Tag: sugarcane farm

  • ಮಧ್ಯಪ್ರದೇಶ ಕಾರ್ಮಿಕರ ಅಕ್ರಮ ಬಂಧನ – ರಕ್ಷಣೆಗಾಗಿ ಎಂಪಿ ಡಿಸಿಗೆ ಕರೆ

    ಮಧ್ಯಪ್ರದೇಶ ಕಾರ್ಮಿಕರ ಅಕ್ರಮ ಬಂಧನ – ರಕ್ಷಣೆಗಾಗಿ ಎಂಪಿ ಡಿಸಿಗೆ ಕರೆ

    ವಿಜಯಪುರ: ಜಿಲ್ಲೆಯ ಇಂಡಿ ತಾಲೂಕು ಗುಬ್ಬೇವಾಡ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಮಧ್ಯಪ್ರದೇಶದ ಕಾರ್ಮಿಕರನ್ನು ಅಕ್ರಮ ಬಂಧನದಲ್ಲಿಡಲಾಗಿದ್ದು, ರಕ್ಷಣೆಗಾಗಿ ಕಾರ್ಮಿಕರು ಮಧ್ಯಪ್ರದೇಶ ಡಿಸಿಗೆ ಕರೆ ಮಾಡಿದ್ದಾರೆ.

    ಕಾರ್ಮಿಕರನ್ನು ಅಕ್ರಮವಾಗಿ ಬಂಧನದಲ್ಲಿ ಇಟ್ಟುಕೊಂಡಿದ್ದ ಗುಬ್ಬೇವಾಡ ಗ್ರಾಮದ ಜಮೀನು ಮಾಲಿಕ ಬಿರಾದಾರ್ ಹಾಗೂ ಮಧ್ಯಪ್ರದೇಶದ ರೋಹಿತ್ ಎನ್ನುವ ವ್ಯಕ್ತಿ. ಕಾರ್ಮಿಕರು ರಕ್ಷಣೆಗಾಗಿ ಮಧ್ಯಪ್ರದೇಶ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದ್ದರು. ಈ ಹಿನ್ನೆಲೆ ರಾತ್ರೋರಾತ್ರಿ ಇಂಡಿ ಪೊಲೀಸರಿಂದ ಅಕ್ರಮ ಬಂಧನದಲ್ಲಿದ್ದ ಮಧ್ಯಪ್ರದೇಶದ 10 ಮಕ್ಕಳು ಸೇರಿ 35 ಕಾರ್ಮಿಕರಿಗೆ ಬಂಧನದಿಂದ ಮುಕ್ತಿ ನೀಡಿದ್ದಾರೆ. ಇದನ್ನೂ ಓದಿ: ಬಾಲಕನ ಕಣ್ಣಿಗೆ ಮೊಳೆ ಹೊಡೆದು ವಿಚಿತ್ರವಾಗಿ ಸಾಯಿಸಿದ ಕ್ರೂರಿಗಳು!

    ತಡರಾತ್ರಿ ಜಮೀನಿಗೆ ಇಂಡಿ ಡಿವೈಎಸ್ಪಿ ಶ್ರೀಧರ ದೊಡ್ಡಿ ನೇತೃತ್ವದಲ್ಲಿ ದಾಳಿ ನಡೆದಿದೆ. ಜಮೀನು ಮಾಲಿಕ ಬಿರಾದಾರ್ ಕಾರ್ಮಿಕರನ್ನು ಅಕ್ರಮವಾಗಿ ಬಂಧನದಲ್ಲಿಟ್ಟುಕೊಂಡು ಕಬ್ಬು ಕಟಾವು ಮಾಡಿಸಿಕೊಳ್ಳುತ್ತಿದ್ದನು. ರೋಹಿತ್ ಎಂಬ ವಕ್ತಿಯು ಕಾರ್ಮಿಕರನ್ನು ಮಧ್ಯಪ್ರದೇಶದಿಂದ ಕರೆತಂದಿದ್ದನು. ಈ ವೇಳೆ ಕಾರ್ಮಿಕರು 100 ಟನ್ ಕಬ್ಬು ಕಟಾವು ಮಾಡಿದ್ದರು, ಸಹಿತ ಇನ್ನೂ 400 ಟನ್ ಕಬ್ಬು ಕಟಾವಿಗೆ ಬೆದರಿಕೆ ಹಾಕಿದ್ದರು. ಇದನ್ನೂ ಓದಿ: ಸಣ್ಣ ಸುಳಿವು ಸಿಗದಂತೆ ಹತ್ಯೆ ಮಾಡಿದ್ದ ಹಂತಕ ಕೊನೆಗೂ ಖಾಕಿ ಬಲೆಗೆ!

    ಕಾರ್ಮಿಕರು ಹೀಗಾಗಿ ಮಧ್ಯಪ್ರದೇಶದ ಜಿಲ್ಲಾಧಿಕಾರಿಗೆ ಕರೆ ಮಾಡಿ ಸಂಕಷ್ಟ ಹೇಳಿಕೊಂಡಿದ್ದರು. ಬಳಿಕ ಮಧ್ಯಪ್ರದೇಶ ಡಿಸಿ ಈ ಬಗ್ಗೆ ವಿಜಯಪುರ ಎಸ್ಪಿ ಆನಂದ ಕುಮಾರ್‌ಗೆ ಮಾಹಿತಿ ನೀಡಿದ್ದಾರೆ. ಬಳಿಕ ಎಸ್ಪಿ ಆನಂದ ಕುಮಾರ್ ಇಂಡಿ ಡಿವೈಎಸ್ಪಿ ಶ್ರೀಧರ ದೊಡ್ಡಿಗೆ ಕಾರ್ಮಿಕರ ರಕ್ಷಣೆಗೆ ಆದೇಶಿಸಿದ್ದಾರೆ. ಈ ವೇಳೆ ಡಿವೈಎಸ್ಪಿ ರಾತ್ರೋರಾತ್ರಿ ಕಾರ್ಯಾಚರಣೆ ಮಾಡಿ 35 ಕಾರ್ಮಿಕರು, 10 ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಪೊಲೀಸರು ಅವರನ್ನು ಅಕ್ರಮ ಬಂಧನದಿಂದ ರಕ್ಷಿಸುವುದಲ್ಲದೆ ರಾತ್ರಿಯೇ ಸೊಲ್ಲಾಪುರ ರೈಲು ನಿಲ್ದಾಣಕ್ಕೆ ಬಿಟ್ಟು ಬಂದಿದ್ದಾರೆ. ಕಾರ್ಮಿಕರನ್ನು ಅಲ್ಲಿಂದ ರೈಲು ಮೂಲಕ ಮಧ್ಯಪ್ರದೇಶಕ್ಕೆ ರವಾನೆ ಮಾಡಲಾಗಿದೆ.

  • ಕಬ್ಬು ಕಟಾವಿಗೆ ಬಂದಿದ್ದ ಬಾಲಕಿಯ ಅತ್ಯಾಚಾರಕ್ಕೆ ಯತ್ನ, ಕತ್ತು ಕೊಯ್ದು ಕೊಲೆ!

    ಕಬ್ಬು ಕಟಾವಿಗೆ ಬಂದಿದ್ದ ಬಾಲಕಿಯ ಅತ್ಯಾಚಾರಕ್ಕೆ ಯತ್ನ, ಕತ್ತು ಕೊಯ್ದು ಕೊಲೆ!

    – ಕುತ್ತಿಗೆಯಲ್ಲಿ ಸಿಲುಕಿದ ಚಾಕು

    ಮಂಡ್ಯ: ಕಬ್ಬು ಕಟಾವಿಗೆ ಬಂದಿದ್ದ 12 ವರ್ಷದ ಬಾಲಕಿಯ ಅತ್ಯಚಾರಕ್ಕೆ ಯತ್ನಿಸಿ, ಕತ್ತು ಕೊಯ್ದು ಕೊಲೆಗೈದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಬಾಲಕಿ ಮೂಲತಃ ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ನಿವಾಸಿ. ಕುಟುಂಬಸ್ಥರ ಜೊತೆ ಕಬ್ಬು ಕಟಾವಿಗೆ ಬಾಲಕಿ ಗದ್ದೆಗೆ ಬಂದಿದ್ದಳು. ಈ ವೇಳೆ ಬಾಲಕಿಯನ್ನ ಎಳೆದೊಯ್ದ ಕಾಮುಕ ಕಿರಾತಕರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ನಂತರ ಆಕೆಯ ಕತ್ತು ಕೊಯ್ದು ಬರ್ಬರವಾಗಿ ಕೊಲೆಗೈದು ಶವವನ್ನು ಕಬ್ಬಿನ ಗದ್ದೆಯಲ್ಲಿ ಎಸೆದು ಹೋಗಿದ್ದಾರೆ.

    ಘಟನಾ ಸ್ಥಳಕ್ಕೆ ಕೊಪ್ಪ ಪೊಲೀಸರು ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಮೃತದೇಹವನ್ನ ಮರಣೋತ್ತರ ಶವ ಪರೀಕ್ಷೆಗಾಗಿ ಮದ್ದೂರು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ತುತ್ತಿನ ಚೀಲ ತುಂಬಿಸಿಕೊಳ್ಳಲು ಬಂದಿದ್ದ ಕುಟುಂಬ ಮಗಳನ್ನ ಕಳೆದುಕೊಂಡು ಕಣ್ಣೀರು ಹಾಕುತ್ತಿದೆ.

  • ಕಬ್ಬಿನ ಗದ್ದೆಯಲ್ಲಿ ಜೋಡಿಯಿಂದ ಸೆಕ್ಸ್- ಅರೆನಗ್ನ ಮಾಡಿ ಜನರಿಂದ ಮೆರವಣಿಗೆ

    ಕಬ್ಬಿನ ಗದ್ದೆಯಲ್ಲಿ ಜೋಡಿಯಿಂದ ಸೆಕ್ಸ್- ಅರೆನಗ್ನ ಮಾಡಿ ಜನರಿಂದ ಮೆರವಣಿಗೆ

    ರಾಂಚಿ: ಅಪ್ರಾಪ್ತ ಬಾಲಕಿಯೊಬ್ಬಳು ಯುವಕನ ಜೊತೆ ಕಬ್ಬಿನ ಗದ್ದೆಯಲ್ಲಿ ಸೆಕ್ಸ್ ಮಾಡುತ್ತಿರುವುದನ್ನು ನೋಡಿ ಜನರು ಇಬ್ಬರನ್ನು ಅರೆನಗ್ನ ಮಾಡಿ ಪೊಲೀಸ್ ಠಾಣೆಗೆ ಕರೆದುಕೊಂಡ ಹೋದ ಘಟನೆ ಜಾರ್ ಖಂಡ್‍ನ ದುಮ್ಕಾದಲ್ಲಿ ನಡೆದಿದ್ದು, ವಿಡಿಯೋ ಈಗ ವೈರಲ್ ಆಗುತ್ತಿದೆ.

    ಬುಧವಾರ ಸಂತ್ರಸ್ತೆಯ ಸೋದರ ಸಂಬಂಧಿಯ ಮದುವೆ ಇತ್ತು. ಈ ವೇಳೆ ಮನೆಯವರು ಹಾಗೂ ಸಂಬಂಧಿಕರು ಮದುವೆ ಕೆಲಸದಲ್ಲಿ ತೊಡಗಿದ್ದಾಗ ಅಪ್ರಾಪ್ತೆ ಕಬ್ಬಿನ ಗದ್ದೆಯಲ್ಲಿ ಯುವಕನ ಜೊತೆ ದೈಹಿಕ ಸಂಬಂಧ ಬೆಳೆಸುತ್ತಿದ್ದಳು. ಈ ವೇಳೆ ಅಲ್ಲಿಗೆ ಬಂದ ಕೆಲವು ಯುವಕರು ದೈಹಿಕ ಸಂಬಂಧ ಬೆಳೆಸುತ್ತಿದ್ದ ಜೋಡಿಯನ್ನು ನೋಡಿದ್ದಾರೆ. ಬಳಿಕ ಯುವಕರು ಆ ಜೋಡಿಯ ಮೇಲೆ ಹಲ್ಲೆ ನಡೆಸಿ ಅವರ ಬಟ್ಟೆಯನ್ನು ಹರಿದಿದ್ದಾರೆ ಎಂದು ಪೊಲೀಸ್ ಅಧಿಕಾರಿ ವೈ.ಎಸ್ ರಮೇಶ್ ತಿಳಿಸಿದ್ದಾರೆ.

    ಯುವಕರು ಬುಧವಾರ ಜೋಡಿಯನ್ನು ತಮ್ಮ ಬಳಿಯೇ ಇರಿಸಿಕೊಂಡಿದ್ದರು. ಗುರುವಾರ ಬೆಳಗ್ಗೆ ಆಗುತ್ತಿದ್ದಂತೆ ಅವರಿಬ್ಬರನ್ನೂ ಅರೆನಗ್ನ ಮಾಡಿ ಮಾರ್ಕೆಟ್ ರಸ್ತೆಯ ಮೂಲಕ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ಈ ವೇಳೆ ರಸ್ತೆಯಲ್ಲಿ ಇದ್ದ ಜನರು ಜೋಡಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

    ಸರೈಯಾಹಾಟ್ ಪೊಲೀಸರು ಸಂತ್ರಸ್ತೆಯ ಹೇಳಿಕೆಯನ್ನು ಆಧರಿಸಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ಹಾಗೂ ಐಪಿಸಿ ಸೆಕ್ಷನ್ 376(2ಎನ್) ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಅಲ್ಲದೆ ಇದು ನಾಚಿಕೆಗೇಡಿನ ಸಂಗತಿ ಹಾಗೂ ಈ ರೀತಿ ಮಾಡಿದವರನ್ನು ಗುರುತಿಸಿ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿ ವೈ.ಎಸ್ ರಮೇಶ್ ಅವರು ಪ್ರತಿಕ್ರಿಯಿಸಿದ್ದಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಬೆಂಕಿಗೆ 5 ಚಿರತೆ ಮರಿಗಳು ಸಜೀವ ದಹನ!

    ಬೆಂಕಿಗೆ 5 ಚಿರತೆ ಮರಿಗಳು ಸಜೀವ ದಹನ!

    ಪುಣೆ: ಮಹಾರಾಷ್ಟ್ರದ ಗಾಮವೊಂದರ ಕಬ್ಬಿನ ಗದ್ದೆಯಲ್ಲಿ ಹಾವನ್ನು ಸಾಯಿಸಲು ಹಚ್ಚಿದ್ದ ಬೆಂಕಿಯಲ್ಲಿ 5 ಚಿರತೆ ಮರಿಗಳು ಸುಟ್ಟು ಸಜೀವ ದಹನವಾಗಿದೆ. ಪುಣೆಯ ಅಂಬೆಗಾಂವ್ ತಾಲೂಕಿನ ಗವಡೆವಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

    ಬುಧವಾರ ಕಬ್ಬು ಕಟಾವು ಕಾರ್ಯ ನಡೆಸುತ್ತಿದ್ದ ವೇಳೆ ಗದ್ದೆಯಲ್ಲಿ ಒಟ್ಟು ಮಾಡಿಟ್ಟಿದ್ದ ಕಸದ ರಾಶಿ ಬಳಿ ವಿಷಕಾರಿ ಹಾವು ಕಂಡುಬಂದಿದ್ದು, ಭಯಗೊಂಡ ರೈತರು ಕಸಕ್ಕೆ ಬೆಂಕಿ ಹಚ್ಚಿದ್ದಾರೆ.

    ಕಸಕ್ಕೆ ಹಚ್ಚಿದ್ದ ಬೆಂಕಿ ಪಕ್ಕದಲ್ಲೇ ಇದ್ದ ಪೊದೆಗೂ ತಗುಲಿದೆ. ಪರಿಣಾಮ ಅದರಲ್ಲಿ ಮಲಗಿದ್ದ ಮೂರು ಹೆಣ್ಣು ಮತ್ತು ಎರಡು ಗಂಡು ಚಿರತೆ ಮರಿಗಳು ಬೆಂಕಿಗೆ ಸುಟ್ಟು ಸಾವನ್ನಪ್ಪಿವೆ.

    ಕಾಡಿನ ಸಮೀಪದಲ್ಲಿ ಈ ಕಬ್ಬಿನ ಗದ್ದೆ ಇರುವ ಕಾರಣಕ್ಕೆ ಕಳೆದ ಮೂರು ವಾರಗಳ ಹಿಂದೆ ಚಿರತೆ ಮರಿಗಳು ಜನಿಸಿರಬಹುದು. ಚಿರತೆ ಮರಿಗಳು ಪೊದೆಯಲ್ಲಿದ್ದ ವಿಚಾರ ಗ್ರಾಮಸ್ಥರಿಗೆ ತಿಳಿದಿರಲಿಲ್ಲ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

    ಈ ಮರಿಗಳಿಗಾಗಿ ತಾಯಿ ಚಿರತೆ ಹುಡುಕಿ ಬರುವ ಸಾಧ್ಯತೆ ಇದ್ದು, ಸುತ್ತಮುತ್ತಲಿನ ಜನರಿಗೆ ಜಾಗ್ರತೆಯಿಂದ ಇರುವಂತೆ ಅರಣ್ಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.