Tag: Sterilization

  • ನೆರೆಮನೆ ಯುವಕನ ಕಿರುಕುಳಕ್ಕೆ ಮನನೊಂದು ಯುವತಿ ಆತ್ಮಹತ್ಯೆ

    ನೆರೆಮನೆ ಯುವಕನ ಕಿರುಕುಳಕ್ಕೆ ಮನನೊಂದು ಯುವತಿ ಆತ್ಮಹತ್ಯೆ

    ಶಿವಮೊಗ್ಗ: ನೆರೆಮನೆಯವನು ಪ್ರೀತಿಸುವಂತೆ ಕಿರುಕುಳ ಕೊಡುತ್ತಿದ್ದ ಹಿನ್ನೆಲೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

    ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ವಸವೆ ಗ್ರಾಮದ ನಿವಾಸಿ ಕುಂಟಿಗೆಯ ಪಟೇಲ್ ಈಶ್ವರಪ್ಪ ಗೌಡ ಪುತ್ರಿ ವಿದ್ಯಾಶ್ರೀ(21) ಮೃತ ಯುವತಿ. ವಿದ್ಯಾಶ್ರೀ ಹೊಸನಗರದ ಕೊಡಚಾದ್ರಿ ಪದವಿ ಕಾಲೇಜಿನಲ್ಲಿ ಬಿ.ಕಾಂ ಪದವಿ ವ್ಯಾಸಂಗ ಮಾಡುತ್ತಿದ್ದಳು. ನೆರೆ ಮನೆಯ ಯುವಕ ಶಶಾಂಕ್, ವಿದ್ಯಾಶ್ರೀ ಪ್ರತಿ ನಿತ್ಯ ಕಾಲೇಜಿಗೆ ತೆರಳುವ ವೇಳೆ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಇದನ್ನೂ ಓದಿ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಮೆಟ್ರೋ ಪಿಲ್ಲರ್‌ಗೆ KSRTC ಬಸ್ ಡಿಕ್ಕಿ- ನಾಲ್ವರು ಗಂಭೀರ

    ವಿದ್ಯಾಶ್ರೀ ಈ ಕಿರುಕುಳಕ್ಕೆ ಬೇಸತ್ತು ಏಪ್ರಿಲ್ 19 ರಂದು ಕ್ರಿಮಿನಾಶಕ ಸೇವಿಸಿದ್ದಳು. ಈ ಹಿನ್ನೆಲೆ ಪೋಷಕರು ಆಕೆಯನ್ನು ಮಣಿಪಾಲಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ರಾತ್ರಿ ಕೊನೆಯುಸಿರೆಳೆದಿದ್ದಾಳೆ.

    ಈ ಸಾವಿಗೆ ಶಶಾಂಕ್ ಕಾರಣ ಆತನನ್ನು ಬಂಧಿಸಿ ಎಂದು ವಿದ್ಯಾಶ್ರೀ ಸಹೋದರ ರಕ್ಷಿತ್ ಪೊಲೀಸರಿಗೆ ದೂರು ಕೊಟ್ಟಿದ್ದಾನೆ. ಪ್ರಸ್ತುತ ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 500ಕ್ಕೂ ಹೆಚ್ಚು ಮಸೀದಿಗಳು ಸೇರಿ ಸೂಕ್ಷ್ಮ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌

  • ಪತ್ನಿ ಸಾವಿನ ಖಿನ್ನತೆಯಿಂದ ಪತಿಯೂ ಆತ್ಮಹತ್ಯೆ – ಮಕ್ಕಳು ಅನಾಥ

    ಪತ್ನಿ ಸಾವಿನ ಖಿನ್ನತೆಯಿಂದ ಪತಿಯೂ ಆತ್ಮಹತ್ಯೆ – ಮಕ್ಕಳು ಅನಾಥ

    ಮೈಸೂರು: ಪತ್ನಿ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ಪತಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ತಾಲೂಕಿನ ಹಂಚ್ಯಾ ಗ್ರಾಮದಲ್ಲಿ ನಡೆದಿದೆ.

    ಮಹೇಶ್ (45) ಆತ್ಮಹತ್ಯೆ ಮಾಡಿಕೊಂಡ ಪತಿ. 2 ತಿಂಗಳ ಹಿಂದೆಯಷ್ಟೇ ಮಹೇಶ್ ಪತ್ನಿ ಗಾಯಿತ್ರಿ, ರಕ್ತದೊತ್ತಡ (BP) ಮಾತ್ರೆ ಬದಲಿಗೆ ಬೇರೆ ಮತ್ರೆ ಸೇವಿಸಿ ಮೃತಪಟ್ಟಿದ್ದರು. ಪತ್ನಿ ಸಾವಿನ ಬಳಿಕ ಮಾನಸಿಕ ಖಿನ್ನತೆಗೆ ಜಾರಿದ್ದ ಪತಿ ಮಹೇಶ್, ಇದೀಗ ಕ್ರಿಮಿನಾಶಕ ಸೇವಿಸಿದ್ದಾರೆ. ಇದನ್ನೂ ಓದಿ: ದುಬಾರಿ ಗಿಫ್ಟ್ ನೀಡೋದಾಗಿ ಮಹಿಳೆಗೆ 5.10 ಲಕ್ಷ ರೂ. ವಂಚಿಸಿದ ಸ್ನೇಹಿತ!

    sucide

    ವಿಷ ಸೇವಿಸಿದ ಬಳಿಕ ಸಹೋದರನಿಗೆ ಕರೆ ಮಾಡಿ, ಪತ್ನಿ ಇಲ್ಲದೆ ಬದುಕಿರಲಾರೆ ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿ ಸಾವಿಗೆ ಶರಣಾಗಿದ್ದಾರೆ. ಗಾಯಿತ್ರಿ – ಮಹೇಶ್ ದಂಪತಿಯ ಇಬ್ಬರು ಮಕ್ಕಳೂ ಈಗ ಪೋಷಕರನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಇದನ್ನೂ ಓದಿ: ಸಿಎಂ ನಿತೀಶ್ ಕುಮಾರ್ ಮೇಲೆ ದಾಳಿಗೆ ಯತ್ನಿಸಿದ ಯುವಕ

    ಮೈಸೂರು ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

  • ಕ್ರಿಮಿನಾಶಕ ಸೇವಿಸಿ ಚಿರನಿದ್ರೆಗೆ ಜಾರಿದ ಕಾನ್‍ಸ್ಟೇಬಲ್

    ಕ್ರಿಮಿನಾಶಕ ಸೇವಿಸಿ ಚಿರನಿದ್ರೆಗೆ ಜಾರಿದ ಕಾನ್‍ಸ್ಟೇಬಲ್

    ಬಳ್ಳಾರಿ: ಪೊಲೀಸ್ ಒಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

    ಬಸವನಗೌಡ (35) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಳ್ಳಾರಿಯ ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ ಕಾನ್‍ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮೂಲತಃ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಚಿಕ್ಕ ಅಂತಾಪುರ ಗ್ರಾಮದ ನಿವಾಸಿಯಾದ ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಊರಿಗೆ ಹೋಗಿದ್ದ ಬಸವನಗೌಡ ರಾತ್ರಿ ಮಲಗುವ ವೇಳೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದುಬಂದಿಲ್ಲ. ಬಳ್ಳಾರಿ ವಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಪಿಸಿ ಬಸವನಗೌಡರ ಮೃತದೇಹವಿದ್ದು, ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎಂದು ಶಂಕಿಸಲಾಗಿದ್ದು, ನಿಖರವಾದ ಕಾರಣ ತಿಳಿದುಬಂದಿಲ್ಲ.

  • ಸೀಲ್‍ಡೌನ್ ಏರಿಯಾದಲ್ಲಿ ಕ್ರಿಮಿನಾಶಕ ಸೇವಿಸಿ ವ್ಯಕ್ತಿ ನೇಣಿಗೆ ಶರಣು

    ಸೀಲ್‍ಡೌನ್ ಏರಿಯಾದಲ್ಲಿ ಕ್ರಿಮಿನಾಶಕ ಸೇವಿಸಿ ವ್ಯಕ್ತಿ ನೇಣಿಗೆ ಶರಣು

    ಚಿಕ್ಕಬಳ್ಳಾಪುರ: ಪತ್ನಿಯ ಜೊತೆ ಜಗಳವಾಡಿಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ನಗರದ 17 ನೇ ವಾರ್ಡಿನ ಸೀಲ್‍ಡೌನ್ ಏರಿಯಾದಲ್ಲಿ ನಡೆದಿದೆ.

    42 ವರ್ಷದ ಮಂಜುನಾಥ್ ಮನೆಯ ಮೇಲಿನ ಕೋಣೆಯಲ್ಲಿ ಕ್ರಿಮಿನಾಶಕ ಸೇವಿಸಿ ತದನಂತರ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಅಂದಹಾಗೆ ಬುಧವಾರ ಸಂಜೆ ಗಂಡ-ಹೆಂಡತಿ ನಡುವೆ ಜಗಳ ನಡೆದಿದ್ದು, ಮನೆ ಬಳಿ ಪೊಲೀಸರು ಬಂದು ಬುದ್ಧಿವಾದ ಹೇಳಿ ಹೋಗಿದ್ದಾರೆ. ಜಗಳದ ನಂತರ ಹೆಂಡತಿ ನಂದಿನಿ ಸಂಬಂಧಿಕರೊಬ್ಬರಿಗೆ ಹುಷಾರಿಲ್ಲ ಅಂತ ದೇವನಹಳ್ಳಿ ತಾಲೂಕಿನ ತವರು ಮನೆಗೆ ಹೋಗಿದ್ದಳು.

    ತಡರಾತ್ರಿ ಗಂಡ ಮಂಜುನಾಥ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪತ್ನಿ ನಂದಿನಿ ಮೇಲೆ ಮೃತ ಮಂಜುನಾಥ್ ನ ಸಹೋದರ ಸಂಬಂಧಿ ಹಾಗೂ ಚಿಕ್ಕಪ್ಪ ಗಲಾಟೆ ಮಾಡಿ ನಡೆಸಿದ್ದಾರೆ. ಪರಸ್ಪರರು ಕಿತ್ತಾಡಿಕೊಂಡು ಕೂಗಾಟ ನಡೆಸಿಕೊಂಡಿದ್ದಾರೆ. ಗಂಡ ಕುಡಿದು ಬಂದ ಪದೇ ಗಲಾಟೆ ಮಾಡುವ ವಿಕೃತ ಮನಸ್ಥಿತಿ ಹೊಂದಿದ್ದು, ಪದೇ ಪದೇ ವಿಚಿತ್ರವಾಗಿ ವರ್ತನೆ ಮಾಡುತ್ತಿದ್ದ. ಜೊತೆಗೆ ನನಗೆ ಕಿರುಕುಳ ಕೊಡುತ್ತಿದ್ದ. ಆದರೆ ಯಾಕೆ ಹೀಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಗೊತ್ತಿಲ್ಲ ಎಂದು ಆಕೆ ಕಣ್ಣೀರು ಹಾಕಿದ್ದಾಳೆ.

    ಆದರೆ ಇದೆಲ್ಲವೂ ಸುಳ್ಳು ನಂದಿನಿ ಸರಿ ಇಲ್ಲ. ಆಕೆ ಹೇಳುತ್ತಿರುವುದೆಲ್ಲ ಸುಳ್ಳು ಎಂದು ಮಂಜುನಾಥ್ ಸಂಬಂಧಿಕರು ಗಲಾಟೆ ಮಾಡಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರ ನಗರ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ, ಪತ್ನಿ ಬಂದ ನಂತರ ಸಂಬಂಧಿಕರ ಕೈಯಲ್ಲಿ ಕೋಣೆಯ ಬಾಗಿಲು ಹೊಡೆದು ಮೃತದೇಹ ಹೊರತೆಗೆದಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

    ಚಿಕ್ಕಬಳ್ಳಾಪುರ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

  • ರೈತರಿಗೆ ತೊಂದರೆ ಕೊಟ್ಟರೆ ಹುಷಾರ್- ಬಿ.ಸಿ.ಪಾಟೀಲ್ ಎಚ್ಚರಿಕೆ

    ರೈತರಿಗೆ ತೊಂದರೆ ಕೊಟ್ಟರೆ ಹುಷಾರ್- ಬಿ.ಸಿ.ಪಾಟೀಲ್ ಎಚ್ಚರಿಕೆ

    ಚಿಕ್ಕಬಳ್ಳಾಪುರ: ಕೊರೊನಾ ಸಂದರ್ಭದ ದುರ್ಲಾಭ ಪಡೆದು ಬಿತ್ತನೆ ಬೀಜ, ಕ್ರಿಮಿನಾಶಕ ಹಾಗೂ ರಸಗೊಬ್ಬರಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವವರು ಮತ್ತು ಸರ್ಕಾರ ನಿಗದಿಪಡಿಸಿದ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.

    ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಕೃಷಿ, ರೇಷ್ಮೆ ಮತ್ತು ತೋಟಗಾರಿಕೆ ಇಲಾಖೆಗಳ ಅಧಿಕಾರಿಗಳು ಹಾಗೂ ರೈತ ಪ್ರತಿನಿಧಿಗಳ ಸಭೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಹಿನ್ನೆಲೆಯಲ್ಲಿ ತುಂಬಾ ಬಿಕ್ಕಟ್ಟಿನ ಪರಿಸ್ಥಿತಿ ಇದೆ. ಕೃಷಿ ಕ್ಷೇತ್ರ ಅನುಭವಿಸಿದ ನಷ್ಟದ ಪ್ರಮಾಣದಷ್ಟು ಮತ್ಯಾವ ಕ್ಷೇತ್ರವೂ ನಷ್ಟ ಅನುಭವಿಸಿಲ್ಲ. ಆದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಾಧ್ಯವಾದಷ್ಟೂ ರೈತರ ಬೆಂಬಲಕ್ಕೆ ನಿಂತಿದ್ದಾರೆ ಎಂದು ತಿಳಿಸಿದರು.

    ಈ ಮಧ್ಯೆ ಕೆಲವು ರಸಗೊಬ್ಬರಗಳ ಅಂಗಡಿಯ ಮಾಲೀಕರು ರಸಗೊಬ್ಬರ, ಕ್ರಿಮಿನಾಶಕ ಮತ್ತು ಬಿತ್ತನೆ ಬೀಜಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಎಂಬ ದೂರುಗಳು ಬಂದಿವೆ. ಈ ರೀತಿ ಪರಿಸ್ಥಿತಿಯ ದುರ್ಲಾಭ ಪಡೆದು ಮೊದಲೇ ಕಷ್ಟನಷ್ಟಕ್ಕೆ ಸಿಲುಕಿರುವ ರೈತರನ್ನು ಶೋಷಿಸುವವರನ್ನು ಸರ್ಕಾರ ಸಹಿಸುವ ಪ್ರಶ್ನೆಯೇ ಇಲ್ಲ. ಅಂತವರ ವಿರುದ್ಧ ಸರ್ಕಾರ ಪ್ರಕರಣ ದಾಖಲಿಸಲಿದೆ ಎಂದು ಎಚ್ಚರಿಸಿದರು.

    ಬೇಗ ಕೊಳೆಯುವ ಕೃಷಿ ಉತ್ಪನ್ನಗಳನ್ನು ಕೆಲಕಾಲ ಶೇಖರಿಸಿಡಲು ಅಗತ್ಯವಿರುವ ಶೀಥಲ ಗೃಹಗಳು ಹಾಗೂ ಹಣ್ಣು ಮತ್ತು ತರಕಾರಿ ಸಂಸ್ಕರಣಾ ಘಟಕಗಳನ್ನು ತೆರೆಯಲು ಅವಶ್ಯಕತೆ. ಇದು ಸರ್ಕಾರದ ಗಮನಕ್ಕೂ ಬಂದಿದೆ. ಈ ಸಲಹೆಗಳನ್ನು ಸಿಎಂ ಯಡಿಯೂರಪ್ಪ ಅವತಿಗೂ ಶಿಫಾರಸು ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಕುರಿತು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

    ರಾಜ್ಯ ಕೃಷಿ ಇಲಾಖೆಯಲ್ಲಿ ಶೇ.50ರಷ್ಟು ಹುದ್ದೆಗಳು ಖಾಲಿಯಿದ್ದು, ಇದರಿಂದ ಇಲಾಖೆ ಸಮರ್ಪಕವಾಗಿ ಕಾರ್ಯನಿರ್ವಸಹಿಲು ಸಾಧ್ಯವಾಗುತ್ತಿಲ್ಲ. ರಾಜ್ಯದ ಕೆಲವೆಡೆ ಕಳಪೆ ಕೀಟನಾಶಕ, ಬಿತ್ತನೆ ಬೀಜ ಮಾರಾಟವಾಗುತ್ತಿದ್ದು, ಈವರೆಗೆ 370 ಮಾದರಿಗಳನ್ನು ಸಂಗ್ರಹಿಸಲಾಗಿದೆ. ಈ ಪೈಕಿ 175 ಮಾದರಿಗಳು ಕಳಪೆ ಎಂದು ಖಚಿತ ಪಟ್ಟಿವೆ. 32 ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ. ಚಿಕ್ಕಬಳ್ಳಾಪುರದ ಅಂಗಡಿಯೊಂದರಲ್ಲಿ 20 ಲಕ್ಷ ರೂ.ಗಳ ಕಳಪೆ ಸರಕನ್ನು ಜಫ್ತಿ ಮಾಡಲಾಗಿದೆ ಎಂದು ತಿಳಿಸಿದರು.