Tag: Stone pelting

  • ಬೆಳಗಾವಿ | ಕಲ್ಲು ತೂರಾಟಕ್ಕೆ ಹಿಂದೂ ಯುವಕರ ಕೌಂಟರ್ – `ಐ ಲವ್ ಶ್ರೀರಾಮ್‌’ ಫಲಕ ಅಳವಡಿಕೆ

    ಬೆಳಗಾವಿ | ಕಲ್ಲು ತೂರಾಟಕ್ಕೆ ಹಿಂದೂ ಯುವಕರ ಕೌಂಟರ್ – `ಐ ಲವ್ ಶ್ರೀರಾಮ್‌’ ಫಲಕ ಅಳವಡಿಕೆ

    ಬೆಳಗಾವಿ: ‘ಐ ಲವ್ ಮುಹಮ್ಮದ್’ ಘೋಷಣೆ ಕೂಗಿದ್ದನ್ನು ಪ್ರಶ್ನಿಸಿದ್ದಕ್ಕೆ ನಡೆದಿದ್ದ ಕಲ್ಲು ತರಾಟಕ್ಕೆ ಇದೀಗ ಹಿಂದೂ ಯುವಕರ ಕೌಂಟರ್ ಕೊಟ್ಟು,`ಐ ಲವ್ ಶ್ರೀರಾಮ್‌’ (I Love Shriram) ಫಲಕ ಅಳವಡಿಸಿದ್ದಾರೆ.

    ಶುಕ್ರವಾರ (ಅ.9) ರಾತ್ರಿ ಬೆಳಗಾವಿಯ ಖಡಕ್ ಗಲ್ಲಿಯಲ್ಲಿ ‘ಐ ಲವ್ ಮುಹಮ್ಮದ್’ ಘೋಷಣೆ ಕೂಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮುಸ್ಲಿಂ ಯುವಕರು ಕಲ್ಲು ತೂರಾಟ ನಡೆಸಿದ್ದರು. ಇದೀಗ ಹಿಂದೂ ಯುವಕರು `ಐ ಲವ್ ಶ್ರೀರಾಮ್‌’ ಫಲಕ ಅಳವಡಿಸುವ ಮೂಲಕ ಕೌಂಟರ್ ಕೊಟ್ಟಿದ್ದಾರೆ.ಇದನ್ನೂ ಓದಿ: ಬೆಳಗಾವಿ | ‘ಐ ಲವ್ ಮುಹಮ್ಮದ್’ ಘೋಷಣೆ ಪ್ರಶ್ನಿಸಿದ್ದಕ್ಕೆ ಕಲ್ಲು ತೂರಾಟ – 50 ಮಂದಿ ವಿರುದ್ಧ FIR

    ಈಗಾಗಲೇ ಈ ಘಟನೆ ಸಂಬಂಧ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ 50 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, 11 ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಏನಿದು ಪ್ರಕರಣ?
    ಮಾಬುಸುಬಾನಿ ದರ್ಗಾದ ಉರುಸ್ ವೇಳೆ ‘ಐ ಲವ್ ಮುಹಮ್ಮದ್’ ಘೋಷಣೆ ಕೂಗಿದ ಹಿನ್ನೆಲೆ ಆಕ್ರೋಶ ವ್ಯಕ್ತವಾಗಿದೆ. ಪ್ರಶ್ನೆ ಮಾಡಿದ ಸ್ಥಳೀಯ ಹಿಂದೂ ನಿವಾಸಿಗಳ ಮೇಲೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಪ್ರತಿ ವರ್ಷ ಶನಿವಾರ ಕೂಟ, ಜಾಲ್ಗಾರ ಗಲ್ಲಿ ಮಾರ್ಗದ ಮೂಲಕ ದರ್ಗಾಗೆ ಮೆರವಣಿಗೆ ಹೋಗುತ್ತಿತ್ತು. ಈ ವರ್ಷ ಅನುಮತಿ ಇಲ್ಲದೆಯೂ ಸಹ ಖಡಕ್ ಗಲ್ಲಿಗೆ ಮೆರವಣಿಗೆ ಎಂಟ್ರಿಯಾಗಿದೆ ಎನ್ನಲಾಗಿದೆ. ಮೆರವಣಿಗೆ ವೇಳೆ `ಐ ಲವ್ ಮುಹಮ್ಮದ್’ ಎಂಬ ಘೋಷಣೆ ಕೂಗಿದ್ದಲ್ಲದೇ ಯಾವಾಗಲೂ ಬಾರದ ಮೆರವಣಿಗೆ ಈಗ ಯಾಕೆ ಬಂದಿದೆ? ತಮ್ಮ ಏರಿಯಾಗೆ ಬಂದು ಘೋಷಣೆ ಕೂಗಿದ್ದು ಯಾಕೆ ಎಂದು ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಮೆರವಣಿಗೆಯಲ್ಲಿ ಸಾಗುತ್ತಿದ್ದ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ ನಡೆದಿದೆ. ಬಳಿಕ ತಲ್ವಾರ್ ಕೂಡ ಪ್ರದರ್ಶನ ಮಾಡಿ ಗೂಂಡಾವರ್ತನೆ ತೋರಲಾಗಿದೆ.

    ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೆರವಣಿಗೆಯನ್ನು ಸ್ಥಳದಿಂದ ಕಳುಹಿಸಿದ್ದಾರೆ. ಏಕಾಏಕಿ ಮೆರವಣಿಗೆ ಬಂದವರು ಮತ್ತು ಕಲ್ಲು ತೂರಿದವರ ವಿರುದ್ಧ ಕ್ರಮಕ್ಕೆ ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಡಿಸಿಪಿ ನಾರಾಯಣ ಭರಮನಿ, ಇಬ್ಬರು ಡಿಸಿಪಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: Belagavi | ಉರುಸ್ ಮೆರವಣಿಗೆಯಲ್ಲಿ ‘ಐ ಲವ್ ಮುಹಮ್ಮದ್’ ಘೋಷಣೆ – ಪ್ರಶ್ನಿಸಿದ್ದಕ್ಕೆ ಕಲ್ಲು ತೂರಾಟ

  • ಬೆಳಗಾವಿ | ‘ಐ ಲವ್ ಮುಹಮ್ಮದ್’ ಘೋಷಣೆ ಪ್ರಶ್ನಿಸಿದ್ದಕ್ಕೆ ಕಲ್ಲು ತೂರಾಟ – 50 ಮಂದಿ ವಿರುದ್ಧ FIR

    ಬೆಳಗಾವಿ | ‘ಐ ಲವ್ ಮುಹಮ್ಮದ್’ ಘೋಷಣೆ ಪ್ರಶ್ನಿಸಿದ್ದಕ್ಕೆ ಕಲ್ಲು ತೂರಾಟ – 50 ಮಂದಿ ವಿರುದ್ಧ FIR

    ಬೆಳಗಾವಿ: ಉರುಸ್ ಮೆರವಣಿಗೆಯಲ್ಲಿ ‘ಐ ಲವ್ ಮುಹಮ್ಮದ್’ ಘೋಷಣೆ ಕೂಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮುಸ್ಲಿಂ ಯುವಕರು ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವತ್ತು ಜನರ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ.

    ಕಲ್ಲು ತೂರಾಟವಾಗುತ್ತಿದ್ದಂತೆ ಖಡಕ್ ಗಲ್ಲಿ ನಿವಾಸಿಗಳು ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಅನ್ವಯ 10 ಜನರ ಹೆಸರು ಉಲ್ಲೇಖಿಸಿ, ಒಟ್ಟು 50 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಇದನ್ನೂ ಓದಿ: Belagavi | ಉರುಸ್ ಮೆರವಣಿಗೆಯಲ್ಲಿ ‘ಐ ಲವ್ ಮುಹಮ್ಮದ್’ ಘೋಷಣೆ – ಪ್ರಶ್ನಿಸಿದ್ದಕ್ಕೆ ಕಲ್ಲು ತೂರಾಟ

    ತನಿಖೆಗಿಳಿದ ಪೊಲೀಸರು ಕೈಯಲ್ಲಿ ತಲ್ವಾರ್ ಹಿಡಿದು ಐ ಲವ್ ಮೊಹಮ್ಮದ್ ಸೇರಿ ಧಾರ್ಮಿಕ ಘೋಷಣೆ ಕೂಗಿದ್ದ ಗುಂಪನ್ನು ಹೆಡೆಮುರಿ ಕಟ್ಟಿದ್ದಾರೆ. ಈಗಾಗಲೇ 11 ಜನರನ್ನು ವಶಕ್ಕೆ ಪಡೆದಿದ್ದಾರೆ.

    ಏನಿದು ಪ್ರಕರಣ?
    ಮಾಬುಸುಬಾನಿ ದರ್ಗಾದ ಉರುಸ್ ವೇಳೆ ‘ಐ ಲವ್ ಮುಹಮ್ಮದ್’ ಘೋಷಣೆ ಕೂಗಿದ ಹಿನ್ನೆಲೆ ಆಕ್ರೋಶ ವ್ಯಕ್ತವಾಗಿದೆ. ಪ್ರಶ್ನೆ ಮಾಡಿದ ಸ್ಥಳೀಯ ಹಿಂದೂ ನಿವಾಸಿಗಳ ಮೇಲೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಪ್ರತಿ ವರ್ಷ ಶನಿವಾರ ಕೂಟ, ಜಾಲ್ಗಾರ ಗಲ್ಲಿ ಮಾರ್ಗದ ಮೂಲಕ ದರ್ಗಾಗೆ ಮೆರವಣಿಗೆ ಹೋಗುತ್ತಿತ್ತು. ಈ ವರ್ಷ ಅನುಮತಿ ಇಲ್ಲದೆಯೂ ಸಹ ಖಡಕ್ ಗಲ್ಲಿಗೆ ಮೆರವಣಿಗೆ ಎಂಟ್ರಿಯಾಗಿದೆ ಎನ್ನಲಾಗಿದೆ. ಮೆರವಣಿಗೆ ವೇಳೆ `ಐ ಲವ್ ಮುಹಮ್ಮದ್’ ಎಂಬ ಘೋಷಣೆ ಕೂಗಿದ್ದಲ್ಲದೇ ಯಾವಾಗಲೂ ಬಾರದ ಮೆರವಣಿಗೆ ಈಗ ಯಾಕೆ ಬಂದಿದೆ? ತಮ್ಮ ಏರಿಯಾಗೆ ಬಂದು ಘೋಷಣೆ ಕೂಗಿದ್ದು ಯಾಕೆ ಎಂದು ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಮೆರವಣಿಗೆಯಲ್ಲಿ ಸಾಗುತ್ತಿದ್ದ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ ನಡೆದಿದೆ. ಬಳಿಕ ತಲ್ವಾರ್ ಕೂಡ ಪ್ರದರ್ಶನ ಮಾಡಿ ಗೂಂಡಾವರ್ತನೆ ತೋರಲಾಗಿದೆ.

    ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೆರವಣಿಗೆಯನ್ನು ಸ್ಥಳದಿಂದ ಕಳುಹಿಸಿದ್ದಾರೆ. ಏಕಾಏಕಿ ಮೆರವಣಿಗೆ ಬಂದವರು ಮತ್ತು ಕಲ್ಲು ತೂರಿದವರ ವಿರುದ್ಧ ಕ್ರಮಕ್ಕೆ ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಡಿಸಿಪಿ ನಾರಾಯಣ ಭರಮನಿ, ಇಬ್ಬರು ಡಿಸಿಪಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ:ಅಮೆರಿಕ ಧ್ವಜ ಸುಟ್ಟರೆ ತಕ್ಷಣ ಬಂಧನ, 1 ವರ್ಷ ಜೈಲು ಶಿಕ್ಷೆ: ಡೊನಾಲ್ಡ್‌ ಟ್ರಂಪ್‌ ಆದೇಶ

  • Belagavi | ಉರುಸ್ ಮೆರವಣಿಗೆಯಲ್ಲಿ ‘ಐ ಲವ್ ಮುಹಮ್ಮದ್’ ಘೋಷಣೆ – ಪ್ರಶ್ನಿಸಿದ್ದಕ್ಕೆ ಕಲ್ಲು ತೂರಾಟ

    Belagavi | ಉರುಸ್ ಮೆರವಣಿಗೆಯಲ್ಲಿ ‘ಐ ಲವ್ ಮುಹಮ್ಮದ್’ ಘೋಷಣೆ – ಪ್ರಶ್ನಿಸಿದ್ದಕ್ಕೆ ಕಲ್ಲು ತೂರಾಟ

    ಬೆಳಗಾವಿ: ಉರುಸ್ ಮೆರವಣಿಗೆಯಲ್ಲಿ ‘ಐ ಲವ್ ಮುಹಮ್ಮದ್’ (I Love Muhammad) ಘೋಷಣೆ ಕೂಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮುಸ್ಲಿಂ ಯುವಕರು ಕಲ್ಲು ತೂರಾಟ (Stone Pelting) ನಡೆಸಿದ ಘಟನೆ ಬೆಳಗಾವಿ (Belagavi) ನಗರದ ಖಡಕ್ ಗಲ್ಲಿಯಲ್ಲಿ (Khadak Galli) ನಡೆದಿದೆ.

    ಮಾಬುಸುಬಾನಿ ದರ್ಗಾದ ಉರುಸ್ ವೇಳೆ ‘ಐ ಲವ್ ಮುಹಮ್ಮದ್’ ಘೋಷಣೆ ಕೂಗಿದ ಹಿನ್ನೆಲೆ ಆಕ್ರೋಶ ವ್ಯಕ್ತವಾಗಿದೆ. ಪ್ರಶ್ನೆ ಮಾಡಿದ ಸ್ಥಳೀಯ ಹಿಂದೂ ನಿವಾಸಿಗಳ ಮೇಲೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಪ್ರತಿ ವರ್ಷ ಶನಿವಾರ ಕೂಟ, ಜಾಲ್ಗಾರ ಗಲ್ಲಿ ಮಾರ್ಗದ ಮೂಲಕ ದರ್ಗಾಗೆ ಮೆರವಣಿಗೆ ಹೋಗುತ್ತಿತ್ತು. ಈ ವರ್ಷ ಅನುಮತಿ ಇಲ್ಲದೆಯೂ ಸಹ ಖಡಕ್ ಗಲ್ಲಿಗೆ ಮೆರವಣಿಗೆ ಎಂಟ್ರಿಯಾಗಿದೆ ಎನ್ನಲಾಗಿದೆ. ಮೆರವಣಿಗೆ ವೇಳೆ ‘ ಐ ಲವ್ ಮುಹಮ್ಮದ್’ ಎಂಬ ಘೋಷಣೆ ಕೂಗಿದ್ದಲ್ಲದೇ ಯಾವಾಗಲೂ ಬಾರದ ಮೆರವಣಿಗೆ ಈಗ ಯಾಕೆ ಬಂದಿದೆ? ತಮ್ಮ ಏರಿಯಾಗೆ ಬಂದು ಘೋಷಣೆ ಕೂಗಿದ್ದು ಯಾಕೆ ಎಂದು ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಮೆರವಣಿಗೆಯಲ್ಲಿ ಸಾಗುತ್ತಿದ್ದ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ ನಡೆದಿದೆ. ಬಳಿಕ ತಲ್ವಾರ್ ಕೂಡ ಪ್ರದರ್ಶನ ಮಾಡಿ ಗೂಂಡಾವರ್ತನೆ ತೋರಲಾಗಿದೆ. ಇದನ್ನೂ ಓದಿ: ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್‌ ಒಪ್ಪಿಗೆ

    ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೆರವಣಿಗೆಯನ್ನು ಸ್ಥಳದಿಂದ ಕಳುಹಿಸಿದ್ದಾರೆ. ಏಕಾಏಕಿ ಮೆರವಣಿಗೆ ಬಂದವರು ಮತ್ತು ಕಲ್ಲು ತೂರಿದವರ ವಿರುದ್ಧ ಕ್ರಮಕ್ಕೆ ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಡಿಸಿಪಿ ನಾರಾಯಣ ಭರಮನಿ, ಇಬ್ಬರು ಡಿಸಿಪಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಅ.9ರಂದು ಹಾಸನಾಂಬ ದೇಗುಲ ಓಪನ್ – ಭಕ್ತರ ದರ್ಶನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ

    ಇನ್ನು ಪ್ರಕರಣ ಸಂಬಂಧ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಭೇಟಿ ನೀಡಿ ಸ್ಥಳೀಯರು, ಪೊಲೀಸರಿಂದ ಮಾಹಿತಿ ಪಡೆದಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಖಡಕ್ ಗಲ್ಲಿಯಲ್ಲಿ ಎರಡು ಕೋಮಿನ ಜನರ ನಡುವೆ ಘರ್ಷಣೆ ನಡೆದಿದೆ. ಒಂದು ಧಾರ್ಮಿಕ ಕಾರ್ಯಕ್ರಮ ಇತ್ತು. ಒಂದು ರೂಟ್ ಫಿಕ್ಸ್ ಇದೆ, ಅದನ್ನ ಬಿಟ್ಟು ಬೇರೆ ರೂಟ್‌ನಲ್ಲಿ ಬಂದಿದ್ದಾರೆ. ಇದನ್ನ ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಘರ್ಷಣೆ ಆಗಿದೆ. ಸ್ಥಳೀಯರು ಕಲ್ಲು ತೂರಾಟ ಆಗಿದೆ ಅಂತಾ ಕೇಸ್ ಕೊಟ್ಟಿದ್ದಾರೆ. ಯಾರು ತಪ್ಪು ಮಾಡಿದ್ದಾರೆ ಅವರ ಮೇಲೆ ಕ್ರಮ ಆಗುತ್ತೆ. ಯಾರಿಗೂ ಗಾಯ ಆಗಿಲ್ಲ, ಎರಡು ಕೋಮಿನ ಹಿರಿಯರು ಕೂಡಲೇ ಸರಿಪಡೆಸಿದ್ದಾರೆ. ಓರಿಜನಲ್ ರೂಟ್ ಬಿಟ್ಟು ಬಂದು ತಪ್ಪಾಗಿದೆ. ‘ಐ ಲವ್ ಮುಹಮ್ಮದ್’ ಬ್ಯಾನರ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿಂತೆ ಮಹಾನಗರ ಪಾಲಿಕೆ ಅವರಿಗೆ ಹೇಳುತ್ತೇವೆ. ಅನುಮತಿ ಪಡೆದು ಬ್ಯಾನರ್ ಹಾಕಲು ಸೂಚನೆ ನೀಡುತ್ತೇವೆ ಎಂದು ತಿಳಿಸಿದರು. ಘಟನೆ ಸಂಬಂಧ 11 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಕಲಬುರಗಿಗೂ ಕಾಲಿಟ್ಟ ಐ ಲವ್ ಮೊಹಮ್ಮದ್ ಬ್ಯಾನರ್ ವಿವಾದ: ಹಿಂದೂ ಸಂಘಟನೆಗಳಿಂದ ಆಕ್ರೋಶ

  • ಮದ್ದೂರು ಕಲ್ಲು ತೂರಾಟಕ್ಕೆ ಟ್ವಿಸ್ಟ್ – ಟಾರ್ಗೆಟ್ ಮಾಡಿದ್ದೇ ಒಂದು, ಕಲ್ಲು ತೂರಿದ್ದೇ ಮತ್ತೊಂದು ಗಣೇಶನ ಮೇಲೆ

    ಮದ್ದೂರು ಕಲ್ಲು ತೂರಾಟಕ್ಕೆ ಟ್ವಿಸ್ಟ್ – ಟಾರ್ಗೆಟ್ ಮಾಡಿದ್ದೇ ಒಂದು, ಕಲ್ಲು ತೂರಿದ್ದೇ ಮತ್ತೊಂದು ಗಣೇಶನ ಮೇಲೆ

    – ಇದೊಂದು ಪೂರ್ವ ನಿಯೋಜಿತ ಕೃತ್ಯ ಎಂದು ತನಿಖೆಯಲ್ಲಿ ಬಯಲು

    ಮಂಡ್ಯ: ಮದ್ದೂರಿನಲ್ಲಿ (Maddur Stone Pelting) ಗಣೇಶ ಮೆರವಣಿಗೆ (Ganesha Procession) ವೇಳೆ ಕಲ್ಲು ತೂರಾಟ ಮಾಡಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ತನಿಖೆ ವೇಳೆ ಇದೊಂದು ಪ್ರೀ ಪ್ಲಾನ್ ಕೃತ್ಯ ಎಂಬ ಸತ್ಯ ಬಯಲಾಗಿದೆ. ಅಷ್ಟೇ ಅಲ್ಲ ದುಷ್ಕರ್ಮಿಗಳ ಪ್ಲಾನ್ ಕೇಳಿ ಪೊಲೀಸರೇ ಶಾಕ್ ಆಗಿದ್ದಾರೆ.

    ಕಳೆದ ಸೆಪ್ಟೆಂಬರ್ 7ರಂದು ಮಂಡ್ಯದ ಮದ್ದೂರಿನಲ್ಲಿ ದುಷ್ಕರ್ಮಿಗಳು ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಿದ್ದರು. ಆ ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಅಷ್ಟೇ ಅಲ್ಲ, ಅದೊಂದು ಪ್ರೀ ಪ್ಲಾನ್ ಕೃತ್ಯ ಎಂದು ಶಂಕಿಸಲಾಗಿತ್ತು. ಇದೀಗ ಪೊಲೀಸ್ ತನಿಖೆಯಲ್ಲಿ ಮತ್ತಷ್ಟು ರಹಸ್ಯ ಬಟಾಬಯಲಾಗಿದ್ದು, ಕಿಡಿಗೇಡಿಗಳು ಕಲ್ಲು ಹೊಡೆಯಲು ಪ್ಲಾನ್ ಮಾಡಿಕೊಂಡಿದ್ದು ಬೇರೆ ಗಣೇಶ ಮೂರ್ತಿಯ ಮೇಲೆ ಎಂಬುದು ಬಯಲಾಗಿದೆ. ಇದನ್ನೂ ಓದಿ: ಬಿಜೆಪಿ ನಾಯಕರ ಬಣ್ಣ ಬಯಲಾಗುತ್ತಿದೆ, ಸಾರ್ವಜನಿಕರ ಎದುರು ಬೆತ್ತಲಾಗುತ್ತಿದ್ದಾರೆ: ಸಮೀಕ್ಷೆಯಲ್ಲಿ ಭಾಗಿಯಾಗುವಂತೆ ಸಿಎಂ ಮನವಿ

    ಮದ್ದೂರಿನಲ್ಲಿ ಚನ್ನೇಗೌಡ ಬಡಾವಣೆಯಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯನ್ನ ಅದ್ದೂರಿಯಾಗಿ ಮೆರವಣಿಗೆ ಮಾಡಲಾಗುತ್ತಿತು. ರಾಮ್ ರಹೀಮ್ ನಗರದ ಮಸೀದಿ ಮುಂದೆ ಡಿಜೆ ಆಫ್ ಮಾಡುವಂತೆ ಪೊಲೀಸರು ಸೂಚಿಸಿದಾಗ ಯುವಕರು ಒಪ್ಪಿಕೊಂಡಿದ್ದರು. ಮಸೀದಿಯಿಂದ ಸ್ವಲ್ಪ ದೂರ ಸಾಗಿದ ಬಳಿಕ ಮತ್ತೆ ಡಿಜೆ ಆನ್ ಮಾಡಿಸಿ ಸಂಭ್ರಮಿಸುತ್ತಾ ಮೆರವಣಿಗೆ ಮಾಡುತ್ತಿದ್ದರು. ಈ ವೇಳೆ ಕಿಡಿಗೇಡಿಗಳು ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಿದ್ದರು. ಇದೊಂದು ಪೂರ್ವ ಯೋಜಿತ ಕೃತ್ಯ ಅಂತ ಬಿಜೆಪಿ ಮಾತ್ರವಲ್ಲ ಕಾಂಗ್ರೆಸ್ ನಾಯಕರು ಅನುಮಾನ ವ್ಯಕ್ತಪಡಿಸಿದ್ದರು. ಮುಸ್ಲಿಮ್ ಮುಖಂಡರು ನಮ್ಮ ಸಮುದಾಯದ ಯುವಕರೇ ಕಲ್ಲು ಎಸೆದಿದ್ದು, ಅವರನ್ನ ಬಂಧಿಸುವಂತೆ ಒತ್ತಾಯಿಸಿದ್ದರು. ಇದನ್ನೂ ಓದಿ: ಓಸಿ, ಸಿಸಿ ಇಲ್ಲದೆ ವಿದ್ಯುತ್ ಸಂಪರ್ಕ – ಅ.9ರಂದು ಕ್ಯಾಬಿನೆಟ್ ಸಭೆಯಲ್ಲಿ ಅಂತಿಮ ತೀರ್ಮಾನ

    ಪ್ರಕರಣ ಸಂಬಂಧ ಮದ್ದೂರು ಪೊಲೀಸರು ಮೊದಲಿಗೆ 22 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಬಳಿಕ 29 ಮಂದಿಗೆ ಏರಿಕೆಯಾಗಿತ್ತು. ತನಿಖೆ ಮುಂದುವರಿದಂತೆ 32 ಮಂದಿ ವಿರುದ್ಧ ಕೇಸು ದಾಖಲಿಸಿ ವಿಚಾರಣೆ ಮಾಡಿದಾಗ ದುಷ್ಕರ್ಮಿಗಳು ಇಡೀ ಪ್ರಕರಣದ ರಹಸ್ಯ ಬಾಯಿ ಬಿಟ್ಟಿದ್ದಾರೆ. ಗಣೇಶನ ಮೇಲೆ ಕಲ್ಲು ತೂರಿ ಗಲಭೆ ನಡೆಸಲು ಪ್ಲಾನ್ ಮಾಡಲಾಗಿತ್ತು. ಆದರೆ ಸ್ವಾಮಿ ಎಂಬವರ ನೇತೃತ್ವದಲ್ಲಿ ಕೂರಿಸಿದ್ದ ಗಣೇಶ ಮೂರ್ತಿ ಮೇಲೆ ಕಲ್ಲು ತೂರಲು ಕಿರಾತಕರು ಪ್ಲಾನ್ ಮಾಡಿಕೊಂಡಿದ್ದರಂತೆ. ಆ ಗಣೇಶ ವಿಸರ್ಜನೆ ಇನ್ನು ಒಂದು ವಾರ ಬಾಕಿ ಇದ್ದಿದ್ದರಿಂದ ಸೆಪ್ಟೆಂಬರ್ 7ರಂದು ವಿಸರ್ಜನೆ ಮಾಡುತ್ತಿದ್ದ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಿದ್ದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿರುವುದಾಗಿ ಪೊಲೀಸ್ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಇದನ್ನೂ ಓದಿ: ರೈತರ ವಿಚಾರದಲ್ಲಿ ತಾತ್ಸಾರ ಬೇಡ, ಸಿಎಂ ಬೆಂಗಳೂರಿಗೆ ಸೀಮಿತರಾಗಿದ್ದಾರೆ – ಬಿವೈವಿ ಕಿಡಿ

    ಸದ್ಯ ಪ್ರಕರಣ ಸಂಬಂಧ ಅರೋಪಿಗಳನ್ನ ಮತ್ತಷ್ಟು ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದು, ಯಾವುದಾದರೂ ದ್ವೇಷದಿಂದ ಕಲ್ಲು ತೂರಿದ್ರಾ ಅಥವ ಧರ್ಮದ ವಿಚಾರ ಇಟ್ಟುಕೊಂಡು ಗಲಭೆ ಎಬ್ಬಿಸಲು ಮುಂದಾಗಿದ್ರಾ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಇದನ್ನೂ ಓದಿ: ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್- ನೇಮಕಾತಿಗಳಲ್ಲಿ 3 ವರ್ಷ ವಯೋಮಿತಿ ಸಡಿಲಿಕೆ

  • ‘ಐ ಲವ್ ಮಹಮ್ಮದೀಯ’ ಎಂಬ ಫ್ಲೆಕ್ಸ್ ಹಾಕಿದ್ದಕ್ಕೆ ಗಲಾಟೆ – ಮನೆಗಳನ್ನು ಟಾರ್ಗೆಟ್‌ ಮಾಡಿ ಕಲ್ಲು ತೂರಾಟ

    ‘ಐ ಲವ್ ಮಹಮ್ಮದೀಯ’ ಎಂಬ ಫ್ಲೆಕ್ಸ್ ಹಾಕಿದ್ದಕ್ಕೆ ಗಲಾಟೆ – ಮನೆಗಳನ್ನು ಟಾರ್ಗೆಟ್‌ ಮಾಡಿ ಕಲ್ಲು ತೂರಾಟ

    ದಾವಣಗೆರೆ: ಫ್ಲೆಕ್ಸ್ ಹಾಕಿದ ವಿಚಾರಕ್ಕೆ ಎರಡು ಕೋಮಿನ ನಡುವೆ ವಾಗ್ವಾದ ನಡೆದು ವಿಕೋಪಕ್ಕೆ ತಿರುಗಿದ ಘಟನೆ ದಾವಣಗೆರೆ (Davanagere) ನಗರದ ಬೇತೂರು ರಸ್ತೆಯ ಕಾರ್ಲ್ ಮಾರ್ಕ್ಸ್ ನಗರದಲ್ಲಿ ನಡೆದಿದೆ.

    ಕಾರ್ಲ್ ಮಾರ್ಕ್ಸ್ ನಗರದ 13ನೇ ಕ್ರಾಸ್ ನಲ್ಲಿ ಅನ್ಯ ಕೋಮಿನ ಮನೆ ಮುಂದೆ ಐ ಲವ್ ಮಹಮ್ಮದೀಯ ಫ್ಲೆಕ್ಸ್ ಸೇರಿದಂತೆ ಬೇರೆ ಬೇರೆ ಫ್ಲೆಕ್ಸ್‌ ಹಾಕಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರಿಂದ ಎರಡು ಕೋಮಿನ ಯುವಕರ‌ ನಡುವೆ ವಾಗ್ವಾದ ಶುರುವಾಗಿದ್ದು, ನಮ್ಮ ಮನೆಯ ಮುಂಭಾಗ ಫ್ಲೆಕ್ಸ್ ಹಾಕಬೇಡಿ ಎಂದು ಹೇಳಿದ್ದಕ್ಕೆ ಗಲಾಟೆ ನಡೆಸಿದ್ದಾರೆ.ಇದನ್ನೂ ಓದಿ: ಸಿಕ್ಸ್‌ ಮೇಲೆ ಸಿಕ್ಸ್‌ – ಏಷ್ಯಾಕಪ್‌ನಲ್ಲಿ ದಾಖಲೆ ಬರೆದ ಅಭಿಷೇಕ್‌ ಶರ್ಮಾ

    ಗಲಾಟೆ ಕೆಲ ಯುವಕರ ನಡುವೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು, ಕೂಡಲೇ ಸ್ಥಳಕ್ಕೆ ಆಗಮಿಸಿದ ಅಜಾದ್ ನಗರ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು. ಅಲ್ಲದೆ ಕೆಲ ಕಿಡಿಗೇಡಿಗಳು ಒಂದು ಧರ್ಮದ ಮನೆಯನ್ನೇ ಟಾರ್ಗೆಟ್‌ ಮಾಡಿ ಕಲ್ಲು ಹೊಡೆದಿದ್ದಾರೆ. 13ನೇ ಕ್ರಾಸ್ ನಲ್ಲಿ ಗಲಾಟೆಯಾದ್ರೆ 1ನೇ ಕ್ರಾಸ್ ನಲ್ಲಿರುವ ಮನೆಗಳ ಮೇಲೆ ಕಲ್ಲು ತೂರಾಟ ಮಾಡಿದ್ದು, ನಿವಾಸಿಗಳು ಕಿಡಿಗೇಡಿಗಳ ವಿರುದ್ಧ ಹಿಡಿಶಾಪ ಹಾಕಿದ್ರು.

    ಸ್ಥಳಕ್ಕೆ ಐಜಿಪಿ ರವಿಕಮತೇಗೌಡ, ಎಸ್ ಪಿ ಉಮಾ ಪ್ರಶಾಂತ್ ಆಗಮಿಸಿ ಘಟನೆಯ ಬಗ್ಗೆ ಮಾಹಿತಿ ಪಡೆದರು. ಅಕ್ಷೇಪಾರ್ಹ ಫ್ಲೆಕ್ಸ್ ಅನ್ನು ತೆರವು ಮಾಡಲು ಪೊಲೀಸರು ಮುಂದಾಗಿದ್ದು, ಸದ್ಯ ವಾತಾವರಣ ತಿಳಿಗೊಂಡಿದ್ದು, ಸ್ಥಳದಲ್ಲಿ ಪೊಲೀಸರು ಮೊಖಂ ಹೂಡಿದ್ದಾರೆ. ಅಲ್ಲದೆ ಎರಡು ಕೋಮಿನ ಜನರು ಶಾಂತಿಯುತವಾಗಿ ಸಹಬಾಳ್ವೆ ನಡೆಸುತ್ತೇವೆ ಎಂದು ಮುಸ್ಲಿಂ ಮುಖಂಡರು ತಿಳಿಸಿದರು.ಇದನ್ನೂ ಓದಿ: ರಾಜ್ಯದ 39 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಹೆಸರು ಅಂತಿಮ – ವಿನಯ್‌ ಕುಲಕರ್ಣಿ ಪತ್ನಿಗೂ ಸಿಕ್ತು ಪಟ್ಟ

  • ಮದ್ದೂರಲ್ಲಿ ಪ್ರಚೋದನಕಾರಿ ಭಾಷಣ – ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಎಫ್‌ಐಆರ್

    ಮದ್ದೂರಲ್ಲಿ ಪ್ರಚೋದನಕಾರಿ ಭಾಷಣ – ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಎಫ್‌ಐಆರ್

    ಮಂಡ್ಯ: ಮದ್ದೂರು (Maddur) ಪಟ್ಟಣಕ್ಕೆ ಭೇಟಿ ನೀಡಿದ್ದ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದಡಿಯಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ವಿರುದ್ಧ ಎಫ್‌ಐಆರ್ ದಾಖಲಾಗಿದೆ.

    ಗಣೇಶ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ ಬಳಿಕ ಗುರುವಾರ (ಸೆ.11) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮದ್ದೂರಿಗೆ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದರು. ಭಾಷಣದ ವೇಳೆ ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಮದ್ದೂರು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಮಂಜುನಾಥ್ ಅವರ ದೂರಿನನ್ವಯ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಪಾಕಿಸ್ತಾನಕ್ಕೆ ಜೈ ಎಂದವರ ಬಾಯಿಗೆ ಗುಂಡು ಹೊಡೆಯಬೇಕು: ಯತ್ನಾಳ್ ಕಿಡಿ

    ಬಿಎನ್‌ಎಸ್ ಸೆಕ್ಷನ್ 196(1)(ಚಿ), 299, 353(2) ಅನ್ಯಕೋಮಿಗೆ ಧಕ್ಕೆ ಹಾಗೂ ಕೋಮುಗಳ ನಡುವೆ ವೈರತ್ವ ಉಂಟುಮಾಡುವ ಭಾಷಣ ಮಾಡಿರುವ ಆರೋಪದಡಿ ಎಫ್‌ಐಆರ್ ದಾಖಲಾಗಿದೆ.

    ಇದಕ್ಕೂ ಮುನ್ನ ಗುರುವಾರ (ಸೆ.11) ಮದ್ದೂರು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಮಂಜುನಾಥ್ ಅವರೇ ಎಂಎಲ್‌ಸಿ ಸಿ.ಟಿ ರವಿ (CT Ravi) ವಿರುದ್ಧವೂ ದೂರು ನೀಡಿ, ಭಾಷಣದ ವೇಳೆ ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿದ್ದರು.ಇದನ್ನೂ ಓದಿ: ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ – ಸಿ.ಟಿ ರವಿ ವಿರುದ್ಧ ಕೇಸ್ ದಾಖಲು

  • ಬಿಜೆಪಿಯವರು ಮದ್ದೂರು ಬಂದ್ ಮಾಡಿದ್ದೇ ಶಾಂತಿ ಕದಡೋಕೆ: ಚಲುವರಾಯಸ್ವಾಮಿ

    ಬಿಜೆಪಿಯವರು ಮದ್ದೂರು ಬಂದ್ ಮಾಡಿದ್ದೇ ಶಾಂತಿ ಕದಡೋಕೆ: ಚಲುವರಾಯಸ್ವಾಮಿ

    ಬೆಂಗಳೂರು: ಮದ್ದೂರು (Maddur) ಈಗ ಶಾಂತವಾಗಿದೆ. ಬಿಜೆಪಿ (BJP) ಅವರು ಬಂದ್ ಮಾಡಿದ್ದೇ ಶಾಂತಿ ಕದಡೋಕೆ ಎಂದು ಸಚಿವ ಚಲುವರಾಯಸ್ವಾಮಿ (Chaluvarayaswamy) ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

    ಮದ್ದೂರು ಗಲಾಟೆ (Maddur Stone Pelting) ವಿಚಾರಕ್ಕೆ ವಿಧಾನಸೌಧದದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಈಗ ಎಲ್ಲವೂ ಶಾಂತವಾಗಿದೆ. ಆರಂಭದಲ್ಲಿ ಆದ ಘಟನೆ ಬಗ್ಗೆ ನಾವು ಕ್ರಮ ತೆಗೆದುಕೊಂಡಿದ್ದೇವೆ. ಘಟನೆಗೆ ಕಾರಣರಾದವರನ್ನು ಬಂಧಿಸಲಾಗಿದೆ. ಯಾವುದೇ ಮುಲಾಜಿಲ್ಲದೇ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಆದರೂ ಬಿಜೆಪಿಯವರು ಬಂದ್ ಮಾಡಿದ್ದಾರೆ. ಅವರು ವಾತಾವರಣವನ್ನು ಕಲುಷಿತ ಮಾಡಲು ಹೀಗೆ ಮಾಡಿದ್ರಾ? ಇವರ ಉದ್ದೇಶ ಕೋಮು ಸಂಘರ್ಷ ಸೃಷ್ಟಿ ಮಾಡೋಕೆ ಮಾಡಿದ್ರಾ ಅಂತಾ ಅವರೇ ಯೋಚನೆ ಮಾಡಲಿ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಂಗಮೇಶ್ ಈ ಜನ್ಮದಲ್ಲೇ ಇಸ್ಲಾಂಗೆ ಹೋಗಿಬಿಡಲಿ: ಯತ್ನಾಳ್ ತರಾಟೆ

    ನಾವು ಕ್ರಮ ತೆಗೆದುಕೊಳ್ಳಲು ನಿಧಾನ ಮಾಡಿದ್ರೆ ಅವರು ಮಾಡಿದ್ದರಲ್ಲಿ ಅರ್ಥ ಇದೆ. ಕ್ರಮ ತೆಗೆದುಕೊಂಡ ಮೇಲೂ ಬಾಯಿಗೆ ಬಂದ ಹಾಗೆ ವೇದಿಕೆಯಲ್ಲಿ ನಿಂತು ಮಾತನಾಡುತ್ತಿದಾರೆ ಅಂದ್ರೆ ಮಂಡ್ಯ ಜಿಲ್ಲೆಯ ಶಾಂತಿ ಕದಡಲು ತಾನೇ?ಮಳವಳ್ಳಿ ಬಂದ್ ಏನಾಗಿದೆ? ಒಂದು ಅಂಗಡಿ ಮುಚ್ಚಿಲ್ಲ. ಬಿಜೆಪಿ ಅವರು ಮಂಡ್ಯಗೆ ಇಂತಹ ವಿಷಯಕ್ಕೆ ಬರಬೇಡಿ. ಇಂತಹ ವಿಷಯಗಳನ್ನ ಇಟ್ಟುಕೊಂಡು ಅಶಾಂತಿ ನಿರ್ಮಾಣ ಮಾಡೋಕೆ ಬರಬೇಡಿ ಎಂದು ಹರಿಹಾಯ್ದರು. ಇದನ್ನೂ ಓದಿ: ಸಿ.ಟಿ ರವಿ ದ್ವೇಷ ಭಾಷಣ ಮಾಡಿದ್ದಕ್ಕೆ FIR ದಾಖಲು – ರಾಮಲಿಂಗಾರೆಡ್ಡಿ ಸಮರ್ಥನೆ

    ಸಿ.ಟಿ ರವಿ ಮೇಲೆ ಎಫ್‌ಐಆರ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿ.ಟಿ ರವಿ ಮಂತ್ರಿ ಆಗಿದ್ದವರು. ಕಾಲು ಮುರಿಯುತ್ತೀವಿ, ಕೈ ಮುರಿತೀವಿ ಅಂದರೆ ಹೇಗೆ? ಸಿ.ಟಿ ರವಿ ಇನ್ನು ಕಲಿಯೋ ಹಾಗೇ ಕಾಣುತ್ತಿಲ್ಲ. ಕಾನೂನು ಇರೋದು ಕ್ರಮ ತೆಗೆದುಕೊಳ್ಳೋಕೆ. ಘಟನೆ ಆಗಿರೋದು ಸತ್ಯ, ಕ್ರಮ ಆಗಿದೆ. ಇದು ಪೂರ್ವ ನಿಯೋಜನೆನಾ ಅಲ್ಲವಾ ಎಂದು ತನಿಖೆ ಆಗಬೇಕು. ನಮ್ಮ ಹುಡುಗರ ಮೇಲೆ ಕ್ರಮ ಆಗಲಿ ಅಂತ ಆ ಸಮುದಾಯದವರು ಹೇಳಿದ್ದಾರೆ. ಬುಧವಾರ ಗಣೇಶ ವಿಸರ್ಜನೆಯಲ್ಲಿ ಎಲ್ಲರೂ ಸಹಕಾರ ಕೊಟ್ಟಿದ್ದಾರೆ. ಮಸೀದಿ ಮುಂದೆಯೇ ಹೋಗಿದ್ದಾರೆ ಎಂದರು. ಇದನ್ನೂ ಓದಿ: Forest Martyrs Day | ಹುತಾತ್ಮರಿಗೆ 50 ಲಕ್ಷ ರೂ. ಪರಿಹಾರ: ಈಶ್ವರ್ ಖಂಡ್ರೆ

  • ಮೂರು ದಿನಗಳ ಬಳಿಕ ಸಹಜ ಸ್ಥಿತಿಯತ್ತ ಮದ್ದೂರು

    ಮೂರು ದಿನಗಳ ಬಳಿಕ ಸಹಜ ಸ್ಥಿತಿಯತ್ತ ಮದ್ದೂರು

    ಮಂಡ್ಯ: ಗಣೇಶ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟವಾದ ಮೂರು ದಿನಗಳ ಬಳಿಕ ಮದ್ದೂರು (Maddur) ಪಟ್ಟಣ ಸಹಜ ಸ್ಥಿತಿಯತ್ತ ಮರಳುತ್ತಿದೆ.

    ಭಾನುವಾರ (ಸೆ.7) ರಾತ್ರಿ ಗಣೇಶ ಮೆರವಣಿಗೆ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಇದರಿಂದ ಕಳೆದ ಮೂರು ದಿನಗಳಿಂದ ಮದ್ದೂರು ಪಟ್ಟಣದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು.ಇದನ್ನೂ ಓದಿ: ಮದ್ದೂರಿನಲ್ಲಿ ʼಕೇಸರಿʼ ಘರ್ಜನೆ; ಬಿಜೆಪಿ-ಜೆಡಿಎಸ್ ಒಗ್ಗೂಡಿ ಗಣೇಶ ಮೆರವಣಿಗೆ – ಶಿಂಷಾ ನದಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ

    ಸೋಮವಾರ (ಸೆ.8) ಕಲ್ಲು ತೂರಾಟ ಖಂಡಿಸಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಈ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು. ಅದಾದ ಬಳಿಕ ಈ ಘಟನೆಯನ್ನು ಖಂಡಿಸಿ ಮಂಗಳವಾರ (ಸೆ.9) ಮದ್ದೂರು ಬಂದ್‌ಗೆ ಕರೆ ನೀಡಲಾಗಿತ್ತು. ವರ್ತಕರು ಬೆಂಬಲ ಸೂಚಿಸಿದ ಪರಿಣಾಮ ಬಂದ್ ಯಶಸ್ವಿಯಾಗಿತ್ತು. ಬುಧವಾರ (ಸೆ.11) ಮದ್ದೂರು ಪಟ್ಟಣದಲ್ಲಿ ಬಿಗಿಭದ್ರತೆಯೊಂದಿಗೆ ಸಾಮೂಹಿಕ ಬೃಹತ್ ಗಣಪತಿ ವಿಸರ್ಜನೆ ಮೆರವಣಿಗೆ ನಡೆಯಿತು. ಹೀಗಾಗಿ ಮೂರು ದಿನಗಳ ಕಾಲ ಮದ್ದೂರು ಪಟ್ಟಣದಲ್ಲಿ ಅಂಗಡಿ ಮುಗ್ಗಟ್ಟುಗಳು ತೆರದಿರಲಿಲ್ಲ.

    ಗುರುವಾರ (ಸೆ.11) ಮೂರು ದಿನಗಳ ಬಳಿಕ ಮದ್ದೂರು ಪಟ್ಟಣದಲ್ಲಿ ಎಂದಿನಂತೆ ಅಂಗಡಿ ಮುಗ್ಗಟ್ಟುಗಳು ತೆರೆದಿವೆ. ಇನ್ನೂ ಎಂದಿನಂತೆ ವಾಹನ ಸಂಚಾರ ಕೂಡ ಆರಂಭವಾಗಿದೆ. ಭದ್ರತಾ ದೃಷ್ಟಿಯಿಂದ ಮದ್ದೂರು ಪಟ್ಟಣದಲ್ಲಿ ಪೊಲೀಸ್ ಭದ್ರತೆಯನ್ನು ಮುಂದುವರಿಸಲಾಗಿದ್ದು, ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.ಇದನ್ನೂ ಓದಿ: ಮದ್ದೂರು ಬಂದ್‌ಗೆ ಉತ್ತಮ ರೆಸ್ಪಾನ್ಸ್ – ಪಟ್ಟಣದಾದ್ಯಂತ ಪೊಲೀಸ್ ಸರ್ಪಗಾವಲು, ಎಸ್ಪಿ ರೌಂಡ್ಸ್

  • ಸರ್ಕಾರದ ಓಲೈಕೆ ರಾಜಕಾರಣದಿಂದ ಜನರಿಗೆ ತೊಂದರೆ: ಛಲವಾದಿ ನಾರಾಯಣಸ್ವಾಮಿ

    ಸರ್ಕಾರದ ಓಲೈಕೆ ರಾಜಕಾರಣದಿಂದ ಜನರಿಗೆ ತೊಂದರೆ: ಛಲವಾದಿ ನಾರಾಯಣಸ್ವಾಮಿ

    ಬೆಂಗಳೂರು: ಮುಖ್ಯಮಂತ್ರಿಗಳು ಸರ್ವರನ್ನೂ ಜೊತೆಯಾಗಿ ಒಯ್ಯುವ ಕಾರ್ಯ ಮಾಡುತ್ತಿಲ್ಲ. ಗಣೇಶ ವಿಸರ್ಜನೆ ವೇಳೆ ಆಗುತ್ತಿರುವ ಅಹಿತಕರ ಘಟನೆಗಳಿಗೆ ಸರ್ಕಾರವೇ ಹೊಣೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಟೀಕಿಸಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಸರ್ಕಾರ ಒಂದು ಕಡೆ ವಾಲಿದ್ದರಿಂದ ಇಂದು ಈ ಪರಿಸ್ಥಿತಿ ಎದುರಾಗುತ್ತಿದೆ. ಸರ್ವರಿಗೂ ಸಮಪಾಲು, ಸಮಬಾಳು ಎನ್ನುವ ಸರ್ಕಾರ ಹೀಗೆ ನಡೆದುಕೊಂಡರೆ ಸರಿಯೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸಿಎಂ ಕುರ್ಚಿಯಲ್ಲಿ ಕುಳಿತು ನ್ಯಾಯ ಕೊಡುವುದು ಮುಖ್ಯ: ಬಿ.ವೈ.ವಿಜಯೇಂದ್ರ ಅಭಿಪ್ರಾಯ

    ಮದ್ದೂರಿನಲ್ಲಿ (Maddur) ಭಾನುವಾರ ಗಣೇಶ ವಿಸರ್ಜನೆ ಸಮಯದಲ್ಲಿ ಅಚಾತುರ್ಯದ ಘಟನೆಗಳು ನಡೆದಿವೆ. ಇದು ಕಾಂಗ್ರೆಸ್ ತನ್ನ ಮತ ಬ್ಯಾಂಕನ್ನು ಭದ್ರಪಡಿಸಿಕೊಳ್ಳಲು ಕೆಲವು ರೀತಿಯ ಓಲೈಕೆಗಳನ್ನು ಮಾಡಿದ್ದರಿಂದ ಇಡೀ ರಾಜ್ಯದಲ್ಲಿ ಜನರು ತೊಂದರೆ ಅನುಭವಿಸುವಂತಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಪ್ರತಾಪ್ ತಂದೆ-ತಾಯಿ ದೈವ ಭಕ್ತರಿರಬೇಕು, ಇಲ್ಲಂದ್ರೆ ಕೋತಿ ಅಂತ ಹೆಸರಿಡ್ತಿದ್ರು: ಪ್ರದೀಪ್ ಈಶ್ವರ್

    ಗಣೇಶ ವಿಸರ್ಜನೆಗೆ ನೀವು ಅವಕಾಶವನ್ನೂ ಕೊಡುತ್ತಿಲ್ಲ. ಚಿತ್ರದುರ್ಗದಲ್ಲಿ ಮೆರವಣಿಗೆಗೆ ಅವಕಾಶ ಕೊಡುವುದಿಲ್ಲ ಎಂದು ಎಸ್ಪಿ ಆದೇಶ ಹೊರಡಿಸಿದ್ದಾರೆ. ನಮ್ಮೂರಿನಲ್ಲಿ ಆಚರಿಸುವುದಕ್ಕೆ ನಮಗೆ ನೀವು ಅನುಮತಿ ಕೊಡಬೇಕೇ ಎಂದು ಗುಡುಗಿದ್ದಾರೆ.

  • ಪ್ರತಾಪ್ ತಂದೆ-ತಾಯಿ ದೈವ ಭಕ್ತರಿರಬೇಕು, ಇಲ್ಲಂದ್ರೆ ಕೋತಿ ಅಂತ ಹೆಸರಿಡ್ತಿದ್ರು: ಪ್ರದೀಪ್ ಈಶ್ವರ್

    ಪ್ರತಾಪ್ ತಂದೆ-ತಾಯಿ ದೈವ ಭಕ್ತರಿರಬೇಕು, ಇಲ್ಲಂದ್ರೆ ಕೋತಿ ಅಂತ ಹೆಸರಿಡ್ತಿದ್ರು: ಪ್ರದೀಪ್ ಈಶ್ವರ್

    – ಸಿಂಹ ಘರ್ಜಿಸಬೇಕು, ಬಾಯಿ ಬಡಿದುಕೊಳ್ಳಬಾರದು
    -ಯತ್ನಾಳ್, ಪ್ರತಾಪ್ ಫೈರ್ ಅಲ್ಲ, ಬಿಜೆಪಿಯವರು ಕಿತ್ತು ಬಿಸಾಡಿರುವ ಪೈರು

    ಬೆಂಗಳೂರು: ಮೈಸೂರಿನ ಮಾಜಿ ಸಂಸದ ಪ್ರತಾಪ್ (Pratap Simha) ಅವರ ತಂದೆ ತಾಯಿ ದೈವ ಭಕ್ತರು ಇರಬೇಕು, ಅದಕ್ಕೆ ಪ್ರತಾಪ ಅಂತ ಹೆಸರಿಟ್ಟಿದ್ದಾರೆ. ಇಲ್ಲ ಅಂದರೆ ಕೋತಿ ಅಂತ ಇಡುತ್ತಿದ್ದರು ಎಂದು ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಟೀಕಿಸಿದ್ದಾರೆ.

    ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಾಪ್ ಅವರಿಗೆ ಅಸ್ತಿತ್ವದ ಕೊರತೆ ಕಾಡುತ್ತಿದೆ. ನಾನು ಅವರಿಗೆ ಸಿಂಹ ಅನ್ನಲ್ಲ, ಸಿಂಹ ಘರ್ಜಿಸಬೇಕು, ಬಾಯಿ ಬಡಿದುಕೊಳ್ಳಬಾರದು. ಬಿಜೆಪಿಯವರು ಒದ್ದು ಹೊರಗೆ ಹಾಕಿದ್ದಾರಾ ಗೊತ್ತಿಲ್ಲ, ಹೊರಗಂತೂ ಹಾಕಿದ್ದಾರೆ. ಹಿಂದೂ ಧರ್ಮ ನಿಮಗೆ ಅಂತ ಯತ್ನಾಳ್‌ಗೆ, ಪ್ರತಾಪ್ ಸಿಂಹಗೆ ನಿಮ್ಮ ತಾತಾ ಏನು ವಿಲ್ ಬರೆದುಕೊಟ್ಟಿದ್ದಾರ? ನಾನು ಮಾತನಾಡಿದರೆ ಪ್ರತಾಪ್ ಸಿಂಹ ಈಗ ಮೂರನೆ ಮಾನನಷ್ಟ ಮೊಕದ್ದಮೆ ಕೇಸ್ ಹಾಕುತ್ತಾರೆ. ನಿಮ್ಮನ್ನ ಯಾರು ಬಯ್ಯಬಾರದು, ನೀವು ಯಾರನ್ನ ಬೇಕಾದರು ಬಯ್ಯಬಹುದಾ? ನಾನು ಮಾತನಾಡಿದರೆ, ಲಕ್ಷ್ಮಣ್ ಮಾತನಾಡಿದರೆ ಸ್ಟೇ ತರುತ್ತಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಮದ್ದೂರು ಗಲಾಟೆ ಕೇಸ್‌ನಲ್ಲಿ ಬಿಜೆಪಿ ಬೆಂಕಿ ಹಚ್ಚೋ ಕೆಲಸ ಮಾಡ್ತಿದೆ: ಎ.ಎಸ್ ಪೊನ್ನಣ್ಣ

    ಪ್ರತಾಪ್‌ಗೆ ಕೆಲಸವಂತೂ ಇಲ್ಲ, ರಾಜ್ಯ ರಾಜಕಾರಣಕ್ಕೆ ಅವರು ಸೂಟ್ ಆಗಲ್ಲ. ಅಷ್ಟು ಅಹಂಕಾರ, ದುರಹಂಕಾರ ಇದ್ರೆ ರಾಜ್ಯ ರಾಜಕಾರಣಕ್ಕೆ ಒಗ್ಗಲ್ಲ. ಮೈಸೂರು ಎಂಪಿಯವರು ಸ್ಥಾನ ಪ್ರತಾಪ್‌ಗೆ ಬಿಟ್ಟು ಕೊಡ್ತಾರಾ, ಖಂಡಿತ ಇಲ್ಲ. ಮೈಸೂರು ಸಂಸ್ಥಾನವನ್ನೂ ಬಿಡಲ್ಲ, ಎಂಪಿ ಸ್ಥಾನವನ್ನೂ ಅವರು ಬಿಡಲ್ಲ. ಯತ್ನಾಳ್ ಹಾಗೂ ಪ್ರತಾಪ್ ಯುಪಿಯಲ್ಲಿ ಚುನಾವಣೆಯಲ್ಲಿ ನಿಲ್ಲುವುದು ಒಳ್ಳೆಯದು. ಪ್ರತಾಪ್ ಸೀತೆಯನ್ನು ನೋಡುವುದಕ್ಕೆ ಅಯೋಧ್ಯೆಗೆ ಹೋಗ್ತಾರೇನೋ, ಆದರೆ ನಾವೆಲ್ಲ ತಂದೆ ತಾಯಿಯಲ್ಲೇ ಶ್ರೀರಾಮಚಂದ್ರನನ್ನು, ಸೀತಾ ಮಾತೆಯನ್ನು ನೋಡುವ ಹಿಂದೂಗಳು ನಾವು. ನಿಮಗಿಂತ ದೊಡ್ಡ ಹಿಂದೂ ಭಕ್ತರು ಹಿಂದೂ ಆರಾಧಕರು ನಾವು. ಹಿಂದೂ ಧರ್ಮದ ಬಗ್ಗೆ ಇಷ್ಟು ಮಾತಾಡ್ತಾರಲ್ಲ, ಎಷ್ಟು ಹಿಂದೂ ದೇವಾಲಯಗಳನ್ನು ಉದ್ಧಾರ ಮಾಡಿದ್ದಾರೆ ಇವರು? ಯತ್ನಾಳ್ ಹಾಗೂ ಪ್ರತಾಪ್ ಫೈರ್ ಅಲ್ಲ, ಬಿಜೆಪಿಯವರು ಕಿತ್ತು ಬಿಸಾಡಿರುವ ಪೈರು ನೀವು ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ರಾಜ್ಯ ಸರ್ಕಾರ ಹಿಂದೂಗಳನ್ನ ಯಾವ ಸ್ಥಿತಿಗೆ ತಳ್ಳಿರಬಹುದು? – ವಿಜಯೇಂದ್ರ ಆತಂಕ

    99% ಗಣೇಶ ವಿಸರ್ಜನೆ ಆಗಿದೆ. ಎಲ್ಲೋ ಒಂದೆರಡು ಕಡೆ ಸಮಸ್ಯೆ ಆಗಿದೆ. ತಪ್ಪು ಯಾರು ಮಾಡಿದರು ತಪ್ಪೇ. ಹಿಂದೂ ಮುಸ್ಲಿಂ, ಕ್ರಿಶ್ಚಿಯನ್ ಯಾರು ಮಾಡಿದರು ತಪ್ಪೇ. ಅದಕ್ಕೆ ಧರ್ಮ ಲೇಪನ ಮಾಡುವುದು ಯಾಕೆ? ಅವರನ್ನ ಅರೆಸ್ಟ್ ಮಾಡಿದ್ದೀವಿ ತಾನೆ. ಅವರನ್ನ ಒದ್ದು ಒಳಗೆ ಹಾಕಿದ್ದೇವೆ. ಪ್ರತಾಪ್ ಸಿಂಹ ಹೀಗೆ ಸ್ಟ್ರೈಕ್ ಮಾಡಿದರೆ ಆತನನ್ನು ಒದ್ದು ಒಳಗೆ ಹಾಕುತ್ತೇವೆ. ಕಾನೂನು ಕೈಗೆ ತಗೆದುಕೊಂಡರೆ ಪ್ರತಾಪ್ ಆದರೇನು, ಯತ್ನಾಳ್ ಆದರೇನು, ಅವರ ಅಪ್ಪ ಆದರೇನು, ಅವರ ಅಜ್ಜ ಆದರೇನು ಒದ್ದು ಒಳಗೆ ಹಾಕುತ್ತೇವೆ. ಲಾ ಅಂಡ್ ಆರ್ಡರ್ ಕಂಟ್ರೋಲ್‌ಗೆ ಬರುವಾಗ ಇವರು ಹೋಗಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ನಾನು ಯತ್ನಾಳ್‌ಗೆ ಬಹಿರಂಗ ಸವಾಲು ಹಾಕುತ್ತೇನೆ. ದೇವಸ್ಥಾನಕ್ಕೆ ಬನ್ನಿ ಹಿಂದೂ ಧರ್ಮದ ಬಗ್ಗೆ ಚರ್ಚೆ ಮಾಡೋಣ. ಸುಮ್ಮನೆ ವಿಭೂತಿ ಹಾಕಿಕೊಂಡು ಬರೋದಲ್ಲ ಎಂದು ಸವಾಲೆಸೆದರು. ಇದನ್ನೂ ಓದಿ: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ – ಸೆ.12ರ ನಂತರ ಮದ್ದೂರಿಗೆ ಹೆಚ್‌ಡಿಕೆ