Tag: State Highway

  • ರಾಜ್ಯ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ: ಎನ್. ಚಲುವರಾಯಸ್ವಾಮಿ

    ರಾಜ್ಯ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ: ಎನ್. ಚಲುವರಾಯಸ್ವಾಮಿ

    ಬೆಂಗಳೂರು: ಮಂಡ್ಯ (Mandya) ಜಿಲ್ಲೆ ಮೂಲಕ ಹಾದು ಹೋಗುವ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ (National Highway) ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ (N Chaluvarayaswamy) ಸೂಚಿಸಿದರು.

    ವಿಕಾಸಸೌಧ ಕಚೇರಿಯಲ್ಲಿಂದು ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿ (State Highway) ಪ್ರಾಧಿಕಾರದ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರು ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತವಾಗಿ ಮುಕ್ತಾಯಗೊಳಿಸುವಂತೆ ತಿಳಿಸಿದರು. ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಬೆಳ್ಳೂರು ಕ್ರಾಸ್, ನಾಗಮಂಗಲ, ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ ನಡೆಯಬೇಕಿರುವ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸುವಂತೆ ಹೇಳಿದರು.ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ – ಬೆಂಗಳೂರಿನ ಈ ರಸ್ತೆಯಲ್ಲಿ 45 ದಿನ ಸಂಚಾರ ಬಂದ್

    ಕಾಮಗಾರಿಗೆ ಅಗತ್ಯ ವಿರುವ ಹೆಚ್ಚುವರಿ ಭೂಮಿಯ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು. ರಾಷ್ಟ್ರೀಯ ಹೆದ್ದಾರಿ 150 ಎಯಲ್ಲಿ ಕೆ.ಬಿ ಕ್ರಾಸ್‌ನಿಂದ ಚುಂಚನಹಳ್ಳಿ ರಸ್ತೆ ವಿಸ್ತರಣೆ, ಮೇಲ್ಸೇತುವೆ ಕಾಮಗಾರಿಯನ್ನು ದೂರದೃಷ್ಟಿ ಚಿಂತನೆಯೊಂದಿಗೆ ರೂಪಿಸಿ ಅನುಷ್ಠಾನ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು. ಇದನ್ನೂ ಓದಿ: ರಾಜ್ಯದ 15 ಜಿಲ್ಲೆಗಳ 252 ಗ್ರಾ.ಪಂ.ಗಳಲ್ಲಿ ʻನೀರಿದ್ದರೆ ನಾಳೆʼ ಯೋಜನೆ ಅನುಷ್ಠಾನ; ನಟ ವಸಿಷ್ಠ ಸಿಂಹ ರಾಯಭಾರಿ

    ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇ ಮತ್ತು ಅದಕ್ಕೆ ಸಂಪರ್ಕಿತ ಸರ್ವಿಸ್ ರಸ್ತೆಗಳಲ್ಲಿ ಬಾಕಿಯಿರುವ ಕಾಮಗಾರಿಗಳನ್ನು, ಹಾಗೆಯೇ ಬೆಂಗಳೂರಿನಿಂದ ಹಾಸನ, ಮೈಸೂರು-ಕೆ.ಆರ್. ಪೇಟೆ ಮತ್ತು ಮೈಸೂರು-ನಾಗಮಂಗಲ ರಸ್ತೆಗಳಿಗೆ ಸಂಬಂಧಿಸಿದ ಭೂ ಸ್ವಾಧೀನ ಪ್ರಕ್ರಿಯೆ ಮತ್ತು ಇತರ ಕಾನೂನು ಕಾರ್ಯವಿಧಾನಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಪ್ರಾಣಿ ಸಂಪತ್ತನ್ನು ಕೊಲ್ಲುವವರು ಎಷ್ಟೇ ದೊಡ್ಡವರಾಗಿದ್ರೂ ಕಠಿಣ ಕ್ರಮ: ಸಿದ್ದರಾಮಯ್ಯ

    ಹಾಗೆಯೇ, ಮಂಡ್ಯ ಜಿಲ್ಲೆಯಲ್ಲಿ ಹಾದುಹೋಗುವ ಎಲ್ಲಾ ರಸ್ತೆಗಳ ಗುಂಡಿಗಳನ್ನು ಮುಚ್ಚುವುದು ಮತ್ತು ಬಾಕಿ ಉಳಿದ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ತಿಳಿಸಿದರು. ಇದನ್ನೂ ಓದಿ: ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ ಮಾಡಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಸರ್ಕಾರ ಚೆಲ್ಲಾಟ: ನಿಖಿಲ್

  • ದೋಸ್ತಿ ಕಾರ್ಯಕರ್ತರ ನಡುವೆ ಕ್ರೆಡಿಟ್ ಫೈಟ್

    ದೋಸ್ತಿ ಕಾರ್ಯಕರ್ತರ ನಡುವೆ ಕ್ರೆಡಿಟ್ ಫೈಟ್

    ಮಂಡ್ಯ: ಕಳೆದ ಹಲವು ದಿನಗಳಿಂದ ಒಂದಲ್ಲ ಒಂದು ಕಾರಣಕ್ಕೆ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಹಾಗೂ ರಾಜ್ಯ ಕೃಷಿ ಸಚಿವ ಚಲುವರಾಯಸ್ವಾಮಿ ನಡುವೆ ಟಾಕ್‌ಫೈಟ್ ನಡೆಯುತ್ತಲೆ ಇದೆ.

    ಮುಂದುವರಿದು ಅಭಿವೃದ್ಧಿ ಕಾರ್ಯಕ್ರಮಗಳ ಕ್ರೆಡಿಟ್ ಪಡೆಯಲು ಪೈಪೋಟಿಗೆ ಬಿದ್ದಿದ್ದ ಉಭಯ ನಾಯಕರು ಶ್ರೀರಂಗಪಟ್ಟಣ-ಜೇವರ್ಗಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಎರಡೆರಡು ಬಾರಿ ಗುದ್ದಲಿ ಪೂಜೆ ಮಾಡಿ ಸುದ್ದಿಯಾಗಿದ್ರು. ಆದ್ರೀಗ ಕ್ರೆಡಿಟ್ ವಾರ್ ಮೈತ್ರಿ ನಾಯಕರು ನಡುವೆ ಶುರುವಾಗಿದ್ದು. ರಾಜ್ಯ ಹೆದ್ದಾರಿ ಮೇಲ್ದರ್ಜೆಗೇರಿಸುವ ವಿಚಾರದಲ್ಲಿ ಮಾಜಿ ಸಚಿವ ಕೆ.ಸಿ ನಾರಾಯಣಗೌಡ (KC Narayanagowda) ಹಾಗೂ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಬೆಂಬಲಿಗರೂ ಜಟಾಪಟಿ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬಿಜೆಪಿ, ಆರ್‌ಎಸ್‌ಎಸ್ ವಶಪಡಿಸಿಕೊಂಡಿರುವ ಭಾರತದ ವಿರುದ್ಧ ಹೋರಾಟ: ರಾಹುಲ್‌ ಗಾಂಧಿ

    ಅಂದಹಾಗೇ ಕೆಸಿಎನ್ ಹಾಗೂ ಹೆಚ್‌ಡಿಕೆ ಬೆಂಬಲಿಗರ ನಡುವಿನ ಈ ಕ್ರೆಡಿಟ್ ಫೈಟ್‌ಗೆ ಕಾರಣವಾಗಿರೋದು ಶ್ರೀರಂಗಪಟ್ಟಣ-ಅರಸೀಕೆರೆ ರಾಜ್ಯ ಹೆದ್ದಾರಿ. ಈ ರಾಜ್ಯ ಹೆದ್ದಾರಿಯನ್ನ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸುವಂತೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಹೆಚ್‌.ಡಿ ಕುಮಾರಸ್ವಾಮಿ ಮನವಿ ಸಲ್ಲಿಸಿದ್ರು. ಈ ಬಗ್ಗೆ ಜೆಡಿಎಸ್ ಸೋಷಿಯಲ್ ಮೀಡಿಯಾಗಳಲ್ಲೂ ಪೋಸ್ಟ್ ಹಾಕಲಾಗಿತ್ತು. ಇದರಿಂದ ಕೆರಳಿ ಕೆಂಡವಾದ ಕೆ.ಸಿ ನಾರಾಯಣಗೌಡ ಬೆಂಬಲಿಗರು, ಹೆಚ್ಡಿಕೆಗೂ ಮೊದಲೆ ಹೆದ್ದಾರಿ ಅಭಿವೃದ್ಧಿಗೆ ನಾರಾಯಣಗೌಡರು ನಿತಿನ್ ಗಡ್ಕರಿ ಬಳಿ ಚರ್ಚಿಸಿದ್ದಾರೆ. ಭಾರತ್ ಮಾಲಾ ಯೋಜನೆಯಡಿ ಶ್ರೀರಂಗಪಟ್ಟಣ-ಅರಸೀಕೆರೆ ರಸ್ತೆಯನ್ನ ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸಲು ನೋಂದಣಿ ಸಹ ಆಗಿದೆ. ಹೆದ್ದಾರಿ ಅಭಿವೃದ್ಧಿ ವಿಚಾರದಲ್ಲಿ ನಾರಾಯಣಗೌಡರ ಪಾತ್ರ ಮಹತ್ವದ್ದಾಗಿದೆ ಎಂದು ಈ ಹಿಂದೆ ನಾರಾಯಣಗೌಡರು ನಿತಿನ್ ಗಡ್ಕರಿ ಭೇಟಿಯಾಗಿ ಮನವಿ ಸಲ್ಲಿಸಿದ್ದ ದಾಖಲೆ ಬಿಡುಗಡೆ ಮಾಡಿದ್ದಾರೆ.

    ಒಟ್ಟಾರೆ ಅಭಿವೃದ್ಧಿ ಕಾರ್ಯಕ್ರಮಗಳ ಕ್ರೆಡಿಟ್ ಪಡೆಯಲು ಮಂಡ್ಯದ ಜನಪ್ರತಿನಿಧಿಗಳು ತಾ ಮುಂದು ನಾ ಮುಂದು ಎನ್ನುತ್ತಿದ್ದು. ಮಂಡ್ಯ ಜನ ಮಾತ್ರ ಯಾರಾದ್ರು ಹೆಸರು ತಗೋಳ್ಳಿ ಅಭಿವೃದ್ಧಿ ಮಾಡಿ ಅಂತಿದ್ದಾರೆ. ಇದನ್ನೂ ಓದಿ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ – ಹರಿಯಾಣದ ಬಿಜೆಪಿ ಅಧ್ಯಕ್ಷ, ಗಾಯಕನ ವಿರುದ್ಧ ಎಫ್‌ಐಆರ್‌

  • PUBLiC TV Impact | ಕೃಷಿ ಹೊಂಡದಂತಿದ್ದ ಅಂತರರಾಜ್ಯ ರಸ್ತೆಗೆ ಡಾಂಬರೀಕರಣ ಭಾಗ್ಯ

    PUBLiC TV Impact | ಕೃಷಿ ಹೊಂಡದಂತಿದ್ದ ಅಂತರರಾಜ್ಯ ರಸ್ತೆಗೆ ಡಾಂಬರೀಕರಣ ಭಾಗ್ಯ

    ಕೋಲಾರ: ಕೃಷಿ ಹೊಂಡದಂತಿದ್ದ ರಸ್ತೆಗೆ ಡಾಂಬರೀಕರಣ ಭಾಗ್ಯ ಒದಗಿ ಬಂದಿದ್ದು, ಪಬ್ಲಿಕ್ ಟಿವಿ (PUBLiC TV) ವರದಿಯನ್ನು ಬಿತ್ತರಿಸಿದ ಬೆನ್ನಲ್ಲೇ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.

    ಒಂದು ವರ್ಷದಿಂದ ಕೋಲಾರ-ಬೇತಮಂಗಲ (Kolar-Betamangala) ಮುಖ್ಯರಸ್ತೆಗೆ ಡಾಂಬರು ಇಲ್ಲದೇ ಜನರು ಪರದಾಡುವ ಪರಿಸ್ಥಿತಿ ಉಂಟಾಗಿತ್ತು. ಈ ಸಮಸ್ಯೆಯ ಕುರಿತು ಪಬ್ಲಿಕ್ ಟಿವಿ ಸುದ್ದಿಯನ್ನು ಬಿತ್ತರಿಸಿತ್ತು.ಇದನ್ನೂ ಓದಿ: ಜಮಾತ್-ಎ-ಇಸ್ಲಾಮಿ ಬೆಂಬಲದೊಂದಿಗೆ ಪ್ರಿಯಾಂಕಾ ವಯನಾಡಿನಲ್ಲಿ ಸ್ಪರ್ಧೆ – ಪಿಣರಾಯಿ ವಿಜಯನ್‌

    ಕೋಲಾರ ಮತ್ತು ವಿಕೋಟಕ್ಕೆ ಅಂತರರಾಜ್ಯ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ಸಂಪೂರ್ಣ ಹಾಳಾಗಿ ಕೃಷಿ ಹೊಂಡದಂತಾಗಿತ್ತು. ರಸ್ತೆಯಲ್ಲಿ ದೊಡ್ಡ ದೊಡ್ಡ ಕಂದಕಗಳು ನಿರ್ಮಾಣವಾಗಿ ದ್ವಿಚಕ್ರ ವಾಹನಗಳು, ಕಾರು, ಬಸ್ ಸವಾರರು ಪ್ರತಿದಿನ ಈ ರಸ್ತೆಯಲ್ಲಿ ಓಡಾಡಲು ನರಕಯಾತನೆ ಅನುಭವಿಸುತ್ತಿದ್ದರು.

    ಮಳೆ ಬಂದರೆ ರಸ್ತೆಗಳು ಕುಂಟೆಗಳಾಗಿ ಪರಿವರ್ತನೆಯಾಗುತ್ತಿತ್ತು. ಈ ಬಗ್ಗೆ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ರೀತಿಯ ಪ್ರಯೋಜನವಾಗಿರಲಿಲ್ಲ. ಇದರಿಂದ ಕಳೆದ ಅ.28 ರಂದು ಸ್ಥಳೀಯ ನಿವಾಸಿಗಳು ರಸ್ತೆ ನಿರ್ಮಾಣಕ್ಕಾಗಿ ಚಂದಾ ಪಡೆದು ಸ್ವತಃ ರಸ್ತೆ ನಿರ್ಮಿಸುವುದಾಗಿ ಅಣುಕು ಪ್ರದರ್ಶನ ಮಾಡಿ, ಸ್ಥಳೀಯ ಜನಪ್ರತಿನಿಧಿಗಳಿಗೆ ಮತ್ತು ಅಧಿಕಾರಿಗಳಿಗೆ ಛೀಮಾರಿ ಹಾಕಿದರು.

    ಪಬ್ಲಿಕ್ ಟಿವಿಯಲ್ಲಿ ವರದಿ ಪ್ರಸಾರವಾದ ಹತ್ತು ದಿನದಲ್ಲೇ ರಸ್ತೆ ಕಾಮಗಾರಿ ಆರಂಭವಾಗಿದೆ. ಎಚ್ಚೆತ್ತ ಅಧಿಕಾರಿಗಳು ಕಳೆದ ಹಲವು ವರ್ಷಗಳಿಂದ ಹಾಳಾಗಿದ್ದ ರಾಜ್ಯ ಹೆದ್ದಾರಿಗೆ ಡಾಂಬರೀಕರಣ ಮಾಡಿಸಿದ್ದಾರೆ. ಇದರಿಂದಾಗಿ ಜನರು ಸಂತಸ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಮುಂದಿನ ವರ್ಷದ ಚುನಾವಣೆಯಲ್ಲಿ ಕೆನಡಾ ಪ್ರಧಾನಿ ಟ್ರುಡೋಗೆ ಸೋಲು : ಮಸ್ಕ್‌ ಭವಿಷ್ಯ

  • ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ – ತಪ್ಪಿದ ಭಾರೀ ದುರಂತ

    ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ – ತಪ್ಪಿದ ಭಾರೀ ದುರಂತ

    ಯಾದಗಿರಿ: ಅಡುಗೆ ಅನಿಲದ‌ ಸಿಲಿಂಡರ್‌ಗಳನ್ನ (LPG Cylinder) ಹೊತ್ತು ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ ಪರಿಣಾಮ ನೂರಾರು ಸಿಲಿಂಡರ್ ಗಳು‌ ರಸ್ತೆ ಪಕ್ಕದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದ ಬಳಿಯ ಹುನಗುಂದ- ಸುರಪುರ ರಾಜ್ಯ ಹೆದ್ದಾರಿಯಲ್ಲಿ (Hunagunda Surapua State Highway) ನಡೆದಿದೆ.

    ಲಾರಿ ಪಲ್ಟಿಹೊಡೆಯುತ್ತಿದ್ದಂತೆ, ಸಿಲಿಂಡರ್‌ಗಳು ಗೋಲಿಗಳಂತೆ ಉರುಳಿಹೋಗಿವೆ. ಅದೃಷ್ಟವಶಾತ್ ಭಾರೀ ದುರಂತ‌ವೊಂದು ತಪ್ಪಿದೆ. ಘಟನೆಯಲ್ಲಿ ಲಾರಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳೀಯ‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಖಾಸಗಿ ಕಂಪನಿಗಳು ಸ್ಥಳೀಯರಿಗೆ ಉದ್ಯೋಗಾವಕಾಶ ಕೊಡದಿದ್ದರೆ ಲೈಸೆನ್ಸ್ ರದ್ದು; ಸಚಿವ ಪರಮೇಶ್ವರ್ ಎಚ್ಚರಿಕೆ

    ಲಾರಿ ಪಲ್ಟಿಯಾದ ಸಂದರ್ಭದಲ್ಲಿ ನೂರಾರು ಅಡುಗೆ ಅನಿಲ ಸಿಲಿಂಡರ್ ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ದೃಶ್ಯಗಳನ್ನ ನೋಡಿ ಜನರು ಕೆಲಕಾಲ ಭಯಭೀತರಾಗಿದ್ರು. ಕೆಂಭಾವಿ ಪಟ್ಟಣದ ಶ್ರೀನಿಧಿ ಗ್ಯಾಸ್ ಏಜೆನ್ಸಿಗೆ ಸೇರಿದ ಸಿಲಿಂಡರ್ ತೆಗೆದುಕೊಂಡು ಹೋಗುತ್ತಿದ್ದಾಗ ಲಾರಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. ಕೆಂಭಾವಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ರಿಲಯನ್ಸ್ ಫೌಂಡೇಶನ್ ನಿಂದ 5,000 ಪದವಿ ವಿದ್ಯಾರ್ಥಿಗಳಿಗೆ ತಲಾ 2 ಲಕ್ಷ ವಿದ್ಯಾರ್ಥಿವೇತನ!

  • ಮೂರು ದಿನದಿಂದ ರಸ್ತೆ ಮಧ್ಯದಲ್ಲೇ ಕೆಟ್ಟು ನಿಂತ ಬಸ್ – ವಾಹನ ಸವಾರರ ಪರದಾಟ

    ಮೂರು ದಿನದಿಂದ ರಸ್ತೆ ಮಧ್ಯದಲ್ಲೇ ಕೆಟ್ಟು ನಿಂತ ಬಸ್ – ವಾಹನ ಸವಾರರ ಪರದಾಟ

    ಮಡಿಕೇರಿ: ಸಾರಿಗೆ ಬಸ್ ಕಳೆದ ಮೂರು ದಿನಗಳ ಹಿಂದೆ ರಸ್ತೆ ಮಧ್ಯದಲ್ಲೇ ಕೆಟ್ಟು ನಿಂತರೂ ಇದುವರೆಗೂ ಅದನ್ನು ತೆರವುಗೊಳ್ಳಿಸದ ಕಾರಣ ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ.

    ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ-ಹೊನ್ನವಳ್ಳಿಗೆ ಹೋಗುವ ರಾಜ್ಯ ಹೆದ್ದಾರಿಯ ತಿರುವಿನಲ್ಲಿ ಕೆಎಸ್‍ಆರ್ ಟಿಸಿ ಬಸ್ ಮೂರು ದಿನಗಳ ಹಿಂದೆಯೇ ಕೆಟ್ಟು ನಿಂತಿದೆ. ಪರಿಣಾಮ ವಾಹನ ಸವಾರರು ಹಾಗೂ ಬಸ್ ಸಂಚಾರ ಮಾಡುವಲ್ಲಿ ತೊಂದರೆಯಾಗುತ್ತಿದೆ. ಇದನ್ನೂ ಓದಿ:ರಸ್ತೆ ಬಿಟ್ಟು ಮನೆ ಛಾವಣಿ ಹತ್ತಿ ನಿಂತ ಆಟೋ!

    ಬೆಂಗಳೂರು ಡಿಪೋಗೆ ಸೇರಿದ ಕೆಎ 57 ಎಫ್ 4434 ನಂಬರಿನ ಬಸ್ ಇದಾಗಿದೆ. ರಸ್ತೆ ಮಧ್ಯದಲ್ಲೇ ಅನಾಥವಾಗಿ ಬಸ್ ನಿಂತಿದ್ದು. ಅದಷ್ಟು ಬೇಗ ಇಲಾಖೆ ಅಧಿಕಾರಿಗಳು ಬಸ್ ನ್ನು ತೆರವುಗೋಳಿಸಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕನಸು ಕಾಣುವ ಹಕ್ಕಿದೆ ಕಾಣಲಿ: ಕಾಂಗ್ರೆಸ್ಸಿಗರಿಗೆ ಸಚಿವ ಕೋಟ ಟಾಂಗ್

  • ಹೆಸರಿಗೆ ಮಾತ್ರ ರಾಜ್ಯ ಹೆದ್ದಾರಿ – ರಸ್ತೆ ತುಂಬಾ ಆರಡಿ, ಮೂರಡಿ ಗುಂಡಿ

    ಹೆಸರಿಗೆ ಮಾತ್ರ ರಾಜ್ಯ ಹೆದ್ದಾರಿ – ರಸ್ತೆ ತುಂಬಾ ಆರಡಿ, ಮೂರಡಿ ಗುಂಡಿ

    – ರಾಯಚೂರಿನ ಹದಗೆಟ್ಟ ರಸ್ತೆಯಿಂದ ಪ್ರಯಾಣಿಕರ ಪರದಾಟ
    – ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಗ್ಗೆ ಸರ್ಕಾರದ ನಿರ್ಲಕ್ಷ್ಯ

    ರಾಯಚೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಅತಿಯಾದ ಮಳೆ ಜನಜೀವನವನ್ನ ಅಸ್ತವ್ಯಸ್ತಮಾಡಿದೆ. ರೈತರು ಬೆಳೆ ಕಳೆದುಕೊಂಡಿದ್ದಾರೆ, ನೂರಾರು ಮನೆಗಳು ಬಿದ್ದಿವೆ. ಇದರ ಜೊತೆ ಜೊತೆಗೆ ಜಿಲ್ಲೆಯ ರಸ್ತೆಗಳು ಸಹ ಹಾಳಾಗಿ ಹೋಗಿವೆ. ಜಿಲ್ಲೆಯಿಂದ ಆರಂಭವಾಗುವ ರಾಯಚೂರು- ಬಾಚಿ ರಾಜ್ಯ ಹೆದ್ದಾರಿ ಸಂಖ್ಯೆ 20 ಇದು ಹೆಸರಿಗೆ ಮಾತ್ರ ರಾಜ್ಯ ಹೆದ್ದಾರಿ. ರಸ್ತೆ ತುಂಬಾ ಎಲ್ಲಿ ನೋಡಿದ್ರೂ ಆರಡಿ ಮೂರಡಿ ಗುಂಡಿಗಳೇ ಕಾಣಿಸುತ್ತವೆ.

    ರಾಯಚೂರು ಹೊರವಲಯದ ಸಾಥಮೈಲ್ ನಿಂದ ಕಲ್ಮಲವರೆಗೆ ಇರುವ ರಸ್ತೆ ಆ ದೇವರಿಗೆ ಪ್ರೀತಿ ಎನ್ನುವಂತಿದೆ. ಇಪ್ಪತ್ತು ನಿಮಿಷದ ದಾರಿಯನ್ನ ಕ್ರಮಿಸಲು ಕನಿಷ್ಠ ಒಂದು ಗಂಟೆ ತಗುಲುತ್ತದೆ. ರಸ್ತೆ ದಾಟಿ ಬಂದ ಮೇಲೆ ಮೈಕೈ ನೋವು ಗ್ಯಾರೆಂಟಿ. ವಾಹನಗಳು ಸುರಕ್ಷಿತವಾಗಿ ಇರುತ್ತವೆ ಅನ್ನೋ ನಂಬಿಕೆಯೂ ಇಲ್ಲಾ ಅನ್ನುವಷ್ಟರ ಮಟ್ಟಿಗೆ ರಸ್ತೆ ಹಾಳಾಗಿ ಹೋಗಿದೆ. ಹೀಗಾಗಿ ಪ್ರಯಾಣಿಕರು ಪ್ರಾಣ ಕೈಯಲ್ಲಿ ಹಿಡಿದುಕೊಂಡೆ ಪ್ರಯಾಣ ಮಾಡಬೇಕಿದೆ.

    ಕಲ್ಮಲದಿಂದ ಸಾಥ್ ಮೈಲ್ ವರೆಗೆ ರಸ್ತೆಗುಂಡಿಗಳನ್ನ ಮುಚ್ಚಲು 35 ಲಕ್ಷ ರೂಪಾಯಿ ಟೆಂಡರ್ ಆಗಿತ್ತು. ಆದ್ರೆ ಗುಂಡಿ ಮುಚ್ಚುವ ಕೆಲಸಮಾತ್ರ ನೆನೆಗುದಿಗೆ ಬಿದ್ದಿದೆ. ಈಗ ಲೋಕೋಪಯೋಗಿ ಇಲಾಖೆ ದೇವದುರ್ಗ ಕ್ರಾಸ್ ನಿಂದ ಸಾಥ್ ಮೈಲ್ ವರೆಗೆ ರಸ್ತೆ ರಿಪೇರಿಗೆ 3 ಕೋಟಿ ರೂಪಾಯಿ ಪ್ರಸ್ತಾವನೆಯನ್ನ ಇಲಾಖೆಗೆ ಕಳುಹಿಸಿದೆ. ಕೋವಿಡ್ ಕಾರಣಕ್ಕೆ ಕಾಮಗಾರಿ ಅನುಮೋದನೆ ಆಗುತ್ತಿಲ್ಲ ಹಣ ಬಿಡುಗಡೆ ಮಾಡುತ್ತಿಲ್ಲ ಅಂತ ಪಿಡಬ್ಲ್ಯೂಡಿ ಅಧಿಕಾರಿಗಳು ಹೇಳುತ್ತಿದ್ದಾರೆ. ಒಂದೆಡೆ ರಸ್ತೆಯನ್ನ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಲು ನೋಟಿಫಿಕೆಷನ್ ಮಾಡಲಾಗಿದೆ. ಕನಿಷ್ಠ ಗುಂಡಿಗಳನ್ನ ಮುಚ್ಚುವಂತ ಕೆಲಸವನ್ನೂ ಅಧಿಕಾರಿಗಳು ಮಾಡುತ್ತಿಲ್ಲ. ಜನಪ್ರತಿನಿಧಿಗಳಂತೂ ತಮಗೆ ಸಂಬಂಧವೇ ಇಲ್ಲವೆಂಬುವಂತೆ ವರ್ತಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

    ಮೂರು ವರ್ಷಗಳಿಂದ ಹಂತಹಂತವಾಗಿ ರಸ್ತೆ ಹದಗೆಡುತ್ತ ಬರುತ್ತಿದ್ದರೂ ಯಾರೂ ತಲೆ ಕೆಡಿಸಿಕೊಂಡಿಲ್ಲ. ಈಗ ನಿರಂತರವಾಗಿ ಸುರಿದ ಅತಿವೃಷ್ಠಿಯ ಮಳೆ ರಸ್ತೆಯನ್ನ ಸಂಪೂರ್ಣವಾಗಿ ಹದಗೆಡಿಸಿದೆ. ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯೆಯೇ ತಡವಾದ ಕಾರಣಕ್ಕೆ ರೋಗಿಗಳು ಸಾವನ್ನಪ್ಪಿದ್ದಾರೆ, ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತಲೇ ಇವೆ. ರಾತ್ರಿ ವೇಳೆ ಈ ರಸ್ತೆಯಲ್ಲಿ ವೇಗವಾಗಿ ಬಂದರೆ ಭೀಕರ ಅಪಘಾತ ಕಟ್ಟಿಟ್ಟ ಬುತ್ತಿ. ಗರ್ಭಿಣಿಯರಂತೂ ಈ ರಸ್ತೆಯಲ್ಲಿ ಓಡಾಡಲು ಹೆದರುವಂತ ಪರಸ್ಥಿತಿಯಿದೆ.

    ರಾಜ್ಯ ಹೆದ್ದಾರಿಯಾಗಿರುವುದರಿಂದ ಬೈಕ್, ಕಾರು, ಬಸ್ ಅಲ್ಲದೆ ಭಾರದ ವಾಹನಗಳ ಓಡಾಟ ಹೆಚ್ಚಾಗಿದೆ. ಪ್ರತಿನಿತ್ಯ ಕನಿಷ್ಟ 12 ಸಾವಿರಕ್ಕೂ ಹೆಚ್ಚು ವಾಹನ ರಾಯಚೂರಿನಿಂದ ಕಲ್ಮಲ ಮಾರ್ಗದಲ್ಲಿ ಓಡಾಡುತ್ತವೆ. ಹೀಗಾಗಿ ರಸ್ತೆಯ ಸುಧಾರಣೆ ಆದಷ್ಟು ಶೀಘ್ರದಲ್ಲಿ ಆಗಬೇಕಿದೆ. ರಾಯಚೂರಿನಿಂದ ಉಳಿದ ಎಲ್ಲಾ ಆರು ತಾಲೂಕುಗಳಿಗೂ ಸಂಪರ್ಕ ಕಲ್ಪಿಸುವ ರಸ್ತೆ ಮಾರ್ಗವನ್ನ ಸರಿಪಡಿಸಬೇಕು ಅಂತ ಜಿಲ್ಲೆಯ ಜನ ಒತ್ತಾಯಿಸಿದ್ದಾರೆ.

  • ಟೋಲ್ ಅಳವಡಿಕೆಗೆ ವಿರೋಧ- ಡಿ.30 ರಂದು ಕುಂದಗೋಳ ಬಂದ್

    ಟೋಲ್ ಅಳವಡಿಕೆಗೆ ವಿರೋಧ- ಡಿ.30 ರಂದು ಕುಂದಗೋಳ ಬಂದ್

    ಹುಬ್ಬಳ್ಳಿ: ಲಕ್ಷ್ಮೇಶ್ವರ-ಹುಬ್ಬಳ್ಳಿ ರಾಜ್ಯ ಹೆದ್ದಾರಿಯ ಶೆರೆವಾಡ ಬಳಿ ಟೋಲ್ ನಿರ್ಮಿಸಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಡಿ.30ಕ್ಕೆ ಕುಂದಗೋಳ ಪಟ್ಟಣ ಬಂದ್‍ಗೆ ಕರೆ ನೀಡಲಾಗಿದೆ.

    ಟೋಲ್ ನಿರ್ಮಾಣ ವಿರೋಧಿಸಿ ವಿವಿಧ ಸಂಘಟನೆಗಳು, ರೈತ ಸಂಘ ಹಾಗೂ ತಾಲೂಕು ಹಿತರಕ್ಷಣಾ ಸಮಿತಿ ವತಿಯಿಂದ ಕುಂದಗೋಳ ಪಟ್ಟಣ ಬಂದ್ ಮಾಡಲಾಗುವುದೆಂದು ಕಾಂಗ್ರೆಸ್ ಮುಖಂಡ ಶಿವಾನಂದ ಬೆಂತೂರ ತಿಳಿಸಿದ್ದಾರೆ.

    ಕುಂದಗೋಳ ಹಿಂದುಳಿದ ತಾಲೂಕಾಗಿದ್ದು, ಇಲ್ಲಿನ ಜನರು ಕೃಷಿಯನ್ನೇ ನಂಬಿ ಜೀವನ ಸಾಗಿಸುತ್ತಿದ್ದಾರೆ. ಪ್ರತಿನಿತ್ಯ ಸಾವಿರಾರು ಜನ ಹುಬ್ಬಳ್ಳಿ ಲಕ್ಷ್ಮೇಶ್ವರಕ್ಕೆ ಕೆಲಸ ಅರಸಿಕೊಂಡು ಹೋಗುತ್ತಿದ್ದು, ಟೋಲ್ ನಿರ್ಮಾಣದಿಂದ ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಬೇಕಾಗುತ್ತದೆ. ಹೀಗಾಗಿ ಬಂದ್‍ಗೆ ಕರೆ ನೀಡಲಾಗಿದೆ ಎಂದು ಶಿವಾನಂದ ತಿಳಿಸಿದ್ದಾರೆ.

    ಟೋಲ್ ನಿರ್ಮಾಣ ಹಗಲು ದರೋಡೆಯಾಗಿದ್ದು, ಕೂಡಲೇ ಸ್ಥಗಿತಗೊಳಿಸದಿದ್ದರೆ ಟೋಲ್ ಗೆ ಮುತ್ತಿಗೆ ಹಾಕಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ. ಡಿಸೆಂಬರ್ 30ರಂದು ನಡೆಯುವ ಕುಂದಗೋಳ ಪಟ್ಟಣ ಬಂದ್ ಗೆ ತಾಲೂಕಿನ ಜನರ ಬೆಂಬಲವಿದ್ದು, ಯಾವುದೇ ಕಾರಣಕ್ಕೂ ಟೋಲ್ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಪ್ರತಿಭಟನಾಕಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

  • ಗುಂಡಿ ಮಧ್ಯೆ ರಸ್ತೆ ಎಲ್ಲಿದೆ – ಕಿತ್ತು ಹೋಗಿದೆ ಕೈಗಾ, ಇಳಕಲ್ ಹೆದ್ದಾರಿ

    ಗುಂಡಿ ಮಧ್ಯೆ ರಸ್ತೆ ಎಲ್ಲಿದೆ – ಕಿತ್ತು ಹೋಗಿದೆ ಕೈಗಾ, ಇಳಕಲ್ ಹೆದ್ದಾರಿ

    – ಅನಾಹುತ ಸಂಭವಿಸಿದರೂ ಎಚ್ಚೆತ್ತುಕೊಳ್ಳದ ಲೋಕೋಪಯೋಗಿ ಇಲಾಖೆ
    – ಹಾಳಾದ ಹೈವೇ, ಗರ್ಭಿಣಿಯರಿಗೆ ರಸ್ತೆಯಲ್ಲೇ ಡೆಲಿವರಿ

    ಗದಗ: ಗದಗ ಜಿಲ್ಲೆಯಲ್ಲಿ ಹಾದುಹೋಗುವ ಕಾರವಾರದ ಕೈಗಾ-ಇಳಕಲ್ ರಾಜ್ಯ ಹೆದ್ದಾರಿ 85 ಪರಿಸ್ಥಿತಿ ಅಯೋಮಯವಾಗಿದೆ.

    ಗದಗನಿಂದ ಗಜೇಂದ್ರಗಢವನ್ನು ಜೀವ ಕೈಯಲ್ಲಿ ಹಿಡಿದು ಪ್ರಯಾಣ ಮಾಡವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ರಾಜ್ಯ ಹೆದ್ದಾರಿ ಕಾರವಾರದ ಕೈಗಾ ದಿಂದ ಹಾನಗಲ್, ಪಾಲಾ, ಬಂಕಾಪೂರ, ಲಕ್ಷ್ಮೇಶ್ವರ, ಗದಗ, ಗಜೇಂದ್ರಗಢ ಮಾರ್ಗವಾಗಿ ಇಳಕಲ್ ಸೇರುತ್ತದೆ. ಕಳೆದ ಎರಡು ವರ್ಷದಿಂದ ಈ ಇದು ತುಂಬಾ ಅಪಾಯಕಾರಿ ರಸ್ತೆಯಾಗಿದ್ದು, ಗುಂಡಿ ಮಧ್ಯೆ ರಸ್ತೆ ಎಲ್ಲಿದೆ ಎಂದು ಹುಡುಕಾಡುವಂತಾಗಿದೆ.

    ರಸ್ತೆ ತುಂಬೆಲ್ಲ ಗುಂಡಿಗಳು ಬಿದ್ದಿದ್ದು, ವಾಹನ ಸವಾರರು ರಾಜ್ಯ ಹೆದ್ದಾರಿ ಪ್ರಾಧಿಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಅದರಲ್ಲೂ ಲಕ್ಷ್ಮೇಶ್ವರ ದಿಂದ ಗದಗ, ಗಜೇಂದ್ರಗಢ ತಲುಪಬೇಕಾದಲ್ಲಿ ಯುದ್ಧದಲ್ಲಿ ಗೆದ್ದು ಬಂದಂತಾಗುತ್ತದೆ. ಅನಾರೋಗ್ಯಕ್ಕಿಡಾದವರು, ಗರ್ಭಿಣಿಯರು ಈ ರಸ್ತೆನಲ್ಲಿ ಸಂಚರಿಸಲು ಹರಸಾಹಸ ಪಡಬೇಕಾಗಿದೆ. ಹಗಲಿನಲ್ಲೆ ವಾಹನಗಳು ರಸ್ತೆ ತುಂಬೆಲ್ಲ ಇತ್ತಿಂದ ಅತ್ತ, ಅತ್ತಿಂದ ಇತ್ತ ಸರ್ಕಸ್ ಮಾಡುತ್ತಾ ಚಲಿಸುತ್ತಿವೆ.

    ಅಪರಿತರು ರಾತ್ರಿ ಈ ರಸ್ತೆಯಲ್ಲಿ ಸಂಚರಿಸಿ ಸೊಂಟ, ಕೈಕಾಲು ಮುರಿದುಕೊಂಡಿರುವ ಅದೆಷ್ಟೋ ಪ್ರಕರಣಗಳಿವೆ. ಇತ್ತೀಚಿಗಷ್ಟೆ ನರೇಗಲ್ ನಿಂದ ಗದಗ ಆಸ್ಪತ್ರೆಗೆ ಗರ್ಭಿಣಿ ಕರೆತರುವಾಗ ರಸ್ತೆ ಮಧ್ಯೆಯೇ ಹೆರಿಗೆಯಾಗಿರುವ ಉದಾಹರಣೆಯೂ ಇದೆ. ಒಂದು ಗುಂಡಿ ತಪ್ಪಿಸಬೇಕಾದಲ್ಲಿ ಮುಂದೆ ಮತ್ತೆರಡು ಗುಂಡಿಗಳು ಎದುರಾಗುತ್ತವೆ. ಹೀಗಾಗಿ ಈ ರಸ್ತೆನಲ್ಲಿ ಸಾಕಷ್ಟು ಅಪಘಾತಗಳು, ಜೊತೆಗೆ ರಾತ್ರಿ ವೇಳೆ ದರೋಡೆ ಕೂಡಾ ನಡೆಯುತ್ತದೆ. ತಗ್ಗುಗಳಿವೆ ಎಂದು ರಾತ್ರಿ ವೇಳೆ ವಾಹನ ನಿಧಾನ ಮಾಡಿದರೆ ಯಾರು ಇಲ್ಲದ್ದನ್ನು ಗಮನಿಸಿ ದಾಳಿ ಮಾಡಿ ದರೋಡೆ ಮಾಡುತ್ತಾರೆ ಎಂಬ ದೂರು ಸಹ ಕೇಳಿಬಂದಿದೆ.

    ಎರಡು ವರ್ಷಗಳಿಂದ ರಾಜ್ಯ ಹೆದ್ದಾರಿ ಹೀಗೆ ಹದಗೆಟ್ಟು ಹೋಗಿದ್ದು, ಇನ್ನೂ ಸಹ ರಸ್ತೆ ಮಾಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

  • ಗುಡ್ಡ ಕುಸಿತ: ಮಡಿಕೇರಿ-ಸೋಮವಾರಪೇಟೆ ನಡುವಿನ ರಾಜ್ಯ ಹೆದ್ದಾರಿ ಬಂದ್

    ಗುಡ್ಡ ಕುಸಿತ: ಮಡಿಕೇರಿ-ಸೋಮವಾರಪೇಟೆ ನಡುವಿನ ರಾಜ್ಯ ಹೆದ್ದಾರಿ ಬಂದ್

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಗೆ ಮಡಿಕೇರಿ ತಾಲೂಕಿನ ಹಾಲೇರಿ ಗ್ರಾಮದ ರಸ್ತೆ ಮೇಲೆಯೇ ಗುಡ್ಡ ಕುಸಿದು ಪರಿಣಾಮ ರಾಜ್ಯ ಹೆದ್ದಾರಿ ಬಂದ್ ಆಗಿದೆ.

    ಗುಡ್ಡದ ಮಣ್ಣು ಕುಸಿದ ಪರಿಣಾಮ ಮಡಿಕೇರಿ – ಸೋಮವಾರಪೇಟೆ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಕಳೆದ ವರ್ಷ ಗುಡ್ಡ ಕುಸಿದಿದ್ದ ಸ್ಥಳದಲ್ಲಿ ಮತ್ತೆ ಗುಡ್ಡ ಕುಸಿದಿದೆ. ಕತ್ತಲಾಗಿರುವ ಹಿನ್ನೆಲೆಯಲ್ಲಿ ಹಾಗೂ ನಿರಂತರ ಮಳೆ ಆಗುತ್ತಿರುವುದರಿಂದ ತೆರವು ಕಾರ್ಯಾಚರಣೆ ನಡೆಸಲು ತೊಡಕಾಗಿದೆ. ನಾಳೆ ಮುಂಜಾನೆ ವೇಳೆಗೆ ರಸ್ತೆ ಮೇಲಿನ ಮಣ್ಣನ್ನು ತೆರವು ಮಾಡುವ ಸಾಧ್ಯತೆ ಇದೆ.

    ಇಂದು ಮುಂಜಾನೆಯಿಂದ ಬಿಡುವು ನೀಡಿದ್ದ ಮಳೆ ಸಂಜೆಯ ವೇಳೆಗೆ ಬಿಟ್ಟು ಬಿಡದೆ ಸುರಿದಿತ್ತು. ಮಳೆಯ ಪರಿಣಾಮ ಗುಡ್ಡ ಕುಸಿತ ಸಂಭವಿಸಿದ್ದು, ಈ ಮಾರ್ಗ ಬಂದ್ ಆಗಿರುವುದರಿಂದ ವಾಹನ ಸವಾರರು ಪರ್ಯಾಯ ಮಾರ್ಗವನ್ನು ಬಳಕೆ ಮಾಡುತ್ತಿದ್ದಾರೆ. ಮಡಿಕೇರಿಯಿಂದ ಸಿಂಕೋನ ಮಾರ್ಗವಾಗಿ ಸೋಮವಾರಪೇಟೆ ತೆರಳಬಹುದಾಗಿದೆ.

  • ಫಸ್ಟ್ ಟೈಂ ರಾಜ್ಯ ಹೆದ್ದಾರಿಗೂ ಟೋಲ್- ಸಮ್ಮಿಶ್ರ ಸರ್ಕಾರದ ಪ್ರಯೋಗಕ್ಕೆ ಜನಾಕ್ರೋಶ

    ಫಸ್ಟ್ ಟೈಂ ರಾಜ್ಯ ಹೆದ್ದಾರಿಗೂ ಟೋಲ್- ಸಮ್ಮಿಶ್ರ ಸರ್ಕಾರದ ಪ್ರಯೋಗಕ್ಕೆ ಜನಾಕ್ರೋಶ

    ಉಡುಪಿ: ರಾಜ್ಯ ಸಮ್ಮಿಶ್ರ ಸರ್ಕಾರ ರಾಜ್ಯ ಹೆದ್ದಾರಿಗಳಲ್ಲೂ ಟೋಲ್ ಗೇಟ್ ನಿರ್ಮಿಸಲು ಎಲ್ಲಾ ಸಿದ್ಧತೆ ಮಾಡಿದೆ. ಸರ್ಕಾರ ಸ್ಥಾಪನೆ ಮಾಡಲು ಹೊರಟಿರುವ ಟೋಲ್ ವಿರುದ್ಧ ಉಡುಪಿಯ ನಲವತ್ತು ಹಳ್ಳಿಯ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

    ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಿಂದ ಕಾಪು ತಾಲೂಕನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಟೋಲ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಇತಿಹಾಸದಲ್ಲೇ ರಾಜ್ಯ ಹೆದ್ದಾರಿಯಲ್ಲಿ ಟೋಲ್ ನಿರ್ಮಾಣ ಆಗುತ್ತಿರೋದು ಇದೇ ಪ್ರಥಮ. ಹೀಗಾಗಿ ಸರ್ಕಾರದ ನೀತಿಯನ್ನು ಖಂಡಿಸಿ ಗ್ರಾಮಸ್ಥರು ಬೃಹತ್ ಪ್ರತಿಭಟನೆಯನ್ನು ಕೈಗೊಂಡರು. ಬೆಳ್ಮಣ್ಣು ಪೇಟೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮೂರು ಸಾವಿರಕ್ಕೂ ಹೆಚ್ಚು ಗ್ರಾಮಸ್ಥರು ಪಕ್ಷಾತೀತವಾಗಿ ಪಾಲ್ಗೊಂಡರು. ಯೋಜನೆ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದರು.

    ಬೆಳ್ಮಣ್ ಟೋಲ್ ವಿರೋಧಿ ಹೋರಾಟ ಸುಹಾಸ್ ಹೆಗ್ಡೆ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಮೂರು ದಿನಗಳ ಹಿಂದೆ ನೀಡಿದ ಪ್ರತಿಭಟನೆಗೆ ಭಾರೀ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು. ಹೋರಾಟ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಕೇಮಾರು ಈಶವಿಠಲ ದಾಸ ಸ್ವಾಮೀಜಿ, ಸ್ಥಳೀಯ ಶಾಸಕರಾದ ಸುನೀಲ್ ಕುಮಾರ್, ಲಾಲಾಜಿ ಮೆಂಡನ್, ಐವಾನ್ ಡಿಸೋಜಾ ಸೇರಿದಂತೆ ಎಲ್ಲಾ ಪಕ್ಷದ ನಾಯಕರು ವಿವಿಧ ಸಂಘ ಸಂಸ್ಥೆಯ ಸದಸ್ಯರು ಸಾರ್ವಜನಿಕರು ಪಾಲ್ಗೊಂಡಿದ್ದರು.

    ಈ ಸಂದರ್ಭದಲ್ಲಿ ಮಾತನಾಡಿದ ಕೇಮಾರು ಶ್ರೀ, ಸರ್ಕಾರ ರಸ್ತೆ ನೀರಿನ ಸೌಲಭ್ಯ ವಿದ್ಯುತ್ ಅನ್ನು ಒದಗಿಸದಿದ್ದರೆ ಅಂತಹ ಸರ್ಕಾರ ಇದ್ದರೆಷ್ಟು ಹೋದರೆಷ್ಟು ಅಂತ ಆಕ್ರೋಶ ವ್ಯಕ್ತಪಡಿಸಿದರು. ಪರಿಸ್ಥಿತಿ ಹೀಗೆ ಮುಂದುವರಿದರೆ ಸರ್ಕಾರಿ ಬಾವಿಯ ನೀರು ಕುಡಿಯಲು ಬಿಲ್ ಕಟ್ಟುವ ಪರಿಸ್ಥಿತಿ ನಿರ್ಮಾಣವಾದೀತು ಎಂದು ಜನರನ್ನು ಎಚ್ಚರಿಸಿದರು. ಟೋಲ್ ವಿರುದ್ಧ ಹೋರಾಟ ಮುಂದುವರಿಯುತ್ತದೆ. ಟೋಲ್ ಸಂಗ್ರಹ ಕೇಂದ್ರ ಆರಂಭವಾದರೆ ಅದನ್ನು ಪುಡಿಗೈಯ್ಯುವ ಹೋರಾಟದಲ್ಲಿ ನಾನು ಮುಂಚೂಣಿಯಲ್ಲಿ ಇರುತ್ತೇನೆ ಎಂದು ಕಟು ಎಚ್ಚರಿಕೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv