ಮುಂಬೈ ರಸ್ತೆ ಬದಿಯಲ್ಲಿ ಈ ಸ್ವೀಟ್ ಪೊಟೆಟೋ ರೆಸಿಪಿ ತುಂಬಾ ಫೇಮಸ್. ಮಕ್ಕಳು, ಹಿರಿಯರು ಶಾಲೆ ಅಥವಾ ಆಫೀಸ್‌ನಿಂದ ಮನೆಗೆ ಹಿಂತಿರುಗೋ ಹೊತ್ತಲ್ಲಿ ಸಂಜೆ ವೇಳೆ ಯಾವಾಗಲೂ ಸವಿಯಲು ಬಯಸುತ್ತಾರೆ. ಮುಂಬೈ ಸ್ಟ್ರೀಟ್ ಸೈಡ್ ಸ್ಟೈಲ್‌ನ ಗೆಣಸಿನ ರೆಸಿಪಿ ಮಾಡೋದು ಕಷ್ಟ ಏನಿಲ್ಲ. ಇದನ್ನು ಬಿಸಿಬಿಸಿಯಾಗಿ ಸವಿದರೆ ಮಾತ್ರವೇ ಸಖತ್ ರುಚಿ ಎನಿಸುತ್ತದೆ. ಮುಂಬೈ ಸ್ಟ್ರೀಟ್ ಸೈಡ್ ಸ್ಟೈಲ್‌ನಲ್ಲಿ ಗೆಣಸು ಮನೆಯಲ್ಲೇ ಹೇಗೆ ಮಾಡೋದು ಎಂಬುದನ್ನು ನೋಡೋಣ.
ಬೇಕಾಗುವ ಪದಾರ್ಥಗಳು:
ಗೆಣಸು – 2 (ಮಧ್ಯಮ ಗಾತ್ರದ್ದು)
ಮೆಣಸಿನ ಪುಡಿ – ಅರ್ಧ ಟೀಸ್ಪೂನ್
ಕಪ್ಪು ಉಪ್ಪು – ಅರ್ಧ ಟೀಸ್ಪೂನ್
ಜೀರಿಗೆ ಪುಡಿ – ಅರ್ಧ ಟೀಸ್ಪೂನ್
ನಿಂಬೆ ರಸ – 1 ಟೀಸ್ಪೂನ್ ಇದನ್ನೂ ಓದಿ: ಹೀಗೆ ಮಾಡಿ ಸಿಂಪಲ್ ಪೀನಟ್ ಬಟರ್‌ನ ಮಿಠಾಯಿ
ಮಾಡುವ ವಿಧಾನ:
* ಮೊದಲಿಗೆ ಗೆಣಸನ್ನು ಬೇಯಿಸಿಕೊಂಡು, ಅದರ ಸಿಪ್ಪೆ ಸುಲಿದು ಬಳಿಕ ಮಧ್ಯಮ ಗಾತ್ರದ ಘನಾಕಾರದ ತುಂಡುಗಳಾಗಿ ಕತ್ತರಿಸಿ.
* ಒಂದು ಪ್ಲೇಟ್‌ಗೆ ಕತ್ತರಿಸಿದ ಗೆಣಸನ್ನು ಹಾಕಿ, ಅದರ ಮೇಲೆ ಮೆಣಸಿನ ಪುಡಿ, ಕಪ್ಪು ಉಪ್ಪು, ಜೀರಿಗೆ ಪುಡಿ ಹಾಗೂ ನಿಂಬೆ ರಸವನ್ನು ಚಿಮುಕಿಸಿ.
* ಇದೀಗ ಮುಂಬೈ ಸ್ಟ್ರೀಟ್ ಸೈಡ್ ಸ್ಟೈಲ್‌ನ ಗೆಣಸು ತಯಾರಾಗಿದ್ದು, ಇದನ್ನು ಬಿಸಿ ಬಿಸಿಯಾಗಿ ಸವಿಯಿರಿ. ಇದನ್ನೂ ಓದಿ: ರುಚಿರುಚಿಯಾಗಿ ಮಾಡಿ ಚಿಲ್ಲಿ ಗಾರ್ಲಿಕ್ ಪರೋಟ
ಆಲೂಗಡ್ಡೆ ಟ್ವಿಸ್ಟರ್ (Potato Twister) ಹೆಸರು ಕೇಳಿದ್ರೇನೇ ಬಾಯಲ್ಲಿ ನೀರು ಬರುತ್ತೆ ಅಲ್ವಾ? ಇತ್ತೀಚೆಗೆ ಬೀದಿ ಆಹಾರ ಪ್ರಿಯರ ಫೇವರಿಟ್ ಆಗಿರುವ ಈ ಖಾದ್ಯದ ಮೂಲ ದಕ್ಷಿಣ ಕೊರಿಯಾ. ಇದೀಗ ವಿಶ್ವದೆಲ್ಲೆಡೆ ತೂಬಾ ಫೇಮಸ್ ಆಗಿರುವ ಆಲೂಗಡ್ಡೆ ಟ್ವಿಸ್ಟರ್ ಅನ್ನು ಸಿಂಪಲ್ ಆಗಿ ಮನೆಯಲ್ಲಿಯೇ ಹೇಗೆ ಮಾಡಬಹುದು ಎಂಬುದನ್ನು ನಾವಿಂದು ಹೇಳಿಕೊಡುತ್ತೇವೆ. ಇದನ್ನು ಕಲಿತು ನೀವೂ ಒಮ್ಮೆ ಮನೆಯಲ್ಲಿ ಟ್ರೈ ಮಾಡಿ ನೋಡಿ.
ಬೇಕಾಗುವ ಪದಾರ್ಥಗಳು:
ಆಲೂಗಡ್ಡೆ – 4
ಮೈದಾ ಹಿಟ್ಟು – 2 ಟೀಸ್ಪೂನ್
ಕಾರ್ನ್ ಫ್ಲೋರ್ – 2 ಟೀಸ್ಪೂನ್
ಉಪ್ಪು – ರುಚಿಗೆ ತಕ್ಕಂತೆ
ಕರಿಮೆಣಸಿನ ಪುಡಿ – 1 ಟೀಸ್ಪೂನ್
ನೀರು – ಅಗತ್ಯಕ್ಕೆ ತಕ್ಕಂತೆ
ಎಣ್ಣೆ – ಡೀಪ್ ಫ್ರೈಗೆ ಬೇಕಾಗುವಷ್ಟು
ಚಾಟ್ ಮಸಾಲಾ – 1 ಟೀಸ್ಪೂನ್
ಮೇಯಾನೀಸ್ – ಅಗತ್ಯಕ್ಕೆ ತಕ್ಕಂತೆ ಇದನ್ನೂ ಓದಿ: ಚೈನೀಸ್ ಸ್ಟೈಲ್‌ನ ಯಮ್ಮೀ ಯಮ್ಮೀ ಆರೆಂಜ್ ಚಿಕನ್ ರೆಸಿಪಿ
ಮಾಡುವ ವಿಧಾನ:
* ಮೊದಲಿಗೆ ಆಲೂಗಡ್ಡೆ ತೆಗೆದುಕೊಂಡು, ಅದಕ್ಕೆ ಕಡ್ಡಿಯನ್ನು ಅಳವಡಿಸಿ. ಬಳಿಕ ಚಾಕುವನ್ನು ತೆಗೆದುಕೊಂಡು, ವೃತ್ತಾಕಾರದಲ್ಲಿ ತಿರುಗಿಸುತ್ತಾ ತೆಳ್ಳಗೆ ಸುರುಳಿಯಾಕಾರದಲ್ಲಿ ಆಲೂಗಡ್ಡೆಯನ್ನು ಕತ್ತರಿಸಿಕೊಳ್ಳಿ. ಎಲ್ಲಾ ಆಲೂಗಡ್ಡೆಗಳನ್ನೂ ಹೀಗೇ ಮಾಡಿ.
* ಒಂದು ಬೌಲ್ ತೆಗೆದುಕೊಂಡು, ಅದರಲ್ಲಿ ಮೈದಾ ಹಿಟ್ಟು, ಕಾರ್ನ್ ಫ್ಲೋರ್, ಉಪ್ಪು, ಕರಿಮೆಣಸಿನ ಪುಡಿ ಹಾಗೂ ಸ್ವಲ್ಪ ನೀರು ಸೇರಿಸಿ, ತೆಳ್ಳನೆಯ ಹಿಟ್ಟನ್ನು ತಯಾರಿಸಿ.
* ಆಲೂಗಡ್ಡೆಗಳನ್ನು ಬ್ಯಾಟರ್‌ನಲ್ಲಿ ಅದ್ದಿ, ಬಳಿಕ ಬಿಸಿ ಎಣ್ಣೆಯಲ್ಲಿ 10 ನಿಮಿಷಗಳ ಕಾಲ ಗೋಲ್ಡನ್ ಬ್ರೌನ್ ಬಣ್ಣ ಬರುವವರೆಗೆ ಡೀಪ್ ಫ್ರೈ ಮಾಡಿ.
* ಈಗ ಟ್ವಿಸ್ಟರ್‌ಗಳನ್ನು ಎಣ್ಣೆಯಿಂದ ತೆಗೆದು, ಅದಕ್ಕೆ ಚಾಟ್ ಮಸಾಲಾವನ್ನು ಚಿಮುಕಿಸಿ.
* ಕೊನೆಯಲ್ಲಿ ಮೇಯಾನೀಸ್‌ನೊಂದಿಗೆ ಆಲೂಗಡ್ಡೆ ಟ್ವಿಸ್ಟರ್ ಅನ್ನು ಸವಿಯಿರಿ. ಇದನ್ನೂ ಓದಿ: ಬಾಯಲ್ಲಿ ನೀರೂರಿಸೋ ಚಿಕನ್ ಚೌ ಮಿನ್ ರೆಸಿಪಿ
ಬೆಂಗಳೂರು: ಸಿಲಿಕಾನ್ ಸಿಟಿ ಮಂದಿಯದು ಯಾವಾಗಲೂ ಬ್ಯುಸಿ ಶೆಡ್ಯೂಲ್. ಹೀಗಾಗಿ ಸ್ಟ್ರೀಟ್ ಫುಡ್‍ಗಳ ಮೊರೆ ಹೋಗುತ್ತಿದ್ದಾರೆ. ಅದರಲ್ಲೂ ಮಧ್ಯಮ ವರ್ಗದವರ ಹಾರ್ಟ್ ಫೇವರೆಟ್ ಈ ಸ್ಟ್ರೀಟ್ ಫುಡ್‍ಗಳ ಆರ್ಭಟ ನಗರದ ಗಲ್ಲಿಗಲ್ಲಿಯಲ್ಲೂ ಜೋರಾಗಿದೆ. ಅಗ್ಗದ ದರ, ಟೇಸ್ಟಿ ಸ್ಟ್ರೀಟ್ ಫುಡ್‍ಗಳು ಇದೀಗ ಕಿಲ್ಲರ್ ಫುಡ್ ಆಗಿ ಕೆಲವೆಡೆ ಬದಲಾಗುತ್ತಿದೆ. ಪಬ್ಲಿಕ್ ಟಿವಿ ರಹಸ್ಯ ಕಾರ್ಯಾಚರಣೆ ಮಾಡಿ ಈ ಡರ್ಟಿ ಸ್ಟ್ರೀಟ್ ಫುಡ್ ಸೀಕ್ರೆಟ್ ಬಟಾಬಯಲು ಮಾಡಿದೆ.
ಸಂಜೆ ಹೊತ್ತಲ್ಲಿ ಸ್ಟ್ರೀಟ್‍ನಲ್ಲಿ ನಿಂತ್ಕೊಂಡು ಗೋಬಿ ಮಂಚೂರಿನೋ, ಸ್ಪೈಸಿ ತಿಂಡಿ ಮೆಲ್ಲೋಣ ಎಂದು ಹೋಗುವವರು ಹೆಚ್ಚು. ಇತ್ತ ಗರಿ ಗರಿ ದೋಸೆ, ಇಡ್ಲಿ, ಬೊಂಡಾ ಇದಕ್ಕೆಲ್ಲಾ ಕಾಂಬಿನೇಷನ್ ಆಗಿ ಚಿಕನ್, ಮಟನ್ ಇದ್ದರೆ ಸಂಜೆ ಹೋದವರು ಅದನ್ನೆಲ್ಲಾ ತಿಂದು ಬರುವಷ್ಟರಲ್ಲಿ ಕತ್ತಲಾಗಿರುತ್ತೆ. ಆ ರೇಂಜ್‍ಗೆ ಸ್ಟ್ರೀಟ್ ಫುಡ್ ನಮ್ಮನ್ನು ಆಕರ್ಷಿಸುತ್ತೆ. ಈ ತಿಂಡಿಗಳು ಅಗ್ಗದ ದರದಲ್ಲೂ ಸಿಗುತ್ತೆ. ಜೊತೆಗೆ ಟೇಸ್ಟ್ ಕೂಡ ಸಖತ್ ಆಗಿರುತ್ತೆ ಎಂದು ಜನ ಸ್ಟ್ರೀಟ್ ಫುಡ್‍ಗಳ ಸೆಂಟರ್ ಮುಂದೆ ಕ್ಯೂ ನಿಲ್ತಾರೆ. ಆದರೆ ಈ ಸ್ಟ್ರೀಟ್‍ಫುಡ್ ಜನರ ಪಾಲಿಗೆ ಕಿಲ್ಲರ್ ಫುಡ್ ಆಗಿದೆ. ಇದೆಲ್ಲಾ ಪಬ್ಲಿಕ್ ಟಿವಿಯ ರಹಸ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ನಗರದ ಜೆಸಿ ರಸ್ತೆ, ಲಾಲ್‍ಬಾಗ್- ನ್ಯಾಷನಲ್ ಕಾಲೇಜು ಸಮೀಪದ ವಿವಿ ಪುರಂ ಫುಡ್ ಸ್ಟ್ರೀಟ್ ಇಡೀ ಬೆಂಗಳೂರಲ್ಲಿ ತುಂಬಾನೇ ಫೇಮಸ್. ಬೆಳಗ್ಗೆ, ಮಧ್ಯಾಹ್ನ ತಡರಾತ್ರಿಯಾದರೂ ಇಲ್ಲಿ ಫುಡ್ ಸಿಗುತ್ತೆ. ಸಂಜೆಯಂತೂ ಇಲ್ಲಿ ಕಾಲಿಡೋಕು ಜಾಗ ಇರಲ್ಲ. ಆದರೆ ಈ ಏರಿಯಾದಲ್ಲಿ ಸಿಗುವ ಕೆಲ ಹೋಟೆಲ್‍ನ ಡರ್ಟಿ ಸೀನ್ ನೋಡಿದರೆ ವಾಕರಿಕೆ ಬರತ್ತೆ.
ದೋಸೆ ಹೊಯ್ಯುವ ಹೆಂಚು ತೊಳೆದು ಎಷ್ಟು ಕಾಲವಾಗಿದ್ಯೋ ಏನೋ? ಇಡ್ಲಿ ಬೇಯಿಸುವ ಪಾತ್ರೆ ನೋಡಿದರೆ ಜನ್ಮದಲ್ಲಿ ಇಡ್ಲಿ ತಿನ್ನೋದೆ ಬೇಡ ಅನಿಸಿಬಿಡುತ್ತೆ. ಇಡ್ಲಿಗೆ ನೊಣ ಫ್ರೀ ಎನ್ನುವಂತೆ ಬೇಯಿಸಿಟ್ಟ ಇಡ್ಲಿ ಪಕ್ಕ ಕಸದ ಬುಟ್ಟಿಯ ಮುಂದೆ ನೊಣಗಳು ಹಾರಾಡುತ್ತಿರುತ್ತೆ. ಇಲ್ಲಿ ಸ್ವಚ್ಛತೆಗೆ ಮೂರುಕಾಸಿನ ಬೆಲೆ ಇಲ್ಲ. ಅಲ್ಲದೆ ನೀವು ತಿಂದ ಪಾತ್ರೆಗಳನ್ನ ಅವರು ತೊಳೆಯೋದು ನೋಡಿದ್ರೆ ಸುಸ್ತಾಗಿ ಹೋಗ್ತಿರಾ. ನೆಟ್ಟಗೆ ಲೋಟ ತಟ್ಟೆಯನ್ನು ತೊಳೆಯದೇ ಹಾಗೆಯೇ ತಿಂಡಿಗಳನ್ನು ಬಡಿಸಿ ಕೊಡ್ತಾರೆ.
ಇತ್ತ ಮೆಜೆಸ್ಟಿಕ್ ಬಸ್ ಹಾಗೂ ರೈಲು ನಿಲ್ದಾಣದ ಫುಡ್ ಸ್ಟಾಲ್ ಕಥೆಯಂತೂ ಕೇಳೋದೇ ಬೇಡ. ರೋಡ್‍ನಲ್ಲೇ ಕಿಚನ್, ಡರ್ಟಿ ಫುಡ್‍ನ ದುನಿಯಾ ಇದು. ರಸ್ತೆಯಲ್ಲೆ ತಿಂಡಿ ಲಟ್ಟಿಸುತ್ತಾರೆ, ಬಾಣಲೆ ಇಟ್ಟು ಬೇಯಿಸ್ತಾರೆ. ಕಡೆಗೆ ಧೂಳು ಮುತ್ತಿದ್ದ ಮೇಲೆ ತಿಂಡಿಗಳನ್ನು ಮಾರುತ್ತಾರೆ. ತಿಂಡಿ ಮೇಲೆ ನೋಣವೆಲ್ಲ ಕೂರುತ್ತಿದೆ ಎಂದು ಪ್ರಶ್ನಿಸಿದರೆ ವ್ಯಾಪಾರಿಗಳು ಮಾತ್ರ ಏನೂ ಪ್ರತಿಕ್ರಿಯೆ ಕೊಡದೆ ಬಾಯಿ ಮುಚ್ಚಿ ಇರುತ್ತಾರೆ.
ಹಾಗೆಯೇ ವಿಜಯನಗರ ಸ್ಟ್ರೀಟ್ ಫುಡ್ ಬಳಿ ಸಣ್ಣ ಚರಂಡಿ ಇದೆ. ಅಲ್ಲೇ ಇಡ್ಲಿ ಇಟ್ಟು, ಇಡ್ಲಿ ತೆಗೆಯುವುದಕ್ಕೆ ಬಳಸೋ ನೀರು ನೋಡಿದರೆ ಅಸಹ್ಯ ಎನಿಸುತ್ತೆ. ಕುಡಿಯುವ ನೀರಿನ ಜಾಗ ಹಾಗೂ ಕೈತೊಳೆಯೊ ಜಾಗಕ್ಕೆ ಏನೂ ವ್ಯತ್ಯಾಸವಿಲ್ಲ. ಹೀಗಿರುವ ಸ್ಥಳದಲ್ಲಿ ತಿಂಡಿ ತಿಂದರೆ ಕಾಯಿಲೆ ಗ್ಯಾರೆಂಟಿ.
ನಾನ್‍ವೆಜ್ ತಿಂಡಿಗಳಿಗೆ ಫೇಮಸ್ ಆಗಿರುವ ಶಿವಾಜಿನಗರದಲ್ಲಿ ಸ್ವಚ್ಛತೆ ನೋಡಿದರೆ ದಂಗಾಗುತ್ತೀರ. ನೇತು ಹಾಕಿರೋ ಪ್ರಾಣಿಗಳ ದೇಹದಂತೆ ಇಲ್ಲಿ ಊಟದ ಸ್ವಚ್ಛತೆಯೂ ಜೋತು ಬಿದ್ದಿದೆ.
ಈ ಸ್ಟ್ರೀಟ್ ಫುಡ್ ತಯಾರಕರು ಕಡ್ಡಾಯವಾಗಿ ಹ್ಯಾಂಡ್ ಗ್ಲೌಸ್ ಹಾಕಿಕೊಳ್ಳಬೇಕು. ಇಲ್ಲವಾದರೆ ಉಗುರಿನಲ್ಲಿರೋ ಫಂಗಸ್ ದೇಹ ಸೇರಿ ಕರುಳುಬೇನೆ ಶುರುವಾಗುತ್ತದೆ. ಜೊತೆಗೆ ಪದೇ ಪದೇ ಕಾಯಿಲೆಗಳು ಕಾಣಿಸಿಕೊಳ್ಳುತ್ತಲೇ ಇರುತ್ತವೆ. ಸ್ವಚ್ಛತೆಯ ಸಮಸ್ಯೆಯಿಂದ ಆರೋಗ್ಯ ಸಮಸ್ಯೆ ಉಲ್ಬಣವಾಗುತ್ತೆ. ಹೀಗಾಗಿ ಕಡಿಮೆ ಬೆಲೆಗೆ, ಬಿಸಿ ಬಿಸಿ ಸಿಗುತ್ತೆ ಎಂದು ಸ್ಟ್ರೀಟ್ ಫುಡ್ ಮೊರೆ ಹೋಗೋ ಮುನ್ನ ಎಚ್ಚರದಿಂದಿರಿ. ಸ್ವಚ್ಛತೆ ಇಲ್ಲದ ಕಡೆ ಆಹಾರ ತಿಂದು ಆರೋಗ್ಯ ಕೆಡಿಸಿಕೊಳ್ಳಬೇಡಿ.