Tag: state

  • ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ – ಆ.8ರಂದು ಸುಪ್ರೀಂ ಕೋರ್ಟ್ ವಿಚಾರಣೆ

    ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ – ಆ.8ರಂದು ಸುಪ್ರೀಂ ಕೋರ್ಟ್ ವಿಚಾರಣೆ

    ನವದೆಹಲಿ: ಜಮ್ಮು ಕಾಶ್ಮೀರಕ್ಕೆ (Jammu Kashmir) ಮರಳಿ ರಾಜ್ಯದ ಸ್ಥಾನಮಾನ ದೊರಕಿಸಿಕೊಡುವಂತೆ ಕೋರಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ (Supreme Court) ಆ.8ರಂದು ನಡೆಸಲಿದೆ.

    ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ಅವರು ಇಂದು (ಆ.6) ಸಿಜೆಐ ಬಿಆರ್ ಗವಾಯಿ ಅವರ ನೇತೃತ್ವದ ಪೀಠದ ಎದುರು ಪ್ರಕರಣವನ್ನು ಪ್ರಸ್ತಾಪಿಸಿದ್ದು, ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ.ಇದನ್ನೂ ಓದಿ: ಅಮಿತ್ ಶಾ ವಿರುದ್ಧದ ಮಾನಹಾನಿ ಕೇಸ್ – ರಾಹುಲ್ ಗಾಂಧಿಗೆ ಜಾಮೀನು ಮಂಜೂರು

    ಕಳೆದ ವರ್ಷ ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಲೇಜು ಅಧ್ಯಾಪಕ ಜಹೂರ್ ಅಹ್ಮದ್ ಭಟ್ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ರಾಜ್ಯದ ಸ್ಥಾನಮಾನ ಮರುಸ್ಥಾಪಿಸದೇ ಇರುವುದರಿಂದ ಕಾಶ್ಮೀರದ ಜನರ ಹಕ್ಕುಗಳ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿದೆ ಎಂದು ಉಲ್ಲೇಖಿಸಿದ್ದರು. ರಾಜ್ಯದ ಸ್ಥಾನಮಾನ ನೀಡುವ ಮೊದಲೇ ಚುನಾವಣೆ ನಡೆಸಿ ಶಾಸಕಾಂಗ ಸಭೆ ರಚಿಸಲು ಹೊರಡುವುದು ಒಕ್ಕೂಟ ವ್ಯವಸ್ಥೆಯ ಪರಿಕಲ್ಪನೆಯನ್ನು ಉಲ್ಲಂಘಿಸುತ್ತದೆ ಎಂದು ತಿಳಿಸಿದ್ದರು.

    ಕಾಂಗ್ರೆಸ್ ಮತ್ತು ವಿಧಾನಸಭೆಯ ಕೆಲವು ಸ್ವತಂತ್ರ್ಯ ಸದಸ್ಯರ ಬೆಂಬಲದೊಂದಿಗೆ ನ್ಯಾಷನಲ್ ಕಾನ್ಫರೆನ್ಸ್ ನೇತೃತ್ವದ ಸರ್ಕಾರ ಪ್ರಸ್ತುತ ಕಾಶ್ಮೀರದಲ್ಲಿ ಅಧಿಕಾರ ನಡೆಸುತ್ತಿದೆ. ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿ ಕೆಲ ವರ್ಷಗಳ ಹಿಂದೆಯೇ ರದ್ದಾಗಿ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ರೂಪಿಸಲಾಗಿತ್ತು. ಅದೇ ರಾಜ್ಯದಿಂದ ಲಡಾಖ್ ಪ್ರದೇಶವನ್ನು ಮತ್ತೊಂದು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಲಾಗಿತ್ತು ಎಂದಿದ್ದರು.

    ಆರ್ಟಿಕಲ್ 370 ರದ್ದತಿ ಎತ್ತಿಹಿಡಿದು 2023ರ ಡಿಸೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಮರುಪರಿಶೀಲಿಸಲು ಕೋರಿ ಹಲವು ಅರ್ಜಿಗಳ ಸಲ್ಲಿಕೆಯಾಗಿತ್ತು. ಬಳಿಕ ಸುಪ್ರೀಂ ಕೋರ್ಟ್ 2024ರ ಮೇನಲ್ಲಿ ವಿಚಾರಣೆ ನಡೆಸಿ, ಅರ್ಜಿಗಳನ್ನು ವಜಾಗೊಳಿಸಿತ್ತು. ಇದೇ ವೇಳೆ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ತಾತ್ಕಾಲಿಕವಾದದ್ದು. ಈ ಪ್ರದೇಶಕ್ಕೆ ಮರಳಿ ರಾಜ್ಯದ ಸ್ಥಾನಮಾನ ನೀಡಲಾಗುವುದು ಎಂದಿದ್ದ ಭಾರತದ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ಅವರ ಹೇಳಿಕೆಯನ್ನು ಕೋರ್ಟ್ ದಾಖಲಿಸಿಕೊಂಡಿತ್ತು.ಇದನ್ನೂ ಓದಿ: Shivamogga | ಕಳಚಿದ ತಾಳಗುಪ್ಪ – ಮೈಸೂರು ರೈಲು ಬೋಗಿ; ತಪ್ಪಿದ ಭಾರೀ ಅನಾಹುತ

  • ರಾಜ್ಯದಲ್ಲಿ ಒಂದು ವಾರ ಭಾರೀ ಮಳೆಯ ಮುನ್ಸೂಚನೆ

    ರಾಜ್ಯದಲ್ಲಿ ಒಂದು ವಾರ ಭಾರೀ ಮಳೆಯ ಮುನ್ಸೂಚನೆ

    ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡ್ಮೂರು ದಿನದಿಂದ ಮತ್ತೆ ಮುಂಗಾರು ಮಳೆ ಚುರುಕಾಗಿದೆ. ಕಳೆದೊಂದು ವಾರದಿಂದ ಅಲ್ಪ ಪ್ರಮಾಣದಲ್ಲಿ ಬಿಡುವು ಕೊಟ್ಟಿದ್ದ ವರುಣ (Rain) ಈಗ ಮತ್ತೆ ಅಬ್ಬರಿಸುವ ಮುನ್ಸೂಚನೆ ನೀಡಿದ್ದು, ಮುಂದಿನ ಒಂದು ವಾರ ಕರುನಾಡಲ್ಲಿ ಮಳೆ ಜೋರಾಗುವ ಸಾಧ್ಯತೆಯಿದೆ.

    ಹೌದು. ರಾಜ್ಯದ ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ (Red Alert) ಮುಂದುವರಿದಿದೆ. ಮುಂದಿನ ಒಂದು ವಾರಗಳ ಕಾಲ ಮಳೆಯಾಗುವ ಮುನ್ಸೂಚನೆ ಇದ್ದು, ಇಂದಿನಿಂದ ಆರೆಂಜ್ ಅಲರ್ಟ್ ಕೂಡ ಘೋಷಿಸಲಾಗಿದೆ. ಇನ್ನೂ ಉತ್ತರ ಒಳನಾಡು ಪ್ರದೇಶ, ಹಾಗೂ ದಕ್ಷಿಣ ಒಳನಾಡಿಗೂ ಭಾರೀ ಮಳೆಯ ಮುನ್ಸೂಚನೆ ನೀಡಿದೆ.

    ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (Orange Alert) ನೀಡಿದ್ದು, ಮೂರನೇ ದಿನದಿಂದ ಮೂರು ದಿನ ಯಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ಉತ್ತರ ಒಳನಾಡಿನ ಇನ್ನುಳಿದ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ದಕ್ಷಿಣ ಒಳನಾಡಿಗೆ ರೆಡ್ ಅಲರ್ಟ್ ನೀಡಲಾಗಿದೆ. ಇದನ್ನೂ ಓದಿ: ನೆಟ್ ಪರೀಕ್ಷೆ ಪೇಪರ್ ಸೋರಿಕೆ ಕೇಸ್ – ತನಿಖೆಗೆ ತೆರಳಿದ್ದ ಸಿಬಿಐ ಅಧಿಕಾರಿಗಳ ಮೇಲೆ ಹಲ್ಲೆ

    ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೂ ರೆಡ್ ಅಲರ್ಟ್ ನೀಡಿದ್ದು, ಚಾಮರಾಜನಗರ, ಮೈಸೂರು, ಮಂಡ್ಯ, ದಾವಣಗೆರೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ಇತರೆ ಜಿಲ್ಲೆಗಳಿಗೂ ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ.

    ಇತ್ತ ಬೆಂಗಳೂರಿನಲ್ಲೂ ಮುಂದಿನ ಒಂದು ವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಸದ್ಯ ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಆಗಾಗ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ.

    ಒಟ್ಟಿನಲ್ಲಿ ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಂಡಿದ್ದು, ಜೂನ್ ಕೊನೆ ವಾರ ಮತ್ತು ಜುಲೈ ಮೊದಲ ವಾರ ರಾಜ್ಯಾದ್ಯಂತ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.

  • ಮುಂದಿನ 3 ಗಂಟೆಯಲ್ಲಿ ರಾಜ್ಯದ ಹಲವು ಕಡೆ ಭಾರೀ ಗಾಳಿ, ಮಳೆ ಸಾಧ್ಯತೆ

    ಮುಂದಿನ 3 ಗಂಟೆಯಲ್ಲಿ ರಾಜ್ಯದ ಹಲವು ಕಡೆ ಭಾರೀ ಗಾಳಿ, ಮಳೆ ಸಾಧ್ಯತೆ

    ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ ಮುಂದಿನ ಮೂರು ಗಂಟೆಯಲ್ಲಿ ಭಾರೀ ಮಳೆಯಾಗುವ (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

    ದಕ್ಷಿಣ ಕ್ನನಡ, ಧಾರವಾಡ, ಗದಗ, ಬೆಳಗಾವಿ, ಯಾದಗಿರಿ, ವಿಜಯಪುರ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಮೈಸೂರು , ಚಾಮರಾಜನಗರ, ಮುಂಡ್ಯ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆ ಮಳೆಯಾಗುವ ಸಾಧ್ಯತೆಗಳಿವೆ.

    40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಹೀಗಾಗಿ ರಾಜ್ಯದ ಹಲವು ಕಡೆ ಮಳೆಯ ಮುನ್ನೆಚ್ಚರಿಕೆಯನ್ನು ಇಲಾಖೆ ನೀಡಿದೆ. ಇದನ್ನೂ ಓದಿ: ಲಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ವಾಹನದಲ್ಲಿತ್ತು 7 ಕೋಟಿ ರೂ.!

    ರಾಜ್ಯದ ಹಲವು ಕಡೆಗಳಲ್ಲಿ ಈಗಾಗಲೇ ಭಾರೀ ಮಳೆಯಾಗುತ್ತಿದೆ. ಮಂಗಳೂರು, ಹಾಸನ, ಚಾಮರಾಜನಗರ , ಧಾರವಾಡ, ಚಿಕ್ಕಮಗಳೂರು, ಹಾವೇರಿ ಹಾಗೂ ಹುಬ್ಬಳ್ಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ರೈತರು ಸಂತಸಗೊಂಡಿದ್ದಾರೆ.

  • ಇಂದಿನಿಂದ 4 ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆ

    ಇಂದಿನಿಂದ 4 ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆ

    ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಸಿಂಚನ ಮುಂದುವರಿಕೆಯಾಗಿದ್ದು, ರಾಜ್ಯದ ಕರಾವಳಿ (Rain In Karnataka) ಸೇರಿದಂತೆ ಹಲವು ಭಾಗಗಳಲ್ಲಿ ವರುಣಾರ್ಭಟ ಮುಂದುವರಿಯುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನಿಡಿದೆ.

    ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ ಸಿಕ್ಕಿದ್ದು, ಉತ್ತರ ಕನ್ನಡ (UttarKannada) ಜಿಲ್ಲೆಗೆ ರೆಡ್ ಅಲರ್ಟ್ ಮುಂದುವರಿಕೆಯಾಗಿದೆ. ಇನ್ನು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಮಲೆನಾಡು ಭಾಗದ ಕೊಡಗು (Kodagu), ಶಿವಮೊಗ್ಗ (Shivamogga) ಹಾಗೂ ಚಿಕ್ಕಮಗಳೂರು (Chikkamagaluru) ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ (Belagavi), ಹಾವೇರಿ (Haveri) ಜಿಲ್ಲೆಗಳಿಗೆ ಆರೆಂಜ್, ಧಾರವಾಡ (Dharwad), ಕಲಬುರಗಿ (Kalaburagi), ರಾಯಚೂರು (Raichur) ಹಾಗೂ ಗದಗ (Gadag) ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಕರಾವಳಿ ಪ್ರದೇಶಗಳಲಿ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಇಂದು ಮತ್ತು ಶುಕ್ರವಾರ ಮೊಡಕವಿದ ವಾತಾವರಣ ಇರಲಿದ್ದು, ಇಂದು ಮತ್ತು ನಾಳೆ ಗುಡುಗು ಮಿಂಚಿನ ಸಮೇತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Weather Department) ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಚಲುವರಾಯಸ್ವಾಮಿ ನೆರಳಲ್ಲಿ ವರ್ಗಾವಣೆ ಆರೋಪ- KSRTC ಸಿಬ್ಬಂದಿ ಆತ್ಮಹತ್ಯೆಗೆ ಯತ್ನ

    ಉಡುಪಿಯಲ್ಲಿ (Udupi) ಕಳೆದ ಎರಡು ದಿನಗಳಿಂದ ಬಿಟ್ಟುಬಿಡದೆ ಮುಂಗಾರು ಮಳೆ ಸುರಿಯುತ್ತಿದೆ. ನದಿಗಳೆಲ್ಲ ತುಂಬಿ ಹರಿಯುತ್ತಿದೆ. ಇಂದ್ರಾಣಿ ನದಿ ಕೃಷ್ಣ ಮಠದ ಪಾಕಿರ್ಂಗ್ ಏರಿಯಾ ಕೆ ನುಗ್ಗಿದೆ. ಮಹಾಮಳೆ ಪ್ರವಾಸಿಗರಿಗೆ ವ್ಯಾಪಾರಿಗಳಿಗೆ ತಲೆನೋವು ತಂದಿದೆ. ಕಾರು, ಬೈಕುಗಳು ನೀರಿನಲ್ಲೇ ಸಂಚರಿಸುವ ಸ್ಥಿತಿ ಉಂಟಾಗಿದೆ. ಹೀಗಾಗಿ ಪಾಕಿರ್ಂಗ್ ನಿರ್ವಹಣೆ ಮಾಡುವ ಕೃಷ್ಣ ಮಠದ ಟ್ರಸ್ಟ್ ವಿರುದ್ಧ ವ್ಯಾಪಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ದಕ್ಷಿಣ ಕ್ನನಡ (Dakshina Kannada) ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಮೂರನೇ ದಿನವಾದ ಇಂದು ಕೂಡ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಿಲಿಂಡರ್‌, ಪ್ಲ್ಯಾಂಟ್‌ಗಳ ಕಾರ್ಯನಿರ್ವಹಣೆ ಬಗ್ಗೆ ಗಮನ ಹರಿಸಿ – ಕೇಂದ್ರದಿಂದ ರಾಜ್ಯಗಳಿಗೆ ಎಚ್ಚರಿಕೆ

    ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಿಲಿಂಡರ್‌, ಪ್ಲ್ಯಾಂಟ್‌ಗಳ ಕಾರ್ಯನಿರ್ವಹಣೆ ಬಗ್ಗೆ ಗಮನ ಹರಿಸಿ – ಕೇಂದ್ರದಿಂದ ರಾಜ್ಯಗಳಿಗೆ ಎಚ್ಚರಿಕೆ

    ನವದೆಹಲಿ: ಚೀನಾ (China), ಅಮೆರಿಕ (America) ಸೇರಿದಂತೆ ಕೆಲವು ದೇಶಗಳಲ್ಲಿ ಕೊರೊನಾ (Corona) ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ, ಮುಂದೆ ಎದುರಾಗುವ ಯಾವುದೇ ಸವಾಲುಗಳನ್ನು ಎದುರಿಸಲು ಆಸ್ಪತ್ರೆಗಳಲ್ಲಿ (Hospital) ಆಕ್ಸಿಜನ್ (Oxygen), ಸಿಲಿಂಡರ್‌ಗಳ (Cylinder) ಸಾಕಷ್ಟು ದಾಸ್ತಾನು ಮತ್ತು ವೆಂಟಿಲೇಟರ್‌ಗಳಂತಹ (Ventilator) ಜೀವರಕ್ಷಕ ಸಾಧನಗಳು ಲಭ್ಯವಿರುವಂತೆ ನೋಡಿಕೊಳ್ಳಿ ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

    ಪ್ರೆಶರ್ ಸ್ವಿಂಗ್ ಅಡ್ಸಾರ್ಪ್ಶನ್ (PSA) ಆಮ್ಲಜನಕವನ್ನು ಉತ್ಪಾದಿಸುವ ಘಟಕಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ತಿಳಿದುಕೊಳ್ಳುವಂತೆ ಮತ್ತು ಅವುಗಳನ್ನು ಪರಿಶೀಲಿಸಲು ನಿಯಮಿತ ಅಣಕು ಪ್ರದರ್ಶನ ನಡೆಸುವಂತೆ ಆರೋಗ್ಯ ಸಚಿವಾಲಯವು ಹೇಳಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಆರೋಗ್ಯ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಮನೋಹರ್ ಅಗ್ನಾನಿ, ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆ ಇದ್ದರೂ ಕೂಡ, ಮುಂದೆ ಎದುರಾಗುವ ಯಾವುದೇ ಸಂದರ್ಭಗಳನ್ನು ಎದುರಿಸಲು ವೈದ್ಯಕೀಯ ಮೂಲಸೌಕರ್ಯಗಳ ಕಾರ್ಯಾಚರಣೆ ಮತ್ತು ನಿರ್ವಹಣೆ ಅತ್ಯಂತ ಮಹತ್ವದ್ದಾಗಿದೆ. ಹಾಗಾಗಿ ನಾವು ಈ ಬಗ್ಗೆ ಈಗಿನಿಂದಲೇ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕೆಂದು ಸಲಹೆ ನೀಡಿದರು. ಇದನ್ನೂ ಓದಿ: ಊಟಕ್ಕಾಗಿ ಬಿಜೆಪಿಯಿಂದ ಕೋಟಿ-ಕೋಟಿ ಸಾರ್ವಜನಿಕರ ಹಣ ಲೂಟಿ: ಜೀತು ಪಟ್ವಾರಿ

    ಎಲ್ಲಾ ಕ್ಲಿನಿಕಲ್ ಸೆಟ್ಟಿಂಗ್‍ಗಳಲ್ಲಿ ವೈದ್ಯಕೀಯ ಆಮ್ಲಜನಕವು ಪ್ರಮುಖವಾಗಿದೆ. ವಿಶೇಷವಾಗಿ ಸಾಂಕ್ರಾಮಿಕ ನಿರ್ವಹಣೆಯ ಸಮಯದಲ್ಲಿ ಮತ್ತು ರೋಗಿಗಳ ಆರೈಕೆ ಮತ್ತು ಕೋವಿಡ್-19 ನಿರ್ವಹಣೆಯ ಸಮಯದಲ್ಲಿ ಜೀವಗಳನ್ನು ಉಳಿಸಲು ಆಮ್ಲಜನಕ ಪೂರೈಕೆ ನಿರ್ಣಾಯಕವಾಗಿದೆ. ಹಾಗಾಗಿ ಈ ಬಗ್ಗೆ ಗಮನಹರಿಸಿ. ಕೊರೊನಾ ಈಗ ಕಡಿಮೆಯಿದೆ ಆದರೆ ಭವಿಷ್ಯದಲ್ಲಿ ಯಾವ ರೀತಿ ಉಲ್ಬಣಗೊಳ್ಳುತ್ತೋ ಗೊತ್ತಿಲ್ಲ. ಎಲ್ಲಾ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲ್ಯಾಂಟ್‌ ಸುಸ್ಥಿತಿಯಲ್ಲಿ ನೋಡಿಕೊಳ್ಳಿ. ಜೊತೆಗೆ ಐಸಿಯು ವ್ಯವಸ್ಥೆ ಸರಿಯಾಗಿ ನಿರ್ವಹಣೆ ಬಗ್ಗೆ ಕ್ರಮ ವಹಿಸಿ. ವಾರ ವಾರ ಸಭೆ ನಡೆಸಿ ಮಾಹಿತಿ ನೀಡಿ ಎಂದು ಸೂಚಿಸಿದರು. ಇದನ್ನೂ ಓದಿ: ‘ವೈ’ ಭದ್ರತೆಯಲ್ಲಿ ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕನ ವಾಕಿಂಗ್

    Live Tv
    [brid partner=56869869 player=32851 video=960834 autoplay=true]

  • 17 ರಾಜ್ಯಗಳಲ್ಲಿ ಬಿಜೆಪಿ, 2 ಕಡೆ ಕಾಂಗ್ರೆಸ್ – ಯಾವ ರಾಜ್ಯದಲ್ಲಿ ಯಾರಿಗೆ ಅಧಿಕಾರ?

    17 ರಾಜ್ಯಗಳಲ್ಲಿ ಬಿಜೆಪಿ, 2 ಕಡೆ ಕಾಂಗ್ರೆಸ್ – ಯಾವ ರಾಜ್ಯದಲ್ಲಿ ಯಾರಿಗೆ ಅಧಿಕಾರ?

    ನವದೆಹಲಿ: ಪಂಚರಾಜ್ಯ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಉತ್ತರ ಪ್ರದೇಶ, ಉತ್ತರಾಖಂಡ್, ಗೋವಾ, ಮಣಿಪುರದಲ್ಲಿ ಬಿಜೆಪಿ ಜಯಗಳಿಸಿದೆ. ಈ ಮೂಲಕ ಒಟ್ಟಾರೆ ಬಿಜೆಪಿ ಮತ್ತು ಮೈತ್ರಿಕೂಟದೊಂದಿಗೆ ದೇಶದಲ್ಲಿ 17 ರಾಜ್ಯಗಳಲ್ಲಿ ಅಧಿಕಾರ ಪಡೆದಿದೆ.

    ಪಂಜಾಬ್‍ನಲ್ಲಿ ಆಮ್ ಆದ್ಮಿ ಪಕ್ಷ ಗೆಲುವು ಸಾಧಿಸಿದ್ದು, ಈ ಮೂಲಕ ಕಾಂಗ್ರೆಸ್ ಅಧಿಕಾರದಲ್ಲಿದ್ದ ಮತ್ತೊಂದು ರಾಜ್ಯವನ್ನು ಕಳೆದುಕೊಂಡಿದೆ.

    ಬಿಜೆಪಿ
    ಅರುಣಾಚಲ ಪ್ರದೇಶ, ಅಸ್ಸಾಂ, ಗುಜರಾತ್, ಹರ್ಯಾಣ, ಹಿಮಾಚಲ ಪ್ರದೇಶ, ಕರ್ನಾಟಕ, ಮಧ್ಯಪ್ರದೇಶ, ಮಣಿಪುರ, ತ್ರಿಪುರ, ಉತ್ತರಪ್ರದೇಶ, ಉತ್ತರಾಖಂಡದಲ್ಲಿ ಸಂಪೂರ್ಣ ಅಧಿಕಾರದಲ್ಲಿದೆ. ಇದನ್ನೂ ಓದಿ: ಯುಪಿಯಲ್ಲಿ ‘ಬುಲ್ಡೋಜರ್ ಬಾಬಾ’ ಅಬ್ಬರ – ಮೋದಿ, ಯೋಗಿ ಆರ್ಭಟಕ್ಕೆ ಧೂಳೀಪಟ

    ಬಿಜೆಪಿ+
    ಸಿಕ್ಕಿಂ, ಬಿಹಾರ, ಮಿಜೋರಾಂ, ನಾಗಾಲ್ಯಾಂಡ್, ಮೇಘಾಲಯ, ಗೋವಾದಲ್ಲಿ ಬಿಜೆಪಿ ಮೈತ್ರಿ ಮಾಡಿಕೊಳ್ಳುವ ಮೂಲಕ ಅಧಿಕಾರದಲ್ಲಿದೆ. ಒಟ್ಟಾರೆ 17 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿದಿದೆ.

    ಕಾಂಗ್ರೆಸ್
    ರಾಜಸ್ಥಾನ, ಛತ್ತೀಸ್‍ಗಢದಲ್ಲಿ ಪೂರ್ಣ ಅಧಿಕಾರದಲ್ಲಿದ್ದರೆ ಜಾರ್ಖಂಡ್, ಮಹಾರಾಷ್ಟ್ರ, ತಮಿಳುನಾಡಿನಲ್ಲಿ ಮೈತ್ರಿ ಮಾಡಿಕೊಂಡಿದೆ. ಇದನ್ನೂ ಓದಿ:  ಬುಲ್ಡೋಜರ್ ಮುಂದೆ ಯಾರು ಬರಲು ಸಾಧ್ಯವಿಲ್ಲ: ಹೇಮಾ ಮಾಲಿನಿ

    ಪ್ರಾದೇಶಿಕ ಪಕ್ಷಗಳು
    ಆಂಧ್ರ ಪ್ರದೇಶ, ಕೇರಳ, ಒಡಿಶಾ, ಪಂಜಾಬ್, ತೆಲಂಗಾಣ, ಪಶ್ಚಿಮ ಬಂಗಾಳ ಸೇರಿ ಒಟ್ಟು 8 ರಾಜ್ಯಗಳಲ್ಲಿ ಅಧಿಕಾರ ಹೊಂದಿದೆ.


    BJP, Congress, other parties, state, New Delhi

  • ರಾಜ್ಯದ ಹವಾಮಾನ ವರದಿ: 25-11-2021

    ರಾಜ್ಯದ ಹವಾಮಾನ ವರದಿ: 25-11-2021

    ರಾಜ್ಯದಲ್ಲಿ ಧಾರಾಕಾರ ಮಳೆ ಆಗಬಹುದು ಎಂದು ಹವಾಮಾನ ತಜ್ಞರು ಎಚ್ಚರಿಸಿದ್ದಾರೆ.

    ಈ ನಡುವೆ ನವೆಂಬರ್ 26ರಿಂದ ಚಂಡಮಾರುತ ಮಳೆ ಆಗಲಿದ್ದು, ನವೆಂಬರ್ 29ರವರೆಗೂ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ. ಚಿಂತಾಮಣಿ ತಾಲೂಕಿನಲ್ಲಿ ವಾಡಿಕೆಯಿಂದ ಎರಡು ಪಟ್ಟು ಅಂದರೆ 1,500 ಮಿಲಿ ಮೀಟರ್ ಮಳೆ ಆಗಿದೆ. ಚಿಕ್ಕಬಳ್ಳಾಪುರ, ಕೋಲಾರ, ತುಮಕೂರಲ್ಲಿ ನವೆಂಬರ್ ತಿಂಗಳಲ್ಲಿ ವಾಡಿಕೆಯ 60 ಮಿಲಿ ಮೀಟರ್ ಮಳೆಗಿಂತ 300 ಮಿಲಿ ಮೀಟರ್ ಮಳೆ ಆಗಿದೆ.

    ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಾರವಾರ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ನಗರಗಳ ಇಂದಿನ ಹವಾಮಾನ ವರದಿ:

    ಬೆಂಗಳೂರು: 27-19
    ಮಂಗಳೂರು: 32-24
    ಶಿವಮೊಗ್ಗ: 30-19
    ಬೆಳಗಾವಿ: 30-18
    ಮೈಸೂರು: 28-19

    ಮಂಡ್ಯ: 28-19
    ರಾಮನಗರ: 28-19
    ಮಡಿಕೇರಿ: 27-17
    ಹಾಸನ: 27-18
    ಚಾಮರಾಜನಗರ: 28-19

    ಚಿಕ್ಕಬಳ್ಳಾಪುರ: 25-17
    ಕೋಲಾರ: 26-18
    ತುಮಕೂರು: 28-19
    ಉಡುಪಿ: 32-24
    ಕಾರವಾರ: 33-25

    ಚಿಕ್ಕಮಗಳೂರು: 27-18
    ದಾವಣಗೆರೆ: 30-19
    ಚಿತ್ರದುರ್ಗ: 28-19
    ಹಾವೇರಿ: 31-19
    ಬಳ್ಳಾರಿ: 30-20

    ಗದಗ: 31-19
    ಕೊಪ್ಪಳ: 30-20
    ರಾಯಚೂರು: 31-20
    ಯಾದಗಿರಿ: 32-20

    ವಿಜಯಪುರ: 27-18
    ಬೀದರ್: 30-17
    ಕಲಬುರಗಿ: 32-19
    ಬಾಗಲಕೋಟೆ: 32-19

  • ರಾಜ್ಯದ ಹವಾಮಾನ ವರದಿ: 24-11-2021

    ರಾಜ್ಯದ ಹವಾಮಾನ ವರದಿ: 24-11-2021

    ಅಕಾಲಿಕ ಮಳೆಯಿಂದ ಸದ್ಯಕ್ಕೆ ರಾಜ್ಯಕ್ಕೆ ವಿರಾಮ ಇಲ್ಲ. ಮತ್ತೆ ಕೆಲವು ದಿನ ರಾಜ್ಯದಲ್ಲಿ ಧಾರಾಕಾರ ಮಳೆ ಆಗಬಹುದು ಎಂದು ಹವಾಮಾನ ತಜ್ಞರು ಎಚ್ಚರಿಸಿದ್ದಾರೆ.

    ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಬ್ಬರಿಸುವ ನಿರೀಕ್ಷೆ ಇದೆ. ರಾಜಧಾನಿ ಬೆಂಗಳೂರು, ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಲ್ಲೂ ಇಂದಿನಿಂದ ಮತ್ತೆ ಕೆಲವು ದಿನ ಮಳೆ ಆಗಬಹುದು. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಧಾರಾಕಾರ ಮಳೆಯ ಎಚ್ಚರಿಕೆ ನೀಡಲಾಗಿದೆ. ಆದರೆ ಹವಾಮಾನ ಇಲಾಖೆ ಅಧಿಕೃತವಾಗಿ ಮಳೆಯ ಮುನ್ನೆಚ್ಚರಿಕೆ ನೀಡಿಲ್ಲ.

    ಈ ನಡುವೆ ನವೆಂಬರ್ 26ರಿಂದ ಚಂಡಮಾರುತ ಮಳೆ ಆಗಲಿದ್ದು, ನವೆಂಬರ್ 29ರವರೆಗೂ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ. ಚಿಂತಾಮಣಿ ತಾಲೂಕಿನಲ್ಲಿ ವಾಡಿಕೆಯಿಂದ ಎರಡು ಪಟ್ಟು ಅಂದರೆ 1,500 ಮಿಲಿ ಮೀಟರ್ ಮಳೆ ಆಗಿದೆ. ಚಿಕ್ಕಬಳ್ಳಾಪುರ, ಕೋಲಾರ, ತುಮಕೂರಲ್ಲಿ ನವೆಂಬರ್ ತಿಂಗಳಲ್ಲಿ ವಾಡಿಕೆಯ 60 ಮಿಲಿ ಮೀಟರ್ ಮಳೆಗಿಂತ 300 ಮಿಲಿ ಮೀಟರ್ ಮಳೆ ಆಗಿದೆ.

    ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಾರವಾರ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ನಗರಗಳ ಇಂದಿನ ಹವಾಮಾನ ವರದಿ:

    ಬೆಂಗಳೂರು: 27-19
    ಮಂಗಳೂರು: 32-24
    ಶಿವಮೊಗ್ಗ: 31-21
    ಬೆಳಗಾವಿ: 29-20
    ಮೈಸೂರು: 29-19

    ಮಂಡ್ಯ: 29-19
    ರಾಮನಗರ: 28-20
    ಮಡಿಕೇರಿ: 27-17
    ಹಾಸನ: 28-19
    ಚಾಮರಾಜನಗರ: 29-19

    ಚಿಕ್ಕಬಳ್ಳಾಪುರ: 27-19
    ಕೋಲಾರ: 27-19
    ತುಮಕೂರು: 28-19
    ಉಡುಪಿ: 32-25
    ಕಾರವಾರ: 32-26

    ಚಿಕ್ಕಮಗಳೂರು: 27-18
    ದಾವಣಗೆರೆ: 30-21
    ಚಿತ್ರದುರ್ಗ: 28-20
    ಹಾವೇರಿ: 31-21
    ಬಳ್ಳಾರಿ: 29-22

    ಗದಗ: 30-21
    ಕೊಪ್ಪಳ: 30-22
    ರಾಯಚೂರು: 31-23
    ಯಾದಗಿರಿ: 30-21

    kerala rain

    ವಿಜಯಪುರ: 30-21
    ಬೀದರ್: 30-19
    ಕಲಬುರಗಿ: 31-21
    ಬಾಗಲಕೋಟೆ: 27-19

  • ರಾಜ್ಯದ ಹವಾಮಾನ ವರದಿ: 23-11-2021

    ರಾಜ್ಯದ ಹವಾಮಾನ ವರದಿ: 23-11-2021

    ಬೆಳಗ್ಗೆ ವಾತಾವರಣದಲ್ಲಿ ಚಳಿಯಿದ್ದು, ಸಂಜೆ ವೇಳೆಗೆ ಮಳೆ ಬರುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದು ಅಲ್ಲದೇ ಇಂದು ಕರಾವಳಿಯ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದ್ದು, ಇಂದು ಯಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

    ಬೆಳಗಾವಿ, ಧಾರವಾಡ, ಗದಗ, ಹಾವೇರಿ,ರಾಯಚೂರು ಜಿಲ್ಲೆಗಳಿಗೆ ಯಲ್ಲೊ ಅಲರ್ಟ್, ನಾಳೆ ಧಾರವಾಡ, ಹಾವೇರಿ ಗದಗ ಕೊಪ್ಪಳ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಾರವಾರ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ನಗರಗಳ ಇಂದಿನ ಹವಾಮಾನ ವರದಿ:

    ಬೆಂಗಳೂರು: 27-19
    ಮಂಗಳೂರು: 31-24
    ಶಿವಮೊಗ್ಗ: 31-21
    ಬೆಳಗಾವಿ: 29-20
    ಮೈಸೂರು: 29-20

    ಮಂಡ್ಯ: 29-20
    ರಾಮನಗರ: 29-20
    ಮಡಿಕೇರಿ: 25-17
    ಹಾಸನ: 27-18
    ಚಾಮರಾಜನಗರ: 28-20

    ಚಿಕ್ಕಬಳ್ಳಾಪುರ: 27-18
    ಕೋಲಾರ: 27-19
    ತುಮಕೂರು: 28-19
    ಉಡುಪಿ: 31-24
    ಕಾರವಾರ: 31-26

    ಚಿಕ್ಕಮಗಳೂರು: 27-18
    ದಾವಣಗೆರೆ: 30-21
    ಚಿತ್ರದುರ್ಗ: 29-20
    ಹಾವೇರಿ: 30-21
    ಬಳ್ಳಾರಿ: 30-22

    ಗದಗ: 29-21
    ಕೊಪ್ಪಳ: 30-22
    ರಾಯಚೂರು: 31-23
    ಯಾದಗಿರಿ: 30-22

    ವಿಜಯಪುರ: 29-22
    ಬೀದರ್: 29-21
    ಕಲಬುರಗಿ: 30-22
    ಬಾಗಲಕೋಟೆ: 31-22

  • ರಾಜ್ಯದ ಹವಾಮಾನ ವರದಿ: 22-11-2021

    ರಾಜ್ಯದ ಹವಾಮಾನ ವರದಿ: 22-11-2021

    ಮೋಡ ಕವಿದ ವಾತಾವರಣವಿದ್ದು, ಅಲ್ಪ ಮಟ್ಟಿಗೆ ಬಿಸಿಲು ಕಾಣಿಸುತ್ತೆ. ಚಳಿ ಮತ್ತು ಮಳೆ ಕಡಿಮೆಯಾಗುತ್ತದೆ. ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳು ಭಾರೀ ಮಳೆ ಸಾಧ್ಯತೆ ಇದ್ದು, ಕರಾವಳಿಯ ಜಿಲ್ಲೆಗಳಿಗೂ ಇಂದು ಯಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

    ಉತ್ತರ ಒಳನಾಡಿನ ಕೆಲ ಜಿಲ್ಲೆಗಳಿಗೂ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಇಂದು ಬೆಳಗಾವಿ, ಧಾರವಾಡ, ಗದಗ, ಹಾವೇರಿ,ರಾಯಚೂರು ಜಿಲ್ಲೆಗಳಿಗೆ ಯಲ್ಲೊ ಅಲರ್ಟ್, ನಾಳೆ ಧಾರವಾಡ, ಹಾವೇರಿ ಗದಗ ಕೊಪ್ಪಳ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ನಗರಗಳ ಇಂದಿನ ಹವಾಮಾನ ವರದಿ:

    ಬೆಂಗಳೂರು: 26-19
    ಮಂಗಳೂರು: 30-24
    ಶಿವಮೊಗ್ಗ: 29-21
    ಬೆಳಗಾವಿ: 28-21
    ಮೈಸೂರು: 28-21

    ಮಂಡ್ಯ: 28-21
    ರಾಮನಗರ: 28-20
    ಮಡಿಕೇರಿ: 24-17
    ಹಾಸನ: 26-19
    ಚಾಮರಾಜನಗರ: 28-21

    ಚಿಕ್ಕಬಳ್ಳಾಪುರ: 26-19
    ಕೋಲಾರ: 26-20
    ತುಮಕೂರು: 27-20
    ಉಡುಪಿ: 30-24
    ಕಾರವಾರ: 29-25

    ಚಿಕ್ಕಮಗಳೂರು: 26-19
    ದಾವಣಗೆರೆ: 29-21
    ಚಿತ್ರದುರ್ಗ: 27-21
    ಹಾವೇರಿ: 29-22
    ಬಳ್ಳಾರಿ: 29-22

    ಗದಗ: 28-21
    ಕೊಪ್ಪಳ: 29-22
    ರಾಯಚೂರು: 31-24
    ಯಾದಗಿರಿ: 30-23

    ವಿಜಯಪುರ: 28-22
    ಬೀದರ್: 29-21
    ಕಲಬುರಗಿ: 29-22
    ಬಾಗಲಕೋಟೆ: 29-22