಷ ಮತದಾರರು 209 ಅಭ್ಯರ್ಥಿಗಳ ಹಣೆ ಬರಹ ನಿರ್ಧರಿಸಲಿದ್ದಾರೆ. ಕಾಂಗ್ರೆಸ್ ತೆಕ್ಕೆಯಲ್ಲಿರುವ ಚಿಕ್ಕ ರಾಜ್ಯ ಮಿಜೋರಾಂ ವಶಪಡಿಸಿಕೊಳ್ಳುವ ಬಿಜೆಪಿ ತಂತ್ರ ರೂಪಿಸಿದೆ.

    ಉಳಿದಂತೆ ರಾಜಸ್ಥಾನ, ಛತ್ತೀಸ್‍ಗಢ ಹಾಗೂ ತೆಲಂಗಾಣ ರಾಜ್ಯಗಳ ಚುನಾವಣೆ ಬಳಿಕ ಅಂದರೆ ಡಿಸೆಂಬರ್ 11 ರಂದು ಫಲಿತಾಂಶ ಘೋಷಣೆಯಾಗಲಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಿಜೋರಾಂ, ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ರಾಷ್ಟ್ರಮಟ್ಟದಲ್ಲಿ ಎಲ್ಲರ ಗಮನ ಸೆಳೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಜ್ಯ ಸರ್ಕಾರದ ಮಹತ್ವದ ‘ಬಡವರು ಬಂಧು’ ಯೋಜನೆಗೆ ಚಾಲನೆ

    ರಾಜ್ಯ ಸರ್ಕಾರದ ಮಹತ್ವದ ‘ಬಡವರು ಬಂಧು’ ಯೋಜನೆಗೆ ಚಾಲನೆ

    ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವ ಮೈತ್ರಿ ಸರ್ಕಾರದ ಮಹತ್ವದ ‘ಬಡವರ ಬಂಧು’ ಯೋಜನೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಇಂದು ಚಾಲನೆ ನೀಡಲಿದ್ದಾರೆ.

    ಗುರುವಾರ ಬೆಳಗ್ಗೆ 11 ಗಂಟೆಗೆ ನಗರದ ಯಶವಂತಪುರದ ಎಪಿಎಂಸಿ ಯಾರ್ಡ್ ನಲ್ಲಿ ಮುಖ್ಯಮಂತ್ರಿಗಳು ‘ಬಡವರ ಬಂಧು’ ಯೋಜನೆಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರು ನಗರವೊಂದರಲ್ಲೇ ಮೊದಲ ದಿನವೇ 53 ಸಾವಿರ ವರ್ತಕರಿಗೆ ನೆರವು ನೀಡಲಾಗುವುದು. ಈಗಾಗಲೇ ರಾಜ್ಯಾದ್ಯಂತ ಬಡವರ ಬಂಧು ಯೋಜನೆಯಡಿ ಸಾಲಕ್ಕಾಗಿ ಭಾರಿ ಬೇಡಿಕೆ ಬಂದಿದೆ. ಈ ಯೋಜನೆಯಿಂದ ಖಾಸಗಿ ಲೇವಾದೇವಿದಾರರ ಮೀಟರ್ ಬಡ್ಡಿ ದಂಧೆಯ ಮೇಲೆ ಕಡಿವಾಣ ಬೀಳುತ್ತದೆ ಎಂದು ಹೇಳಲಾಗುತ್ತಿದೆ.

    ಇದಲ್ಲದೇ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಬಡವರ ಬಂಧು ಯೋಜನೆಗೆ ಒಂದೊಂದು ನೋಡಲ್ ಬ್ಯಾಂಕ್ ಗುರುತಿಸಲಾಗುತ್ತದೆ. ಈ ಬ್ಯಾಂಕುಗಳು ಆಯಾ ಜಿಲ್ಲೆಗಳಲ್ಲಿನ ಸಾಲ ಸೌಲಭ್ಯದ ಬ್ಯಾಂಕ್‍ಗಳನ್ನು ಸೂಚಿಸುತ್ತವೆ. ಬೆಂಗಳೂರಿನಲ್ಲಿ ಸಿಟಿ ಕೋ-ಆಪರೇಟಿವ್ ಬ್ಯಾಂಕ್, ಜನತಾ ಕೋ-ಆಪರೇಟಿವ್ ಬ್ಯಾಂಕ್ ಹಾಗೂ ಬೆಂಗಳೂರು ಡಿಸಿಸಿ ಬ್ಯಾಂಕ್‍ಗಳನ್ನು ನೋಡಲ್ ಬ್ಯಾಂಕ್‍ಗಳಾಗಿ ಗುರುತಿಸಲಾಗಿದೆ. ಈ ಬ್ಯಾಂಕ್‍ಗಳು ಮೊಬೈಲ್ ಸರ್ವಿಸ್ ವ್ಯಾನ್‍ಗಳನ್ನು ಹೊಂದಲಿವೆ. ಸಣ್ಣ ವರ್ತಕರು ಬೆಳಗ್ಗೆ ಸಾಲ ಪಡೆದು ಸಂಜೆ ವಾಪಸ್ ಮಾಡಬಹುದಾಗಿದೆ.

    ಏನಿದು ಬಡವರ ಬಂಧು ಯೋಜನೆ?
    ವರ್ತಕರಿಗೆ ಶೂನ್ಯ ಬಡ್ಡಿದರದಲ್ಲಿ 10 ಸಾವಿರ ರೂ.ವರೆಗೆ ಸಾಲ ನೀಡುವ ಮಹತ್ವಾಕಾಂಕ್ಷಿ ಯೋಜನೆ ಇದಾಗಿದೆ. ಮೀಟರ್ ಬಡ್ಡಿ ದಂಧೆಗೆ ಶಾಶ್ವತ ಪರಿಹಾರ ನೀಡುವ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ, ಬಡ್ಡಿ, ಸಾಲದ ಶೂಲಕ್ಕೆ ಸಿಲುಕಿರುವ ಜನರ ನೆರವಿಗೆ ಬರಲು ‘ಬಡವರ ಬಂಧು’ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆ ಇಂದ ಬೀದಿ ಬದಿ ವ್ಯಾಪಾರಿಗಳಿಗೆ ಇನ್ನು ಮುಂದೆ ಬಡ್ಡಿಯೇ ಇಲ್ಲದ ದಿನದ ಸಾಲ ಲಭ್ಯವಾಗಲಿದೆ. ಇದನ್ನೂ ಓದಿ: ಬೀದಿ ಬದಿ ವ್ಯಾಪಾರಿಗಳಿಗೆ ಇನ್ಮುಂದೆ ಸಿಗಲಿದೆ ಬಡ್ಡಿಯೇ ಇಲ್ಲದ ದಿನದ ಸಾಲ: ಏನಿದು ಬಡವರ ಬಂಧು ಯೋಜನೆ? ಯಾರು ಅರ್ಹರು?

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಕುದುರೆಮುಖ-ಮಂಗಳೂರು ಸಂಚಾರ ಆರಂಭ

    ಕುದುರೆಮುಖ-ಮಂಗಳೂರು ಸಂಚಾರ ಆರಂಭ

    ಚಿಕ್ಕಮಗಳೂರು: ರಸ್ತೆ ಮೇಲೆ ಗುಡ್ಡ ಕುಸಿದ ಕಾರಣದಿಂದ ಬೆಳಗ್ಗಿನಿಂದಲೂ ಸಂಚಾರ ಬಂದ್ ಆಗಿದ್ದ ಮಗಳೂರು-ಕುದುರೆಮುಖ ನಡುವಿನ ಸಂಚಾರ ಆರಂಭವಾಗಿದ್ದು, ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

    ಮಳೆಯ ಆರ್ಭಟಕ್ಕೆ ರಾಜ್ಯ ಹೆದ್ದಾರಿ 66ರಲ್ಲಿ ನಾಲ್ಕು ಕಡೆ ರಸ್ತೆ ಮೇಲೆ ಮಣ್ಣು ಕುಸಿದಿತ್ತು, ಪರಿಣಾಮ ಬೆಳಗ್ಗಿನಿಂದ ಕಳಸ ಸಂಚಾರ ಸ್ಥಗಿತಗೊಂಡಿತ್ತು. ಇದರಿಂದ ವಾಹನ ಸವಾರರು ದಾರಿ ನಡುವೆಯೇ ಪರದಾಟ ನಡೆಸಿದ್ದರು.

    ಗುಡ್ಡ ಕುಸಿತ ಕುರಿತು ಮಾಹಿತಿ ಪಡೆದು ಮಣ್ಣು ತೆರವು ಕಾರ್ಯಾಚರಣೆ ಆರಂಭಿಸಿದ ಪೊಲೀಸರು ತಾತ್ಕಾಲಿಕವಾಗಿ ರಸ್ತೆ ಮೇಲೆ ಬಿದ್ದಿದ್ದ ಮಣ್ಣು ತೆರವು ಮಾಡಿ ಸಂಜೆ ವೇಳೆಗೆ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದಾರೆ. ಚಾರ್ಮಾಡಿ ಘಾಟ್ ನಲ್ಲಿ ಲಾರಿಗಳಿಗೆ ನಿಷೇಧವಾದ ಹಿನ್ನೆಲೆಯಲ್ಲಿ ಶನಿವಾರದಿಂದ ಭಾರೀ ಗಾತ್ರದ ವಾಹನಗಳು ಈ ಮಾರ್ಗವಾಗಿ ಮಂಗಳೂರು ತಲುಪುತ್ತಿದ್ದವು. ಅದ್ದರಿಂದ ಈ ಮಾರ್ಗದಲ್ಲಿ ಹೆಚ್ಚಿನ ಟ್ರಾಫಿಕ್ ಜಾಮ್ ಉಂಟಾಗಿತ್ತು.

    ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಕಾರ್ಯಾಚರಣೆ ನಡೆಲು ಪೊಲೀಸರು ಹೆಚ್ಚು ಶ್ರಮ ವಹಿಸಿದ್ದು, ಮಳೆ ಮುಂದುವರಿದಿರುವ ಕಾರಣ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲೇ ಬಿಡುಬಿಟ್ಟಿದ್ದಾರೆ. ಇದನ್ನು ಓದಿ:  ಮಲೆನಾಡಲ್ಲಿ ಗುಡ್ಡ ಕುಸಿತ: ಕುದುರೆಮುಖ ಸಂಪೂರ್ಣ ಬಂದ್ 

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv