Tag: State Government

  • ಹೊರಗಿಂದ ಬರೋರಿಗೆ ಕ್ವಾರಂಟೈನ್ ಸಡಿಲ- ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

    ಹೊರಗಿಂದ ಬರೋರಿಗೆ ಕ್ವಾರಂಟೈನ್ ಸಡಿಲ- ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

    ಬೆಂಗಳೂರು: ಹೊರ ರಾಜ್ಯದಿಂದ ಬರುವವರಿಗೆ ಕೇಂದ್ರ ಸರ್ಕಾರ ಕ್ವಾರಂಟೈನ್ ಸಡಿಲಗೊಳಿಸಿದ್ದು, ಹೊಸ ಮಾರ್ಗಸೂಚಿ ಪ್ರಕಟಿಸಿದೆ.

    ಸರ್ಕಾರ ಈ ಹಿಂದೆ ಅನ್ಯರಾಜ್ಯಗಳಿಂದ ಬರುವವರ 14 ದಿನಗಳ ಕ್ವಾರಂಟೈನ್ ಆದೇಶ ಮಾಡಿತ್ತು. ಆದರೆ ಈಗ ಆದೇಶವನ್ನು ವಾಪಸ್ ಪಡೆದುಕೊಂಡಿದ್ದು, ಮಹಾರಾಷ್ಟ್ರ ಸೇರಿ 6 ಹೈರಿಸ್ಕ್ ರಾಜ್ಯಗಳಿಂದ ಬಂದರೆ 7 ದಿನ ಮಾತ್ರ ಕ್ವಾರಂಟೈನ್ ಮಾಡಲಾಗಿದೆ. ಇನ್ನಿತರೆ ರಾಜ್ಯಗಳಿಂದ ಬರುವವರಿಗೆ 14 ದಿನ ಹೋಮ್ ಕ್ವಾರಂಟೈನ್ ಮಾಡಬೇಕು ಎಂದು ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

    ಕ್ವಾರಂಟೈನ್ ರೂಲ್ಸ್:
    * ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ದೆಹಲಿ, ರಾಜಸ್ಥಾನ, ಮದ್ಯಪ್ರದೇಶದಿಂದ ಬರುವವರಿಗೆ 7 ದಿನ ಕ್ವಾರಂಟೈನ್
    * 5 ನೇ ದಿನ ಹಾಗೂ 7ನೇ ದಿನ 2 ಬಾರಿ ಕೋವಿಡ್ 19 ಟೆಸ್ಟ್
    * 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಬಳಿಕ ಮತ್ತೆ 7 ದಿನ ಹೋಂ ಕ್ವಾರಂಟೈನ್
    * ಇದಲ್ಲದೇ ಎಲ್ಲಾ ಅಂತಾರಾಜ್ಯ ಪ್ರಯಾಣಿಕರಿಗೆ 14 ದಿನ ಹೋಂ ಕ್ವಾರಂಟೈನ್ ಕಡ್ಡಾಯ
    * ಗರ್ಭಿಣಿಯರು, 10 ವರ್ಷ ಕೆಳಗಿನ ಮಕ್ಕಳು, 80 ವರ್ಷ ಮೇಲ್ಪಟ್ಟವರಿಗೆ ಹೋಂ ಕ್ವಾರಂಟೈನ್
    * ವ್ಯವಹಾರ ಉದ್ದೇಶಕ್ಕೆ ಬರುವವರು ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡು ಬರಬೇಕು

  • ಯಡಿಯೂರಪ್ಪ ಮುಖ ನೋಡಿ ನಮಗೂ ಸಾಕಾಗಿದೆ: ರೇವಣ್ಣ ವ್ಯಂಗ್ಯ

    ಯಡಿಯೂರಪ್ಪ ಮುಖ ನೋಡಿ ನಮಗೂ ಸಾಕಾಗಿದೆ: ರೇವಣ್ಣ ವ್ಯಂಗ್ಯ

    ಹಾಸನ: ಸಿಎಂ ಯಡಿಯೂರಪ್ಪ ಅವರ ಮುಖ ನೋಡಿ ನಮಗೂ ಸಾಕಾಗಿದೆ. ಯಾವ ಟಿವಿ ನೋಡಿದರೂ ಮೋದಿ, ಯಡಿಯೂರಪ್ಪ ಅವರೇ ಬರುತ್ತಾರೆ ಎಂದು ಹಾಸನದಲ್ಲಿ ಮಾಜಿ ಸಚಿವ ರೇವಣ್ಣ ವ್ಯಂಗ್ಯವಾಡಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನಮ್ಮ ಜಿಲ್ಲೆ ಹಾಸನವನ್ನು ಮೊದಲಿನಿಂದ ಗ್ರೀನ್‍ಜೋನ್ ಆಗಿ ಕಾಪಾಡಿಕೊಂಡು ಬಂದಿದ್ದೇವೆ. ಇದರಲ್ಲಿ ನಮ್ಮ ಜಿಲ್ಲೆಯ ಅಧಿಕಾರಿಗಳ ಶ್ರಮ ಇದೆ. ಆದರೆ ರಾಜ್ಯ ಸರ್ಕಾರ ಮುಂಬೈನಿಂದ ಬಂದವರನ್ನು ಚೆಕ್ ಮಾಡಿಸದೇ ಕರೆತಂದಿದ್ದರಿಂದ ಇಂದು ನಮ್ಮ ಜಿಲ್ಲೆಯಲ್ಲಿ ಕೊರೊನಾ ಹೆಚ್ಚಾಗಿದೆ. ಪ್ರತಿ ದಿನ ಯಡಿಯೂರಪ್ಪ ಮೊದಲ ಪೇಜ್ ಜಾಹೀರಾತಿಗೆ ಹಣ ಖರ್ಚು ಮಾಡುವ ಬದಲು, ಬೇರೆ ಕಾರ್ಯಗಳಿಗೆ ಹಣ ವಿನಿಯೋಗಿಸಲಿ ಎಂದು ವ್ಯಂಗ್ಯವಾಡಿದರು.

    ಇದೇ ವೇಳೆ ಮುಂಬೈಯಿಂದ ಹಾಸನಕ್ಕೆ ಬರುವವರಿಗೆ ಸರ್ಕಾರ ಅನುಮತಿ ನೀಡಿದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹೆಚ್‍ಡಿ ರೇವಣ್ಣ, ಮುಂಬೈನಿಂದ ಹಾಸನಕ್ಕೆ ಬರಲಿ ಬೇಡ ಎನ್ನುವುದಿಲ್ಲ. ಆದರೆ ಅವರು ಕೊರೊನಾ ಟೆಸ್ಟ್ ಮಾಡಿಸಿಕೊಂಡು, ಚಿಕಿತ್ಸೆ ಪಡೆದುಕೊಂಡು ಬರಲಿ ಎಂದರು. ಇದೇ ವೇಳೆ ಕೊರೊನಾ ಪ್ರಕರಣದ ಬಗ್ಗೆ ಮಾತನಾಡಿದ ರೇವಣ್ಣ, ಇಂದು 13 ಹೊಸ ಪ್ರಕರಣಗಳು ಬರುತ್ತಂತೆ. ಅದರಲ್ಲಿ ಮೂವರು ಸೀರಿಯಸ್ಸ್ ಅಂತೆ ಎಂದು ಮಾಹಿತಿ ನೀಡಿದರು.

    ಬುಧವಾರವಷ್ಟೇ ಹಾಸನದಲ್ಲಿ 21 ಕೊರೊನಾ ಪ್ರಕರಣಗಳು ಕಂಡುಬಂದಿದ್ದು, ಜೊತೆಗೆ ಇಂದು 13 ಪ್ರಕರಣಗಳು ಬಂದಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 66ಕ್ಕೇರಿದೆ. ಚನ್ನರಾಯಪಟ್ಟಣ ತಾಲೂಕಿನಲ್ಲಿ ಹೆಚ್ಚು ಕೊರೊನಾ ಪ್ರಕರಣಗಳು ಕಂಡು ಬಂದಿದ್ದು, ಮುಂಬೈನಿಂದ ವಾಪಸ್ ಬಂದವರಲ್ಲೇ ಹೆಚ್ಚು ಕೊರೊನಾ ಕಾಣಿಸಿಕೊಳ್ಳುತ್ತಿದೆ. ಆದರೆ ಅವರೆಲ್ಲರನ್ನೂ ಕ್ವಾರಂಟೈನ್ ಅಲ್ಲಿ ಇಟ್ಟಿರುವುದು ಜಿಲ್ಲೆಯ ಜನರ ಆತಂಕ ಕಡಿಮೆ ಮಾಡಿದೆ.

  • ಸೋಂಕಿತರ ಟ್ರಾವೆಲ್ ಹಿಸ್ಟರಿ ಮುಚ್ಚಿಟ್ಟ ಸರ್ಕಾರ- ಪ್ರಶ್ನಿಸಿದಾಗ ನುಣುಚಿಕೊಂಡ ಶ್ರೀರಾಮುಲು

    ಸೋಂಕಿತರ ಟ್ರಾವೆಲ್ ಹಿಸ್ಟರಿ ಮುಚ್ಚಿಟ್ಟ ಸರ್ಕಾರ- ಪ್ರಶ್ನಿಸಿದಾಗ ನುಣುಚಿಕೊಂಡ ಶ್ರೀರಾಮುಲು

    ಬೆಂಗಳೂರು: ಕೊರೊನಾ ಸೋಂಕಿತರ ಟ್ರಾವೆಲ್ ಹಿಸ್ಟರಿಯನ್ನು ರಾಜ್ಯ ಸರ್ಕಾರ ಇಂದು ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಅಲ್ಲಿ ನಮೂದಿಸದೇ ಇರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.

    ಇಷ್ಟು ದಿನ ಕೊರೊನಾ ವಿಚಾರವಾಗಿ ದಿನಕ್ಕೆ ಎರಡು ಬುಲೆಟಿನ್ ಬಿಡುಗಡೆ ಮಾಡುತ್ತಿದ್ದ ರಾಜ್ಯ ಆರೋಗ್ಯ ಇಲಾಖೆ, ಅದರಲ್ಲಿ ಸೋಂಕಿತರ ಜಿಲ್ಲೆ ಮತ್ತು ಅವರು ಪ್ರಯಾಣ ಮಾಡಿದ ಹಿನ್ನೆಲೆ ಮತ್ತು ಯಾವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿಯನ್ನು ನಮೂದಿಸುತ್ತಿತ್ತು. ಆದರೆ ಇಂದು ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಕೇವಲ ಜಿಲ್ಲಾವಾರು ಪಟ್ಟಿಯನ್ನು ಮಾತ್ರ ಬಿಡುಗಡೆ ಮಾಡಿದೆ. ಈ ಮೂಲಕ ಸೋಂಕಿತರ ಪ್ರಯಾಣದ ಹಿನ್ನೆಲೆಯನ್ನು ಮುಚ್ಚಿಟ್ಟಿದೆ.

    ಸದ್ಯ ಕರುನಾಡಲ್ಲಿ ಮುಂಬೈ ಕೊರೊನಾ ಬಾಂಬ್ ಸ್ಫೋಟಿಸಿದೆ. ಮುಂಬೈನಿಂದ ರಾಜ್ಯಕ್ಕೆ ವಾಪಸ್ ಬಂದ ಹಲವರಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಇದರಲ್ಲಿ ಕೆಲವರನ್ನು ಮಾತ್ರ ಕ್ವಾರಂಟೈನ್ ಮಾಡಿದ್ದು, ದಾಖಲೆ ಸಲ್ಲಿಸದೇ ಕಳ್ಳಮಾರ್ಗದಲ್ಲಿ ರಾಜ್ಯಕ್ಕೆ ಬಂದವರ ಮಾಹಿತಿ ಸರ್ಕಾರದ ಬಳಿ ಇಲ್ಲ. ಜೊತೆಗೆ ಕೊರೊನಾ ಟೆಸ್ಟ್ ಮಾಡದೇ ಮಹಾರಾಷ್ಟ್ರದಿಂದ ಜನರನ್ನು ರಾಜ್ಯಕ್ಕೆ ಕರೆದುಕೊಂಡು ಬಂದು ಸರ್ಕಾರ ಎಡವಟ್ಟು ಮಾಡಿಕೊಂಡಿದೆ.

    ಈ ವಿಚಾರವಾಗಿ ಪಬ್ಲಿಕ್ ಟಿವಿಯ ಜೊತೆ ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು, ಹೊರರಾಜ್ಯದಿಂದ ದಾಖಲೆ ನೀಡಿ, ನೋಂದಣಿ ಮಾಡಿಸಿಕೊಂಡು ರಾಜ್ಯಕ್ಕೆ ಬಂದವರ ಟ್ರಾವೆಲ್ ಹಿಸ್ಟರಿ ನಮಗೆ ಸಿಕ್ಕಿದೆ. ಆದರೆ ಯಾವುದೇ ದಾಖಲಾತಿ ಮಾಡಿಕೊಳ್ಳದೆ, ನಮಗೆ ತಿಳಿಸದೇ ರಾಜ್ಯಕ್ಕೆ ಬಂದವರ ಪ್ರಯಾಣದ ಹಿನ್ನೆಲೆ ನಮಗೆ ಸಿಕ್ಕಿಲ್ಲ. ಅದೂ ಸ್ವಲ್ಪ ಕಷ್ಟವಾಗುತ್ತಿದೆ. ನಾವು ಅವರ ಟ್ರಾವೆಲ್ ಹಿಸ್ಟರಿ ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿ ನುಣುಚಿಕೊಂಡಿದ್ದಾರೆ.

  • ಬೆಂಗಳೂರಿನಿಂದ ಐದು ಜಿಲ್ಲೆಗಳ ಮಾರ್ಗದಲ್ಲಿ ಮಾತ್ರ ಬಸ್ ಸಂಚಾರ

    ಬೆಂಗಳೂರಿನಿಂದ ಐದು ಜಿಲ್ಲೆಗಳ ಮಾರ್ಗದಲ್ಲಿ ಮಾತ್ರ ಬಸ್ ಸಂಚಾರ

    – ಪಿಕ್ ಆಪ್ ಪಾಯಿಂಟ್‍ಗಳಲ್ಲಿ ಮಾತ್ರ ಪ್ರಯಾಣಿಕರು ಹತ್ತಲು ಅವಕಾಶ

    ಬೆಂಗಳೂರಿಗೆ: ರಾಜ್ಯ ಸರ್ಕಾರ ಲಾಕ್‍ಡೌನ್ 4.0ನಲ್ಲಿ ಜನರಿಗೆ ಮತ್ತಷ್ಟು ವಿನಾಯ್ತಿಗಳನ್ನು ನೀಡಿ ನಾಳೆಯಿಂದ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಿದೆ. ಆದರೆ ನಾಳೆ ಬೆಂಗಳೂರಿನಿಂದ ರಾಜ್ಯದ 5 ಜಿಲ್ಲೆಗಳ ಮಾರ್ಗದಲ್ಲಿ ಮಾತ್ರ ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡಿರುವುದಾಗಿ ಕೆಎಸ್‌ಆರ್‌ಟಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

    ಕೆಎಸ್‌ಆರ್‌ಟಿಸಿ ನಿಗಮದ ಸಾರಿಗೆಗಳ ಕಾರ್ಯಾಚರಣೆಯನ್ನು ಮೇ 19ರಿಂದ ಪುನರಾಂಭಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಒಟ್ಟು 14 ನಿಯಮಗಳನ್ನು ಕೆಎಸ್‌ಆರ್‌ಟಿಸಿ ರೂಪಿಸಿಕೊಂಡಿದೆ. ಮೊದಲಿಗೆ ಸುಮಾರು 1,500 ಬಸ್‍ಗಳ್ನು (ಶೇ.25 ರಷ್ಟು) ರಸ್ತೆಗಳಿಸಲು ಸರ್ಕಾರದ ಆದೇಶದಲ್ಲಿ ಅವಕಾಶ ನೀಡಲಾಗಿದೆ. ತದನಂತರ ಹಂತ ಹಂತವಾಗಿ ಬಸ್‍ಗಳ ಸಂಖ್ಯೆಯನ್ನು ಹೆಚ್ಚಿಸಿ ಕಾರ್ಯಾಚರಣೆಗೊಳಿಸಲಾಗುವುದು ಎಂದು ತಿಳಿಸಿದೆ.

    ದರ ಹೆಚ್ಚಳವಿಲ್ಲ: ಬಸ್‍ಗಳಲ್ಲಿ ನಿಗದಿತ ಸೀಟ್‍ಗಳ ಪ್ರಯಾಣಿಕರಿಗಷ್ಟೇ ಅವಕಾಶ ನೀಡಲಾಗಿದೆ. ಆದರೆ ಯಾವುದೇ ಬಸ್ ಪ್ರಯಾಣ ದರಗಳಲ್ಲಿ ಹೆಚ್ಚಳವಿಲ್ಲ ಎಂದು ಸ್ಪಷ್ಟಪಡಿಸಿದೆ. ಅಲ್ಲದೇ ಹಗಲು ವೇಳೆಯಲ್ಲಿ ಅಂದರೆ ಬೆಳಗ್ಗೆ 7 ರಿಂದ ಸಂಜೆ 7ರ ವರೆಗೆ ಮಾತ್ರ ಬಸ್ ಕಾರ್ಯಾಚರಣೆಗೆ ಅವಕಾಶ ನೀಡಲಾಗಿದೆ.

    5 ಜಿಲ್ಲೆಗಳಿಗೆ ಮಾತ್ರ ಬಸ್: ಬೆಳಗ್ಗೆ 7 ಗಂಟೆಗೆ ಬಸ್ ಪ್ರಯಾಣ ಆರಂಭವಾದರೆ ಸಂಜೆ 7 ಗಂಟೆ ವೇಳೆಗೆ ಗಮ್ಯ ಸ್ಥಳಗಳನ್ನು ತಲುಪುವ ಮಾರ್ಗಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಇದರ ಅನ್ವಯ ಬೆಂಗಳೂರಿನ ಮೆಜೆಸ್ಟಿಕ್ ನಿಂದ ಮೈಸೂರು, ಶಿವಮೊಗ್ಗ, ದಾವರಣಗೆರೆ, ಹಾಸನ, ಮಂಗಳೂರು ಜಿಲ್ಲೆಗಳಿಗೆ ಮಾತ್ರ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಸಂಜೆ 4ಗಂಟೆ, ಶಿವಮೊಗಕ್ಕೆ ಮಧ್ಯಾಹ್ನ 12 ಗಂಟೆ, ದಾವಣಗೆರೆಗೆ ಮಧ್ಯಾಹ್ನ 1 ಗಂಟೆ, ಹಾಸನಕ್ಕೆ 3.30 ಗಂಟೆಗೆ ಹಾಗೂ ಮಂಗಳೂರಿಗೆ ಬೆಳಗ್ಗೆ 11.30 ಗಂಟೆಗೆ ಅಂತಿಮ ಬಸ್ ನಿರ್ಗಮಿಸುತ್ತದೆ.  ಮೈಸೂರು, ಮಡಿಕೇರಿ ಮಾರ್ಗದಲ್ಲಿ ಸಂಚರಿಸುವ ಬಸ್ಸುಗಳು ಎಂದಿನಂತೆ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಸಂಚರಿಸುತ್ತವೆ.

    ನಿಲುಗಡೆ ಇಲ್ಲ: ಪಿಕ್ ಆಪ್ ಪಾಯಿಂಟ್ ಗಳಲ್ಲಿ ಮಾತ್ರ ಪ್ರಯಾಣಿಕರು ಹತ್ತಲು ಅವಕಾಶ ನೀಡಲಾಗಿದೆ. ಉಳಿದ ಬಸ್ ನಿಲ್ದಾಣಗಳಲ್ಲಿ ಬಸ್ ನಿಲುಗಡೆ ಇರುವುದಿಲ್ಲ. ರಾಜ್ಯ ಸರ್ಕಾರ ಗುರುತಿಸಿರುವ ಕಂಟೈನ್‍ಮೆಂಟ್ ಝೋನ್‍ಗಳಿಗೆ ಯಾವುದೇ ಬಸ್ ಸಂಚಾರ ಇಲ್ಲ. ಪ್ರತಿ ಭಾನುವಾರ ಯಾವುದೇ ಬಸ್‍ಗಳ ಕಾರ್ಯಾಚರಣೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಅಲ್ಲದೇ ಒಂದು ಬಸ್ಸಿನಲ್ಲಿ 30 ಜನರಿಗೆ ಮಾತ್ರ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಕಡ್ಡಾಯವಾಗಿ ಬಸ್ ಪ್ರಯಾಣಿಕರ ಥರ್ಮಲ್ ಸ್ಕ್ರೀನಿಂಗ್ ಆದ ಬಳಿಕವೇ ಬಸ್ ಹತ್ತಲು ಅವಕಾಶ ನೀಡಲಾಗುತ್ತದೆ.

    ಅಂತರ ರಾಜ್ಯ, ಹವಾನಿಯಂತ್ರಿತ ಬಸ್ಸುಗಳ ಕಾರ್ಯಾಚರಣೆಗೆ ಅವಕಾಶ ನೀಡಿಲ್ಲ. ಮುಂಗಡ ಆಸನಗಳನ್ನು ಕೆಎಸ್‌ಆರ್‌ಟಿಸಿ ವೆಬ್‍ಸೈಟ್ ಮುಖಾಂತರ ಕಾಯ್ದಿರಿಸಿಕೊಳ್ಳಬಹುದಾಗಿದೆ. ಅಲ್ಲದೇ ಪ್ರಯಾಣಿಕರಿಗೆ ಕಡಿಮೆ ಲಗ್ಗೇಜ್ ಹಾಗೂ ಐಡಿ ಕಾರ್ಡ್ ತರುವಂತೆ ಸೂಚನೆ ನೀಡಿದೆ. ಅಲ್ಲದೇ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಮಾರ್ಗ ಮಧ್ಯ ಯಾವುದೇ ಸ್ಥಳದಲ್ಲಿ ನಿಲುಗಡೆ ಇಲ್ಲದೇ ಇರುವುದರಿಂದ ನೀರು, ಅಗತ್ಯ ಆಹಾರವನ್ನು ತರಲು ಮನವಿ ಮಾಡಿದೆ.

    ಬುಕ್ಕಿಂಗ್ ಆರಂಭ:  ಬೆಂಗಳೂರು-ಶಿವಮೊಗ್ಗ, ಶಿವಮೊಗ್ಗ-ಬೆಂಗಳೂರು, ಬೆಂಗಳೂರು-ಚಿಕ್ಕಮಗಳೂರು, ಚಿಕ್ಕಮಗಳೂರು-ಬೆಂಗಳೂರು, ಬೆಂಗಳೂರು-ದಾವಣಗೆರೆ, ದಾವಣಗೆರೆ-ಬೆಂಗಳೂರು, ಬೆಂಗಳೂರು- ಮೈಸೂರು, ಮೈಸೂರು-ಬೆಂಗಳೂರು, ಬೆಂಗಳೂರು-ಮಡಿಕೇರಿ, ಮಡಿಕೇರಿ-ಬೆಂಗಳೂರು, ಬೆಂಗಳೂರು-ಮಂಗಳೂರು, ಮಂಗಳೂರು-ಬೆಂಗಳೂರು, ಬೆಂಗಳೂರು-ಕುಂದಾಪುರ, ಕುಂದಾಪುರ-ಬೆಂಗಳೂರು, ಬೆಂಗಳೂರು-ಹೊಸಪೇಟೆ, ಹೊಸಪೇಟೆ-ಬೆಂಗಳೂರು, ಬೆಂಗಳೂರು-ಬಳ್ಳಾರಿ, ಬಳ್ಳಾರಿ- ಬೆಂಗಳೂರು, ಬೆಂಗಳೂರು-ಹುಬ್ಬಳ್ಳಿ, ಬೆಂಗಳೂರು-ಸಿರ್ಸಿ, ಬೆಂಗಳೂರು-ರಾಯಚೂರು, ಬೆಂಗಳೂರು-ಬೆಳಗಾವಿ, ಬೆಂಗಳೂರು-ಧಾರವಾಡ.

    ಪ್ರಯಾಣಿಕರು ಕೆ ಎಸ್ ಆರ್ ಟಿ‌ ಸಿ‌, ವೆಬ್‌ಸೈಟ್ www.ksrtc.in‌ಮೂಲಕ ಅಥವಾ ಫ್ರಾಂಚೈಸಿ ಕೌಂಟರುಗಳು / ನಿಗಮದ‌ ಟಿಕೇಟು ಕೌಂಟರುಗಳ ಮೂಲಕ‌ ಟಿಕೇಟುಗಳನ್ನು ಕಾಯ್ದಿರಿಸಬಹುದು.  ಹೆಚ್ಚಿನ ಮಾಹಿತಿಗಾಗಿ ಕಾಲ್ ಸೆಂಟರ್ ನಂಬರ್ ಗೆ ಸಂಪರ್ಕಿಸಿ : 94495 96666

  • ಕೇಂದ್ರದ ಮಾರ್ಗಸೂಚಿಗಳನ್ನು ಕಠಿಣಗೊಳಿಸಬೇಕೇ ಹೊರತು ಸಡಿಲ ಮಾಡುವಂತಿಲ್ಲ – ಗೃಹ ಇಲಾಖೆ

    ಕೇಂದ್ರದ ಮಾರ್ಗಸೂಚಿಗಳನ್ನು ಕಠಿಣಗೊಳಿಸಬೇಕೇ ಹೊರತು ಸಡಿಲ ಮಾಡುವಂತಿಲ್ಲ – ಗೃಹ ಇಲಾಖೆ

    ನವದೆಹಲಿ: ನಾಲ್ಕನೇ ಹಂತದ ಲಾಕ್‍ಡೌನ್ ವಿಚಾರಕ್ಕೆ ಸಂಬಂಧಿಸಿದಂತೆ ಹೊರಡಿಸಲಾಗಿರುವ ಮಾರ್ಗಸೂಚಿಗಳನ್ನು ಬದಲಾಯಿಸುವಂತಿಲ್ಲ ಎಂದು ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ಇಲಾಖೆ ತಿಳಿಸಿದೆ.

    ಇಂದು ಈ ಸಂಬಂಧ ಆದೇಶ ಹೊರಡಿಸಿರುವ ಗೃಹ ಇಲಾಖೆ ಕೇಂದ್ರ ಸರ್ಕಾರ ನೀಡಿರುವ ನಿಯಮಗಳನ್ನು ಸಡಿಲಿಕೆ ಮಾಡುವಂತಿಲ್ಲ. ಆದರೆ ಮತ್ತಷ್ಟು ನಿಯಮಗಳನ್ನು ಕಠಿಣ ಮಾಡಲು ಅವಕಾಶ ಮಾಡಿಕೊಡಲಾಗುವುದು ಎಂದು ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಲಾಗಿದೆ.

    ಕಂಟೈನ್‍ಮೆಂಟ್, ಬಫರ್, ರೆಡ್, ಗ್ರೀನ್, ಆರೆಂಜ್ ಜೋನ್ ಗಳನ್ನು ಆರೋಗ್ಯ ಇಲಾಖೆ ಸಲಹೆ ಮೇರೆಗೆ ಮಾಡಿದ್ದು, ಕಂಟೈನ್‍ಮೆಂಟ್ ಜೋನ್ ಹೊರತುಪಡಿಸಿ ಉಳಿದ ಪ್ರದೇಶಗಳಿಗೆ ಲಾಕ್‍ಡೌನ್ ವಿನಾಯತಿ ನೀಡಿದರೆ ಇದು ಯಥಾವತ್ತಾಗಿ ಜಾರಿಗೆ ಬರಬೇಕು. ಕಂಟೈನ್‍ಮೆಂಟ್ ಜೋನ್ ಗಳಲ್ಲಿ ಯಾವುದೇ ಕಾರಣಕ್ಕೂ ವಿನಾಯತಿ ನೀಡಬಾರದು ಎಂದು ಸೂಚಿಸಿದೆ.

    ಕೇಂದ್ರ ಸರ್ಕಾರ ತನ್ನ ಆದೇಶದಲ್ಲಿ ಎಲ್ಲ ವಲಯಗಳಲ್ಲಿ ನಿರ್ಬಂಧಿಸಿರುವ ವಲಯಗಳಲ್ಲಿ ಯಾವುದೇ ಕಾರಣಕ್ಕೂ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ವಿನಾಯತಿ ನೀಡದಂತೆ ಗೃಹ ಇಲಾಖೆ ಎಚ್ಚರಿಸಿದೆ.

  • ಕೋವಿಡ್ ಸಂಕಷ್ಟದಲ್ಲಿ ಸ್ತ್ರೀಯರಿಗೆ ಮತ್ತೊಂದು ಬರೆ: ಸರ್ಕಾರದ ವಿರುದ್ಧ ಎಚ್‍ಡಿಕೆ ಕಿಡಿ

    ಕೋವಿಡ್ ಸಂಕಷ್ಟದಲ್ಲಿ ಸ್ತ್ರೀಯರಿಗೆ ಮತ್ತೊಂದು ಬರೆ: ಸರ್ಕಾರದ ವಿರುದ್ಧ ಎಚ್‍ಡಿಕೆ ಕಿಡಿ

    – ಸಾಂತ್ವನ ಯೋಜನೆ ಸ್ಥಗಿತಕ್ಕೆ ಸರ್ಕಾರದ ವಿರುದ್ಧ ಎಚ್‍ಡಿಕೆ ಆಕ್ರೋಶ

    ಬೆಂಗಳೂರು: ಸಾಂತ್ವಾನ ಯೋಜನೆ ಸ್ಥಗಿತಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸರಣಿ ಟ್ವೀಟ್ ಮಾಡಿರುವ ಅವರು ಸಾಂತ್ವನ ಯೋಜನೆ ನಿಲ್ಲಿಸದಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. “ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳಿಗೆ ಸರ್ಕಾರ ಬೀಗ ಜಡಿಯಲು ಹೊರಟಿರುವುದು ಕೋವಿಡ್-19 ಸಂಕಷ್ಟದಲ್ಲಿ ಸ್ತ್ರೀಯರಿಗೆ ಮತ್ತೊಂದು ಬರೆ ಎಳೆದಂತಾಗಿದೆ. ಕೌಟುಂಬಿಕ ಹಿಂಸಾಚಾರ ನಿಯಂತ್ರಿಸಿ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸುವ ವಿಶ್ವಸಂಸ್ಥೆಯ ಆಶಯ ಬದಿಗೊತ್ತಿರುವುದು ಖಂಡನೀಯ” ಎಂದು ಟ್ವೀಟ್ ಮಾಡಿದ್ದಾರೆ.

    ಕಳೆದ ಎರಡು ದಶಕಗಳಿಂದ ಸಾಂತ್ವನ ಯೋಜನೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ. ಜಿಲ್ಲಾ, ತಾಲೂಕು ಮಟ್ಟದಲ್ಲಿನ ಸಾಂತ್ವನ ಕೇಂದ್ರಗಳು ಮಹಿಳೆಯರ ಸಮಸ್ಯೆಗಳಿಗೆ ಧ್ವನಿಯಾಗಿ, ಆತ್ಮವಿಶ್ವಾಸ ಮೂಡಿಸುವ ಕೆಲಸದಲ್ಲಿ ಮಗ್ನವಾಗಿದ್ದವು ಎಂದು ತಿಳಿಸಿದ್ದಾರೆ.

    ಲಾಕ್‍ಡೌನ್ ಕಾಲದಲ್ಲಿ ಸಾಂತ್ವನ ಕೇಂದ್ರಗಳನ್ನು ಮುಚ್ಚಿ, ಮದ್ಯದಂಗಡಿಗಳನ್ನು ತೆರೆದು ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಳಕ್ಕೆ ಸರ್ಕಾರವೇ ಅವಕಾಶ ಮಾಡಿಕೊಟ್ಟಿದೆ. ಸಾಂತ್ವನ ಕೇಂದ್ರಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ಆಗ್ರಹಿಸಿದ್ದಾರೆ.

  • ಕೇಂದ್ರಕ್ಕೆ ರಾಜ್ಯ ಸರ್ಕಾರಗಳ ವರದಿ- ಶೀಘ್ರವೇ ಲಾಕ್‍ಡೌನ್ ಪರಿಷ್ಕೃತ ಮಾರ್ಗಸೂಚಿ ಪ್ರಕಟ

    ಕೇಂದ್ರಕ್ಕೆ ರಾಜ್ಯ ಸರ್ಕಾರಗಳ ವರದಿ- ಶೀಘ್ರವೇ ಲಾಕ್‍ಡೌನ್ ಪರಿಷ್ಕೃತ ಮಾರ್ಗಸೂಚಿ ಪ್ರಕಟ

    ನವದೆಹಲಿ: ನಾಲ್ಕನೇ ಹಂತದ ಲಾಕ್ ಡೌನ್ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ವರದಿ ನೀಡಲಿವೆ. ಪ್ರಧಾನಿ ನರೇಂದ್ರ ಮೋದಿ ಸಿಎಂಗಳ ಸಭೆಯಲ್ಲಿ ಲಿಖಿತ ರೂಪದ ವರದಿ ಕೇಳಿದ ಹಿನ್ನೆಲೆಯಲ್ಲಿ ಇಂದು ಕೇಂದ್ರ ಗೃಹ ಇಲಾಖೆಗೆ ಈ ವರದಿಗಳು ಸೇರಲಿದೆ.

    ಈಗಾಗಲೇ ಕರ್ನಾಟಕ, ಕೇರಳ, ತಮಿಳುನಾಡು, ಉತ್ತರ ಪ್ರದೇಶ ಸೇರಿದಂತೆ ಈಶಾನ್ಯ ಭಾರತದ ಹಲವು ರಾಜ್ಯಗಳು ಕೇಂದ್ರ ಸರ್ಕಾರಕ್ಕೆ ವರದಿ ನೀಡಿದ್ದು, ಇನ್ನೂ ಹಲವು ರಾಜ್ಯಗಳು ವರದಿ ಇಂದು ಸಲ್ಲಿಕೆ ಮಾಡಲಿದೆ. ಈ ವರದಿ ಆಧರಿಸಿ ಕೇಂದ್ರ ಗೃಹ ಇಲಾಖೆ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಬಹುದು.

    ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವರು ಹಾಗೂ ಟಾಸ್ಕ್ ಫೋರ್ಸ್ ನ ಸದಸ್ಯರ ಸಭೆ ಬಳಿಕ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಪ್ರಮುಖ ಕೇಂದ್ರ ಸಚಿವರ ಸಭೆ ನಡೆಯಲಿದೆ. ದೆಹಲಿ ನಿರ್ಮಾಣ ಭವನದಲ್ಲಿ ನಡೆಯಲಿರುವ ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಆರೋಗ್ಯ ಸಚಿವ ಡಾ.ಹರ್ಷವರ್ಧನ್, ನಾಗರಿಕ ವಿಮಾನಯಾನ ಸಚಿವ ಹರಿದೀಪ್ ಸಿಂಗ್ ಪೂರಿ ಸೇರಿದಂತೆ ಹಲವು ಪ್ರಮುಖ ಸಚಿವರು ಭಾಗಿಯಾಗಲಿದ್ದು ಲಾಕ್ ಡೌನ್ ವಿನಾಯತಿ ಮತ್ತು ಮುಂದಿನ ಪರಿಸ್ಥಿತಿಗಳ ನಿರ್ವಹಣೆ ಬಗ್ಗೆ ಚರ್ಚೆ ಮಾಡಲಿದ್ದಾರೆ.

    ಈಗಾಗಲೇ ನಾಲ್ಕನೇ ಹಂತದ ಲಾಕ್ಡೌನ್ ಗೆ ಬಹುತೇಕ ನಿಯಮಗಳು ಸಿದ್ಧವಾಗಿದ್ದು ಇಂದು ರಾಜ್ಯ ಸರ್ಕಾರಗಳ ವರದಿ ಆಧರಿಸಿ ಕೆಲ ಬದಲಾವಣೆಗಳು ಹಾಗೂ ಕೇಂದ್ರ ಸಚಿವರ ಶಿಫಾರಸುಗಳನ್ನು ಪರಿಗಣಿಸುವ ಸಾಧ್ಯತೆ ಇದೆ. ಬಹುತೇಕ ಇಂದು ಮಾರ್ಗಸೂಚಿಗಳ ಪಟ್ಟಿ ಅಂತಿಮ ಸ್ವರೂಪ ಪಡೆಯಲಿದ್ದು ಇಂದು ಸಂಜೆಯೇ ಅಥವಾ ನಾಳೆ ಬಿಡುಗಡೆಯಾಗಬಹುದು ಮೂಲಗಳಿಂದ ಮಾಹಿತಿ ಸಿಕ್ಕಿದೆ.

  • ಆಟೋ, ಟ್ಯಾಕ್ಸಿ ಚಾಲಕರಿಗೆ 5 ಸಾವಿರ ರೂ. ಘೋಷಣೆ – ಯಾವೆಲ್ಲಾ ಚಾಲಕರು ಅರ್ಹರು?

    ಆಟೋ, ಟ್ಯಾಕ್ಸಿ ಚಾಲಕರಿಗೆ 5 ಸಾವಿರ ರೂ. ಘೋಷಣೆ – ಯಾವೆಲ್ಲಾ ಚಾಲಕರು ಅರ್ಹರು?

    ಬೆಂಗಳೂರು: ಕೊರೊನಾ ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ರಾಜ್ಯ ಸರ್ಕಾರದಿಂದ 5 ಸಾವಿರ ರೂ. ಪರಿಹಾರ ನೀಡುವುದಾಗಿ ಸಿಎಂ ಘೋಷಣೆ ಮಾಡಿದ್ದಾರೆ.

    ಆಟೋ ಮತ್ತು ಟ್ಯಾಕ್ಸಿಯನ್ನು ಓಡಿಸಿಕೊಂಡು ಜೀವನ ಮಾಡುತ್ತಿದ್ದ ಚಾಲಕರು ಈ ಲಾಕ್‍ಡೌನ್ ಸಮಯದಲ್ಲಿ ಬಹಳ ಕಷ್ಟ ಅನುಭವಿಸಿದ್ದಾರೆ. ಹೀಗಾಗಿ ಅವರಿಗಾಗಿ ಸರ್ಕಾರ ಸಿಎಂ ಪರಿಹಾರ ನಿಧಿಯಿಂದ ಹಣ ಕೊಡಲು ತೀರ್ಮಾನ ಮಾಡಿದೆ. ಈ ಹಣವನ್ನು ವಿರತಣೆ ಮಾಡಲು ಸಾರಿಗೆ ಇಲಾಖೆಯ ಅಯುಕ್ತರು ಸರ್ಕಾರದ ನಡವಳಿಕೆಗಳ ಪಟ್ಟಿಯನ್ನು ತಯಾರಿಸಿದ್ದು ರಾಜ್ಯಪಾಲರ ಸಹಿಯೊಂದೇ ಬಾಕಿಯಿದೆ. ಈ ನಡವಳಿ ಪ್ರಕಾರ ಯಾವೆಲ್ಲಾ ಚಾಲಕರಿಗೆ ಈ ಹಣ ಸಿಗುತ್ತದೆ ಎಂಬುದರ ಮಾಹಿತಿ ಇಲ್ಲಿದೆ.

    ಯಾವೆಲ್ಲಾ ಚಾಲಕರು ಅರ್ಹರರು?
    1. ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲನೆ ಮಾಡಲು ಚಾಲನಾ ಅನುಜ್ಞಾ ಪತ್ರ ಮತ್ತು ಬ್ಯಾಡ್ಜ್ ಹೊಂದಿರುವವರು ಮಾತ್ರ ಈ ಯೋಜನೆಯ ಫಲಾನುಭವಿಗಳಾಗಿರುತ್ತಾರೆ.
    2. ಫಲಾನುಭವಿಗಳು ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಾಗಿದ್ದು, ದಿನಾಂಕ: 01-03-2020 ಕ್ಕೆ ಚಾಲ್ತಿಯಲ್ಲಿರುವ ಚಾಲನಾ ಅನುಜ್ಞಾ ಪತ್ರದ ವಿವರಗಳನ್ನು ಪೋರ್ಟಲ್ ನಲ್ಲಿ ನಮೂದಿಸಬೇಕಾಗಿರುತ್ತದೆ.
    3. ಚಾಲಕರ ಆಧಾರ್ ಕಾರ್ಡ್ ವಿವರಗಳನ್ನು ಪೋರ್ಟಲ್‍ನಲ್ಲಿ ನಮೂದಿಸಬೇಕಾಗಿರುತ್ತದೆ.


    4. ಚಾಲಕರ ಬ್ಯಾಂಕ್ ಅಕೌಂಟ್ ವಿವರ, ಸಂಬಂಧಪಟ್ಟ ಬ್ಯಾಂಕಿನ ಐಎಫ್‍ಎಸ್‍ಸಿ ಕೋಡ್, ಎಂಐಸಿಆರ್ ಕೋಡ್‍ಗಳ ವಿವರಗಳನ್ನು ಪೋರ್ಟಲ್‍ನಲ್ಲಿ ನಮೂದಿಸಬೇಕಾಗಿರುತ್ತದೆ.
    5. ಚಾಲಕರು ಚಾಲನೆ ಮಾಡುವ ವಾಹನದ ನೋಂದಣಿ ಸಂಖ್ಯೆ ವಿವರಗಳನ್ನು ಪೋರ್ಟಲ್‍ನಲ್ಲಿ ನಮೂದಿಸಬೇಕಾಗಿರುತ್ತದೆ. ವಾಹನ್-4 ತಂತ್ರಾಂಶದಿಂದ ವಿವರಗಳನ್ನು ನೇರವಾಗಿ ಪಡೆಯುವುದು.
    6. ಚಾಲನಾ ಅನುಜ್ಞಾ ಪತ್ರದ ವಿವರಗಳನ್ನು ಸಾರಿಗೆ ಇಲಾಖೆಯ ಸಾರಥಿ-4 ತಂತ್ರಾಂಶದಿಂದ ನೇರವಾಗಿ ಪಡೆದುಕೊಳ್ಳಬೇಕು.


    7. ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರು ತಮ್ಮ ದೈನಂದಿನ ಉದ್ಯೋಗವನ್ನು ನಡೆಸಲಾಗದ ಆದಾಯ ಕಳೆದುಕೊಂಡಿರುವ ಬಗ್ಗೆ ಸ್ವಯಂ ಘೋಷಣೆ ಮಾಡಬೇಕು.
    8. ಈ ಯೋಜನೆಯನ್ನು ಜಾರಿಗೊಳಿಸಲು ಅರ್ಹ ಚಾಲಕರು ತಮ್ಮ ಅರ್ಜಿಗಳನ್ನು ‘ಸೇವಾಸಿಂಧು’ವಿನ ಮುಖಾಂತರ ಸಲ್ಲಿಸಲು ವ್ಯವಸ್ಥೆ ಮಾಡಬೇಕಾಗಿರುತ್ತದೆ. ಈ ಬಗ್ಗೆ ‘ಸೇವಾಸಿಂಧು’ ವಿನಲ್ಲಿ ಸೂಕ್ತ ವ್ಯವಸ್ಥೆ ಮಾಡುವಂತೆ ಇ-ಆಡಳಿತ ಇಲಾಖೆಯನ್ನು ಕೋರಬಹುದಾಗಿದೆ.
    9. ಅರ್ಹ ಫಲಾನುಭವಿಗಳಿಗೆ ಆಧಾರ್ ಸಂಖ್ಯೆಯ ಮೂಲಕ ಡಿಬಿಟಿ ಮಾಡಬೇಕು ಅಥವಾ ಆನ್‍ಲೈನ್ ಮೂಲಕ ಬ್ಯಾಂಕಿಗೆ ಜಮಾ ಮಾಡಬೇಕು.
    10. ಫಲಾನುಭವಿಗಳು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಲು ಅನುವಾಗುವಂತೆ ಅರ್ಹ/ಅನರ್ಹ ಅರ್ಜಿದಾರರ ಪಟ್ಟಿಯನ್ನು ತಂತ್ರಾಂಶದಲ್ಲಿ ಅಳವಡಿಸಿಕೊಳ್ಳಬೇಕು.

    ಈ ರೀತಿಯ ನಡವಳಿಕೆಗಳನ್ನು ಸಾರಿಗೆ ಆಯುಕ್ತರು ಸರ್ಕಾರಕ್ಕೆ ತಯಾರಿಸಿ ಕೊಟ್ಟಿದ್ದು, ಇಂದು ಅಥವಾ ನಾಳೆ ಸರ್ಕಾರದ ಆದೇಶ ಪ್ರಕಟವಾಗುವ ಸಾದ್ಯತೆ ಇದೆ.

  • ಮದ್ಯ ಹೋಂ ಡೆಲಿವರಿಗೆ ಸುಪ್ರೀಂ ಸಲಹೆ

    ಮದ್ಯ ಹೋಂ ಡೆಲಿವರಿಗೆ ಸುಪ್ರೀಂ ಸಲಹೆ

    – ಮದ್ಯ ಮಾರಾಟಕ್ಕೆ ತಡೆ ನೀಡಲು ಸಾಧ್ಯವೇ ಇಲ್ಲ: ಸುಪ್ರೀಂಕೋರ್ಟ್

    ನವದೆಹಲಿ: ದೇಶಾದ್ಯಂತದ ಮದ್ಯದಂಗಡಿಗಳಲ್ಲಿ ಜನಸಂದಣಿ ಕಡಿಮೆಗೊಳಿಸಲು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಮಯವನ್ನು ಜಾರಿಗೊಳಿಸಲು ಹೋಮ್ ಡೆಲಿವರಿಯನ್ನು ಅಳವಡಿಸಿಕೊಳ್ಳಲು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸಲಹೆ ನೀಡಿದೆ.

    ಕೊರೊನಾ ಲಾಕ್‍ಡೌನ್ ಸಮಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದನ್ನು ಪ್ರಶ್ನಿಸಿ ಕೆಲ ರಾಜ್ಯಗಳು ಸುಪ್ರೀಂ ಕೋರ್ಟಿಗೆ ಪಿಐಎಲ್ (ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ) ಸಲ್ಲಿಸಿದ್ದವು. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಸಂಜಯ್ ಕಿಶನ್ ಕೌಲ್ ಮತ್ತು ಬಿ.ಆರ್.ಗವಾಯಿ ಅವರ ನೇತೃತ್ವದ ನ್ಯಾಯ ಪೀಠವು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಕರಣವನ್ನು ಆಲಿಸಿದೆ. ಇದನ್ನೂ ಓದಿ: ಮದ್ಯ ಡೆಲಿವರಿಗೆ ಝೊಮ್ಯಾಟೊ ಪ್ಲ್ಯಾನ್

    “ಮದ್ಯದಂಗಡಿ ಬಂದ್ ಮಾಡುವ ಕುರಿತು ನಾವು ಯಾವುದೇ ಆದೇಶ ನೀಡುವುದಿಲ್ಲ. ಆದರೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ರಾಜ್ಯ ಸರ್ಕಾರಗಳು ಮದ್ಯವನ್ನು ಹೋಮ್ ಡೆಲಿವರಿ ಮೂಲಕ ಗ್ರಾಹಕರಿಗೆ ತಲುಪಿಸಬಹುದು” ಎಂದು ನ್ಯಾಯ ಪೀಠವು ಅಭಿಪ್ರಾಯಪಟ್ಟಿದೆ.

    “ಮದ್ಯವನ್ನು ಹೋಮ್ ಡೆಲಿವರಿ ಮಾಡುವ ಕುರಿತು ಚರ್ಚೆ ನಡೆಯುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ನಾವು ಏನು ಮಾಡಬೇಕೆಂದು ನೀವು ಬಯಸುತ್ತೀರಿ” ಎಂದು ನ್ಯಾಯಮೂರ್ತಿ ಎಸ್.ಕೆ.ಕೌಲ್ ಅರ್ಜಿರಾರರ ಪರ ವಕೀಲ ದೀಪಕ್ ಸಾಯಿ ಅವರಿಗೆ ಪ್ರಶ್ನಿಸಿದರು.

    “ಮದ್ಯ ಮಾರಾಟದಿಂದಾಗಿ ಸಾಮಾನ್ಯ ಜನರ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರಬಾರದು ಎಂದು ಬಯಸುತ್ತೇನೆ. ಗೃಹ ಸಚಿವಾಲಯವು ಮದ್ಯ ಮಾರಾಟದ ಬಗ್ಗೆ ರಾಜ್ಯಗಳಿಗೆ ಸ್ಪಷ್ಟೀಕರಣವನ್ನು ನೀಡಬೇಕು” ಎಂದು ವಕೀಲ ದೀಪಕ್ ಸಾಯಿ ವಾದಿಸಿದರು.

    ಆದರೆ ಅರ್ಜಿಯನ್ನು ವಜಾಗೊಳಿಸಿದ ನ್ಯಾಯ ಪೀಠವು  ಮದ್ಯ ಮಾರಾಟಕ್ಕೆ ತಡೆ ನೀಡಲು ಸಾಧ್ಯವೇ ಇಲ್ಲ. ಹೀಗಾಗಿ ರಾಜ್ಯ ಸರ್ಕಾರಗಳು ಮದ್ಯದಂಗಡಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಹಾಗೂ ಜನಸಂದಣಿ ಕಡಿಮೆಗೊಳಿಸಲು ಹೋಮ್ ಡೆಲಿವರಿ ಅಳವಡಿಸಿಕೊಳ್ಳಬಹುದು ಎಂದು ಸಲಹೆ ನೀಡಿದೆ.

    ಆಹಾರ ಪದಾರ್ಥ ಡೆಲಿವರಿ ಮಾಡುತ್ತಿದ್ದ ಝೊಮ್ಯಾಟೊ ಕಂಪನಿ ಲಾಕ್‍ಡೌನ್ ಹಿನ್ನೆಲೆ ದಿನಸಿ ಪದಾರ್ಥಗಳನ್ನೂ ಡೆಲಿವರಿ ಮಾಡುತ್ತಿದೆ. ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದು, ಮದ್ಯವನ್ನೂ ಡೆಲಿವರಿ ಮಾಡಲು ನಿರ್ಧರಿಸಿದೆ. ಹೀಗಾಗಿ ಮದ್ಯವನ್ನು ಹೋಮ್ ಡಿಲೆವರಿ ಮೂಲಕ ಗ್ರಾಹಕರಿಗೆ ತಲುಪಿಸುವ ಚಿಂತನೆ ನಡೆಸಿದೆ. ಇದೇ ಕಾರಣಕ್ಕೆ ಸುಪ್ರೀಂ ಕೋರ್ಟ್ ಮದ್ಯವನ್ನು ಹೋಮ್ ಡಿಲೆವರಿ ಮೂಲಕ ಮಾರಬಹುದು ಎಂದು ಸಲಹೆ ನೀಡಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

  • ರೈತರನ್ನು ತಡೆದ ಪೊಲೀಸರ ವಿರುದ್ಧ ರೈತ ಸಂಘ ಆಕ್ರೋಶ

    ರೈತರನ್ನು ತಡೆದ ಪೊಲೀಸರ ವಿರುದ್ಧ ರೈತ ಸಂಘ ಆಕ್ರೋಶ

    ಮಡಿಕೇರಿ: ಕೊರೊನಾ ನಿಯಂತ್ರಿಸಲು ಸರ್ಕಾರ ಲಾಕ್‍ಡೌನ್ ಘೋಷಿಸಿದೆ. ಆದರೆ ದೇಶದಲ್ಲಿ ಆಹಾರ ಸಮಸ್ಯೆ ಎದುರಾಗಬಾರದು ಎಂಬ ಕಾರಣಕ್ಕೆ ರೈತರಿಗೆ ಕೃಷಿ ಮಾಡಲು ವಿನಾಯಿತಿ ನೀಡಲಾಗಿದೆ. ಆದರೆ ಕೆಲವೆಡೆ ಪೊಲೀಸರು ರೈತರು ಬೆಳೆದ ತರಕಾರಿಯನ್ನು ಮಾರುಕಟ್ಟೆಗೆ ತೆಗೆದುಕೊಂಡು ಹೋಗಲು ಬಿಡದೆ ಸಮಸ್ಯೆ ಮಾಡುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿವೆ.

    ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಆನೆಚೌಕೂರಿನ ಚೆಕ್‍ಪೋಸ್ಟ್ ಇಂತಹ ಘಟನೆ ನಡೆದಿದ್ದು, ಚೆಕ್‍ಪೋಸ್ಟ್ ನಲ್ಲಿದ್ದ ಎಎಸ್‍ಐ ಒಬ್ಬರು ರೈತರು ಬೆಳೆ ಸಾಗಿಸಲು ಬಿಡದೆ ತಡೆ ಹಿಡಿದಿದ್ದಾರೆ. ರೈತರು ಮೊದಲೇ ಪಾಸ್ ಪಡೆದು ಬೆಳೆಯನ್ನು ಸಾಗಾಟ ಮಾಡುತ್ತಿದ್ದರು. ಪಾಸ್ ತಮ್ಮ ಬಳಿ ಪಾಸ್ ಇರುವುದನ್ನು ತೋರಿಸಿದರು ಕೂಡ ಸಮಸ್ಯೆ ಮಾಡಿದ್ದಾರೆ.

    ಪೊಲೀಸರ ಕ್ರಮದಿಂದ ಬೇಸತ್ತ ರೈತರು ರಾಜ್ಯ ರೈತ ಸಂಘದ ಮುಖಂಡರ ಜೊತೆ ಸೇರಿ ಸ್ಥಳದಲ್ಲೇ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರು ನಿಯಮಗಳ ಅನುಸಾರ ಹೋಗಲು ಅನುಮತಿ ಇದ್ದರೂ ಬಿಡದ ಪೊಲೀಸರನ್ನು ಸ್ಥಳದಲ್ಲೇ ಪ್ರಶ್ನೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು ರೈತರಿಂದ ಮಾಹಿತಿ ಪಡೆದರು. ಆ ಬಳಿಕ ರೈತರನ್ನು ಸಮಾಧಾನ ಪಡಿಸಿ ಮತ್ತೊಮ್ಮೆ ಇಂತಹ ತಪ್ಪು ಆಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿ ರೈತರನ್ನು ಕಳುಹಿಸಿದ್ದಾರೆ.