Tag: statue

  • ಅಲ್ಲು ಬ್ಯುಸಿನೆಸ್ ಪಾರ್ಕ್ ನಲ್ಲಿ ಖ್ಯಾತ ನಟ ಅಲ್ಲು ರಾಮಲಿಂಗಯ್ಯ ಪ್ರತಿಮೆ

    ಅಲ್ಲು ಬ್ಯುಸಿನೆಸ್ ಪಾರ್ಕ್ ನಲ್ಲಿ ಖ್ಯಾತ ನಟ ಅಲ್ಲು ರಾಮಲಿಂಗಯ್ಯ ಪ್ರತಿಮೆ

    ಒಂದು ಸಾವಿರಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಹಾಸ್ಯನಟರಾಗಿ ಕೆಲಸ ಮಾಡಿದ ಹೆಗ್ಗಳಿಕೆ ಅಲ್ಲು ರಾಮಲಿಂಗಯ್ಯ (Allu Ramalingaiah) ಅವರದ್ದು. ತೆಲುಗು ಸಿನಿಮಾ ರಂಗದಲ್ಲಿ ಅಲ್ಲು ರಾಮಲಿಂಗಯ್ಯ ಅವರಿಗೆ ಅವರದ್ದೇ ಆದ ಅಭಿಮಾನಿ ಬಳಗವಿದೆ. 1922ರಲ್ಲಿ ಹುಟ್ಟಿದ್ದ ರಾಮಲಿಂಗಯ್ಯ ಬಣ್ಣದ ಬದುಕಿಗೆ ಕಾಲಿಟ್ಟು ತೆಲುಗು ಮತ್ತು ತಮಿಳಿನಲ್ಲಿ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ. ಇದೀಗ ಅವರ ಕುಟುಂಬ 101ನೇ ಜನ್ಮ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಿದೆ.

    ಸಿನಿಮಾ ರಂಗಕ್ಕೂ ಬರುವ ಮುನ್ನ ರಾಮಲಿಂಗಯ್ಯ ಹೋಮಿಯೋಪತಿ ವೈದ್ಯರಾಗಿದ್ದರು. ವೈದ್ಯ ವೃತ್ತಿಯನ್ನು ಮಾಡುತ್ತಲೇ ಸಿನಿಮಾ ರಂಗಕ್ಕೂ ಕಾಲಿಟ್ಟರು. ಕೇವಲ ನಟರಾಗಿ ಉಳಿಯದೇ ಗೀತಾ ಆರ್ಟ್ಸ್ ನಿರ್ಮಾಣ ಸಂಸ್ಥೆಯನ್ನೂ ಶುರು ಮಾಡಿ, ನೂರಾರು ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ಈಗ ತೆಲುಗು ಚಿತ್ರೋದ್ಯಮದಲ್ಲಿ ಗೀತಾ ಆರ್ಟ್ಸ್ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾಗಿದೆ. ಈ ಸಂಸ್ಥೆಯನ್ನು ರಾಮಲಿಂಗಯ್ಯನವರ ಮಗ ಅಲ್ಲು ಅರವಿಂದ್ ಮುನ್ನೆಡೆಸಿಕೊಂಡು ಹೋಗುತ್ತಿದ್ದಾರೆ.

    ಅಲ್ಲು ಅರವಿಂದ್ (Allu Arvind) , ಅಲ್ಲು ನರೇಶ್, ಅಲ್ಲು ಅರ್ಜುನ್ ಹೀಗೆ ರಾಮಲಿಂಗಯ್ಯ ಅವರ ಕುಟುಂಬ ಸಿನಿಮಾ ರಂಗಕ್ಕಾಗಿಯೇ ಮೀಸಲಿಟ್ಟಿದೆ. ಪದ್ಮಶ್ರೀ ಗೌರವ ಸೇರಿದಂತೆ ಹಲವಾರು ಪುರಸ್ಕಾರಗಳನ್ನು ಪಡೆದಿರುವ ಅಲ್ಲು ರಾಮಲಿಂಗಯ್ಯ ಅವರು ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ಅಲ್ಲು ಬ್ಯುಸಿನೆಸ್ ಪಾರ್ಕ್ (Allu Park) ಉದ್ಘಾಟನೆ ಮತ್ತು ಅವರ ಕಂಚಿನ ಪ್ರತಿಮೆ ಅನಾವರಣೆ ಮಾಡಲಾಗಿದೆ.

     

    ಈ ಸಂದರ್ಭದಲ್ಲಿ ಅವರ ಕುಟುಂಬ ರಾಮಲಿಂಗಯ್ಯ ಅವರ ಮಗ ಅಲ್ಲು ಅರವಿಂದ್, ಅಲ್ಲು ನರೇಶ್, ಮಕ್ಕಳು, ಮೊಕ್ಕಳು ಸೇರಿದಂತೆ ಇಡೀ ಕುಟುಂಬವೇ ಭಾಗಿಯಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೊಳೆಹೊನ್ನೂರು ಗಾಂಧಿ ಸರ್ಕಲ್‌ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ- ಸ್ಥಳೀಯರ ಪ್ರತಿಭಟನೆ

    ಹೊಳೆಹೊನ್ನೂರು ಗಾಂಧಿ ಸರ್ಕಲ್‌ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ- ಸ್ಥಳೀಯರ ಪ್ರತಿಭಟನೆ

    ಶಿವಮೊಗ್ಗ: ಮಹಾತ್ಮ ಗಾಂಧಿ (Mahatma Gandhi) ಪ್ರತಿಮೆಯನ್ನು (Statue) ಕೆಡವಿ ಕಿಡಿಗೇಡಿಗಳು ಧ್ವಂಸ ಮಾಡಿದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿ (Bhadravathi) ತಾಲೂಕಿನ ಹೊಳೆಹೊನ್ನೂರಿನಲ್ಲಿ (Holehonnur) ನಡೆದಿದೆ.

    ಹೊಳೆಹೊನ್ನೂರಿನ ಸರ್ಕಲ್‌ನಲ್ಲಿ ಸುಮಾರು 18 ವರ್ಷಗಳ ಹಿಂದೆ ಈ ಗಾಂಧಿ ಪ್ರತಿಮೆ ನಿರ್ಮಿಸಲಾಗಿತ್ತು. ಪ್ರತಿಮೆ ಸುತ್ತ ಮಂಟಪ ನಿರ್ಮಿಸಿ, ವಿಶೇಷವಾದ ಗೌರವವನ್ನು ನೀಡಲಾಗುತ್ತಿತ್ತು. ಮಧ್ಯರಾತ್ರಿ ಬೈಕ್‌ನಲ್ಲಿ ಬಂದ ಇಬ್ಬರು ಕಿಡಿಗೇಡಿಗಳು ಗಾಂಧೀಜಿಯವರ ಪ್ರತಿಮೆಯನ್ನು ಕೆಡವಿದ್ದಾರೆ. ಮೂರ್ತಿಯನ್ನು ಧ್ವಂಸಗೊಳಿಸಿದ್ದಷ್ಟೇ ಅಲ್ಲದೆ, ಅದನ್ನು ಬೀಳಿಸಿ ಪುಡಿ ಮಾಡಿದ್ದಾರೆ. ಇದನ್ನೂ ಓದಿ: ಗೊಲ್ಲರದೊಡ್ಡಿ ಅಪಘಾತ ಪ್ರಕರಣ – ರಸ್ತೆಗೆ ಹಂಪ್ ಹಾಕುವಂತೆ ಮಗು ಶವ ಇಟ್ಟು ಪ್ರತಿಭಟನೆ

    ದುಷ್ಕರ್ಮಿಗಳ ಈ ದುಷ್ಕೃತ್ಯ ಸಿಸಿ ಕ್ಯಾಮರಾವೊಂದರಲ್ಲಿ ಸೆರೆಯಾಗಿದೆ ಎನ್ನಲಾಗಿದೆ. ಈ ವಿಚಾರ ತಿಳಿಯುತ್ತಲೇ ಪ್ರತಿಮೆ ಬಳಿಯಲ್ಲಿ ನೂರಾರು ಮಂದಿ ಜಮಾಯಿಸಿ, ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಮೆಯನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಹಾಗು ಹೊಳೆಹೊನ್ನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಿಡಿಗೇಡಿಗಳ ಪತ್ತೆಗೆ ಮುಂದಾಗಿದ್ದಾರೆ. ಇದನ್ನೂ ಓದಿ: ಓವರ್‌ಟೇಕ್ ಅವಾಂತರದಿಂದ ಬೈಕ್‍ಗೆ ಟ್ರಕ್ ಡಿಕ್ಕಿ – ಇಬ್ಬರ ದುರ್ಮರಣ

    ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಟ್ವೀಟ್ ಮಾಡಿದ್ದು, ಘಟನೆಯನ್ನು ಖಂಡಿಸಿದ್ದಾರೆ. ಗಾಂಧಿ ಪ್ರತಿಮೆ ಧ್ವಂಸಗೊಳಿಸಿರುವ ದೇಶ ವಿರೋಧಿ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ನೆಲದ ಸ್ವಾತಂತ್ರ‍್ಯ ಚಳುವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ ಬಗ್ಗೆ ಗೌರವ ಇಲ್ಲದವರು ಮಾತ್ರ ಇಂತಹ ಹೀನ ಕೃತ್ಯ ಎಸಗಲು ಸಾಧ್ಯ. ಈ ಕೃತ್ಯದ ಹಿಂದೆ ಯಾರೇ ಇರಲಿ, ಅವರನ್ನು ಹಿಡಿದು ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ. ಯಾರೊಬ್ಬರೂ ಈ ಬಗ್ಗೆ ಉದ್ವೇಗಕ್ಕೆ ಒಳಗಾಗಬಾರದು. ಕಾನೂನು ಕೈಗೆತ್ತಿಕೊಳ್ಳದೇ ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಕರಿಸುವಂತೆ ಸಿಎಂ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕಲ್ಲು, ಚೂರಿ ಹಿಡಿದು ನಡುರಸ್ತೆಯಲ್ಲಿ ದಾಂಧಲೆ – ಸಿನಿಮೀಯ ಶೈಲಿಯಲ್ಲಿ ಲಾಕ್ ಮಾಡಿದ ಪೊಲೀಸರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾಲ್ಕಿ ಕಣಜಿಯಲ್ಲಿ ಮಾಜಿ ಶಾಸಕ ಮೊಳಕೇರಿ ಮೂರ್ತಿ ಅನಾವರಣ

    ಭಾಲ್ಕಿ ಕಣಜಿಯಲ್ಲಿ ಮಾಜಿ ಶಾಸಕ ಮೊಳಕೇರಿ ಮೂರ್ತಿ ಅನಾವರಣ

    ಬೀದರ್: ಮಾಜಿ ಶಾಸಕ ದಿ.ಕಲ್ಯಾಣರಾವ್ ಮೊಳಕೇರಿ (Kalyan Rao Molakeri) ಅವರ ಮೂರ್ತಿಯನ್ನು (Statue) ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು ಇಂದು ಭಾಲ್ಕಿ (Bhalki) ತಾಲ್ಲೂಕಿನ ಕಣಜಿ ಗ್ರಾಮದಲ್ಲಿ ಅನಾವರಣಗೊಳಿಸಿದರು.

    ನಿಧನರಾಗಿ 30 ವರ್ಷ ಕಳೆದರೂ ಕಲ್ಯಾಣರಾವ್ ಮೊಳಕೇರಿ ಅವರು ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಅವರು ಜನನಾಯಕ, ದೇಶ ಭಕ್ತ ಆಗಿದ್ದರು ಎಂದು ಬಣ್ಣಿಸಿದರು. ಇದನ್ನೂ ಓದಿ: ಆರೋಪ ಮಾಡಿ ಓಡಿ ಹೋಗುವ ಬಹಳ ಮಂದಿಯನ್ನು ನೋಡಿದ್ದೇನೆ: ಡಿಕೆ ಸುರೇಶ್

    ಕಲ್ಯಾಣರಾವ್ ಆದರ್ಶ ರಾಜಕಾರಣಿ ಆಗಿದ್ದರು. ಅವರ ಕುರಿತು ಕೃತಿ ರಚಿಸಿರುವುದು ಪ್ರಶಂಸನೀಯ ಎಂದು ಸಾಹಿತಿ ಪಂಚಾಕ್ಷರಿ ಪುಣ್ಯಶೆಟ್ಟಿ ರಚಿತ ಜನನಾಯಕ ಕಲ್ಯಾಣರಾವ್ ಮೊಳಕೇರಿ ಕೃತಿ ಬಿಡುಗಡೆ ಮಾಡಿದ ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ ನುಡಿದರು.

    ಕೃತಿಯಲ್ಲಿ ಲೇಖಕರು ಮೊಳಕೇರಿ ಅವರ ಜೀವನ ಹಾಗೂ ಸಾಧನೆ ಮೇಲೆ ಬೆಳಕು ಚೆಲ್ಲಿದ್ದಾರೆ. ಸಂಕ್ಷಿಪ್ತದಲ್ಲೇ ಸಮಗ್ರ ಮಾಹಿತಿ ಒದಗಿಸಿದ್ದಾರೆ ಎಂದು ಕೃತಿ ಕುರಿತು ಡಾ. ರಾಮಚಂದ್ರ ಗಣಾಪುರ ಹೇಳಿದರು.

    ಕಲ್ಯಾಣರಾವ್ ಅವರು ನಿಸ್ವಾರ್ಥ ಹಾಗೂ ಪ್ರಾಮಾಣಿಕ ರಾಜಕಾರಣಿಯಾಗಿದ್ದರು. ಅವರು ನಮ್ಮಿಂದ ಮರೆಯಾಗದಿರಲಿ ಎನ್ನುವ ಕಾರಣಕ್ಕೆ ಕೃತಿ ರಚಿಸಿದ್ದೇನೆ ಎಂದು ಪಂಚಾಕ್ಷರಿ ಪುಣ್ಯಶೆಟ್ಟಿ ತಿಳಿಸಿದರು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಳಗಾವಿಯಲ್ಲಿ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ – ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ

    ಬೆಳಗಾವಿಯಲ್ಲಿ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ – ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ

    ಬೆಳಗಾವಿ: ತಾಲೂಕಿನ ಮಚ್ಚೆ ಪಟ್ಟಣದಲ್ಲಿ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ (Sangolli Rayanna) ಪ್ರತಿಮೆ (Statue) ಪ್ರತಿಷ್ಠಾಪನೆಯಾಗಿದ್ದು ಸ್ಥಳಕ್ಕೆ ಬೆಳಗಾವಿ (Belagavi) ನಗರದ ಡಿಸಿಪಿ ಶೇಖರ್ ಹೆಚ್‌ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ.

    ತಾಲೂಕಿನ ಮಚ್ಚೆ ಪಟ್ಟಣದಲ್ಲಿ ಸಂಗೋಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆಯಿಂದ ಸದ್ಯ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ ನಿರ್ಮಾಣ ಆಗಿದೆ. ಹೀಗಾಗಿ ಮಚ್ಚೆ ಪಟ್ಟಣಕ್ಕೆ ಡಿಸಿಪಿ ಶೇಖರ್ ಹೆಚ್‌ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.

    ಬೆಳಗಾವಿ ಜಿಲ್ಲೆ ಮಚ್ಚೆ ಪಟ್ಟಣದ ಜೀಜಾಮಾತಾ ಚೌಕ್‌ನಲ್ಲಿರುವ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ಕಳೆದ ಹಲವು ವರ್ಷಗಳಿಂದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ಕನ್ನಡಪರ ಸಂಘಟನೆಗಳು ಮನವಿ ಮಾಡಿದ್ದವು. ಮತ್ತೊಂದು ಕಡೆ ಜೀಜಾಮಾತಾ ಅಥವಾ ಶಿವಾಜಿ ಮಹಾರಾಜರ ಪ್ರತಿಮೆ ಪ್ರತಿಷ್ಠಾಪಿಸಲು ಮರಾಠಿ ಭಾಷಿಕರು ಮನವಿ ಮಾಡಿದ್ದರು. ಇದೆಲ್ಲದರ ನಡುವೆ ಇದೀಗ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದೆ. ಇದನ್ನೂ ಓದಿ: ವಿಶ್ವ ಪರಿಸರ ದಿನಾಚರಣೆಯಂದೇ ಅರಣ್ಯಾಧಿಕಾರಿಗಳಿಗೆ ಡಿಕೆಶಿ ಕ್ಲಾಸ್

    ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಿಗಿ ಭದ್ರತೆಗೆ ಸ್ಥಳದಲ್ಲಿ ಒಂದು ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಸದ್ಯ ಸಂಗೊಳ್ಳಿ ರಾಯಣ್ಣ ಮೂರ್ತಿ ಎದುರು ಕನ್ನಡಪರ ಸಂಘಟನೆಗಳ ಕಾರ್ಯಕರ್ತರ ಜಮಾವಣೆ ಆಗಿದ್ದು ಡಿಸಿಪಿ ಶೇಖರ್ ಹೆಚ್‌ಟಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆ ವಹಿಸಲಾಗಿದೆ. ಇದನ್ನೂ ಓದಿ: ಶೃಂಗೇರಿಯಿಂದ ಪಂಚಲೋಹ ಮೂರ್ತಿ ರವಾನೆ – 75 ವರ್ಷಗಳ ಬಳಿಕ ಕಾಶ್ಮೀರದ ಶಾರದಾಂಬೆ ದೇಗುಲದಲ್ಲಿ ಪೂಜೆ

  • ಮೂರನೇ ಬಾರಿಗೆ ಛತ್ರಪತಿ ಶಿವಾಜಿ ಪ್ರತಿಮೆಗೆ ಎಂಇಎಸ್‌ನಿಂದ ಪೂಜೆ

    ಮೂರನೇ ಬಾರಿಗೆ ಛತ್ರಪತಿ ಶಿವಾಜಿ ಪ್ರತಿಮೆಗೆ ಎಂಇಎಸ್‌ನಿಂದ ಪೂಜೆ

    ಬೆಳಗಾವಿ: ಗ್ರಾಮೀಣ ಕ್ಷೇತ್ರದಲ್ಲಿ ರಾಜಹಂಸಗಡ ಕೋಟೆಯ ರಾಜಕೀಯ ಜೋರಾಗಿದ್ದು ಬಿಜೆಪಿ, ಕಾಂಗ್ರೆಸ್ ಬಳಿಕ ಈಗ ಎಂಇಎಸ್ (MES) ಎಂಟ್ರಿಯಾಗಿದೆ. ಮಹಾರಾಷ್ಟ್ರದ (Maharashtra) ರಾಯಗಡದಿಂದ ಅರ್ಚಕರನ್ನು ಕರೆತಂದು ಎಂಇಎಸ್ ಪುಂಡರು ರಾಜಹಂಸಗಡ ಕೋಟೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ರಾಜಹಂಸಗಡ ಕೋಟೆಯಲ್ಲಿ ಈಗಾಗಲೇ ಎರಡೆರಡು ಬಾರಿ ಪ್ರತಿಮೆ ಲೋಕಾರ್ಪಣೆ ಆಗಿದೆ. ಇದರಿಂದ ಶಿವಾಜಿ ಪ್ರತಿಮೆಗೆ (Chhatrapati Shivaji Statue) ಅಪಮಾನ ಆಗಿದೆ ಎಂದು ಆರೋಪಿಸಿ ಶಿವಾಜಿ ಪ್ರತಿಮೆ ಶುದ್ಧೀಕರಣ ಹೆಸರಲ್ಲಿ ಎಂಇಎಸ್ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ: ಬಿಜೆಪಿ ಶಾಸಕ ಅನಿಲ್ ಬೆನಕೆಗೆ ನಡು ರಸ್ತೆಯಲ್ಲೇ ಮತದಾರರಿಂದ ಕ್ಲಾಸ್

    ಮಹಾರಾಷ್ಟ್ರದ ರಾಯಗಡದಿಂದ ಅರ್ಚಕರನ್ನು ಕರೆತಂದು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಎದುರು ಉತ್ಸವ ಮೂರ್ತಿಗೆ ಪೂಜೆ ಮಾಡಲಾಯಿತು. ಮಹಾರಾಷ್ಟ್ರದ ಪಂಡರಪುರದ ಚಂದ್ರಭಾಗಾ, ಭೀಮಾ ಭಾಮಾ ಇಂದ್ರಾಯಣಿ, ರಾಜಹಂಸಗಡ, ರಾಮಶೇಜ ಸಾಲ್ಹೇರ, ಪನ್ಹಾಳಗಡ, ರಾಯಗಡ, ಗಂಗಾಸಾಗರದಿಂದ ನೀರು ತಂದು ಶಿವಾಜಿ ಉತ್ಸವ ಮೂರ್ತಿಗೆ ಪೂಜೆ ಮಾಡಲಾಯಿತು.

    ಇತ್ತ ಶಿವಾಜಿ ಪ್ರತಿಮೆ ಎದುರು ಯಾವುದೇ ರೀತಿಯ ಪೂಜೆಗೆ ಅವಕಾಶ ಇಲ್ಲ ಎಂದು ಜಿಲ್ಲಾಡಳಿತ ಸೂಚನಾ ಫಲಕ ಹಾಕಿದೆ. ಮತ್ತೊಂದೆಡೆ ಎಂಇಎಸ್ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಎದುರು ಪೂಜಾ ಕೈಂಕರ್ಯ ನಡೆಸಲಾಗಿದೆ. ಇದನ್ನೂ ಓದಿ: ಡಿಸಿ ಕಚೇರಿ ಮೇಲೆ ಆಜಾನ್ ಕೂಗಿದ ಕೇಸ್ – ಎಚ್ಚರಿಕೆ ನೀಡಿ ಯುವಕನಿಗೆ ಜಾಮೀನು ನೀಡಿದ ಪೊಲೀಸರು

  • ಮಾರ್ಚ್ 17ರಂದು ಎಂ.ಬಿ ಪಾಟೀಲ್ ಕಂಚಿನ ಪ್ರತಿಮೆ ಅನಾವರಣ

    ಮಾರ್ಚ್ 17ರಂದು ಎಂ.ಬಿ ಪಾಟೀಲ್ ಕಂಚಿನ ಪ್ರತಿಮೆ ಅನಾವರಣ

    ವಿಜಯಪುರ: ಜಿಲ್ಲೆಯ ಬಬಲೇಶ್ವರ ಕ್ಷೇತ್ರದ ಶಾಸಕ ಹಾಗೂ ಕೆಪಿಸಿಸಿ (KPCC) ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ (MB Patil) ಅವರ ಕಂಚಿನ ಪ್ರತಿಮೆ ಲೋಕಾರ್ಪಣೆಗೆ ಸಿದ್ಧಗೊಂಡಿದೆ.

    ಜಲಸಂಪನ್ಮೂಲ ಸಚಿವರಾಗಿ ಬಬಲೇಶ್ವರ ಕ್ಷೇತ್ರಕ್ಕೆ ಸಮಗ್ರ ನೀರಾವರಿ ಸೌಲಭ್ಯ ಕಲ್ಪಿಸಿರುವ ಕೃತಜ್ಞತೆಗಾಗಿ ತಾಲೂಕಿನ ಸಂಗಾಗಪುರ ಎಸ್.ಹೆಚ್ ಗ್ರಾಮದ ಜನರು ಎಂ.ಬಿ ಪಾಟೀಲ್‌ರ ಪ್ರತಿಮೆ ನಿರ್ಮಿಸಿದ್ದು, ಲೋಕಾರ್ಪಣೆಗೊಳಿಸಲು ಮುಂದಾಗಿದ್ದಾರೆ. ಇದನ್ನೂ ಓದಿ: ನರ್ಸ್ ವೇಷ ಧರಿಸಿ ಮಗು ಕಿಡ್ನಾಪ್ – ಮರಳಿ ತಾಯಿಯ ಮಡಿಲು ಸೇರಿದ ನವಜಾತ ಶಿಶು

    ಇದೇ ಮಾರ್ಚ್ 17ರಂದು ನಡೆಯುವ ಅದ್ಧೂರಿ ಸಮಾರಂಭದಲ್ಲಿ ಪ್ರತಿಮೆ ಲೋಕಾರ್ಪಣೆಗೊಳಿಸಲಾಗುತ್ತದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಇದನ್ನೂ ಓದಿ: ಆಸ್ಕರ್ ವೇದಿಕೆಯಲ್ಲಿ `ನಾಟು ನಾಟು’ ಹಾಡಿಗೆ ಕುಣಿಯಲಿರುವ ಈ ಯುವತಿ ಯಾರು?

    2023ರ ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Election), 2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಂತ್ರ ರೂಪಿಸಲು ಮುಂದಾಗಿದ್ದ ಎಐಸಿಸಿ, ಲಿಂಗಾಯತ ಸಮುದಾಯದ ಪ್ರಬಲ ಮತದಾರರನ್ನು ಸೆಳೆಯುವ ಸಲುವಾಗಿ ಎಂ.ಬಿ.ಪಾಟೀಲ್ ಅವರನ್ನ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಕಳೆದ ವರ್ಷ ನೇಮಿಸಿತ್ತು.

  • ವಿಧಾನಸೌಧ ಮುಂಭಾಗ ಬಸವಣ್ಣ, ಕೆಂಪೇಗೌಡ ಪ್ರತಿಮೆಗಳಿಗೆ ಗುದ್ದಲಿ ಪೂಜೆ – 2 ತಿಂಗಳಲ್ಲಿ ಪ್ರತಿಷ್ಠಾಪನೆ: ಬೊಮ್ಮಾಯಿ

    ವಿಧಾನಸೌಧ ಮುಂಭಾಗ ಬಸವಣ್ಣ, ಕೆಂಪೇಗೌಡ ಪ್ರತಿಮೆಗಳಿಗೆ ಗುದ್ದಲಿ ಪೂಜೆ – 2 ತಿಂಗಳಲ್ಲಿ ಪ್ರತಿಷ್ಠಾಪನೆ: ಬೊಮ್ಮಾಯಿ

    ಬೆಂಗಳೂರು: ವಿಧಾನಸೌಧದ (Vidhana Soudha) ಮುಂಭಾಗದಲ್ಲಿ ಜಗಜ್ಯೋತಿ ಬಸವೇಶ್ವರ ಮತ್ತು ನಾಡಪ್ರಭು ಕೆಂಪೇಗೌಡರ ಪುತ್ಥಳಿ (Statue) ನಿರ್ಮಾಣ ಕಾಮಗಾರಿಯ ಭೂಮಿ ಪೂಜಾ ಕಾರ್ಯ ಶುಕ್ರವಾರ ನೆರವೇರಿದೆ. ಗುದ್ದಲಿ ಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ (Basavaraj Bommai),  ಜಗಜ್ಯೋತಿ ಬಸವಣ್ಣ (Basavanna) ಹಾಗೂ ನಾಡಪ್ರಭು ಕೆಂಪೇಗೌಡರ (Kempegowda) ಚಿಂತನೆ ನಾಡಿನಲ್ಲಿ ಹರಿಯಬೇಕು ಎಂದು ನುಡಿದಿದ್ದಾರೆ.

    ಈ ಇಬ್ಬರೂ ಮಹಾನ್ ಪುರುಷರ ಆಡಳಿತ ಮತ್ತು ಆಧ್ಯಾತ್ಮಿಕ ಚಿಂತನೆ ನಮ್ಮ ನಾಡಿನಲ್ಲಿ ಬರಬೇಕು. ಈ ಶಕ್ತಿ ಸೌಧದಿಂದ ಅದು ಹರಿಯಬೇಕು. ಆ ವಿಚಾರಗಳು ಹರಿದು ಕರ್ನಾಟಕ ಸಮಗ್ರವಾಗಿ ಅಭಿವೃದ್ಧಿಯಾಗಿರುವ, ಸಾಮರಸ್ಯವಿರುವ, ಭಾರತದಲ್ಲಿಯೇ ಅತ್ಯಂತ ಶ್ರೇಷ್ಠ ರಾಜ್ಯವಾಗಬೇಕು. ಈ ಇಬ್ಬರೂ ಮಹಾತ್ಮರ ಪ್ರೇರಣೆ ವಿಧಾನಸೌಧದಲ್ಲಿ ನಿಲ್ಲಬೇಕು ಎಂಬ ಕಾರಣಕ್ಕೆ ಪ್ರತಿಮೆಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

    ನವ ಕರ್ನಾಟಕ ನಿರ್ಮಾಣಕ್ಕೆ ಭದ್ರ ಬುನಾದಿ:
    ಬರುವ ದಿನಗಳಲ್ಲಿ ನಾಡಿನ ಜನತೆಗೆ ಒಳ್ಳೆಯದಾಗಿ ನವ ಕರ್ನಾಟಕ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಲಾಗಿದೆ. ಇಂದಿನಿಂದ ಈ ಕೆಲಸ ಪ್ರಾರಂಭವಾಗಿದೆ. ಇನ್ನೆರಡು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡು ಎಲ್ಲರೂ ಸೇರಿ ಉದ್ಘಾಟನೆ ಮಾಡೋಣ. ಕನ್ನಡ ನಾಡಿಗೆ ಇದೊಂದು ಶುಭದಿನ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

    ನಾಡು ಕಟ್ಟಿರುವ ಅಪ್ರತಿಮ ನಾಯಕರು:
    ಇವರು ಕನ್ನಡನಾಡಿನಲ್ಲಿ ಹುಟ್ಟಿ, ಕ್ರಾಂತಿಯನ್ನು ಮಾಡಿದ ಇಬ್ಬರು ಮಹಾನ್ ಪುರುಷರು. ಒಂದು ವಿಶ್ವಬಂಧು, ಸಾಮಾಜಿಕ, ಆರ್ಥಿಕ ಹಾಗೂ ವೈಚಾರಿಕ ಕ್ರಾಂತಿಯನ್ನು ಕರ್ನಾಟಕದಲ್ಲಿ 12 ನೇ ಶತಮಾನದಲ್ಲಿ ಮಾಡಿ ಜಗತ್ತಿಗೆ ದರ್ಶನವನ್ನು ನೀಡಿರುವವರ ಪುತ್ಥಳಿ. ಮತ್ತೊಂದು ನಾಡು ಕಟ್ಟಿರುವ ಅಪ್ರತಿಮ ನಾಯಕರು, ಜನಹಿತಕ್ಕಾಗಿ ಕೆರೆಕಟ್ಟೆಗಳು, ಊರು ಕೇರಿಗಳನ್ನು, ಮಾರುಕಟ್ಟೆಗಳನ್ನು ಕಟ್ಟಿ ಮಾದರಿ ಆಡಳಿತ ಮಾಡಿರುವ ನಾಡಪ್ರಭು ಕೆಂಪೇಗೌಡರ ಪುತ್ಥಳಿ ಎಂದು ಹೇಳಿದರು. ಇದನ್ನೂ ಓದಿ: ಜ.31 ರಿಂದ 66 ದಿನ ಸಂಸತ್ ಬಜೆಟ್ ಅಧಿವೇಶನ – ಪ್ರಹ್ಲಾದ್ ಜೋಶಿ

    ಇವುಗಳನ್ನು ವಿಧಾನಸೌಧದ ಮುಂಭಾಗದಲ್ಲಿ ನಿರ್ಮಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿತ್ತು. ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಎಲ್ಲಾ ನಾಯಕರ ಅನುಮತಿ ಪಡೆದಿದ್ದರು. ಸಚಿವ ಆರ್. ಅಶೋಕ್ ಅವರಿಗೆ ಇದರ ಜವಾಬ್ದಾರಿ ನೀಡಲಾಗಿತ್ತು. ಅಶೋಕ್ ಅವರು ಅತ್ಯಂತ ಅಚ್ಚುಕಟ್ಟಾಗಿ ಇದರ ಜವಾಬ್ದಾರಿಯನ್ನು ನಿರ್ವಹಿಸಿ, ಕೇವಲ 2 ತಿಂಗಳೊಳಗೆ ಕಾರ್ಯನಿರ್ವಹಿಸಿ ಕ್ರಮ ಕೈಗೊಂಡಿದ್ದಾರೆ. ನಾಡಿನ ಎಲ್ಲಾ ಪರಮಪೂಜ್ಯರ ಸಾನಿಧ್ಯದಲ್ಲಿ ಅವರ ಆಶೀರ್ವಾದದೊಂದಿಗೆ ಒಂದು ಶಂಕುಸ್ಥಾಪನೆ ನೆರವೇರಿದೆ ಎಂದು ನುಡಿದರು. ಇದನ್ನೂ ಓದಿ: 15 ಸಿಮ್‌ ಕಾರ್ಡ್‌ ಬದಲಾಯಿಸಿ, ತಲೆ ಬೋಳಿಸಿದ್ದ ಸ್ಯಾಟ್ರೋ ರವಿ ಕೊನೆಗೂ ಸಿಕ್ಕಿಬಿದ್ದ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಇಂದು ಮಂಗಳೂರಿನಲ್ಲಿ ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯಗೌಡರ ಪ್ರತಿಮೆ ಅನಾವರಣ

    ಇಂದು ಮಂಗಳೂರಿನಲ್ಲಿ ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯಗೌಡರ ಪ್ರತಿಮೆ ಅನಾವರಣ

    ಮಂಗಳೂರು: ಸ್ವಾತಂತ್ರ್ಯ ಸಮರ ಸೇನಾನಿ ಕೆದಂಬಾಡಿ ರಾಮಯ್ಯ ಗೌಡ (Kedambadi Ramaiah Gowda) ರ ಕಂಚಿನ ಪ್ರತಿಮೆ ಇಂದು ಮಂಗಳೂರಿನಲ್ಲಿ ಲೋಕಾರ್ಪಣೆಗೊಳ್ಳಲಿದೆ. ಸಿಎಂ ಬೊಮ್ಮಾಯಿ (Basavaraj Bommai) ಲೋಕಾರ್ಪಣೆ ಮಾಡಲಿದ್ದು ಸ್ವಾಮೀಜಿಗಳು, ಕೇಂದ್ರ, ರಾಜ್ಯದ ಸಚಿವರುಗಳೂ ಭಾಗಿಯಾಗಲಿದ್ದಾರೆ. ಬ್ರಿಟಿಷರ ಧ್ವಜ ಕಿತ್ತೆಸೆದು, ಭಾರತದ ಬಾವುಟವನ್ನು ಹಾರಿಸಿದ ಇಂದಿನ ಬಾವುಟಗುಡ್ಡೆಯ ಟಾಗೋರ್ ಪಾರ್ಕ್‍ಲ್ಲೇ ಪ್ರತಿಮೆ ನಿರ್ಮಿಸಲಾಗಿದ್ದು ಪಾಳು ಬಿದ್ದಿದ್ದ ಪಾರ್ಕ್‍ಗೂ ಮರು ಜೀವಬಂದಿದೆ.

    ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರಿಗೆ ಗೌರವ ಸಲ್ಲಿಸುವ ಹಿನ್ನಲೆಯಲ್ಲಿ ಸ್ವಾತಂತ್ರ್ಯದ 75 ನೇ ವರ್ಷದ ಸಂಭ್ರಮಾಚರಣೆಯಲ್ಲಿ ಅವರ ಪ್ರತಿಮೆ ಸ್ಥಾಪಿಸಲಾಗಿದೆ. ಸುಳ್ಯದಿಂದ ರೈತರ ಸೈನ್ಯ ಕಟ್ಟಿಕೊಂಡು ಮಂಗಳೂರುವರೆಗೂ ಬ್ರಿಟಿಷರನ್ನು ಹಿಮ್ಮೆಟ್ಟಿಸಿದ ರಾಮಯ್ಯಗೌಡರ ಪ್ರತಿಮೆಯನ್ನ ಇಂದು ಸಿಎಂ ಬೊಮ್ಮಾಯಿ ಅನಾವರಣ ಮಾಡಲಿದ್ದಾರೆ. ಇದನ್ನೂ ಓದಿ: ಇಂಗ್ಲೆಂಡ್‌ನಲ್ಲಿ ಆರ್ಥಿಕ ಬಿಕ್ಕಟ್ಟು – ತೆರಿಗೆ ಹೆಚ್ಚಿಸಿ ವೆಚ್ಚ ಕಡಿತಕ್ಕೆ ಮುಂದಾದ ಸರ್ಕಾರ

    ಮಂಗಳೂರಿನ ಹೃದಯ ಭಾಗದಲ್ಲಿರುವ ಬಾವುಟ ಗುಡ್ಡೆಯ ಟಾಗೋರ್ ಪಾರ್ಕ್ (Tagore Park) ನಲ್ಲಿ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಸ್ವಾತಂತ್ರ್ಯದ 75 ನೇ ವರ್ಷಾಚರಣೆ ಹಿನ್ನಲೆಯಲ್ಲಿ ಪ್ರತಿಮೆ ಲೋಕಾರ್ಪಣೆ ಮಾಡಲಾಗುತ್ತಿದೆ. ಕಾರ್ಯಕ್ರಮದಲ್ಲಿ ಆದಿ ಚುಂಚನಗಿರಿಯ ಡಾ.ನಿರ್ಮಲಾನಂದ ಶ್ರೀಗಳು, ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಸಚಿವ ಅಶ್ವಥ್ ನಾರಾಯಣ್ ಸೇರಿದಂತೆ ಇನ್ನಿತರರು ಭಾಗಿಯಾಗಲಿದ್ದಾರೆ.

    ರಾಮಯ್ಯ ಗೌಡರು ಭಾರತದ ಬಾವುಟವನ್ನು ಹಾರಿಸಿದ ಬಾವುಟ ಗುಡ್ಡೆಯ ಟಾಗೋರ್ ಪಾರ್ಕ್ ನಿರ್ವಹಣೆ ಇಲ್ಲದೆ ಪಾಳು ಬಿದ್ದಿತ್ತು. ಇದೀಗ ಪ್ರತಿಮೆ ಅನಾವರಣ ಮಾಡುವ ಹಿನ್ನೆಲೆಯಲ್ಲಿ ಪಾರ್ಕ್ ಗೂ ಹೊಸ ಕಳೆ ಬಂದಿದೆ. ಜಿಲ್ಲಾಡಳಿತ ಹಾಗೂ ಪಾಲಿಕೆ ಪ್ರತಿಮೆ ಹಾಗೂ ಪಾರ್ಕ್‍ನ ನಿರ್ಮಾಣದ ಕೆಲಸ ಮಾಡಿದ್ದು, ಯಾವುದೇ ತೊಂದರೆಯಾಗದಂತೆ ನಿರ್ವಹಣೆ ಮಾಡಲು ಪಾಲಿಕೆಗೆ ಜವಾಬ್ದಾರಿ ನೀಡಲಾಗಿದೆ.

    ಒಟ್ಟಿನಲ್ಲಿ ಸ್ವಾತಂತ್ರ್ಯಕ್ಕಾಗಿ ಸಾಕಷ್ಟು ಹೋರಾಟಗಾರರು ಹೋರಾಡಿ ಬಲಿದಾನ ಮಾಡಿದ್ರೂ ಹೆಚ್ಚಿನವರಿಗೆ ತಿಳಿದಿಲ್ಲ. ಹೀಗಾಗಿ ಸರ್ಕಾರ ಸ್ವಾತಂತ್ರ್ಯದ 75ನೇ ವರ್ಷಾಚರಣೆಯ ಹಿನ್ನಲೆಯಲ್ಲಿ ಇಂತಹ ಅಪ್ರತಿಮ ಹೋರಾಟಗಾರರನ್ನು ನೆನಪಿಸುತ್ತಿರೋದು ಶ್ಲಾಘನೀಯ.

    Live Tv
    [brid partner=56869869 player=32851 video=960834 autoplay=true]

  • ಕೆಂಪೇಗೌಡ ಪ್ರತಿಮೆ ಅನಾವರಣ : ವಿಶೇಷ ವಿಡಿಯೋಗೆ ರಾಕಿಂಗ್ ಸ್ಟಾರ್ ಯಶ್ ಧ್ವನಿ

    ಕೆಂಪೇಗೌಡ ಪ್ರತಿಮೆ ಅನಾವರಣ : ವಿಶೇಷ ವಿಡಿಯೋಗೆ ರಾಕಿಂಗ್ ಸ್ಟಾರ್ ಯಶ್ ಧ್ವನಿ

    ವೆಂಬರ್ 11 ರಂದು ನಾಡಪ್ರಭು ಕೆಂಪೇಗೌಡ ಬೃಹತ್ ಪ್ರತಿಮೆಯನ್ನು ಅನಾವರಣ ಮಾಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದು, ಈ ಕಾರ್ಯಕ್ರಮದಲ್ಲಿ ವಿಶೇಷ ವಿಡಿಯೋವೊಂದನ್ನು ಪ್ರದರ್ಶನ ಮಾಡಲಾಗುತ್ತಿದೆ. ಕೆಂಪೇಗೌಡರ ಜೀವನ ಸಾಧನೆಯನ್ನು ಈ ವಿಶೇಷ ವಿಡಿಯೋದ ಮೂಲಕ ತೋರಿಸಲಾಗುತ್ತಿದ್ದು, ಇದಕ್ಕೆ ಯಶ್ (Yash) ಅವರು ಹಿನ್ನೆಲೆ ಧ್ವನಿಯನ್ನು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

    ಎರಡು ದಿನಗಳ ಹಿಂದೆಯಷ್ಟೇ ‘ಗಂಧದ ಗುಡಿ’ ಡಾಕ್ಯುಡ್ರಾಮಾದ ನಿರ್ದೇಶಕ ಅಮೋಘ ವರ್ಷ (Amogha Varsha) ಮತ್ತು ಯಶ್ ಡಬ್ಬಿಂಗ್ ಸ್ಟುಡಿಯೋದಲ್ಲಿ ಕಾಣಿಸಿಕೊಂಡಿದ್ದರು. ಡಬ್ಬಿಂಗ್ ಸ್ಟುಡಿಯೋದಲ್ಲಿ ಇಬ್ಬರು ಇದ್ದ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹಲವು ಚರ್ಚೆಗೆ ಕಾರಣವಾಗಿತ್ತು. ಗಂಧದ ಗುಡಿ ಪ್ರಾಜೆಕ್ಟ್ ನಲ್ಲಿ ಯಶ್ ಏನಾದರೂ ಇನ್ವಾಲ್ ಆಗಿದ್ದಾರಾ ಎನ್ನುವ ಮಾತು ಕೇಳಿ ಬಂದಿತ್ತು. ಅಲ್ಲದೇ, ಈ ಜೋಡಿ ಮತ್ತೇನಾದ್ರೂ ಕೆಲಸ ಮಾಡುತ್ತಿರಬಹುದಾ ಎಂದು ಪ್ರಶ್ನೆ ಎದ್ದಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ. ಇದನ್ನೂ  ಓದಿ:ನಟನೆಯತ್ತ ʻಕಾಂತಾರʼ ಹೀರೋ ರಿಷಬ್ ಪತ್ನಿ ಪ್ರಗತಿ ಶೆಟ್ಟಿ

    ನಾಡಪ್ರಭು ಕೆಂಪೇಗೌಡ (Kampegowda) ಬೃಹತ್ ಪ್ರತಿಮೆಯ ಅನಾವರಣದ ಉಸ್ತುವಾರಿಯನ್ನು ಸಚಿವ ಅಶ್ವತ್ಥ್ ನಾರಾಯಣ್ ಅವರು ವಹಿಸಿಕೊಂಡಿದ್ದಾರೆ. ಈ ಕಾರಣಕ್ಕಾಗಿಯೇ ಯಶ್ ಅವರು ಹಿನ್ನೆಲೆ ಧ್ವನಿ ನೀಡಲು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಪೆಷಲ್ ವಿಡಿಯೋವನ್ನು ಮಾಡಲು ಅಮೋಘವರ್ಷ ಅವರು ಜವಾಬ್ದಾರಿ ತಗೆದುಕೊಂಡಿದ್ದು, ಆ ಸಾಕ್ಷ್ಯ ಚಿತ್ರಕ್ಕೆ ಯಶ್ ಧ್ವನಿ ನೀಡಿದ್ದಾರೆ ಎನ್ನುವುದು ಫೋಟೋ ಹಿಂದಿರುವ ಕಥೆಯಂತೆ.

    Live Tv
    [brid partner=56869869 player=32851 video=960834 autoplay=true]

  • ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿದ ಕೂಡಲೇ ಒಕ್ಕಲಿಗರು ಬಿಜೆಪಿ ಹಿಂದೆ ಹೋಗೋದಿಲ್ಲ: ಕುಮಾರಸ್ವಾಮಿ

    ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿದ ಕೂಡಲೇ ಒಕ್ಕಲಿಗರು ಬಿಜೆಪಿ ಹಿಂದೆ ಹೋಗೋದಿಲ್ಲ: ಕುಮಾರಸ್ವಾಮಿ

    ಬೆಂಗಳೂರು: ಕೆಂಪೇಗೌಡರ ಪ್ರತಿಮೆ (KempegowdaStatue) ಸ್ಥಾಪನೆ ಮಾಡಿದ ಕೂಡಲೇ ಒಕ್ಕಲಿಗರ (Okkaligas) ಮತ ಬಿಜೆಪಿಗೆ (BJP) ಹೋಗುವುದಿಲ್ಲ. ಅಂತಹ ಭ್ರಮೆಯಿಂದ ಬಿಜೆಪಿ ಹೊರಗೆ ಬರಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಕೆಂಪೇಗೌಡರ ಪ್ರತಿಮೆ, ಪ್ರಧಾನಿ ನರೇಂದ್ರ ಮೋದಿ (Narendra Modi) ಕಾರ್ಯಕ್ರಮದ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೋದಿ ಬರುತ್ತಾರೆ ಹೋಗುತ್ತಾರೆ ಅಷ್ಟೆ. ಕೆಂಪೇಗೌಡ ಪ್ರತಿಮೆ ಅನಾವರಣ ಒಂದು ಭಾಗ. ಈಗಾಗಲೇ ರಾಜ್ಯದ ಹಲವಾರು ಭಾಗದಲ್ಲಿ ಕೆಂಪೇಗೌಡ ಪ್ರತಿಮೆಗಳು ನಿತ್ಯ ಒಂದಲ್ಲ ಒಂದು ಭಾಗದಲ್ಲಿ ಅನಾವರಣ ಆಗುತ್ತಿವೆ. ಇದು ಬಿಜೆಪಿಯ ನಿಯೋಜಿತ ಕಾರ್ಯಕ್ರಮ ಅಷ್ಟೆ. ಅದಕ್ಕೆ ನಾನು ಹೆಚ್ಚಿನ ಮಹತ್ವ ಕೊಡುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ದೆಹಲಿಯ ರಹಸ್ಯ ಸ್ಥಳದಲ್ಲಿ ಅಮಿತ್ ಶಾ ನೇತೃತ್ವದಲ್ಲಿ ಹೈವೋಲ್ಟೇಜ್ ಮೀಟಿಂಗ್

    ಕೆಂಪೇಗೌಡರ ಕನಸು ನನಸಾದಾಗ ನಾವು ಕೆಂಪೇಗೌಡರಿಗೆ ಗೌರವ ಕೊಟ್ಟ ಹಾಗೆ. ಬೆಂಗಳೂರು ನಗರ ಇಷ್ಟು ದೊಡ್ಡದಾಗಿ ಬೆಳೆದಿದೆ. ಬೆಂಗಳೂರಿನಲ್ಲಿ ನಿರುದ್ಯೋಗ ಹೆಚ್ಚಾಗಿದೆ. ಎರಡು ರಾಷ್ಟ್ರೀಯ ಪಕ್ಷಗಳು ಬೆಂಗಳೂರಿನಲ್ಲಿ ದೊಡ್ಡ ಅನಾಹುತ ಮಾಡಿವೆ. ಅದನ್ನು ಸರಿಪಡಿಸುವ ಕೆಲಸ ಮಾಡಿ ಕೆಂಪೇಗೌಡರಿಗೆ ಗೌರವ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 5,000 ಕೋಟಿ ವೆಚ್ಚದ ಬೆಂಗಳೂರು ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಫೋಟೋ ಬಿಡುಗಡೆ

    ಕೆಂಪೇಗೌಡ ಪ್ರತಿಮೆಯಿಂದ ಬಿಜೆಪಿಗೆ ಒಕ್ಕಲಿಗರ ಮತ ಹೋಗುತ್ತದೆ ಎಂಬ ಭ್ರಮೆ ಬೇಡ. ಕೆಂಪೇಗೌಡ ಪ್ರತಿಮೆ ಮಾಡಿ, ಮೋದಿ ಕೈಯಲ್ಲಿ ಉದ್ಘಾಟನೆ ಮಾಡಿಸಿದರೆ ಒಕ್ಕಲಿಗರು ಮತ್ತು ಕನ್ನಡಿಗರು ಬಿಜೆಪಿ ಹಿಂದೆ ಹೋಗುವುದಿಲ್ಲ. ಅಂತಹ ಭ್ರಮೆಯಲ್ಲಿ ಬಿಜೆಪಿ ಅವರು ಇದ್ದರೆ, ಆ ಭ್ರಮೆಯಿಂದ ಜನರೇ ಅವರನ್ನು ಹೊರಗೆ ತರುತ್ತಾರೆ ಎಂದು ಟಾಂಗ್ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]