Tag: Stomach Ache

  • ಹೊಟ್ಟೆ ನೋವು ತಾಳಲಾರದೇ 15ರ ಬಾಲಕಿ ಆತ್ಮಹತ್ಯೆಗೆ ಶರಣು

    ಹೊಟ್ಟೆ ನೋವು ತಾಳಲಾರದೇ 15ರ ಬಾಲಕಿ ಆತ್ಮಹತ್ಯೆಗೆ ಶರಣು

    ಹುಬ್ಬಳ್ಳಿ: ಹೊಟ್ಟೆ ನೋವು ತಾಳಲಾರದೇ ಬಾಲಕಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ (Hubballi) ತಾಲೂಕಿನ ಕುಸಗಲ್ ಗ್ರಾಮದಲ್ಲಿ ನಡೆದಿದೆ.

    ಕುಸಗಲ್ ಗ್ರಾಮದ ಶೈಲಾ ಗುರುಸಿದ್ದಪ್ಪ ಇಮಾಪುರ (15) ಹೊಟ್ಟೆ ನೋವು ತಾಳಲಾರದೇ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಈ ಹಿಂದಿನಿಂದಲೂ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಶೈಲಾ, ಶನಿವಾರ ರಾತ್ರಿ ನೋವು ತಾಳಲಾರದೇ ಮನೆಯಲ್ಲಿ ವಿಷಕಾರಕ ಪದಾರ್ಥ ಸೇವಿಸಿದ್ದಾಳೆ. ಇದನ್ನೂ ಓದಿ: ಹೊರಗಿನಿಂದ ಬಂದವರಿಗೆ ಟಿಕೆಟ್ ನೀಡಲು ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ವಿರೋಧ

    ನಂತರ ತೀವ್ರವಾಗಿ ಅಸ್ವಸ್ಥಗೊಂಡ ಬಾಲಕಿಯನ್ನು ಕಿಮ್ಸ್ (Kims) ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದ ಶೈಲಾ ಸಾವಿನಪ್ಪಿದ್ದಾಳೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಯುವತಿಯೊಂದಿಗೆ ಸಲುಗೆಯಿಂದ ಮಾತಾಡಿದ್ದಕ್ಕೆ ವಿದ್ಯಾರ್ಥಿಯನ್ನು ಅಪಹರಿಸಿ ಹಲ್ಲೆ

    Live Tv
    [brid partner=56869869 player=32851 video=960834 autoplay=true]

  • ಆಂಬುಲೆನ್ಸ್ ಬಾರದೇ ರೈಲ್ವೇ ನಿಲ್ದಾಣದಲ್ಲಿ ಹೊಟ್ಟೆನೋವಿನಿಂದ ನರಳಾಡಿದ ಬಾಣಂತಿ

    ಆಂಬುಲೆನ್ಸ್ ಬಾರದೇ ರೈಲ್ವೇ ನಿಲ್ದಾಣದಲ್ಲಿ ಹೊಟ್ಟೆನೋವಿನಿಂದ ನರಳಾಡಿದ ಬಾಣಂತಿ

    ಯಾದಗಿರಿ: ಬಾಣಂತಿ ಮಹಿಳೆ ಹೊಟ್ಟೆ ನೋವಿನಿಂದ ಒಂದು ಗಂಟೆಕ್ಕೂ ಹೆಚ್ಚು ಕಾಲ ನರಳಾಡಿದ ಘಟನೆ ಯಾದಗಿರಿ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.

    108 ಆಂಬುಲೆನ್ಸ್ ಗೆ ಕರೆ ಮಾಡಿದರೂ ಸಕಾಲಕ್ಕೆ ಆಗಮಿಸದ ಕಾರಣ ಬಾಣಂತಿಗೆ ತೀವ್ರವಾಗಿ ರಕ್ತಸ್ರಾವವಾಗಿದೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಹುಲಕಲ್ ಮೂಲದ ಶಾಂತಮ್ಮ ಎಂಬವರು ಸೋಮವಾರ ಬೆಳಗ್ಗೆ ತೆಲಂಗಾಣದ ಕೃಷ್ಣಾದಲ್ಲಿ ಗಂಡು ಮಗುವಿಗೆ ಜನ್ಮ ನೀಡಿ ನಂತರ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.

    ಆದರೆ ರಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರು ಸರಿಯಾಗಿ ಚಿಕಿತ್ಸೆ ನೀಡದ ಕಾರಣ ಬಾಣಂತಿ, ಮಗು ಸಮೇತ ಯಾದಗಿರಿಗೆ ರೈಲ್ವೇ ಮೂಲಕ ಆಗಮಿಸುತ್ತಿರುವಾಗ ತೀವ್ರವಾಗಿ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ವೇಳೆ ಶಾಂತಮ್ಮ ಯಾದಗಿರಿ ರೈಲ್ವೇ ನಿಲ್ದಾಣದಲ್ಲಿ ಹೊಟ್ಟೆ ನೋವಿನಿಂದ ನರಳಾಡಿದ್ದಾರೆ.

    ರೈಲ್ವೇ ಪೊಲೀಸರು ಹಾಗೂ ಸ್ಥಳೀಯ ಜನರು ವ್ಹೀಲ್ ಚೇರ್ ಹಾಗೂ ಸ್ಟ್ರೇಚರ್ ಮೂಲಕ ರಕ್ಷಿಸಿದರು. ಇಷ್ಟೆಲ್ಲ ನಡೆದ ಬಳಿಕ ಆಗಮಿಸಿದ 108  ಆಂಬುಲೆನ್ಸ್ ಬಂದಿದೆ. ಸದ್ಯ ತಾಯಿ ಮಗು ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಆರೋಗ್ಯವಾಗಿದ್ದಾರೆ.