Tag: Still

  • ಸ್ತಬ್ಧಚಿತ್ರ ವಿಷಯದಲ್ಲಿ ಕೇಂದ್ರಕ್ಕೆ ದುರುದ್ದೇಶ ಇಲ್ಲ: ವಿಜಯೇಂದ್ರ

    ಸ್ತಬ್ಧಚಿತ್ರ ವಿಷಯದಲ್ಲಿ ಕೇಂದ್ರಕ್ಕೆ ದುರುದ್ದೇಶ ಇಲ್ಲ: ವಿಜಯೇಂದ್ರ

    ಬೆಂಗಳೂರು: ರಾಜ್ಯದ ಕಾಂಗ್ರೆಸ್ (Congress) ಸರ್ಕಾರ ಮತ್ತು ಕಾಂಗ್ರೆಸ್ ಮುಖಂಡರಿಗೆ ಈ ನಾಡಿನ ನೆಲ, ಜಲ, ಸಂಪತ್ತಿನ ಬಗ್ಗೆ ನೈಜ ಕಾಳಜಿ ಇದ್ದರೆ ಬೆಳಗಾವಿ ವಿಚಾರದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿಕೆ ವಿಷಯದಲ್ಲಿ ಮುಖ್ಯಮಂತ್ರಿಗಳು ತಮ್ಮ ಅಭಿಪ್ರಾಯ ತಿಳಿಸಬೇಕು ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ಒತ್ತಾಯಿಸಿದರು.

    ಬೆಂಗಳೂರಿನ (Bengaluru) ಹೋಟೆಲ್‌ವೊಂದರಲ್ಲಿ ಇಂದು ನಡೆದ ಬಿಜೆಪಿ ಲೋಕಸಭೆ ಕ್ಷೇತ್ರವಾರು ಸಭೆಯ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಕಾವೇರಿ ನೀರನ್ನು ತಮಿಳುನಾಡಿಗೆ ಕಳೆದ ಆರು ತಿಂಗಳಿಂದ ಹರಿಸುತ್ತಿದ್ದು ಅದರ ವಿಷಯದಲ್ಲೂ ದಿಟ್ಟ ನಿರ್ಧಾರ ತೆಗೆದುಕೊಳ್ಳಲಿ ಎಂದು ಒತ್ತಾಯಿಸಿದರು. ದೆಹಲಿ ಗಣರಾಜ್ಯೋತ್ಸವ ಪರೇಡ್ ವೇಳೆ ಸ್ತಬ್ಧಚಿತ್ರ ವಿಷಯದಲ್ಲಿ ಕರ್ನಾಟಕಕ್ಕೆ ನಿರಂತರವಾಗಿ 14 ವರ್ಷಗಳಿಂದ ಅವಕಾಶ ಸಿಕ್ಕಿದೆ. ಈಗ ಕೊಡುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿಲ್ಲ. ಕಳೆದ ವರ್ಷ ಕೂಡ ಕರ್ನಾಟಕಕ್ಕೆ ಅವಕಾಶ ಸಿಕ್ಕಿಲ್ಲ ಎಂದು ಹೇಳಿದಾಗ ರಾಜ್ಯದ ನಮ್ಮೆಲ್ಲ ಹಿರಿಯರು ಪ್ರಯತ್ನಿಸಿದಾಗ ಅವಕಾಶ ಲಭಿಸಿತ್ತು. ಈ ಬಾರಿ ಕರ್ನಾಟಕ, ಗೋವಾ ಸೇರಿ ನಾಲ್ಕೈದು ರಾಜ್ಯಗಳಿಗೆ ಅವಕಾಶ ಸಿಕ್ಕಿಲ್ಲ. ಕರ್ನಾಟಕಕ್ಕೆ ಅವಕಾಶ ಕೊಡಬಾರದೆಂಬ ದುರುದ್ದೇಶ ಇದರಲ್ಲಿ ಇಲ್ಲ. ಬೇರೆ ರಾಜ್ಯಕ್ಕೂ ಅವಕಾಶ ಕೊಡಬೇಕೆಂಬ ಸದುದ್ದೇಶವಿದೆ ಅಷ್ಟೇ ಎಂದು ನುಡಿದರು. ಇದನ್ನೂ ಓದಿ: ರಾಮಮಂದಿರ ದೇಶದ ಕತೆಯ ಪ್ರತಿಬಿಂಬ; ರಾಮನ ಬಗ್ಗೆ ಅಪಪ್ರಚಾರ ಸಲ್ಲದು: ಗುರೂಜಿ ರಿತೇಶ್ವರ್ ಮಹಾರಾಜ್

    ಅವಕಾಶ ಸಿಗದ ಕರ್ನಾಟಕ ಮತ್ತಿತರ ರಾಜ್ಯಗಳಿಗೆ ಎಕ್ಸಿಬಿಷನ್‌ನಲ್ಲಿ ಅವಕಾಶ ಮಾಡಿಕೊಟ್ಟಿದ್ದಾರೆ. ಇದನ್ನು ಗಮನಿಸದೆ ಈ ನಾಡಿನ ಬಗ್ಗೆ ಮೊಸಳೆ ಕಣ್ಣೀರು ಹಾಕುವ ಕೆಲಸ ರಾಜ್ಯ ಕಾಂಗ್ರೆಸ್ ಸರ್ಕಾರದ್ದು ಎಂದು ಟೀಕಿಸಿದರು. ಕನ್ನಡಪರ ಹೋರಾಟಗಾರ ನಾರಾಯಣಗೌಡರ ಕುರಿತ ಸರ್ಕಾರದ ನಡೆಯನ್ನು ರಾಜ್ಯದ ಜನತೆ ಗಮನಿಸುತ್ತಿದ್ದಾರೆ. ಮಂಗಳವಾರ ಬಿಡುಗಡೆ ಆದೊಡನೆ ಮತ್ತೊಂದು ಕೇಸಿನಲ್ಲಿ ಒಳಗಡೆ ಹಾಕುವ ಪಿತೂರಿ ರಾಜ್ಯ ಸರ್ಕಾರದ್ದು ಎಂದು ಆಕ್ಷೇಪಿಸಿದರು. ಮೊಸಳೆ ಕಣ್ಣೀರು ಹಾಕುವುದನ್ನು ಬಿಡಿ. ಪ್ರಾಮಾಣಿಕವಾಗಿ ಎಲ್ಲಾ ವಿಷಯದಲ್ಲೂ ರಾಜ್ಯದ ಪರವಾಗಿ ನಿಲ್ಲಿ ಎಂದು ಸರ್ಕಾರಕ್ಕೆ ಆಗ್ರಹಿಸಿದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಹೋಗಲ್ಲ: ಕಾಂಗ್ರೆಸ್

    ಎಲ್ಲಾ ವಿಷಯದಲ್ಲೂ ಕೇಂದ್ರ ಸರ್ಕಾರ ರಾಜ್ಯದ ವಿರುದ್ಧ ಇದೆ ಎಂದು ಮಾನ್ಯ ಮುಖ್ಯಮಂತ್ರಿಗಳು ಬಿಂಬಿಸುತ್ತಿದ್ದಾರೆ. ಇದು ನಿಮಗೆ ಶೋಭೆ ತರುವುದಿಲ್ಲ. ಬೇರೆ ಬೇರೆ ವಿಷಯಗಳಲ್ಲಿ ನಿಮ್ಮ ನಡವಳಿಕೆಯನ್ನು ಜನತೆ ಗಮನಿಸುತ್ತಿದ್ದಾರೆ. ಬಿಜೆಪಿ ಸಂಘಟನೆ ದೃಷ್ಟಿಯಿಂದ ಇಂದಿನ ಸಭೆ ನಡೆದಿದೆ. ಮುಂದಿನ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರೆದ ಸಭೆ ಇದು ಎಂದರು. ಇದನ್ನೂ ಓದಿ: ಲೋಕಸಭೆ ಚುನಾವಣೆ 2024 – ಶಾಸಕರು, ಮಾಜಿ ಸಚಿವರಿಗೆ ಟಿಕೇಟ್ ನೀಡಲು SP ಪ್ಲ್ಯಾನ್

  • ಬಾಕ್ಸಿಂಗ್ ರಿಂಗ್‍ನಲ್ಲಿ ಅಪ್ಪು, ಯುವರತ್ನದ ಹೊಸ ಸ್ಟಿಲ್ ರಿವೀಲ್

    ಬಾಕ್ಸಿಂಗ್ ರಿಂಗ್‍ನಲ್ಲಿ ಅಪ್ಪು, ಯುವರತ್ನದ ಹೊಸ ಸ್ಟಿಲ್ ರಿವೀಲ್

    ಬೆಂಗಳೂರು: ಬಹುನಿರೀಕ್ಷಿತ ಯುವರತ್ನ ಸಿನಿಮಾ ಬಿಡುಗಡೆಗಾಗಿ ಕಾತರದಿಂದ ಕಾಯುತ್ತಿರುವಾಗಲೇ ಲಾಕ್‍ಡೌನ್ ಘೋಷಣೆಯಾಯಿತು. ಬಳಿಕ ಚಿತ್ರ ತಂಡ ಹೆಚ್ಚು ಅಪ್‍ಡೇಟ್ ನೀಡುತ್ತಿದ್ದು, ಇತ್ತೀಚೆಗಷ್ಟೇ ಚಿತ್ರದ ಎರಡನೇ ಹಂತದ ಡಬ್ಬಿಂಗ್ ಕಾರ್ಯ ಆರಂಭಿಸಿರುವುದಾಗಿ ತಿಳಿಸಿತ್ತು. ಇದೀಗ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

    ಹೌದು ಸಿನಿಮಾ ಚಟುವಟಿಕೆಗಳು ನಿಂತರೂ ಚಿತ್ರ ತಂಡ ಸಾಮಾಜಿಕ ಜಾಲತಾಣಗಳ ಮೂಲಕ ಆಗಾಗ ಅಪ್‍ಡೇಟ್‍ಗಳನ್ನು ನೀಡುತ್ತಿದೆ. ಇತ್ತೀಚೆಗಷ್ಟೇ ಚಿತ್ರದ ಎರಡನೇ ಹಂತದ ಡಬ್ಬಿಂಗ್ ಕಾರ್ಯ ಪ್ರಾರಂಭವಾಗಿರುವುದಾಗಿ ತಿಳಿಸಿತ್ತು. ಚಿತ್ರದ ನಿರ್ದೇಶಕ ಸಂತೋಷ್ ಆನಂದರಾಮ್ ಟ್ವೀಟ್ ಮಾಡಿ ಎರಡನೇ ಹಂತದ ಡಬ್ಬಿಂಗ್ ಪ್ರಾರಂಭವಾಗಿರುವ ಕುರಿತು ಮಾಹಿತಿ ನೀಡಿದ್ದರು.

    ಇದೀಗ ಚಿತ್ರ ತಂಡ ಮತ್ತೊಂದು ಸುದ್ದಿಯನ್ನು ಹೊರ ಬಿಟ್ಟಿದ್ದು, ಹೊಸ ಸ್ಟಿಲ್ ಬಿಡುಗಡೆ ಮಾಡಿದೆ. ಹೌದು ಯುವರತ್ನ ಸಿನಿಮಾದ ‘ಪವರ್ ಆಫ್ ಯೂತ್’ ಹಾಡಿನ ಸ್ಟಿಲ್ ಒಂದನ್ನು ಬಿಡುಗಡೆ ಮಾಡಿದ್ದು, ಸಂತೋಷ್ ಆನಂದರಾಮ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನು ಕಂಡ ಅಭಿಮಾನಿಗಳು ಸಾಕಷ್ಟು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ಕಮೆಂಟ್‍ಗಳ ಮೂಲಕ ಅಭಿಪ್ರಾಯ ತಿಳಿಸುತ್ತಿದ್ದಾರೆ.

    ಈ ಸ್ಟಿಲ್ ತುಂಬಾ ವಿಶೇಷವಾಗಿದ್ದು, ಅಪ್ಪು ಬಾಕ್ಸಿಂಗ್ ರಿಂಗ್‍ನಲ್ಲಿ ಸ್ಟೈಲಿಶ್ ಆಗಿ ನಿಂತಿದ್ದಾರೆ. ಹಿಂದೆ ಹಸಿರು ಬಣ್ಣದ ಲೈಟ್‍ಗಳಿದ್ದು, ಸಂಭ್ರಮಿಸುತ್ತಿರುವ ಭಂಗಿಯಲ್ಲಿ ಅಪ್ಪು ಪೋಸ್ ನೀಡಿದ್ದಾರೆ. ಅಲ್ಲದೆ ಅಪ್ಪು ಇತ್ತೀಚೆಗೆ ಫುಲ್ ವರ್ಕೌಟ್ ಮಾಡುವುದರಲ್ಲಿ ನಿರತರಾಗಿದ್ದು, ಈ ಸ್ಟಿಲ್‍ನಲ್ಲಿ ಸಹ ಸಣ್ಣಗಾದಂತೆ ಕಾಣುತ್ತಿದ್ದಾರೆ. ಹಾಡಿನ ಚಿತ್ರೀಕರಣದ ಸಮಯದಲ್ಲಿ ಈ ಫೋಟೋ ತೆಗೆದಿದ್ದು, ಹಿಂದೆ ನೃತ್ಯ ಕಲಾವಿದರೂ ಇದ್ದಾರೆ.

    ಇದೀಗ ಅಪ್ಪು ಸ್ಟಿಲ್ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಈ ಹಿಂದೆ ಸಹ ಪುನೀತ್ ಅವರ ಸಿನಿಮಾದಲ್ಲಿನ ಲುಕ್, ಟ್ವಿಟ್ಟರ್‍ನಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿತ್ತು. ಈಗಾಗಲೇ ಚಿತ್ರದ ಡೈಲಾಗ್ ಟೀಸರ್ ಬಿಡುಗಡೆಯಾಗಿದ್ದು, ಸಿನಿಮಾಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.