Tag: Sucide Bomb

  • ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ – 13 ಸೈನಿಕರು ಸಾವು

    ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ – 13 ಸೈನಿಕರು ಸಾವು

    – ಅಧಿಕಾರಿಗಳು ಸೇರಿ 29 ಜನರಿಗೆ ಗಾಯ

    ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ವಜೀರಿಸ್ತಾನ್ ಜಿಲ್ಲೆಯಲ್ಲಿ ನಡೆದ ಆತ್ಮಾಹುತಿ ಬಾಂಬ್  (Sucide Bomb) ದಾಳಿಯಲ್ಲಿ 13 ಪಾಕ್ ಸೈನಿಕರು ಸಾವನ್ನಪ್ಪಿದ್ದಾರೆ. ಸ್ಥಳೀಯ ಅಧಿಕಾರಿಗಳು ಸೇರಿ 29 ಜನರು ಗಾಯಗೊಂಡಿದ್ದಾರೆ.

    ಆತ್ಮಾಹುತಿ ಬಾಂಬ್ ಇದ್ದ ವಾಹನವು ಮಿಲಿಟರಿ ಬೆಂಗಾವಲು ಪಡೆಯ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಂಬ್ ಸ್ಫೋಟಗೊಂಡಿದೆ. ಇದರಿಂದ 13 ಸೈನಿಕರು ಸಾವನ್ನಪ್ಪಿದ್ದಾರೆ. ಜೊತೆಗೆ ಎರಡು ಮನೆಯ ಛಾವಣಿ ಕುಸಿದು 6 ಮಕ್ಕಳು, 10 ಜನ ಸೇನಾ ಸಿಬ್ಬಂದಿ ಸೇರಿದಂತೆ ಒಟ್ಟು 29 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನೂ ಓದಿ: `ಆಪರೇಷನ್ ಸಿಂಧೂರ’ದಲ್ಲಿ ನಿರ್ನಾಮವಾದ ಉಗ್ರರ ಲಾಂಚ್ ಪ್ಯಾಡ್ ಮರುನಿರ್ಮಾಣ ಮಾಡುತ್ತಿದೆ ಪಾಕ್‌

    ಗಾಯಗೊಂಡವರ ಪೈಕಿ ನಾಲ್ವರು ಸೈನಿಕರ ಸ್ಥಿತಿ ಗಂಭೀರವಾಗಿದೆ. ಆರಂಭದಲ್ಲಿ ಈ ಆತ್ಮಾಹುತಿ ದಾಳಿಯ ಹೊಣೆಯನ್ನು ಯಾರು ಹೊತ್ತುಕೊಂಡಿರಲಿಲ್ಲ. ಆದರೆ ಈ ಸ್ಥಳದಲ್ಲಿ ಆಗಾಗ ಪಾಕಿಸ್ತಾನಿ ತಾಲಿಬಾನ್ ಉಗ್ರರು ದಾಳಿ ನಡೆಸುತ್ತಿರುತ್ತಾರೆ. ಹೀಗಾಗಿ ಅವರೇ ಈ ದಾಳಿಯನ್ನು ಕೂಡ ನಡೆಸಿರಬಹುದು ಎಂದು ಅಂದಾಜಿಸಲಾಗಿತ್ತು. ಸದ್ಯ ಪಾಕಿಸ್ತಾನಿ ತಾಲಿಬಾನ್‌ನ ಒಂದು ಬಣವಾದ ಹಫೀಜ್ ಗುಲ್ ಬಹದ್ದೂರ್ ತಂಡ ದಾಳಿ ನಡೆಸಿರಬಹುದು ಎಂದು ವರದಿಯಾಗಿದೆ.

    ಇದಕ್ಕೂ ಮುನ್ನ 2021ರಲ್ಲಿ ಕಾಬೂಲ್‌ನಲ್ಲಿ ತಾಲಿಬಾನ್ ಅಧಿಕಾರಕ್ಕೆ ಬಂದಾಗ ಅಫ್ಘಾನಿಸ್ತಾನದ ಗಡಿಯಲ್ಲಿನ ಪಾಕಿಸ್ತಾನದ ಪ್ರದೇಶಗಳಲ್ಲಿ ತೀವ್ರ ಹಿಂಸಾಚಾರ ನಡೆದಿತ್ತು. ಈ ವರ್ಷದ ಆರಂಭದಿಂದ ಈವರೆಗೂ ಖೈಬರ್ ಪಖ್ತುಂಖ್ವಾ ಮತ್ತು ಬಲೂಚಿಸ್ತಾನದಲ್ಲಿ ಸರ್ಕಾರದ ವಿರುದ್ಧ ಸಶಸ್ತ್ರ ಗುಂಪುಗಳು ನಡೆಸಿದ ದಾಳಿಯಲ್ಲಿ 290ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ.ಇದನ್ನೂ ಓದಿ: ಬೂಕರ್‌ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್‌ರಿಂದ ಈ ಬಾರಿ ದಸರಾ ಉದ್ಘಾಟನೆ?