Tag: State bjp President

  • ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ನೇಮಕ

    ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ನೇಮಕ

    ಬೆಂಗಳೂರು: ರಾಜ್ಯ ಬಿಜೆಪಿಯ ಸಂಘಟನೆ, ಮುನ್ನಡೆಸುವ ಜವಾಬ್ದಾರಿಯನ್ನು ಹೈಕಮಾಂಡ್ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಹೆಗಲಿಗೆ ಹೊರಸಿದೆ.

    ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆದೇಶ ಹೊರಡಿಸಿದ್ದಾರೆ.

    ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಆಡಳಿತ ನಡೆಸುತ್ತಿದ್ದಾರೆ. ಬಿಜೆಪಿಯ ಸಿದ್ಧಾಂತದ ಪ್ರಕಾರ ಒಬ್ಬರಿಗೆ ಒಂದೇ ಹುದ್ದೆ. ಈ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನವನ್ನು ಸಿಎಂ ಯಡಿಯೂರಪ್ಪ ಅವರಿಂದ ಹಿಂಪಡೆದಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ನೀಡಲಾಗಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

    2019ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಸಂಸದ ನಳಿನ್ ಕುಮಾರ್ ಕಟೀಲ್ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ನರೇಂದ್ರ ಮೋದಿ ಅಲೆಯಲ್ಲಿ 2,74,621 ಮತಗಳ ಅಂತರದಿಂದ ಮೂರನೇ ಬಾರಿ ಲೋಕಸಭೆ ಪ್ರವೇಶ ಮಾಡಿದ್ದಾರೆ. ಕಟೀಲ್ 7,74,285 ಮತಗಳನ್ನು ಪಡೆದರೆ ಕಾಂಗ್ರೆಸ್ಸಿನ ಮಿಥುನ್ ರೈ 4,99,664 ಮತಗಳನ್ನು ಪಡೆದಿದ್ದರು.