Tag: Student Death

  • ನಾಪತ್ತೆಯಾಗಿದ್ದ ವಿದ್ಯಾರ್ಥಿ ಕಾವೇರಿ ನದಿಯಲ್ಲಿ ಶವವಾಗಿ ಸಿಕ್ಕ!

    ನಾಪತ್ತೆಯಾಗಿದ್ದ ವಿದ್ಯಾರ್ಥಿ ಕಾವೇರಿ ನದಿಯಲ್ಲಿ ಶವವಾಗಿ ಸಿಕ್ಕ!

    ಮಡಿಕೇರಿ: ನಾಪತ್ತೆಯಾಗಿದ್ದ ಪಾಲಿಟೆಕ್ನಿಕ್ ವಿದ್ಯಾರ್ಥಿಯೊಬ್ಬ ಶವವಾಗಿ ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಶಾಲನಗರ ಸಮೀಪದ ಕಾವೇರಿ ನದಿಯಲ್ಲಿ ನಡೆದಿದೆ.

    ಕುಶಾಲನಗರದ ಸರ್ಕಾರಿ ಪಾಲಿಟೆಕ್ನಿಕ್ ಪ್ರಥಮ ವರ್ಷದ ಆಟೋಮೊಬೈಲ್ ವಿಭಾಗದ ಕಾರ್ತಿಕ್ ಎಂ.ಪಿ. (19) ಮೃತ ವಿದ್ಯಾರ್ಥಿ. ಈತ ಕಾರ್ತಿಕ್ ಸಕಲೇಶಪುರ ತಾಲೂಕು ಹೆತ್ತೂರು ಹೋಬಳಿ ವಣಗೂರಿನ ಪ್ರವೀಣ್ ಕುಮಾರ್ ಎಂಬವರ ಪುತ್ರ.

    ಕಾರ್ತಿಕ್ ಹಾಸ್ಟೆಲ್‍ನಲ್ಲಿ ಉಳಿದುಕೊಂಡು ವ್ಯಾಸಂಗ ಮಾಡುತ್ತಿದ್ದನು. ಆದರೆ ಮಂಗಳವಾರ ಸಂಜೆಯಿಂದ ನಾಪತ್ತೆಯಾಗಿದ್ದು, ಬುಧವಾರ ಪಾಲಿಟೆಕ್ನಿಕ್ ಕಾಲೇಜು ಸಮೀಪ ಕಾವೇರಿ ನದಿಯಲ್ಲಿ ಶವ ಪತ್ತೆಯಾಗಿದ್ದಾನೆ.

    ಈಜಲು ತೆರಳಿದ್ದ ವೇಳೆ ಮುಳುಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv