Tag: Subrahmanya

  • ಕಿಕ್ ಕೊಟ್ಟ ‘ಸುಬ್ರಹ್ಮಣ್ಯ’ ಫಸ್ಟ್ ಗ್ಲಿಂಪ್ಸ್: ಆರ್ಮುಗ ರವಿಶಂಕರ್ ಮಗನ ಆರ್ಭಟ

    ಕಿಕ್ ಕೊಟ್ಟ ‘ಸುಬ್ರಹ್ಮಣ್ಯ’ ಫಸ್ಟ್ ಗ್ಲಿಂಪ್ಸ್: ಆರ್ಮುಗ ರವಿಶಂಕರ್ ಮಗನ ಆರ್ಭಟ

    ರ್ಮುಗ ರವಿಶಂಕರ್ ‘(Ravishankar) ಸುಬ್ರಹ್ಮಣ್ಯ’ (Subrahmanya) ಸಿನಿಮಾ ಮೂಲಕ ಮಗ ಅದ್ವೈ ಅವರನ್ನು ಸಿನಿಮಾಪ್ರೇಮಿಗಳಿಗೆ ಪರಿಚಯಿಸುತ್ತಿದ್ದಾರೆ. ಈ ಚಿತ್ರದ ಪ್ರೀ-ಲುಕ್ ಈಗಾಗಲೇ ಗಮನ ಸೆಳೆದಿದ್ದು, ಇದೀಗ ಚಿತ್ರತಂಡ ‘ಸುಬ್ರಹ್ಮಣ್ಯ’ನ ಫಸ್ಟ್ ಗ್ಲಿಂಪ್ಸ್ ನ್ನು ಅನಾವರಣ ಮಾಡಿದೆ. ಯೂಟ್ಯೂಬ್ ನಲ್ಲಿ ಬಿಡುಗಡೆಗೂ ಮೊದಲೇ ದುಬೈನಲ್ಲಿ ನಡೆದ ಸೈಮಾದಲ್ಲಿ ‘ಸುಬ್ರಹ್ಮಣ್ಯ’ನ ಮೊದಲ ತುಣುಕನ್ನು ರಿಲೀಸ್ ಮಾಡಲಾಯಿತು.

    ಇಂದು ಎಸ್ ಜಿ ಮೂವೀಸ್ ಯೂಟ್ಯೂಬ್ ನಲ್ಲಿ ಸುಬ್ರಹ್ಮಣ ಗ್ಲಿಂಪ್ಸ್ ಬಿಡುಗಡೆಯಾಗಿದೆ. 3 ನಿಮಿಷ 14 ಸೆಕೆಂಡ್ ಇರುವ ಝಲಕ್ ಮೈನವಿರೇಳಿಸುವಂತಿದೆ. ವಿಷಪೂರಿತ ಹಾವುಗಳಿಂದ ತುಂಬಿದ ಬಾವಿಗೆ ಅದ್ವೈ ಹಗ್ಗದ ಮೂಲಕ ಎಂಟ್ರಿ ಕೊಡುತ್ತಾರೆ. ಆ ಬಾವಿಯಲ್ಲಿರುವ ಪುರಾತನ ಪುಸ್ತಕವನ್ನು ಎತ್ತಿಕೊಂಡು ಹೊರ ಬರ್ತಾರೆ. ಎಲ್ಲಾ ಹಾವುಗಳು ಅವನನ್ನು ಬೆನ್ನಟ್ಟುವುದರೊಂದಿಗೆ ಓಡಲು ಪ್ರಾರಂಭಿಸುತ್ತಾರೆ. ಅದ್ವೈ ಸ್ಟೈಲೀಶ್ ಲುಕ್ ನಲ್ಲಿ ನೋಡುಗರಿಗೆ ಇಷ್ಟವಾಗ್ತಾರೆ. ಕೊನೆಯ ಕೆಲ ಸೆಕೆಂಡ್ ಗಳು ಅದ್ಭುತವಾಗಿ ಕಟ್ಟಿಕೊಡಲಾಗಿದೆ. ವಿಷ್ಯುವಲ್ಸ್ ಟ್ರೀಟ್ ಹಾಗೂ ಗ್ರಾಫಿಕ್ಸ್ ವರ್ಕ್ ಕೆಲಸಗಳನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ.

    ಸುಬ್ರಹ್ಮಣ ಗ್ಲಿಂಪ್ಸ್ ಅರವತ್ತಕ್ಕೂ ಹೆಚ್ಚು VFX ತಂತ್ರಜ್ಞನರು ಕಳೆದ ನಾಲ್ಕು ತಿಂಗಳಿನಿಂದ ದುಡಿದಿದ್ದಾರೆ.  ‘ಸುಬ್ರಹ್ಮಣ್ಯ’ದ ಕ್ರಿಯೇಟಿವ್ ನಿರ್ಮಾಪಕ ಮತ್ತು ವಿಎಫ್‌ಎಕ್ಸ್ ಮೇಲ್ವಿಚಾರಕ ನಿಖಿಲ್ ಕೋಡೂರು ನೇತೃತ್ವದಲ್ಲಿ, ಮುಂಬೈ, ಹೈದರಾಬಾದ್, ಬೆಂಗಳೂರು ಮತ್ತು ಚೆನ್ನೈನ ಪ್ರಸಿದ್ಧ ಸ್ಟುಡಿಯೋಗಳಲ್ಲಿ VFX ಕೆಲಸ ನಡೆದಿದೆ. ‘ಸುಬ್ರಹ್ಮಣ್ಯ’ ಸಿನಿಮಾ ಸೋಶಿಯೋ-ಫ್ಯಾಂಟಸಿ ಶೈಲಿಯ ಸಿನಿಮಾ. ಜೊತೆ ಅಡ್ವೆಂಚರ್ ಎಲಿಮೆಂಟ್ಸ್‌ ಕೂಡ ಈ ಸಿನಿಮಾದಲ್ಲಿದೆ.

    ‘ಎಸ್.ಜಿ ಮೂವೀ ಮೇಕರ್ಸ್’ ಸಂಸ್ಥೆಯ ಮೂಲಕ ತಿರುಮಲ ರೆಡ್ಡಿ ಹಾಗೂ ಅನಿಲ್ ಕಡಿಯಾಲ ಅವರು ನಿರ್ಮಾಣ ಮಾಡುತ್ತಿದ್ದಾರೆ. ಪ್ರವೀಣಾ ಕಡಿಯಾಲ ಮತ್ತು ರಮಾ ಲಕ್ಷ್ಮೀ ಪ್ರಸ್ತುತಪಡಿಸುತ್ತಿದ್ದಾರೆ. ‘ಕೆಜಿಎಫ್’ ಹಾಗೂ ‘ಸಲಾರ್’ ಸಿನಿಮಾಗೆ ಸಂಗೀತ ನೀಡಿರುವ ರವಿ ಬಸ್ರೂರು ಈ ಸಿನಿಮಾಗೆ ಟ್ಯೂನ್ ಹಾಕುತ್ತಿದ್ದಾರೆ. ವಿಘ್ನೇಶ್ ರಾಜ್ ಕ್ಯಾಮರಾ ವರ್ಕ್ ಇದ್ದರೆ, ವಿಜಯ್ ಎಂ. ಕುಮಾರ್ ಎಡಿಟಿಂಗ್ ಮಾಡುತ್ತಿದ್ದಾರೆ. ಮಗನಿಗಾಗಿ ಎರಡು ದಶಕಗಳ ಬಳಿಕ ಡೈರೆಕ್ಟರ್ಕ್ಯಾಪ್ಧರಿಸಿರೋ ರವಿಶಂಕರ್ ಚಿತ್ರರಂಗಕ್ಕೆ ಹೀರೋ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಕೊಡುತ್ತಿದ್ದಾರೆ.

  • ರವಿಶಂಕರ್ ಮಗನ ಚಿತ್ರಕ್ಕೆ ಶಿವಣ್ಣ ಸಾಥ್: ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್

    ರವಿಶಂಕರ್ ಮಗನ ಚಿತ್ರಕ್ಕೆ ಶಿವಣ್ಣ ಸಾಥ್: ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್

    ಪ್ರೀ-ಲುಕ್ ಮೂಲಕ ಗಮನ ಸೆಳೆದಿದ್ದ ಖ್ಯಾತ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ (Subrahmanya) ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಫಸ್ಟ್ ಲುಕ್ ರಿವೀಲ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ. ಉದ್ದನೆಯ ಕೂದಲು ಬಿಟ್ಟು ವಿನ್ಯಾಸಗೊಳಿಸಲಾದ ಉಡುಪಿನಲ್ಲಿ ಸುಂದರವಾಗಿ ಹಾಗೂ ಸೊಗಸಾಗಿ ಅದ್ವೈ ಕಾಣಿಸಿಕೊಂಡಿದ್ದಾರೆ. ಕಾಡು, ನಿಗೂಢ ಪ್ರವೇಶ ದ್ವಾರ, ಅದ್ವೈನನ್ನು ಬೆನ್ನಟ್ಟಿರುವ ತಂಡ ಫಸ್ಟ್ ಲುಕ್ ಪೋಸ್ಟರ್ ನಲ್ಲಿ ಗಮನಸೆಳೆಯುತ್ತಿದೆ.

    ಸೋಶಿಯೋ-ಫ್ಯಾಂಟಸಿ ಅಡ್ವೆಂಚರ್ಸ್ ಶೈಲಿಯ ಸುಬ್ರಹ್ಮಣ್ಯ ಸಿನಿಮಾದ 60% ಕೆಲಸ ಪೂರ್ಣಗೊಂಡಿದ್ದು, ಮುಂಬೈನ ರೆಡ್ ಚಿಲ್ಲಸ್ ಸ್ಟುಡಿಯೋದಲ್ಲಿ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಬೆಂಗಳೂರು, ಮುಂಬೈ, ಹೈದರಾಬಾದ್ ಮತ್ತು ಚೆನ್ನೈನ ಹಲವಾರು ಪ್ರತಿಷ್ಠಿತ ಸ್ಟುಡಿಯೋಗಳಲ್ಲಿ ಗ್ರಾಫಿಕ್ಸ್​ ಕೆಲಸಗಳು ನಡೆಯುತ್ತಿವೆ.

    ‘ಎಸ್.ಜಿ ಮೂವೀ ಮೇಕರ್ಸ್’ ಸಂಸ್ಥೆಯ ಮೂಲಕ ತಿರುಮಲ ರೆಡ್ಡಿ ಹಾಗೂ ಅನಿಲ್ ಕಡಿಯಾಲ ಅವರು ನಿರ್ಮಾಣ ಮಾಡುತ್ತಿದ್ದಾರೆ. ಪ್ರವೀಣಾ ಕಡಿಯಾಲ ಮತ್ತು ರಮಾ ಲಕ್ಷ್ಮೀ ಪ್ರಸ್ತುತಪಡಿಸುತ್ತಿದ್ದಾರೆ. ರವಿ ಬಸ್ರೂರ್ ಅವರು ಈ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ. ಸುಬ್ರಹ್ಮಣ್ಯ’ ಸಿನಿಮಾಗೆ ವಿಘ್ನೇಶ್ ರಾಜ್ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ವಿಜಯ್ ಎಂ. ಕುಮಾರ್ ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ

    ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಮಾಲಾಶ್ರೀ ಅಭಿನಯದ ‘ದುರ್ಗಿ’ ಸಿನಿಮಾಗೆ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ ರವಿಶಂಕರ್​ ಅವರು ಈಗ ಮಗನ ಸಿನಿಮಾಗಾಗಿ ಮತ್ತೆ ನಿರ್ದೇಶನ ಮಾಡುತ್ತಿದ್ದಾರೆ. ಈ ಮೂಲಕ ಬರೋಬ್ಬರಿ 2 ದಶಕದ ಬಳಿಕ ಅವರು ಡೈರೆಕ್ಟರ್​ ಕ್ಯಾಪ್​ ಧರಿಸಿದ್ದಾರೆ.

  • ವಿಲನ್ ರವಿಶಂಕರ್ ಪುತ್ರನ ಚೊಚ್ಚಲ ಸಿನಿಮಾ: ಪ್ರೀ ಲುಕ್ ಅನಾವರಣ

    ವಿಲನ್ ರವಿಶಂಕರ್ ಪುತ್ರನ ಚೊಚ್ಚಲ ಸಿನಿಮಾ: ಪ್ರೀ ಲುಕ್ ಅನಾವರಣ

    ಕ್ಷಿಣ ಚಿತ್ರರಂಗದಲ್ಲಿ ಖ್ಯಾತಿ ಪಡೆದಿರುವ ಆರ್ಮುಗ ರವಿಶಂಕರ್ (Ravi Shankar) ಮತ್ತೆ ನಿರ್ದೇಶನಕ್ಕೆ ಮರಳಿರುವುದು ಗೊತ್ತೇ ಇದೆ. ಮತ್ತೊಮ್ಮೆ ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ಅವರು ಸುಬ್ರಹ್ಮಣ್ಯ ಸಿನಿಮಾ ಮೂಲಕ ಮಗ ಅದ್ವೆಯನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ. ಕಳೆದ ಆಯುಧ ಪೂಜೆಗೆ ಟೈಟಲ್ ಪೋಸ್ಟರ್ ಬಿಡುಗಡೆ ಮಾಡಲಾಗಿತ್ತು. ಅಲ್ಲಿಂದ ಇಲ್ಲಿವರೆಗೂ ಸುಬ್ರಹ್ಮಣ್ಯ ಸಿನಿಮಾದ ಬಗ್ಗೆ ಸಣ್ಣ ಅಪ್ ಡೇಟ್ ಕೂಡ ಸಿಕ್ಕಿರಲಿಲ್ಲ. ಈಗ ಚಿತ್ರತಂಡದ ಹೊಸ ಸಮಾಚಾರ ರಿವೀಲ್ ಮಾಡಿದೆ.

    ಸುಬ್ರಹ್ಮಣ್ಯ ಸಿನಿಮಾದ 60% ಭಾಗದ ಶೂಟಿಂಗ್ ಮುಕ್ತಾಯಗೊಂಡಿದ್ದು, ಸದ್ಯ ಪೋಸ್ಟ್-ಪ್ರೊಡಕ್ಷನ್ ಕೆಲಸ ಮುಂಬೈನ ಶಾರುಖ್ ಒಡೆತನದ ರೆಡ್ ಚಿಲ್ಲೀಸ್ ಸ್ಟುಡಿಯೋದಲ್ಲಿ ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿದೆ. ಮುಂಬೈ, ಹೈದರಾಬಾದ್, ಬೆಂಗಳೂರು ಮತ್ತು ಚೆನ್ನೈನ ಹಲವಾರು ಪ್ರತಿಷ್ಠಿತ ಸ್ಟುಡಿಯೋಗಳಲ್ಲಿ VFX ಮತ್ತು CGI ಕೆಲಸಗಳು ನಡೆಯುತ್ತಿವೆ. ಪ್ರೀಮಿಯಂ ಲಾರ್ಜ್ ಫಾರ್ಮ್ಯಾಟ್ ಮತ್ತು ಐಮ್ಯಾಕ್ಸ್ ಥಿಯೇಟರ್‌ಗಳಲ್ಲಿ ಅದ್ಭುತ ಫೀಲ್ ಕೊಡುವ ರೀತಿಯಲ್ಲಿ ಸುಬ್ರಹ್ಮಣ್ಯ ಸಿನಿಮಾವನ್ನು ಕಟ್ಟಿಕೊಡಲಾಗುತ್ತಿದೆ.

    ಸುಬ್ರಹ್ಮಣ್ಯ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಚಿತ್ರತಂಡ ಶೀಘ್ರದಲ್ಲೇ ಅನಾವರಣಗೊಳಿಸಲು ಮುಂದಾಗಿದೆ. ಈ ಪೋಸ್ಟರ್ ಮೂಲಕ ಸುಬ್ರಹ್ಮಣ್ಯ ಪ್ರಪಂಚವನ್ನು ಚಿತ್ರತಂಡ ಪರಿಚಯಸಲು ಹೊರಟಿದೆ. ಸೋಷಿಯೋ ಫ್ಯಾಂಟಸಿ ಅಡ್ವೆಂಚರ್ಸ್ ಸಿನಿಮಾವನ್ನು ಎಸ್ ಜಿ ಮೂವೀ ಮೇಕರ್ಸ್ ಬ್ಯಾನರ್ ನಡಿ ತಿರುಮಲ ರೆಡ್ಡಿ ಮತ್ತು ಅನಿಲ್ ಕಡಿಯಾಲ ಬಂಡವಾಳ ಹಾಕಿದ್ದು, ಪ್ರವೀಣಾ ಕಡಿಯಾಲ ಹಾಗೂ ರಮಾ ಲಕ್ಷ್ಮೀ ಪ್ರಸ್ತುತಪಡಿಸುತ್ತಿದ್ದಾರೆ. ಸಲಾರ್ ಮತ್ತು ಕೆಜಿಎಫ್ ಸರಣಿ ಸಿನಿಮಾಗಳ ಸಂಗೀತ ನೀಡಿರುವ ರವಿ ಬಸ್ರೂರ್ ಈ ಚಿತ್ರಕ್ಕೂ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

    ಸುಬ್ರಹ್ಮಣ್ಯ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಗೂ ಮುನ್ನ ಚಿತ್ರತಂಡ ಪ್ರೀ ಲುಕ್ ಅನಾವರಣ ಮಾಡಲಾಗಿದೆ. ಪಾಳು ಬಿದ್ದಿರುವ ದೇಗುಲದ ಮುಂದೆ ನಾಯಕ ಅದ್ವೆ ಕೈಯಲ್ಲಿ ಪಂಜು ಹಿಡಿದು ಬ್ಯಾಕ್ ಪೋಸ್ ಕೊಟ್ಟಿರುವ ಪ್ರೀ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಬಹಳ ಕುತೂಹಲ ಹೆಚ್ಚಿಸುವ ಪ್ರೀ ಲುಕ್ ಫಸ್ಟ್ ಲುಕ್ ಮೇಲೆ ನಿರೀಕ್ಷೆ ಹೆಚ್ಚಿಸಿದೆ. ವಿಘ್ನೇಶ್ ರಾಜ್ ಕ್ಯಾಮೆರಾ ಹಿಡಿದಿದ್ದು, ವಿಜಯ್ ಎಂ ಕುಮಾರ್ ಸಂಕಲನ ಸುಬ್ರಹ್ಮಣ್ಯ ಸಿನಿಮಾಕ್ಕಿದೆ.. ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಸುಬ್ರಹ್ಮಣ್ಯ ಸಿನಿಮಾ ತಯಾರಾಗುತ್ತಿದೆ. ಕಳೆದ 20 ವರ್ಷಗಳ ಹಿಂದೆ ಆ್ಯಕ್ಷನ್ ಕ್ವೀನ್ ಮಾಲಾಶ್ರೀಗೆ ಮೊದಲ ಬಾರಿಗೆ ಪಿ.ರವಿಶಂಕರ್ ಆ್ಯಕ್ಷನ್ ಕಟ್ ಹೇಳಿದ್ದರು. ದುರ್ಗಿ ಸಿನಿಮಾ ಡೈರೆಕ್ಷನ್ ಮಾಡುವ ಮೂಲಕ ನಿರ್ದೇಶಕನಾಗಿ ಬಡ್ತಿ ಪಡೆದಿದ್ದರು. ಅವತ್ತಿಗೆ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿ ತೆಲುಗಿಗೆ ರಿಮೇಕ್ ಕೂಡ ಆಗಿತ್ತು. ಈಗ 20 ವರ್ಷದ ಬಳಿಕ ಮಗ ಅದ್ವೆಗಾಗಿ ಅವರು ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ.

  • ಪುತ್ತೂರಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್‍ಗೆ ದಂತದಿಂದ ತಿವಿದ ಕಾಡಾನೆ!

    ಪುತ್ತೂರಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್‍ಗೆ ದಂತದಿಂದ ತಿವಿದ ಕಾಡಾನೆ!

    ಮಂಗಳೂರು: ಪುತ್ತೂರಿಂದ ಬೆಂಗಳೂರಿಗೆ (Puttur- Bengaluru) ತೆರಳುತ್ತಿದ್ದ ಕೆಎಸ್‍ಆರ್‌ಟಿ ಸಿ ಸ್ಲೀಪರ್ ಕೋಚ್ ಬಸ್‍ (KSRTC Sleeper Coach Bus) ಗೆ ಕಾಡಾನೆಯೊಂದು ದಂತದಿಂದ ತಿವಿದ ಘಟನೆ ನಡೆದಿದೆ.

    ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪ ತಡರಾತ್ರಿ ಘಟನೆ ನಡೆದಿದೆ. ಕಾಡಾನೆ (Wild Elephant) ದಾಳಿಯಿಂದ ಬಸ್‍ಗೆ ಹಾನಿಯಾಗಿದ್ದು, ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಇದನ್ನೂ ಓದಿ: ಆಡಳಿತ ಮಂಡಳಿಯವರು ಮಾಡಿದ ಸಾಲಕ್ಕೆ ಶಾಲೆಯನ್ನೇ ಸೀಜ್ ಮಾಡಿದ ಬ್ಯಾಂಕ್ ಸಿಬ್ಬಂದಿ!

    ಬಸ್ ಪುತ್ತೂರಿನಿಂದ ಕಾಣಿಯೂರು (Kaniyoor) ಮಾರ್ಗವಾಗಿ ಸುಬ್ರಹ್ಮಣ್ಯ (Subrahmanya) ಮೂಲಕ ಬೆಂಗಳೂರಿಗೆ ತೆರಳುತ್ತಿತ್ತು. ಬಸ್ ಚಾಲಕ ರಸ್ತೆ ಬದಿ ನಿಂತಿದ್ದ ಕಾಡಾನೆಯನ್ನು ಕಂಡು ತಪ್ಪಿಸಲು ಯತ್ನಿಸಿದ್ದಾರೆ. ಆದರೂ ಬಸ್ಸಿನ ಎಡಭಾಗಕ್ಕೆ ಆನೆ ತನ್ನ ದಂತದಿಂದ ತಿವಿದಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ದುರಂತವೊಂದು ತಪ್ಪಿದಂತಾಗಿದೆ.

    ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಭೇಟಿ, ಪರಿಶೀಲನೆ ನೀಡಿಸಿದ್ದಾರೆ. ಪರಿಶೀಲನೆ ಬಳಿಕ ಬಸ್ ಬೆಂಗಳೂರಿನತ್ತ ತೆರಳಿದೆ.

  • ನೇತ್ರಾವತಿ ಸ್ನಾನಘಟ್ಟದಲ್ಲೇ ಮರಳು ದಂಧೆ- ಕಣ್ಮುಚ್ಚಿ ಕುಳಿತ ಜಿಲ್ಲಾಡಳಿತ

    ನೇತ್ರಾವತಿ ಸ್ನಾನಘಟ್ಟದಲ್ಲೇ ಮರಳು ದಂಧೆ- ಕಣ್ಮುಚ್ಚಿ ಕುಳಿತ ಜಿಲ್ಲಾಡಳಿತ

    -ಅಧಿಕಾರಿಗಳಿಗೆ ಕಣ್ಣಿದ್ದೂ ಕುರುಡು

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ನಿಲ್ಲುವ ಯಾವ ಲಕ್ಷಣಗಳೂ ಕಾಣಿಸುತ್ತಿಲ್ಲ. ಜಿಲ್ಲಾಡಳಿತ ಜನಸಾಮಾನ್ಯರಿಗೆ ನಿಗದಿತ ಬೆಲೆಯಲ್ಲಿ ಮರಳು ನೀಡಲು ಅದೆಷ್ಟೋ ವ್ಯವಸ್ಥೆ ಕಲ್ಪಿಸಿದರೂ ಕೂಡಾ ಅಕ್ರಮ ದಂಧೆಕೋರರು ಅವೆಲ್ಲದಕ್ಕೂ ಡೋಂಟ್ ಕೇರ್ ಎಂದು ಬಿಂದಾಸ್ ಆಗಿ ದಂಧೆ ನಡೆಸುತ್ತಿದ್ದಾರೆ.

    ಜಿಲ್ಲೆಯ ಪ್ರಸಿದ್ಧ ತೀರ್ಥ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟಕ್ಕೆ ಕೂಗಳತೆ ದೂರದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಡ್ರೆಜಿಂಗ್ ಮೆಷಿನ್, ಜೇಸಿಬಿ ಬಳಸಿ ನದಿಯ ಒಡಲು ಬರಿದು ಮಾಡುತ್ತಿದ್ದರೆ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜಾಣಕುರುಡು ಪ್ರದರ್ಶಿಸುತ್ತಿದ್ದು, ಸುಮ್ನೆ ನಮಗೆ ಅದೆಲ್ಲ ಯಾಕೆ ಸಾರ್, ದಾಳಿ ನಡೆಸಲು ಮುಂದಾದರೆ ಮೇಲಿಂದ ಫೋನ್ ಬರುತ್ತೆ. ವಿಧಾನಸೌಧ ತನಕ ಅವರ ಕೈ ಇದೆ. ಏನು ಮಾಡಿದ್ರೂ ವೇಸ್ಟ್ ಅಂತಾರೆ ಪೊಲೀಸ್ ಸಿಬ್ಬಂದಿ. ಹೀಗೆ ಕೆಳಗಿಂದ ಮೇಲಿನವರೆಗೆ ಮಾಮೂಲಿ ಯಾಗೇ ನಡೀತಿರೋ ದಂಧೆಯನ್ನು ಮಟ್ಟ ಹಾಕಿ ನದಿಯನ್ನು ಉಳಿಸೋದ್ಯಾರು ಅನ್ನೋದು ಧರ್ಮಸ್ಥಳ ಜನರ ಪ್ರಶ್ನೆಯಾಗಿದೆ. ಇದನ್ನೂ ಓದಿ: ಅಪ್ರಾಪ್ತೆಯ ಮೇಲೆ ರೇಪ್ – ಬೆಳ್ತಂಗಡಿ ಪೊಲೀಸರಿಂದ ಇಬ್ಬರು ಅರೆಸ್ಟ್

    ಧರ್ಮಸ್ಥಳದ ಸ್ನಾನಘಟ್ಟದಿಂದ ಎಡಭಾಗಕ್ಕೆ ಮುಂಡಾಜೆ-ಚಾರ್ಮಾಡಿ ಸಂಧಿಸುವ ರಸ್ತೆ ಹೋಗುತ್ತದೆ. ಇಲ್ಲಿ 100 ಮೀಟರ್ ಮುಂದಕ್ಕೆ ಹೋದರೆ ಸೂರ್ಯಕಮಲ್ ಲಾಡ್ಜ್ ಇದ್ದು ಇದರ ಅಂಗಳದಲ್ಲೇ ಅಕ್ರಮ ಮರಳುಗಾರಿಕೆ ವ್ಯವಸ್ಥಿತವಾಗಿ ನಡೆಯುತ್ತಿದೆ. ಲಾಡ್ಜ್ ಮುಂಭಾಗ, ಹಿಂಭಾಗ ಎಲ್ಲೆಂದರಲ್ಲಿ ಟಿಪ್ಪರ್, ಜೇಸಿಬಿ ಸಾಲುಗಟ್ಟಿ ನಿಲ್ಲುತ್ತಿದ್ದು ಇಲ್ಲೇ ನೇತ್ರಾವತಿ ನದಿಯಿಂದ ಡ್ರೆಜಿಂಗ್ ಮೆಷಿನ್ ಬಳಸಿ ಮರಳು ತೆಗೆಯಲಾಗುತ್ತಿದೆ. ಹಾಗೆ ತೆಗೆದ ಮರಳನ್ನು ಟಿಪ್ಪರ್ ಗಳಲ್ಲಿ ರಾಜಾರೋಷವಾಗಿ ಸಾಗಾಟ ಮಾಡಲಾಗುತ್ತಿದೆ. ಇಲ್ಲಿಂದ ಬೆಳ್ತಂಗಡಿ, ಮೂಡಬಿದ್ರೆ, ಚಾರ್ಮಾಡಿ ಮಾರ್ಗವಾಗಿ ಚಿಕ್ಕಮಗಳೂರು, ಕಡಬ, ಮಂಗಳೂರು ಕಡೆಗೆ ಮರಳು ಸಾಗಾಟ ಮಾಡಲಾಗುತ್ತದೆ. ಹೀಗೆ ದಿನವೊಂದಕ್ಕೆ ಸುಮಾರು 100-150 ಟಿಪ್ಪರ್ ಗಳಷ್ಟು ಮರಳನ್ನು ಅಕ್ರಮವಾಗಿ ಸಾಗಿಸುತ್ತಿದ್ದು ದಂಧೆಕೋರರು ಅಧಿಕಾರಿಗಳ ಕೃಪಾಕಟಾಕ್ಷದಿಂದ ದುಡ್ಡಿನ ಕಂತೆ ಎಣಿಸುತ್ತಿದ್ದಾರೆ. ಸ್ನಾನಘಟ್ಟದ ಬಳಿಯಲ್ಲಿ ರಸ್ತೆಯಲ್ಲಿ ಘನವಾಹನ ಪ್ರವೇಶ ನಿಷೇಧಸಲಾಗಿದೆ ಎಂಬ ಬೋರ್ಡ್ ಹಾಕಿದ್ದರೂ ಭಾರೀ ಗಾತ್ರದ ಟಿಪ್ಪರ್ ಗಳು ರಸ್ತೆಯನ್ನು ಹಾಳುಗೆಡವುತ್ತಿದ್ದು ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ.

    ಸುಬ್ರಮಣ್ಯ ಸ್ನಾನಘಟ್ಟದ ಬಳಿಕ ನೇತ್ರಾವತಿಗೆ ಕಂಟಕ:
    ಕೆಲವು ತಿಂಗಳ ಹಿಂದೆ ಕೊರೊನಾ ಲಾಕ್‍ಡೌನ್ ಅವಧಿಯಲ್ಲಿ ಸುಬ್ರಮಣ್ಯದ ಕುಮಾರಧಾರ ಸ್ನಾನಘಟ್ಟದಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದ್ದುದು ಬೆಳಕಿಗೆ ಬಂದಿತ್ತು. ಪೊಲೀಸ್ ಇಲಾಖೆಯಿಂದ ಹಿಡಿದು ವಿವಿಧ ಇಲಾಖೆಗಳ ಅಧಿಕಾರಿಗಳು ದಂಧೆಯಲ್ಲಿ ಶಾಮೀಲಾಗಿದ್ದ ಆರೋಪ ಕೇಳಿಬಂದಿತ್ತು. ಸಾರ್ವಜನಿಕರ ಆಕ್ರೋಶದ ಬಳಿಕ ದಂಧೆಯನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಬಂದ್ ಮಾಡಿದ್ದರು. ಈಗ ಮತ್ತೆ ಅಂತದ್ದೇ ಘಟನೆ ಧರ್ಮಸ್ಥಳದಲ್ಲಿ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಗಣಿ ಇಲಾಖೆ ಅನ್ನೋದು ಇದೆಯೇ ಎನ್ನುವಷ್ಟು ಸಂದೇಹ ಜನರನ್ನು ಕಾಡಲಾರಂಭಿಸಿದೆ. ಸರ್ಕಾರಕ್ಕೆ ರಾಜಾಧನ ಪಾವತಿಸದೆ, ಲೀಸ್ ಪಡೆಯದೇ, ಯಾವೊಂದು ಅನುಮತಿಯೂ ಇಲ್ಲದೆ, ಲೈಸೆನ್ಸ್ ಅಗತ್ಯವೇ ಇಲ್ಲದೆ, ಸುಪ್ರೀಂಕೋರ್ಟ್ ನಿಷೇಧಿಸಿರುವ ಡ್ರೆಜಿಂಗ್ ಬಳಸಿ ಇಷ್ಟೊಂದು ದೊಡ್ಡ ಮಟ್ಟದಲ್ಲಿ ದಂಧೆ ನಡೆಯುತ್ತಿದ್ದರೆ ಅಧಿಕಾರಿಗಳು ದಾಳಿ ನಡೆಸದಂತೆ ಕಟ್ಟಿ ಹಾಕುತ್ತಿರುವ ಕೈ ಯಾವುದು ಅನ್ನೋದಕ್ಕೆ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಅವರೇ ಉತ್ತರಿಸಬೇಕಿದೆ. ದಂಧೆ ಹೀಗೆ ಮುಂದುವರಿದರೆ ಲಕ್ಷಾಂತರ ಭಕ್ತರ ನಂಬಿಕೆಯಾಗಿರುವ ನೇತ್ರಾವತಿ ನದಿಗೆ ಮುಂದಿನ ದಿನಗಳಲ್ಲಿ ಕಂಟಕ ಎದುರಾಗಲಿರುವುದು ಸುಳ್ಳಲ್ಲ.  ಇದನ್ನೂ ಓದಿ: ನನ್ನ ಮಗಳ ಸಾವಿಗೆ ತೆಲುಗು ನಟ ಕಾರಣ- ಸೌಜನ್ಯ ತಂದೆ ದೂರು 

  • ಮಡಿಕೇರಿಯಲ್ಲಿ ಸುಬ್ರಹ್ಮಣ್ಯ ಷಷ್ಠಿ ಸಂಭ್ರಮ

    ಮಡಿಕೇರಿಯಲ್ಲಿ ಸುಬ್ರಹ್ಮಣ್ಯ ಷಷ್ಠಿ ಸಂಭ್ರಮ

    ಮಡಿಕೇರಿ: ಮಂಜಿನ ನಗರಿ ಮಡಿಕೇರಿಯಲ್ಲಿ ಇಂದು ಸುಬ್ರಹ್ಮಣ್ಯ ಷಷ್ಠಿ ಸಂಭ್ರಮ ಮನೆ ಮಾಡಿತ್ತು. ನಗರದ ಮುತ್ತಪ್ಪ ದೇವಾಲಯದ ಉತ್ಸವ ಸಮಿತಿ ವತಿಯಿಂದ ದೇವಾಲಯದಲ್ಲಿ ವಿಶೇಷ ಪೂಜೆ, ಪ್ರಾರ್ಥನೆಗಳು ಜರುಗಿದವು. ಪೂಜೆಯಲ್ಲಿ ನೂರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.

    ದೇಗುಲದ ಸುತ್ತ ತಳಿರು-ತೋರಣ, ಹೂವಿನೊಂದಿಗೆ ಶೃಂಗರಿಸಲಾಗಿತ್ತು. ಸರತಿ ಸಾಲಿನಲ್ಲಿ ನಿಂತು ಭಕ್ತರು ವಿವಿಧ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು. ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಅಪ್ಪಂ, ಪಂಚ ಕಜ್ಜಾಯ ಸೇವೆ, ಹಣ್ಣು ಕಾಯಿ ಪೂಜೆ, ಪುಷ್ಪಾರ್ಚನೆ, ಮಂಗಳಾರತಿ ನಡೆಯಿತು. ವಿಶೇಷವಾಗಿ ಮುತ್ತಪ್ಪನ್ ಹಾಗೂ ಸುಬ್ರಹ್ಮಣ್ಯ ದೇವರ ಅರಧಾನೆ ನಡೆಯಿತು. ಇದೇ ಸಂದರ್ಭದಲ್ಲಿ ದೇವಾಲಯ ಅವರಣದಲ್ಲಿ ಹರಕೆಯಾಗಿ ನವಜೋಡಿಗಳ ಮದುವೆ ಕಾರ್ಯವು ನೇರವೇರಿತು.

    ನಗರದ ಓಂಕಾರೇಶ್ವರ ದೇವಾಲಯದಲ್ಲೂ ವಿಶೇಷ ಪೂಜೆ, ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ ನಡೆಯಿತು. ಕೋವಿಡ್ 19 ಇರುವ ಕಾರಣದಿಂದ ಈ ಬಾರಿ ದೇವಾಲಯದಲ್ಲಿ ಭಕ್ತರ ಸಂಖ್ಯೆ ಅತ್ಯಂತ ವಿರಳವಾಗಿತ್ತು.

  • ಉಪ್ಪಿನಂಗಡಿ ಬಳಿ ರಸ್ತೆಗೆ ನುಗ್ಗಿದ ನೀರು – ಮಂಗಳೂರು, ಬೆಂಗಳೂರು ರಸ್ತೆ ಸಂಪರ್ಕ ಬಂದ್

    ಉಪ್ಪಿನಂಗಡಿ ಬಳಿ ರಸ್ತೆಗೆ ನುಗ್ಗಿದ ನೀರು – ಮಂಗಳೂರು, ಬೆಂಗಳೂರು ರಸ್ತೆ ಸಂಪರ್ಕ ಬಂದ್

    ಮಂಗಳೂರು: ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಕುಮಾರಧಾರಾ ಮತ್ತು ನೇತ್ರಾವತಿ ನದಿ ಉಕ್ಕಿ ಹರಿಯುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ.

    ಕುಮಾರಾಧಾರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ನೆಲ್ಯಾಡಿ ಸಮೀಪದ ಉದನೆಯಲ್ಲಿ ಹೆದ್ದಾರಿಗೆ ನೀರು ನುಗ್ಗಿದ ಪರಿಣಾಮ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ಸದ್ಯಕ್ಕೆ ಬಂದ್ ಆಗಿದೆ. ಹೆದ್ದಾರಿಯಲ್ಲಿ ಉದ್ದಕ್ಕೂ ವಾಹನಗಳ ಸರತಿ ಸಾಲಿನಲ್ಲಿ ನಿಂತುಕೊಂಡಿದ್ದು, ಉಪ್ಪಿನಂಗಡಿ ಪೊಲೀಸರು ಹೆದ್ದಾರಿಯಲ್ಲಿ ಬಂದೋಬಸ್ತ್ ಕಲ್ಪಿಸಿದ್ದಾರೆ.

    ಸುಬ್ರಹ್ಮಣ್ಯ ಸಮೀಪದ ಕುಲ್ಕುಂದದಲ್ಲಿ ಕುಮಾರಧಾರಾ ನದಿ ನೀರು ನುಗ್ಗಿದ ಪರಿಣಾಮ ನಾಲ್ಕು ಮನೆಗಳಿಗೆ ತೊಂದರೆಯಾಗಿದೆ. ಮನೆಯವರು ಮುಂಜಾಗ್ರತಾ ಕ್ರಮವಾಗಿ ಬೇರೆಡೆಗೆ ಸ್ಥಳಾಂತರಗೊಂಡಿದ್ದು, ಸಂತ್ರಸ್ತರಿಗೆ ಗಂಜಿ ಕೇಂದ್ರದ ವ್ಯವಸ್ಥೆ ಮಾಡಲಾಗುತ್ತಿದೆ.

    ಕುಮಾರಧಾರಾ ನದಿ ನೀರು ಸುಬ್ರಹ್ಮಣ್ಯ ಸ್ನಾನಘಟ್ಟದ ಬಳಿ ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಗೂ ನುಗ್ಗಿದ್ದು, ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಅಲ್ಲದೆ ಸುಳ್ಯ-ಸುಬ್ರಹ್ಮಣ್ಯ-ಸಕಲೇಶಪುರ ಸಂಪರ್ಕಿಸುವ ಬಿಸಿಲೆ ಘಾಟ್ ರಸ್ತೆಯಲ್ಲೂ ಮರ ಹಾಗೂ ಗುಡ್ಡ ಕುಸಿದ ಪರಿಣಾಮ ಬಿಸಿಲೆ ಘಾಟ್ ರಸ್ತೆಯಲ್ಲೂ ಸಂಚಾರಕ್ಕೆ ತೊಡಕಾಗಿದೆ.

    ಮತ್ತೆ ಕುಸಿತ: ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ನಾಲ್ಕು ಕಡೆಗಳಲ್ಲಿ ಗುಡ್ಡೆ ರಸ್ತೆಗೆ ಜಾರಿದೆ. 6 ಜೆಸಿಬಿ ಯಂತ್ರದ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ. ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ರಸ್ತೆ ಸಂಚಾರವನ್ನು ನಿಷೇಧಿಸಲಾಗಿದೆ.