Tag: State Government

  • ರಸ್ತೆ ಅಪಘಾತ ಸಂತ್ರಸ್ತರ ಚಿಕಿತ್ಸಾ ವೆಚ್ಚ 2.5 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

    ರಸ್ತೆ ಅಪಘಾತ ಸಂತ್ರಸ್ತರ ಚಿಕಿತ್ಸಾ ವೆಚ್ಚ 2.5 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

    ಬೆಂಗಳೂರು: ರಸ್ತೆ ಅಪಘಾತ ಸಂತ್ರಸ್ತರಿಗೆ ನೀಡುತ್ತಿದ್ದ ನಗದು ರಹಿತ ಚಿಕಿತ್ಸೆ ವೆಚ್ಚವನ್ನು ರಾಜ್ಯ ಸರ್ಕಾರ (State Govt) ಇದೀಗ 2.5 ಲಕ್ಷ ರೂ.ಗೆ ಏರಿಕೆ ಮಾಡಿದೆ.

    ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ಕೇಂದ್ರ ಸರ್ಕಾರ (Central Govt) 1.5 ಲಕ್ಷ ರೂ.ವರೆಗೂ ನಗದು ರಹಿತ ಚಿಕಿತ್ಸೆಯನ್ನು ನೀಡುತ್ತಿತ್ತು. ಅಪಘಾತ ಸಂಭವಿಸಿದ ಏಳು ದಿನಗಳವರೆಗೂ ಈ ಸೌಲಭ್ಯ ಇತ್ತು. ಈಗ ರಾಜ್ಯ ಸರ್ಕಾರ ಅಪಘಾತ ಆಗಿ ಬಹುಅಂಗಾಂಗಗಳ ವೈಫಲ್ಯ ಆದರೆ ಚಿಕಿತ್ಸೆಗಾಗಿ 1 ಲಕ್ಷ ರೂ. ಟಾಪ್ ಅಪ್‌ ನೀಡೋದಾಗಿ ಘೋಷಣೆ ಮಾಡಿದೆ.ಇದನ್ನೂ ಓದಿ: 4.8 ಕೋಟಿ ಪತ್ತೆ ಕೇಸ್‌ – ಸುಧಾಕರ್‌ಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌, FIR ರದ್ದು

    ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಪಘಾತ ಸಂತ್ರಸ್ತ ಯೋಜನೆ ಅಡಿ ಸಂತ್ರಸ್ತರಿಗೆ 2.5 ಲಕ್ಷ ರೂ.ವರೆಗೂ ಚಿಕಿತ್ಸಾ ನೆರವು ಸಿಗಲಿದೆ. ರಸ್ತೆ ಅಪಘಾತದಿಂದ ಆಗುವ ಸಾವುಗಳನ್ನ ತಡೆಗಟ್ಟಲು ಚಿಕಿತ್ಸಾ ವೆಚ್ಚದ ಅನುದಾನ ಹೆಚ್ಚಳ ಮಾಡಲಾಗಿದೆ.

    ಕರ್ನಾಟಕ ರಾಜ್ಯದಲ್ಲಿ ಪ್ರತಿ ವರ್ಷಕ್ಕೆ ಸುಮಾರು 40 ಸಾವಿರ ರಸ್ತೆ ಅಪಘಾಗಳು ದಾಖಲಾಗ್ತಿವೆ. ಪ್ರತಿ ವರ್ಷ ಸುಮಾರು 11 ಸಾವಿರ ಜನರು ರಸ್ತೆ ಅಪಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಪ್ರತಿ ಗಂಟೆಗೆ 4 ರಿಂದ 5 ರಸ್ತೆ ಅಪಘಾತಗಳು ದಾಖಲಾಗ್ತಿವೆ ಎಂದು ತಿಳಿದುಬಂದಿದೆ.ಇದನ್ನೂ ಓದಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳಿಗೆ 125 ಕೋಟಿ ಅನುದಾನ

  • ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳಿಗೆ 125 ಕೋಟಿ ಅನುದಾನ

    ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳಿಗೆ 125 ಕೋಟಿ ಅನುದಾನ

    ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (Greater Bengalruu Authority) ಅಡಿ ರಚನೆಯಾಗಿರುವ ಐದು ಪಾಲಿಕೆಗಳಿಗೆ ರಾಜ್ಯ ಸರ್ಕಾರ 125 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.

    ಹೊಸದಾಗಿ ರಚನೆಯಾಗಿರುವ ಐದು ಪಾಲಿಕೆಗಳಿಗೆ ತಲಾ 25 ಕೋಟಿ ರೂ.ಯಂತೆ 125 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಆರಂಭಿಕ ಹಂತದಲ್ಲಿ ಪಾಲಿಕೆಗಳ ದೈನಂದಿನ ಆಡಳಿತಾತ್ಮಕ ಮತ್ತು ಇತರೆ ವೆಚ್ಚಗಳಿಗಾಗಿ ಅನುದಾನ ಅಗತ್ಯವಿದೆ. ಹೀಗಾಗಿ ನಗರಾಭಿವೃದ್ಧಿ ಇಲಾಖೆಯಿಂದ 125 ಕೋಟಿ ರೂ. ಬಿಡುಗಡೆಯಾಗಿದೆ.ಇದನ್ನೂ ಓದಿ:ಬ್ಯಾಗ್ ಇಡುವ ನೆಪದಲ್ಲಿ ಖಾಸಗಿ ಅಂಗಕ್ಕೆ ಕೈ ಹಾಕಿ ವಿಕೃತಿ – ಆಟೋ ಚಾಲಕ ಅರೆಸ್ಟ್

    ಪ್ರಸ್ತುತ ಸಂಗ್ರಹ ಆಗುತ್ತಿರುವ ಆಸ್ತಿ ತೆರಿಗೆಯ ಹಣ ಸರ್ಕಾರದ ಸುಪರ್ದಿಯಲ್ಲಿದೆ. ಸಂಗ್ರಹವಾದ ತೆರಿಗೆ ಹಣ ಇನ್ನೂ ಹೊಸ ಪಾಲಿಕೆಗಳ ಬ್ಯಾಂಕ್ ಅಕೌಂಟ್‌ಗೆ ಬರುತ್ತಿಲ್ಲ. ಹೀಗಾಗಿ ಅದೆಲ್ಲವೂ ಸರ್ಕಾರದ ಸುಪರ್ದಿಯಲ್ಲಿದೆ. 2025-26ನೇ ಸಾಲಿನಲ್ಲಿ 300 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹ ಆಗಿದೆ. 300 ಕೋಟಿ ರೂ.ಯಲ್ಲಿ ಸರ್ಕಾರ 125 ಕೋಟಿ ರೂ.ಯನ್ನ ದೈನಂದಿನ ಆಡಳಿತಾತ್ಮಕ ಮತ್ತು ಇತರೆ ವೆಚ್ಚಗಳಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬ್ಯಾಂಕ್ ಅಕೌಂಟ್‌ಗೆ ಅನುದಾನವನ್ನ ವರ್ಗಾಯಿಸಿದೆ.

  • ದಸರಾ ಉದ್ಘಾಟನೆಗೆ ಸರ್ಕಾರದಿಂದ ಬಾನು ಮುಷ್ತಾಕ್‌ಗೆ ಅಧಿಕೃತ ಆಹ್ವಾನ

    ದಸರಾ ಉದ್ಘಾಟನೆಗೆ ಸರ್ಕಾರದಿಂದ ಬಾನು ಮುಷ್ತಾಕ್‌ಗೆ ಅಧಿಕೃತ ಆಹ್ವಾನ

    ಮೈಸೂರು: ವಿಶ್ವವಿಖ್ಯಾತ ದಸರಾಗೆ ದಿನಗಣನೆ ಶುರುವಾಗಿದ್ದು, ಈ ಬಾರಿಯ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ರಿಗೆ (Banu Mushtaq) ಸರ್ಕಾರದಿಂದ ಅಧಿಕೃತ ಆಹ್ವಾನ ನೀಡಲಾಗಿದೆ.

    ಹಾಸನ (Hasaan) ನಗರದ ಅಮಿರ್ ಮೊಹಲ್ಲಾದಲ್ಲಿರುವ ಬಾನು ಮುಷ್ತಾಕ್ ಅವರ ನಿವಾಸಕ್ಕೆ ದಸರಾ ವಿಶೇಷಧಿಕಾರಿ ಆಗಿರುವ ಮೈಸೂರು ಡಿಸಿ ಲಕ್ಷ್ಮಿಕಾಂತರೆಡ್ಡಿ ಹಾಗೂ ಎಡಿಸಿ ಶಿವರಾಜ್ ಅವರು ತೆರಳಿದ್ದರು. ಶಾಲು ಹೊದಿಸಿ, ಹಾರ ಹಾಕಿ, ಮೈಸೂರು ಪೇಟ ತೊಡಿಸಿ, ಆನೆ ವಿಗ್ರಹದ ಜೊತೆ ಆಹ್ವಾನ ಪತ್ರಿಕೆ ನೀಡಿ ಅಧಿಕೃತವಾಗಿ ಆಹ್ವಾನಿಸಿದ್ದಾರೆ.

    ಆಹ್ವಾನ ಸ್ವೀಕರಿಸಿ ಮಾತನಾಡಿದ ಬಾನು ಮುಷ್ತಾಕ್ ಅವರು ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದರು. 2025ರ ದಸರಾ ಉದ್ಘಾಟನೆ ಸಂದರ್ಭದಲ್ಲಿ ಸಮಸ್ತ ಕನ್ನಡಿಗರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಸಿದ್ದರಾಮಯ್ಯ ಅವರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ. ನನ್ನನ್ನು ಸ್ವಾಗತ ಮಾಡಿದ ಮೈಸೂರು ಜಿಲ್ಲಾಡಳಿತಕ್ಕೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಇನ್ನೂ ಸಮಯ ಬಂದಾಗ ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಎಂದಿದ್ದಾರೆ.

    =

  • ಇಂದಿನಿಂದ ಗ್ರೇಟರ್ ಬೆಂಗಳೂರು ಆಡಳಿತ ಜಾರಿ

    ಇಂದಿನಿಂದ ಗ್ರೇಟರ್ ಬೆಂಗಳೂರು ಆಡಳಿತ ಜಾರಿ

    ಬೆಂಗಳೂರು: ಇಂದಿನಿಂದ (ಸೆ.1) ಗ್ರೇಟರ್ ಬೆಂಗಳೂರು ಆಡಳಿತ (Greater Bengaluru Authority) ಜಾರಿಯಾಗಿದ್ದು, ಬೆಂಗಳೂರನ್ನು ಐದು ಪಾಲಿಕೆಗಳಾಗಿ ವಿಂಗಡಿಸಿ ಆಡಳಿತ ನಡೆಸಲಾಗುತ್ತದೆ.

    ಹೌದು, ಸಿಲಿಕಾನ್ ಸಿಟಿ (Silicon City) ಬೆಳೆಯುತ್ತಿರುವ ನಗರ. ಹೀಗಾಗಿ ಒಂದೇ ಸಂಸ್ಥೆಯಿಂದ ನಿರ್ವಹಣೆ ಕಷ್ಟ ಅಂತಾ ಸರ್ಕಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಮಾಡಿ ಐದು ಪಾಲಿಕೆಗಳಾಗಿ ವಿಂಗಡಿಸಿ ಆಡಳಿತ ನಡೆಸೋದಕ್ಕೆ ಆದೇಶಿಸಿತ್ತು. ಅದರಂತೆ ಇಂದಿನಿಂದ (ಸೆ.2) ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆಡಳಿತ ಜಾರಿ ಆಗಿದೆ. ಈ ಹಿಂದೆ ಬಿಬಿಎಂಪಿ ಇತ್ತು, ಆದರೆ ಇನ್ಮುಂದೆ ಗ್ರೇಟರ್ ಬೆಂಗಳೂರು ಆಡಳಿತ ಜಾರಿಯಲ್ಲಿರಲಿದೆ. ಈಗಾಗಲೇ ಐದು ಪಾಲಿಕೆಗಳಿಗೆ 10 ಕಚೇರಿಯನ್ನ ಗುರುತು ಮಾಡಲಾಗಿದೆ.ಇದನ್ನೂ ಓದಿ: ಹಾಸನ | ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸುತ್ತಿದ್ದ ಪಾಲಿಕೆಯ ಶೆಡ್ ಕುಸಿತ – ಕಾರ್ಮಿಕರು ಪಾರು

    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಂದು ಇತಿಹಾಸ ಪುಟ ಸೇರಲಿದೆ. 1949ರಲ್ಲಿ ಬೆಂಗಳೂರಿನಲ್ಲಿ ನಗರ ಸಭೆ ರೂಪುಗೊಂಡಿತ್ತು. ಆರ್.ಸುಬ್ಬಣ್ಣ ಮೊದಲ ಮೇಯರ್ ಆಗಿದ್ದರು. ಅಂದಿನಿಂದ 1995ರವರೆಗೆ ನಗರಸಭೆ ಆಡಳಿತ ಜಾರಿಯಲ್ಲಿತ್ತು. ನಂತರ 1996ರಲ್ಲಿ ಬೆಂಗಳೂರು ಮಹಾನಗರ ಪಾಲಿಕೆ ರಚನೆಯಾಗಿ 2006ರವರೆಗೆ ಆಡಳಿತ ನಡೆಸಿತ್ತು. ಬಳಿಕ ವ್ಯಾಪ್ತಿಯನ್ನು ಹಿರಿದಾಗಿಸಿ 2010ರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ರಚನೆಯಾಗಿತ್ತು. ಅಂದಿನಿಂದ 2025ರವರೆಗೆ ಬಿಬಿಎಂಪಿ (BBMP) ಆಡಳಿತ ನಡೆಸಿಕೊಂಡು ಬಂದಿದೆ. 2019-20ರಲ್ಲಿ ಮೇಯರ್ ಆದ ಎಂ.ಗೌತಮ್ ಕುಮಾರ್ ಬೆಂಗಳೂರಿನ ಏಕೀಕೃತ ಆಡಳಿತದ ಕೊನೆಯ ಮೇಯರ್ ಆಗಿದ್ದರು. ಇದೀಗ ಮಹಾನಗರ ಪಾಲಿಕೆಯನ್ನು 5 ನಗರಪಾಲಿಕೆಗಳನ್ನು ವಿಂಗಡಿಸಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆಡಳಿತ ಆರಂಭವಾಗಿದೆ.

    ಬಿಬಿಎಂಪಿ ವ್ಯಾಪ್ತಿಯಲ್ಲಿದ್ದ ಎಲ್ಲಾ ನಾಮಫಲಕಗಳು ಇಂದೇ ಬದಲಾಗಲಿದ್ದು, ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನಿಯಮ ರೂಪಿಸಿದೆ.

    ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿ ಐದು ಪಾಲಿಕೆಗಳಿಗೆ ಎರಡೆರಡು ಕಚೇರಿಗಳನ್ನ ಗುರುತು ಮಾಡಲಾಗಿದೆ.
    1. ಗ್ರೇಟರ್ ಬೆಂಗಳೂರು ಪ್ರಾಧಿಕಾರ: ಕಾರ್ಪೋರೇಷನ್ ಸರ್ಕಲ್ ಕೇಂದ್ರ ಕಚೇರಿ ಮುಖ್ಯ ಕಟ್ಟಡ ಅನೆಕ್ಸ್ 1 – ಅನೆಕ್ಸ್ – 2

    2. ಬೆಂಗಳೂರು ನಗರ ಕೇಂದ್ರ ನಗರ ಪಾಲಿಕೆ: ಹಾಲಿ ಪೂರ್ವ ವಲಯ ಕಚೇರಿ, ಕೇಂದ್ರ ಕಚೇರಿ ಅನೆಕ್ಸ್ ಕಟ್ಟಡ

    3. ಬೆಂಗಳೂರು ಪೂರ್ವ ನಗರ ಪಾಲಿಕೆ: ಮಹಾದೇವಪುರ ವಲಯ ಕಚೇರಿ, ಕೆ.ಆರ್ ಪುರಂ ಕಚೇರಿ

    4. ಪಶ್ಚಿಮ ವಲಯ: ಆರ್.ಆರ್ ನಗರ ವಲಯ ಕಚೇರಿ, ಹಾಲಿ ಪಾಲಿಕೆ ಸೌಧ ಚಂದ್ರಲೇಔಟ್

    5. ಬೆಂಗಳೂರು ಉತ್ತರ ನಗರ ಪಾಲಿಕೆ: ಹಾಲಿ ಯಲಹಂಕ ವಲಯ ಕಚೇರಿ, ಹಾಲಿ ದಾಸರಹಳ್ಳಿ ವಲಯ ಕಚೇರಿ

    6. ಬೆಂಗಳೂರು ದಕ್ಷಿಣ ನಗರ ಪಾಲಿಕೆ: ಹಾಲಿ ದಕ್ಷಿಣ ವಲಯ ಕಚೇರಿ, ಹಾಲಿ ಬೊಮ್ಮನಹಳ್ಳಿ ವಲಯ ಕಚೇರಿ

    ಇನ್ನೂ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 15 ಐಎಎಸ್, 20ಕ್ಕೂ ಹೆಚ್ಚು ಕೆಎಎಸ್ ಮತ್ತು ಇಬ್ಬರು ಐಪಿಎಸ್ ಅಧಿಕಾರಗಳ ಹುದ್ದೆಯನ್ನ ರಚನೆ ಮಾಡಲಾಗಿದೆ ಹಾಗೂ ಐದು ಪಾಲಿಕೆಗಳಿಗೆ 28 ವಿಧಾನಸಭಾ ಕ್ಷೇತ್ರಗಳನ್ನ ಹಂಚಿಕೆ ಮಾಡಲಾಗಿದೆ.ಇದನ್ನೂ ಓದಿ: ಟಿ20 ಕ್ರಿಕೆಟ್‌ಗೆ ದಿಢೀರ್‌ ನಿವೃತ್ತಿ ಘೋಷಿಸಿದ ಮಿಚೆಲ್‌ ಸ್ಟಾರ್ಕ್

    ಯಾವ್ಯಾವ ಪಾಲಿಕೆಗೆ ಎಷ್ಟೆಷ್ಟು ವಿಧಾನಸಭಾ ಕ್ಷೇತ್ರ?

    1. ಬೆಂಗಳೂರು ಪಶ್ಚಿಮ ನಗರ ಪಾಲಿಕೆ – 10 ವಿಧಾನಸಭಾ ಕ್ಷೇತ್ರ
    2. ಬೆಂಗಳೂರು ಕೇಂದ್ರ ನಗರ ಪಾಲಿಕೆ – 07 ವಿಧಾನಸಭಾ ಕ್ಷೇತ್ರ
    3. ಬೆಂಗಳೂರು ಪೂರ್ವ ನಗರ ಪಾಲಿಕೆ – _02 ವಿಧಾನಸಭಾ ಕ್ಷೇತ್ರ
    4.ಬೆಂಗಳೂರು ಉತ್ತರ ನಗರ ಪಾಲಿಕೆ – 07 ವಿಧಾನಸಭಾ ಕ್ಷೇತ್ರ
    5. ಬೆಂಗಳೂರು ದಕ್ಷಿಣ ನಗರ ಪಾಲಿಕೆ – 08 ವಿಧಾನಸಭಾ ಕ್ಷೇತ್ರ

    ಇನ್ನೂ ಗ್ರೇಟರ್ ಬೆಂಗಳೂರು ಎಂಬುದು ಆಂಗ್ಲ ಪದ ಕನ್ನಡ ಪದ ಇಲ್ಲವಾ ಎಂಬ ಪ್ರಶ್ನೆ ಎದ್ದಿತ್ತು. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸದನದಲ್ಲಿಯೇ ಡಿಕೆ ಶಿವಕುಮಾರ್ ಅವರನ್ನ ಪ್ರಶ್ನೆ ಮಾಡಿದ್ದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬದಲು ಬೃಹತ್ ಬೆಂಗಳೂರು ಪ್ರಾಧಿಕಾರ ಮಾಡಿ ಅಂತಾ ಒತ್ತಾಯ ಎದ್ದಿದೆ. ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಹೆಸರು ಬದಲಾವಣೆ ವಿಚಾರವನ್ನ ಪ್ರಾಧಿಕಾರದ ಸಮಿತಿ ಗಮನಕ್ಕೆ ತರಲು ಮುಂದಾಗಿದ್ದಾರೆ.ಇದನ್ನೂ ಓದಿ: ಅಮೆರಿಕದಲ್ಲಿ ಭೀಕರ ಅಪಘಾತ – ಕೋಲಾರ ಮೂಲದ ಬಾಡಿ ಬಿಲ್ಡರ್ ದುರ್ಮರಣ

  • ನವೆಂಬರ್-ಡಿಸೆಂಬರ್ ವೇಳೆಗೆ ಬಿಬಿಎಂಪಿ ಚುನಾವಣೆ ಅನುಮಾನ?

    ನವೆಂಬರ್-ಡಿಸೆಂಬರ್ ವೇಳೆಗೆ ಬಿಬಿಎಂಪಿ ಚುನಾವಣೆ ಅನುಮಾನ?

    -ಅಫಿಡವಿಟ್ ಸಲ್ಲಿಸಲು ರಾಜ್ಯಕ್ಕೆ ಸುಪ್ರೀಂ ನಿರ್ದೇಶನ

    ನವದೆಹಲಿ: ನವೆಂಬರ್-ಡಿಸೆಂಬರ್ ವೇಳೆಗೆ ಬಿಬಿಎಂಪಿ (BBMP) ಚುನಾವಣೆ ನಡೆಯಬಹುದು ಎಂಬ ಕಾರ್ಪೋರೇಟರ್‌ಗಳ ನಿರೀಕ್ಷೆ ಹುಸಿಯಾಗುವ ಸಾಧ್ಯತೆ ಇದೆ. ಜನವರಿ ಬಳಿಕವೇ ಚುನಾವಣೆ ನಡೆಯುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ.

    ಬಿಬಿಎಂಪಿ ಚುನಾವಣೆ ವಿಳಂಬಕ್ಕೆ ಸಂಬಂಧಿಸಿದಂತೆ ಸೋಮವಾರ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯಿತು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸೂರ್ಯಕಾಂತ್ ನೇತೃತ್ವದ ದ್ವಿ ಸದಸ್ಯ ಪೀಠ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಕಾಲಾನುಕ್ರಮದಲ್ಲಿ ಔಪಚಾರಿಕ ಅಫಿಡವಿಟ್ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.ಇದನ್ನೂ ಓದಿ:Operation MAHADEV | ಪಹಲ್ಗಾಮ್‌ ದಾಳಿಯ ಮೂವರು ಶಂಕಿತ ಉಗ್ರರನ್ನು ಹತ್ಯೆಗೈದ ಸೇನೆ

    ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಚುನಾವಣೆ ಸಾಕಷ್ಟು ವಿಳಂಬವಾಗಿದೆ, ಬಿಬಿಎಂಗೆ ಚುನಾವಣೆ ನಡೆದು ಹತ್ತು ವರ್ಷಗಳಾಗಿವೆ. ಚುನಾವಣೆ ನಡೆಸಲು ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಪ್ರತಿವಾದ ಮಂಡಿಸಿದ ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಎ.ಎಂ ಸಿಂಘ್ವಿ ಮತ್ತು ಅಡ್ವಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ, ಗ್ರೇಟರ್ ಬೆಂಗಳೂರು ಕಾಯಿದೆಯನ್ನು ರಾಜ್ಯಪಾಲರು ಎರಡು-ಮೂರು ತಿಂಗಳು ತಡೆ ಹಿಡಿದಿದ್ದರು. ಇದರಿಂದ ಚುನಾವಣೆ ವಿಳಂಬವಾಗಿದೆ ಎಂದು ಹೇಳಿದರು.

    ಮುಂದುವರಿದು ವಾದ ಮಂಡಿಸಿದ ಸರ್ಕಾರದ ಪರ ವಕೀಲ ಸಿಂಘ್ವಿ ಅವರು, ನವೆಂಬರ್ ವೇಳೆಗೆ ಕ್ಷೇತ್ರ ವಿಂಗಡನೆ, ಮೀಸಲಾತಿ ಸೇರಿ ಎಲ್ಲ ಪ್ರಕ್ರಿಯೆ ಮುಗಿಯಲಿದೆ. ಆನಂತರ ಚುನಾವಣಾ ಆಯೋಗ ಚುನಾವಣೆ ನಡೆಸಬಹುದು ಎಂದರು. ಇಲ್ಲಿ ಮಧ್ಯಪ್ರವೇಶ ಮಾಡಿದ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಫಣೀಂದ್ರ ಅವರು, ನವೆಂಬರ್‌ಗೆ ಪ್ರಕ್ರಿಯೆ ಮುಗಿದರೆ ಮತದಾರರ ಪಟ್ಟಿ ಸೇರಿ ಇತರೆ ಪ್ರಕ್ರಿಯೆ ಮುಗಿಸಲು ನಮಗೆ ಎರಡು ತಿಂಗಳ ಸಮಯ ಬೇಕಾಗಬಹುದು ಎಂದು ತಿಳಿಸಿದರು.

    ವಾದ-ಪ್ರತಿವಾದ ಆಲಿಸಿದ ಬಳಿಕ, ರಾಜ್ಯ ಸರ್ಕಾರವು ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕಾಲಾನುಕ್ರಮ ಒಳಗೊಂಡ ಔಪಚಾರಿಕ ಅಫಿಡವಿಟ್ ಸಲ್ಲಿಸಬೇಕು ಎಂದು ಸೂಚಿಸಿದೆ ಮತ್ತು ವಿಚಾರಣೆಯನ್ನು ಸೋಮವಾರಕ್ಕೆ (ಆ.4) ಮುಂದೂಡಿತು.

    ಈ ಹಿಂದೆ 6 ವಾರಗಳಲ್ಲಿ ಚುನಾವಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಚುನಾವಣೆ ಆಯೋಗಕ್ಕೆ ಸೂಚಿಸಿತ್ತು. ಕರ್ನಾಟಕ ಮುನಿಸಿಪಲ್ ಕಾರ್ಪೋರೇಷನ್ (ತಿದ್ದುಪಡಿ)ಕಾಯ್ದೆಯಡಿ ರಚಿಸಲಾಗುವ 243 ವಾರ್ಡ್ ಬದಲಿಗೆ ಮೊದಲಿದ್ದ 198 ವಾರ್ಡ್‌ಗಳಿಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಸೂಚಿಸಿತ್ತು. ಈ ಆದೇಶವನ್ನು ಸುಪ್ರೀಂಕೋರ್ಟ್ನಲ್ಲಿ ರಾಜ್ಯ ಸರ್ಕಾರ ಪ್ರಶ್ನಿಸಿತ್ತು, ವಿಚಾರಣೆ ಬಳಿಕ 2020ರ ಡಿ.18ರಂದು ಅಮಾನತಲ್ಲಿ ಇಟ್ಟಿತ್ತು.ಇದನ್ನೂ ಓದಿ: ಧರ್ಮಸ್ಥಳ ಶವಗಳ ಹೂತಿಟ್ಟ ಕೇಸ್ – ನೇತ್ರಾವತಿ ತಟದಲ್ಲಿ ಎಸ್‌ಐಟಿಯಿಂದ ಸ್ಥಳ ಮಹಜರು

  • ರೈತರಿಗೆ ಸಮರ್ಪಕ ಗೊಬ್ಬರ ವಿತರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ – ಬೊಮ್ಮಾಯಿ

    ರೈತರಿಗೆ ಸಮರ್ಪಕ ಗೊಬ್ಬರ ವಿತರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ – ಬೊಮ್ಮಾಯಿ

    ಗದಗ: ರಾಜ್ಯದಲ್ಲಿ ರೈತರಿಗೆ ಯೂರಿಯಾ ಗೊಬ್ಬರ ಕೊರತೆ ಎದುರಾಗಿದ್ದು, ಸರ್ಕಾರ ಮುಂಚಿತವಾಗಿ ಸ್ಟಾಕ್ ಮಾಡಬೇಕಿತ್ತು. ರೈತರಿಗೆ ಸಮರ್ಪಕ ಗೊಬ್ಬರ ವಿತರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.

    ಜಿಲ್ಲೆಯ ಸೊರಟೂರ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಹೆಚ್ಚಿನ ಗೊಬ್ಬರ ಬೇಕು ಎಂದು ಕೇಂದ್ರ ಸರ್ಕಾರಕ್ಕೆ ಕೇಳಿದೆ. ಕೇಂದ್ರ ಕೃಷಿ ಸಚಿವರ ಜೊತೆ ಮಾತನಾಡಿ ಕೊಡಿಸುವಂತಹ ಪ್ರಯತ್ನ ಮಾಡುತ್ತೇನೆ. ರಾಜ್ಯದಲ್ಲಿದ್ದ ಗೊಬ್ಬರವನ್ನು ರೈತರಿಗೆ ಸಮರ್ಪಕವಾಗಿ ಸರ್ಕಾರ ಪೂರೈಕೆ ಮಾಡಲಿ ಎಂದರು.ಇದನ್ನೂ ಓದಿ: ಕಠಿಣ ಸಂದರ್ಭದಲ್ಲೂ ಅಭಿವೃದ್ಧಿಯ ದೀಪ ಬೆಳಗಿಸಬಹುದು – ಮಾಜಿ ಮಾವೋವಾದಿಗಳ ಮೀನು ಕೃಷಿಗೆ ಮೋದಿ ಶ್ಲಾಘನೆ

    ಇನ್ನೂ ನಾಲ್ವಡಿ ಕೃಷ್ಣರಾಜ ಒಡೆಯರಿಗಿಂತ ಹೆಚ್ಚು ಅಭಿವೃದ್ಧಿ ಕೆಲಸ ಸಿದ್ದರಾಮಯ್ಯ ಮಾಡಿದ್ದಾರೆ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ಇದು ಹೋಲಿಕೆಗೆ ಅಸಾಧ್ಯವಾದದ್ದು. ಅವರ ತಂದೆ ಬಹಳ ಕೆಲಸ ಮಾಡಿದ್ದಾರೆಂದು ತೋರಿಸಲು ಹೋಲಿಕೆ ಮಾಡ್ತಿದ್ದಾರೆ. ಸೂರ್ಯನ ಜೊತೆಗೆ ಯಾವುದಾದರೂ ಸಣ್ಣ ಬೆಳಕನ್ನು ಹೋಲಿಕೆ ಮಾಡಲು ಸಾಧ್ಯನಾ? ಸಾಧ್ಯನೇ ಇಲ್ಲ. ಸೂರ್ಯ ಸೂರ್ಯನೇ ಎಂದು ಹೇಳಿದರು.

    ಮಹದಾಯಿ ವಿಚಾರವಾಗಿ ಮಾತನಾಡಿ, ಮಹದಾಯಿ ಏನಾದ್ರು ಪ್ರಗತಿಯಾಗಿದ್ರೆ ಅದಕ್ಕೆ ಕಾರಣ ಬಿಜೆಪಿ. ಮೋದಿ ಸರ್ಕಾರ ಬಂದ್ಮೇಲೆ ಮಹದಾಯಿ ಆದೇಶ ಹೊರಡಿಸಿದ್ದರು. ಮಾಡಿಸಿದ್ದ ಡಿಪಿಆರ್‌ನ್ನು ಎನ್‌ಡಿಎ ಸರ್ಕಾರ ಕೇಂದ್ರದಲ್ಲಿ ಒಪ್ಪಿಗೆ ಪಡೆಯಿತು. ಕಾಂಗ್ರೆಸ್ ಏನು ಮಾಡಲಿಲ್ಲ. ಬರೀ ನಾವು ಮಾಡಿದ ಕೆಲಸಕ್ಕೆ ಅಡ್ಡಗೋಡೆ ಕಟ್ಟಿದ್ದಾರೆ. ಮಹದಾಯಿ ಮಲಪ್ರಭಾಗೆ ಹರಿಯಬಾರದು ಅಂತ ಗೋಡೆ ಕಟ್ಟಿದರು. ರಾಜ್ಯದ ವಿಷಯದಲ್ಲಿ ರಾಜಕಾರಣ ಬೇಡ. ನ್ಯಾಯ ಸಮ್ಮತವಾಗಿ ಕಾಂಗ್ರೆಸ್ ಸರ್ಕಾರ ನಡೆಯಲಿ. ಗೋವಾ ಸಿಎಂ ಹೇಳಿಕೆಯನ್ನು ನಾನು ಸಹ ಖಂಡಿಸುತ್ತೇನೆ. ಕಾಂಗ್ರೆಸ್‌ಗೆ ಮಹದಾಯಿ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಸೋನಿಯಾ ಗಾಂಧಿ ಗೋವಾ ಚುನಾವಣೆಯಲ್ಲಿ ಹನಿ ನೀರು ಮಹದಾಯಿಂದ ಮಲಪ್ರಭಾಗೆ ಕೊಡಲ್ಲ ಎಂದಿದ್ದರು. ಹೀಗಾಗಿ ಕಾಂಗ್ರೆಸ್‌ಗೆ ಯಾವ ನೈತಿಕ ಹಕ್ಕಿದೆ ಎಂದು ಕಿಡಿಕಾರಿದರು.

    ಈ ವೇಳೆ ವಿಧಾನ ಪರಿಷತ್ ಸದಸ್ಯ ಎಸ್.ವಿ ಸಂಕನೂರ, ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ, ಬಿಜೆಪಿ ಜಿಲ್ಲಾಧ್ಯಕ್ಷ ರಾಜುಕುರುಡಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.ಇದನ್ನೂ ಓದಿ: Explained| ಬದಲಾದ ಮಾಲ್ಡೀವ್ಸ್‌ – ಇಂಡಿಯಾ ಔಟ್‌ ಹೇಳಿ ಈಗ ಮೋದಿಯನ್ನು ಆಹ್ವಾನಿಸಿದ್ದು ಯಾಕೆ?

  • ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ `ಮಾಸ್ಟರ್ ಪ್ಲ್ಯಾನ್’ – ಕಾಮಗಾರಿಗೆ ಸರ್ಕಾರದಿಂದ 215 ಕೋಟಿ ಅನುಮೋದನೆ

    ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ `ಮಾಸ್ಟರ್ ಪ್ಲ್ಯಾನ್’ – ಕಾಮಗಾರಿಗೆ ಸರ್ಕಾರದಿಂದ 215 ಕೋಟಿ ಅನುಮೋದನೆ

    ಬೆಂಗಳೂರು/ಬೆಳಗಾವಿ: ಸವದತ್ತಿ ರೇಣುಕಾ ಯಲ್ಲಮ್ಮನ (Savadatti Renuka Yellamma) ಗುಡ್ಡಕ್ಕೆ ಹೊಸ ಕಳೆ ನೀಡುವ ನಿಟ್ಟಿನಲ್ಲಿ ಅದರ ಕಾಮಗಾರಿಗಾಗಿ ಸರ್ಕಾರ 215 ಕೋಟಿ ರೂ. ಅನುಮೋದನೆ ನೀಡಿದೆ.

    ಉತ್ತರ ಕರ್ನಾಟಕದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಪ್ರತಿ ವರ್ಷ ಒಂದು ಕೋಟಿಗೂ ಅಧಿಕ ಭಕ್ತರು ಆಗಮಿಸುತ್ತಾರೆ. ಈ ಹಿನ್ನೆಲೆ ಗುರುವಾರ ರೇಣುಕಾ ಯಲ್ಲಮ್ಮನ ಭಕ್ತಾದಿಗಳಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ.ಇದನ್ನೂ ಓದಿ: ಪರೀಕ್ಷೆ ಬರೆಯಲು ತಂದೆಯ ಕೈ ಹಿಡಿದು ತುಂಬಿ ಹರಿಯುತ್ತಿರುವ ನದಿ ದಾಟಿದ ವಿದ್ಯಾರ್ಥಿನಿ

    ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ದೇವಾಲಯದ ಅಭಿವೃದ್ಧಿಗೆ ಸಿದ್ಧಪಡಿಸಿದ `ಮಾಸ್ಟರ್ ಪ್ಲ್ಯಾನ್’ಗೆ ಅನುಮೋದಿನೆ ನೀಡಿದೆ. ಜೊತೆಗೆ ಅದರ ಕಾಮಗಾರಿಗಾಗಿ 215.25 ಕೋಟಿ ರೂ. ಅನುಮೋದನೆ ನೀಡಿದೆ. ಹೀಗಾಗಿ ಮುಂದಿನ ಎರಡು ವರ್ಷಗಳಲ್ಲಿ ರೇಣುಕಾ ಯಲ್ಲಮ್ಮ ದೇವಾಲಯದ ಚಿತ್ರಣವೇ ಸಂಪೂರ್ಣ ಬದಲಾಗಲಿದೆ.

    ಈ ಕುರಿತು ಮುಜರಾಯಿ ಸಚಿವ (Muzrai) ರಾಮಲಿಂಗಾರೆಡ್ಡಿ ಮಾತನಾಡಿ, ರೇಣುಕಾ ಯಲ್ಲಮ್ಮ ಪ್ರಾಧಿಕಾರ ಮತ್ತು ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ ದೇವಾಲಯದ ಅಭಿವೃದ್ಧಿ ಮಾಡಲಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪಾಲುದಾರಿಕೆಯಲ್ಲಿ ವೈವಿಧ್ಯಮಯ ಕಾಮಗಾರಿ ಕೈಗೆತ್ತಿಕೊಳ್ಳಲಿದ್ದು, ತಿರುಪತಿ ಮಾದರಿಯಲ್ಲಿ 14 ಕಾಮಗಾರಿಗಳು ನಡೆಯಲಿವೆ. ಮುಂದಿನ ಮೂರು-ನಾಲ್ಕು ತಿಂಗಳಲ್ಲಿ ಟೆಂಡರ್ ಕಾರ್ಯ ಪೂರ್ಣಗೊಳ್ಳುವುದು. ಅನ್ನ ದಾಸೋಹ ಭವನ ಸೇರಿದಂತೆ ಒಟ್ಟು 14 ಕಾಮಗಾರಿಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಧಾರವಾಡ | ವಿಚಾರಣೆ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ – ಕಳ್ಳರಿಬ್ಬರ ಕಾಲಿಗೆ ಗುಂಡೇಟು

  • ಮೋದಿ ವರ್ಚಸ್ಸು ಕಡಿಮೆಯಾಗಿರೋದಕ್ಕೆ ಬಿಜೆಪಿ ಫ್ರೀ ಗ್ಯಾರಂಟಿಗಳನ್ನ ಘೋಷಿಸ್ತಿದೆ – ಹೆಚ್.ಎಂ.ರೇವಣ್ಣ

    ಮೋದಿ ವರ್ಚಸ್ಸು ಕಡಿಮೆಯಾಗಿರೋದಕ್ಕೆ ಬಿಜೆಪಿ ಫ್ರೀ ಗ್ಯಾರಂಟಿಗಳನ್ನ ಘೋಷಿಸ್ತಿದೆ – ಹೆಚ್.ಎಂ.ರೇವಣ್ಣ

    -ಭಾರತದಲ್ಲಿ ನುಡಿದಂತೆ ನಡೆದ ಸರ್ಕಾರ ಅಂದ್ರೆ ಸಿದ್ದರಾಮಯ್ಯ ಸರ್ಕಾರ

    ಬೆಂಗಳೂರು: ಪ್ರಧಾನಿ ಮೋದಿ (PM Modi) ವರ್ಚಸ್ಸು ಕಡಿಮೆಯಾಗುತ್ತಿದೆ, ಅದಕ್ಕೆ ಬಿಜೆಪಿಯವರು ಉಚಿತ ಗ್ಯಾರಂಟಿಗಳನ್ನ ಘೋಷಣೆ ಮಾಡ್ತಿದ್ದಾರೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ (HM Revanna) ಬಿಜೆಪಿ (BJP) ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಬಿಹಾರದಲ್ಲಿ (Bihar) ಎನ್‌ಡಿಯು (NDU)  ಪಕ್ಷದಿಂದ ಫ್ರೀ ಕರೆಂಟ್ ಗ್ಯಾರಂಟಿ ಘೋಷಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಮತ್ತು ಕೇಂದ್ರದಲ್ಲಿ ಯಾವಾಗ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಆಗೆಲ್ಲಾ ಜನಪ್ರಿಯ ಮತ್ತು ಜನರಪರ ಕಾರ್ಯಕ್ರಮಗಳನ್ನ ಜಾರಿ ಮಾಡಿದೆ. ಇಂದಿರಾಗಾಂಧಿ ಕಾಲದಲ್ಲಿ ಉಳುವವನೆ ಭೂಮಿಯ ಒಡೆಯ ಸೇರಿ ಅನೇಕ ಕಾರ್ಯಕ್ರಮ ತರಲಾಗಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ಸಿಎಂಗಳು ಒಂದೊಂದು ಕೊಡುಗೆ ಕೊಟ್ಟಿದ್ದಾರೆ. ಪ್ರಧಾನಿ ಮೋದಿ ಪ್ರತಿ ವರ್ಷ 2 ಕೋಟಿ ಉದ್ಯೋಗ ಕೊಡ್ತೀನಿ ಅಂದಿದ್ದರೂ ಆದರೆ ಇನ್ನೂ ಕೊಟ್ಟಿಲ್ಲ. ವೀರಪ್ಪ ಮೊಯ್ಲಿ, ಬಂಗಾರಪ್ಪ, ಅನೇಕ ಕಾರ್ಯಕ್ರಮ ಕೊಟ್ಟರು. ರಾಜ್ಯದಲ್ಲಿ ಬಿಜೆಪಿ ಅಧಿಕಾದಲ್ಲಿ ಬೆಲೆ ಏರಿಕೆ ಜಾಸ್ತಿ ಆಗಿತ್ತು. ಜನರು ಕಷ್ಟ ಅನುಭವಿಸುತ್ತಿದ್ದರು. ಇದಕ್ಕಾಗಿ ಗ್ಯಾರಂಟಿ ಯೋಜನೆ ಘೋಷಣೆ ಮಾಡಿದರು. ಸಿದ್ದರಾಮಯ್ಯ ಅನ್ನದಾತ ಎಂದು ಹೆಸರು ಪಡೆದರು. ನಾವು ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಕೊಡುವ ಮಾತು ಕೊಟ್ಟಿದ್ದೆವು. ಅದರಂತೆ ಮೊದಲ ಕ್ಯಾಬಿನೆಟ್‌ನಲ್ಲಿ ಗ್ಯಾರಂಟಿ ಅನುಷ್ಠಾನ ಮಾಡಿದ್ದೇವು ಎಂದು ತಿಳಿಸಿದರು.ಇದನ್ನೂ ಓದಿ: ಪತಿ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ಪ್ರಿಯಾಂಕಾ

    ಗ್ಯಾರಂಟಿ ಕೊಟ್ಟಾಗ ಮೋದಿ ಕರ್ನಾಟಕ ದಿವಾಳಿ ಆಗುತ್ತದೆ ಎಂದು ಹೇಳಿ ಟೀಕೆ ಮಾಡಿದ್ದರು. ಮೋದಿ ಮತ್ತು ಅವರ ಬಾಲಂಗೋಚಿಗಳು ವಿರೋಧ ಮಾಡಿದ್ದರು. ಬಿಜೆಪಿಯವರು ಬರೀ ಘೋಷಣೆ ಮಾಡಿದ್ದಾರೆ. ನಾವು ಗೃಹಲಕ್ಷ್ಮಿ ಯೋಜನೆ ತಂದಿದ್ದೇವೆ, ಇದರಿಂದ ಹೆಣ್ಣುಮಕ್ಕಳಿಗೆ ಸಹಕಾರ ಆಗಿದೆ. ಬಿಜೆಪಿ ಅವರು ಆಗುವುದಿಲ್ಲ ಎಂದರು. ಜೊತೆಗೆ ಅವರು ಒಂದೊಂದು ಚುನಾವಣೆಗೆ ಒಂದು ಗ್ಯಾರಂಟಿ ಕೊಟ್ಟಿದ್ದಾರೆ. ಅವರು ಹೇಳೋದು ಒಂದು, ಮಾಡೋದು ಒಂದು.ಬಿಜೆಪಿಗೆ ದೇಶ, ರಾಜ್ಯದ ಚಿಂತೆ ಇಲ್ಲ ಎಂದು ಕಿಡಿಕಾರಿದರು.

    ಮೋದಿ ವರ್ಚಸ್ಸು ಕಡಿಮೆ ಆಗುತ್ತಿದೆ. ಬಿಜೆಪಿ ಸ್ಥಾನ ಕಡಿಮೆ ಆಗುತ್ತಿದೆ. ಅದಕ್ಕೆ ಗ್ಯಾರಂಟಿ ಕೊಡ್ತಿದ್ದಾರೆ. ಭಾರತದಲ್ಲಿ ನುಡಿದಂತೆ ನಡೆದಿದ್ದು, ಯಾರಾದ್ರು ಇದ್ದರೆ ಅದು ಸಿದ್ದರಾಮಯ್ಯ ಸರ್ಕಾರ. ಭ್ರಷ್ಟಾಚಾರ ಇಲ್ಲದೆ ಜನರಿಗೆ ಹಣ ಹಾಕ್ತಿದ್ದೇವೆ. ಬಿಜೆಪಿ ಕೊಟ್ಟಿದ್ದನ್ನ ಬೇಡ ಎನ್ನುವುದಿಲ್ಲ. ಮೊದಲು ಗುಜರಾತ್ ಮಾದರಿ ಎಂದು ಹೇಳ್ತಿದ್ದರು. ಈಗ ಕರ್ನಾಟಕ ಗ್ಯಾರಂಟಿ ಮಾದರಿಯಾಗಿದೆ ಎಂದು ತಿಳಿಸಿದರು.

    ಈವರೆಗೂ ಯಾವುದೇ ಗ್ಯಾರಂಟಿ ನಿಂತಿಲ್ಲ. ಮುಂದೆಯೂ ನಿಲ್ಲೊಲ್ಲ. ಭಾರತ ಇಷ್ಟು ಬೆಳೆಯೋಕೆ ಮೋದಿ ಕಾರಣ ಅಲ್ಲ. ಮನಮೋಹನ್ ಸಿಂಗ್ ಕಾರಣ. ಬಿಜೆಪಿ ಕೊಟ್ಟಿದ್ದು ಹರಕು ಸೀರೆ, ಮುರುಕಲು ಸೈಕಲ್ ಅಷ್ಟೆ. ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡೋ ಬಗ್ಗೆ ಯಾವುದೇ ಚಿಂತನೆ ಇಲ್ಲ. ಕಾರ್ಯಕ್ರಮಗಳಲ್ಲಿ ಕೆಲವು ಬದಲಾವಣೆ ಆಗಬಹುದು. ಆದರೆ ಸದ್ಯಕ್ಕೆ ಪರಿಷ್ಕರಣೆ ಬಗ್ಗೆ ಚಿಂತನೆ ಇಲ್ಲ. ಎರಡೂವರೆ ವರ್ಷ ಯೋಜನೆ ಕೊಟ್ಟಿದ್ದೇವೆ. ಮುಂದೆಯೂ ಕೊಡ್ತೀವಿ. ಗ್ಯಾರಂಟಿಯಿಂದ ಬಡ ಕುಟುಂಬಗಳಿಗೆ ಅನುಕೂಲ ಆಗಿದೆ. 5 ವರ್ಷವೂ ಗ್ಯಾರಂಟಿ ಇರಲಿದೆ ಎಂದು ಸ್ಪಷ್ಟಪಡಿಸಿದರು.ಇದನ್ನೂ ಓದಿ: ವರದಕ್ಷಿಣೆ ಕಿರುಕುಳ ಆರೋಪ – ದೇಹದ ಮೇಲೆ ಡೆತ್‌ನೋಟ್ ಬರೆದು ಮಹಿಳೆ ಆತ್ಮಹತ್ಯೆ

  • ದೇವನಹಳ್ಳಿಯ ಭೂಸ್ವಾಧೀನ ಅಧಿಸೂಚನೆ ರದ್ದು – ಸಿಎಂ ಘೋಷಣೆ

    ದೇವನಹಳ್ಳಿಯ ಭೂಸ್ವಾಧೀನ ಅಧಿಸೂಚನೆ ರದ್ದು – ಸಿಎಂ ಘೋಷಣೆ

    ಬೆಂಗಳೂರು: 3 ವರ್ಷಗಳಿಂದ ನಡೆಯುತ್ತಿದ್ದ ದೇವನಹಳ್ಳಿಯ ಚನ್ನರಾಯಪಟ್ಟಣ ಜಮೀನು ಭೂಸ್ವಾಧೀನ ವಿವಾದ ಕೊನೆಗೂ ಅಂತ್ಯವಾಗಿದೆ. 1,777 ಎಕರೆ ಭೂಸ್ವಾಧೀನಕ್ಕೆ ಸರ್ಕಾರ ಹೊರಡಿಸಿದ್ದ ಫೈನಲ್ ನೋಟಿಫಿಕೇಶನ್‌ಅನ್ನು ರಾಜ್ಯ ಸರ್ಕಾರ ರದ್ದು ಮಾಡೋದಾಗಿ ಘೋಷಣೆ ಮಾಡಿದೆ.

    ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರೈತರು, ಹೋರಾಟಗಾರರು, ಸಂಘಟನೆಗಳ ಸಭೆಯಲ್ಲಿ ನೋಟಿಫಿಕೇಶನ್ ರದ್ದು ಮಾಡುವ ಬಗ್ಗೆ ಘೋಷಣೆ ಮಾಡಿದರು. ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, 1,777 ಎಕರೆ ಜಮೀನು ಭೂಸ್ವಾಧೀನಕ್ಕೆ ಸರ್ಕಾರ ನೋಟಿಫಿಕೇಶನ್ ಹೊರಡಿಸಿತ್ತು. ಕೃಷಿ ಭೂಮಿ ಭೂಸ್ವಾಧೀನ ಮಾಡದಂತೆ ರೈತರು ಹೋರಾಟ ಮಾಡುತ್ತಿದ್ದರು. ಕೃಷಿ ಚಟುವಟಿಕೆಗಳು ಮುಂದುವರೆಸುವ ದೃಷ್ಟಿಯಿಂದ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನ ರದ್ದು ಮಾಡುತ್ತಿರೋದಾಗಿ ತಿಳಿಸಿದರು.ಇದನ್ನೂ ಓದಿ: ಇದೇ ರೀತಿ 20 ದೇಶದ ಕಾಡಿನಲ್ಲಿ ವಾಸವಿದ್ದೆವು – ಗೋಕರ್ಣ ಗುಹೆಯಲ್ಲಿ ವಾಸವಿದ್ದ ರಷ್ಯಾ ಮಹಿಳೆ ಮಾತು

    ಒಂದು ವೇಳೆ ರೈತರು ಸ್ವಯಂ ಪ್ರೇರಿತರಾಗಿ ಜಮೀನು ಕೊಟ್ಟರೆ ಆ ಭೂಮಿ ಸರ್ಕಾರ ಪಡೆಯಲಿದೆ. ಜೊತೆಗೆ ಸೂಕ್ತ ಪರಿಹಾರ ಕೊಡುವ ಜೊತೆಗೆ ಅಭಿವೃದ್ಧಿಪಡಿಸಿದ 50% ಭೂಮಿಯನ್ನು ಜಮೀನು ಕೊಡುವ ರೈತರಿಗೆ ಕೊಡಲಾಗುತ್ತದೆ. ಸರ್ಕಾರದ ಈ ನಿರ್ಧಾರ ದೇವನಹಳ್ಳಿ ಜಮೀನಿಗೆ ಮಾತ್ರ ಅನ್ವಯ ಆಗಲಿದೆ ಎಂದು ಸ್ಪಷ್ಟಪಡಿಸಿದರು.

    ಸರ್ಕಾರದ ನಿರ್ಧಾರದ ಬಗ್ಗೆ ಮಾತನಾಡಿದ ನಟ ಪ್ರಕಾಶ್ ರಾಜ್, ಇದು 3 ವರ್ಷಗಳ ಪ್ರತಿಭಟನೆಗೆ ಸಿಕ್ಕ ಜಯ. ಇದು ರೈತರ ಜಯ ಇದು. ಸಂಘಟನೆಗಳ ಜಯ. ಐತಿಹಾಸಿಕ ಚಳುವಳಿಯ ಜಯ ಇದು. ಸರ್ಕಾರಕ್ಕೆ, ಸಿಎಂಗೆ ಧನ್ಯವಾದಗಳನ್ನು ಹೇಳ್ತೀನಿ. ದೇವನಹಳ್ಳಿ ಹೋರಾಟಕ್ಕೆ ಜಯವಾಗಿದೆ. ಮುಂದಿನ ಹೋರಾಟದ ಬಗ್ಗೆ ಮುಂದೆ ನೋಡೋಣ ಎಂದರು.

    ರೈತ ನಾಯಕ ಬಡಗಲಪುರ ನಾಗೇಂದ್ರ ಮಾತಾಡಿ, ಇದೊಂದು ಸಂಘಟಿತ ಹೋರಾಟ. ಎಲ್ಲರು ಒಟ್ಟಾಗಿ ಹೋರಾಟ ಮಾಡಿದ್ವಿ. ಇದೊಂದು ಐತಿಹಾಸಿಕ ಜಯ. ಯಾವುದೇ ಕೃಷಿ ಭೂಮಿಗೆ ಸಮಸ್ಯೆ ಮಾಡಿದ್ರೆ ಹೋರಾಟ ಮಾಡ್ತೀವಿ. ಫಲವತ್ತಾದ ಭೂಮಿ ಸ್ವಾಧೀನ ಮಾಡಿಕೊಳ್ಳಬಾರದು. ಭೂಮಿ ಬಲಾತ್ಕಾರವಾಗಿ ವಶ ಮಾಡಿಕೊಂಡರೇ ಹೋರಾಟ ಮಾಡ್ತೀವಿ. ಇದು ರೈತರ ಹೋರಾಟಕ್ಕೆ ಸಿಕ್ಕ ಜಯ ಇದು. ಇಲ್ಲಿ ಯಾವುದೇ ಮಾಫಿಯಾದ ಕೈಗಳು ಇಲ್ಲ. ಇದು ರೈತರು, ಮಹಿಳೆಯರ ಹೋರಾಟಕ್ಕೆ ಸಿಕ್ಕ ಜಯ ಎಂದರು. ಇದನ್ನೂ ಓದಿ: ಭಾರತಕ್ಕೆ ಟೆಸ್ಲಾ ಎಂಟ್ರಿ | ಮೈಲೇಜ್‌ ಎಷ್ಟು? ಬೇರೆ ದೇಶದಲ್ಲಿ ದರ ಎಷ್ಟಿದೆ? ಭಾರತದಲ್ಲಿ ದುಬಾರಿ ಯಾಕೆ?

  • ದ್ವೇಷ ಭಾಷಣಕ್ಕೆ ಕಡಿವಾಣ ಹಾಕಿ – ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಸೂಚನೆ

    ದ್ವೇಷ ಭಾಷಣಕ್ಕೆ ಕಡಿವಾಣ ಹಾಕಿ – ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಸೂಚನೆ

    ನವದೆಹಲಿ: ಅಭಿವ್ಯಕ್ತಿ ಸ್ವಾತಂತ್ರ‍್ಯಕ್ಕೆ ಧಕ್ಕೆಯಾಗದಂತೆ ದ್ವೇಷ ಭಾಷಣ (Hate Speech) ನಿಯಂತ್ರಿಸುವಂತೆ ಕೇಂದ್ರ ಸರ್ಕಾರ ಹಾಗೂ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ (Supreme Court) ಸೋಮವಾರ ಸೂಚಿಸಿದೆ.

    ಇನ್‌ಸ್ಟಾಗ್ರಾಮ್ (Instagram) ಇನ್‌ಫ್ಲುಯೆನ್ಸರ್ ಶರ್ಮಿಷ್ಠ ಪನೋಲಿ ವಿರುದ್ಧದ ಪ್ರಕರಣದ ದೂರುದಾರ ವಜಾಹತ್ ಖಾನ್ ಸಲ್ಲಿಸಿದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ರೀತಿಯ ಸೂಚನೆ ನೀಡಿದೆ. ದ್ವೇಷದ ಭಾಷಣವನ್ನು ʻಅಭಿವ್ಯಕ್ತಿ ಸ್ವಾತಂತ್ರ‍್ಯʼ ಎಂದು ಹೇಳುವುದಕ್ಕೆ ವಿಷಾದ ವ್ಯಕ್ತಪಡಿಸಿದ ನ್ಯಾ. ಬಿ.ವಿ ನಾಗರತ್ನ (BV Nagrathna) ಮತ್ತು ನ್ಯಾ. ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯಪೀಠ ಅದನ್ನ ನಿಯಂತ್ರಿಸಲು ರಾಜ್ಯವು ಮುಂದಾಗುವುದನ್ನು ಯಾರೂ ಬಯಸುವುದಿಲ್ಲ. ಹೀಗಾಗಿ ವಾಕ್ ಸ್ವಾತಂತ್ರ‍್ಯದ ಮೌಲ್ಯದ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಸಲಹೆ ನೀಡಿತು.

    ದ್ವೇಷ ಮೂಡಿಸುವ ಭಾಷಣಗಳು ಅಸಮರ್ಪಕ ಅಂತ ಜನರಿಗೆ ಯಾಕೆ ಕಾಣಿಸುತ್ತಿಲ್ಲ? ಎಂದು ಪ್ರಶ್ನಿಸಿದ ನ್ಯಾಯಪೀಠ, ಇಂತಹ ಕೆಲವು ಭಾಷಣಗಳಿಗೆ ನಿಯಂತ್ರಣ ಇರಬೇಕು. ಜನರು ಅಂತಹ ದ್ವೇಷದ ಭಾಷಣ ಹಂಚಿಕೊಳ್ಳುವುದು ಮತ್ತು ಲೈಕ್ ಮಾಡುವುದನ್ನ ನಿರ್ಬಂಧಿಸಬೇಕು ಎಂದು ಹೇಳಿತು. ಇದನ್ನೂ ಓದಿ: ಡಿವೋರ್ಸ್‌ ಕೇಸ್‌| ಸಂಗಾತಿ ರೆಕಾರ್ಡ್ ಮಾಡಿದ ಕರೆಯನ್ನು ಸಾಕ್ಷಿಯಾಗಿ ಪರಿಗಣಿಸಬಹುದು – ಸುಪ್ರೀಂ

    ದ್ವೇಷ ಮತ್ತು ಕೋಮು ಸೌಹಾರ್ದತೆಯನ್ನ ಪ್ರಚೋದಿಸುವ ವಿಷಯವನ್ನ ಸೋಷಿಯಲ್‌ ಮೀಡಿಯಾದಲ್ಲಿ (Social Media) ಪೋಸ್ಟ್ ಮಾಡಿದ ಆರೋಪದ ಮೇಲೆ ವಜಾಹತ್ ಖಾನ್ ವಿರುದ್ಧ ವಿವಿಧ ರಾಜ್ಯಗಳಲ್ಲಿ ಪ್ರಕರಣ ದಾಖಲಿಸಲಾಗಿದೆ. ಅವರು ಈಗಾಗಲೇ ಒಂದು ಎಫ್‌ಐಆರ್‌ನಲ್ಲಿ (FIR) ಪೊಲೀಸ್ ಕಸ್ಟಡಿಯಲ್ಲಿದ್ದಾರೆ ಮತ್ತು ಇನ್ನೊಂದರಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ, ಇಬ್ಬರ ವಿರುದ್ಧವೂ ಪಶ್ಚಿಮ ಬಂಗಾಳದಲ್ಲಿ ಕೇಸ್ ದಾಖಲಾಗಿದೆ. ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಕೇಸ್‌ | ರಾಹುಲ್, ಸೋನಿಯಾ ವಿರುದ್ಧದ ಆರೋಪ ಪರಿಗಣನೆ ಕುರಿತು ತೀರ್ಪು ಕಾಯ್ದಿರಿಸಿದ ದೆಹಲಿ ಕೋರ್ಟ್‌

    ಅಭಿವ್ಯಕ್ತಿ ಸ್ವಾತಂತ್ರ‍್ಯಕ್ಕೆ ಧಕ್ಕೆಯಾಗದಂತೆ ದ್ವೇಷ ಭಾಷಣವನ್ನ ನಿಯಂತ್ರಿಸುವ ಮಾರ್ಗಗಳನ್ನ ಸೂಚಿಸುವಂತೆ ಕೇಂದ್ರ, ರಾಜ್ಯ ಸರ್ಕಾರಗಳು ಮತ್ತು ವಜಾಹತ್ ಖಾನ್ ಪರ ಹಾಜರಿದ ವಕೀಲರಿಗೆ ಸುಪ್ರೀಂ ಸೂಚಿಸಿತು. ಪಶ್ಚಿಮ ಬಂಗಾಳದ ಹೊರಗೆ ಅವರ ವಜಾಹತ್ ಖಾನ್ ವಿರುದ್ಧ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳಲ್ಲಿ ಅವರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್ ತಡೆ ನೀಡಿದ ಮೂರು ವಾರಗಳ ನಂತರ ಈ ಬಗ್ಗೆ ವಿಚಾರಣೆ ನಡೆಸಿತು. ಅವರಿಗೆ ಈ ಪರಿಹಾರವನ್ನು ಮುಂದುವರೆಸಿದ ನ್ಯಾಯಾಲಯ, ಇನ್ನಷ್ಟು ಎಫ್‌ಐಆರ್‌ಗಳನ್ನು ಹಾಕಿ ವ್ಯಕ್ತಿಯನ್ನು ಜೈಲಿಗೆ ಹಾಕುವುದರಲ್ಲಿ ಏನು ಪ್ರಯೋಜನ? ಎಂದು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಖಾನ್ ಅವರ ವಕೀಲರು, ತಮ್ಮ ಕಕ್ಷಿದಾರರು ಹಿಂದಿನ ಟ್ವೀಟ್‌ಗಳಿಗೆ ಕ್ಷಮೆಯಾಚಿಸಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಕೇರಳದ ನರ್ಸ್‌ಗೆ ಜು.16ರಂದು ಯೆಮೆನ್‌ನಲ್ಲಿ ನೇಣು; ಮರಣದಂಡನೆ ತಡೆಯಲು ಸಾಧ್ಯವಿಲ್ಲ – ಸುಪ್ರೀಂಗೆ ಕೇಂದ್ರ ಮಾಹಿತಿ