Tag: State Women’s Commission

  • ಅಶ್ಲೀಲ ಪದ ಬಳಸಿ ದೌರ್ಜನ್ಯ ಆರೋಪ – ಡಿಸಿಎಂ ವಿಶೇಷ ಕರ್ತವ್ಯಾಧಿಕಾರಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

    ಅಶ್ಲೀಲ ಪದ ಬಳಸಿ ದೌರ್ಜನ್ಯ ಆರೋಪ – ಡಿಸಿಎಂ ವಿಶೇಷ ಕರ್ತವ್ಯಾಧಿಕಾರಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

    ನವದೆಹಲಿ: ದೆಹಲಿಯ ಕರ್ನಾಟಕ ಭವನದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರ ವಿಶೇಷ ಕರ್ತವ್ಯಾಧಿಕಾರಿ ಮೋಹನ್ ಕುಮಾರ್, ಡಿಸಿಎಂ ಡಿ.ಕೆ ಶಿವಕುಮಾರ್ (D K Shivakumar) ಅವರ ವಿಶೇಷ ಅಧಿಕಾರಿ ಹೆಚ್.ಆಂಜನೇಯ ನಡುವೆ ಜಗಳ ತಾರಕಕ್ಕೇರಿರುವ ಹೊತ್ತಲ್ಲೇ ಹೆಚ್.ಆಂಜನೇಯ (H Anjaneya) ವಿರುದ್ಧ ಮಹಿಳಾ ಆಯೋಗದಲ್ಲಿ ದೂರು ದಾಖಲಾಗಿದೆ.

    ಕರ್ನಾಟಕ ಭವನದಲ್ಲಿ ಉಪ ಸಮನ್ವಯಾಧಿಕಾರಿ ಮತ್ತು ಲೆಕ್ಕಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಕುಸುಮಾ ನಂದರಿಗಿ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಮಹಿಳಾ ಆಯೋಗಕ್ಕೆ (Karanataka State Commission for Womens) ದೂರು ನೀಡಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್ ಅವರ ವಿಶೇಷ ಕರ್ತವ್ಯಾಧಿಕಾರಿ ಹೆಚ್.ಆಂಜನೇಯ ಕರ್ನಾಟಕ ಭವನದ ಮಹಿಳೆಯರ ಮೇಲೆ ದೌರ್ಜನ್ಯ ನಡೆಸುತ್ತಿದ್ದು, ಅಸಭ್ಯ ವರ್ತನೆಯ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಸೋನ್‌ಪ್ರಯಾಗ್ ಬಳಿ ಭೂಕುಸಿತ – ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

    ಹೆಚ್.ಆಂಜನೇಯ ಅವರು ಪ್ರಸ್ತುತ ಕರ್ನಾಟಕ ಭವನದಲ್ಲಿ ಕಛೇರಿ ಅಧೀಕ್ಷಕ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಚೇರಿಯ ವಿಚಾರದಲ್ಲಿ ಲೆಕ್ಕ ಶಾಖೆಯ ಸಿಬ್ಬಂದಿಯನ್ನು ಕರೆದು ಬಾಯಿಗೆ ಬಂದ ಹಾಗೆ ಮಾತನಾಡುವುದಲ್ಲದೇ `ಲೆಕ್ಕಾಧಿಕಾರಿ ಏನು ಕತ್ತೆ ಕಾಯುತ್ತಿದ್ದಾಳಾ’ ಎಂದು ಆಗೌರವದಿಂದ ಮಾತನಾಡಿದ್ದಾರೆ. ನಿಮ್ಮನ್ನು ಅಮಾನತು ಮಾಡಿಸುತ್ತೇನೆ. ವಜಾ ಮಾಡಿಸುತ್ತೇವೆ ಎಂದು ಬೆದರಿಕೆ ಹಾಕುತ್ತಿದ್ದಾರೆ. ಇದನ್ನೂ ಓದಿ: ಮೈಸೂರಿಗೆ ನಾಲ್ವಡಿಗಿಂತಲೂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ: ಯತೀಂದ್ರ ಹೇಳಿಕೆಗೆ ವಿಪಕ್ಷ ನಾಯಕರು ಕೆಂಡ

    ಅಶ್ಲೀಲ ಅಸಭ್ಯ ಪದಗಳನ್ನು ಬಳಸಿ ಬೈಯುತ್ತಾ ಅಧಿಕಾರ ದರ್ಪ ತೋರುತ್ತಿದ್ದಾರೆ. ಅಲ್ಲದೇ ಮಹಿಳಾ ನೌಕರರ ಜೊತೆಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಅಧಿಕಾರ ಬಳಸಿಕೊಂಡು ನನ್ನ ಭಡ್ತಿಯನ್ನು ತಡೆಯುತ್ತಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ. ಇದನ್ನೂ ಓದಿ: ಗವಿ ಮಠದ ಆವರಣದಲ್ಲಿ ನಾಗದೇವರ ಮುಂದೆ ಧ್ಯಾನಕ್ಕೆ ಕುಳಿತ ಮುಸ್ಲಿಂ ಮಹಿಳೆ

    ಈ ಬಗ್ಗೆ ಸಿಎಂಗೆ ದೂರು ನೀಡಿದ್ದು, ಪರಿಶೀಲಿಸಿ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಇತ್ತ ಮಹಿಳಾ ಆಯೋಗದಿಂದ ಈವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈ ಬೆಳವಣಿಗೆಗೂ ಮುನ್ನ ಮೋಹನ್ ಕುಮಾರ್ ಮತ್ತು ಹೆಚ್.ಆಂಜನೇಯ ನಡುವಿನ ಜಗಳ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿತ್ತು.

  • ಪ್ರಜ್ವಲ್ ರೇವಣ್ಣ ಕೇಸ್ – ನೊಂದ ಮಹಿಳೆಯಿಂದ ಮಹಿಳಾ ಆಯೋಗಕ್ಕೆ ದೂರು

    ಪ್ರಜ್ವಲ್ ರೇವಣ್ಣ ಕೇಸ್ – ನೊಂದ ಮಹಿಳೆಯಿಂದ ಮಹಿಳಾ ಆಯೋಗಕ್ಕೆ ದೂರು

    ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ನೊಂದ ಮಹಿಳೆಯೊಬ್ಬರು ಮಹಿಳಾ ಆಯೋಗಕ್ಕೆ (Women’s Commission) ದೂರು ನೀಡಿದ್ದಾರೆ.

    ಹಾಸನ (Hassan) ಮೂಲದ ನೊಂದ ಮಹಿಳೆಯೊಬ್ಬರು ಮಹಿಳಾ ಆಯೋಗಕ್ಕೆ ಶನಿವಾರ ಸಂಜೆ ದೂರು ನೀಡಿದ್ದಾರೆ. ತಂದೆ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಇಬ್ಬರ ವಿರುದ್ಧವೂ ದೂರು ನೀಡಿದ್ದು, ಇಬ್ಬರೂ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮಹಿಳೆಯ ದೂರನ್ನು ಸ್ವೀಕರಿಸಿ ರಾಜ್ಯ ಮಹಿಳಾ ಆಯೋಗ ತನಿಖೆಗೆ ಮುಂದಾಗಿದೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ (Nagalakshmi Choudhary) ‘ಪಬ್ಲಿಕ್ ಟಿವಿ’ಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ – ಸಮಗ್ರ ತನಿಖೆಗೆ ಎಸ್‌ಐಟಿ ರಚನೆ

    ಈ ಕುರಿತು ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ನಾಗಲಕ್ಷ್ಮೀ ಚೌಧರಿ, ಶನಿವಾರ ಸಂಜೆ ಸಂತ್ರಸ್ಥೆ ದೂರು ದಾಖಲಿಸಿದರು. ಸಂಸದ ಪ್ರಜ್ವಲ್ ರೇವಣ್ಣ ಅವರ ಕುಟುಂಬದವರಿಂದ ಕಿರುಕುಳ ಹಾಗೂ ಜೀವ ಬೆದರಿಕೆ ಇದೆ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ವಾಟ್ಸಾಪ್ ಮೂಲಕ ದೂರಿನ ಪ್ರತಿಯನ್ನು ಕಳುಹಿಸಿಕೊಟ್ಟಿದ್ದಾರೆ. ಕೇವಲ ಒಬ್ಬ ಸಂತ್ರಸ್ಥೆ ಮಾತ್ರ ನಮಗೆ ದೂರು ಕೊಟ್ಟಿರೋದು. ಉಳಿದಂತೆ ಬೇರೆ ಯಾರೂ ದೂರು ನೀಡಿಲ್ಲ. ಮಹಿಳಾ ಸಂಘಟನೆ, ಕೆಲ ಸಂಘಟನೆಗಳು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರಿನ ಮನವಿಯನ್ನು ನೀಡಿದ್ದರು. ಇದರ ಸೂಕ್ಷ್ಮತೆ ಅರಿತುಕೊಂಡು ಸಿಎಂ, ಗೃಹ ಸಚಿವರಿಗೆ, ಪೊಲೀಸ್ ಜನರಲ್‌ಗೆ ಪತ್ರ ಬರೆದಿದ್ದೆ. ಗುರುವಾರ ಸಂಜೆ ಎಲ್ಲರಿಗೂ ಪತ್ರ ಬರೆದಿದ್ದೆ. ಎಸ್‌ಐಟಿ (SIT) ರಚನೆ ಆಗಬೇಕು. ನ್ಯಾಯ ಸಿಗಬೇಕೆಂದು ಪ್ರಕರಣದ ಗಂಭೀರತೆಯನ್ನು ಪತ್ರದಲ್ಲಿ ಬರೆದಿದ್ದೆ. ಅಪರಾಧ ಮಾಡಿದವರಿಗೆ ಶಿಕ್ಷೆಯಾಗೋ ಭರವಸೆಯಿದೆ. ಸರ್ಕಾರದ ದೊಡ್ಡ ಕೆಲಸ ಇದು ಎಂದು ತಿಳಿಸಿದರು. ಇದನ್ನೂ ಓದಿ: ಸಂಘ ಪರಿವಾರ ಎಂದಿಗೂ ಮೀಸಲಾತಿ ವಿರೋಧಿಸಿಲ್ಲ: ಆರ್‌ಎಸ್‌ಎಸ್‌ ಮುಖ್ಯಸ್ಥ

    ಒಬ್ಬ ಸಂತ್ರಸ್ಥೆ ಮಾತ್ರ ನಮ್ಮ ಸಂಪರ್ಕಕ್ಕೆ ಬಂದಿದ್ದಾರೆ. ಬೇರೆ ಯಾರೂ ನಮ್ಮ ಸಂಪರ್ಕಕ್ಕೆ ಬಂದಿಲ್ಲ. ನಾವೇ ಇತರೆ ಸಂತ್ರಸ್ಥರನ್ನು ಸಂಪರ್ಕ ಮಾಡೋದಿಲ್ಲ. ಸಂತ್ರಸ್ಥೆಯರು ತಾವಾಗಿ ತಾವೇ ಮುಂದೆ ಬಂದರೆ ಅವರ ಧ್ವನಿಯಾಗಿ ನಾವು ಇರುತ್ತೇವೆ. ಆರೋಪಿ ಸ್ಥಾನದಲ್ಲಿದ್ದವರಿಗೆ ನೋಟಿಸ್ ಕೊಡಬಹುದು. ಮಹಿಳಾ ಆಯೋಗಕ್ಕೆ ಕರೆಸಬಹುದು. ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬಹುದು ಎಂದರು. ಇದನ್ನೂ ಓದಿ: ನರೇಂದ್ರ ಮೋದಿ ಪ್ರಧಾನ ಮಂತ್ರಿ ಅಲ್ಲ, ಪ್ರಧಾನ ಸುಳ್ಳುಗಾರ: ಬಿ.ಕೆ.ಹರಿಪ್ರಸಾದ್

  • ಆ್ಯಂಡಿ-ಕವಿತಾ ಡಿಶುಂ ಡಿಶುಂ ಸುಖಾಂತ್ಯ

    ಆ್ಯಂಡಿ-ಕವಿತಾ ಡಿಶುಂ ಡಿಶುಂ ಸುಖಾಂತ್ಯ

    ಬೆಂಗಳೂರು: ರಾಜ್ಯ ಮಹಿಳಾ ಆಯೋಗದಲ್ಲಿ ವಿಚಾರಣೆ ಮಾಡಿದ ನಂತರ ಬಿಗ್‍ಬಾಸ್ ಸೀಸನ್ 6ರ ಸ್ಪರ್ಧಿ ಕವಿತಾ ಗೌಡ ಮತ್ತು ಆ್ಯಂಡಿ ನಡುವಿನ ಜಗಳವೂ ಕೊನೆಗೊಂಡಿದೆ.

    ಕವಿತಾ ಸ್ಪರ್ಧಿ ಆ್ಯಂಡಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರಿಗೆ ವಿಚಾರಣೆಗೆ ಹಾಜರಾಗುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ಅವರು ನೋಟಿಸ್ ನೀಡಿದ್ದರು. ಇಬ್ಬರು ಶನಿವಾರ ವಿಚಾರಣೆಗೆ ಹಾಜರಾಗಿದ್ದರು. ಇದನ್ನೂ ಓದಿ: ಕವಿತಾಗೆ ಲೈಂಗಿಕ ಕಿರುಕುಳ ಪ್ರಕರಣ- ವಿಚಾರಣೆಗೆ ಹಾಜರಾದ ಆ್ಯಂಡಿ

    ಈ ಬಗ್ಗೆ ಪ್ರತಿಕ್ರಿಯಿಸಿದ ಕವಿತಾ, ಆಂಡ್ರ್ಯೂ ನನಗೆ ಕ್ಷಮೆ ಕೇಳಿದ್ದಾರೆ. ಕಿರುಕುಳ ಕೊಟ್ಟಿರುವ ಬಗ್ಗೆ ಅವರು ಒಪ್ಪಿಕೊಂಡಿದ್ದು, ಮತ್ತೆ ಈ ರೀತಿ ಮಾಡಲ್ಲ ಎಂದಿದ್ದಾರೆ. ಆದ್ದರಿಂದ ಈ ಪ್ರಕರಣವನ್ನು ಇಲ್ಲಿಗೆ ಬಿಡುತ್ತಿದ್ದೇನೆ ಎಂದು ಹೇಳಿದ್ದಾರೆ.

    ವಿಚಾರಣೆಯಲ್ಲಿ ಆಂಡ್ರ್ಯೂ, ಒಬ್ಬರಿಗೆ ಬೇಜಾರಾಗಿದೆ ಅಂದರೆ ಖಂಡಿತ ನಾನು ಕ್ಷಮೆ ಕೇಳುವೆ. ಈಗಲೂ ಕವಿತಾ ಮೇಲೆ ನನಗೆ ಗೌರವ ಇದೆ ಅಂತ ಮಹಿಳಾ ಆಯೋಗದ ಅಧ್ಯಕ್ಷರ ಮುಂದೆ ಒಪ್ಪಿಕೊಂಡಿದ್ದಾರೆ. ಗೇಮ್ ನಲ್ಲಿ ಆಗಿರುವ ಕಿರಿಕಿರಿಗೆ ನಾನು ಕವಿತಾಗೆ ಕ್ಷಮೆ ಕೇಳಿದ್ದೇನೆ ಎಂದು ತಪ್ಪನ್ನು ಒಪ್ಪಿಕೊಂಡು ಕ್ಷಮೆ ಕೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಜ್ಯ ಮಹಿಳಾ ಆಯೋಗಕ್ಕೆ ದುನಿಯಾ ವಿಜಿ ಹಾಜರ್

    ರಾಜ್ಯ ಮಹಿಳಾ ಆಯೋಗಕ್ಕೆ ದುನಿಯಾ ವಿಜಿ ಹಾಜರ್

    ಬೆಂಗಳೂರು: ಕುಟುಂಬ ರಂಪಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ಶುಕ್ರವಾರ ಮಹಿಳಾ ಆಯೋಗಕ್ಕೆ ಹಾಜರಾಗಿದ್ದರು.

    ದುನಿಯಾ ವಿಜಯ್ ವಿರುದ್ಧ ಮಹಿಳಾ ಆಯೋಗಕ್ಕೆ ಪತ್ನಿ ನಾಗರತ್ನ ದೂರು ದಾಖಲಿಸಿದ್ದರು. ದೂರು ದಾಖಲು ಮಾಡಿಕೊಂಡ ರಾಜ್ಯ ಮಹಿಳಾ ಆಯೋಗ ವಿಜಿಗೆ ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ದುನಿಯಾ ವಿಜಯ್ ಮಹಿಳಾ ಆಯೋಗಕ್ಕೆ ನಿನ್ನೆ ಹಾಜರಾಗಿದ್ದರು.

    ದುನಿಯಾ ವಿಜಿ ನನಗೆ ಡಿವೋರ್ಸ್ ನೀಡದೆ ಎರಡನೇ ಮದುವೆಯಾಗಿದ್ದಾನೆ ಎಂದು ಪತ್ನಿ ನಾಗರತ್ನ ದೂರು ದಾಖಲಿಸಿದ್ದರು. ಅಷ್ಟೇ ಅಲ್ಲದೆ ವಿಜಯ್ ವಿರುದ್ಧ ಮಾನಸಿಕ ಕಿರುಕುಳದ ಆರೋಪ ಕೂಡ ಮಾಡಿದ್ದರು. ಈ ಬಗ್ಗೆ ವಿಚಾರಣೆಗೆ ಹಾಜರಾಗಿ ಉತ್ತರ ನೀಡುವಂತೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷಿ ಬಾಯಿ ವಿಜಿಗೆ ನೋಟಿಸ್ ನೀಡಿದ್ದರು.

    ವಿಚಾರಣೆಗೆ ಹಾಜರಾದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ದುನಿಯಾ ವಿಜಿ, ಘಟನೆ ಸಂಬಂಧ ಮಹಿಳಾ ಆಯೋಗದವರು ಕೆಲವು ದಾಖಲೆಗಳನ್ನ ಕೇಳಿದ್ದರು. ನಾನು ಎಲ್ಲಾ ದಾಖಲೆಗಳನ್ನ ಸಲ್ಲಿಸುತ್ತೇನೆ. ಈ ಪ್ರಕರಣ ಕೋರ್ಟ್ ನಲ್ಲಿ ಇರುವುದರಿಂದ ವೈಯಕ್ತಿಕ ಮಾಹಿತಿ ನೀಡಲು ಸಾಧ್ಯವಿಲ್ಲ. ಆದರೆ ಮುಂದಿನ ದಿನಗಳಲ್ಲಿ ತನಿಖೆಗೆ ಕರೆದರೆ ಸಹಕರಿಸುತ್ತೇನೆ ಎಂದು ಹೇಳಿದ್ದರು.

    ದುನಿಯಾ ವಿಜಿ ವಿರುದ್ಧ ಪತ್ನಿ ನಾಗರತ್ನ ದೂರನ್ನ ನೀಡಿದ್ದರು. ದೂರು ದಾಖಲಿಸಿಕೊಂಡು ವಿಜಿಗೆ ನೋಟಿಸ್ ನೀಡಿದ್ವಿ. ಹೀಗಾಗಿ ಅವರು ವಿಚಾರಣೆಗೆ ಹಾಜರಾಗಿದ್ದರು. ಸುಮಾರು 1 ಗಂಟೆಗಳ ಕಾಲ ವಿಜಿ ಅವರನ್ನು ವಿಚಾರಣೆ ನಡೆಸಿದ್ದೇನೆ. ವಿಜಿ ನಾಗರತ್ನ ಜೊತೆ ಬಾಳಲು ಸಾಧ್ಯವಿಲ್ಲ ಅಂತ ಹೇಳಿದ್ದಾರೆ. ಆದರೆ ಮಕ್ಕಳ ಜವಬ್ದಾರಿ ನನ್ನದು ಎಂದು ವಿಜಿ ಹೇಳಿರುವುದಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷಿ ಬಾಯಿ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದುನಿಯಾ ವಿಜಿ ವಿರುದ್ಧ ಮಹಿಳಾ ಆಯೋಗ ಕೆಂಡಾಮಂಡಲ

    ದುನಿಯಾ ವಿಜಿ ವಿರುದ್ಧ ಮಹಿಳಾ ಆಯೋಗ ಕೆಂಡಾಮಂಡಲ

    ಬೆಂಗಳೂರು: ಸ್ಯಾಂಡಲ್ ವುಡ್ ಕರಿಚಿರತೆ ದುನಿಯಾ ವಿಜಯ್ ವಿರುದ್ಧ ರಾಜ್ಯ ಮಹಿಳಾ ಆಯೋಗ ಕೆಂಡಾಮಂಡಲವಾಗಿದೆ.

    ನೋಟಿಸ್ ನೀಡಿದ್ರೂ ವಿಚಾರಣೆಗೆ ಹಾಜರಾಗದ್ದಕ್ಕೆ ಆಯೋಗ ವಿಜಯ್ ವಿರುದ್ಧ ಗರಂ ಆಗಿದೆ. ಈ ಹಿನ್ನೆಲೆಯಲ್ಲಿ ಇನ್ನೊಂದು ವಾರದೊಳಗೆ ವಿಚಾರಣೆಗೆ ಹಾಜರಾಗಿ ಅಂತ ಮತ್ತೊಮ್ಮೆ ಎಚ್ಚರಿಕೆ ಕೊಟ್ಟಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭಿಸಿದೆ.

    ಜೀವನ ನಡೆಸಲು ನನಗೆ ವಿಜಯ್ ಹಣ ನೀಡುತ್ತಿಲ್ಲ. ಹೀಗಾಗಿ ಮಕ್ಕಳೊಂದಿಗೆ ಜೀವನ ನಡೆಸಲು ಸಾಕಷ್ಟು ತೊಂದರೆಯಾಗುತ್ತಿದೆ ಅಂತ ವಿಜಿ ವಿರುದ್ಧ ಆರೋಪ ಮಾಡಿ ಮೊದಲ ಪತ್ನಿ ನಾಗರತ್ನ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ದೂರು ಸ್ವೀಕರಿಸಿದ್ದ ಆಯೋಗ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇದೇ 17ರಂದು ವಿಚಾರಣೆಗೆ ಹಾಜರಾಗುವಂತೆ ವಿಜಿಗೆ ನೋಟಿಸ್ ನೀಡಲಾಗಿತ್ತು.

    ನೋಟೀಸ್ ಗೆ ಸ್ಪಂದಿಸಿದ ನಟ, ವಿಚಾರಣೆಗೆ ಹಾಜರಾಗುತ್ತೇನೆ. ಆದ್ರೆ ಫಿಲಂ ಶೂಟಿಂಗ್ ಇದ್ದ ಕಾರಣ ಒಂದು ವಾರ ಕಾಲಾವಕಾಶ ನೀಡಬೇಕು ಅಂತ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಆಯೋಗ ಅದಕ್ಕೆ ಅನುವು ಮಾಡಿಕೊಟ್ಟಿತ್ತು. ಆದ್ರೆ ಇದೀಗ ಒಂದು ವಾರ ಕಳೆದ್ರೂ ದುನಿಯಾ ವಿಜಯ್ ವಿಚಾರಣೆಗೆ ಹಾಜರಾಗದೇ ಇದ್ದಿದ್ದರಿಂದ ವಿಜಿ ವಿರುದ್ಧ ಆಯೋಗ ಗರಂ ಆಗಿದೆ.

    ಅಲ್ಲದೇ ಒಂದು ವಾರದೊಳಗೆ ವಿಚಾರಣೆಗೆ ಹಾಜರಾಗದೇ ಇದ್ದಲ್ಲಿ ವಿಜಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಮಹಿಳಾ ಆಯೋಗ ಎಚ್ಚರಿಕೆಯ ಸಂದೇಶ ರವಾನಿಸಿದೆ ಎಂಬುದಾಗಿ ತಿಳಿದುಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv