Tag: stepfather

  • 14ರ ಬಾಲಕಿಯನ್ನು ರೇಪ್ ಮಾಡಿ ಗರ್ಭಿಣಿಯಾಗಿಸಿದ ಮಲತಂದೆ

    ಮುಂಬೈ: ಅಪ್ರಾಪ್ತ ಬಾಲಕಿಯ (Girl) ಮೇಲೆ ಆಕೆಯ ಮಲತಂದೆಯೇ (Stepfather) ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿದ ಘಟನೆ ಮಹಾರಾಷ್ಟ್ರದ (Maharashtra) ರಾಯಗಢ ಜಿಲ್ಲೆಯಲ್ಲಿ ನಡೆದಿದೆ.

    45 ವರ್ಷದ ಆರೋಪಿ ನವಿ ಮುಂಬೈ ಸಮೀಪದ ಪನ್ವೇಲ್ ತಾಲೂಕಿನಲ್ಲಿ ವಾಸವಾಗಿದ್ದಾನೆ. 14 ವರ್ಷದ ಬಾಲಕಿಯು ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಈ ಹಿನ್ನೆಲೆಯಲ್ಲಿ ಆಕೆಯ ತಾಯಿ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಬಾಲಕಿಯು 2 ತಿಂಗಳ ಗರ್ಭಿಣಿ ಆಗಿರುವ ವಿಷಯ ಬೆಳಕಿಗೆ ಬಂದಿದೆ.

    ಈ ಕುರಿತು ಬಾಲಕಿಯ ಬಳಿ ತಾಯಿ ವಿಚಾರಿಸಿದ್ದಾಳೆ. ಈ ವೇಳೆ ಕಳೆದ ವರ್ಷ ನವೆಂಬರ್ ತಿಂಗಳಿಂದ ಆಕೆಯ ಮಲ ತಂದೆಯಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಬಗ್ಗೆ ತಾಯಿಗೆ ತಿಳಿಸಿದ್ದಾಳೆ. ಬಾಲಕಿಯ ತಾಯಿ ಘಟನೆಗೆ ಸಂಬಂಧಿಸಿದಂತೆ ಪೊಲೀಸರಿಗೆ ದೂರು ದಾಖಲಿಸಿಲ್ಲ. ಆದರೆ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯ ಕಾಂಗ್ರೆಸ್‌ನಲ್ಲಿ ಎರಡೆರಡು 90+ ಟೆನ್ಶನ್ ಬಲು ಜೋರು

    ಮಾಹಿತಿ ಪಡೆದ ಪೊಲೀಸರು ಬಾಲಕಿಯ ಮನೆಗೆ ತೆರಳಿ ತನಿಖೆ ನಡೆಸಿದ್ದರು. ಆದರೆ ಬಾಲಕಿ ಶಾಲೆಗೆ ಹೋಗಿದ್ದಳು. ಈ ವಿಷಯ ತಿಳಿದ ಆರೋಪಿಯು ತಲೆಮರಿಸಿಕೊಂಡಿದ್ದು, ಮೊಬೈಲ್ ಸ್ವಿಚ್ಛ್ ಆಫ್ ಮಾಡಿಕೊಂಡಿದ್ದ. ಆದರೂ ಘಟನೆಗೆ ಸಂಬಂಧಿಸಿದಂತೆ ಖಂಡೇಶ್ವರ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಮಹಿಳೆ ಮೊದಲ ಪತಿ ಆಕೆಯನ್ನು ತೊರೆದಿದ್ದ. ಇದರಿಂದ ಆರೋಪಿಯು ಸುಮಾರು 5 ವರ್ಷಗಳ ಹಿಂದೆ ಸಂತ್ರಸ್ತೆಯ ತಾಯಿಯನ್ನು ಮದುವೆಯಾಗಿದ್ದ. ಇದನ್ನೂ ಓದಿ: ಮಿತ್ರನ ತಲೆಯನ್ನೇ ಕಡಿದು, ಹೃದಯ ಕಿತ್ತು ಕೊನೆಗೆ ಪೊಲೀಸರಿಗೆ ಶರಣಾದ

  • ಅಪ್ರಾಪ್ತ ಬಾಲಕಿ ಮೇಲೆ ಮಲತಂದೆಯಿಂದಲೇ ಅತ್ಯಾಚಾರ

    ಅಪ್ರಾಪ್ತ ಬಾಲಕಿ ಮೇಲೆ ಮಲತಂದೆಯಿಂದಲೇ ಅತ್ಯಾಚಾರ

    ನವದೆಹಲಿ: ಅಪ್ರಾಪ್ತ ಬಾಲಕಿ ಮೇಲೆ ಮಲತಂದೆಯೇ ಅತ್ಯಾಚಾರವೆಸಗಿರುವ ಪ್ರಕರಣ ದೆಹಲಿಯಲ್ಲಿ ಬೆಳಕಿಗೆ ಬಂದಿದೆ.

    ಈ ಪ್ರಕರಣ ಸಂಬಂಧಿಸಿದಂತೆ ಶನಿವಾರ ದೂರು ದಾಖಲಿಸಲಾಗಿದ್ದು, ದೂರಿನಲ್ಲಿ ಬಾಲಕಿ ಉತ್ತರಾಖಂಡದ ಡೆಹ್ರಾಡೂನ್‍ನಲ್ಲಿ ಬಡಮಕ್ಕಳಿಗಾಗಿಯೇ ಇರುವ ಸಂಸ್ಥೆಯೊಂದರಲ್ಲಿ ಉಳಿದುಕೊಂಡಿದ್ದಳು. ಆದರೆ ರಜೆಗೆಂದು ದೆಹಲಿಗೆ ಬಂದಿದ್ದಳು ಎಂದು ತಿಳಿಸಲಾಗಿದೆ. ದನ್ನೂ ಓದಿ: #MeToo ಪ್ರಕರಣ – ಧರ್ಮೋ ರಕ್ಷತಿ ರಕ್ಷಿತಃ ಎಂದ ಧ್ರುವ, ಜಂಟಲ್ ಮ್ಯಾನ್ ಅಂದ ಮೇಘನಾ

    ಬಾಲಕಿಯ ತಾಯಿ ಮತ್ತು ಮಲತಂದೆ ಚಿರಾಗ್ ದೆಹಲಿಯ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಈ ವೇಳೆ ರಜೆಗೆಂದು ಬಂದಿದ್ದ ಬಾಲಕಿ ಮೇಲೆ ಮಲತಂದೆ ನಿರಂತರ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿರುವುದಾಗಿ ಉಪ ಪೊಲೀಸ್ ಆಯುಕ್ತ(ದಕ್ಷಿಣ)ಬೆನಿಟಾ ಮೇರಿ ಜೈಕರ್ ತಿಳಿಸಿದ್ದಾರೆ. ದನ್ನೂ ಓದಿ: ನಾಳೆಯಿಂದ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ಅನುಮತಿ- ವೀಕ್‍ಡೇಸ್‍ನಲ್ಲಿ ಅವಕಾಶ, ವೀಕೆಂಡ್‍ನಲ್ಲಿ ನಿರ್ಬಂಧ

    ಇದೀಗ ಮಲತಂದೆಯ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಡಿಸಿಪಿ ಹೇಳಿದ್ದಾರೆ.

  • ಬೆಂಗ್ಳೂರಿನಲ್ಲಿ ಹೇಯ ಕೃತ್ಯ- ಡ್ರಗ್ಸ್ ಕೊಟ್ಟು ಮಗಳ ಮೇಲೆ ನಿರಂತರ ಅತ್ಯಾಚಾರ

    ಬೆಂಗ್ಳೂರಿನಲ್ಲಿ ಹೇಯ ಕೃತ್ಯ- ಡ್ರಗ್ಸ್ ಕೊಟ್ಟು ಮಗಳ ಮೇಲೆ ನಿರಂತರ ಅತ್ಯಾಚಾರ

    – ಆಹಾರ ಪದಾರ್ಥದಲ್ಲಿ ನಿದ್ರೆ ಮಾತ್ರೆ ಬೆರೆಸಿ ಕೊಡ್ತಿದ್ದ ತಾಯಿ
    – ಹೈದರಾಬಾದ್ ಹೋಟೆಲಿನಲ್ಲಿ ಮದ್ಯ ಕುಡಿಸಿ ಅತ್ಯಾಚಾರ
    – ನಗ್ನ ಫೋಟೋ ತೆಗೆಸಿ, ಲೈಂಗಿಕ ಚಟುವಟಿಕೆಗಳಿಗೆ ಒತ್ತಾಯ

    ಬೆಂಗಳೂರು: ಪಾಪಿ ಮಲತಂದೆಯೊಬ್ಬ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

    ಆರೋಪಿಯನ್ನು ಅರಕೆರೆಯ ಸಾಮ್ರಾಟ್ ಲೇಔಟ್ ನಿವಾಸಿ ಅಲೆಗ್ಸಾಂಡರ್ ದಾಸ್ ಎಂದು ಗುರುತಿಸಲಾಗಿದೆ. ಆರೋಪಿ ತಂದೆ 20 ವರ್ಷದ ಮಗಳಿಗೆ ಡ್ರಗ್ಸ್ ಮತ್ತು ಮದ್ಯವನ್ನು ಕೊಟ್ಟು ಪ್ರಜ್ಞೆ ತಪ್ಪಿಸಿ ನಂತರ ಆಕೆಯ ಮೇಲೆ ಅತ್ಯಾಚಾರ ಎಸಗುತ್ತಿದ್ದನು. ಅಲ್ಲದೇ ಈ ಹೇಯ ಕೃತ್ಯಕ್ಕೆ ತಾಯಿ ಕೂಡ ಸಹಕರಿಸಿದ್ದಾಳೆ ಎಂದು ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ.

    ಕಾಲೇಜು ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಸದ್ಯಕ್ಕೆ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.

    ಏನಿದು ಪ್ರಕರಣ?
    ಸಂತ್ರಸ್ತೆ ತಾಯಿ ಹಲವು ವರ್ಷಗಳ ಹಿಂದೆ ಪತಿಯಿಂದ ವಿಚ್ಛೇದನ ಪಡೆದಿದ್ದಳು. ನಂತರ ಆರೋಪಿ ಅಲೆಗ್ಸಾಂಡರ್ ಜೊತೆ ಎರಡನೇ ಮದುವೆ ಮಾಡಿಕೊಂಡಿದ್ದಾಳೆ. ಆರೋಪಿ ನಿರ್ಮಾಣ ಕಂಪನಿಯ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದನು. ಸಂತ್ರಸ್ತೆ ತಾಯಿ ಮತ್ತು ಆರೋಪಿ ತಂದೆಯ ಜೊತೆ ಅರಕೆರೆಯಲ್ಲಿ ಬಾಡಿಯ ಮನೆಯಲ್ಲಿ ವಾಸ ಮಾಡುತ್ತಿದ್ದು, ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದಳು.

    ದೂರಿನಲ್ಲಿ ಏನಿದೆ?
    “ತಾಯಿ ನನಗೆ ಆಹಾರ ಪದಾರ್ಥದಲ್ಲಿ ನಿದ್ರೆ ಮಾತ್ರೆ ಬೆರೆಸಿ ಕೊಡುತ್ತಿದ್ದರು. ಅದನ್ನು ತಿಂದು ನನಗೆ ಪ್ರಜ್ಞೆ ತಪ್ಪುತ್ತಿತ್ತು. ಆಗ ಮಲತಂದೆ ನನ್ನ ಮೇಲೆ ಅನೇಕ ಬಾರಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಒಂದು ವರ್ಷದ ಹಿಂದೆ ಮಲತಂದೆ ಕೆಲಸದ ನಿಮಿತ್ತ ನನ್ನನ್ನು ಹೈದರಾಬಾದ್‍ಗೆ ಕರೆದುಕೊಂಡು ಹೋಗಿದ್ದನು. ಈ ವೇಳೆ ಹೋಟೆಲ್‍ನಲ್ಲಿ ಉಳಿದುಕೊಂಡಿದ್ದೆವು. ಆಗ ನನಗೆ ಬಲವಂತವಾಗಿ ಮದ್ಯ ಕುಡಿಸಿದ್ದನು. ನಾನು ಪ್ರಜ್ಞೆ ತಪ್ಪಿದ ನಂತರ ಅತ್ಯಾಚಾರ ಎಸಗಿದ್ದಾನೆ. ಬೆಳಗ್ಗೆ ಎಚ್ಚರಗೊಂಡಾಗ ಬಟ್ಟೆ ಇರುತ್ತಿರಲಿಲ್ಲ” ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

    ಅಷ್ಟೇ ಅಲ್ಲದೇ ಕಾಲೇಜಿಗೆ ಹೋಗುವುದನ್ನು ನಿಲ್ಲಿಸಿ ಮಾಡೆಲಿಂಗ್ ಮಾಡು, ನಗ್ನ ಫೋಟೋಗಳ್ನು ತೆಗೆಸಿಕೊಂಡು ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸುವಂತೆ ಒತ್ತಾಯಿಸಿದ್ದಾನೆ. ಜೊತೆಗೆ ಪ್ರತಿದಿನ ಮಾದಕ ವಸ್ತು ಮತ್ತು ಮದ್ಯ ಸೇವನೆ ಮಾಡುವಂತೆ ಮಲತಂದೆ ಪೀಡಿಸಿದ್ದಾನೆ. ಅನೇಕ ಬಾರಿ ನನಗೆ ತಿಳಿಯದಂತೆ ಆಹಾರ ಪದಾರ್ಥದಲ್ಲಿ ಮಾದಕ ವಸ್ತು ಬೆರೆಸಿ ನೀಡಿದ್ದಾನೆ. ಈ ಕೃತ್ಯಕ್ಕೆ ತಾಯಿಯೂ ಸಹಕರಿಸಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ.

    ಇದೇ ರೀತಿ ನನ್ನ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿದ್ದಾನೆ. ಒಂದು ವೇಳೆ ನಾನು ಪ್ರಶ್ನೆ ಮಾಡಿದರೆ, ನನ್ನ ಮೊಬೈಲ್ ಫೋನ್ ಕಿತ್ತುಕೊಂಡು ಕಾಲೇಜಿಗೆ ಹೋಗಬೇಡ ಎನ್ನುತ್ತಿದ್ದರು. ಬೇರೆ ಯಾರಿಗಾದರೂ ಈ ಬಗ್ಗೆ ಹೇಳಿದರೆ ನಾನು ನಿನ್ನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದನು. ಕೊನೆಗೆ ಇದರಿಂದ ನೊಂದು ನಾನು ಮನೆ ಬಿಟ್ಟು ಹೋಗಿದ್ದೆ. ಹೀಗಾಗಿ ನನಗೆ ಜೀವ ಭಯವಿದೆ. ನನಗೆ ರಕ್ಷಣೆ ಕೊಡಿ ಎಂದು ಸಂತ್ರಸ್ತೆ ಪೋಸರಿಗೆ ಮನವಿ ಮಾಡಿಕೊಂಡಿದ್ದಾಳೆ.

    ಅಲ್ಲದೇ ನನ್ನ ಮೇಲೆ ಅತ್ಯಾಚಾರ ನಡೆಸಿ, ಮಾನಸಿಕ, ದೈಹಿಕವಾಗಿ ಕಿರುಕುಳ ನೀಡಿರುವ ಆರೋಪಿ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾಳೆ. ಸದ್ಯಕ್ಕೆ ಹುಳಿಮಾವು ಪೊಲೀಸರು ಈ ಕುರಿತು ದೂರು ದಾಖಲಿಸಿಕೊಂಡು ಆರೋಪಿ ಮಲತಂದೆಗಾಗಿ ಬಲೆ ಬೀಸಿದ್ದಾರೆ.

  • ಮಗನನ್ನು ಕೊಚ್ಚಿ ಕೊಲೆಗೈದು, ಮೃತದೇಹ ತುಂಡರಿಸಿ ಬಿಸಾಡಿದ ಮಲತಂದೆ

    ಮಗನನ್ನು ಕೊಚ್ಚಿ ಕೊಲೆಗೈದು, ಮೃತದೇಹ ತುಂಡರಿಸಿ ಬಿಸಾಡಿದ ಮಲತಂದೆ

    – ಮೃತದೇಹದ ಭಾಗವನ್ನು ವಿವಿಧ ಸ್ಥಳದಲ್ಲಿ ಎಸೆದ
    – ಕೊಲೆಗೈದು ಮಗ ಕಾಣೆಯಾದ ಎಂದು ಕಣ್ಣೀರಿಟ್ಟ

    ಲಕ್ನೋ: ಇಷ್ಟವಿಲ್ಲವೆಂದು ಮಲತಂದೆಯೋರ್ವ ಮಗನನ್ನು ಕೊಚ್ಚಿ ಕೊಲೆಗೈದು, ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಬಿಸಾಡಿ ವಿಕೃತಿ ಮೆರೆದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

    ಬಹ್ರೇಚ್ ಜಿಲ್ಲೆಯ ಭೈನ್ಸಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನವೆಂಬರ್ 19ರಂದು ಬಾಲಕನ ಕೊಲೆ ನಡೆದಿದ್ದು, ಈಗ ಆರೋಪಿಗಳು ಯಾರು ಎಂದು ಬೆಳಕಿಗೆ ಬಂದಿದೆ. ಸೂರಜ್ ಯಾದವ್(6) ಮೃತ ಬಾಲಕ. ಆತನ ಮಲತಂದೆ ರಾಮ್ ಸಾರ್ವೆ ಯಾದವ್ ಕೊಲೆ ಮಾಡಿದ ಆರೋಪಿ. ಇತ್ತೀಚೆಗೆ ಸೂರಜ್ ತಾಯಿ ಹೀನಾ ಅವರನ್ನು ರಾಮ್ ಮದುವೆ ಆಗಿದ್ದನು. ಮೊದಲು ಎಲ್ಲವೂ ಚೆನ್ನಾಗಿತ್ತು. ಆದರೆ ದಿನಗಳು ಕಳೆಯುತ್ತಿದ್ದಂತೆ ರಾಮ್ ಹಾಗೂ ಆತನ ಸಹೋದರನಿಗೆ ಸೂರಜ್ ಇಷ್ಟವಾಗಲಿಲ್ಲ. ಆದಕ್ಕೆ ಇಬ್ಬರೂ ಸೇರಿಕೊಂಡು ಮುಗ್ದ ಬಾಲಕನ ಜೀವ ತೆಗೆದಿದ್ದಾರೆ.

    ನವೆಂಬರ್ 19ರಂದು ರಾಮ್ ಹಾಗೂ ಆತನ ಸಹೋದರ ಸೇರಿಕೊಂಡು ಬಾಲಕನನ್ನು ಕೊಚ್ಚಿ ಅಮಾನುಷವಾಗಿ ಕೊಲೆ ಮಾಡಿದ್ದರು. ಬಳಿಕ ಈ ಬಗ್ಗೆ ಯಾರಿಗೂ ತಿಳಿಯಬಾರದೆಂದು ಬಾಲಕನ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಯಾವುದೇ ಸಾಕ್ಷ್ಯ ಸಿಗಬಾರದೆಂದು ತುಂಡರಿಸಿದ ದೇಹದ ಭಾಗಗಳನ್ನು ಗ್ರಾಮದಿಂದ ದೂರ ತೆಗೆದುಕೊಂಡು ಹೋಗಿದ್ದರು. ನಂತರ ಅವುಗಳನ್ನು ಬೇರೆ ಬೇರೆ ಪ್ರದೇಶಗಳಲ್ಲಿ ಬಿಸಾಡಿ ಮನೆಗೆ ಮರಳಿ ಬಂದಿದ್ದರು.

    ಈ ಘಟನೆ ಬಳಿಕ ಎಲ್ಲರನ್ನು ನಂಬಿಸಲು ಸೂರಜ್ ಮನೆಬಿಟ್ಟು ಹೋಗಿದ್ದಾನೆ, ಕಾಣೆಯಾಗಿದ್ದಾನೆ ಎಂದು ಕಣ್ಣಿರು ಹಾಕಿದ್ದರು. ಆದರೆ ಇವರ ವರ್ತನೆ ಬಗ್ಗೆ ಅನುಮಾನಗೊಂಡ ಗ್ರಾಮಸ್ಥರು ಬಾಲಕ ಕಾಣೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ಕೊಟ್ಟಿದ್ದರು. ಈ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ ಆರೋಪಿಗಳ ಕೃತ್ಯ ಬೆಳಕಿಗೆ ಬಂದಿದೆ.

    ತಾವೇ ಕೊಲೆ ಮಾಡಿರುವುದಾಗಿ ಆರೋಪಿಗಳು ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾರೆ. ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಆವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ.

  • 16 ಬಾಲೆಯ ಮೇಲೆ ತಂದೆ, ಆತನ ಸಹೋದರನಿಂದ ಗ್ಯಾಂಗ್ ರೇಪ್

    16 ಬಾಲೆಯ ಮೇಲೆ ತಂದೆ, ಆತನ ಸಹೋದರನಿಂದ ಗ್ಯಾಂಗ್ ರೇಪ್

    ಲಕ್ನೋ: 16 ವರ್ಷದ ಬಾಲಕಿಯ ಮೇಲೆ ಮಲತಂದೆ ಹಾಗೂ ಆತನ ಸಹೋದರ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕಂಧ್ಲಾ ಪಟ್ಟಣದಲ್ಲಿ ನಡೆದಿದೆ.

    ಕಂಧ್ಲಾ ನಿವಾಸಿಗಳಾದ ವಾಸೀಮ್ ಹಾಗೂ ತನ್ವೀರ್ ಅತ್ಯಾಚಾರ ಎಸಗಿದ ಆರೋಪಿಗಳು. ಬಾಲಕಿಯ ಮೇಲೆ ಇಬ್ಬರು ಸೇರಿ ಶನಿವಾರ ಅತ್ಯಾಚಾರ ಎಸಗಿ ಪರಾರಿಯಗಿದ್ದಾರೆ. ಈ ಕುರಿತು ಸಂತ್ರಸ್ತ ಬಾಲಕಿಯ ತಾಯಿ ಸ್ಥಳೀಯ ಪೊಲೀಸ್ ಠಾಣೆಗೆ ಭಾನುವಾರ ದೂರು ನೀಡಿದ್ದಾರೆ.

    ಏನಿದು ಪ್ರಕರಣ?:
    ದೂರು ನೀಡಿದ ಮಹಿಳೆಯ ಪತಿ 2018ರ ಅಕ್ಟೋಬರ್ ನಲ್ಲಿ ನಿಧರಾಗಿದ್ದರು. ಬಳಿಕ ವಾಸೀಮ್ ಜೊತೆಗೆ ಮದುವೆಯಾಗಿದ್ದ ಆಕೆಯು 16 ವರ್ಷದ ಮಗಳನ್ನು ತನ್ನ ಬಳಿ ಇರಿಸಿಕೊಂಡಿದ್ದಳು. ಆರೋಪಿಗಳಾದ ವಾಸೀಮ್ ಮತ್ತು ತನ್ವೀರ್ ಇಬ್ಬರು ಸೇರಿ ನಿನ್ನೆ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ.

    ಅತ್ಯಾಚಾರ ಮಾಡಿರುವ ಕುರಿತು ಯಾರಿಗೂ ಹೇಳದಂತೆ ಮಗಳಿಗೆ ಬೆದರಿಕೆ ಹಾಕಿದ್ದಾರೆ. ಒಂದು ವೇಳೆ ಹೇಳಿದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತೇವೆ ಅಂತ ಆರೋಪಿಗಳು ಹೇಳಿದ್ದಾರೆ ಎಂದು ಸಂತ್ರಸ್ತ ಬಾಲಕಿಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.

    ಆರೋಪಿಗಳ ವಿರುದ್ಧ ಪೊಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಈ ಕುರಿತು ತನಿಖೆ ಆರಂಭವಾಗಿದ್ದು, ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 14ರ ಮಗಳ ಮೇಲೆಯೇ ಮಲತಂದೆಯಿಂದ ಅತ್ಯಾಚಾರ- ಈಗ 3 ತಿಂಗ್ಳ ಗರ್ಭಿಣಿ!

    14ರ ಮಗಳ ಮೇಲೆಯೇ ಮಲತಂದೆಯಿಂದ ಅತ್ಯಾಚಾರ- ಈಗ 3 ತಿಂಗ್ಳ ಗರ್ಭಿಣಿ!

    ಭೋಪಾಲ್: 14 ವರ್ಷದ ಮಗಳ ಮೇಲೆ ಮಲ ತಂದೆಯೊಬ್ಬ 5 ತಿಂಗಳಿಂದ ನಿರಂತರ ಅತ್ಯಾಚಾರವೆಸಗಿದ್ದು, ಸದ್ಯ ಆಕೆ ಗರ್ಭಿಣಿಯಾಗಿರೋ ಘಟನೆಯೊಂದು ಮಧ್ಯಪ್ರದೇಶದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

    ಈ ಘಟನೆ ದೇವಾಸ್ ಜಿಲ್ಲೆಯಲ್ಲಿ ನಡೆದಿದೆ. ಅತ್ಯಾಚಾರಕ್ಕೆ ಒಳಗಾದ ಅಪ್ರಾಪ್ತೆ ಬುಧವಾರ ವಾಂತಿ ಮಾಡಿಕೊಂಡಿದ್ದಾಳೆ. ಹೀಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಕೆಯನ್ನು ಪರೀಕ್ಷಿಸಿದ ವೈದ್ಯರು ಈಕೆ ಗರ್ಭಿಣಿಯಾಗಿರುವ ಮಾಹಿತಿಯನ್ನು ತಿಳಿಸಿದ್ದಾರೆ. ಆ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ ಅಂತ ಪೊಲೀಸರು ತಿಳಿಸಿದ್ದಾರೆ.

    ಮಲತಂದೆ 5 ತಿಂಗಳಿಂದಲೂ ಮಗಳ ಮೇಲೆ ಅತ್ಯಾಚಾರ ಎಸಗಿದ್ದು, ಮಾತ್ರವಲ್ಲದೇ ಈ ವಿಚಾರವನ್ನು ಬಹಿರಂಗಪಡಿಸಿದರೆ ಕೊಲ್ಲುವುದಾಗಿ ಬೆದರಿಕೆಯೊಡ್ಡಿದ್ದನು. ಈಕೆ ಈಗ 3 ತಿಂಗಳ ಗರ್ಭಿಣಿಯಾಗಿದ್ದಾಳೆ ಅಂತ ಖುರ್ತಯಾನ್ ಪೊಲೀಸ್ ಠಾಣೆಯ ಉಸ್ತುವಾರಿ ಬಿಶ್ವದೀಪ್ ಸಿಂಗ್ ಪರಿಹಾರ್ ಹೇಳಿದ್ದಾರೆ.

    ಸದ್ಯ ಆರೋಪಿ ವಿಜಯ್ ಬೈರಗಿಯನ್ನು ಬಂಧಿಸಲಾಗಿದೆ. ಇನ್ನು ಸಂತ್ರಸ್ಥೆಗೆ ಖುರ್ಟಯಾನ್ ಜಿಲ್ಲೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಕೆ ಸುಧಾರಿಸಿದ ಬಳಿಕ ಬಿಡುಗಡೆ ಮಾಡಲಾಗುತ್ತದೆ ಎಂದು ಜಿಲ್ಲಾಡಳಿತ ಹೇಳಿದೆ.

  • ಅಪ್ರಾಪ್ತ ಮಕ್ಕಳಿಬ್ಬರ ಮೇಲೆ ಮಲತಂದೆಯಿಂದಲೇ ಅತ್ಯಾಚಾರ

    ಅಪ್ರಾಪ್ತ ಮಕ್ಕಳಿಬ್ಬರ ಮೇಲೆ ಮಲತಂದೆಯಿಂದಲೇ ಅತ್ಯಾಚಾರ

    ಹಾವೇರಿ: ಅಪ್ರಾಪ್ತ ಮಕ್ಕಳಿಬ್ಬರ ಮೇಲೆ ಮಲತಂದೆಯೊಬ್ಬ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಹಾವೇರಿಯಲ್ಲಿ ನಡೆದಿದೆ.

    ಡಿಟಿಪಿ ಆಪರೇಟರ್ ಕೆಲಸ ಮಾಡುತ್ತಿದ್ದ ದೀಪಕ ಉಪಳೆ (38) ಅತ್ಯಾಚಾರ ಎಸಗಿದ ಆರೋಪಿ. ಕೆಲವು ವರ್ಷಗಳ ಹಿಂದೆ ದೀಪಕ್ ವಿಧವೆಯೊಬ್ಬರನ್ನು ಮದುವೆಯಾಗಿದ್ದ. ಅವಳಿಗೆ ಎರಡು ಜನ ಹೆಣ್ಣು ಮಕ್ಕಳಿದ್ದು, ದೀಪಕ್ ಜೊತೆಗೆ ವಾಸಿಸುತ್ತಿದ್ದರು.

    ವಿಧವೆಯ ಇಬ್ಬರು ಮಕ್ಕಳ ಮೇಲೂ ಆರೋಪಿ ದೀಪಕ್ ಅತ್ಯಾಚಾರ ಎಸಗಿದ್ದಾನೆ. ಈ ಕುರಿತು ಹಾವೇರಿ ನಗರದ ಮಹಿಳಾ ಪೆÇಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.