Tag: Sub inspector

  • ಸಬ್ ಇನ್ಸ್‌ಪೆಕ್ಟರ್‌ನಿಂದ ಹೆಡ್ ಕಾನ್ಸ್‌ಟೇಬಲ್ ಮೇಲೆಯೇ ಹಲ್ಲೆ!

    ಸಬ್ ಇನ್ಸ್‌ಪೆಕ್ಟರ್‌ನಿಂದ ಹೆಡ್ ಕಾನ್ಸ್‌ಟೇಬಲ್ ಮೇಲೆಯೇ ಹಲ್ಲೆ!

    ದಾವಣಗೆರೆ: ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ ಅಧಿಕಾರಿಯೊಬ್ಬರು ಹೆಡ್ ಕಾನ್ಸ್‌ಟೇಬಲ್ ಮೇಲೆಯೇ ಹಲ್ಲೆ ನಡೆಸಿದ್ದಲ್ಲದೇ, ಗೂಂಡಾಗಳನ್ನು ಕರೆಸಿ ಹಲ್ಲೆ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ವಿದ್ಯಾನಗರ ಪೊಲೀಸ್ ಠಾಣೆಯ ಹನುಮಂತಪ್ಪ ಹಲ್ಲೆಗೊಳಗಾದ ಹೆಡ್‍ ಕಾನ್ಸ್‌ಟೇಬಲ್ ಆಗಿದ್ದಾರೆ. ಅದೇ ಠಾಣೆಯ ಸಬ್ ಇನ್ಸ್‌ಪೆಕ್ಟರ್‌ ಸಿದ್ದೇಶ್ ಹಲ್ಲೆಮಾಡಿದ್ದಾರೆ. ಕಳೆದ ಶುಕ್ರವಾರ ಠಾಣಾಧಿಕಾರಿ ನೇಮಕ ವಿಚಾರದಲ್ಲಿ ಪಿಎಸ್‍ಐ ಹಾಗೂ ಹೆಡ್ ಕಾನ್ಸಟೇಬಲ್ ನಡುವೆ ಮಾತಿನ ಚಕಮಕಿ ನಡೆದಿತ್ತು. ಇದರಿಂದ ಸಿಟ್ಟಿಗೆದ್ದ ಪಿಎಸ್‍ಐ ಕಾನ್ಸಟೇಬಲ್ ಹನುಮಂತಪ್ಪನವರನ್ನು ನಗರದ ಆಫೀಸರ್ಸ್ ಕ್ಲಬ್ ಬಳಿ ಬರಲು ತಿಳಿಸಿದ್ದಾರೆ.

    ಈ ವೇಳೆ ಸ್ಥಳಕ್ಕೆ ಆಗಮಿಸಿದ ಹನುಮಂತಪ್ಪನವರ ಮೇಲೆ ಪಿಎಸ್‍ಐ ನನ್ನ ವಿರುದ್ಧವೇ ಮಾತನಾಡುತ್ತೀಯ ಎಂದು ಏಕಾಏಕಿ ಹಲ್ಲೆ ಮಾಡಿದ್ದಾರೆ. ಅಲ್ಲದೇ ಹನುಮಂತಪ್ಪನವರ ಮುಖಕ್ಕೆ ಬೂಟುಗಾಲಿನಿಂದಲೂ ಹಲ್ಲೆ ನಡೆಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಪಿಎಸ್‍ಐ ಇಬ್ಬರು ಗೂಂಡಾಗಳನ್ನು ಕರೆಸಿ ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

    ಗಂಭೀರವಾಗಿ ಹಲ್ಲೆಗೊಳಗಾದ ಹನುಮಂತಪ್ಪನವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಪಿಎಸ್‍ಐ ಸಿದ್ದೇಶ್ ವಿರುದ್ಧ ಜಿಲ್ಲಾ ವರಿಷ್ಠಾಧಿಕಾರಿ ಹಾಗೂ ಐಜಿಯವರಿಗೆ ದೂರು ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬ್ಯಾಟರಾಯನಪುರ ಠಾಣೆಯ ಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು

    ಬ್ಯಾಟರಾಯನಪುರ ಠಾಣೆಯ ಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು

    ಬೆಂಗಳೂರು: ಕರ್ತವ್ಯಲೋಪ ಹಾಗೂ ಮೇಲಾಧಿಕಾರಿಗಳಿಗೆ ಮಾಹಿತಿ ನೀಡದ ಹಿನ್ನಲೆಯಲ್ಲಿ ಬ್ಯಾಟರಾಯನಪುರ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಸಬ್ ಇನ್ಸ್‌ಪೆಕ್ಟರ್ ಅವರನ್ನು ನಗರ ಪೊಲೀಸ್ ಆಯುಕ್ತ ಸುನಿಲ್ ಕುಮಾರ್ ಅಮಾನತುಗೊಳಿಸಿದ್ದಾರೆ.

    ಅಮಾನತು ಆಗಿರುವ ಬ್ಯಾಟರಾಯಣಪುರದ ಇನ್ಸ್‌ಪೆಕ್ಟರ್ ಶಿವಸ್ವಾಮಿ ಹಾಗೂ ಸಬ್ ಇನ್ಸ್‌ಪೆಕ್ಟರ್ ಠಾಣೆಯ ಪ್ರಮುಖ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿದ್ದರು.

    ಅಷ್ಟೇ ಅಲ್ಲದೇ ಮೂರು ದಿನಗಳ ಹಿಂದೆ ಠಾಣೆಯ ವ್ಯಾಪ್ತಿಯಲ್ಲಿ ದುಷ್ಕರ್ಮಿಗಳು ಕಾರುಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ವಿಷಯವನ್ನು ಮೇಲಾಧಿಕಾರಿಗಳ ಗಮನಕ್ಕೆ ತರದೇ ಬೇಜವಾಬ್ದಾರಿ ತೋರಿಸಿದ್ದಕ್ಕೆ ಅಮಾನತು ಮಾಡಲಾಗಿದೆ.

    ಉದ್ಯಮಿ ಬನ್ಸಾಲ್ ಅಪಹರಣ ಪ್ರಕರಣದ ಪ್ರಮುಖ ಆರೋಪಿ ವಿನೋದ್ ಬಂಧನವೂ ಆಗಿಲ್ಲ. ಕಲ್ಲು ತೂರಾಟ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದಂತೆ ಎಚ್ಚೆತ್ತುಕೊಂಡ ಪಶ್ಚಿಮ ವಲಯದ ಡಿಸಿಪಿ ರವಿ ಚೆನ್ನಣ್ಣವರ್ ಅವರು ಇನ್ಸ್‌ಪೆಕ್ಟರ್ ಶಿವಸ್ವಾಮಿ ಅವರಿಗೆ ಮೊಬೈಲ್ ಕರೆ ಮಾಡಿ ಕ್ಲಾಸ್ ತಗೆದುಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.

  • ಎಸ್‍ಐ ನಯಾಜ್ ಮೇಲೆ ಲಾಂಗು ಮಚ್ಚಿನಿಂದ ಹಲ್ಲೆ – ರೌಡಿ ನದೀಮ್ ಗ್ಯಾಂಗ್‍ನ ಕೃತ್ಯ ಸಿಸಿಟಿವಿಯಲ್ಲಿ ಸೆರೆ

    ಎಸ್‍ಐ ನಯಾಜ್ ಮೇಲೆ ಲಾಂಗು ಮಚ್ಚಿನಿಂದ ಹಲ್ಲೆ – ರೌಡಿ ನದೀಮ್ ಗ್ಯಾಂಗ್‍ನ ಕೃತ್ಯ ಸಿಸಿಟಿವಿಯಲ್ಲಿ ಸೆರೆ

    ಬೆಂಗಳೂರು: ನಗರದ ಡಿಜಿ ಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಮೇಲೆ ರೌಡಿಗಳು ಮಚ್ಚು ಬೀಸಿದ ಪ್ರಕರಣದ ಸಿಸಿಟಿವಿ ದೃಶ್ಯ ಜನರನ್ನ ಬೆಚ್ಚಿ ಬೀಳಿಸಿದೆ.

    ಏರಿಯಾದಲ್ಲಿ ರೌಡಿಗಳು ಮಚ್ಚು ಹಿಡಿದು ಓಡೋ ದೃಶ್ಯಗಳು ಜನರನ್ನ ಭಯಭೀತಗೊಳಿಸಿದೆ. ಕಳೆದ ಗುರವಾರ ಸಂಜೆ ಡಿಜಿ ಹಳ್ಳಿಯ ಶಾಂಪುರ ರಸ್ತೆಯಲ್ಲಿ ರೌಡಿ ಶೀಟರ್ ಉಮರ್‍ನನ್ನ ಕೊಲೆ ಮಾಡಲು ನದೀಮ್ ಗ್ಯಾಂಗ್ ಅಟ್ಟಿಸಿಕೊಂಡು ಹೋಗ್ತಿತ್ತು. ಇದನ್ನ ನೋಡಿದ ಡಿಜಿ ಹಳ್ಳಿಯ ಸಬ್ ಇನ್ಸ್ ಪೆಕ್ಟರ್ ನಯಾಜ್ ಆರೋಪಿಗಳನ್ನ ಹಿಡಿಯಲು, ಕೊಲೆ ಮಾಡೋದನ್ನ ತಡೆಯಲು ಗ್ಯಾಂಗ್‍ನ ಹಿಂದೆ ಓಡಿದ್ದಾರೆ. ಕೊನೆಗೆ ನದೀಮ್ ಗ್ಯಾಂಗ್ ಸಬ್ ಇನ್ಸ್ ಪೆಕ್ಟರ್ ನಯಾಜ್ ಮೇಲೆಯೇ ಮುಗಿಬಿದ್ದು, ಮಚ್ಚಿನಿಂದ ನಯಾಜ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

    ರೌಡಿಗಳು ಪೊಲೀಸ್ರ ಮೇಲೆಯೇ ಹೀಗೆ ಮಚ್ಚು ಬೀಸ್ತಾರೆ ಅಂದ್ರೆ ಸಾಮಾನ್ಯ ಜನರ ಗತಿ ಏನು ಅನ್ನೋ ಭಯದಲ್ಲಿ ಜನರು ಬದುಕ್ತಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ಎಸ್‍ಐ ಚೇತರಿಸಿಕೊಳ್ತಿದ್ದಾರೆ.

    ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯಿಸಿ, ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆಯುತ್ತಿತ್ತು. ಈ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿತ್ತು. ಸಬ್ ಇನ್ಸ್ ಪೆಕ್ಟರ್ ನಯಾಜ್ ಹಾಗು ಪೇದೆಗಳು ಸ್ಥಳಕ್ಕೆ ಹೋಗಿದ್ರು. ನಯಾಜ್ ಮಫ್ತಿಯಲ್ಲಿದ್ರು. ಆರೋಪಿಗಳಿಗೆ ಪೊಲೀಸರು ಅಂತಾ ಗೊತ್ತಾಗಿಲ್ಲ. ಗಂಭೀರವಾಗಿ ಪ್ರಕರಣದ ತನಿಖೆ ನಡೆಸುತ್ತಿದ್ದೇವೆ. ಘಟನೆಯ ಸಂದರ್ಭದಲ್ಲಿ ಸಬ್ ಇನ್ಸ್ ಪೆಕ್ಟರ್ ರಿವಾಲ್ವಾರ್ ಇಟ್ಟುಕೊಂಡಿರಲಿಲ್ಲ. ಈ ಬಗ್ಗೆಯೂ ಸಹ ಆಡಳಿತಾತ್ಮಕವಾಗಿ ತನಿಖೆ ನಡೆಸ್ತಿದ್ದೇವೆ ಅಂತ ತಿಳಿಸಿದ್ರು.

    ಸಾರ್ವಜನಿಕ ಸ್ಥಳದಲ್ಲಿ ಲಾಂಗು ಮಚ್ಚು ಹಿಡಿದು ಓಡಾಡುವರ ವಿರುದ್ಧ ಕ್ರಮಕೈಗೊಳ್ಳುತ್ತೇವೆ. ಈ ಬಗ್ಗೆ ಜನರು ಭಯ ಪಡುವ ಅವಶ್ಯಕತೆಯಿಲ್ಲ. ಪ್ರಕರಣದ ಆರೋಪಿಗಳನ್ನ ಬಂಧಿಸಲು ಈಗಾಗಲೇ ಬಾಣಸವಾಡಿ ಎಸಿಪಿ ಯವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಈಗಿನ ಘಟನೆ ಬಗ್ಗೆ ಯಾರೂ ಭಯ ಬೀಳೋದು ಬೇಡ. ನಾವು ಈಗಾಗಲೇ ಈ ಪ್ರಕರಣವನ್ನ ಗಂಭೀರವಾಗಿ ತಗೆದುಕೊಂಡಿದ್ದೇವೆ ಅಂತ ಹೇಳಿದ್ರು.

    https://www.youtube.com/watch?v=JaZLrxeCuHw&feature=youtu.be