Tag: Sudhanshu Trivedi

  • ಮೋದಿ ಸರ್ಕಾರದಿಂದ ಪ್ರಜಾಪ್ರಭುತ್ವದ ಮೇಲೆ ದಾಳಿ; ರಾಗಾ ಹೇಳಿಕೆಗೆ ಬಿಜೆಪಿ ತಿರುಗೇಟು

    ಮೋದಿ ಸರ್ಕಾರದಿಂದ ಪ್ರಜಾಪ್ರಭುತ್ವದ ಮೇಲೆ ದಾಳಿ; ರಾಗಾ ಹೇಳಿಕೆಗೆ ಬಿಜೆಪಿ ತಿರುಗೇಟು

    ನವದೆಹಲಿ: ಭಾರತದಲ್ಲಿ ಪ್ರಜಾಪ್ರಭುತ್ವದ ಮೇಲೆ ಮೋದಿ ಸರ್ಕಾರದಿಂದ ದಾಳಿ ನಡೆಯುತ್ತಿದೆ ಎಂದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿಕೆಗೆ ಬಿಜೆಪಿ (BJP) ತಿರುಗೇಟು ನೀಡಿದೆ. ವಿದೇಶದಲ್ಲಿ ರಾಹುಲ್ ಗಾಂಧಿ ನೀಡಿರುವ ಕೆಲವು ಹೇಳಿಕೆಗಳು ಭಾರತದ ಹಿತಾಸಕ್ತಿಗಳಿಗೆ ಧಕ್ಕೆ ತರುತ್ತವೆ ಎಂದು ವಾಗ್ದಾಳಿ ನಡೆಸಿದೆ.

    ಈ ಬಗ್ಗೆ ಬಿಜೆಪಿ ನಾಯಕ ಸುಧಾಂಶು ತ್ರಿವೇದಿ (Sudhanshu Trivedi) ಪ್ರತಿಕ್ರಿಯಿಸಿದ್ದು, ರಾಹುಲ್ ಗಾಂಧಿ ಇಂತಹ ಹೇಳಿಕೆ ಮೊದಲ ಬಾರಿಗೆ ನೀಡುತ್ತಿಲ್ಲ. 2017 ಮತ್ತು 2023ರ ನಡುವೆ ಕೊಲಂಬಿಯಾ ವಿಶ್ವವಿದ್ಯಾಲಯ, ಲಂಡನ್‌ನ ಚಾಥಮ್ ಹೌಸ್, ಸ್ಟ್ಯಾನ್‌ಫೋರ್ಡ್, ದುಬೈ, ಸಿಂಗಾಪುರ, ಮಲೇಷ್ಯಾ, ಬಹ್ರೇನ್ ಮತ್ತು ಯುನೈಟೆಡ್ ಸ್ಟೇಟ್ಸ್ ಸೇರಿದಂತೆ ಹಲವು ದೇಶಗಳಲ್ಲಿ ಭಾರತದ ವಿರುದ್ಧ ಇಂತಹದೇ ಹೇಳಿಕೆ ನೀಡಿದ್ದಾರೆ ಎಂದು ಕಿಡಿಕಾರಿದ್ದಾರೆ.

    ಇಂತಹ ಹೇಳಿಕೆಗಳು ಭಾರತ ವಿರೋಧಿ ಭಾವನೆಯನ್ನು ಪ್ರತಿಬಿಂಬಿಸುತ್ತವೆ. ಭಾರತದ ಸಮಸ್ಯೆಗಳಿಗೆ ಬ್ರಿಟಿಷರೇ ಕಾರಣ ಎಂದು 1931ರಲ್ಲಿ ಚಾಥಮ್ ಹೌಸ್‌ನಲ್ಲಿ ಮಹಾತ್ಮ ಗಾಂಧಿ ಮಾಡಿದ ಭಾಷಣವನ್ನು ಉಲ್ಲೇಖಿಸಿದ ಅವರು, ಕೊಲಂಬಿಯಾ ಮತ್ತು ಸ್ಟ್ಯಾನ್‌ಫೋರ್ಡ್ನಂತಹ ಸಂಸ್ಥೆಗಳಲ್ಲಿ ರಾಹುಲ್ ಗಾಂಧಿಯವರ ಇತ್ತೀಚಿನ ಹೇಳಿಕೆಗಳು ಸೂಕ್ತವೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮೋದಿ ಸರ್ಕಾರದಿಂದ ಪ್ರಜಾಪ್ರಭುತ್ವದ ಮೇಲೆ ದಾಳಿ – ಕೊಲಂಬಿಯಾದಲ್ಲಿ ರಾಹುಲ್‌ ವಾಗ್ದಾಳಿ

    ಭಾರತದಲ್ಲಿ ತೀವ್ರ ಬಡತನವು 2.3% ಕ್ಕೆ ಇಳಿದಿದೆ ಎಂದು ತೋರಿಸುವ ಜುಲೈ 2025ರ ವಿಶ್ವ ಬ್ಯಾಂಕಿನ ವರದಿಯನ್ನು ಅವರು ಉಲ್ಲೇಖಿಸಿ, ಅಂತರರಾಷ್ಟ್ರೀಯ ಭೇಟಿಗಳ ಸಮಯದಲ್ಲಿ ರಾಹುಲ್ ಗಾಂಧಿ ಈ ಸಾಧನೆಗಳನ್ನು ಗುರುತಿಸಲು ಅಥವಾ ಪ್ರಶಂಸಿಸಲು ವಿಫಲರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಪರಂಪರೆಯು ವಿದೇಶಿ ಸಂಪರ್ಕಗಳ ಮೇಲೆ ಅವಲಂಬಿತವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ರಾಹುಲ್ ಗಾಂಧಿಯವರು ವಿದೇಶದ ವೇದಿಕೆಗಳಲ್ಲಿ ಭಾರತ ಸರ್ಕಾರದ ನೀತಿಗಳನ್ನು ಟೀಕಿಸುವ ಮೂಲಕ ದೇಶದ ವಿರುದ್ಧ ಪ್ರಚಾರ ಮಾಡುತ್ತಿದ್ದಾರೆ. ಇದು ರಾಷ್ಟ್ರೀಯ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ. ಭಾರತದ ಆಂತರಿಕ ವಿಷಯಗಳನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಒಡ್ಡಿವೆ ಎಂದು ಕಿಡಿಕಾರಿದ್ದಾರೆ.

  • ರಾಹುಲ್ ಗಾಂಧಿ ಇಡೀ ಹಿಂದೂ ಸಮಾಜ ಅವಮಾನಿಸಿದ್ದಾರೆ: ಅಶ್ವಿನಿ ವೈಷ್ಣವ್

    ರಾಹುಲ್ ಗಾಂಧಿ ಇಡೀ ಹಿಂದೂ ಸಮಾಜ ಅವಮಾನಿಸಿದ್ದಾರೆ: ಅಶ್ವಿನಿ ವೈಷ್ಣವ್

    ನವದೆಹಲಿ: ರಾಹುಲ್ ಗಾಂಧಿಯವರು (Rahul Gandhi) ಇಡೀ ಹಿಂದೂ ಸಮಾಜವನ್ನು ಹಿಂಸಾತ್ಮಕ ಮತ್ತು ಅಸತ್ಯ ಎಂದು ಕರೆದಿದ್ದಾರೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಆರೋಪಿಸಿದ್ದಾರೆ.

    ಸಂಸತ್‍ನ ಲೈಬ್ರರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ಇಡೀ ಹಿಂದೂ ಸಮಾಜವನ್ನು ಅವಮಾನಿಸಿದ್ದಾರೆ. ಇದು ಇದೇ ಮೊದಲಲ್ಲ, ಇದು ಕಾಂಗ್ರೆಸ್‍ನ ಹಳೆಯ ಚಾಳಿಯಾಗಿದೆ. 2010ರಲ್ಲಿ ಅಂದಿನ ಗೃಹ ಸಚಿವ ಪಿ.ಚಿದಂಬರಂ ಅವರು ಕೂಡ ಹಿಂದೂಗಳನ್ನು ಭಯೋತ್ಪಾದಕರು ಎಂದು ಕರೆದಿದ್ದರು. ಈಗ ಹಿಂದೂಗಳನ್ನು ಹಿಂಸಾತ್ಮಕ ಮತ್ತು ಸುಳ್ಳುಗಾರರು ಎಂದು ಕರೆಯುವ ಮೂಲಕ ರಾಹುಲ್ ವಿರೋಧ ಪಕ್ಷದ ನಾಯಕನ ಸ್ಥಾನದ ಘನತೆಯನ್ನು ತಗ್ಗಿಸಿದ್ದಾರೆ ಎಂದು ದೂರಿದ್ದಾರೆ. ಇದನ್ನೂ ಓದಿ: ಮಾನನಷ್ಟ ಕೇಸ್- ಹೋರಾಟಗಾರ್ತಿ ಮೇಧಾ ಪಾಟ್ಕರ್‌ಗೆ 5 ತಿಂಗಳು ಜೈಲು

    ಸಂಸತ್ತಿನ ಚರ್ಚೆಯ ಸಮಯದಲ್ಲಿ ದೇವರ ಚಿತ್ರಗಳನ್ನು ತೋರಿಸಿ ರಾಜಕೀಯವನ್ನು ಸೇರಿಸುವುದು ವಿರೋಧ ಪಕ್ಷದ ನಾಯಕನಿಗೆ ಯಾವುದೇ ರೀತಿಯಲ್ಲಿ ಸರಿಹೊಂದುವುದಿಲ್ಲ. ಪ್ರತಿಪಕ್ಷ ನಾಯಕನ ಸ್ಥಾನವು ಅತ್ಯಂತ ಜವಾಬ್ದಾರಿಯುತ ಸ್ಥಾನವಾಗಿದೆ. ಮೊದಲ ಬಾರಿಗೆ ಜವಾಬ್ದಾರಿಯನ್ನು ತೆಗೆದುಕೊಂಡಿದ್ದಾರೆ. ಆದರೆ ಅವರು ಮೊದಲ ಬಾರಿಗೆ ಅತ್ಯಂತ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

    ಹುತಾತ್ಮ ಸೈನಿಕರಿಗೆ ಪರಿಹಾರ ನೀಡುವುದಿಲ್ಲ ಎಂದು ರಾಹುಲ್ ಹೇಳಿದ್ದಾರೆ. ಇದಕ್ಕಿಂತ ದೊಡ್ಡ ಸುಳ್ಳು ಇನ್ನೊಂದಿಲ್ಲ. ಒಂದು ಕೋಟಿ ರೂ. ಪರಿಹಾರ ನೀಡಲಾಗುತ್ತಿದೆ ಎಂಬುದನ್ನು ಸ್ಪಷ್ಟಪಡಿಸಲಾಗಿದೆ. ಸೈನ್ಯದ ಬಗ್ಗೆ ಕಾಂಗ್ರೆಸ್ ಪ್ರಶ್ನೆಗಳನ್ನು ಎತ್ತುವುದಿಲ್ಲ. ಯಾವಾಗಲೂ ಸೇನೆಯ ಮೇಲೆ ಇಂತಹ ಪ್ರಶ್ನೆಗಳನ್ನು ಎತ್ತುತ್ತದೆ ಮತ್ತು ದೇಶವನ್ನು ದಾರಿ ತಪ್ಪಿಸುತ್ತದೆ ಎಂದು ಅವರು ಕಿಡಿಕಾರಿದ್ದಾರೆ.

    ಬಿಜೆಪಿ ಸಂಸದ ಸುಧಾಂಶು ತ್ರಿವೇದಿ (Sudhanshu Trivedi) ಮಾತನಾಡಿ, 2013ರ ಜನವರಿ 20ರಂದು ಅಂದಿನ ಲೋಕಸಭೆಯ ಸಭಾನಾಯಕ ಸುಶೀಲ್ ಕುಮಾರ್ ಶಿಂಧೆಯವರು, ಜೈಪುರದಲ್ಲಿ ಬಿಜೆಪಿ ಮತ್ತು ಆರ್‍ಎಸ್‍ಎಸ್‍ನಿಂದ ಹಿಂಸಾತ್ಮಕ ಚಟುವಟಿಕೆಗಳು ಮತ್ತು ತರಬೇತಿ ಶಿಬಿರಗಳು ನಡೆಯುತ್ತಿವೆ ಎಂದಿದ್ದರು. ಸದನದಲ್ಲಿ ಈ ಬಗ್ಗೆ ಪ್ರಶ್ನೆಯನ್ನು ಕೇಳಿದಾಗ ಅವರು ವಿಷಾದ ವ್ಯಕ್ತಪಡಿಸಿದ್ದರು. ರಾಹುಲ್ ಅವರು ಸುಶೀಲ್ ಕುಮಾರ್ ಶಿಂಧೆಯವರಿಂದ ಪಾಠವನ್ನು ಕಲಿಯಬೇಕು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ರಾಹುಲ್‌ Vs ನರೇಂದ್ರ ಮೋದಿ – ಲೋಕಸಭೆಯಲ್ಲಿ ಗದ್ದಲಕ್ಕೆ ಕಾರಣವಾಯ್ತು ‘ಹಿಂದೂ’ ಹೇಳಿಕೆ