ನವದೆಹಲಿ: ಮೈಸೂರು ರಾಜ ಮನೆತನಕ್ಕೆ 3,400 ಕೋಟಿ ರೂ. ಟಿಡಿಆರ್ (TDR) ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ಗೆ (Supreme Court) ಮತ್ತೊಂದು ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ (State Government) ಸಿದ್ಧತೆ ಮಾಡಿಕೊಂಡಿದ್ದು, ಸದ್ಯ ಕೋರ್ಟ್‌ನಲ್ಲಿ ಠೇವಣಿ ಇಟ್ಟಿರುವ ಟಿಡಿಆರ್ ಅನ್ನು ರಾಜಮನೆತನಕ್ಕೆ ವರ್ಗಾಯಿಸದಂತೆ ಮನವಿ ಮಾಡುವ ಸಾಧ್ಯತೆಯಿದೆ.
ಬೆಂಗಳೂರಿನ ಬಳ್ಳಾರಿ ಮತ್ತು ಜಯಮಹಲ್ ರಸ್ತೆಗಳ ಅಗಲೀಕರಣಕ್ಕಾಗಿ ಬೆಂಗಳೂರು ಅರಮನೆ ಮೈದಾನದ 15 ಎಕರೆಗಳಿಗೂ ಅಧಿಕ ಭೂಮಿ ಸ್ವಾಧೀನಪಡಿಸಿಕೊಂಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ 3,400 ಕೋಟಿ ರೂ.ಗಳ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕುಗಳ (ಟಿಡಿಆರ್) ಪ್ರಮಾಣಪತ್ರಗಳನ್ನು ತನ್ನಲ್ಲಿ ಠೇವಣಿ ಇಡುವಂತೆ ಕೋರ್ಟ್ ಸೂಚನೆ ನೀಡಿತ್ತು.ಇದನ್ನೂ ಓದಿ: ಮಾರಿಷಸ್‌ನಲ್ಲಿ ಹೊಸ ಸಂಸತ್ ನಿರ್ಮಾಣಕ್ಕೆ ಭಾರತದ ಸಹಕಾರ: ಪ್ರಧಾನಿ ಮೋದಿ
ಕಳೆದ ವಿಚಾರಣೆಯಲ್ಲಿ ರಿಜಿಸ್ಟಾರ್ ಬಳಿ ಟಿಡಿಆರ್ ಠೇವಣಿ ಇಡಲು ಪೀಠ ಸೂಚಿಸಿತ್ತು. ಈ ವೇಳೆ ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ್ದ ವಕೀಲ ಕಪಿಲ್ ಸಿಬಲ್, ಇದನ್ನು ರಾಜಮನೆತನಕ್ಕೆ ನೀಡುವುದಿಲ್ಲ ಎನ್ನುವ ಬಗ್ಗೆ ಖಾತ್ರಿ ಕೇಳಿದ್ದರು. ಆದರೆ ಇದಕ್ಕೆ ನಿರಾಕರಿಸಿದ್ದ ಕೋರ್ಟ್ ಇದನ್ನು ನೀವು ನಮಗೆ ಹೇಳಿವಂತಿಲ್ಲ ಎಂದು ಹೇಳಿತ್ತು.
ಸದ್ಯ ನ್ಯಾಯಾಂಗ ನಿಂದನೆಯಿಂದ ಪಾರಾಗಲು ಮಾ.7 ರಂದು ಟಿಡಿಆರ್ ಅನ್ನು ಠೇವಣಿ ಇಟ್ಟಿರುವ ಸರ್ಕಾರ ಅದನ್ನು ಕೋರ್ಟ್ ಮೂಲಕವೇ ರಾಜಮನೆತನ ಪಡೆಯಬಹುದು ಎನ್ನುವ ಭೀತಿಯಲ್ಲಿದೆ. ಹೀಗಾಗಿ ರಾಜಮನೆತನಕ್ಕೆ ಟಿಡಿಆರ್ ವರ್ಗಾಯಿಸದಂತೆ ಮನವಿ ಮಾಡಿ, ಪ್ರತ್ಯೇಕ ಅರ್ಜಿಯೊಂದನ್ನು ಸೋಮವಾರ ಸಲ್ಲಿಕೆ ಮಾಡಲು ನಿರ್ಧರಿಸಿದೆ ಎಂದು ಮೂಲಗಳು ಹೇಳಿವೆ.ಇದನ್ನೂ ಓದಿ: ನಾರಿಮಣಿಯರ ಮನಗೆದ್ದ ಬ್ಯೂಟಿಫುಲ್ ಫ್ರಾಕ್‌ಗಳಿವು
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬಸ್, ಮೆಟ್ರೋ ದರ ಏರಿಕೆ ಬಳಿಕ ಇದೀಗ ಆಟೋ ಮೀಟರ್ ದರ ಏರಿಕೆಗೆ ಮುಹೂರ್ತ ಫಿಕ್ಸ್ ಆಗಿದೆ. ಜೊತೆಗೆ ಬಜೆಟ್ ನಂತರ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದೆ.
ರಾಜ್ಯದ ಇತ್ತೀಚಿಗಷ್ಟೇ ಬಸ್ ಹಾಗೂ ಬೆಂಗಳೂರಿನಲ್ಲಿ ಮೆಟ್ರೋ ದರ ಏರಿಕೆಯಾಗಿತ್ತು. ಇದೀಗ ಶೀಘ್ರದಲ್ಲೇ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದೆ. ಈ ಕುರಿತು ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ಅವರು ದರ ಏರಿಕೆ ಮಾಡುವುದಾಗಿ ಸುಳಿವು ಕೊಟ್ಟಿದ್ದಾರೆ. ಬಜೆಟ್ ಬಳಿಕ ಹಾಲಿನ ದರ ಏರಿಕೆಯಾಗಲಿದ್ದು, ಸದ್ಯ ಒಕ್ಕೂಟಗಳ ಬೇಡಿಕೆ ಪ್ರಕಾರ ಕೆಎಂಎಫ್ ಸರ್ಕಾರಕ್ಕೆ 5 ರೂ. ಏರಿಕೆ ಮಾಡಲು ಪ್ರಸ್ತಾವನೆ ಸಲ್ಲಿಸಿದೆ.ಇದನ್ನೂ ಓದಿ: ಮಹಾ ಅಸೆಂಬ್ಲಿಯಿಂದ ಅಬು ಅಜ್ಮಿ ಸಸ್ಪೆಂಡ್ – ನಮ್ಮಲ್ಲಿಗೆ ಕಳಿಸಿ ಟ್ರೀಟ್ಮೆಂಟ್ ಕೊಡ್ತೀವೆಂದ ಯೋಗಿ
ಇನ್ನೊಂದು ಕಡೆ ರೈತರು 10 ರೂ. ಏರಿಕೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಒಕ್ಕೂಟ ಹಾಗೂ ರೈತರ ಮನವಿ ಪರಿಶೀಲಿಸಿ, ಸರ್ಕಾರ ಏರಿಕೆ ದರ ನಿರ್ಧಾರ ಮಾಡಲಿದೆ. ಏಪ್ರಿಲ್ ಮೊದಲ ವಾರದಲ್ಲಿ ಕೆಎಂಎಫ್ ಜೊತೆ ಸಿಎಂ ಸಭೆ ನಡೆಸುವ ಸಾಧ್ಯತೆಯಿದೆ.
ಹಾಲಿನ ದರ ಲೀಟರ್‌ಗೆ ಎಷ್ಟಿದೆ? ಎಷ್ಟಾಗಬಹುದು?
ಹಾಲು – ಎಷ್ಟಿದೆ? ಎಷ್ಟಾಗಬಹುದು?
ನೀಲಿ ಪ್ಯಾಕೆಟ್ – 44ರೂ 46 ರಿಂದ 48 ರೂ.
ಆರೆಂಜ್ ಪ್ಯಾಕೆಟ್ – 48 ರೂ. 50 ರಿಂದ 52 ರೂ.
ಶುಭಂ ಪ್ಯಾಕೆಟ್ – 50 ರೂ 52 ರಿಂದ 54 ರೂ.
ಸಮೃದ್ಧಿ ಪ್ಯಾಕೆಟ್ – 53 ರೂ. 55 ರಿಂದ 58 ರೂ.
ಬಿಎಂಟಿಸಿ, ಮೆಟ್ರೋ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಆಟೋ ದರವು ಜಾಸ್ತಿ ಆಗುವ ನಿರೀಕ್ಷೆಯಿದ್ದು, 1 ಕಿ.ಮೀಗೆ 5 ರೂ. 2 ಕಿಮೀಗೆ 10 ರೂ. ಏರಿಕೆ ಮಾಡಲು ಆಟೋ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿವೆ. ಇದೇ 12 ರಂದು ಇನ್ ಫೆಂಟ್ರಿ ರಸ್ತೆಯಲ್ಲಿರುವ ಸಂಚಾರ ಪೂರ್ವ ವಿಭಾಗದ ಡಿಸಿಪಿ ಕಚೇರಿಯಲ್ಲಿ ಸಭೆ ನಡೆಯಲಿದ್ದು, ದರ ಏರಿಕೆ ಆಗುವ ಎಲ್ಲಾ ಲಕ್ಷಣಗಳು ಕಾಣುತ್ತಿದೆ. ಸದ್ಯ ಬೆಂಗಳೂರಲ್ಲಿ ಕನಿಷ್ಠ ಆಟೋ ಮೀಟರ್ ದರ ಎರಡು ಕಿ.ಮೀ ಗೆ 30 ರೂ. ಇದೆ. ಇದೀಗ ಕನಿಷ್ಠ ದರವನ್ನು 40 ರೂ. ಏರಿಕೆ ಮಾಡುವಂತೆ ಆಟೋ ಸಂಘಗಳು ಮನವಿ ಮಾಡಿವೆ.ಇದನ್ನೂ ಓದಿ: ವರ್ತಿಕಾ ಕಟಿಯಾರ್ ದೂರು ನೀಡಿದ ಬೆನ್ನಲ್ಲೇ ಐಎಸ್‌ಡಿಯಿಂದ ಡಿ.ರೂಪಾ ವರ್ಗಾವಣೆ
ಬೆಳಗಾವಿ: ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಆಗಲಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಹೇಳಿದರು.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಗಾದಿಗೆ ಪೈಪೋಟಿ ನಡೆಯುತ್ತಿದ್ದು, ದಿನೇದಿನೇ ಅದು ದೊಡ್ಡದಾಗುತ್ತಿದೆ. ಸಿದ್ದರಾಮಯ್ಯರ ಪರ, ಡಿಕೆ ಶಿವಕುಮಾರ್ ಪರ-ವಿರುದ್ಧ ಹೇಳಿಕೆಗಳನ್ನು ಶಾಸಕರು ಕೊಡುತ್ತಿದ್ದಾರೆ. ನಿಶ್ಚಿತವಾಗಿ ಬರುವ ದಿನಗಳಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯುವುದರಲ್ಲಿ ಸಂದೇಹವಿಲ್ಲ ಎಂದು ತಿಳಿಸಿದರು.ಇದನ್ನೂ ಓದಿ: ಓಲಾದ 1 ಸಾವಿರ ಉದ್ಯೋಗಿಗಳು ಮನೆಗೆ
ಕಾಂಗ್ರೆಸ್ಸಿನ ಮಾಜಿ ಸಿಎಂ ವೀರಪ್ಪ ಮೊಯ್ಲಿ ಹಾಗೂ ಕಾಂಗ್ರೆಸ್ ಶಾಸಕರು, ಡಿಕೆಶಿ ಮುಖ್ಯಮಂತ್ರಿ ಆಗುವ ಕುರಿತು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕಳೆದ ಬೆಳಗಾವಿ ಅಧಿವೇಶನದಲ್ಲಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಗುರುಗಳು ಹೇಳಿದ್ದನ್ನು ನೆನಪು ಮಾಡಿಕೊಂಡಿದ್ದರು. ಅಧಿಕಾರ ಸಿಗದೇ ಇದ್ದಲ್ಲಿ ಅದನ್ನು ಒದ್ದು ಕಿತ್ತುಕೊಳ್ಳಬೇಕೆಂದು ಡಿಕೆಶಿಗೆ ಅವರ ಗುರುಗಳು ಹೇಳಿದ್ದರಂತೆ ಎಂದು ಗಮನ ಸೆಳೆದರು.
ಮತ್ತೊಂದೆಡೆ ಮೊನ್ನೆ ಡಿ.ಕೆ.ಶಿವಕುಮಾರ್ ಅವರು ನಟ್ ಮತ್ತು ಬೋಲ್ಟ್ ಟೈಟ್ ಮಾಡುವ ಅಹಂನಿಂದ ಕೂಡಿದ ಹೇಳಿಕೆ ಕೊಟ್ಟಿದ್ದಾರೆ. ಶಿವಕುಮಾರ್ ಅವರ ಈ ಹೇಳಿಕೆ ಚಿತ್ರರಂಗದ ಬಗ್ಗೆ ಹೇಳಿದ್ದಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಅಥವಾ ಸರ್ಕಾರದಲ್ಲಿ ಯಾರು ಶಿವಕುಮಾರ್ ಅವರಿಗೆ ಸಿಎಂ ಆಗಲು ಅವಕಾಶ ನೀಡುತ್ತಿಲ್ಲವೋ? ಅವರಿಗೆ ಒಂದು ರೀತಿಯ ಎಚ್ಚರಿಕೆಯ ಮಾತನ್ನು ಹೇಳಿದ್ದಾರೆ ಎಂಬುದು ಚರ್ಚೆಯಲ್ಲಿದೆ ಎಂದು ವಿವರಿಸಿದರು.ಇದನ್ನೂ ಓದಿ: ಡಿಕೆ ಸಾಹೇಬ್ರು ಹೇಳಿರೋದ್ರಲ್ಲಿ ತಪ್ಪೇನಿಲ್ಲ, ಎಲ್ಲರೂ ಬರಲಿ ಅನ್ನೋದಷ್ಟೇ ಅವರ ಉದ್ದೇಶ – ಸಾಧು ಕೋಕಿಲ
ಬೆಂಗಳೂರು: ರಾಜ್ಯದಲ್ಲಿ ದಿನೇದಿನೇ ಹಕ್ಕಿಜ್ವರದ (Bird Flu) ಭೀತಿ ಹೆಚ್ಚಾಗುತ್ತಲೇ ಇದೆ. ಇದೀಗ ಹಕ್ಕಿಜ್ವರ ನಿಯಂತ್ರಣಕ್ಕಾಗಿ ಪಶುಸಂಗೋಪನೆ ಇಲಾಖೆ (Animal husbandry) ಮಾರ್ಗಸೂಚಿ ಬಿಡುಗಡೆಗೊಳಿಸಿದೆ.
ಕೇಂದ್ರ ಸರ್ಕಾರ ಗೈಡ್‌ಲೈನ್ಸ್ ಬಿಡುಗಡೆಗೊಳಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರವೂ ಇಂದು ಗೈಡ್‌ಲೈನ್ಸ್ ಬಿಡುಗಡೆ ಮಾಡಿದೆ. ಹಕ್ಕಿಜ್ವರ ಹೆಚ್ಚಾಗುತ್ತಿರುವ ಹೊತ್ತಲ್ಲಿ ಕೋಳಿ ಸೇವನೆ ಎಷ್ಟು ಸುರಕ್ಷಿತ? ಹಕ್ಕಿಜ್ವರದ ಭೀತಿ ಮಧ್ಯೆಯೂ ಕೋಳಿ ಸೇವನೆಗೆ ಏನೆಲ್ಲಾ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರಕಟಿಸಿದೆ. ಇದನ್ನೂ ಓದಿ: ಗ್ಯಾರಂಟಿಗಳಿಂದ ಕಾಂಗ್ರೆಸ್ ಭಿಕ್ಷಾಪಾತ್ರೆ ಹಿಡಿಯುವ ಹಂತಕ್ಕೆ ಬಂದಿದೆ: ಆರ್. ಅಶೋಕ್
ಗೈಡ್‌ಲೈನ್‌ನಲ್ಲಿ ಏನಿದೆ? ಕೋಳಿ ಸೇವನೆಗೆ ಮಾರ್ಗಸೂಚಿ:
1. 70 ಡಿಗ್ರಿ ಸೆಂಟಿಗ್ರೇಡ್ ಅಧಿಕ ಉಷ್ಣಾಂಶದಲ್ಲಿ ಕನಿಷ್ಠ 30 ನಿಮಿಷ ಕೋಳಿ ಬೇಯಿಸಿ ಕೋಳಿ ಮಾಂಸ ಮತ್ತು ಮೊಟ್ಟೆ ಸೇವಿಸಬಹುದು.
2. ಕೋಳಿ ಮಾಂಸವನ್ನ ಅಡುಗೆಗೆ ತಯಾರು ಮಾಡುವವರು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು.
3. ಅಡುಗೆಗಾಗಿ ಕೋಳಿಮಾಂಸವನ್ನ ತಯಾರು ಮಾಡಿದ ಬಳಿಕ ನಂಜುನಾಶಕದಿಂದ ಕೈಗಳನ್ನ ಶುಚಿಗೊಳಿಸಿಕೊಳ್ಳಬೇಕು.
4. ಹಸಿ ಕೋಳಿಮಾಂಸ, ಅದರ ದ್ರವಗಳು ಅಥವಾ ಬೇಯಿಸಿದ ಮೊಟ್ಟೆಯನ್ನು, ಬೇಯಿಸದೇ ಉಪಯೋಗಿಸುವ ಆಹಾರ ಪದಾರ್ಥಗಳು ಸಂಪರ್ಕಕ್ಕೆ ಬಾರದಂತೆ ಎಚ್ಚರಿಕೆ ವಹಿಸಬೇಕು .
5. ಬೇಯಿಸದಿರುವ, ಅರೆಬೆಂದ ಮೊಟ್ಟೆಯನ್ನ ತಿನ್ನಬಾರದು.
6. ಅಧಿಕ ಉಷ್ಣಾಂಶದ ವಾತಾವರಣದಲ್ಲಿ ವೈರಾಣು ಹೆಚ್ಚಿನ ಕಾಲ ಬದುಕುಳಿಯುವುದಿಲ್ಲ.
ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮ:
1. ಸಾರ್ವಜನಿಕರು ಅನಗತ್ಯವಾಗಿ ಕೋಳಿ ಫಾರಂಗೆ ಭೇಟಿ ನೀಡಬಾರದು.
2. ಕೋಳಿ ಫಾರಂನಲ್ಲಿ ಕೆಲಸ ನಿರ್ವಹಿಸುವ ಕೆಲಸಗಾರರು ತಮ್ಮ ಬಟ್ಟೆ, ಶೂ ಹಾಗೂ ಕೈ, ಕಾಲುಗಳಿಗೆ ನಂಜುನಾಶಕ ದ್ರಾವಣ ಸಿಂಪಡಿಸಬೇಕು.
3. ಕೋಳಿ ಸಾಕಾಣಿಕೆಗೆ ಬೇಕಾಗುವ ಸಲಕರಣೆಗಳನ್ನ ಬೇರೆ ಕೋಳಿ ಫಾರಂನಿಂದ ಪಡೆಯಬೇಕಾದರೆ ಸ್ಯಾನಿಟೈಸೆಷನ್ ಮಾಡಬೇಕು ಮತ್ತು ನಂಜುನಾಶಕವನ್ನ ಅಳವಡಿಸಬೇಕು.
4. ಕೋಳಿ ಪಂಜರಗಳನ್ನ ದಿನನಿತ್ಯ ಶುಚಿ ಮಾಡುವುದು. ಆಹಾರ ಮತ್ತು ನೀರನ್ನ ಪ್ರತಿದಿನ ಬದಲಾಯಿಸುವುದು.
5. ಕೋಳಿ ಫಾರಂನಲ್ಲಿ ಬೇರೆ ಹಕ್ಕಿಗಳು ಕೋಳಿಗಳ ಸಂಪರ್ಕಕ್ಕೆ ಬಾರದಂತೆ ಎಚ್ಚರಿಕೆ ವಹಿಸಬೇಕು. ಇದನ್ನೂ ಓದಿ: ಗ್ಯಾರಂಟಿ ಎಫೆಕ್ಟ್ – ರಸ್ತೆ ಗುಂಡಿ ಮುಚ್ಚೋಕು ಸರ್ಕಾರದ ಬಳಿ ದುಡ್ಡಿಲ್ಲ: ಹೆಚ್.ಟಿ ಮಂಜು
ನವದೆಹಲಿ: ದಿಕ್ಕುತಪ್ಪಿಸುವ ವೈದ್ಯಕೀಯ ಜಾಹೀರಾತುಗಳ ವಿರುದ್ಧ ಕ್ರಮ ಕೈಗೊಳ್ಳದ ಕರ್ನಾಟಕ (Karnataka) ಸೇರಿ ಇತರೆ ರಾಜ್ಯ ಸರ್ಕಾರಗಳ ವಿರುದ್ಧ ಸುಪ್ರೀಂ ಕೋರ್ಟ್ (Supreme Court) ಆಕ್ಷೇಪ ವ್ಯಕ್ತಪಡಿಸಿದೆ.
ಸಾರ್ವಜನಿಕರನ್ನು ದಾರಿತಪ್ಪಿಸುವಂತಹ ಸುಳ್ಳು ಹಾಗೂ ಪರಿಶೀಲಿಸದ ವೈದ್ಯಕೀಯ ಘೋಷಣೆಗಳನ್ನು ತಡೆಗಟ್ಟಲು ಔಷಧ ಮತ್ತು ಮಾಂತ್ರಿಕ ಪರಿಹಾರ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯಿದೆ – 1954 ಅನ್ನು ಅಕ್ಷರಶಃ ಜಾರಿಗೆ ತರಬೇಕು ಎಂದು ನ್ಯಾ.ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ ಈ ಸಂಬಂಧ ಸಮಗ್ರ ಅನುಪಾಲನಾ ವರದಿ ಸಲ್ಲಿಸುವಂತೆ ಸೂಚಿಸಿದೆ.ಇದನ್ನೂ ಓದಿ: ದೆಹಲಿ ವಿಧಾನಸಭೆಯಲ್ಲಿ ಗದ್ದಲ – 15 ಎಎಪಿ ಶಾಸಕರ ಅಮಾನತು
ರಾಜ್ಯ ಸರ್ಕಾರಗಳು ದೂರುಗಳನ್ನಷ್ಟೇ ಅವಲಂಬಿಸುವ ಬದಲು ಕಾಯಿದೆ ಜಾರಿಗೆ ಪೂರ್ವಭಾವಿ ಕ್ರಮ ತೆಗೆದುಕೊಳ್ಳಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಕಾಯಿದೆಯ ಸೆಕ್ಷನ್ 170ರ ಅಡಿಯಲ್ಲಿ ಯಾವುದೇ ಜಾಹೀರಾತುಗಳನ್ನು ರಾಜ್ಯದಲ್ಲಿ ಪ್ರಕಟಿಸಲಾಗಿಲ್ಲ ಎಂದ ಜಾರ್ಖಂಡ್ ಸರ್ಕಾರವನ್ನು ಇದೇ ವೇಳೆ ನಿರ್ದಿಷ್ಟವಾಗಿ ಪ್ರಶ್ನಿಸಿತು.
ಸೆಕ್ಷನ್ 170ರ ಅಡಿಯಲ್ಲಿ ಯಾವುದೇ ಔಷಧ ತಯಾರಕರು ಅನುಮತಿಗಾಗಿ ಅರ್ಜಿ ಸಲ್ಲಿಸಿಲ್ಲ ಎಂದು ಜಾರ್ಖಂಡ್ ಸಮರ್ಥಿಸಿಕೊಂಡಿದೆ. ಆದರೆ ಜಾಹೀರಾತುಗಳನ್ನು ಪ್ರಕಟಿಸಲಾಗುತ್ತಿದೆಯೇ ಎಂಬ ಕುರಿತು ಸ್ಪಷ್ಟನೆ ನೀಡಿಲ್ಲ ಎಂದು ಪೀಠ ನುಡಿದಿದೆ. ಅಂತೆಯೇ ನಿಯಮ 170ರ ಉಪಸೆಕ್ಷನ್ 2 ಮತ್ತು 3ರ ಅಡಿಯಲ್ಲಿ ಜಾಹೀರಾತುಗಳನ್ನು ಪ್ರಕಟಿಸಲಾಗುತ್ತಿದೆಯೇ ಎಂಬುದನ್ನು ಗಮನಿಸುವುದು ರಾಜ್ಯ ಸರ್ಕಾರದ ಕರ್ತವ್ಯ ಎಂದು ಹೇಳಿತು.
ಕಾಯಿದೆ ಉಲ್ಲಂಘಿಸುವವರನ್ನು ಪತ್ತೆ ಹಚ್ಚಲು ಪೂರ್ವಭಾವಿ ಕ್ರಮ ಕೈಗೊಳ್ಳದ ಕರ್ನಾಟಕ ಸರ್ಕಾರದ ವಿರುದ್ಧ ಕೂಡ ನ್ಯಾಯಾಲಯ ಅಸಮಾಧಾನ ಹೊರಹಾಕಿತು. ರಾಜ್ಯ ಸರ್ಕಾರದ ಬಳಿ ತನ್ನದೇ ಆದ ಪೊಲೀಸ್ ವ್ಯವಸ್ಥೆ ಮತ್ತು ಸೈಬರ್ ವಿಭಾಗ ಇದ್ದು, ಅಂತಹ ಜಾಹೀರಾತುಗಳ ಮೂಲ ಪತ್ತೆ ಹಚ್ಚುವುದು ತುಂಬಾ ಸುಲಭ ಎಂದಿದೆ. ನಿಯಮ ಉಲ್ಲಂಘಿಸುವವರ ಹೆಸರು ಮತ್ತು ವಿಳಾಸಗಳನ್ನು ಪತ್ತೆ ಹಚ್ಚಿ ಅಫಿಡವಿಟ್ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲಾಯಿತು.
ಕಾಯಿದೆ ಜಾರಿಗೆ ಸಂಬಂಧಿಸಿದಂತೆ ಕೇರಳ ಗಮನಾರ್ಹ ಪ್ರಗತಿ ಸಾಧಿಸಿದೆ ಎಂದು ತಿಳಿಸಿದ ಅಮಿಕಸ್ ಕ್ಯೂರಿ ಹಿರಿಯ ವಕೀಲ ಶಾದನ್ ಫರಾಸತ್, ಪಂಜಾಬ್, ಮಧ್ಯಪ್ರದೇಶ ಸರ್ಕಾರಗಳು ಇತ್ತೀಚಿಗೆ ಅಫಿಡವಿಟ್ ಸಲ್ಲಿಸಿದ್ದು, ಅವುಗಳನ್ನು ಪರಿಶೀಲಿಸಬೇಕಿದೆ. ನೋಟಿಸ್ ಬಳಿಕ ಪುದುಚೇರಿ ಸರ್ಕಾರ ಕೂಡ ಅಫಿಡವಿಟ್ ಸಲ್ಲಿಸಿದೆ. ಆಂಧ್ರಪ್ರದೇಶ ಅಫಿಡವಿಟ್ ಸಲ್ಲಿಸಿಲ್ಲ ಎಂಬುದನ್ನು ನ್ಯಾಯಾಲಯದ ಗಮನಕ್ಕೆ ತಂದರು.
ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳು ಸಲ್ಲಿಸಿದ ಅನುಪಾಲನಾ ಅಫಿಡವಿಟ್‌ನ್ನು ಪರಿಶೀಲಿಸುವುದಾಗಿ ನ್ಯಾಯಾಲಯ ತಿಳಿಸಿದೆ. ದಿಕ್ಕು ತಪ್ಪಿಸುವ ಜಾಹೀರಾತು ತಡೆಗೆ ಪರಿಣಾಮಕಾರಿ ನಿರ್ಣಯ ಮತ್ತು ಕಾಯಿದೆಯನ್ನು ಜಾರಿಗೆ ತರಲು ಹೆಚ್ಚಿನ ಕ್ರಮ ಕೈಗೊಳ್ಳುವ ಕುರಿತು ಮುಂದಿನ ವಿಚಾರಣೆ ವೇಳೆ ಪರಿಗಣಿಸುವುದಾಗಿ ಹೇಳಿದೆ. ಈ ಸಂಬಂಧ ಕಾಯಿದೆ ಜಾರಿಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವರವಾದ ಟಿಪ್ಪಣಿ ಸಲ್ಲಿಸುವಂತೆ ನ್ಯಾಯಾಲಯ ಅಮಿಕಸ್ ಕ್ಯೂರಿ ಅವರಿಗೆ ನಿರ್ದೇಶಿಸಿದೆ.ಇದನ್ನೂ ಓದಿ: ಜಾಗರಣೆ ಮಾಡಿದ್ದಕ್ಕೆ ಶಿವರಾತ್ರಿ ಮರುದಿನ ಹಿಂದೂ ಉದ್ಯೋಗಿಗಳಿಗೆ ರಜೆ ಕೊಡಿ: ಸರ್ಕಾರಕ್ಕೆ ಮನವಿ
ಹುಬ್ಬಳ್ಳಿ: ರಾಜ್ಯ ಸರ್ಕಾರ ಎಲ್ಲ ದರಗಳನ್ನೂ ಏರಿಸುತ್ತಿದೆ, ಹಣಕಾಸಿನ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.
ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೆಟ್ರೋ ದರ ಏರಿಕೆ ವಿಚಾರವಾಗಿ ಮೆಟ್ರೋ ದರ ಏರಿಕೆ ಮಾಡಿದ್ದು ನಾವಲ್ಲ. ದರ ನಿಗದಿ ಮಾಡುವ ಒಂದು ಸಮಿತಿ ಇದೆ. ಆದರೆ ಈ ಮೆಟ್ರೋ ದರ ಏರಿಕೆ ವಿಚಾರದಲ್ಲಿ ಎಲ್ಲ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರುತ್ತದೆ. ಅದರಲ್ಲಿ ರಾಜ್ಯ ಅಧಿಕಾರಿಗಳಿರುತ್ತಾರೆ. ಅದಕ್ಕೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ. ಮುಖ್ಯಮಂತ್ರಿಗಳು ದರ ಏರಿಕೆ ವಿಚಾರವಾಗಿ ನಿರ್ದೇಶನ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ ಎಂದರು.ಇದನ್ನೂ ಓದಿ: ಪ್ಲಾಟ್‌ಫಾರ್ಮ್ ಮೆಟ್ಟಿಲಿನಿಂದ ಪ್ರಯಾಣಿಕ ಜಾರಿ ಬಿದ್ದಿದ್ದು ಕಾಲ್ತುಳಿತಕ್ಕೆ ಕಾರಣ: ರೈಲ್ವೆ ಅಧಿಕಾರಿ
ಇನ್ನೂ ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ಅದಕ್ಕೆ ವಿದ್ಯುತ್, ನೀರು, ಹಾಲಿನ ದರ ಸೇರಿದಂತೆ ಎಲ್ಲ ದರಗಳನ್ನೂ ಏರಿಸುತ್ತಿದೆ. ಸರ್ಕಾರ ಹಣಕಾಸಿನ ನಿರ್ವಹಣೆಯಲ್ಲಿ ವಿಫಲವಾಗಿದೆ. ಎಂದು ವಾಗ್ದಾಳಿ ನಡೆಸಿದರು.
ಮೈಸೂರಿನಲ್ಲಿ ಉದಯಗಿರಿ ಗಲಾಟೆ ವಿಚಾರವಾಗಿ ಮಾತನಾಡಿ, ಯಾವಾಗ ಸರ್ಕಾರ ಹಳೆ ಹುಬ್ಬಳ್ಳಿ ಪ್ರಕರಣವನ್ನು ಹಿಂದೆಪಡೆದುಕೊಂಡಿತ್ತು ಆವಾಗ ಸರ್ಕಾರ ಯಾರ ಪರ ಇದೆ ಎನ್ನುವುದು ಗೊತ್ತಾಗಿದೆ. ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿರುವದರ ಹಿಂದೆ ಯಾರ ಕುಮ್ಮಕ್ಕು ಇದೆ ಎನ್ನುವುದು ಗೊತ್ತಾಗುತ್ತದೆ. ಈ ಹಿಂದೆ ತನ್ವೀರ್ ಸೇಠ್ ಮೇಲೆ ಪಿಎಫ್‌ಐ ದಾಳಿ ಮಾಡಿತ್ತು. ಇಂದು ಆ ಶಕ್ತಿಗಳು ಮತ್ತೆ ಒಂದಾಗಿವೆ. ಹೀಗಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವವರೇ ಆತಂಕದಲ್ಲಿದ್ದಾರೆ. ಜನರಿಗೆ ರಕ್ಷಣೆ ಕೊಡುವ ಶಕ್ತಿಯೇ ಅವರಲ್ಲಿ ಇಲ್ಲ. ಮುಖ್ಯಮಂತ್ರಿಗಳು ಇದನ್ನ ಗಂಭೀರವಾಗಿ ಪರಿಗಣಿಸಬೇಕು. ದಾಳಿ ವಿಚಾರವಾಗಿ ಪೊಲೀಸರಿಗೆ ಎಲ್ಲವೂ ಗೊತ್ತಿದೆ. ಆದರೆ ರಾಜಕೀಯ ಒತ್ತಡದಿಂದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಹೇಳಿದರು.ಇದನ್ನೂ ಓದಿ: ಓವರ್‌ಟೆಕ್ ಮಾಡಲು ಹೋಗಿ ಬೈಕ್‌ಗೆ ಸರ್ಕಾರಿ ಬಸ್ ಡಿಕ್ಕಿ – ಓರ್ವ ಸಾವು
ಬೆಂಗಳೂರು: ಕೇಂದ್ರ ಸರ್ಕಾರದ ಬೆಂಬಲ ಬೆಲೆಯ ಜೊತೆಗೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ ಧನ ನೀಡಲಾಗುವುದು ಎಂಬ ಭರವಸೆಗೆ ಇದೀಗ ಸಿಎಂ ಸಿದ್ದರಾಮಯ್ಯ (CM Siddaramaiah) ಅನುಮೋದನೆ ನೀಡಿದ್ದು, ಈ ಮೂಲಕ ಸರ್ಕಾರ ತೊಗರಿ ಬೆಳೆಗಾರರಿಗೆ ಸಂತಸದ ಸುದ್ದಿ ನೀಡಿದೆ.
2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆಯ ಜೊತೆಗೆ ರಾಜ್ಯದ ಸರ್ಕಾರದಿಂದ ಪ್ರೋತಾಹ ಧನ ನೀಡಲಾಗುವುದು ಎಂದು ಜವಳಿ, ಕಬ್ಬು ಅಭಿವೃಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ಕಳೆದ ಜನವರಿ ತಿಂಗಳಲ್ಲಿ ಭರವಸೆ ನೀಡಿದ್ದರು.ಇದನ್ನೂ ಓದಿ: ‘ಬಿಗ್ ಬಾಸ್’ನಲ್ಲಿ ಗೆದ್ದ 50 ಲಕ್ಷ ಏನಾಯ್ತು?- ಅಚ್ಚರಿಯ ಉತ್ತರ ಕೊಟ್ಟ ಹನುಮಂತ
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ತೊಗರಿ ಖರೀದಿಗೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರದ ಬೆಂಬಲ ಬೆಲೆ ಪ್ರತಿ ಕ್ವಿಂಟಲ್‌ಗೆ 7,550 ರೂ. ಜೊತೆಗೆ ರಾಜ್ಯ ಸರ್ಕಾರದ ಪ್ರೋತಾಹ ಧನ 450 ರೂ. ಅಂದರೆ ಪ್ರತಿ ಕ್ವಿಂಟಾಲ್‌ಗೆ ಒಟ್ಟು 8,000 ರೂ. ನೀಡುವುದಾಗಿ ಭರವಸೆ ನೀಡಿದ್ದರು.
ಪ್ರತಿ ಕ್ವಿಂಟಾಲ್ ತೊಗರಿಗೆ ರೂ.7,550 ಕನಿಷ್ಠ ಬೆಂಬಲ ಬೆಲೆಯ ಜೊತೆಗೆ ರಾಜ್ಯ ಸರ್ಕಾರದಿಂದ ರೂ.450 ಪ್ರೋತ್ಸಾಹಧನ ಘೋಷಣೆ ಮಾಡಲಾಗಿದೆ.
ಈಗಾಗಲೇ ಆರ್ಥಿಕ ಇಲಾಖೆಯ ಅನುಮೋದನೆ ಕೂಡ ದೊರೆತಿದ್ದು ನಾಡಿನ ತೊಗರಿ ಬೆಳೆಗಾರರಿಗೆ ಇದರಿಂದ ಹೆಚ್ಚಿನ ಅನುಕೂಲವಾಗಲಿದೆ.
ಸದ್ಯ ಈ ಸಂಬಂಧ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದು, ಆರ್ಥಿಕ ಇಲಾಖೆಯೂ ಸಹ ಸಹಮತಿ ನೀಡಿದೆ. ಈ ಕುರಿತು ಸಂಬಂಧಿಸಿದ ಇಲಾಖೆಗೆ ತಕ್ಷಣ ಅನುಷ್ಠಾನಗೊಳಿಸಲು ಸೂಕ್ತ ನಿರ್ದೇಶನ ನೀಡಲಾಗಿದೆ.
ರಾಜ್ಯದ ಪ್ರಮುಖ ತೊಗರಿ ಬೆಳೆಯುವ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯಪುರ, ಕೊಪ್ಪಳ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಚಿತ್ರದುರ್ಗ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ಅಂದಾಜು 330 ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ರೈತರು ತಮ್ಮ ಹತ್ತಿರದ PACS / FPO / TAPCMS ಗಳಿಗೆ ಭೇಟಿ ನೀಡಿ ನೋಂದಣಿ ಮಾಡಿಕೊಂಡು ಬೆಂಬಲ ಬೆಲೆ ಯೋಜನೆ ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹ ಧನದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.ಇದನ್ನೂ ಓದಿ:ನಮ್ಮ ಮೆಟ್ರೋದಿಂದ ಗುಡ್ ನ್ಯೂಸ್ – ಬೆಂಗಳೂರು ತಲುಪಿದ 2ನೇ ಡ್ರೈವರ್‌ಲೆಸ್ ಮೆಟ್ರೋ
ನವದೆಹಲಿ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅತ್ಯಂತ ಕೆಟ್ಟ ದುರಾಡಳಿತ ನಡೆಯುತ್ತಿದ್ದು, ಎಲ್ಲ ರಂಗದಲ್ಲೂ ವೈಫಲ್ಯವಾಗಿದೆ. ಜನ ಸಾಮಾನ್ಯರು, ರೈತರು, ಮಹಿಳೆಯರು ಸಂಕಷ್ಟದಲ್ಲಿದ್ದು, ದಿನನಿತ್ಯ ಹಿಂಸೆ ಮತ್ತು ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಇದರ ವಿರುದ್ಧ ಸಮರ ಸಾರಬೇಕಾಗಿರುವ ಬಿಜೆಪಿಯಲ್ಲಿ ಆಂತರಿಕ ಭಿನ್ನಾಭಿಪ್ರಾಯದ ಮಾತಿನ ಸಮರ ನಡೆಯುತ್ತಿರುವುದು ಅತ್ಯಂತ ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದರು.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಇಡೀ ದೇಶಕ್ಕೆ ಸಮರ್ಥ ಆಡಳಿತ ಕೊಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಈ ಪಕ್ಷ ಮತ್ತು ವರಿಷ್ಠರ ತೀರ್ಮಾನವೇ ಅಂತಿಮವಾಗಿದ್ದು, ನಾನು ಯಾವುದೇ ಗುಂಪುಗಾರಿಕೆಯಲ್ಲಿ ನಂಬಿಕೆ ಇಟ್ಟವನಲ್ಲ. ಆದುದರಿಂದ ನಾನು ಯಾವುದೇ ಒಂದು ಗುಂಪಿನ ಸಭೆಯನ್ನು ಕರೆಯುವ ಪ್ರಶ್ನೆಯೇ ಬರುವುದಿಲ್ಲ ಎಂದರು.ಇದನ್ನೂ ಓದಿ: ಬೆಂಗಳೂರಿನಲ್ಲಿ ದುರಂತ| ಮೂರಂತಸ್ತಿನ ಕಟ್ಟಡಕ್ಕೆ ಬೆಂಕಿ, ಇಬ್ಬರು ಬಲಿ
ಎಲ್ಲರನ್ನೂ ಒಂದುಗೂಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ಹಲವಾರು ಮುಖಂಡರಲ್ಲಿ ನಾನೂ ಒಬ್ಬ. ಎರಡೂ ಕಡೆ ತಾಳ್ಮೆಯನ್ನು ಕಳೆದುಕೊಳ್ಳದೇ ಕರ್ನಾಟಕ ಬಿಜೆಪಿಯ ಸರ್ವೋಚ್ಛ ನಾಯಕ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಇತರ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಒಟ್ಟಿಗೆ ಕುಳಿತು ಮಾತುಕತೆಯ ಮೂಲಕ ಇದನ್ನು ಬಗೆಹರಿಸಬೇಕು. ಇಲ್ಲದಿದ್ದರೆ ವರಿಷ್ಠರ ತೀರ್ಮಾನಕ್ಕೆ ನಾವೆಲ್ಲರೂ ಬದ್ದರಾಗಬೇಕು.
ವರಿಷ್ಠರು ಕೂಡಲೇ ಕರ್ನಾಟಕದ ಪಕ್ಷದ ಬೆಳವಣಿಗೆಯ ಬಗ್ಗೆ ಗಮನವನ್ನು ಹರಿಸಿ, ಎಲ್ಲ ಪ್ರಮುಖರ ಜೊತೆಗೆ ಚರ್ಚೆ ಮಾಡಿ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳುತ್ತಾರೆ ಎನ್ನುವ ನಂಬಿಕೆ ನನಗಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ವಾಲ್ಮೀಕಿ ಹಗರಣ | ಸಿಬಿಐ ತನಿಖೆ ಚುರುಕು ಮೂವರು ಆರೋಪಿಗಳಿಗೆ ನೋಟಿಸ್
ಬೆಂಗಳೂರು: ಡಿಸಿಎಂ ಡಿಕೆಶಿ ನೀರಿನ ದರ ಏರಿಕೆ ಬಗ್ಗೆ ಸುಳಿವು ಕೊಟ್ಟ ಬೆನ್ನಲ್ಲೇ ಇದೀಗ ಜಲಮಂಡಳಿ (BWSSB)ನೀರಿನ ದರ ಏರಿಕೆ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
ಜಲಮಂಡಳಿ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಸರ್ಕಾರದ ಮುಂದೆ ನಾಲ್ಕು ಆಯ್ಕೆಗಳನ್ನು ಇಟ್ಟಿದೆ. ಶೇಕಡಾ ಎಷ್ಟು? ದರ ಏರಿಕೆ ಮಾಡಬೇಕು ಎಂದು ನಾಲ್ಕು ಮಾದರಿಯ ದರಗಳನ್ನ ಪ್ರಸ್ತಾವನೆಯಲ್ಲಿ ಉಲ್ಲೇಖಿಸಿದೆ. ಈ ಕುರಿತು ಕೆಲವೇ ದಿನಗಳಲ್ಲಿ ಸರ್ಕಾರ ಪ್ರಸ್ತಾವನೆ ಫೈನಲ್ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ಕನ್ನಡ ಬರೆಯಲು ಪರದಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ
ಇತ್ತೀಚಿಗಷ್ಟೇ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಜಲಮಂಡಳಿ ಸಭೆಯಲ್ಲಿ ಮಾತನಾಡಿ, ಎಲ್ಲಾ ಫ್ರೀಯಾಗಿ ಕೊಟ್ಟರೆ ಸರ್ಕಾರ ಹೇಗೆ ನಡೆಯಬೇಕು? ಇನ್ಮೇಲೆ ಕಾವೇರಿ ನೀರನ್ನು ಫ್ರೀಯಾಗಿ ಕೊಡೋಕೆ ಆಗಲ್ಲ. ಒಂದು ಪೈಸೆಯಾದರೂ ಬಿಲ್ ಕಟ್ಟಬೇಕು. ಸರ್ಕಾರಿ ನೌಕರರು ಸಂಬಳ ಜಾಸ್ತಿ ಮಾಡಿ ಅಂತಿದ್ದಾರೆ. ಹೀಗಾಗಿ ಎಲ್ಲಾ ಸರಿದೂಗಿಸಿಕೊಂಡು ಹೋಗಬೇಕಲ್ವಾ ಎಂದಿದ್ದರು.
ಜೊತೆಗೆ ವಿದ್ಯುತ್ ದರ ಏರಿಕೆಗೆ 5 ವಿದ್ಯುತ್ ಕಂಪನಿಗಳು ಪ್ರಸ್ತಾವನೆ ಸಲ್ಲಿಸಿದ್ದವು. 3 ವರ್ಷದ ದರ ಏರಿಕೆಯನ್ನು ಈಗಲೇ ಪ್ರಕಟಿಸಿ ಎಂದು ಮೊರೆ ಇಟ್ಟು, ಪ್ರತಿ ಯೂನಿಟ್‌ಗೆ 2025-26ರ ಸಾಲಿನಲ್ಲಿ 67 ಪೈಸೆ, 2026-27ರಲ್ಲಿ 74 ಪೈಸೆ ಮತ್ತು 2027-28ರಲ್ಲಿ 91 ಪೈಸೆ ಹೆಚ್ಚಳಕ್ಕೆ ಅನುಮೋದನೆ ನೀಡಿ ಎಂದು ಕೋರಿದ್ದವು.ಇದನ್ನೂ ಓದಿ: ಪಟ್ಟಾ ಜಮೀನು ಹೊಂದಿರುವವರ ಅರಣ್ಯ ಹಕ್ಕು ಅರ್ಜಿ ಪರಿಶೀಲನೆಗೆ ಈಶ್ವರ್ ಖಂಡ್ರೆ ಸೂಚನೆ
– ಸರ್ಕಾರ ಮಾಡಿದ ಪಾಪಕ್ಕೆ ಮೈಕ್ರೋ ಫೈನಾನ್ಸ್ ಹಾವಳಿ ಜಾಸ್ತಿಯಾಗಿದೆ ಎಂದ ವಿಪಕ್ಷ ನಾಯಕ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಮಾಡಿದ ಪಾಪದಿಂದಾಗಿ ಜನರು ಮೈಕ್ರೋ ಫೈನಾನ್ಸ್‌ನಲ್ಲಿ ಸಾಲ ಪಡೆಯುತ್ತಿದ್ದಾರೆ. ಸರ್ಕಾರವೇ ಸಾಲ ನೀಡಿದ್ದರೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ (R Ashok) ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಗೆ 2022-23ರಲ್ಲಿ ಬಿಜೆಪಿ ಸರ್ಕಾರ 60 ಕೋಟಿ ರೂ. ಅನುದಾನ ನೀಡಿತ್ತು. 2024-25ರಲ್ಲಿ ಕಾಂಗ್ರೆಸ್ 40 ಕೋಟಿ ರೂ. ನೀಡಿದೆ. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ ಯೋಜನೆಗೆ ಬಿಜೆಪಿ 100 ಕೋಟಿ ರೂ. ನೀಡಿದರೆ, ಕಾಂಗ್ರೆಸ್ 45 ಕೋಟಿ ರೂ. ನೀಡಿದೆ. ತಾಂಡಾ ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ ಯೋಜನೆಗೆ ಬಿಜೆಪಿ 110 ಕೋಟಿ ರೂ. ನೀಡಿದರೆ ಕಾಂಗ್ರೆಸ್ 60 ಕೋಟಿ ರೂ. ನೀಡಿದೆ. ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮಕ್ಕೆ ಬಿಜೆಪಿ 100 ಕೋಟಿ ರೂ. ನೀಡಿದರೆ, ಕಾಂಗ್ರೆಸ್ 50 ಕೋಟಿ ರೂ. ನೀಡಿದೆ. ಜೊತೆಗೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರದಿಂದ ಹಣ ಫ್ರೀಜ್ ಆಗಿದೆ. ನಿಗಮಗಳಿಗೆ 1,700 ಕೋಟಿ ರೂ. ನೀಡಬೇಕಿದ್ದು, 643 ಕೋಟಿ ರೂ. ನೀಡಲಾಗಿದೆ. ಅಂದರೆ ಎಲ್ಲ ನಿಗಮಗಳಿಗೆ ಒಟ್ಟು 1,055 ಕೋಟಿ ರೂ. ಕೊರತೆಯಾಗಿದೆ. ಈ ಹಣದಲ್ಲಿ ಜನರಿಗೆ ಸಾಲ ನೀಡಬಹುದಿತ್ತು. ಕೊರತೆಯಾದ ಹಣವನ್ನು ಸಾಲವಾಗಿ ಮೈಕ್ರೋ ಫೈನಾನ್ಸ್‌ಗಳು ನೀಡುತ್ತಿವೆ ಎಂದರು.ಇದನ್ನೂ ಓದಿ:BBK 11: ಗೆದ್ದ 50 ಲಕ್ಷದಲ್ಲಿ ಮನೆ ಕಟ್ಟಿಸ್ತೀನಿ, ಮದುವೆ ಆಗ್ತೀನಿ: ಹನುಮಂತ
ಪ್ರತಿ ಬಜೆಟ್‌ನಲ್ಲೂ ಅನುದಾನ ಶೇ.20ರಷ್ಟು ಹೆಚ್ಚಾಗಬೇಕು. 2022-23ರಲ್ಲಿ ಬಿಜೆಪಿ ಸರ್ಕಾರ ಕೃಷಿ ಇಲಾಖೆಗೆ 7,288 ಕೋಟಿ ರೂ. ನೀಡಿದರೆ, ಕಾಂಗ್ರೆಸ್ ಸರ್ಕಾರ 5,035 ಕೋಟಿ ರೂ. ನೀಡಿದೆ. ಅಂದರೆ 2,253 ಕೋಟಿ ರೂ. ಕೊರತೆಯಾಗಿದೆ. ಇದು ರೈತರ ಬದುಕಿನ ಮೇಲೆ ಪರಿಣಾಮ ಬೀರಿದೆ. ತೋಟಗಾರಿಕಾ ಇಲಾಖೆಗೆ ಬಿಜೆಪಿ 1,374 ಕೋಟಿ ರೂ. ನೀಡಿದರೆ, ಕಾಂಗ್ರೆಸ್ 1,207 ಕೋಟಿ ರೂ. ನೀಡಿದೆ. ಕೃಷಿ, ತೋಟಗಾರಿಕೆ, ಗ್ರಾಮೀಣಾಭಿವೃದ್ಧಿ, ಸಹಕಾರಿ ಎಲ್ಲ ಸೇರಿ ಬಿಜೆಪಿ 15,383 ಕೋಟಿ ರೂ. ನೀಡಿದರೆ, ಕಾಂಗ್ರೆಸ್ 14,768 ಕೋಟಿ ರೂ. ನೀಡಿದೆ. ಇದರಿಂದ 614 ಕೋಟಿ ರೂ. ಕೊರತೆಯಾಗಿದೆ. ಕಂದಾಯ ಇಲಾಖೆಗೆ ಬಿಜೆಪಿ 1534 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ನಿಂದ 940 ಕೋಟಿ ರೂ. ನೀಡಲಾಗಿದೆ. 594 ಕೋಟಿ ರೂ. ಕೊರತೆಯಾಗಿದೆ. ಲೋಕೋಪಯೋಗಿ ಇಲಾಖೆಗೆ ಬಿಜೆಪಿ 12,410 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ನಿಂದ 9,699 ಕೋಟಿ ರೂ. ನೀಡಲಾಗಿದೆ. 2,710 ಕೋಟಿ ರೂ. ಕೊರತೆಯಾಗಿದೆ. ನೀರಾವರಿಗೆ ಬಿಜೆಪಿ 19,610 ಕೋಟಿ ರೂ. ನೀಡಿದರೆ, ಕಾಂಗ್ರೆಸ್ 16,834 ಕೋಟಿ ರೂ. ನೀಡಿದೆ. ಇದರಿಂದ 2755 ಕೋಟಿ ರೂ. ಕೊರತೆಯಾಗಿದೆ ಎಂದು ತಿಳಿಸಿದರು.
ಮೈಕ್ರೋ ಫೈನಾನ್ಸ್ ಮೀಟರ್ ಬಡ್ಡಿ ದಂಧೆಯಲ್ಲಿ ರೌಡಿಗಳು ಈವರೆಗೆ ಸುಮ್ಮನಿದ್ದರು. ಕಾಂಗ್ರೆಸ್ ಸರ್ಕಾರದಿಂದಾಗಿ ರೌಡಿಗಳಿಗೆ ಉದ್ಯೋಗ ಸಿಕ್ಕಿದೆ. ಬಡ ಜನರು ಸಾಲ ಮಾಡಿ ಮನೆ ಬಿಟ್ಟು ಹೊರಡಬೇಕಾಗಿದೆ. ಜನರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರ ಸಾಲ ನೀಡುತ್ತಿತ್ತು. ಈಗ ಕಾಂಗ್ರೆಸ್ ಸರ್ಕಾರ ನಿಗಮಗಳ ಮೂಲಕ ಸಾಲ ನೀಡದೆ, ಜನರು ಅನಿವಾರ್ಯವಾಗಿ ಮೈಕ್ರೋ ಫೈನಾನ್ಸ್‌ಗಳ ಮೊರೆ ಹೋಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಮೈಕ್ರೋ ಫೈನಾನ್ಸ್‌ನಲ್ಲಿ 10 ಜನರ ಗುಂಪು ರಚಿಸಿ, ಪ್ರತಿಯೊಬ್ಬರಿಗೂ 50 ಸಾವಿರ ರೂ. ಸಾಲ ನೀಡುತ್ತಾರೆ. ಒಬ್ಬರಿಗೆ ಉಳಿದವರು ಶೂರಿಟಿ ಕೊಡಬೇಕಾಗುತ್ತದೆ. ಪ್ರತಿ ತಿಂಗಳು ಅಧಿಕ ಬಡ್ಡಿ ಕಟ್ಟಬೇಕಾಗುತ್ತದೆ. 50 ಸಾವಿರ ರೂ. ಸಾಲ ಪಡೆದರೆ 67 ಸಾವಿರ ರೂ. ವಾಪಸ್ ನೀಡಬೇಕು .ಎರಡು ತಿಂಗಳು ಕಟ್ಟಲಿಲ್ಲವೆಂದರೆ ರೌಡಿಗಳು ಮನೆಗೆ ಹೋಗಿ ಗಲಾಟೆ ಮಾಡುತ್ತಾರೆ. ಅನೇಕ ಹಳ್ಳಿಗಳಲ್ಲಿ ಜನರು ಮನೆ ಬಿಟ್ಟು ವಲಸೆ ಹೋಗಿದ್ದಾರೆ. ಕೋಟೆ ಲೂಟಿಯಾದ ನಂತರ ಬಾಗಿಲು ಹಾಕಿದರು ಎಂಬಂತೆ, ಸಿಎಂ ಸಿದ್ದರಾಮಯ್ಯ ಈಗ ಹೊಸ ಕಾನೂನು ತರಲು ಮುಂದಾಗಿದ್ದಾರೆ. ನೋಟಿಸ್ ಕೊಡದೆ ಜನರನ್ನು ಮನೆಯಿಂದ ಹೊರಕ್ಕೆ ಕಳುಹಿಸಲಾಗಿದೆ. ಇಂತಹ ಸಮಯದಲ್ಲಿ ಪೊಲೀಸರು ಕ್ರಮ ಕೈಗೊಳ್ಳಬೇಕಿತ್ತು. ಆದರೆ ಪೊಲೀಸರು ಕೂಡ ಇದಕ್ಕೆ ಸಹಕಾರ ನೀಡಿದ್ದಾರೆ. ಕಂಟ್ರೋಲ್ ರೂಮ್ ರೂಪಿಸಿದರೂ ಅದರಿಂದ ಜನರಿಗೆ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿಎಂ ಸಿದ್ದರಾಮಯ್ಯ ಸಾಲ ಮನ್ನಾ ಬಗ್ಗೆ ಹೇಳಿದ್ದರಿಂದ ಡಿಸಿಸಿ ಬ್ಯಾಂಕ್‌ಗಳಿಗೆ ನಷ್ಟವಾಗಿದೆ. ಸಾಲ ಪಡೆದವರು ಕಾಂಗ್ರೆಸ್ ಸರ್ಕಾರವನ್ನು ನಂಬಿಕೊಂಡು ಕೂತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾಂಗಲ್ಯ ಕಿತ್ತುಕೊಳ್ಳುತ್ತಾರೆಂದು ಪ್ರಧಾನಿ ಮೋದಿ ಹೇಳಿದ್ದು ಈಗ ನಿಜವಾಗಿದೆ. ಗೃಹಲಕ್ಷ್ಮಿಯ ಹಣ ಮಹಿಳೆಯರಿಗೆ ನಿಜವಾಗಿಯೂ ಸಿಕ್ಕಿದ್ದರೆ ಏಕೆ ಮೈಕ್ರೋ ಫೈನಾನ್ಸ್‌ಗೆ ಹೋಗುತ್ತಾರೆ ಎಂದು ಹೇಳಿದರು.ಇದನ್ನೂ ಓದಿ: ಎಲ್ಲದ್ದಕ್ಕೂ ಕೇಂದ್ರ ಎನ್ನುವುದಾದರೆ ನೀವೇನು ಕತ್ತೆ ಕಾಯ್ತಿದ್ದೀರಾ? – `ಕೈ’ ಸರ್ಕಾರದ ವಿರುದ್ಧ ಅಶೋಕ್ ಕಿಡಿ