Tag: Sudha murthy

  • ಇನ್ಫೋಸಿಸ್‌ನವ್ರು ಏನ್ ಬಹಳ ಬೃಹಸ್ಪತಿಗಳಾ?: ಜಾತಿಗಣತಿಯಲ್ಲಿ ಭಾಗವಹಿಸದ್ದಕ್ಕೆ ಸಿಎಂ ಟಾಂಗ್

    ಇನ್ಫೋಸಿಸ್‌ನವ್ರು ಏನ್ ಬಹಳ ಬೃಹಸ್ಪತಿಗಳಾ?: ಜಾತಿಗಣತಿಯಲ್ಲಿ ಭಾಗವಹಿಸದ್ದಕ್ಕೆ ಸಿಎಂ ಟಾಂಗ್

    ಮೈಸೂರು: ಇನ್ಫೋಸಿಸ್‌ನವರು (Infosys) ಏನು ಬಹಳ ಬೃಹಸ್ಪತಿಗಳಾ ಎಂದು ಜಾತಿಗಣತಿ ಸಮೀಕ್ಷೆಗೆ ಒಪ್ಪದ ನಾರಾಯಣ ಮೂರ್ತಿ ದಂಪತಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಟಾಂಗ್ ಕೊಟ್ಟರು.

    ನಗರದಲ್ಲಿ ಮಾತನಾಡಿದ ಸಿಎಂ, ಇದು ಹಿಂದುಳಿದ ವರ್ಗದ ಜಾತಿ ಸಮೀಕ್ಷೆ ಅಲ್ಲ. ಎಲ್ಲಾ ಜಾತಿಗಳ ಸಮೀಕ್ಷೆ. ಇದನ್ನ ಅರ್ಥ ಮಾಡಿಕೊಳ್ಳದಿದ್ದರೆ ನಾವು ಏನು ಮಾಡುವುದು? ಇದು ಅಜ್ಞಾನವೋ ಉದ್ದೇಶಪೂರ್ವಕವೊ ಅವರಿಗೆ ಗೊತ್ತು. ಮೇಲ್ಜಾತಿಯವರು ಗೃಹಜ್ಯೋತಿ ಪಡೆಯುತ್ತಿಲ್ವಾ? ಮೇಲ್ಜಾತಿ ಮಹಿಳೆಯರು ಬಸ್‌ನಲ್ಲಿ ಉಚಿತವಾಗಿ ಓಡಾಡುತ್ತಿಲ್ವಾ? ಇದು ಕೂಡ ಅದೇ ರೀತಿ. ಎಲ್ಲಾ ಜಾತಿಯವರಿಗೆ ಮಾಡುತ್ತಿರುವ ಸಮೀಕ್ಷೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಸರ್ಕಾರದ ವಿರುದ್ಧ ಗುತ್ತಿಗೆದಾರರಿಂದ ಕಮಿಷನ್ ಬಾಂಬ್ – ಡಿಸೆಂಬರ್‌ ಒಳಗಡೆ ಬಿಡುಗಡೆಗೆ ಆಗ್ರಹ

    ಬಿಹಾರ ಚುನಾವಣೆ ಫಲಿತಾಂಶ ರಾಜ್ಯದ ಮೇಲೆ ಯಾವ ಪರಿಣಾಮ ಬೀರುವುದಿಲ್ಲ. ಬಿಹಾರದಲ್ಲಿ ನಮ್ಮ ಮೈತ್ರಿ ಒಕ್ಕೂಟ ಗೆಲುವು ಪಡೆಯುವ ಸಾಧ್ಯತೆ ಇದೆ. ನನ್ನ ಪ್ರಚಾರದ ಅಗತ್ಯ ಇದ್ರೆ ನಾನು ಪ್ರಚಾರಕ್ಕೆ ಹೋಗುತ್ತೇನೆ. ನವೆಂಬರ್‌ನಲ್ಲಿ ಯಾವ ಕ್ರಾಂತಿಯೂ ಇಲ್ಲ, ಬ್ರಾಂತಿಯೂ ಇಲ್ಲ. ಕ್ರಾಂತಿ ಕ್ರಾಂತಿ ಎಂದು ಹೇಳುವವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಸುಮ್ಮನೆ ಏನೇನೊ ಹೇಳುತ್ತಾರೆ. ಮಾಧ್ಯಮದವರು ಆ ಹೇಳಿಕೆಗಳಿಗೆ ಪ್ರಚಾರ ಕೊಡುವುದನ್ನ ನಿಲ್ಲಿಸಲಿ. ಆಗ ಅವರೇ ಸುಮ್ಮನಾಗುತ್ತಾರೆ ಎಂದು ತಿಳಿಸಿದರು.

    ಐಟಿ ಕಂಪನಿಗಳು ಆಂಧ್ರ ಪಾಲಾದ ಬಗ್ಗೆ ಮಾತನಾಡಿ, ಆಯಾ ಕಂಪನಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ರಾಜ್ಯಗಳನ್ನ ಆಯ್ಕೆ ಮಾಡಿಕೊಳ್ಳುತ್ತಾರೆ. ಒಂದು ಕಂಪನಿ ಬೇರೆ ರಾಜ್ಯಕ್ಕೆ ಹೋದ ಕೂಡಲೇ ಇಲ್ಲಿನ ವ್ಯವಸ್ಥೆ ಸರಿ ಇಲ್ಲ ಎಂದು ಹೇಳುವುದು ತಪ್ಪು. ಹೂಡಿಕೆಗಳ ವಿಚಾರದಲ್ಲಿ ಕರ್ನಾಟಕ ದೇಶದಲ್ಲೇ ನಂಬರ್ ಒನ್ ಸ್ಥಾನದಲ್ಲಿದೆ. ಹಾಗಾದರೆ ಅವರೆಲ್ಲ ಯಾಕೆ ನಮ್ಮಲ್ಲಿ ಉಳಿದುಕೊಂಡರು? ಆಂಧ್ರ ಐಟಿ ಸಚಿವರು ಟ್ವೀಟ್ ಮಾಡಿದ್ದು ನಮಗೆ ಗೊತ್ತಿಲ್ಲ. ಇದನ್ನ ಯಾರೋ ಸೃಷ್ಟಿ ಮಾಡುತ್ತಿರಬಹುದು ಎಂದರು. ಇದನ್ನೂ ಓದಿ: ಸರ್ಕಾರಿ ಜಾಗಗಳಲ್ಲಿ ನಮಾಜ್‌ ಮಾಡಲು ಅವಕಾಶ ಕೊಡಬೇಡಿ – ಸರ್ಕಾರಕ್ಕೆ ಯತ್ನಾಳ್‌ ಪತ್ರ

    5 ವರ್ಷ ನಮ್ಮ ತಂದೆಯೇ ಸಿಎಂ ಆಗಿರುತ್ತಾರೆ ಎಂಬ ಪುತ್ರನ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಅವನನ್ನೇ ಉಳಿದ ವಿಚಾರ ಕೇಳಿಕೊಳ್ಳಿ ಎಂದರು. ಗುತ್ತಿಗೆದಾರರ ಸಂಘದಿಂದ ಕಮಿಷನ್ ಆರೋಪ ಕುರಿತು ಮಾತನಾಡಿ, ಅದು ಸತ್ಯವಾಗಿದ್ರೆ ಅವರಿಗೆ ಕೋರ್ಟ್ಗೆ ಹೋಗುವುದಕ್ಕೆ ಹೇಳಿ. ಯಾರೋ ಇದನ್ನ ಅವರ ಬಳಿ ಹೇಳಿಸುತ್ತಿದ್ದಾರೆ ಎಂದರು.

    ಸರ್ಕಾರಿ ಶಾಲೆ, ಕಚೇರಿ ಜಾಗಗಳಲ್ಲಿ ನಿರ್ಬಂಧ ಹಾಕುತ್ತಿರುವುದು ಕೇವಲ ಆರ್‌ಎಸ್‌ಎಸ್‌ಗೆ ಮಾತ್ರ ಅನ್ವಯ ಅಲ್ಲ. ಎಲ್ಲ ಖಾಸಗಿ ಸಂಘ-ಸಂಸ್ಥೆಗಳಿಗೂ ಅನ್ವಯ ಆಗುತ್ತದೆ. ಈ ಸುತ್ತೋಲೆ ಹೊರಡಿಸಿರೋದೆ ಜಗದೀಶ್ ಶೆಟ್ಟರ್ ಸಿಎಂ ಆಗಿದ್ದಾಗ. ಬಿಜೆಪಿಯವರೇ ಮಾಡಿ, ಈಗ ವಿರೋಧ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

  • ಜಾತಿ ಸಮೀಕ್ಷೆಯಲ್ಲಿ ಭಾಗವಹಿಸಲ್ಲ ಎಂದ ಸುಧಾ, ನಾರಾಯಣ ಮೂರ್ತಿ ದಂಪತಿ

    ಜಾತಿ ಸಮೀಕ್ಷೆಯಲ್ಲಿ ಭಾಗವಹಿಸಲ್ಲ ಎಂದ ಸುಧಾ, ನಾರಾಯಣ ಮೂರ್ತಿ ದಂಪತಿ

    ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ (Socio Economic Survey) ಭಾಗವಹಿಸಲು ಇನ್ಫೋಸಿಸ್ ಸಂಸ್ಥಾಪಕ  ನಾರಾಯಣ ಮೂರ್ತಿ (N R Narayana murthy) ಹಾಗೂ ಸುಧಾ ನಾರಾಯಣ ಮೂರ್ತಿ (Sudha Murthy) ನಿರಾಕರಿಸಿದ್ದಾರೆ.

    ನಾವು ಹಿಂದುಳಿದ ವರ್ಗದ ಯಾವ ಜಾತಿಗೂ ಸೇರುವವರಲ್ಲ. ಆದ್ದರಿಂದ ಈ ಸಮೀಕ್ಷೆಯಿಂದ ಸರ್ಕಾರಕ್ಕೆ ಏನೂ ಉಪಯೋಗವಿಲ್ಲ. ಅದ್ದರರಿಂದ ನಾವು ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸ್ವಯಂ ದೃಢೀಕರಣ ಪತ್ರದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ:  ನ.1ರಿಂದ ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆ – ನಿವೇಶನಗಳಿಗಷ್ಟೇ ಎ ಖಾತೆ; ಕಟ್ಟಡಗಳ ಸಕ್ರಮ ಇಲ್ಲ

     
    ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಗಳ ಆಯೋಗದ ಮೂಲಕ ನಡೆಯುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನನ್ನ ಕೆಲವು ವೈಯಕ್ತಿಕ ಕಾರಣಗಳಿಂದ ಮಾಹಿತಿ ನೀಡಲು ನಿರಾಕರಿಸುತ್ತೇವೆ. ನಾನು ಮತ್ತು ನನ್ನ ಕುಟುಂಬ ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಮತ್ತು ನಮ್ಮ ಮಾಹಿತಿಯನ್ನು ನೀಡಲು ನಿರಾಕರಿಸಿದ್ದೇನೆ ಎಂದು ಈ ಮೂಲಕ ದೃಢೀಕರಿಸುತ್ತೇವೆ ಎಂದು ದಂಪತಿ ತಿಳಿಸಿದ್ದಾರೆ.

  • ಸುಧಾಮೂರ್ತಿಗೆ ಕರೆ ಮಾಡಿ ವಂಚನೆಗೆ ಯತ್ನಿಸಿದ್ದ ಸೈಬರ್‌ ಕಳ್ಳರು!

    ಸುಧಾಮೂರ್ತಿಗೆ ಕರೆ ಮಾಡಿ ವಂಚನೆಗೆ ಯತ್ನಿಸಿದ್ದ ಸೈಬರ್‌ ಕಳ್ಳರು!

    ಬೆಂಗಳೂರು: ಇನ್ಫೋಸಿಸ್ ಫೌಂಡೇಶನ್‌ನ ಮುಖ್ಯಸ್ಥೆ, ರಾಜ್ಯಸಭಾ ಸದಸ್ಯೆ ಡಾ. ಸುಧಾಮೂರ್ತಿ (Sudha Murthy) ಅವರಿಗೆ ಸೈಬರ್‌ ಕಳ್ಳರು ವಂಚನೆಗೆ ಯತ್ನಿಸಿದ ವಿಚಾರ ಈಗ ಬೆಳಕಿಗೆ ಬಂದಿದೆ.

    ಸ್ವತ: ಸುಧಾಮೂರ್ತಿ ಅವರೇ ಈ ವಿಚಾರವನ್ನು ವಿಡಿಯೋ ಮೂಲಕ ಬಹಿರಂಗಪಡಿಸಿದ್ದು ಸೈಬರ್‌ ಕಳ್ಳರ (Cyber Crime) ವಿರುದ್ಧ ದೂರು ನೀಡುವಂತೆ ಮನವಿ ಮಾಡಿದ್ದಾರೆ.

    ಸುಧಾಮೂರ್ತಿ ಹೇಳಿದ್ದೇನು?
    ಕಳೆದ ಸೆ.5ರಂದು ಓಣಂ ಹಬ್ಬದ ದಿನ ನನಗೆ ಪೋನ್ ಕರೆಬಂತು. ನಾನು ದೂರಸಂಪರ್ಕ ಸಚಿವಾಲಯದ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ. ಈ ಹಿಂದೆ ಇಲಾಖೆಯವರು ಅನ್ಯ ಕಾರಣಕ್ಕಾಗಿ ನನ್ನನ್ನು ಸಂಪರ್ಕಿಸಿದ್ದರು. ಹೀಗಾಗಿ ಮತ್ತೆ ಅವರೇ ಕರೆ ಮಾಡಿರಬಹುದು ಎಂದು ನಾನು ಭಾವಿಸಿದ್ದೆ.

    ನಿಮ್ಮ ನಂಬರ್ ಇದೇನಾ ಮೇಡಂ ಎಂದು ಹುಡುಗ ಕೇಳಿದ. ನಂತರ ಈ ಸಂಖ್ಯೆಯಿಂದ ಆಶ್ಲೀಲ ವಿಡಿಯೋಗಳು ಬರುತ್ತಿವೆ. 2 ಗಂಟೆಗಳಲ್ಲಿ ಮೊಬೈಲ್ ನಂಬರ್ ನಿಷ್ಕ್ರಿಯ ಮಾಡುತ್ತೇನೆ ಎಂದಿದ್ದ. ನನಗೆ ಆಶ್ವರ್ಯವಾಗಿ ಮೊದಲಿಗೆ ನನ್ನ ಬಳಿ ಆಶ್ಲೀಲ ವಿಡಿಯೋಗಳಿಲ್ಲ. ಹೀಗಿದ್ದರೂ ನನ್ನ ನಂಬರ್ ಯಾಕೆ ಬ್ಲಾಕ್ ಮಾಡುತ್ತಾರೆ ಎಂದುಕೊಂಡೆ.

    ಈ ವೇಳೆ ಜನವರಿಯಲ್ಲಿ ಆಧಾರ್ ಗೆ ಮೊಬೈಲ್ ನಂಬರ್ ಲಿಂಕ್ ಆಗಿದ್ಯಾ ಅಂತ ಪ್ರಶ್ನಿಸಿದ? ಅಷ್ಟೊತ್ತಿಗಾಗಲೇ ನನ್ನ ಸಹಾಯಕಿ ಬಂದು ಕರೆ ಕಟ್ ಮಾಡಿ ಎಂದರು. ಈ ವೇಳೆ ಕರೆ ಮಾಡಿದ ವ್ಯಕ್ತಿಯು ದೂರಸಂಪರ್ಕ ಇಲಾಖೆಯು ಪಿಎರ್‌ಒ ಎಂದು ಹೇಳಿದ. ಪರಿಶೀಲಿಸಿದಾಗ ಇದು ಸೈಬರ್ ವಂಚಕರ ವಂಚನೆ ಜಾಲ ಎನ್ನುವುದು ನನಗೆ ತಿಳಿಯಿತು.

    ಸೈಬರ್ ವಂಚಕರು ಅಧಿಕಾರಿ ಸೋಗಿನಲ್ಲಿ ವಂಚಿಸುವಲ್ಲಿ ನಿರತರಾಗಿದ್ದಾರೆ. ಹೀಗಾಗಿ ಅಪರಿಚಿತ ಕರೆ ಮಾಡಿದರೆ ಆತನ ಮಾತಿನ ದಾಟಿ ತಿಳಿದುಕೊಳ್ಳಿ. ಬ್ಯಾಂಕ್‌ ಖಾತೆ, ಆಧಾರ್ ಕಾರ್ಡ್, ಅರೆಸ್ಟ್ ವಾರೆಂಟ್ ಅಂತಾರೆ. ಅನುಮಾನಸ್ಪಾದ ಕರೆ ಬಂದರೆ ಕೂಡಲೇ 1930ಗೆ ಕರೆ ಮಾಡಿ, ಪೊಲೀಸರನ್ನು ಸಂಪರ್ಕಿಸಿ ನಿಮ್ಮ ಹಣವನ್ನ ಉಳಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

  • 64 ವರ್ಷಗಳಿಂದ ನಾನು ಭೈರಪ್ಪರನ್ನು ಬಲ್ಲೆ: ಸುಧಾ ಮೂರ್ತಿ

    64 ವರ್ಷಗಳಿಂದ ನಾನು ಭೈರಪ್ಪರನ್ನು ಬಲ್ಲೆ: ಸುಧಾ ಮೂರ್ತಿ

    ಬೆಂಗಳೂರು: ಕನ್ನಡ ಸಾಹಿತ್ಯ ಲೋಕದ ದಿಗ್ಗಜರನ್ನು ಕಳೆದುಕೊಂಡ ನೋವಾಗಿದೆ. ಕನ್ನಡ ಸಾಹಿತ್ಯಕ್ಕೆ ಅವರು ಕೊಟ್ಟ ಕೊಡುಗೆ ಅಪಾರ ಎಂದು ಲೇಖಕಿಯೂ ಆದ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ (Sudha Murthy) ನೆನಪಿಸಿಕೊಂಡಿದ್ದಾರೆ.

    ಎಸ್‌.ಎಲ್.ಭೈರಪ್ಪ (S.L.Bhyrappa) ಅವರ ನಿಧನ ಸುದ್ದಿ ಕೇಳಿ ಸುಧಾಮೂರ್ತಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾವಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಇದನ್ನೂ ಓದಿ: ಭೈರಪ್ಪರ ಸಾಹಿತ್ಯದಲ್ಲಿ ಬೇರೆ ಸಾಹಿತಿಗಳಂತೆ ಕಾಲ್ಪನಿಕತೆ ಇರಲಿಲ್ಲ, ವಸ್ತುನಿಷ್ಠತೆ ಇತ್ತು: ಪ್ರತಾಪ್‌ ಸಿಂಹ

    ನಾನು 11 ವರ್ಷದವಳು ಆಗಿದ್ದಾಗಿನಿಂದಲೂ ಭೈರಪ್ಪನವರ ಪರಿಚಯವಿತ್ತು. ಕಳೆದ 64 ವರ್ಷಗಳಿಂದ ಅವರನ್ನು ನಾನು ಬಲ್ಲೆ. ನಮ್ಮ ಹುಬ್ಬಳ್ಳಿಯ ಕಾಡುಸಿದ್ದೇಶ್ವರ ಕಾಲೇಜಿನ ಉಪನ್ಯಾಸಕರಾಗಿ ಕೆಲಸ ಮಾಡಿದ್ದರು. ಆಗ ನಮ್ಮ ಮನೆಯ ಹಿಂದುಗಡೆಯೇ ಇದ್ದರು ಎಂದು ಸುಧಾಮೂರ್ತಿ ಮಾತನಾಡಿದ್ದಾರೆ.

    ಭೈರಪ್ಪ ಅವರ ಎಲ್ಲಾ ಕಾದಂಬರಿಗಳು ಶ್ರೇಷ್ಠವಾಗಿವೆ. ನನಗೆ ಅನೇಕ ಕಾದಂಬರಿಗಳು ಪ್ರಿಯವಾಗಿವೆ. ಅವರ ಸಾಕಷ್ಟು ಕೃತಿಗಳನ್ನು ಓದಿದ್ದೇನೆ. ಇನ್ನೊಬ್ಬರ ಮನಸ್ಸಿನ ಒಳಗೆ ಹೋಗಿ, ಆ ಭಾವನೆಗಳನ್ನು ಲೇಖನ ರೂಪದಲ್ಲಿ ಅಭಿವ್ಯಕ್ತಿಸಿದ ಸಾಹಿತಿಗಳು ಬಹಳ ಕಡಿಮೆ ತಿಳಿಸಿದ್ದಾರೆ. ಇದನ್ನೂ ಓದಿ: ಕನ್ನಡ ಸಾಹಿತ್ಯ ಲೋಕದ ಅಕ್ಷರ ಮಾಂತ್ರಿಕ ಎಸ್‌ಎಲ್‌ ಭೈರಪ್ಪ ಇನ್ನಿಲ್ಲ

    ಒಳ್ಳೆಯ ಕಲಾವಿದರು, ವಿದ್ವಾಂಸರು, ನೇರ ನುಡಿಯ ವ್ಯಕ್ತಿತ್ವದವರು. ಬಹಳ ದುಃಖದಿಂದ ಭೈರಪ್ಪನವರಿಗೆ ನಾವು ವಿದಾಯ ಹೇಳುತ್ತಿದ್ದೇವೆ ಎಂದು ಮಾತನಾಡಿದ್ದಾರೆ.

  • ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಗೆ ಸೈಬರ್ ವಂಚನೆಗೆ ಯತ್ನ – ದೂರು ದಾಖಲು

    ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಗೆ ಸೈಬರ್ ವಂಚನೆಗೆ ಯತ್ನ – ದೂರು ದಾಖಲು

    ಬೆಂಗಳೂರು: ಇನ್ಫೋಸಿಸ್ (Infosys) ಮುಖ್ಯಸ್ಥೆ ಹಾಗೂ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ (Sudha Murthy) ಅವರಿಗೆ ಸೈಬರ್ ವಂಚನೆಗೆ ಯತ್ನಿಸಿದ್ದು, ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ (Cyber Crime Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸೆ.5 ರಂದು ಸುಧಾಮೂರ್ತಿ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ, ದೂರ ಸಂಪರ್ಕ ಸಚಿವಾಲಯದ ಉದ್ಯೋಗಿ ಎಂದು ಹೇಳಿಕೊಂಡಿದ್ದ. ಬಳಿಕ ನಿಮ್ಮ ಮೊಬೈಲ್ ನಂಬರ್ ಅನ್ನು ಆಧಾರ್‌ಗೆ ಲಿಂಕ್ ಮಾಡದೆ ನೋಂದಾಯಿಸಲಾಗಿದೆ ಎಂದಿದ್ದ. ಇದನ್ನೂ ಓದಿ: ಸಂಸದ ಸುಧಾಕರ್‌ ಪತ್ನಿ ಹೌಸ್‌ ಅರೆಸ್ಟ್‌ – 14 ಲಕ್ಷ ದೋಚಿದ ಸೈಬರ್‌ ಕಳ್ಳರು

    ಹಾಗಾಗಿ ವ್ಯೆಯಕ್ತಿಕ ಮಾಹಿತಿ ನೀಡಿ ಅಂತಾ ಮಾಹಿತಿ ಕೇಳಿದ್ದ. ಅಲ್ಲದೇ ನಿಮ್ಮ ನಂಬರ್‌ನಿಂದ ಅಶ್ಲೀಲ ವೀಡಿಯೋ ಕಳಿಸಲಾಗ್ತಿದೆ. ಅದನ್ನ ನಾನು ನಿಲ್ಲಿಸಿದ್ದೇನೆ ಎಂದೆಲ್ಲ ಹೇಳಿದ್ದ.

    ಈ ವೇಳೆ ಅನುಮಾನಗೊಂಡ ಸುಧಾಮೂರ್ತಿ ಅವರು, ಕರೆದ ಬಂದಿದ್ದ ನಂಬರ್‌ ಅನ್ನು ಟ್ರೂಕಾಲರ್ ಮೂಲಕ ಪರಿಶೀಲಿಸಿದ್ದರು. ಈ ವೇಳೆ ಟ್ರೂಕಾಲರ್‌ನಲ್ಲಿ ಟೆಲಿಕಾಂ ಡೆಪಾರ್ಟ್ಮೆಂಟ್ ಎಂದು ಬಂದಿತ್ತು. ಇದರಿಂದ ಎಚ್ಚೆತ್ತುಕೊಂಡ ಅವರು ಸೈಬರ್ ವಂಚಕರ ಟ್ರ‍್ಯಾಪ್‌ಗೆ ಒಳಗಾಗದೆ ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ವಂಚಕನ ವಿರುದ್ಧ ಠಾಣೆಗೆ ದೂರು ನೀಡಿದ್ದಾರೆ.

  • ನನಗೆ 7ರಿಂದ 8 ಭಾಷೆಗಳು ಗೊತ್ತು: ತ್ರಿಭಾಷಾ ಸೂತ್ರಕ್ಕೆ ಸುಧಾ ಮೂರ್ತಿ ಬೆಂಬಲ

    ನನಗೆ 7ರಿಂದ 8 ಭಾಷೆಗಳು ಗೊತ್ತು: ತ್ರಿಭಾಷಾ ಸೂತ್ರಕ್ಕೆ ಸುಧಾ ಮೂರ್ತಿ ಬೆಂಬಲ

    ನವದೆಹಲಿ: ಪರ-ವಿರೋಧದ ಚರ್ಚೆಗೆ ಗ್ರಾಸವಾಗಿರುವ ತ್ರಿಭಾಷಾ ಸೂತ್ರಕ್ಕೆ (Three Language) ರಾಜ್ಯಸಭಾ ಸಂಸದೆ ಸುಧಾ ಮೂರ್ತಿ (Sudha Murthy) ಬೆಂಬಲ ವ್ಯಕ್ತಪಡಿಸಿದ್ದಾರೆ.

    ಒಬ್ಬರು ಬಹು ಭಾಷೆಗಳನ್ನು ಕಲಿಯಬಹುದು. ನನಗೂ 7ರಿಂದ 8 ಭಾಷೆಗಳು ಗೊತ್ತು. ಆದ್ದರಿಂದ ನಾನು ಕಲಿಯುವುದನ್ನು ಆನಂದಿಸುತ್ತೇನೆ. ಇದರಿಂದ ವಿದ್ಯಾರ್ಥಿಗಳು ಕೂಡ ಸಾಕಷ್ಟು ಕಲಿಯಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

    ಸಂಸತ್ತಿನಲ್ಲಿ NEP ಕುರಿತು ತಮ್ಮ ನಿಲುವನ್ನು ಸಮರ್ಥಿಸಿಕೊಂಡ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, DMK ರಾಜಕೀಯ ಲಾಭಕ್ಕಾಗಿ ಈ ವಿಷಯವನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ. ಸುಧಾಮೂರ್ತಿ ಅವರೊಂದಿಗಿನ ತಮ್ಮ ಸಂಭಾಷಣೆಯನ್ನು ಸಹ ಅವರು ಉಲ್ಲೇಖಿಸಿದ್ದಾರೆ. ಯಾರೂ ಯಾರ ಮೇಲೂ ಏನನ್ನೂ ಹೇರುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ನಾನು ಸುಧಾಮೂರ್ತಿ ಅವರನ್ನು ನಿಮಗೆ ಎಷ್ಟು ಭಾಷೆಗಳು ಗೊತ್ತು ಎಂದು ಕೇಳಿದೆ. ಅದಕ್ಕೆ ಅವರು ಹುಟ್ಟಿನಿಂದ ಕನ್ನಡತಿ, ವೃತ್ತಿಯಿಂದ ಇಂಗ್ಲಿಷ್ ಕಲಿತಿದ್ದೇನೆ. ಅಭ್ಯಾಸದಿಂದ ಸಂಸ್ಕೃತ, ಹಿಂದಿ, ಒಡಿಯಾ, ತೆಲುಗು ಮತ್ತು ಮರಾಠಿ ಭಾಷೆಗಳನ್ನು ಕಲಿತಿದ್ದೇನೆ ಎಂದಿದ್ದರು. ಅದರಲ್ಲಿ ತಪ್ಪೇನು? ಸುಧಾಮೂರ್ತಿ ಅವರ ಮೇಲೆ ಈ ಭಾಷೆಗಳನ್ನು ಕಲಿಯುವಂತೆ ಯಾರು ಹೇರುತ್ತಿದ್ದಾರೆ? ಯಾರೂ ಯಾರ ಮೇಲೂ ಏನನ್ನೂ ಹೇರುತ್ತಿಲ್ಲ. ಇದು ಪ್ರಜಾಪ್ರಭುತ್ವ ಸಮಾಜ ಮತ್ತು ಕೆಲವೊಮ್ಮೆ ನೀವು ಬಹುಭಾಷಿಕರಾಗಿರಬೇಕು ಎಂದು ತಿಳಿಸಿದ್ದಾರೆ.

  • ಸ್ವಚ್ಛ, ಸುರಕ್ಷಿತ, ದೈವಿಕ, ಭವ್ಯ: ಮಹಾ ಕುಂಭಮೇಳ ಬಣ್ಣಿಸಿದ ಸಂಸದೆ ಸುಧಾಮೂರ್ತಿ

    ಸ್ವಚ್ಛ, ಸುರಕ್ಷಿತ, ದೈವಿಕ, ಭವ್ಯ: ಮಹಾ ಕುಂಭಮೇಳ ಬಣ್ಣಿಸಿದ ಸಂಸದೆ ಸುಧಾಮೂರ್ತಿ

    ಪ್ರಯಾಗ್‌ರಾಜ್‌: ಇಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದ (Maha Kumbh Mela) ವ್ಯವಸ್ಥೆಗಳ ಬಗ್ಗೆ ರಾಜ್ಯಸಭಾ ಸಂಸದೆ ಸುಧಾಮೂರ್ತಿ (Sudha Murthy) ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

    ಮಹಾ ಕುಂಭಮೇಳ ಸ್ವಚ್ಛ, ಸುರಕ್ಷಿತ, ದೈವಿಕ, ಭವ್ಯ ಮತ್ತು ಡಿಜಿಟಲ್ ಎಂದು ಬಣ್ಣಿಸಿದ್ದಾರೆ. ಮಹಾಕುಂಭ ವ್ಯವಸ್ಥೆಗಳ ಮಾದರಿಯು ಇತರ ಸರ್ಕಾರಗಳು ಅನುಸರಿಸಲು ಮಾನದಂಡವಾಗಿ ಕಾರ್ಯನಿರ್ವಹಿಸಬಹುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಹಾ ಕುಂಭಮೇಳದಲ್ಲಿ ಮಹಾಪ್ರಸಾದ ಸೇವೆ ನಮ್ಮ ಭಾಗ್ಯ: ಗೌತಮ್ ಅದಾನಿ

    ಸೋಮವಾರ ಮಹಾಕುಂಭದಲ್ಲಿ ಭಾಗವಹಿಸಲು ಪ್ರಯಾಗ್‌ರಾಜ್‌ಗೆ ಆಗಮಿಸಿದ್ದ ರಾಜ್ಯಸಭಾ ಸಂಸದೆ ಸುಧಾಮೂರ್ತಿ, ಕಾರ್ಯಕ್ರಮದ ವ್ಯವಸ್ಥೆ ಮತ್ತು ಸಂಘಟನೆಯಿಂದ ಪ್ರಭಾವಿತರಾಗಿದ್ದಾರೆ.

    ತುಂಬಾ ಚೆನ್ನಾಗಿ ವ್ಯವಸ್ಥೆ ಮಾಡಲಾಗಿದೆ. ಸ್ವಚ್ಛ, ಸುರಕ್ಷಿತ, ದೈವಿಕ, ಭವ್ಯ ಮತ್ತು ಡಿಜಿಟಲ್ ಆಗಿದೆ. ಇದು ನನ್ನ ಮೊದಲ ಕುಂಭ. ವ್ಯವಸ್ಥೆಗಳು ತುಂಬಾ ಚೆನ್ನಾಗಿವೆ. ಎಲ್ಲಾ ಸರ್ಕಾರಗಳು ಈ ಮಾದರಿಯನ್ನು ಅನುಸರಿಸಬಹುದು. ತುಂಬಾ ಒಳ್ಳೆಯ ಅನುಭವ ನೀಡಿತು ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಹಾ ಕುಂಭಮೇಳದಲ್ಲಿ ಬರೋಬ್ಬರಿ 10 ಕೋಟಿ ಭಕ್ತರಿಂದ ಪುಣ್ಯಸ್ನಾನ

    ಮಹಾ ಕುಂಭಮೇಳ ಆರಂಭವಾದಾಗಿನಿಂದ, 10.2 ಕೋಟಿಗೂ ಹೆಚ್ಚು ಜನರು ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಈ ಬೃಹತ್ ಆಧ್ಯಾತ್ಮಿಕ ಕಾರ್ಯಕ್ರಮವು ಅಭೂತಪೂರ್ವ ಭಕ್ತ ಸಮೂಹಕ್ಕೆ ಸಾಕ್ಷಿಯಾಗಿದೆ.

  • ಮಹಾ ಕುಂಭಮೇಳದಲ್ಲಿ ಮಹಾಪ್ರಸಾದ ಬಡಿಸಿದ ಸುಧಾ ಮೂರ್ತಿ

    ಮಹಾ ಕುಂಭಮೇಳದಲ್ಲಿ ಮಹಾಪ್ರಸಾದ ಬಡಿಸಿದ ಸುಧಾ ಮೂರ್ತಿ

    ಪ್ರಯಾಗ್‌ರಾಜ್: ಮಹಾ ಕುಂಭಮೇಳಕ್ಕೆ (Maha Kumbhmela) ತೆರಳಿರುವ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿಯವರ ಪತ್ನಿ ಮತ್ತು ರಾಜ್ಯಸಭಾ ಸಂಸದೆ ಸುಧಾ ಮೂರ್ತಿಯವರು (Sudha Murthy) ಇಸ್ಕಾನ್ ಶಿಬಿರದಲ್ಲಿ ಭಕ್ತರಿಗೆ ಮಹಾಪ್ರಸಾದ ಬಡಿಸಿದ್ದಾರೆ. ಆಹಾರ ಕೌಂಟರ್‌ನಲ್ಲಿ ನಿಂತು ಮಹಾ ಕುಂಭಮೇಳಕ್ಕೆ ಭೇಟಿ ನೀಡುವ ಭಕ್ತರಿಗೆ ಚಪಾತಿಗಳನ್ನು ವಿತರಿಸಿದ್ದಾರೆ.

    ಮಹಾಪ್ರಸಾದ ತಯಾರಿಕೆಗೆ ಅದಾನಿ ಗ್ರೂಪ್ ಹಾಗೂ ಇಸ್ಕಾನ್ ಸಹಯೋಗದೊಂದಿಗೆ ನಿರ್ಮಿಸಲಾದ ಅಡುಗೆ ಮನೆಯಲ್ಲಿರುವ ಯಂತ್ರಗಳನ್ನು ಇದೇ ವೇಳೆ ಸುಧಾ ಮೂರ್ತಿಯವರು ವೀಕ್ಷಿಸಿದ್ದಾರೆ. ಮಹಾ ಕುಂಭಮೇಳ ಪ್ರದೇಶದಲ್ಲಿ ಪ್ರತಿದಿನ 40 ಸಾವಿರಕ್ಕೂ ಹೆಚ್ಚು ಭಕ್ತರಿಗೆ ಮಹಾಪ್ರಸಾದವನ್ನು ವಿತರಿಸಲಾಗುತ್ತಿದೆ.

    ಮಹಾಪ್ರಸಾದವನ್ನು ತಯಾರಿಸಲು ಬಳಸುವ ಅಡುಗೆಮನೆ ನೀರನ್ನು ಬಿಸಿಮಾಡಲು ಮತ್ತು ತರಕಾರಿಗಳು ಮತ್ತು ಅಕ್ಕಿಯನ್ನು ಬೇಯಿಸಲು ಬಾಯ್ಲರ್‌ಗಳಂತಹ ಆಧುನಿಕ ಸೌಲಭ್ಯಗಳನ್ನು ಹೊಂದಿದೆ. ಭಾರವಾದ ಆಹಾರ ಪಾತ್ರೆಗಳನ್ನು ಸಾಗಿಸಲು ಟ್ರ್ಯಾಕ್‌ಗಳನ್ನು ಹಾಕಲಾಗಿದೆ. ರೊಟ್ಟಿ ತಯಾರಿಸಲು ಮೂರು ದೊಡ್ಡ ಯಂತ್ರಗಳನ್ನು ಸ್ಥಾಪಿಸಲಾಗಿದೆ. ಈ ಯಂತ್ರಗಳು ಒಟ್ಟಾಗಿ ಒಂದು ಗಂಟೆಯಲ್ಲಿ 10,000 ರೊಟ್ಟಿಗಳನ್ನು ತಯಾರಿಸುತ್ತವೆ.

    ಮಾಧ್ಯಮಗಳೊಂದಿಗೆ ಮಾತನಾಡುವಾಗ, ಮಹಾ ಕುಂಭವನ್ನು ʻತೀರ್ಥರಾಜʼ ಎಂದರು. ಬಳಿಕ, ನನ್ನ ಮುತ್ತಜ್ಜ, ಅಜ್ಜಿ, ಅವರಲ್ಲಿ ಯಾರೂ ಇಲ್ಲಿಗೆ ಬರಲು ಸಾಧ್ಯವಾಗಲಿಲ್ಲ. ಅದಕ್ಕಾಗಿಯೇ ನಾನು ಅವರ ಹೆಸರಿನಲ್ಲಿ ತರ್ಪಣವನ್ನು ಅರ್ಪಿಸಬೇಕಾಗಿದೆ. ನಾನು ತುಂಬಾ ಸಂತೋಷವಾಗಿದ್ದೇನೆ ಎಂದಿದ್ದಾರೆ.

  • ಗುರು ರಾಯರ ದರ್ಶನ ಪಡೆದ ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಾಕ್

    ಗುರು ರಾಯರ ದರ್ಶನ ಪಡೆದ ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಾಕ್

    – ಅಳಿಯ, ಪುತ್ರಿಯ ಜೊತೆ ಪೂಜೆ ಸಲ್ಲಿಸಿದ ಸುಧಾಮೂರ್ತಿ

    ಬೆಂಗಳೂರು: ಬ್ರಿಟನ್ ಮಾಜಿ ಪ್ರಧಾನಿ ಹಾಗೂ ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ (Sudha Murthy) ಅವರ ಅಳಿಯ ರಿಷಿ ಸುನಾಕ್ (Rishi Sunak) ಅವರು ಬೆಂಗಳೂರಿಗೆ ಭೇಟಿ ನೀಡಿದ್ದಾರೆ.

    ಮಂಗಳವಾರ ಬೆಂಗಳೂರಿಗೆ ಪತ್ನಿ ಜೊತೆ ಆಗಮಿಸಿದ್ದ ಸುನಾಕ್ ಅವರು ಬಳಿಕ ರಾಘವೇಂದ್ರ ಮಠಕ್ಕೆ ತೆರಳಿ ಗುರು ರಾಯರ ದರ್ಶನ ಪಡೆದಿದ್ದಾರೆ. ಇದನ್ನೂ ಓದಿ: ಡ್ರೈ ಪೋರ್ಟ್ ಎಂದರೇನು?  ಬಿಹಾರದಲ್ಲಿ ಅದರ ಅವಶ್ಯಕತೆ ಏನಿತ್ತು? 

    ಜಯನಗರದ ನಂಜನಗೂಡು ಶ್ರೀಗುರು ರಾಘವೇಂದ್ರ ಮಠಕ್ಕೆ ಕುಟುಂಬ ಸಮೇತ ಸುನಾಕ್ ಭೇಟಿ ಕೊಟ್ಟಿದ್ದಾರೆ. ಸುಧಾಮೂರ್ತಿ ದಂಪತಿ, ಅಳಿಯ ಋಷಿ ಸುನಾಕ್ ದಂಪತಿ ಮಠಕ್ಕೆ ಭೇಟಿ ಕೊಟ್ಟಿದ್ದಾರೆ.

    ಕಾರ್ತಿಕ ಮಾಸದ ಪ್ರಯುಕ್ತ ರಾಯರ ಸನ್ನಿಧಿಯಲ್ಲಿ ದೀಪ ಬೆಳಗಿಸಿ ವಿಶೇಷ ಪೂಜೆ ಸಲ್ಲಿಸಿದರು. ಶ್ರೀಮಠದ ಹಿರಿಯ ವ್ಯವಸ್ಥಾಪಕ ಆರ್.ಕೆ.ವಾದಿಂದ್ರಾಚಾರ್ಯ ಅವರು ರಾಯರ ಶೇಷ ವಸ್ತ್ರ, ಫಲಮಂತ್ರಾಕ್ಷತೆ ಕೊಟ್ಟು ಆಶೀರ್ವದಿಸಿದರು. ಇದನ್ನೂ ಓದಿ: MUDA Case: ಇಂದು ಮೈಸೂರು ‘ಲೋಕಾ’ ಕಚೇರಿಯಲ್ಲಿ ಸಿಎಂ ವಿಚಾರಣೆ

  • ರತನ್‌ ಟಾಟಾರದ್ದು ಸಮಗ್ರ ವ್ಯಕ್ತಿತ್ವ: ಸುಧಾ ಮೂರ್ತಿ

    ರತನ್‌ ಟಾಟಾರದ್ದು ಸಮಗ್ರ ವ್ಯಕ್ತಿತ್ವ: ಸುಧಾ ಮೂರ್ತಿ

    ಬೆಂಗಳೂರು: ರತನ್‌ ಟಾಟಾ ಅವರದ್ದು ಸಮಗ್ರ ವ್ಯಕ್ತಿತ್ವ, ನಾನು ಅವರ ಮನೆಯಿಂದ ಮಾತ್ರ ಪರೋಪಕಾರವನ್ನು ಕಲಿಯುತ್ತೇನೆ. ಅವರ ನಿಧನ ನನಗೆ ವೈಯಕ್ತಿಕ ನಷ್ಟ ಎಂದು ಲೇಖಕಿ ಹಾಗೂ ಸಂಸದೆ ಸುಧಾ ಮೂರ್ತಿಯವರು ಹೇಳಿದ್ದಾರೆ.

    ಬೆಂಗಳೂರಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರತನ್ ಟಾಟಾ ಅವರನ್ನು ಭೇಟಿಯಾಗಿದ್ದೆ. ಅವರು ಪ್ರಾಮಾಣಿಕತೆ, ಸರಳತೆ, ಯಾವಾಗಲೂ ಇತರರ ಕಾಳಜಿ ವಹಿಸುವ ಮತ್ತು ಸಹಾನುಭೂತಿ ಹೊಂದಿರುವ ವ್ಯಕ್ತಿಯಾಗಿದ್ದರು. ಅಪಾರ ತಾಳ್ಮೆ, ಅಪರೂಪದ ವ್ಯಕ್ತಿತ್ವದ ಮೂಲಕ ಅವರು ದಂತಕಥೆಯಾಗಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.

    ಈ ಹಿಂದೆ ರತನ್ ಟಾಟಾ (Ratan Tata), ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಕೆಟಿ ಥಾಮಸ್(KT Thomas) ಮತ್ತು ಲೋಕಸಭೆಯ ಮಾಜಿ ಉಪ ಸ್ಪೀಕರ್ ಕರಿಯಾ ಮುಂಡಾ(Kariya Munda) ಅವರನ್ನು ಪಿಎಂ-ಕೇರ್ಸ್ ಫಂಡ್(PM CARES Fund ) ಟ್ರಸ್ಟಿಗಳಾಗಿ ನಾಮನಿರ್ದೇಶನ ಮಾಡಲಾಗಿತ್ತು. ಇದೇ ವೇಳೆ ಭಾರತದ ಮಾಜಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ರಾಜೀವ್ ಮೆಹ್ರಿಷಿ, ಇನ್ಫೋಸಿಸ್(Infosys) ಫೌಂಡೇಶನ್‌ನ ಮಾಜಿ ಅಧ್ಯಕ್ಷೆ ಸುಧಾ ಮೂರ್ತಿ(Sudha Murthy) ಮತ್ತು ಇಂಡಿಕಾರ್ಪ್ಸ್ ಮತ್ತು ಪಿರಮಲ್ ಫೌಂಡೇಶನ್‌ನ ಮಾಜಿ ಸಿಇಒ ಆನಂದ್ ಶಾ ಅವರನ್ನು ಪಿಎಂ ಕೇರ್ಸ್ ನಿಧಿಯ ಸಲಹಾ ಮಂಡಳಿಗೆ ನಾಮನಿರ್ದೇಶನ ಮಾಡಲಾಗಿತ್ತು.

    ಉದ್ಯಮಿಯಾಗಿ ಸಾರ್ಥಕ ಬದುಕು ನಡೆಸಿದ ರತನ್‌ ಟಾಟಾ (Ratan Tata) ಅವರ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ. ಕೈಗಾರಿಕೋದ್ಯಮಿ ರತನ್ ಟಾಟಾ (Ratan Tata) ಅವರ ಅಂತ್ಯಕ್ರಿಯೆಯನ್ನು (Funeral) ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಹೇಳಿದ್ದಾರೆ.

    ಅನಾರೋಗ್ಯ ಹಿನ್ನೆಲೆ ಮುಂಬೈನ (Mumbai) ಬ್ರೀಚ್ ಕಾಂಡಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅವರು ಬುಧವಾರ ಕೊನೆಯುಸಿರೆಳೆದಿದ್ದಾರೆ.