Tag: Suchana Seth

  • ಮಗನನ್ನು ಕೊಂದ ಸುಚನಾ ಸೇಠ್‌ಗೆ ಯಾವುದೇ ಮಾನಸಿಕ ಖಿನ್ನತೆ ಇಲ್ಲ

    ಮಗನನ್ನು ಕೊಂದ ಸುಚನಾ ಸೇಠ್‌ಗೆ ಯಾವುದೇ ಮಾನಸಿಕ ಖಿನ್ನತೆ ಇಲ್ಲ

    ಪಣಜಿ: ಮಗನನ್ನು ಕೊಂದ ಸುಚನಾ ಸೇಠ್‌ಗೆ (Suchana Seth) ಯಾವುದೇ ಮಾನಸಿಕ ಕಾಯಿಲೆ (Mental Illness) ಇಲ್ಲ ಎಂದು ಗೋವಾ (Goa) ಪೊಲೀಸರು ತಿಳಿಸಿದ್ದಾರೆ.

    4 ವರ್ಷದ ಮಗನನ್ನು ಕೊಂದು ಸೂಟ್‌ಕೇಸ್‌ನಲ್ಲಿ ಶವ ತುಂಬಿದ ಬೆಂಗಳೂರಿನ ಸ್ಟಾರ್ಟ್ಅಪ್ ಕಂಪನಿಯ ಉದ್ಯಮಿ ಕೇಸ್ ಈಗ ರೋಚಕ ತಿರುವು ಪಡೆದುಕೊಂಡಿದೆ. ಇನ್‌ಸ್ಟಿಟ್ಯೂಟ್ ಅಫ್ ಸೈಕಾಲಜಿ ಮತ್ತು ಹ್ಯೂಮನ್ ಬಿಹೇವಿಯರ್ ಸಂಸ್ಥೆಯಲ್ಲಿ ಫೆ.2 ರಂದು ಸೂಚನಾಳ ಮಾನಸಿಕ ಪರೀಕ್ಷೆಗೆ ಒಳಪಡಿಸಲಾಗಿತ್ತು. ಪರೀಕ್ಷಾ ವರದಿಯನ್ನು ಪೊಲೀಸರು ಕೋರ್ಟ್ ಎದುರು ಹಾಜರು ಪಡಿಸಿದ್ದು, ವರದಿಯ ಪ್ರಕಾರ ಸುಚನಾಗೆ ಯಾವುದೇ ಮಾನಸಿಕ ಖಿನ್ನತೆ ಇಲ್ಲವೆಂದು ಸಾಬೀತಾಗಿದೆ. ಗಂಡನ ಮೇಲಿನ ಅತಿಯಾದ ಕೋಪ ಹೀಗೆ ಮಾಡಿಸಿರಬಹುದು ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಾಜಸ್ಥಾನದಿಂದ ಸೋನಿಯಾ ಗಾಂಧಿ ರಾಜ್ಯಸಭೆಗೆ ಸ್ಪರ್ಧೆ

    ಮಾನಸಿಕ ಖಿನ್ನತೆಯಿಂದ ಆಕೆ ಈ ರೀತಿ ನಡೆದು ಕೊಂಡಿರಬಹುದು. ಮಗುವಿನ ಮೇಲೆ ಯಾವುದೇ ಕೋಪ ಇರಲಿಲ್ಲ ಅಂತ ಸುಚನಾ ತಂದೆ ಪೊಲೀಸರ ಮುಂದೆ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಅಯೋಧ್ಯೆಗೆ ಬೆಂಗಳೂರಿನಿಂದ ಹೊರಟಿತು ವಿಶೇಷ ರೈಲು

    ಸುಚನಾ ಸೇಠ್ ಪರೀಕ್ಷೆಯಲ್ಲಿ ಕೇಳಿರುವ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿದ್ದಾಳೆ. ನನಗೆ ಯಾವುದೇ ತೊಂದರೆ ಇಲ್ಲ. ಇದುವರೆಗೂ ಮಾನಸಿಕ ಖಿನ್ನತೆಗೆ ಯಾವುದೇ ಚಿಕಿತ್ಸೆ ಪಡೆದಿಲ್ಲ ಎಂದು ಪೊಲೀಸರ ಮುಂದೆ ಉತ್ತರಿಸಿದ್ದಾಳೆ. ನನಗೆ ಮಾನಸಿಕ ಖಿನ್ನತೆಯ ಯಾವುದೇ ಲಕ್ಷಣಗಳು ಇಲ್ಲ. ಕೆಲಸದ ಒತ್ತಡವಾಗಲಿ, ಕೌಟುಂಬಿಕ ಹಿನ್ನೆಲೆಯಾಗಲಿ ಇಲ್ಲ ಎಂದು ಉತ್ತರಿಸಿದ್ದಾಳೆ. ಇದನ್ನೂ ಓದಿ: ಪುಲ್ವಾಮಾ ದಾಳಿಗೆ 5 ವರ್ಷ: 2019ರ ಫೆ.14 ರಂದು ನಡೆದಿದ್ದು ಏನು?

    ಗೋವಾದಲ್ಲಿ ತನ್ನ 4 ವರ್ಷ ಮಗುವನ್ನು ಕೊಲೆ ಮಾಡಿ ಬ್ಯಾಗ್‌ನಲ್ಲಿಟ್ಟು ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಸಮಯದಲ್ಲಿ ಸೂಚನಾಳನ್ನು ಚಿತ್ರದುರ್ಗದ ಬಳಿ ಪೊಲೀಸರು ಬಂಧಿಸಿದ್ದರು. ಪ್ರಸ್ತುತ ಸುಚನಾ ನ್ಯಾಯಾಂಗ ಬಂಧನದಲ್ಲಿದ್ದಾಳೆ. ಇದನ್ನೂ ಓದಿ:  6 ತಿಂಗಳ ಆಹಾರ ಸಾಮಾಗ್ರಿ ಹಿಡಿದು ದೆಹಲಿಚಲೋಗೆ ಬಂದ ರೈತರು

  • ಮಗನ ಮುಖದಿಂದ ಪತಿಯ ನೆನಪಾಗ್ತಿದ್ದಕ್ಕೆ ಹತ್ಯೆ!

    ಮಗನ ಮುಖದಿಂದ ಪತಿಯ ನೆನಪಾಗ್ತಿದ್ದಕ್ಕೆ ಹತ್ಯೆ!

    ಪಣಜಿ: ಗೋವಾದ (Goa) ಹೋಟೆಲ್ ಒಂದರಲ್ಲಿ ತನ್ನ 4 ವರ್ಷದ ಮಗುವನ್ನು ಹತ್ಯೆಗೈದು ಸಾಗಿಸುವಾಗ ಪೊಲೀಸರಿಗೆ ಸಿಕ್ಕಿ ಬಿದ್ದಿರುವ ಬೆಂಗಳೂರಿನ (Bengaluru) ಸ್ಟಾರ್ಟಪ್ ಕಂಪನಿಯ ಸಿಇಒ ಸುಚನಾ (Suchana Seth) ಪ್ರಕರಣದಲ್ಲಿ ಶಾಕಿಂಗ್ ವಿಚಾರವೊಂದು ಬೆಳಕಿಗೆ ಬಂದಿದೆ. ಪೊಲೀಸರ (Police) ತನಿಖೆ ವೇಳೆ ಆಕೆಯ ಮಗುವಿನ ಮುಖ ಗಂಡನನ್ನೇ ಹೋಲುತ್ತಿತ್ತು ಇದೇ ಕಾರಣಕ್ಕೆ ಆಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

    ಮಗುವಿನ ಮುಖದ ಚಹರೆ ತನ್ನ ಪತಿಯ ಮುಖವನ್ನೇ ಹೋಲುತ್ತದೆ ಎಂದು ಮಹಿಳೆ ತನ್ನ ಸ್ನೇಹಿತರೊಂದಿಗೆ ಹಲವು ಬಾರಿ ಹೇಳಿಕೊಂಡಿದ್ದಳು ಎಂದು ತಿಳಿದು ಬಂದಿದೆ. ಆತನನ್ನು ನೋಡಿದಾಗಲೆಲ್ಲಾ ನನಗೆ ನನ್ನ ಪತಿಯ ಮುಖ ಮತ್ತು ನಮ್ಮಿಬ್ಬರ ನಡುವಿನ ಹಳೆಯ ಸಂಬಂಧ ನೆನಪಿಗೆ ಬರುತ್ತದೆ ಎಂದು ಸುಚನಾ ಹೇಳಿಕೊಂಡಿದ್ದರು. ಇದೇ ಮಗುವಿನ ಹತ್ಯೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಗುವಿಗೆ ಹೈಡೋಸ್ ಕೊಟ್ಟು, ಎಚ್ಚರ ತಪ್ಪಿಸಿ ಹತ್ಯೆ- ಸೇಠ್ ರೂಮಲ್ಲಿ ಕೆಮ್ಮಿನ ಔಷಧಿ ಬಾಟ್ಲಿ ಪತ್ತೆ

    ಗೋವಾದಲ್ಲಿ ಮಗುವಿನ ಹತ್ಯೆ ಮಾಡಿ ಶವವನ್ನು ಸೂಟ್‍ಕೇಸ್‍ನಲ್ಲಿಟ್ಟು ಬೆಂಗಳೂರಿಗೆ ಸಾಗಿಸುತ್ತಿದ್ದ ಸಮಯದಲ್ಲಿ ಮಹಿಳೆಯನ್ನು ಕ್ಯಾಬ್ ಚಾಲಕನ ಸಹಾಯದಿಂದ ಚಿತ್ರದುರ್ಗದ ಪೊಲೀಸರು ಬಂಧಿಸಿ ಗೋವಾ ಪೊಲೀಸರಿಗೆ ಒಪ್ಪಿಸಿದ್ದರು. ಈ ಸಂಬಂಧ ಗೋವಾ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.  ಇದನ್ನೂ ಓದಿ: ಪತಿಗೆ ಮಗು ತೋರಿಸಲು ಇಷ್ಟವಿಲ್ಲದಿದ್ದರಿಂದ ಪ್ರಜ್ಞೆ ತಪ್ಪಿಸಲು ದಿಂಬಿನಿಂದ ಒತ್ತಿ ಹಿಡಿದೆ: ತಪ್ಪೊಪ್ಪಿಕೊಂಡ ಸೇಠ್

  • ಮಗುವನ್ನು ಕೊಂದಿದ್ದಕ್ಕೆ ಪಶ್ಚಾತ್ತಾಪ ಇಲ್ಲ: ಸುಚನಾ ಸೇಠ್

    ಮಗುವನ್ನು ಕೊಂದಿದ್ದಕ್ಕೆ ಪಶ್ಚಾತ್ತಾಪ ಇಲ್ಲ: ಸುಚನಾ ಸೇಠ್

    ಬೆಂಗಳೂರು: ಹೆತ್ತ ಮಗುವನ್ನೇ ಕೊಂದ ಪಾಪಿ ತಾಯಿ ಸುಚನಾ ಸೇಠ್‌ಳ ಮತ್ತಷ್ಟು ರೋಚಕ ವಿಚಾರಗಳು ಪೊಲೀಸರ ತನಿಖೆಯಲ್ಲಿ ರಿವೀಲ್ ಆಗಿದ್ದು, ತನಿಖೆ ವೇಳೆ ಮಗುವನ್ನು (Child) ಕೊಂದಿದ್ದರ ಬಗ್ಗೆ ಕಿಂಚಿತ್ತೂ ಪಶ್ಚಾತ್ತಾಪವಿಲ್ಲ ಎಂದು ಆರೋಪಿ ಸುಚನಾ ಸೇಠ್ (Suchana Seth) ಹೇಳಿಕೆ ನೀಡಿದ್ದಾಳೆ.

    ಮಗುವಿನ ಸಾವಿನ ಬಗ್ಗೆ ತನ್ನ ಪಾತ್ರದ ಬಗ್ಗೆ ಪಶ್ಚಾತ್ತಾಪವಿಲ್ಲ ಎಂದು ಸುಚನಾ ಸೇಠ್ ಹೇಳಿದ್ದಾಳೆ. ಮಗುವನ್ನು ಕೊಲೆ ಮಾಡುವ ಕೆಲವು ದಿನಗಳ ಹಿಂದೆ ಆರೋಪಿ ಸುಚನಾ ಪತಿಗೆ ಕಾಲ್ ಮಾಡಿದ್ದಳು. ಅಲ್ಲದೇ ಜನವರಿ 6ರಂದು ಪತಿ ವೆಂಕಟರಮಣ್‌ಗೆ ಮೆಸೇಜ್ ಮಾಡಿ ಮರುದಿನ ಮಗುವನ್ನು ಭೇಟಿ ಮಾಡಬಹುದು ಎಂದು ತಿಳಿಸಿದ್ದಳು. ಇದನ್ನೂ ಓದಿ: ನಾವು ಗಾಂಧಿ ಹಿಂದುತ್ವವಾದಿಗಳು, ರಾಮಲಲ್ಲಾ ಟೆಂಟ್‌ನಲ್ಲಿದ್ದಾಗ ದರ್ಶನ ಮಾಡಿದ್ದೇವೆ: ಕೆಎನ್ ರಾಜಣ್ಣ

    ಹೀಗಾಗಿ ಪತಿ ಮಗುವನ್ನು ಭೇಟಿ ಮಾಡಲು ಬೆಂಗಳೂರಿಗೆ ಬಂದಿದ್ದರು. ಈ ವೇಳೆ ಪತ್ನಿ ಹಾಗೂ ಮಗು ಬೆಂಗಳೂರಿನಲ್ಲಿ ಇಲ್ಲವಾದ್ದರಿಂದ ಭೇಟಿ ಸಾಧ್ಯವಾಗಿರಲಿಲ್ಲ. ಬಳಿಕ ಅದೇ ದಿನ ಪತಿ ವೆಂಕಟರಮಣ್ ಇಂಡೋನೇಷ್ಯಾಗೆ ವಾಪಸ್ಸಾಗಿದ್ದಾರೆ. ಇನ್ನು 2022ರಲ್ಲಿ ಸುಚನಾ ಸೇಠ್ ಪತಿ ವಿರುದ್ಧ ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಳು. ಅಲ್ಲದೇ ನನಗೆ ಮತ್ತು ಮಗುವಿಗೆ ಪತಿ ದೈಹಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಳು. ಆದರೆ ಈ ಆರೋಪವನ್ನು ಪತಿ ಅಲ್ಲಗೆಳೆದಿದ್ದರು. ಇದನ್ನೂ ಓದಿ: ಕೆಲ ಧರ್ಮದ್ವೇಷಿಗಳಿಂದ ಅಪಪ್ರಚಾರ: ಶೃಂಗೇರಿ ಮಠದಿಂದ ಸ್ಪಷ್ಟನೆ

    ಇದಾದ ಬಳಿಕ ಪತ್ನಿಯ ಮನೆಯಿಂದ ಮಗು ಮತ್ತು ಆಕೆಯ ಜೊತೆ ಸಂವಹನ ನಡೆಸುವುದನ್ನು ನ್ಯಾಯಾಲಯ ನಿರ್ಬಂಧಿಸಿತ್ತು. ಅದಾಗಿಯೂ ಮಗುವಿನ ಭೇಟಿಯ ಹಕ್ಕನ್ನು ನ್ಯಾಯಾಲಯ ಪತಿಗೆ ನೀಡಿತ್ತು. ಇದು ಸಹಜವಾಗಿಯೇ ನನ್ನ ಅಸಮಾಧಾನಕ್ಕೆ ಕಾರಣವಾಗಿತ್ತು. ಹೀಗಾಗಿ ಮಗುವನ್ನು ಕೊಂದೆ ಎಂದು ಆರೋಪಿ ಸುಚನಾ ಸೇಠ್ ತನಿಖೆ ವೇಳೆ ಬಾಯ್ಬಿಟ್ಟಿದ್ದಾಳೆ. ಇದನ್ನೂ ಓದಿ: ಸ್ತಬ್ಧಚಿತ್ರ ರಾಜಕಾರಣ ಸಿಎಂಗೆ ಶೋಭೆ ತರಲ್ಲ: ಪ್ರಹ್ಲಾದ್ ಜೋಶಿ

  • ಮಗನ ಹತ್ಯೆ ಪ್ರಕರಣ- ಜೀವನಾಂಶವಾಗಿ ತಿಂಗಳಿಗೆ 2.5 ಲಕ್ಷ ರೂ.ಗೆ ಬೇಡಿಕೆಯಿಟ್ಟಿದ್ದ ಸುಚನಾ ಸೇಠ್

    ಮಗನ ಹತ್ಯೆ ಪ್ರಕರಣ- ಜೀವನಾಂಶವಾಗಿ ತಿಂಗಳಿಗೆ 2.5 ಲಕ್ಷ ರೂ.ಗೆ ಬೇಡಿಕೆಯಿಟ್ಟಿದ್ದ ಸುಚನಾ ಸೇಠ್

    ಬೆಂಗಳೂರು: ಸ್ಟಾರ್ಟ್ಅಪ್ ಕಂಪನಿ ಸಿಇಒ (CEO) ಸುಚನಾ ಸೇಠ್ (Suchana Seth) ಹೆತ್ತ ಮಗನನ್ನೇ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಿಂದ ಒಂದೊಂದೇ ಮಾಹಿತಿಗಳು ಬಹಿರಂಗವಾಗುತ್ತಿವೆ. ಇದೀಗ ಆರೋಪಿ ಸುಚನಾ ಸೇಠ್ ತನ್ನ ಪತಿಯಿಂದ ದೂರವಾದ ಬಳಿಕ ಜೀವನಾಂಶವಾಗಿ (Sustenance) ತಿಂಗಳಿಗೆ 2.5 ಲಕ್ಷ ರೂ.ಗೆ ಡಿಮ್ಯಾಂಡ್ ಮಾಡಿದ್ದರು ಎಂಬ ವಿಷಯ ಹೊರಬಿದ್ದಿದೆ.

    ಆರೋಪಿ ಸುಚನಾ ಮತ್ತು ಆಕೆಯ ಪತಿ ವೆಂಕಟರಮಣ ನಡುವೆ ಬಿನ್ನಾಭಿಪ್ರಾಯ ಉಂಟಾದ ಹಿನ್ನೆಲೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಸುಚನಾ ಡಿವೋರ್ಸ್ ಕೇಸ್ ಮೂರು ವಾರದ ಹಿಂದೆ ಅಂದರೆ ಡಿಸೆಂಬರ್ 12ರಂದು ವಿಚಾರಣೆ ನಡೆದಿತ್ತು. ಸುಚನಾ ಪತಿ ವೆಂಕಟರಮಣ ತಿಂಗಳಿಗೆ 9 ಲಕ್ಷ ರೂ. ದುಡಿಯುತ್ತಾರೆ. ಈ ಹಿನ್ನೆಲೆ ವಿಚಾರಣೆ ವೇಳೆ ಜೀವನಾಂಶಕ್ಕೆ ತಿಂಗಳಿಗೆ 2.5 ಲಕ್ಷ ರೂ. ನೀಡಬೇಕು ಎಂದು ಬೇಡಿಕೆ ಇಟ್ಟಿದ್ದರು ಎಂದು ವಿಚಾರಣೆ ವೇಳೆ ತಿಳಿದುಬಂದಿದೆ. ಇದನ್ನೂ ಓದಿ: ಮಗುವಿಗೆ ಹೈಡೋಸ್ ಕೊಟ್ಟು, ಎಚ್ಚರ ತಪ್ಪಿಸಿ ಹತ್ಯೆ- ಸೇಠ್ ರೂಮಲ್ಲಿ ಕೆಮ್ಮಿನ ಔಷಧಿ ಬಾಟ್ಲಿ ಪತ್ತೆ

    ಇದಾದ ಬಳಿಕ ಸುಚನಾ ಮನೆಯಿಂದ ಮಗನನ್ನು ಕರೆದುಕೊಂಡು ಗೋವಾಗೆ ಹೋಗಿದ್ದಾಳೆ. ಅಲ್ಲದೇ ಮಹಿಳೆ ವಾಸವಾಗಿದ್ದ ಹೋಟೆಲ್ ರೂಂನಲ್ಲಿ ಎರಡು ಖಾಲಿ ಸಿರಪ್ ಬಾಟಲ್ ಪತ್ತೆಯಾಗಿದೆ. ಖಾಲಿ ಸಿರಪ್ ಬಾಟಲ್‌ಗಳು ಪತ್ತೆ ಆಗಿರೋದು ಗಮನಿಸಿದರೆ ಇದೊಂದು ಪ್ಲ್ಯಾನ್ಡ್ ಮರ್ಡರ್ ಎಂದು ಪೊಲೀಸರು ತೀರ್ಮಾನಿಸಿದ್ದಾರೆ. ಇದನ್ನೂ ಓದಿ: ವಿಧಾನಸೌಧದ ಮುಂದೆ ಹೈಡ್ರಾಮ; ಸೀಮೆ ಎಣ್ಣೆ ಸುರಿದುಕೊಂಡು ಮುಸ್ಲಿಂ ಕುಟುಂಬ ಆತ್ಮಹತ್ಯೆಗೆ ಯತ್ನ

    ಸುಚನಾ ಸೇಠ್ ಹೇಳಿದ್ದೇನು?
    ವಿಚ್ಛೇದನ ಕೋರ್ಟ್‌ನಲ್ಲಿತ್ತು. ವಾರಕ್ಕೊಮ್ಮೆ ಪತಿ ವೆಂಕಟರಮಣನಿಗೆ ಮಗುವನ್ನ ವೀಡಿಯೋ ಕಾಲ್ ಮೂಲಕ ತೋರಿಸಬೇಕಿತ್ತು. ಆದರೆ ಗಂಡನಿಗೆ ಮಗುವನ್ನು ತೋರಿಸುವುದಕ್ಕೆ ಇಷ್ಟ ಇರಲಿಲ್ಲ. ನನ್ನ ಮಗು ಕಂಡರೆ ನನಗೂ ಕೂಡ ಬಹಳ ಪ್ರೀತಿ. ಹೀಗಾಗಿ ನಾನು ಮಗುವಿನ ಪ್ರಜ್ಞೆ ತಪ್ಪಿಸಲು ದಿಂಬಿನಿಂದ ಒತ್ತಿ ಹಿಡಿದೆ. ಮಗು ಪ್ರಜ್ಞೆ ತಪ್ಪಿದೆ ಎಂದುಕೊಂಡಿದ್ದೆ. ಆದರೆ ಮಗು ಸಾವನ್ನಪ್ಪಿತ್ತು ಎಂದಿದ್ದಾಳೆ. ಇದನ್ನೂ ಓದಿ: ಒಡೆದ ಕಾರಿನ ಹೆಡ್‌ಲೈಟ್‌ಗಳನ್ನು ತ್ರಿವರ್ಣ ಧ್ವಜದಿಂದ ಮುಚ್ಚಿದ- ಮುಂದೇನಾಯ್ತು..?

    ಇದೇ ನೋವಿನಲ್ಲಿ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದೆ. ಆದರೆ ಅದು ಸಾಧ್ಯವಾಗಿಲ್ಲ. ಗಾಬರಿಯಲ್ಲಿ ಏನು ಮಾಡಬೇಕೆಂದು ತೋಚದೆ ಸೂಟ್‌ಕೇಸ್‌ನಲ್ಲಿ ಮಗುವಿನ ಬಾಡಿ ಹಾಕಿ ಪರಾರಿಯಾಗಲು ಯತ್ನಿಸಿದೆ ಎಂದು ವಿವರಿಸಿದ್ದಾಳೆ. ಇದನ್ನೂ ಓದಿ: ಪುತ್ರನ ಹತ್ಯೆಗೈದ ಬೆಂಗ್ಳೂರು CEO ಪ್ರಕರಣ- ತಂದೆಯಿಂದ ಮಗುವಿನ ಅಂತ್ಯಸಂಸ್ಕಾರ

    ಸುಚನಾ ಸೇಠ್ ಮತ್ತು ವೆಂಕಟರಮಣ 2010ರಲ್ಲಿ ವಿವಾಹವಾಗಿದ್ದರು. 2019ರಲ್ಲಿ ಪುತ್ರ ಜನಿಸಿದ್ದು, 2021ರಿಂದ ಪತಿಯಿಂದ ಬೇರೆಯಾಗಿ ಜೀವನ ನಡೆಸುತ್ತಿದ್ದೇನೆ ಎಂದು ಆರೋಪಿ ಸುಚನಾ ಸೇಠ್ ನ್ಯಾಯಾಲಯದಲ್ಲಿ ತಿಳಿಸಿದ್ದಾಳೆ. ಇದನ್ನೂ ಓದಿ: ಬೆಂಗಳೂರು ಸಿಇಓನಿಂದ ಮಗನ ಹತ್ಯೆ ಪ್ರಕರಣ- ಮಗುವಿನ ಅಂತ್ಯಸಂಸ್ಕಾರಕ್ಕೆ ಸಿದ್ಧತೆ

  • ಪುತ್ರನ ಹತ್ಯೆಗೈದ ಬೆಂಗ್ಳೂರು CEO ಪ್ರಕರಣ- ತಂದೆಯಿಂದ ಮಗುವಿನ ಅಂತ್ಯಸಂಸ್ಕಾರ

    ಪುತ್ರನ ಹತ್ಯೆಗೈದ ಬೆಂಗ್ಳೂರು CEO ಪ್ರಕರಣ- ತಂದೆಯಿಂದ ಮಗುವಿನ ಅಂತ್ಯಸಂಸ್ಕಾರ

    ಬೆಂಗಳೂರು: ಗೋವಾದಲ್ಲಿ (Goa) ತಾಯಿಯಿಂದ ಹತ್ಯೆಯಾಗಿದ್ದ ಮಗುವಿನ ಅಂತ್ಯಸಂಸ್ಕಾರವನ್ನು ತಂದೆ ವೆಂಕಟರಮಣ ಹಾಗೂ ಕುಟುಂಬಸ್ಥರು ಹರಿಶ್ಚಂದ್ರಘಾಟ್‍ನಲ್ಲಿ ನೆರವೇರಿಸಿದ್ದಾರೆ.

    ಕಂಪನಿಯೊಂದರ ಸಿಇಓ ಸುಚನಾ ಸೇಠ್ (Suchana Seth) ತನ್ನದೇ ಮಗುವನ್ನು ಗೋವಾದ ಹೋಟೆಲ್‍ನಲ್ಲಿ ಹತ್ಯೆಗೈದು ಸೂಟ್‍ಕೇಸ್‍ನಲ್ಲಿ ತರುವಾಗ ಚಿತ್ರದುರ್ಗ (Chitradurga) ಪೊಲೀಸರಿಗೆ ಸಿಕ್ಕಿಬಿದ್ದಿದ್ದಳು. ಬಳಿಕ ಹಿರಿಯೂರಿನ ತಾಲೂಕು ಆಸ್ಪತ್ರೆಯಲ್ಲಿ ಮಗುವಿನ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ನಂತರ ಐಮಂಗಲ ಪೊಲೀಸ್ ಠಾಣೆಯಿಂದ ಬೆಂಗಳೂರಿಗೆ (Bengaluru) ಮಗುವಿನ ಮೃತದೇಹ ಮಧ್ಯರಾತ್ರಿ 1:45ಕ್ಕೆ ರವಾನಿಸಲಾಗಿತ್ತು. ಯಶವಂತಪುರ ಬಳಿ ಇರುವ ಬ್ರಿಗೇಡ್ ಗೇಟ್‍ವೇ ರೆಸಿಡೆನ್ಸಿಯಲ್ಲಿರುವ ನಿವಾಸದಿಂದ ಇದೀಗ ಹರಿಶ್ಚಂದ್ರ ಘಾಟ್‍ಗೆ ಮೃತದೇಹ ಕೊಂಡೊಯ್ದು ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಇದನ್ನೂ ಓದಿ: ಬೆಂಗಳೂರು ಸಿಇಓನಿಂದ ಮಗನ ಹತ್ಯೆ ಪ್ರಕರಣ- ಮಗುವಿನ ಅಂತ್ಯಸಂಸ್ಕಾರಕ್ಕೆ ಸಿದ್ಧತೆ

    ಸುಚನಾ ಸೇಠ್ ಗೋವಾದ ಹೋಟೆಲ್ ಒಂದರಲ್ಲಿ ತನ್ನ ಮಗುವನ್ನು ಹತ್ಯೆಗೈದು ಸೂಟ್‍ಕೇಸ್‍ನಲ್ಲಿ ತರುವಾಗ ಹೊಟೇಲ್ ಸಿಬ್ಬಂದಿ ಹಾಗೂ ಕಾರು ಚಾಲಕನ ಸಮಯ ಪ್ರಜ್ಞೆಯಿಂದ ಚಿತ್ರದುರ್ಗ (Chitradurga) ಪೊಲೀಸರಿಗೆ (Police) ಒಪ್ಪಿಸಲಾಗಿತ್ತು. ಮಹಿಳೆಯ ಸೂಟ್‍ಕೇಸ್ ಪರಿಶೀಲಿಸಿದಾಗ ಮಗುವಿನ ಮೃತದೇಹ ಪತ್ತೆಯಾಗಿತ್ತು. ಬಳಿಕ ಪೊಲೀಸರು ಆಕೆಯನ್ನು ಬಂಧಿಸಿ ಗೋವಾ ಪೊಲೀಸರಿಗೆ ಒಪ್ಪಿಸಿದ್ದರು.

    ಏನಿದು ಪ್ರಕರಣ?: ಸ್ವಂತ ಮಗುವನ್ನೇ ಸ್ಟಾರ್ಟ್ ಅಪ್ ಫೌಂಡರ್ ಮತ್ತು ಸಿಇಓ ಸುಚನಾ ಸೇಠ್ ಹತ್ಯೆಗೈದು ಸೂಟ್‍ಕೇಸ್‍ನಲ್ಲಿ ಶವ ತುಂಬಿಕೊಂಡು ಗೋವಾದಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಚಿತ್ರದುರ್ಗ ಪೊಲೀಸರು ಬಂಧಿಸಿದ್ದರು. ಸುಚನಾ ಸೇಠ್ ಶನಿವಾರ ತನ್ನ ಮಗನೊಂದಿಗೆ ಉತ್ತರ ಗೋವಾದ ಕ್ಯಾಂಡೋಲಿಮ್‍ನಲ್ಲಿರುವ ಸೋಲ್ ಬನಿಯನ್ ಗ್ರಾಂಡೆಗೆ ಭೇಟಿ ನೀಡಿದ್ದಳು. ಸೋಮವಾರ ಹೋಟೆಲ್ ತೊರೆಯುವಾಗ ಒಬ್ಬಂಟಿಯಾಗಿದ್ದು, ತಾನು ಬೆಂಗಳೂರಿಗೆ ಟ್ಯಾಕ್ಸಿ ಕಾಯ್ದಿರಿಸುವಂತೆ ಹೋಟೆಲ್ ಸಿಬ್ಬಂದಿಯನ್ನು ಕೇಳಿದ್ದಾಳೆ. ಅವರು ವಿಮಾನ ಸೌಲಭ್ಯ ಇರುವ ಸಲಹೆ ನೀಡಿದರೂ ಟ್ಯಾಕ್ಸಿ ತೆಗೆದುಕೊಳ್ಳುವಂತೆ ಆಕೆ ಒತ್ತಾಯಿಸಿದ್ದಾಳೆ ಎಂದು ಸಿಬ್ಬಂದಿ ತಿಳಿಸಿದ್ದರು.

    ಆಕೆ ಹೋಟೆಲ್‍ನಿಂದ ಹೊರಗೆ ಹೋದ ಬಳಿಕ ಮಗು ಇಲ್ಲದಿದ್ದನ್ನು ಸಿಬ್ಬಂದಿ ಗಮನಿಸಿದ್ದರು. ಅಲ್ಲದೇ ಆಕೆ ತಂಗಿದ್ದ ಹೋಟೆಲ್ ಶುಚಿಗೊಳಿಸಲು ಹೋದಾಗ ರಕ್ತದ ಕಲೆಗಳು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಅನುಮಾನಗೊಂಡ ಹೋಟೆಲ್ ಸಿಬ್ಬಂದಿ, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಗೋವಾ ಪೊಲೀಸರು ಹೋಟೆಲ್ ಸಿಬ್ಬಂದಿ ಕರೆಸಿದ್ದ ಟ್ಯಾಕ್ಸಿ ಡ್ರೈವರ್ ಸಂಪರ್ಕಿಸಿ ಆಕೆಯೊಂದಿಗೆ ಮಾತನಾಡಲು ಹೇಳಿದ್ದಾರೆ. ಆಕೆಯ ಮಗನ ಬಗ್ಗೆ ಕೇಳಿದಾಗ ಅವನು ಸ್ನೇಹಿತನೊಂದಿಗೆ ಇರುವುದಾಗಿ ಹೇಳಿಕೊಂಡಿದ್ದಳು. ಆತನ ವಿಳಾಸವನ್ನೂ ನೀಡಿದ್ದಳು. ಪೊಲೀಸರು ಆ ವಿಳಾಸವನ್ನ ಪರಿಶೀಲಿಸಿದಾಗ ಅದು ನಕಲಿಯಾಗಿತ್ತು. ನಂತರ ಟ್ಯಾಕ್ಸಿ ಡ್ರೈವರ್‌ಗೆ ಹೈವೇ ಬಳಿ ಪೊಲೀಸರು ಕಂಡಾಕ್ಷಣ ಟ್ಯಾಕ್ಸಿ ನಿಲ್ಲಿಸುವಂತೆ ತಿಳಿಸಿದ್ದಾಳೆ.

    ನಂತರ ಟ್ಯಾಕ್ಸಿ ಚಾಲಕ ರಾಷ್ಟ್ರೀಯ ಹೆದ್ದಾರಿ-4ರ ಬಳಿಯ ಐಮಂಗಲ ಠಾಣೆ ಪೊಲೀಸರಿಗೆ ಆಕೆಯನ್ನ ಒಪ್ಪಿಸಿದ್ದ. ಬಳಿಕ ಟ್ಯಾಕ್ಸಿ ತಪಾಸಣೆ ಮಾಡಿದ ಐಮಂಗಲ ಪೊಲೀಸರಿಗೆ ಟ್ಯಾಕ್ಸಿ ಡಿಕ್ಕಿಯಲ್ಲಿದ್ದ ಸೂಟ್‍ಕೇಸ್‍ನಲ್ಲಿ ಮಗುವಿನ ಶವ ಪತ್ತೆಯಾಗಿತ್ತು. ಈ ಸಂಬಂಧ ಗೋವಾ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

    ಈ ಹಿಂದೆ ಕೌಟುಂಬಿಕ ಕಲಹದ ಹಿನ್ನೆಲೆ ದಂಪತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಆವಾಗಿನಿಂದಲೂ ಗಂಡ-ಹೆಂಡತಿ ಅನ್ಯೋನ್ಯವಾಗಿರಲಿಲ್ಲ. ಬಳಿಕ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿಕೊಂಡಿದ್ದರು. ವಾರಕ್ಕೊಮ್ಮೆ ವೆಂಕಟರಮಣ ಅವರಿಗೆ ಮಗುವನ್ನು ತೋರಿಸುವಂತೆ ನ್ಯಾಯಾಲಯ ಈ ವೇಳೆ ಹೇಳಿತ್ತು. ಮಗುವನ್ನು ತೋರಿಸಲು ಇಷ್ಟವಿಲ್ಲದೇ ಹತ್ಯೆಗೈದಿರುವುದು ವಿಚಾರಣೆಯ ವೇಳೆ ಬಯಲಾಗಿದೆ. ಇದನ್ನೂ ಓದಿ: ಪತಿಗೆ ಮಗು ತೋರಿಸಲು ಇಷ್ಟವಿಲ್ಲದಿದ್ದರಿಂದ ಪ್ರಜ್ಞೆ ತಪ್ಪಿಸಲು ದಿಂಬಿನಿಂದ ಒತ್ತಿ ಹಿಡಿದೆ: ತಪ್ಪೊಪ್ಪಿಕೊಂಡ ಸೇಠ್

  • ಅಪಾರ್ಟ್‌ಮೆಂಟ್‌‌ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬೆಂಗ್ಳೂರಿನ CEO ಸಿಕ್ಕಿಬಿದ್ದ ರೋಚಕ ಕಥೆ ಓದಿ

    ಅಪಾರ್ಟ್‌ಮೆಂಟ್‌‌ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬೆಂಗ್ಳೂರಿನ CEO ಸಿಕ್ಕಿಬಿದ್ದ ರೋಚಕ ಕಥೆ ಓದಿ

    ಪಣಜಿ: ತನ್ನ ಸ್ವಂತ 4 ವರ್ಷದ ಮಗನನ್ನು ಕೊಂದು ಅಪಾರ್ಟ್‌ಮೆಂಟ್‌‌ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬೆಂಗಳೂರಿನ CEO ಸುಚನಾ ಸೇಠ್‌ (Suchana Seth) ಸಿಕ್ಕಿಬಿದ್ದ ರೋಚಕ ಕಥೆ ಇಲ್ಲಿದೆ.

    ಜನವರಿ 6 ರಂದು ಸುಚನಾ ಸೇಠ್, ಉತ್ತರ ಗೋವಾದ (Goa) ಕ್ಯಾಂಡೋಲಿಮ್‌ನಲ್ಲಿ ತನ್ನ ಮಗನೊಂದಿಗೆ ಸರ್ವಿಸ್‌ ಅಪಾರ್ಟ್‌ಮೆಂಟ್‌ (Service Apartment) ಒಂದರಲ್ಲಿ ಬಾಡಿಗೆಗೆ ಇದ್ದಳು. ಒಂದೆರಡು ದಿನ ಅಲ್ಲಿಯೇ ತಂಗಿದ್ದ ಸೇಠ್, ತಾನು ಯಾವುದೋ ಕೆಲಸಕ್ಕಾಗಿ ಬೆಂಗಳೂರಿಗೆ (Bengaluru) ಹೋಗಬೇಕೆಂದಿರುವೆ ಎಂದು ಅಪಾರ್ಟ್‌ಮೆಂಟ್ ಸಿಬ್ಬಂದಿಗೆ ತಿಳಿಸಿ ಟ್ಯಾಕ್ಸಿಗೆ (Taxi) ವ್ಯವಸ್ಥೆ ಮಾಡುವಂತೆ ಕೇಳಿಕೊಂಡಿದ್ದಾಳೆ.

    ಈ ವೇಳೆ ಅಲ್ಲಿನ ಸಿಬ್ಬಂದಿ, ದುಬಾರಿ ಟ್ಯಾಕ್ಸಿಯನ್ನು ಬಾಡಿಗೆಗೆ ತೆಗೆದುಕೊಳ್ಳುವ ಬದಲು ಬೆಂಗಳೂರಿಗೆ ವಿಮಾನದಲ್ಲಿ (Flight) ಹೋಗುವಂತೆ ಸೂಚಿಸಿದ್ದಾರೆ. ಆಗ ಸೇಠ್‌, ತಾನು ಟ್ಯಾಕ್ಸಿಯಲ್ಲಿಯೇ ಹೋಗಬೇಕು ಎಂದು ಹಠಕ್ಕೆ ಬಿದ್ದಳು. ಹೀಗಾಗಿ ಜನವರಿ 8 ರಂದು ಆಕೆಗೆ ವಾಹನದ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಳು.

    ಇತ್ತ ಸೇಠ್ ಹೊರಗಡೆ ಬರುತ್ತಿದ್ದಂತೆಯೇ ಅಪಾರ್ಟ್‌ಮೆಂಟ್ ಸಿಬ್ಬಂದಿ ಆಕೆ ತಂಗಿದ್ದ ಕೊಠಡಿಯನ್ನು‌ ಕ್ಲೀನ್‌ ಮಾಡಲು ಹೋಗಿದ್ದಾರೆ. ಈ ವೇಳೆ ಟವೆಲ್‌ನಲ್ಲಿ ರಕ್ತದ ಕಲೆಗಳು ಇರುವುದು ಕಂಡುಬಂದಿದೆ. ಕೂಡಲೇ ಸಿಬ್ಬಂದಿ ಅಪಾರ್ಟ್‌ಮೆಂಟ್‌ನ ಆಡಳಿತ ಮಂಡಳಿಗೆ ವಿಷಯ ಮುಟ್ಟಿಸಿದ್ದಾರೆ. ಅವರು ಕಲಾಂಗುಟೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ತನ್ನ ಮುದ್ದಿನ ಪುತ್ರನನ್ನು ಕೊಂದ ಸುಚನಾ ಸೇಠ್‌ ಯಾರು?

    ಸೇಠ್‌ ಅಪಾರ್ಟ್‌ಮೆಂಟ್‌ನಿಂದ ಹೊರಬಂದಾಗ ಆಕೆಯ ಪುತ್ರ ಕಾಣಲಿಲ್ಲ. ಕೈಯಲ್ಲಿ ಭಾರವಾದ ಸೂಟ್‌ಕೇಸ್‌ ಹಿಡಿದುಕೊಂಡು ಹೋಗಿರುವುದಾಗಿ ಸಿಬ್ಬಂದಿ ಪೊಲೀಸರಿಗೆ ತಿಳಿಸಿದ್ದಾರೆ. ಹೀಗಾಗಿ ಪೊಲೀಸರು ಅಪಾರ್ಟ್‌ ಮೆಂಟ್‌ಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಪೊಲೀಸರು, ಆಕೆಗೆ ಕರೆ ಮಾಡಿ ಕರೆದು ರಕ್ತದ ಕಲೆಗಳು ಮತ್ತು ಕಾಣೆಯಾದ ಮಗನ ಬಗ್ಗೆ ಕೇಳಿದರು. ಈ ವೇಳೆ ಆಕೆ, ಪೀರಿಯೆಡ್ಸ್‌ ಆಗಿದ್ದು, ಅದರ ಕಲೆಗಳು ಉಂಟಾಗಿವೆ ಎಂದು ಸುಳ್ಳು ಹೇಳುವ ಮೂಲಕ ಬಚಾವ್‌ ಆಗಲು ಯತ್ನಿಸಿದ್ದಾಳೆ.

    ಇನ್ನು ಮಗನ ಬಗ್ಗೆ ಕೇಳಿದ್ದಕ್ಕೆ ಆತ ದಕ್ಷಿಣ ಗೋವಾದ ಮಾರ್ಗೋ ಪಟ್ಟಣದಲ್ಲಿ ತನ್ನ ಸ್ನೇಹಿತನೊಂದಿಗೆ ಇದ್ದಾನೆ ಎಂದು ಹೇಳುತ್ತಾ ಅಲ್ಲಿನ ವಿಳಾಸವನ್ನು ನೀಡಿದ್ದಾಳೆ. ಪೊಲೀಸರು ತಕ್ಷಣವೇ ಫಟೋರ್ಡಾ ಪೊಲೀಸರ ಸಹಾಯವನ್ನು ಪಡೆದರು (ಮಾರ್ಗೋವ್ ಬಳಿ) ಮತ್ತು ಆಕೆ ನೀಡಿದ ವಿಳಾಸ ನಕಲಿ ಎಂಬುದನ್ನು ತಿಳಿದುಕೊಂಡರು. ಇತ್ತ ಸೇಠ್‌ ಕರೆದೊಯ್ಯುತ್ತಿದ್ದ ಟ್ಯಾಕ್ಸಿ ಡ್ರೈವರ್‌ಗೆ ಇನ್ಸ್‌ಪೆಕ್ಟರ್ ಕರೆಮಾಡಿ ಬೆಂಗಳೂರಿಗೆ ಹೋಗಬೇಡ, ಬದಲಾಗಿ ಹತ್ತಿರದ ಪೊಲೀಸ್‌ ಠಾಣೆ ಕಡೆ ಹೋಗುವಂತೆ ಸೂಚಿಸಿದ್ದಾರೆ. ಅಂತೆಯೇ ಆತ ಚಿತ್ರದುರ್ಗದ ಐಮಂಗಲ ಪೊಲೀಸ್‌ ಠಾಣೆಯತ್ತ ತನ್ನ ವಾಹನವನ್ನು ತಿರುಗಿಸಿದ್ದಾನೆ.

    ಚಿತ್ರದುರ್ಗದ ಪೊಲೀಸರು ಮಹಿಳೆಯ ಬ್ಯಾಗ್ ಅನ್ನು ಪರಿಶೀಲಿಸಿದಾಗ ಅದರಲ್ಲಿ ಮಗುವಿನ ಶವ ಪತ್ತೆಯಾಗಿದೆ. ನಂತರ ಕಲಾಂಗಗುಟ್ ಪೊಲೀಸ್ ತಂಡವು ಚಿತ್ರದುರ್ಗಕ್ಕೆ ಧಾವಿಸಿ ಆರೋಪಿಯನ್ನು ವಶಕ್ಕೆ ಪಡೆದು ಗೋವಾಕ್ಕೆ ಕರೆತರಲಾಯಿತು. ಸದ್ಯ ಜಕಾರ್ತದಲ್ಲಿರುವ ಆರೋಪಿಯ ಪತಿ ವೆಂಕಟ್ ರಾಮನ್ ಅವರಿಗೆ ಘಟನೆಯ ಬಗ್ಗೆ ಪೊಲೀಸರು ಮಾಹಿತಿ ನೀಡಿರುವುದಾಗಿ ಕ್ಯಾಲಂಗುಟ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಪರೇಶ್ ನಾಯ್ಕ್ ಘಟನೆಯ ಬಗ್ಗೆ ವಿವರಿಸಿದ್ದಾರೆ.

  • ತನ್ನ ಮುದ್ದಿನ ಪುತ್ರನನ್ನು ಕೊಂದ ಸುಚನಾ ಸೇಠ್‌ ಯಾರು?

    ತನ್ನ ಮುದ್ದಿನ ಪುತ್ರನನ್ನು ಕೊಂದ ಸುಚನಾ ಸೇಠ್‌ ಯಾರು?

    ಪಣಜಿ: ಗೋವಾದಲ್ಲಿ ತನ್ನ ನಾಲ್ಕು ವರ್ಷದ ಮಗನನ್ನು ಕೊಂದ ಆರೋಪದ ಮೇಲೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸ್ಟಾರ್ಟಪ್ ಕಂಪನಿಯ CEO 39 ವರ್ಷದ ಸುಚನಾ ಸೇಠ್ ಳನ್ನು (Suchana Seth) ಬಂಧಿಸಲಾಗಿದೆ. ಪುತ್ರನ ಮೃತದೇಹವನ್ನು ಸೂಟ್‌ಕೇಸ್‌ನಲ್ಲಿ ತುಂಬಿಸಿ ಗೋವಾದಿಂದ ಕರ್ನಾಟಕದ ಕಡೆ ಪ್ರಯಾಣಿಸುವಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ. ಈ ಕ್ರೂರ ವರ್ತನೆ ತೋರಿದ ಸುಚನಾ ಸೇಠ್‌ ಯಾರು ಎಂಬುದನ್ನು ನೋಡೋಣ.

    The Mindful AI Labನ ಸಿಇಒ ಆಗಿರುವ ಸುಚನಾ ಸೇಠ್, ಕಳೆದ ನಾಲ್ಕು ವರ್ಷಗಳಿಂದ ಈ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಳು. ಈ ಸಂಸ್ಥೆಯು ಕೃತಕ ಬುದ್ಧಿಮತ್ತೆಯ ಸುಧಾರಣೆಯತ್ತ ಗಮನ ಕೇಂದ್ರೀಕರಿಸಿತ್ತು. 2021 ರ ಎಐ ಎಥಿಕ್ಸ್‌ನಲ್ಲಿ ಟಾಪ್ 100 ಬ್ರಿಲಿಯಂಟ್ ಮಹಿಳೆಯರಲ್ಲಿ ಈಕೆಯೂ ಒಬ್ಬಳಾಗಿದ್ದಾಳೆ. ಇದನ್ನೂ ಓದಿ: ಗೋವಾದಲ್ಲಿ ಹೆತ್ತ ಮಗುವನ್ನೇ ಹತ್ಯೆಗೈದ ಬೆಂಗ್ಳೂರಿನ CEO – ಸೂಟ್‌ಕೇಸ್‌ನಲ್ಲಿ ಶವವಿಟ್ಕೊಂಡು ಹೋಗುವಾಗ ಅರೆಸ್ಟ್

    AI ನೀತಿಶಾಸ್ತ್ರ ತಜ್ಞ ಮತ್ತು ಡೇಟಾ ವಿಜ್ಞಾನಿಯಾಗಿದ್ದು, ಡೇಟಾ ಸೈನ್ಸ್ ತಂಡಗಳಿಗೆ ಮಾರ್ಗದರ್ಶನ ನೀಡುವಲ್ಲಿ 12 ವರ್ಷಗಳ ಅನುಭವವನ್ನು ಹೊಂದಿದ್ದಾಳೆ. ಸುಚನಾ ಸೇಟ್ ಬರ್ಕ್ ಮನ್ ಕ್ಲೈನ್ ಸೆಂಟರ್ ನ ಅಂಗಸಂಸ್ಥೆಯಾಗಿ ಎರಡು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದಳು. ಅಲ್ಲಿ ಅವರು ಕೃತಕ ಬುದ್ಧಿಮತ್ತೆ ನಿರ್ವಹಣೆಯ ಮೌಲ್ಯಗಳಿಗೆ ಕೊಡುಗೆ ನೀಡಿದ್ದಳು. ಇದಲ್ಲದೆ ಮೆಸ್ಸಾಚುಸ್ಸೆಟ್ಸ್ ನ ಬೋಸ್ಟನ್ ನಲ್ಲಿ ಜವಾಬ್ದಾರಿಯುತ ಯಂತ್ರ ಕಲಿಕೆಯನ್ನೂ ನಡೆಸಿದ್ದಳು.

    The Minduful AI Lab ಅನ್ನು ಸ್ಥಾಪಿಸುವುದಕ್ಕೂ ಮುನ್ನ ಬೆಂಗಳೂರಿನ ಬೂಮರಾಂಗ್ ಕಾಮರ್ಸ್ ಸಂಸ್ಥೆಯಲ್ಲಿ ಹಿರಿಯ ದತ್ತಾಂಶ ಎಂಜಿನಿಯರ್ ಆಗಿದ್ದಳು. ಕೋಲ್ಕತ್ತಾ ವಿಶ್ವವಿದ್ಯಾಲಯದಿಂದ ಖಗೋಳ ಭೌತವಿಜ್ಞಾನದೊಂದಿಗೆ ಪ್ಲಾಸ್ಮಾ ಭೌತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನೂ ಸುಚನಾ ಸೇಠ್ ಪಡೆದಿದ್ದಾಳೆ.

    2020ರಲ್ಲಿ ತನ್ನ ಪತಿಯಿಂದ ಸುಚನಾ ಸೇಠ್‌ ವಿಚ್ಛೇದನ ಪಡೆದಿದ್ದಳು. ಆ ಬಳಿಕ ಪ್ರತಿ ರವಿವಾರ ತಮ್ಮ ಪುತ್ರನನ್ನು ನೋಡಲು ಸುಚನಾ ಸೇಠ್ ಪತಿಗೆ ಕೋರ್ಟ್ ಅನುಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಒಂದು ವೇಳೆ ಪತಿಯು ತನ್ನ ಪುತ್ರನನ್ನು ಭೇಟಿಯಾಗಲು ಪ್ರಾರಂಭಿಸಿದರೆ, ಆತನ ಮೇಲೆ ಪತಿ ಹಿಡಿತ ಸಾಧಿಸಬಹುದು ಎಂದು ಸುಚನಾ ಭಯಭೀತಳಾಗಿದ್ದಳು. ಹೀಗಾಗಿ ತನ್ನ ಪುತ್ರನನ್ನು ಭೇಟಿಯಾಗಲು ಪತಿ ಬರುವುದಕ್ಕೂ ಮುಂಚಿತವಾಗಿಯೇ ಆತನನ್ನು ಕೊಲೆ ಮಾಡಿದ್ದಾಳೆ ಎಂದು ತಿಳಿದು ಬಂದಿದೆ.

    ಸುಚನಾ ಪಶ್ಚಿಮ ಬಂಗಾಳ ಮೂಲದವಳಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದಾಳೆ. ಸುಚನಾ ಪತಿ ಕೇರಳದವರಾಗಿದ್ದು, ಪ್ರಸ್ತುತ ಇಂಡೋನೇಷ್ಯಾದಲ್ಲಿದ್ದಾರೆ. ಅವರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಉತ್ತರ) ನಿಧಿನ್ ವಲ್ಸನ್ ತಿಳಿಸಿದ್ದಾರೆ.

    ಪ್ರಕರಣ ಸಂಬಂಧ ಸುಚನಾ ಸೇಠ್ ಳನ್ನು ಭಾನುವಾರ ರಾತ್ರಿ ಚಿತ್ರದುರ್ಗದಲ್ಲಿ ಗೋವಾ ಪೊಲೀಸರು ಬಂಧಿಸಿದ್ದಾರೆ. ಪುತ್ರನ ಹತ್ಯೆಯ ಹಿಂದಿನ ಉದ್ದೇಶ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

  • ಗೋವಾದಲ್ಲಿ ಹೆತ್ತ ಮಗುವನ್ನೇ ಹತ್ಯೆಗೈದ ಬೆಂಗ್ಳೂರಿನ CEO – ಸೂಟ್‌ಕೇಸ್‌ನಲ್ಲಿ ಶವವಿಟ್ಕೊಂಡು ಹೋಗುವಾಗ ಅರೆಸ್ಟ್

    ಗೋವಾದಲ್ಲಿ ಹೆತ್ತ ಮಗುವನ್ನೇ ಹತ್ಯೆಗೈದ ಬೆಂಗ್ಳೂರಿನ CEO – ಸೂಟ್‌ಕೇಸ್‌ನಲ್ಲಿ ಶವವಿಟ್ಕೊಂಡು ಹೋಗುವಾಗ ಅರೆಸ್ಟ್

    ಚಿತ್ರದುರ್ಗ: ಸ್ವಂತ ಮಗುವನ್ನೇ ಹತ್ಯೆಗೈದು ಸೂಟ್‌ಕೇಸ್‌ನಲ್ಲಿ ಶವವಿಟ್ಟುಕೊಂಡು ತೆರಳುತ್ತಿದ್ದ‌ ಮಹಿಳೆಯನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಐಮಂಗಲ ಠಾಣೆ ಪೊಲೀಸರು (Chitradurga Police Station) ಬಂಧಿಸಿರುವ ಘಟನೆ ನಡೆದಿದೆ.

    ಗೋವಾದಿಂದ ಬೆಂಗಳೂರಿಗೆ (Goa To Bengaluru) ತೆರಳುತ್ತಿದ್ದ ಸ್ಟಾರ್ಟ್‌ಅಪ್ ಫೌಂಡರ್ ಮತ್ತು ಸಿಇಓ ಸುಚನಾ ಸೇಠ್ (Suchana Seth) ವಿರುದ್ಧ ಗೋವಾದ ಹೋಟೆಲ್‌ನಲ್ಲಿ ಮಗುವನ್ನು ಹತ್ಯೆ ಮಾಡಿರುವ ಆರೋಪ ಕೇಳಿಬಂದಿತ್ತು. ಸುಚನಾ ಸೇಠ್ ಅವರು ಶನಿವಾರ ತನ್ನ ಮಗನೊಂದಿಗೆ ಉತ್ತರ ಗೋವಾದ ಕ್ಯಾಂಡೋಲಿಮ್‌ನಲ್ಲಿರುವ ಸೋಲ್ ಬನಿಯನ್ ಗ್ರಾಂಡೆಗೆ ಭೇಟಿ ನೀಡಿದ್ದರು. ಸೋಮವಾರ ಹೋಟೆಲ್ ತೊರೆಯುವಾಗ ಒಬ್ಬಂಟಿಯಾಗಿದ್ದರು. ತಾನು ಬೆಂಗಳೂರಿಗೆ ಟ್ಯಾಕ್ಸಿ ಕಾಯ್ದಿರಿಸುವಂತೆ ಹೋಟೆಲ್ ಸಿಬ್ಬಂದಿಯನ್ನ ಕೇಳಿದ್ದಾಳೆ. ಅವರು ವಿಮಾನ ಸೌಲಭ್ಯ ಇರುವ ಸಲಹೆ ನೀಡಿದರೂ ಟ್ಯಾಕ್ಸಿ (Taxi) ತೆಗೆದುಕೊಳ್ಳುವಂತೆ ಆಕೆ ಒತ್ತಾಯಿಸಿದ್ದಾಳೆ ಎಂದು ಸಿಬ್ಬಂದಿ ತಿಳಿಸಿದ್ದಾರೆ.

    ಆಕೆ ಹೋಟೆಲ್‌ನಿಂದ (Hotel) ಹೊರಗೆ ಹೋದ ಬಳಿಕ ಮಗು ಇಲ್ಲದಿದ್ದನ್ನು ಸಿಬ್ಬಂದಿ ಗಮನಿಸಿದ್ದಾರೆ. ಅಲ್ಲದೇ ಆಕೆ ತಂಗಿದ್ದ ಹೋಟೆಲ್ ಶುಚಿಗೊಳಿಸಲು ಹೋದಾಗ ರಕ್ತದ ಕಲೆಗಳು ಕಂಡುಬಂದಿವೆ. ಈ ಹಿನ್ನೆಲೆಯಲ್ಲಿ ಅನುಮಾನಗೊಂಡ ಹೋಟೆಲ್ ಸಿಬ್ಬಂದಿ, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ – ಬೆಂಗ್ಳೂರು, ಮಂಡ್ಯ ಸೇರಿ ರಾಜ್ಯದ 30 ಕಡೆ ದಾಳಿ

    ನಂತರ ಗೋವಾ ಪೊಲೀಸರು ಹೋಟೆಲ್ ಸಿಬ್ಬಂದಿ ಕರೆಸಿದ್ದ ಟ್ಯಾಕ್ಸಿ ಡ್ರೈವರ್ ಸಂಪರ್ಕಿಸಿ ಆಕೆಯೊಂದಿಗೆ ಮಾತನಾಡಲು ಹೇಳಿದ್ದಾರೆ. ಆಕೆಯ ಮಗನ ಬಗ್ಗೆ ಕೇಳಿದಾಗ ಅವನು ಸ್ನೇಹಿತನೊಂದಿಗೆ ಇರುವುದಾಗಿ ಹೇಳಿಕೊಂಡಿದ್ದಳು. ಆತನ ವಿಳಾಸವನ್ನೂ ನೀಡಿದ್ದಳು. ಪೊಲೀಸರು ಆ ವಿಳಾಸವನ್ನ ಪರಿಶೀಲಿಸಿದಾಗ ನಕಲಿಯಾಗಿತ್ತು. ನಂತರ ಟ್ಯಾಕ್ಸಿ ಡ್ರೈವರ್‌ಗೆ ಹೈವೆಬಳಿ ಪೊಲೀಸರು ಕಂಡಾಕ್ಷಣ ಟ್ಯಾಕ್ಸಿ ನಿಲ್ಲಿಸುವಂತೆ ತಿಳಿಸಿದ್ದಾರೆ.

    ನಂತರ ಟ್ಯಾಕ್ಸಿ ಚಾಲಕ ರಾಷ್ಟ್ರೀಯ ಹೆದ್ದಾರಿ-4ರ ಬಳಿಯ ಐಮಂಗಲ ಠಾಣೆ ಪೊಲೀಸರಿಗೆ ಆಕೆಯನ್ನ ಒಪ್ಪಿಸಿದ್ದಾನೆ. ಬಳಿಕ ಟ್ಯಾಕ್ಸಿ ತಪಾಸಣೆ ಮಾಡಿದ ಐಮಂಗಲ ಪೊಲೀಸರಿಗೆ ಟ್ಯಾಕ್ಸಿ ಡಿಕ್ಕಿಯಲ್ಲಿದ್ದ ಸೂಟ್‌ಕೇಸ್‌ನಲ್ಲಿ ಮಗುವಿನ ಶವಪತ್ತೆಯಾಗಿದೆ. ಸದ್ಯ ಮಗುವಿನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಸುಚನಾಳನ್ನ ಗೋವಾ ಪೊಲೀಸರಿಗೆ ಒಪ್ಪಿಸಿರುವುದಾಗಿ ಐಮಂಗಲ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಯಶ್‌ ನೋಡುವ ಕಾತುರದಲ್ಲಿ ಬೈಕ್‌ ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ಅಭಿಮಾನಿ ಸಾವು

    ಮಾಹಿತಿ ಪ್ರಕಾರ ಸುಚನಾ ಸೇಠ್, 2021ರ AI ನೀತಿಶಾಸ್ತ್ರದಲ್ಲಿ 100 ಉತ್ತಮ ಮಹಿಳೆಯರ ಪೈಕಿ ಒಬ್ಬರು. ಡೇಟಾ ಸೈನ್ಸ್ ಮತ್ತು ಸ್ಟಾರ್ಟ್ಅಪ್ ಉದ್ಯಮಗಳಲ್ಲಿ 12 ವರ್ಷಗಳ ಅನುಭವ ಹೊಂದಿರುವುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ಅಶ್ಲೀಲ ಪದ ಬಳಸುತ್ತಿದ್ದ, ಖಾಸಗಿ ಅಂಗ ಮುಟ್ಟುತ್ತಿದ್ದ – ಪ್ರಾಧ್ಯಾಪಕನ ವಿರುದ್ಧ 500 ವಿದ್ಯಾರ್ಥಿನಿಯರಿಂದ ಮೋದಿ ಕಚೇರಿಗೆ ಪತ್ರ