Tag: Stick

  • ದೊಣ್ಣೆಯಿಂದ ಹೊಡೆದು ಮಹಿಳೆಯ ಬರ್ಬರ ಹತ್ಯೆ

    ದೊಣ್ಣೆಯಿಂದ ಹೊಡೆದು ಮಹಿಳೆಯ ಬರ್ಬರ ಹತ್ಯೆ

    ಬೆಂಗಳೂರು/ಆನೇಕಲ್: ದೊಣ್ಣೆಯಿಂದ ಹೊಡೆದು ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆನೇಕಲ್ ತಾಲೂಕಿನ ಲಕ್ಷ್ಮಿಸಾಗರದಲ್ಲಿ ನಡೆದಿದೆ.

    ತಮಿಳುನಾಡಿನ ಡೆಂಕಣಿಕೋಟೆ ಮೂಲದ ಮಾದಮ್ಮ ಕೊಲೆಯಾದ ಮಹಿಳೆ. ಕಳೆದ ಕೆಲ ವರ್ಷಗಳ ಹಿಂದೆ ಪತಿ ತೀರಿಕೊಂಡ ಹಿನ್ನೆಲೆ ಮಾದಮ್ಮ ತಮಿಳುನಾಡಿನಿಂದ ಆನೇಕಲ್ ತಾಲೂಕಿನ ಲಕ್ಷ್ಮಿಸಾಗರ ಗ್ರಾಮಕ್ಕೆ ಬಂದು ಕಟ್ಟಡ ನಿರ್ಮಾಣದ ಕೆಲಸ ಮಾಡಿಕೊಂಡಿದ್ದರು. ಈ ವೇಳೆ ಮಣಿ ಎಂಬಾತನ ಪರಿಚಯವಾಗಿ ಪರಿಚಯ ಅನೈತಿಕ ಸಂಬಂಧಕ್ಕೆ ತಿರುಗಿದ್ದು, ಒಂದೇ ಮನೆಯಲ್ಲಿ ವಾಸ ಮಾಡುತ್ತಿದ್ದರು. ಇದನ್ನೂ ಓದಿ: ಅಕ್ರಮ ಸಂಬಂಧ ಹೊಂದುವಂತೆ ಪತ್ನಿಗೆ ಬ್ಲಾಕ್‍ಮೇಲ್ – ಪೊಲೀಸಪ್ಪನ ಮೂಗು, ಕಿವಿ, ತುಟಿ ಕಟ್

     

    ಪ್ರತಿದಿನ ಇಬ್ಬರು ಕಟ್ಟಡ ನಿರ್ಮಾಣ ಕೆಲಸಕ್ಕೆ ಹೋಗಿ ಬಂದು ಸಂಜೆ ವೇಳೆಯಲ್ಲಿ ಮದ್ಯ ಸೇವನೆ ಮಾಡುತ್ತಿದ್ದರು. ಅದೇ ರೀತಿ ಇಂದು ಸಹ ಮದ್ಯ ಸೇವನೆ ಮಾಡುವಾಗ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದ್ದು, ಅಲ್ಲಿಯೇ ಇದ್ದ ದೊಣ್ಣೆಯಿಂದ ಮಾದಮ್ಮನ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆಗೈದು ಆರೋಪಿ ಮಣಿ ಸ್ಥಳದಿಂದ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ- ಇಂದು ಡಿಕೆಶಿ ಜಾಮೀನು ಅರ್ಜಿಯ ತೀರ್ಪು ಪ್ರಕಟ

    ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಆನೇಕಲ್ ಉಪವಿಭಾಗದ ಡಿವೈಎಸ್‍ಪಿ ಮಲ್ಲೇಶ್ ಹಾಗೂ ಸೂರ್ಯನಗರ ಪೊಲೀಸ್ ಇನ್ಸ್​ಪೆಕ್ಟರ್ ರಾಘವೇಂದ್ರ ಗೌಡ ಸ್ಥಳ ಪರಿಶೀಲನೆ ನಡೆಸಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮಣಿಗಾಗಿ ಬಲೆ ಬೀಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶ್ವಾನದ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಖಾಸಗಿ ಅಂಗಕ್ಕೆ ಕೋಲು ತುರುಕಿದ ಪಾಪಿಗಳು!

    ಶ್ವಾನದ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಖಾಸಗಿ ಅಂಗಕ್ಕೆ ಕೋಲು ತುರುಕಿದ ಪಾಪಿಗಳು!

    – 11 ಇಂಚಿನ ಕೋಲು ಹೊರತೆಗೆದ ವೈದ್ಯರು
    – ಸಾವು- ಬದುಯಕಿನ ಮಧ್ಯೆ ನೂರಿ ಹೋರಾಟ

    ಮುಂಬೈ: ಪ್ರಾಣಿ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ಮುಂಬೈನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.

    ಹೌದು. 8 ವರ್ಷದ ನೂರಿ ಎಂಬ ಹೆಣ್ಣು ಶ್ವಾನದ ಮೇಲೆ ಪಾಪಿಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಮುಂಬೈನ ಪೊವಾಯ್ ಶಾಪಿಂಗ್ ಕಾಂಪ್ಲೆಕ್ಸ್ ಒಳಗಡೆ ಈ ಆಘಾತಕಾರಿ ಘಟನೆ ನಡೆದಿದೆ.

    ಮಹಿಳೆಯೊಬ್ಬರು ಪ್ರಾಣಿಗಳಿಗೆ ಪ್ರತಿದಿನ ಆಹಾರ ಮತ್ತು ಔಷಧಿ ನೀಡುತ್ತಿದ್ದಾರೆ. ಹೀಗೆ ಅವರು ಗುರುವಾರ ಬಂದಾಗ ನಾಯಿಯ ಖಾಸಗಿ ಅಂಗದಲ್ಲಿ ರಕ್ತಸ್ರಾವವಾಗುತ್ತಿರುವುದನ್ನು ಗಮನಿಸಿದ್ದಾರೆ. ಕೂಡಲೇ ಅವರು ಸ್ಥಳೀಯ ಪಶು ವೈದ್ಯರ ಬಳಿ ಶ್ವಾನವನ್ನು ಕರೆದುಕೊಂಡು ಹೋಗಿದ್ದಾರೆ.

    ಪರೀಕ್ಷೆ ನಡೆಸಿದ ವೈದ್ಯರು ಯಾವುದೋ ಒಂದು ಬಲವಾದ ವಸ್ತು ಶ್ವಾನದ ದೇಹದೊಳಗೆ ಹೊಕ್ಕಿದೆ. ಪರಿಣಾಮ ಈ ರೀತಿ ರಕ್ತಸ್ರಾವವಾಗುತ್ತಿರಬಹುದು ಎಂದು ಶಂಕೆ ವ್ಯಕ್ತಪಡಿಸಿದರು. ಅಲ್ಲದೆ ಕಿಡಿಗೇಡಿಗಳು ಶ್ವಾನದ ಖಾಸಗಿ ಅಂಗದ ಮೂಲಕ 11 ಇಂಚಿನ ಕೋಲು ತುರುಕಿರುವುದು ಬೆಳಕಿಗೆ ಬಂದಿದ್ದು, ಅದನ್ನು ಹೊರತೆಗೆಯುವಲ್ಲಿ ಯಶಸ್ವಿಯಾದರು.

    ನೂರಿಯನ್ನು ಆಸ್ಪತ್ರೆಗೆ ದಾಖಲಿಸಿದ್ದ ದೇವಿ ಶೆತ್ ಮಾಧ್ಯಮಗಳ ಜೊತೆ ಮಾತನಾಡಿ, ಆಕೆ(ಶ್ವಾನ) ರಕ್ತದ ಮಡುವಿನಲ್ಲಿ ಬಿದ್ದಿದ್ದಳು. ಕರೆದರೆ ಯಾವುದೇ ಪ್ರತಿಕ್ರಿಯೆ ನೀಡುತ್ತಿರಲಿಲ್ಲ. ಇದರಿಂದ ಆಕೆ ನೋವಿನಿಂದ ಬಳಲುತ್ತಿರುವುದು ಗಮನಕ್ಕೆ ಬಂತು. ನಾನು ಆಕೆಯ ಸ್ಥಿತಿಯನ್ನು ನೋಡಿದ ಸಂದರ್ಭದಲ್ಲಿ ಆಕೆಯ ಬಳಿಯಿಂದಲೇ ಹಲವಾರು ಮಂದಿ ಓಡಾಡುತ್ತಿದ್ದರು. ಬೀದಿ ನಾಯಿಗಳ ಮೇಲೂ ನಮಗೆ ಜವಾಬ್ದಾರಿ ಇದೆ. ಆದರೆ ಆಕೆ ರಕ್ತದ ಮಡುವಿನಲ್ಲಿ ಬಿದ್ದು ನರಳುತ್ತಿದ್ದರೂ, ಆಕೆಗೆ ಏನೂ ಆಗಿಲ್ಲ ಎಂಬಂತೆ ಜನ ವರ್ತಿಸಿದರು. ಈ ಮೂಲಕ ಅವುಗಳನ್ನು ಜನ ತಿರಸ್ಕರಿಸುತ್ತಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

    ಸದ್ಯ ನೂರಿಯ ಖಾಸಗಿ ಅಂಗದಿಂದ ಕೋಲನ್ನು ಹೊರತೆಗೆದಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ. ಯಾಕೆಂದರೆ ಆಕೆಯ ಕರುಳಿಗೆ ಗಂಭೀರ ಗಾಯಗಳಾಗಿವೆ. ಅಲ್ಲದೆ ದೇಹದ ಇತರ ಅಂಗಗಳು ಕೂಡ ಹಾನಿಗೊಳಗಾಗಿವೆ. ಹೀಗಾಗಿ ಆಕೆ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾಳೆ. ಇತ್ತ ಆಕೆಯ ಜೀವ ಉಳಿಸಲು ಎನ್‍ಜಿಓ ಒಂದು ಹಣ ಸಂಗ್ರಹಿಸಲು ಪ್ರಯತ್ನಿಸುತ್ತಿದೆ ಎಂದು ದೇವಿ ತಿಳಿಸಿದರು.

    ಘಟನೆ ಸಂಬಂಧ ಪೊವಾಯ್ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 377(ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ‘ಕುಡಿದು ಗಲಾಟೆ ಮಾಡಬೇಡ’ – ತಾಯಿ ಸಾಯುವವರೆಗೂ ದೊಣ್ಣೆಯಲ್ಲಿ ಹೊಡೆದ ಮಗ

    ‘ಕುಡಿದು ಗಲಾಟೆ ಮಾಡಬೇಡ’ – ತಾಯಿ ಸಾಯುವವರೆಗೂ ದೊಣ್ಣೆಯಲ್ಲಿ ಹೊಡೆದ ಮಗ

    – ಪಕ್ಕದ ಮನೆಗೆ ಓಡಿಹೋಗಿ ಪ್ರಾಣ ಉಳಿಸಿಕೊಂಡ ಪತ್ನಿ

    ರಾಯ್ಪರ್: ಕುಡಿದು ಗಲಾಟೆ ಮಾಡಬೇಡ ಎಂದಿದ್ದಕ್ಕೆ ತಾಯಿಯನ್ನು ಮಗನೋರ್ವ ಸಾಯುವರೆಗೆ ದೊಣ್ಣೆಯಿಂದ ಹೊಡೆದಿರುವ ಘಟನೆ ಚತ್ತೀಸ್‍ಗಢದ ಜಂಜಗೀರ್ ಚಂಪಾ ಜಿಲ್ಲೆಯಲ್ಲಿ ನಡೆದಿದೆ.

    ತಾಯಿಯನ್ನೇ ಹೊಡೆದು ಕೊಂದ ಪಾಪಿ ಮಗನನ್ನು ಅಮೃತ್ ಲಾಲ್ ಗಡೆವಾಲ್ ಎಂದು ಗುರುತಿಸಲಾಗಿದೆ. ಮದ್ಯಪಾನಕ್ಕೆ ದಾಸನಾಗಿದ್ದ ಅಮೃತ್ ಲಾಲ್ ಲಾಕ್‍ಡೌನ್‍ನಿಂದ ಮದ್ಯದಂಗಡಿ ಮುಚ್ಚಿದ ದಿನದಿಂದಲೂ ಸಮ್ಮನೆ ಇದ್ದ. ಆದರೆ ಸೋಮವಾರದಿಂದ ಬಾರ್ ಗಳು ಓಪನ್ ಆದ ಕಾರಣ ಇಂದು ಕಂಠಪೂರ್ತಿ ಕುಡಿದು ಬಂದಿದ್ದಾನೆ.

    ಬಂದವನೇ ಅಮೃತ್ ಲಾಲ್ ತನ್ನ ಗ್ರಾಮವಾದ ಪುಟ್ಪುರದಲ್ಲಿ ಜನರಿಗೆ ತೊಂದರೆ ಕೊಡಲು ಆರಂಭಿಸಿದ್ದಾನೆ. ಜೊತೆಗೆ ರಸ್ತೆಯಲ್ಲಿ ನಿಂತುಕೊಂಡು ಓಡಾಡುವ ಮಂದಿ ಜೊತೆ ಜಗಳವಾಡಿದ್ದಾನೆ. ಕುಡುಕನ ತೊಂದರೆಯನ್ನು ಸಹಿಸಿಕೊಳ್ಳದ ಗ್ರಾಮಸ್ಥರು ಹೇಗೋ ಆತನ ಮನವೊಲಿಸಿ ಮನೆಗೆ ಹೋಗುವಂತೆ ಹೇಳಿದ್ದಾರೆ. ನಂತರ ಅಮೃತ್ ಲಾಲ್ ಮನೆಗೆ ಬಂದಿದ್ದಾನೆ.

    ಮನೆಗೆ ಬಂದವ ಮನೆಯ ಮುಂದೆ ಕೂಡ ಗಲಾಟೆ ಮಾಡಿ ಅಕ್ಕಪಕ್ಕದ ಮನೆಯವರ ಜೊತೆ ಜಗಳಕ್ಕೆ ಹೋಗಿದ್ದಾನೆ. ಈ ವೇಳೆ ಆತನ ಪತ್ನಿ ಹಾಗೂ ವೃದ್ಧೆ ತಾಯಿ ಮನೆಯೊಳಗೆ ಕರೆದುಕೊಂಡು ಬಂದಿದ್ದಾರೆ. ಇದರಿಂದ ಕೋಪಗೊಂಡ ಲಾಲ್ ದೊಣ್ಣೆ ತೆಗೆದುಕೊಂಡು ಇಬ್ಬರಿಗೂ ಹೊಡೆಯಲು ಆರಂಭಿಸಿದ್ದಾನೆ. ಈ ವೇಳೆ ಪತ್ನಿ ಪಕ್ಕದ ಮನೆಗೆ ಓಡಿಹೋಗಿ ಪ್ರಾಣ ಉಳಿಸಿಕೊಂಡಿದ್ದಾಳೆ. ಆದರೆ ಅಮೃತ್ ಲಾಲ್ ತಾಯಿಯನ್ನು ದೊಣ್ಣೆಯಿಂದ ಹೊಡೆದು ಸ್ಥಳದಲ್ಲೇ ಕೊಂದು ಹಾಕಿದ್ದಾನೆ.

    ಇದಾದ ನಂತರ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಆಗ ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಘಟನಾ ಸ್ಥಳದಲ್ಲೇ ಇದ್ದ ಅಮೃತ್ ಲಾಲ್ ನನ್ನು ಬಂಧಿಸಿ, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಸಂಬಂಧ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.