ಬೆಂಗಳೂರು: ಸದ್ಯ ಯುದ್ಧಪೀಡಿತ ಉಕ್ರೇನ್‍ನಿಂದ ವಾಪಸ್ಸಾಗಿರುವ ವಿದ್ಯಾರ್ಥಿಗಳು ಅತಂತ್ರ ಸ್ಥಿತಿಯಲ್ಲಿದ್ದಾರೆ. ಈ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಹಾಯ ಮಾಡುತ್ತಾ ಎಂಬ ಪ್ರಶ್ನೆ ಎದ್ದಿದೆ. ಯಾಕೆಂದರೆ ಏನೇ ನಿರ್ಧಾರ ಕೈಗೊಳ್ಳಬೇಕಾದ್ರು, ರಾಜ್ಯಕ್ಕೆ ಕೇಂದ್ರ ಅನುಮತಿ ಬೇಕಾಗುತ್ತದೆ.
ರಾಜ್ಯ ಸರ್ಕಾರದ ಮುಂದಿರುವ ಆಯ್ಕೆಗಳು:
ಉಕ್ರೇನ್ ನಿಂದ ಬಂದಿರೋ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ರಾಜ್ಯ ಸರ್ಕಾರಕ್ಕೂ ಸದ್ಯ ಯಾವುದೇ ಮಾರ್ಗಗಳು ಇಲ್ಲ. ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಕೋರ್ಸ್ ಮುಂದುವರಿಸಲು ಅವಕಾಶ ಕೊಡಲು ಅಧಿಕಾರ ಇಲ್ಲ. ರಾಜ್ಯ ಸರ್ಕಾರ ಏನೇ ನಿರ್ಧಾರ ಮಾಡಬೇಕಾದ್ರು ಕೇಂದ್ರ ಸರ್ಕಾರದ ಅನುಮತಿಬೇಕು. ಕೇಂದ್ರ ಸರ್ಕಾರ ನಿಯಮ ತಂದು ಅವಕಾಶ ಮಾಡಿಕೊಟ್ಟರೆ ಮಾತ್ರ ರಾಜ್ಯ ಸರ್ಕಾರ ಮುಂದಿನ ಕ್ರಮ ತೆಗೆದುಕೊಳ್ಳಬಹುದಾಗಿದೆ.
ವಿದ್ಯಾರ್ಥಿಗಳ ಮುಂದಿರೋ ಆಯ್ಕೆಗಳು:
ವಿದ್ಯಾರ್ಥಿಗಳು ರಾಜ್ಯದಲ್ಲಿ ಕೋರ್ಸ್ ಮುಂದುವರೆಸುತ್ತೇವೆ ಅಂತ ಸಿಎಂ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಉನ್ನತ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಬೇಕು. ವಿದ್ಯಾರ್ಥಿಗಳ ಮನವಿಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ರಾಜ್ಯ ಸರ್ಕಾರ ತರಬೇಕಾಗುತ್ತೆ. ಇದನ್ನೂ ಓದಿ: ಆಲೂಗಡ್ಡೆ, ಟೊಮೆಟೊ ಬೆಲೆ ಪರಿಶೀಲಿಸಲು ನಾನು ರಾಜಕೀಯ ಸೇರಿಲ್ಲ – ಪಾಕ್ ಪ್ರಧಾನಿ
ದೇಶದಲ್ಲಿ ಕೋರ್ಸ್ ಮುಂದುವರಿಸಲು ಕೇಂದ್ರ ಸರ್ಕಾರ ವಿಶೇಷ ಕಾನೂನು ರಚಿಸಿ ರಾಜ್ಯಗಳಿಗೆ ಕೋರ್ಸ್ ಮುಂದುವರಿಸಲು ವ್ಯವಸ್ಥೆ ಮಾಡುವಂತೆ ನಿರ್ದೇಶನ ನೀಡಬೇಕು. ಕೇಂದ್ರ ಸರ್ಕಾರ ಅನುಮತಿ ನೀಡಿದ ಬಳಿಕ ವಿದ್ಯಾರ್ಥಿಗಳಿಗೆ ಕೋರ್ಸ್ ಮುಂದುವರಿಸಲು ರಾಜ್ಯ ಸರ್ಕಾರ ಕಾಲೇಜುಗಳನ್ನ ಸಿದ್ಧಪಡಿಸಿ ಕೋರ್ಸ್ ಗೆ ಅವಕಾಶ ಮಾಡಿಕೊಡಬಹುದು.
ಬೆಂಗಳೂರು: ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಬೀದಿಯಲ್ಲಿ ಕಗ್ಗೊಲೆಯಾಗಿದ್ದಾರೆ. ಈ ರೀತಿ ನಮ್ಮ ಸರ್ಕಾರ ಬಂದ ಮೇಲೂ ಕೊಲೆ ಆಗಿರೋದು ನನಗೆ ನಾಚಿಕೆ ತರುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದರು.
ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅವಧಿಯಲ್ಲಿ ಪ್ರತಿ ಹತ್ಯೆ ಆದಾಗಲೂ ಸಿದ್ದರಾಮಯ್ಯ ರನ್ನು ಬೈಯುತ್ತಿದ್ದೆವು. ಇವತ್ತು ನಮ್ಮದೇ ಸರ್ಕಾರ ಇದೆ. ನಮ್ಮ ಕಾರ್ಯಕರ್ತ ಒಬ್ಬ ಹತ್ಯೆ ಆಗಿದ್ದಾನೆ. ಇದು ನನಗೆ ಅತೀವ ನೋವು ತಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಹಿಜಬ್ ವಿಚಾರ ಬಂದಾಗ ರಾಜ್ಯಾದ್ಯಂತ ಅಶಾಂತಿ ವಾತಾವರಣ ನಿರ್ಮಾಣವಾಗಿತ್ತು. ಜೊತೆಗೆ ಕೋರ್ಟ್ ಮಧ್ಯಂತರ ಆದೇಶ ನೀಡಿದರೂ ಅದು ಪಾಲನೆ ಆಗುತ್ತಿಲ್ಲ. ಶಾಂತಿಗೆ ಭಂಗ ತರುವವರ ಮೇಲೆ ಹಾಗೂ 144 ಸೆಕ್ಷನ್ ಉಲ್ಲಂಘನೆ ಮಾಡಿದವರ ಮೇಲೆ ಕ್ರಮ ಆಗಲಿಲ್ಲ. ಈಗ ನಮ್ಮ ಕಾರ್ಯಕರ್ತ ಹತ್ಯೆ ಆಗಿದ್ದಾನೆ. ಘಟನೆ ಕುರಿತು ಸರ್ಕಾರ ಇನ್ಯಾವಾಗ ಕ್ರಮ ಕೈಗೊಳ್ಳುತ್ತದೆ ಎಂದು ಅವರು ಪ್ರಶ್ನಿಸಿದರು. ಇದನ್ನೂ ಓದಿ: ಈ ಕೊಲೆ ಮಾಡಿಸಿರುವುದೇ ಈಶ್ವರಪ್ಪ – ಬಿ.ಕೆ ಹರಿಪ್ರಸಾದ್ ಗಂಭೀರ ಆರೋಪ
ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಾಟೆ ಆದಾಗಲೇ ಎಸ್‍ಡಿಪಿಐ, ಪಿಎಫ್‍ಐ ಮೇಲೆ ಕ್ರಮ ಕೈಗೊಂಡು ಬ್ಯಾನ್ ಮಾಡಬೇಕಿತ್ತು. ಆಗಲೇ ಕ್ರಮ ಆಗಿದಿದ್ದರೆ ಹರ್ಷ ಸಾವನ್ನಪ್ಪುತ್ತಿರಲಿಲ್ಲ. ಘಟನೆ ಕುರಿತು ಸರ್ಕಾರ ಕಠಿಣ ಕ್ರಮ, ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪೇಪರ್ ಸ್ಟೇಟ್ಮೆಂಟ್ ಕೊಟ್ಟರೆ ಪ್ರಯೋಜನ ಇಲ್ಲ. ಸಿಎಂ ಬೊಮ್ಮಾಯಿ ಮಾತು ನಿಲ್ಲಿಸಿ ಕಠಿಣತೆಯನ್ನು ತೋರಿಸಲಿ ಎಂದು ಸರ್ಕಾರಕ್ಕೆ ಒತ್ತಾಯಿಸಿದರು. ಇದನ್ನೂ ಓದಿ:ತಮ್ಮ ಪಕ್ಷದ ಕಾರ್ಯಕರ್ತನ ಉಳಿಸಲಾಗದ ಸರ್ಕಾರ, ರಾಜ್ಯದ ಜನತೆಯನ್ನು ರಕ್ಷಿಸಲು ಸಾಧ್ಯವೇ: ಹೆಚ್‌ಡಿಕೆ
ಸಿಎಂ ಮಾತು ನಿಲ್ಲಿಸಿ ಕೃತಿಯಲ್ಲಿ ಕಠಿಣತೆ ತೋರಲಿ ಎಂದು ಆಗ್ರಹಿಸಿದ ಅವರು, ಹೈದರಾಬಾದ್‍ನಲ್ಲಿ ಅತ್ಯಾಚಾರ ಆದಾಗ ಅಪರಾಧಿಗಳನ್ನು ಗುಂಡಿಕ್ಕಿ ಕೊಂದರು. ಅದೇ ರೀತಿ ಇಲ್ಲೂ ಕ್ರಮ ಕೈಗೊಂಡರೆ ಪಾಠ ಕಲಿಯುತ್ತಾರೆ ಎಂದು ಸಲಹೆ ನೀಡಿದರು.
ಬೆಂಗಳೂರು: ಕರ್ನಾಟಕದಲ್ಲಿ ಹೆಚ್ಚಿನ ಹೂಡಿಕೆ ಮಾಡಲು ತೈವಾನ್ ಕಂಪನಿಗಳನ್ನು ಆಹ್ವಾನಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಸರ್ಕಾರದಿಂದ ಎಲ್ಲಾ ಬೆಂಬಲ ಮತ್ತು ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಗುರುವಾರ ತೈವಾನ್ ದೇಶದ ಆರ್ಥಿಕ ಮತ್ತು ಸಾಂಸ್ಕೃತಿಕ ಕೇಂದ್ರದ ರಾಯಭಾರಿ ಬಾಶುವಾನ್ ನೇತೃತ್ವದ ನಿಯೋಗವನ್ನು ಭೇಟಿ ಮಾಡಿದ ಅವರು, ಹೂಡಿಕೆಗೆ ಕರ್ನಾಟಕ ಸೂಕ್ತ ಸ್ಥಳ ಹೇಗೆ ಮತ್ತು ಅದಕ್ಕಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳೇನು ಎಂಬುದನ್ನು ಮನವರಿಕೆ ಮಾಡಿಕೊಟ್ಟರು.
ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ತೈಪೆ ಆರ್ಥಿಕ ಮತ್ತು ಸಾಂಸ್ಕೃತಿಕ ಕೇಂದ್ರದ ಉನ್ನತ ಮಟ್ಟದ ನಿಯೋಗವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರನ್ನು ಭೇಟಿ ಮಾಡಿ ಹೂಡಿಕೆ ಅವಕಾಶಗಳ ಕುರಿತು ಮಾತುಕತೆ ನಡೆಸಿದೆ.
ಕರ್ನಾಟಕ ಮತ್ತು ತೈವಾನ್ ನಡುವೆ ಹಲವು ಸಾಮ್ಯತೆಗಳಿದ್ದು, ಇಎಸ್‍ಡಿಎಂ, ಎಲೆಕ್ಟ್ರಿಕ್ ವೆಹಿಕಲ್ಸ್, ಆಟೋ ಮತ್ತು ಆಟೋ ಕಾಂಪೊನೆಂಟ್ಸ್, ಹೆಲ್ತ್‍ಕೇರ್, ಇಂಜಿನಿಯರಿಂಗ್ ಮತ್ತು ಮೆಷಿನ್ ಟೂಲ್ ಮುಂತಾದ ಪ್ರಮುಖ ಉದ್ಯಮಗಳಲ್ಲಿ ಮುಂಚೂಣಿ ಸಾಧಿಸಿವೆ ಎಂದರು.
ವಿಸ್ಟ್ರಾನ್ ಕಾರ್ಪೋರೇಶನ್, ಮೀಡಿಯಾಟೆಕ್, ಡೆಲ್ಟಾ ಎಲೆಕ್ಟ್ರಾನಿಕ್ಸ್ ಮತ್ತು ಡಿ-ಲಿಂಕ್ ಸೇರಿದಂತೆ ಪ್ರಮುಖ ತೈವಾನಿ ಕಂಪನಿಗಳಿಗೆ ಕರ್ನಾಟಕ ನೆಲೆಯಾಗಿದೆ. ಇತರ ತೈವಾನ್ ಕಂಪನಿಗಳೂ ನಮ್ಮ ರಾಜ್ಯದಲ್ಲಿ ಹೂಡಿಕೆ ಮಾಡಬಹುದು, ಅದಕ್ಕೆ ಅಗತ್ಯ ಸೌಲಭ್ಯ ಒದಗಿಸಲಾಗುವುದು ಎಂದು ವಿವರಿಸಿದರು.
ಕೈಗಾರಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ರೂಪಿಸಿರುವ ನೀತಿಗಳು ಹಾಗೂ ಕೈಗೊಂಡಿರುವ ವಿವಿಧ ಉಪಕ್ರಮಗಳ ಬಗ್ಗೆ ಸಚಿವರು ಮಾಹಿತಿ ನೀಡಿದರು.
ನೂತನ ಕೈಗಾರಿಕಾ ನೀತಿ ಹಾಗೂ ಕೈಗಾರಿಕಾ ಸೌಲಭ್ಯ ತಿದ್ದುಪಡಿ ಅಧಿನಿಯಮದಲ್ಲಿನ ತಿದ್ದುಪಡಿಗಳಿಂದ ನಮ್ಮ ರಾಜ್ಯ ಉದ್ಯಮ ಸ್ನೇಹಿ ರಾಜ್ಯಗಳ ಪಟ್ಟಿಯಲ್ಲಿ ಅತ್ಯಂತ ಪ್ರಮುಖ ಸ್ಥಾನ ಪಡೆದುಕೊಂಡಿದೆ. ಭೂ ಸುಧಾರಣೆ ಕಾಯಿದೆ ತಿದ್ದುಪಡಿ, ಅಫಿಡವಿಟ್ ಬೇಸ್ಡ್ ಕ್ಲಿಯರೆನ್ಸ್ (ಎಬಿಸಿ) ಯೋಜನೆ ಇತ್ಯಾದಿ ಕ್ರಮಗಳಿಂದ ರಾಜ್ಯದಲ್ಲಿ ಉದ್ಯಮಸ್ನೇಹಿ ವಾತಾವರಣ ಸೃಷ್ಟಿಯಾಗಿದ್ದು, ಹೂಡಿಕೆಯ ಪ್ರಸ್ತಾಪಗಳು ವೃದ್ಧಿಸಿವೆ ಎಂದು ಹೇಳಿದರು.
ತೈವಾನ್ ಹೂಡಿಕೆದಾರರಿಗೆ ಕೈಗಾರಿಕೆ ಇಲಾಖೆಯಿಂದ ಎಲ್ಲಾ ಸಹಕಾರ ನೀಡಲಾಗುವುದು. ಸರ್ಕಾರದ ಹಲವು ಸುಧಾರಣಾ ಕ್ರಮಗಳಿಂದಾಗಿ ಕರ್ನಾಟಕವು ದೇಶದ ಆಕರ್ಷಕ ಹೂಡಿಕೆ ತಾಣವಾಗಿ ಹೊರಹೊಮ್ಮಿದೆ. ಹಣಕಾಸು ವರ್ಷದ ಏಪ್ರಿಲ್-ಸೆಪ್ಟೆಂಬರ್ ಅವಧಿಯಲ್ಲಿ ಶೇ. 45ರಷ್ಟು ವಿದೇಶಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸಿ ಇಡೀ ದೇಶದಲ್ಲಿಯೇ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಕೈಗಾರಿಕಾಭಿವೃದ್ದಿ ಆಯುಕ್ತರಾದ ಗುಂಜನ್ ಕೃಷ್ಣ ತಿಳಿಸಿದರು. ಇದನ್ನೂ ಓದಿ:ಚಿತ್ರದುರ್ಗದಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆಗೆ ಗ್ರೀನ್ ಸಿಗ್ನಲ್: ಡಾ.ಕೆ ಸುಧಾಕರ್
ತೈವಾನ್ ಮೂಲದ ಉದ್ಯಮಗಳಿಗೆ ಅನುಕೂಲ ಕಲ್ಪಿಸಿರುವ ಕರ್ನಾಟಕ ಸರ್ಕಾರಕ್ಕೆ ಬಾಶುವಾನ್ ಕೃತಜ್ಞತೆ ವ್ಯಕ್ತಪಡಿಸಿದರು. ತೈವಾನ್ ದೇಶದ ಆರ್ಥಿಕ ಮತ್ತು ಸಾಂಸ್ಕೃತಿಕ ಕೇಂದ್ರದ ದಕ್ಷಿಣ – ಚೆನ್ನೈನ ಮಹಾನಿರ್ದೇಶಕ ಬೆನ್ ವಾಂಗ್ ಹಾಗೂ ಕೇಂದ್ರದ ಸಿಬ್ಬಂದಿ, ಇನ್ವೆಸ್ಟ್ ಇಂಡಿಯಾ ಫೊರಂನ ಪ್ರಾದೇಶಿಕ ಮುಖ್ಯಸ್ಥೆ ಸಾಯಿ ಸುಧಾ, ತೈವಾನ್ ಡೆಸ್ಕ್ ಲೀಡ್ ಅಜು ಆಂಟೋನಿ, ಕೈಗಾರಿಕಾಭಿವೃದ್ಧಿ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಓ ಡಾ.ಎನ್ ಶಿವಶಂಕರ್, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಉಪಸ್ಥಿತರಿದ್ದರು. ಇದನ್ನೂ ಓದಿ:ಈಶ್ವರಪ್ಪ ರಾಜೀನಾಮೆಗೆ ಆಗ್ರಹ – ವಿಧಾನಸಭೆಯಲ್ಲಿ ಕಾಂಗ್ರೆಸ್ ಅಹೋರಾತ್ರಿ ಧರಣಿ!
ಸಿಡಿಸಿ ಮಾಸ್ಟರ್ ಪ್ಲ್ಯಾನ್: ಬೆಂಗಳೂರಿನಲ್ಲಿ ಕೈಗಾರಿಕಾ ಪಾರ್ಕ್ ಅಭಿವೃದ್ಧಿಪಡಿಸಲು ಮುಂದಾಗಿರುವ ತೈವಾನ್ ಮೂಲದ ಸೆಂಚುರಿ ಡೆವಲಪ್‍ಮೆಂಟ್ ಕಾರ್ಪೋರೇಷನ್ (ಸಿಡಿಸಿ), ಈ ಸಂಬಂಧ ಮಾಸ್ಟರ್ ಪ್ಲ್ಯಾನ್ ಅಂತಿಮಗೊಳಿಸಿದೆ. ದೇವನಹಳ್ಳಿಯ ಏರೋಸ್ಪೇಸ್ ಪಾರ್ಕ್ ಬಳಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ 70 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದು, ಅಲ್ಲಿ ತೈವಾನ್‍ನ 100 ಕಂಪನಿಗಳಿಗೆ ಸ್ಥಳಾವಕಾಶ ಕಲ್ಪಿಸಲಿದೆ. ಟಿಇಎಂಐಸಿಓ ಮೋಟಾರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಈಗಾಗಲೇ ಪಾರ್ಕ್‍ನಲ್ಲಿ ಕಾರ್ಖಾನೆ ನಿರ್ಮಾಣ ಕಾರ್ಯ ಪ್ರಾರಂಭಿಸಿದೆ.
ಬೆಳಗಾವಿ: ರಾಜ್ಯದಲ್ಲಿ ತಾರಕಕ್ಕೇರುತ್ತಿರುವ ಹಿಜಬ್-ಕೇಸರಿ ವಿವಾದವನ್ನು ತಕ್ಷಣವೇ ತಣ್ಣಗಾಗಿಸುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಲಾ-ಕಾಲೇಜುಗಳಲ್ಲಿ ಬಣ್ಣ, ಬಣ್ಣಗಳ ಮಧ್ಯೆ ಗಲಾಟೆ ಪ್ರಾರಂಭವಾಗಿದೆ. ಕೇಸರಿ ಹಾಗೂ ಅದರ ವಿರುದ್ಧ ಹಲವು ಬಣ್ಣಗಳ ಮಧ್ಯೆ ಘರ್ಷಣೆ ನಡೆಯುತ್ತಿದೆ. ಶಿಕ್ಷಣ ರಂಗದಲ್ಲಿ ಬಣ್ಣ, ಬಣ್ಣಗಳ ಮಧ್ಯೆ ಘರ್ಷಣೆ ನಡೆಯುತ್ತಿದೆ. ಈ ಘರ್ಷಣೆ ತಪ್ಪಿಸಲು ಸರ್ಕಾರ, ಶಾಲಾ ಆಡಳಿತ ಮಂಡಳಿ ಮುಂದಾಗಬೇಕು. ಈ ವಿವಾದ ರಾಜಕೀಯ ಆಗಿದೆ ಎಂದಿದ್ದಾರೆ. ಇದನ್ನೂ ಓದಿ: ಕೊರಗಜ್ಜನಿಗೆ ಅವಮಾನ ಮಾಡಿದ್ದ ಉಮರುಲ್ಲಾ ಬಾಷಿತ್ ಅರೆಸ್ಟ್
ಕಾಂಗ್ರೆಸ್ ಸರ್ಕಾರದ 60 ವರ್ಷಗಳ ಅವಧಿಯಲ್ಲಿ ಇಂಥ ಘಟನೆ ಎಂದೂ ನಡೆದಿಲ್ಲ. ಈಗ ಹೀಗೆ ಆಗಬಾರದಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ರೀತಿ ಆಗುತ್ತಿರುವುದು ದುರದೃಷ್ಟಕರ. ತಕ್ಷಣವೇ ವಿವಾದ ತಣ್ಣಗಾಗಿಸುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡಬೇಕು ಎಂದು ಸತೀಶ್ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಅನಧಿಕೃತ ಟೋಲ್ ರದ್ದಾಗದೆ ವಾಪಸ್ ಹೋಗಲ್ಲ- ಧರಣಿ ಕೂತ ʼಆಪತ್ಪಾಂಧವ ಆಸೀಫ್
ರಾಮನಗರ: ಬೆಳಗಾವಿಯಲ್ಲಿ ಪುಂಡಾಟಿಕೆ ನಡೆಸಿದ ಎಂಇಎಸ್ ಸಂಘಟನೆ ನಿಷೇಧಕ್ಕೆ ವಿವಿಧ ಸಂಘಟನೆಗಳು ಕರೆ ನೀಡಿದ ಕರ್ನಾಟಕ ಬಂದ್‌ನಿಂದ ರಾಜ್ಯದ ಜನತೆಗೆ ತೊಂದರೆ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ. 31ಕ್ಕೆ ಕರ್ನಾಟಕ ಬಂದ್ ಮಾಡುವುದಕ್ಕೆ ವಿವಿಧ ಸಂಘಟನೆಗಳು ಕರೆ ನೀಡಿದೆ. ಈ ಬಂದ್ ಕರೆಯಿಂದ ಮಹಾರಾಷ್ಟ್ರಕ್ಕೆ ತೊಂದರೆ ಇಲ್ಲ. ರಾಜ್ಯದ ಜನರಿಗೆ ತೊಂದರೆ ಆಗುತ್ತದೆ ಎಂದು ತಿಳಿಸಿದರು.
ಎಂಇಎಸ್ ಸೇರಿದಂತೆ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ರಾಜ್ಯ ಸರಕಾರ ಮುಲಾಜಿಲ್ಲದೆ ಮುಂದಾಗಬೇಕು. ಕಠಿಣ ಕ್ರಮ ತೆಗೆದುಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ. ಆದ್ದರಿಂದ ಕಾನೂನು ವ್ಯಾಪ್ತಿಯಲ್ಲಿ ಕ್ರಮಕ್ಕೆ ಸರ್ಕಾರ ಮೀನಮೇಷ ಇಲ್ಲದೇ ಮುಂದಾಗಬೇಕು. ಬಂದ್ ಘೋಷಣೆಯಿಂದ ನಮ್ಮ ಜನರಿಗೆ ತೊಂದರೆ ಆಗುತ್ತದೆ. ಸಣ್ಣಪುಟ್ಟ ವ್ಯಾಪಾರಿಗಳಿಗೆ, ಕೂಲಿ ಕೆಲಸದವರಿಗೆ ಆಗುವ ಕಷ್ಟದ ಬಗ್ಗೆ ಚಿಂತಿಸಬೇಕು. ಬಂದ್‌ಗೆ ಕರೆ ನೀಡಿದವರು ಕೂಡ ಈ ಬಗ್ಗೆ ಯೋಚಿಸಬೇಕು ಎಂದರು.
ಬಂದ್‌ನಿಂದ ಕನ್ನಡಿಗರಿಗೆ ಬಹಳ ಅನಾನುಕೂಲವೇ ಆಗುತ್ತದೆ. ಹೋರಾಟಗಾರರು ಸರ್ಕಾರದ ಮೇಲೆ ಒತ್ತಡ ಹೇರಬೇಕು. ಕನ್ನಡ ದ್ರೋಹಿಗಳನ್ನು ಹತ್ತಿಕ್ಕಲು ಏನು ಬೇಕೋ ಆ ಕ್ರಮ ಕೈಗೊಳ್ಳಲು ಒತ್ತಡ ಹೇರಬೇಕು ಎಂದು ಸಲಹೆ ಮಾಡಿದರು.
ಎಂಇಎಸ್ ಸಂಘಟನೆಯನ್ನು ಕಾನೂನಾತ್ಮಕವಾಗಿ ನಿಷೇಧ ಮಾಡಬೇಕು. ಸರಿಯಾದ ತೀರ್ಮಾನ ಮಾಡಬೇಕು. ಕೋರ್ಟ್ ಗೆ ಹೋಗಿ ತಡೆ ತರುವಂತೆ ನಿಷೇಧ ಹೇರಬಾರದು. ಸರ್ಕಾರ ಈ ಬಗ್ಗೆ ಯೋಚಿಸಿ ತೀರ್ಮಾನ ತೆಗೆದುಕೊಳ್ಳಲಿ ಎಂದು ಅವರು ಸರಕಾರಕ್ಕೆ ಕಿವಿಮಾತು ಹೇಳಿದರು. ಇದನ್ನೂ ಓದಿ: ಜಾತ್ರೆ ಮಾಡೋಕೆ ಅಧಿವೇಶನ ಮಾಡುವುದು ಬೇಡ: ಯತ್ನಾಳ್
ಪಕ್ಷದ ಯುವ ಜನತಾದಳದ ಅಧ್ಯಕ್ಷರಾದ ನಿಖಿಲ್ ಸಹ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬಂದ್‌ನಿಂದ ಏನು ಪ್ರಯೋಜನ ಎಂದು ಪ್ರಶ್ನೆ ಮಾಡಿದ್ದಾರೆ. ಹೋರಾಟಗಾರರು ಒಮ್ಮೆ ಈ ಬಗ್ಗೆ ಆಲೋಚನೆ ಮಾಡಲಿ ಎಂದರು.
ಬೆಳಗಾವಿ ಕಲಾಪ ವ್ಯರ್ಥವಾಗಿದೆ: ನಾಡಿನ ಜನ ಎದುರಿಸುತ್ತಿರುವ ಸಮಸ್ಯೆಗಳು ಸೇರಿದಂತೆ ಉತ್ತರ ಕರ್ನಾಟಕದ ಜನ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ನಡೆಯಲಿಲ್ಲ. ಸದನ ಕಲಾಪವನ್ನು ಸಂಪೂರ್ಣ ವ್ಯರ್ಥ ಮಾಡಿದ್ದಾರೆ. ಅದರಲ್ಲೂ ಮೊದಲ 5 ದಿನದ ಕಲಾಪ ಸಂಪೂರ್ಣ ವ್ಯರ್ಥವಾಗಿದೆ ಎಂದು ಕಿಡಿ ಕಾರಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಮತ್ತೆ ನೈಟ್ ಕರ್ಫ್ಯೂಗೆ ಚಿಂತನೆ
ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿಲ್ಲ. ಉತ್ತರ ಕರ್ನಾಟಕ ಸಮಸ್ಯೆ ಬಗ್ಗೆಯೂ ಚರ್ಚಿಸಿಲ್ಲ. ಸಂಡೂರು ತಹಶೀಲ್ದಾರ್, ಬೈರತಿ ಬಸವರಾಜ್ ಪ್ರಕರಣಗಳ ಬಗ್ಗೆ ವೃಥಾ ಚರ್ಚೆ ನಡೆಸಿದ್ದಾರೆ. ಯಾವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿತ್ತೋ ಅದಕ್ಕೆ ಪ್ರಾರಂಭಿಕ ಹಂತದಲ್ಲಿ ನೀಡಿಲ್ಲ. ಕೊನೆಯ ಎರಡು ದಿನವೆಂದು ಆಗ ಕೂಡ ಸರಿಯಾದ ಚರ್ಚೆ ನಡೆಯಲಿಲ್ಲ. ಇದನ್ನೂ ಓದಿ: ವಾಜಪೇಯಿ ಜನ್ಮ ದಿನಾಚರಣೆ ಆಚರಿಸಿದ ರಮೇಶ್ ಜಾರಕಿಹೊಳಿ
ಧಾರವಾಡ: ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ವಿತರಣೆ ವಿಚಾರವಾಗಿ ಅಖಿಲ ಭಾರತ ಸಸ್ಯಹಾರಿ ಒಕ್ಕೂಟದ ಪ್ರಧಾನ ಸಂಚಾಲಕರಾಗಿರುವ ದಯಾನಂದ ಸ್ವಾಮೀಜಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಮೊಟ್ಟೆ ತಿನ್ನಿಸುವ ಕೆಲಸ ಪ್ರಾರಂಭಿಸಿದೆ, ಸಸ್ಯಹಾರಿ ಧಾರ್ಮಿಯರ ಆಗ್ರಹಕ್ಕೆ ಸ್ಪಂದಿಸುತ್ತಿಲ್ಲ ಎಂದು ಹೇಳಿದರು. ನಾಡಿನ ಪೂಜ್ಯರು, ಗಣ್ಯರೆಲ್ಲ ಬೇಡಿಕೊಂಡರೂ ಸರ್ಕಾರ ಕಿವುಡಾಗಿದೆ. ಸಸ್ಯಹಾರಿ ಧರ್ಮಿಯರ ಮಾತುಗಳಿಗೆ ಕಿಂಚಿತ್ತು ಬೆಲೆ ಕೊಡುತ್ತಿಲ್ಲ ಎಂದ ಕಿಡಿಕಾರಿದರು. ಇದನ್ನೂ ಓದಿ: ಒಬ್ಬ ಕ್ರಿಮಿನಲ್‍ನ ರಕ್ಷಿಸುತ್ತಿದ್ದೀರಾ – ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಕಿಡಿ
ವಿದ್ಯಾ ದೇಗುಲಗಳನ್ನು ಮಿಲ್ಟ್ರಿ ಹೋಟೆಲ್ ಮಾಡಬೇಡಿ, ಮೊಟ್ಟೆಗೆ ಬದಲಾಗಿ ಅನೇಕ ಸಸ್ಯಹಾರಿ ಪೌಷ್ಟಿಕಾಂಶ ಪದಾರ್ಥಗಳಿವೆ, ಅವುಗಳನ್ನು ಮಕ್ಕಳಿಗೆ ನೀಡಬೇಕು. ಈ ಕೂಡಲೇ ಸರ್ಕಾರ ಮೊಟ್ಟೆ ವಿತರಣೆ ಕೈ ಬಿಡಬೇಕು, ಇಲ್ಲದಿದ್ದಲ್ಲಿ ಸಸ್ಯಾಹಾರಿ ಮಕ್ಕಳಿಗೆ ಪ್ರತ್ಯೇಕ ಶಾಲೆ ಮತ್ತು ನಾನ್ ವೆಜ್ ಶಾಲೆಗಳನ್ನು ತೆರೆಯಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಕೆಮಿಕಲ್ಸ್ ಫ್ಯಾಕ್ಟರಿ ಸ್ಫೋಟ – 2 ಸಾವು, 15 ಮಂದಿಗೆ ಗಾಯ
ಡಿ. 19ರೊಳಗೆ ಮೊಟ್ಟೆ ಆದೇಶ ಹಿಂಪಡೆಯಬೇಕು, ಇಲ್ಲದಿದ್ದಲ್ಲಿ 20ರಂದು ಬೆಳಗಾವಿ ಸುವರ್ಣ ಸೌಧ ಬಳಿ ಬೃಹತ್ ಸಂತ ಸಮಾವೇಶ ಮಾಡುತ್ತೇವೆ. ಸಹಸ್ರಾರು ಸಸ್ಯಹಾರಿಗಳು ಪಾಲ್ಗೊಳ್ಳುತ್ತಾರೆ. ಸುವರ್ಣ ಸೌಧಕ್ಕೆ ಘೇರಾವ್ ಹಾಕುತ್ತೇವೆ. ಜೈಲ್ ಭರೋ ಸಹ ಮಾಡಲು ಮುಂದಾಗುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖಗೊಂಡಿರುವ ಹಿನ್ನೆಲೆ ರಾಜ್ಯ ಸರ್ಕಾರ ನೈಟ್ ಕರ್ಫ್ಯೂವನ್ನು ಹಿಂಪಡೆದಿದೆ.
ಕೊರೊನಾ ಎರಡನೇ ಅಲೆಯ ವೇಳೆ ಜನರನ್ನು ಕೋವಿಡ್ ಸೋಂಕಿನಿಂದ ರಕ್ಷಿಸಲು ರಾಜ್ಯ ಸರ್ಕಾರ ಹಲವಾರು ನಿಯಮಗಳನ್ನು ಜಾರಿಗೊಳಿಸಿತ್ತು. ಇವುಗಳ ನಡುವೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ರಾಜ್ಯದಲ್ಲಿ ನೈರ್ಟ್ ಕರ್ಫ್ಯೂವನ್ನು ವಿಧಿಸಿತ್ತು. ಇದನ್ನೂ ಓದಿ: ಪುನೀತ್‍ಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕು: ಮುನಿರತ್ನ
ಇದೀಗ ಕೊರೊನಾ ಪ್ರಕರಣಗಳು ಇಳಿಕೆಯಾಗಿರುವ ಹಿನ್ನೆಲೆ ರಾಜ್ಯದಲ್ಲಿ ವಿಧಿಸಿದ್ದ ನೈಟ್ ಕರ್ಫ್ಯೂವನ್ನು ಸರ್ಕಾರ ಹಿಂಪಡೆದುಕೊಂಡಿದೆ. ಇದರ ಜೊತೆಗೆ ಕುದುರೆ ರೇಸ್ ನಡೆಸಲು ಸಹ ಸರ್ಕಾರ ಅನುಮತಿ ನೀಡಿದೆ. ಕುದುರೆ ರೇಸ್‍ನಲ್ಲಿ ಭಾಗವಹಿಸುವವರು 2 ಡೋಸ್ ಕೊರೊನಾ ಲಸಿಕೆ ಪಡೆದಿರಬೇಕೆಂದು ಸೂಚಿಸಿದೆ. ಇದನ್ನೂ ಓದಿ: ಅಪ್ಪು ಸದಾ ನಮ್ಮ ಹೃದಯದಲ್ಲಿ ನಗುತ್ತಿರುತ್ತಾರೆ – ಪುನೀತ್ ನೆನೆದು ಬಿಕ್ಕಿ, ಬಿಕ್ಕಿ ಅತ್ತ ಸೂರ್ಯ
ಸ್ಥಳಾವಕಾಶದ ಸಾಮರ್ಥ್ಯದಷ್ಟು ಕುದುರೆಗಳಿಗೆ ಮಾತ್ರ ರೇಸ್‍ಗೆ ಅನುಮತಿ ನೀಡಲಾಗಿದ್ದು, ಮಾಸ್ಕ್ ಧರಿಸುವುದು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಲವು ಕೋವಿಡ್ ನಿಯಮಗಳ ಪಾಲನೆಯನ್ನು ಕಡ್ಡಾಯಗೊಳಿಸಲಾಗಿದೆ. ಇದನ್ನೂ ಓದಿ: ಬಿಡದಿ ತೋಟದಲ್ಲಿ ಗೋಪೂಜೆ ನೆರವೇರಿಸಿದ ಹೆಚ್‍ಡಿಕೆ ದಂಪತಿ
ನವದೆಹಲಿ: ಪೆಟ್ರೋಲ್, ಡಿಸೇಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸುವ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ಹಲವು ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರದ ಹಾದಿಯನ್ನೇ ಹಿಡಿದಿದ್ದು, ಇಂಧನಗಳ ಮೇಲಿನ ವ್ಯಾಟ್ ಇಳಿಕೆ ಮಾಡುತ್ತಿವೆ. ಈ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾರ್ವಜನಿಕರ ದೀಪಾವಳಿ ಹಬ್ಬದ ಖುಷಿಯನ್ನು ದುಪ್ಪಟ್ಟುಗೊಳಿಸಿವೆ.
ಬುಧವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪೆಟ್ರೋಲ್ ಮೇಲೆ ಐದು ರೂಪಾಯಿ ಮತ್ತು ಡೀಸೆಲ್ ಮೇಲೆ ಹತ್ತು ರೂಪಾಯಿ ಅಬಕಾರಿ ಸುಂಕವನ್ನು ಇಳಿಸುತ್ತಿರುವುದಾಗಿ ಘೋಷಿಸಿತು. ಈ ನಿರ್ಧಾರದ ಬೆನ್ನಲ್ಲೇ ಹಲವು ರಾಜ್ಯಗಳು ವ್ಯಾಟ್ ಕಡಿತದ ನಿರ್ಧಾರ ಪ್ರಕಟಿಸುತ್ತಿವೆ. ಈವರೆಗೂ ಯಾವ್ಯಾವ ರಾಜ್ಯಗಳು ಎಷ್ಟೆಷ್ಟು ವ್ಯಾಟ್ ಕಡಿತಗೊಳಿಸಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.
ಗೋವಾ: ನರೇಂದ್ರ ಮೋದಿ ಅವರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸುವುದಾಗಿ ಘೋಷಿಸುವ ಮೂಲಕ ಎಲ್ಲಾ ಭಾರತೀಯರಿಗೆ ದೀಪಾವಳಿಯ ಉಡುಗೊರೆಯನ್ನು ನೀಡಿದ್ದಾರೆ. ಈ ಖುಷಿಯನ್ನು ಗೋವಾ ಸರ್ಕಾರ ಹೆಚ್ಚು ಮಾಡುತ್ತಿದ್ದು, ಪೆಟ್ರೋಲ್ ಮೇಲೆ 7 ರೂಪಾಯಿ ಮತ್ತು ಡೀಸೆಲ್ ಮೇಲೆ 7 ರೂಪಾಯಿ ವ್ಯಾಟ್ ಕಡಿಮೆ ಮಾಡಲಾಗುವುದು. ಇದರಿಂದಾಗಿ ಡೀಸೆಲ್ ಬೆಲೆಯನ್ನು ರೂ. 17 ರಷ್ಟು ಕಡಿಮೆ ಮಾಡುತ್ತಿದೆ. ಲೀಟರ್ ಮತ್ತು ಪೆಟ್ರೋಲ್ ಪ್ರತಿ ಲೀಟರ್‌ಗೆ 12 ರೂ. ಕಡಿಮೆಯಾಗಲಿದೆ ಎಂದು ಸಿಎಂ ಪ್ರಮೋದ್ ಸಾವಂತ್ ಟ್ವೀಟ್ ಮಾಡಿದ್ದಾರೆ. ಸ್ಥಳೀಯರಿಗೆ ಮಾತ್ರ ಅವಕಾಶ ನೀಡಲಾಗಿದೆ.
The Modi Govt. has given a great Diwali gift to all Indians, by announcing reduction in Excise Duty on Petrol and Diesel.
I thank the Hon’ble PM @narendramodi Ji as this decision shall give great relief to common man and help control inflation. 1/2
ಅಸ್ಸಾಂ: ಮೋದಿ ಟ್ವೀಟ್ ಮಾಡುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ, ತಮ್ಮ ರಾಜ್ಯ ಸರ್ಕಾರದ ನಿರ್ಧಾರವನ್ನು ಟ್ವಿಟರ್‌ನಲ್ಲಿ ಪ್ರಕಟಿಸಿದ್ದರು. ಪೆಟ್ರೋಲ್ ಮತ್ತು ಡಿಸೇಲ್ ಮೇಲೆ ಏಳು ರೂಪಾಯಿ ಕಡಿಮೆ ಮಾಡುತ್ತಿರುವುದಾಗಿ ಹೇಳಿದರು. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಿಂದ ಬೊಕ್ಕಸಕ್ಕೆ 2,100 ಕೋಟಿ ಆದಾಯ ನಷ್ಟ: ಸಿಎಂ
Heartening to learn Central Govt decision to reduce excise duty on petrol and diesel. In consonance with the decision of Honble PM @narendramodi ,I am pleased to announce that Assam Govt will also reduce VAT on petrol and diesel by Rs 7/- with immediate effect @nsitharaman
ಗುಜರಾತ್: ಪೆಟ್ರೋಲ್ ಡಿಸೇಲ್ ಬೆಲೆ ಇಳಿಕೆ ಮಾಡುವ ಸಂಬಂಧ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕಚೇರಿಯ ಹೇಳಿಕೆ ಬಿಡುಗಡೆ ಮಾಡಿದ್ದು, ಇದರ ಪ್ರಕಾರ ರಾಜ್ಯದಲ್ಲಿ ಪೆಟ್ರೋಲ್/ಡೀಸೆಲ್ ಮೇಲಿನ ವ್ಯಾಟ್ ಲೀಟರ್ ಗೆ 7 ರೂಪಾಯಿಗಳಷ್ಟು ಕಡಿಮೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದನ್ನೂ ಓದಿ: ಪುನೀತ್ ಭೇಟಿಯಾಗುವ ಸೌಭಾಗ್ಯ ನನಗೆ ಸಿಕ್ಕಿಲ್ಲ: ವಿಜಯ್ ಸೇತುಪತಿ
ತ್ರಿಪುರ: ನರೇಂದ್ರ ಮೋದಿ ಸರ್ಕಾರ ನಿರ್ಧಾರ ಸ್ವಾಗತಿಸಿದ ಸಿಎಂ ಬಿಪ್ಲಬ್ ಕುಮಾರ್ ದೇಬ್, ಕೇಂದ್ರದ ಹಾದಿಯಲ್ಲೆ ರಾಜ್ಯ ಸರ್ಕಾರವು ಇಂಧನಗಳ ಬೆಲೆ ಕಡಿಮೆ ಮಾಡಲಿದ್ದು ಏಳು ರೂಪಾಯಿ ವ್ಯಾಟ್ ಇಳಿಕೆ ಮಾಡುತ್ತಿದೆ ಎಂದು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ. ಸರ್ಕಾರದ ನಿರ್ಧಾರದ ಬಳಿಕ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್ ಗೆ ಕ್ರಮವಾಗಿ 98.33 ಮತ್ತು 85.63 ರೂಪಾಯಿಗೆ ಸಿಗಲಿದೆ ಎಂದು ತಿಳಿಸಿದ್ದಾರೆ.
ಮಣಿಪುರ: ಕೇಂದ್ರದ ಬಳಿಕ ಸರ್ಕಾರದ ನಿರ್ಧಾರವನ್ನು ಪ್ರಕಟಿಸಿದ ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರು, “ಈ ದೀಪಾವಳಿಯಂದು ಈ ರಾಷ್ಟ್ರದ ಜನರಿಗೆ ಉಡುಗೊರೆಯಾಗಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರವನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತಿದ್ದು, ರಾಜ್ಯ ಸರ್ಕಾರವೂ ಮಣಿಪುರದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ತಕ್ಷಣವೇ ಜಾರಿಗೆ ಬರುವಂತೆ ತಲಾ 7 ರೂಪಾಯಿಯಷ್ಟು ಕಡಿಮೆ ಮಾಡುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮಾದಪ್ಪನ ಬೆಟ್ಟದಲ್ಲಿ ಸರಳವಾಗಿ ನಡೆದ ಹಾಲರುವೆ ಉತ್ಸವ
Heartily welcome PM @narendramodi Ji’s decision to reduce excise duty on petrol & diesel as a gift to the people of this Nation on this Diwali.
I’m also please to announce that the Govt. of Manipur will also reduce VAT on petrol and diesel each by Rs 7/- with immediate effect.
ಕರ್ನಾಟಕ: ಕೇಂದ್ರ ಸರ್ಕಾರದ ನಿರ್ಧಾರದ ಬಳಿಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೂಡಾ ಪೆಟ್ರೋಲ್ ಡಿಸೇಲ್ ಮೇಲೆ ಏಳು ರೂಪಾಯಿ ವ್ಯಾಟ್ ಕಡಿತಗೊಳಿಸುವುದಾಗಿ ಘೋಷಿಸಿದ್ದು, ಇದರಿಂದ ಸರ್ಕಾರದ ಬೊಕ್ಕಸಕ್ಕೆ 2,100 ಕೋಟಿ ರೂಪಾಯಿಗಳ ನಷ್ಟವಾಗಲಿದೆ ಎಂದು ಹೇಳಿದ್ದಾರೆ.
Our PM Shri @narendramodi ji has given the nation a wonderful Deepawali gift by reducing the burden of fuel prices.
To add to this festive spirit, Karnataka Government too will reduce Rs 7 on both petrol and diesel prices from tomorrow evening.
1/2
ಹರ್ಯಾಣ: ಹರ್ಯಾಣ ಸರ್ಕಾರ ವಿಶೇಷ ಎನ್ನುವಂತ ನಿರ್ಧಾರ ಪ್ರಕಟಿಸಿದೆ. ಎಲ್ಲ ರಾಜ್ಯಗಳು ಏಳು ರೂಪಾಯಿಯಷ್ಟು ವ್ಯಾಟ್ ಕಡಿಮೆ ಮಾಡಿದರೆ ಸಿಎಂ ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಸರ್ಕಾರ ಪೆಟ್ರೋಲ್ ಡಿಸೇಲ್ ಮೇಲೆ 12 ರೂಪಾಯಿ ಕಡಿಮೆ ಮಾಡಿದೆ.
ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಯನ್ನು ಕಡಿತಗೊಳಿಸಿದ್ದು, ಇಂದಿನಿಂದ ರಾಜ್ಯದಲ್ಲಿ ಹೊಸ ದರ ಜಾರಿಯಾಗಲಿದೆ.
ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಯನ್ನು ಕಡಿತಗೊಳಿಸಿತ್ತು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರವೂ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ತಲಾ ಏಳು ರೂ. ಗಳಷ್ಟು ಕಡಿಮೆ ಮಾಡಿತ್ತು. ಈ ವಿಷಯವನ್ನು ಟ್ವೀಟ್ ಮಾಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಾಳೆ ಸಂಜೆಯಿಂದ ಈ ದರ ಜಾರಿಯಾಗಲಿದೆ ಎಂದು ತಿಳಿಸಿದ್ದರು. ಇದನ್ನೂ ಓದಿ: ರಾಜ್ಯ ಸರ್ಕಾರದಿಂದ 7 ರೂ. ಗಳಷ್ಟು ಪೆಟ್ರೋಲ್, ಡೀಸೆಲ್ ತೆರಿಗೆ ಇಳಿಕೆ- ನಾಳೆ ಸಂಜೆಯಿಂದ ಜಾರಿಗೆ
ಕರ್ನಾಟಕ ರಾಜ್ಯ ಸರಕಾರವು ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ದರಿಸಿದೆ.
ಈ ನಮ್ಮ ನಿರ್ದಾರದಿಂದ ರಾಜ್ಯ ಸರಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ.
2/3
ಅದರಂತೆ ರಾಜ್ಯ ಸರ್ಕಾರ ಸೂಚಿಸಿರುವಂತೆ ಇಂದಿನಿಂದ ಪೆಟ್ರೋಲ್ ಮತ್ತು ಡಿಸೇಲ್ ಹೊಸ ದರ ಜಾರಿಯಾಗಿದೆ. ಇಂದು ಸಂಜೆಯಿಂದ ಪೆಟ್ರೋಲ್ ಬೆಲೆಯಲ್ಲಿ 7 ರೂ. ಕಡಿತಗೊಳ್ಳಲಿದ್ದು, 100.64 ರೂ. ಆಗಲಿದೆ.
ಬೆಂಗಳೂರು: ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಹಾಗೂ ಆಕೆಯ ಮಕ್ಕಳ ಆತ್ಮಹತ್ಯೆ ಘಟನೆ ಹೃದಯ ವಿದ್ರಾವಕ ಎಂದು ನೊಂದು ನುಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಈ ಸಾವುಗಳಿಗೆ ಸರ್ಕಾರವೇ ನೇರ ಕಾರಣ ಎಂದು ವಾಗ್ದಾಳಿ ನಡೆಸಿದ್ದಾರೆ.
ಬಿಡದಿಯ ತೋಟದಲ್ಲಿ ಇಂದು ಬೆಳಗ್ಗೆ ಆರಂಭವಾದ ಎರಡನೇ ಹಂತದ ‘ಜನತಾ ಪರ್ವ’ ಹಾಗೂ ‘ಮಿಷನ್ 123’ ಕಾರ್ಯಾಗಾರಕ್ಕೆ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕರ್ತವ್ಯದಲ್ಲಿ ಇದ್ದಾಗಲೇ ಕೊರೊನಾ ಮಹಾಮಾರಿಗೆ ತುತ್ತಾಗಿ ಸಾವನ್ನಪ್ಪಿದ ಸಾರಿಗೆ ನೌಕರನ ಕುಟುಂಬಕ್ಕೆ ಸರ್ಕಾರ ಅರು ತಿಂಗಳ ಒಳಗಾಗಿ ಅನುಕಂಪದ ಉದ್ಯೋಗ ನೀಡಿ ಪರಿಹಾರದ ಹಣವನ್ನು ನೀಡಬೇಕು. ಅಲ್ಲದೆ ಕೋವಿಡ್ ವಾರಿಯರ್ಸ್‍ಗಳಿಗೆ ನೀಡುವ ಪರಿಹಾರವನ್ನು ಕೂಡ ನೀಡಿಲ್ಲ. ಗಂಡನನ್ನು ಕಳೆದುಕೊಂಡ ಆ ಹೆಣ್ಣು ಮಗಳಿಗೆ ಕೆಲಸವೂ ಕೊಟ್ಟಿಲ್ಲ ಎಂದು ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡರು. ಇದನ್ನೂ ಓದಿ: ಶಾಸಕರ ಸಮಸ್ಯೆ ಕೇಳಲು ನನ್ನ ಮನೆ ಬಾಗಿಲು ಸದಾ ತೆರೆದಿದೆ: ಹೆಚ್ಡಿಕೆ
ಈ ಬಗ್ಗೆ ಸರಣಿ ಟ್ವೀಟ್ ಮಾಡಿದ್ದ ಕುಮಾರಸ್ವಾಮಿ ಅವರು, ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.
ಟ್ವೀಟ್‍ನಲ್ಲಿ ಏನಿದೆ?
ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಮತ್ತು ಮಕ್ಕಳ ಆತ್ಮಹತ್ಯೆ ಪ್ರಕರಣ ಹೃದಯ ವಿದ್ರಾವಕ. ಈ ಘಟನೆಯನ್ನು ಸರ್ಕಾರ ತಡೆಯಬಹುದಿತ್ತು. ಮೊದಲೇ ಆ ಕುಟುಂಬಕ್ಕೆ ಪರಿಹಾರ, ಅನುಕಂಪದ ಉದ್ಯೋಗ ನೀಡಿದ್ದಿದ್ದರೆ ಮೂರು ಅಮೂಲ್ಯ ಜೀವಗಳು ಉಳಿಯುತ್ತಿದ್ದವು. ಇದು ಕೊಲೆಗಡುಕ ಸರ್ಕಾರ.
ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಮತ್ತು ಮಕ್ಕಳ ಆತ್ಮಹತ್ಯೆ ಪ್ರಕರಣ ಹೃದಯ ವಿದ್ರಾವಕ. ಈ ಘಟನೆಯನ್ನು ಸರಕಾರ ತಡೆಯಬಹುದಿತ್ತು. ಮೊದಲೇ ಆ ಕುಟುಂಬಕ್ಕೆ ಪರಿಹಾರ, ಅನುಕಂಪದ ಉದ್ಯೋಗ ನೀಡಿದ್ದಿದ್ದರೆ ಮೂರು ಅಮೂಲ್ಯ ಜೀವಗಳು ಉಳಿಯುತ್ತಿದ್ದವು. ಇದು 'ಕೊಲೆಗೆಡುಕ ಸರಕಾರ'.1/2
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 3, 2021
ಎಲ್ಲಾ ದುಂದು ವೆಚ್ಚ, ಲೂಟಿ ನಿಲ್ಲಿಸಿ ಸರ್ಕಾರ ಇಂತವರ ನೆರವಿಗೆ ಧಾವಿಸಬೇಕಿತ್ತು. ಇಂತಹ ಪ್ರಕರಣಗಳ ಇತ್ಯರ್ಥಕ್ಕೆ ಮೊದಲ ಆದ್ಯತೆ ನೀಡಬೇಕಿತ್ತು. ರಾಜ್ಯ ಸರ್ಕಾರ ಪೂರ್ಣ ವಿಫಲವಾಗಿದೆ ಹಾಗೂ ಅಧಿಕಾರಿಗಳ ಹೊಣೆಗೇಡಿತನ ಎದ್ದು ಕಾಣುತ್ತದೆ. ಇದನ್ನೂ ಓದಿ: ಮಮತಾಗೆ ಭರ್ಜರಿ ಜಯ – 2024ರಲ್ಲಿ ದೆಹಲಿಯಲ್ಲಿ ನಮ್ಮದೇ ಸರ್ಕಾರ ಎಂದ ಟಿಎಂಸಿ
ಕೂಡಲೇ ಸಂಬಂಧಪಟ್ಟ ಎಲ್ಲ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಸ್ವತಃ ಮುಖ್ಯಮಂತ್ರಿಗಳೇ ಈ ಬಗ್ಗೆ ಗಮನ ಹರಿಸಿ ಕೊರೊನ ಸೋಂಕಿಗೆ ಬಲಿಯಾದ ಸಾರಿಗೆ ನೌಕರರ ಕುಟುಂಬಗಳಿಗೆ ನೆರವುನೀಡಿ, ಮುಂದಿನ ಅನಾಹುತಗಳನ್ನು ತಪ್ಪಿಸಬೇಕು ಎಂದು ನಾನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯ ಮಾಡುತ್ತೇನೆ.