Tag: Suhas Yathiraj

  • ಪ್ಯಾರಾಲಂಪಿಕ್ಸ್ ಕ್ರೀಡಾಪಟುಗಳನ್ನು ನಿವಾಸದಲ್ಲಿ ಅಭಿನಂದಿಸಿದ ಪ್ರಧಾನಿ

    ಪ್ಯಾರಾಲಂಪಿಕ್ಸ್ ಕ್ರೀಡಾಪಟುಗಳನ್ನು ನಿವಾಸದಲ್ಲಿ ಅಭಿನಂದಿಸಿದ ಪ್ರಧಾನಿ

    ನವದೆಹಲಿ: ಟೋಕಿಯೋದಲ್ಲಿ ನಡೆದ ಪ್ಯಾರಾಲಂಪಿಕ್ಸ್‌ನಲ್ಲಿ ಭಾಗವಹಿಸಿದ ಭಾರತ ಕ್ರೀಡಾಪಟುಗಳನ್ನು ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ  ಅಭಿನಂದನೆ ಸಲ್ಲಿಸಿ, ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

    ದೆಹಲಿಯ ತಮ್ಮ ನಿವಾಸದಲ್ಲಿ ಕ್ರೀಡಾಪಟುಗಳನ್ನು ಭೇಟಿ ಮಾಡಿದ ಮೋದಿ ಅವರೊಂದಿಗೆ ಮಾತುಕತೆ ನಡೆಸಿದ್ದು, ಅವರ ಸಾಧನೆಯ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಇದಲ್ಲದೆ ಭಾರತ ಅಮೃತ ಮಹೋತ್ಸವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಭಾರತಕ್ಕೆ ಪ್ಯಾರಾಲಂಪಿಕ್ಸ್‌ನಲ್ಲಿ ದಾಖಲೆಯ 19 ಪದಕಗಳನ್ನು ಕ್ರೀಡಾಪಟುಗಳು ಗೆದ್ದಿದ್ದರು. ಪದಕಗಳನ್ನು ಗೆದ್ದ ಕ್ರೀಡಾಪಟುಗಳಿಗೆ ಮೋದಿ ವಿಶೇಷವಾಗಿ ಅಭಿನಂದನೆ ಸಲ್ಲಿಸಿ ಅವರೊಂದಿಗೆ ಕುಶಲೋಪರಿ ವಿಚಾರಿಸಿದರು. ಈ ಸಂದರ್ಭದಲ್ಲಿ ಕನ್ನಡಿಗ ಸುಹಾಸ್ ಯತಿರಾಜ್, ಅವನಿ ಲೇಖರಾ ಸೇರಿ ಹಲವು ಕ್ರೀಡಾಪಟುಗಳ ಸಾಧನೆಗೆ ಮೋದಿ ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೊಟ್ಟ ಮಾತಿನಂತೆ ಸಿಂಧು ಜೊತೆ ಐಸ್‍ಕ್ರೀಂ ಸವಿದ ಮೋದಿ

    ಈ ಮೊದಲು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಔತಣಕೂಟ ಏರ್ಪಡಿಸಿದ್ದರು. ಈ ಸಂದರ್ಭ ಪಿ.ವಿ ಸಿಂಧು ಜೊತೆ ಐಸ್‍ಕ್ರೀಂ ಸವಿದು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದರು. ಎಲ್ಲಾ ಕ್ರೀಡಾಪಟುಗಳೊಂದಿಗೆ ಫೋಟೋಗೆ ಫೋಸ್ ನೀಡಿದ್ದರು. ಇದನ್ನೂ ಓದಿ: ಅವರು ನಿರ್ಧರಿಸಿದ್ದ ಗುರಿಯನ್ನು ತಲುಪಿದ್ದಾರೆ- ಸುಹಾಸ್ ಸಾಧನೆಗೆ ಪತ್ನಿಯ ಮೆಚ್ಚುಗೆ

  • ಪ್ಯಾರಾಲಂಪಿಕ್ಸ್​ನಲ್ಲಿ ಸುಹಾಸ್‌ಗೆ ಬೆಳ್ಳಿ ಪದಕ – ಹೆಚ್​ಡಿಡಿ, ಗೋಪಾಲಯ್ಯ ಅಭಿನಂದನೆ

    ಪ್ಯಾರಾಲಂಪಿಕ್ಸ್​ನಲ್ಲಿ ಸುಹಾಸ್‌ಗೆ ಬೆಳ್ಳಿ ಪದಕ – ಹೆಚ್​ಡಿಡಿ, ಗೋಪಾಲಯ್ಯ ಅಭಿನಂದನೆ

    ಹಾಸನ: ಜಿಲ್ಲೆಯ ಅರಸೀಕೆರೆ ತಾಲೂಕಿನ ಲಾಳನಕೆರೆ ಗ್ರಾಮದ ಹಾಗೂ ಉತ್ತರ ಪ್ರದೇಶದಲ್ಲಿ ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಸುಹಾಸ್ ಟೋಕಿಯೋದಲ್ಲಿ ನಡೆದ ಪ್ಯಾರಾಲಂಪಿಕ್ಸ್ ಕೂಟದಲ್ಲಿ ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ. ಈ ಮೂಲಕ ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಹಿರಿಮೆಯನ್ನು ಹೆಚ್ಚಿಸುವುದರ ಮೂಲಕ ಹಾಸನ ಜಿಲ್ಲೆಯ ಘನತೆಯನ್ನು ಹೆಚ್ಚಿಸಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹರ್ಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬೆಂಬಲಿಸಿದ ಕರ್ನಾಟಕದ ಜನತೆಗೆ ಧನ್ಯವಾದ: ಸುಹಾಸ್

    ಸಚಿವ ಗೋಪಾಲಯ್ಯನವರು, ಜಪಾನ್ ರಾಜಧಾನಿ ಟೋಕಿಯೋದಲ್ಲಿ ವಿಶೇಷ ಚೇತನ ಕ್ರೀಡಾಪಟುಗಳಿಗಾಗಿ ನಡೆಯುತ್ತಿರುವ ಪ್ಯಾರಾಲಂಪಿಕ್ಸ್​ನಲ್ಲಿ ಉತ್ತರ ಪ್ರದೇಶದ ಜಿಲ್ಲಾಧಿಕಾರಿಯಾಗಿರುವ ಹಾಸನ ಮೂಲದ ಐಎಎಸ್ ಅಧಿಕಾರಿ ಸುಹಾಸ್ ಎಲ್.ಯತಿರಾಜ್‍ರವರು ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಜಯಿಸಿದ್ದಾರೆ. ಪ್ಯಾರಾಲಂಪಿಕ್ಸ್​ನಲ್ಲಿ ಪದಕ ಜಯಿಸಿದ ಭಾರತದ ಮೊದಲ ಐಎಎಸ್ ಅಧಿಕಾರಿ ಎಂಬ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಸುಹಾಸ್ ಒಬ್ಬ ಕನ್ನಡಿಗ ಎಂಬುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ ಎಂದಿದ್ದಾರೆ. ಇದನ್ನೂ ಓದಿ:ಬೆಳ್ಳಿ ಹುಡುಗ ಸುಹಾಸ್‍ಗೆ ಕುಟುಂಬಸ್ಥರ ಅಭಿನಂದನೆ

    ಸುಹಾಸ್ ಹಾಸನದ ಲಾಳನಕೆರೆಯಲ್ಲಿ ಜನಿಸಿ, ಶಿವಮೊಗ್ಗದಲ್ಲಿ ಬೆಳೆದು, ದಕ್ಷಿಣ ಕನ್ನಡದ ಸುರತ್ಕಲ್‍ನಲ್ಲಿ ಎನ್‍ಐಟಿಯಲ್ಲಿ ಕಂಪ್ಯೂಟರ್ ಎಂಜಿನಿಯರಿಂಗ್ ಕಲಿತು, ಉತ್ತರ ಪ್ರದೇಶದ ಐಎಎಸ್ ಅಧಿಕಾರಿಯಾಗಿ, ಮಥುರಾದ ಮುಖ್ಯ ಅಭಿವೃದ್ಧಿ ಅಧಿಕಾರಿಯಾಗಿದ್ದ ಇವರು, ಆರು ಜಿಲ್ಲೆಗಳ ಡಿಎಂ ಆಗಿ ಸೇವೆ ಸಲ್ಲಿಸಿದ ನಂತರ, ಈಗ ಗೌತಮ್ ಬುದ್ಧ ನಗರದ ಜಿಲ್ಲೆಯ ದಂಡಾಧಿಕಾರಿಯಾದ್ದಾರೆ. ಇವರು ಅಂತರಾಷ್ಟ್ರೀಯ ಮಟ್ಟದಲ್ಲಿ ನಡೆದ ಹಲವು ಕ್ರೀಡಾಕೂಟದಲ್ಲಿ ಭಾಗವಹಿಸಿ ನಾಲ್ಕು ಚಿನ್ನದ ಪದಕ, ಐದು ಬೆಳ್ಳಿ, ಎಂಟು ಕಂಚಿನ ಪದಕ ಗಳಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸುಹಾಸ್ ನಮ್ಮ ಕನ್ನಡಿಗ ಎಂದು ಹೇಳಲು ನಮಗೆ ಹೆಮ್ಮೆಯ ವಿಷಯವಾಗಿದೆ. ಸುಹಾಸ್ ಎಲ್.ಯತಿರಾಜ್ ರವರಿಗೆ ನಮ್ಮ ಹೃದಯ ಪೂರ್ವಕ ಅಭಿನಂದನೆಗಳು ಎಂದು ಹೇಳಿದ್ದಾರೆ.

  • ಬೆಂಬಲಿಸಿದ ಕರ್ನಾಟಕದ ಜನತೆಗೆ ಧನ್ಯವಾದ: ಸುಹಾಸ್

    ಬೆಂಬಲಿಸಿದ ಕರ್ನಾಟಕದ ಜನತೆಗೆ ಧನ್ಯವಾದ: ಸುಹಾಸ್

    ಟೋಕಿಯೋ: ಬೆಳ್ಳಿ ಗೆದ್ದಿದ್ದಕ್ಕೆ ಖುಷಿ ಆಗಿದೆ, ಚಿನ್ನದ ಪದಕ ಗೆಲ್ಲದ್ದಕ್ಕೆ ಬೇಸರವಿದೆ ಎಂದು ಪ್ಯಾರಾಲಿಂಪಿಕ್ಸ್ ನ ಬ್ಯಾಡ್ಮಿಂಟನ್‍ನಲ್ಲಿ ಬೆಳ್ಳಿ ಪದಕ ಬೆಳ್ಳಿ ಪದಕ ಗೆದ್ದಿರುವ ಸುಹಾಸ್ ಯತಿರಾಜ್ ಹೇಳಿದ್ದರೆ.

    ಸುಹಾಸ್ ಅವರು ಈ ಕುರಿತು ಮಾತನಾಡಿದ್ದು, ಖುಷಿ ಮತ್ತು ದುಃಖ ಎರಡೂ ಆಗುತ್ತಿದೆ. ಬೆಳ್ಳಿ ಗೆದ್ದಿದ್ದಕ್ಕೆ ಖುಷಿ ಆಗಿದೆ. ಆದರೆ ಚಿನ್ನ ಗೆಲ್ಲದ್ದಕ್ಕೆ ಬೇಸರ ಆಗುತ್ತಿದೆ. ನನಗೆ ಬೆಂಬಲಿಸಿದ ಗುರು ಹಿರಿಯರಿಗೆ ಮತ್ತು ಕರ್ನಾಟಕದ ಜನತೆಗೆ ಧನ್ಯವಾದ ಸಲ್ಲಿಸ್ತೇನೆ ಎಂದು ಸುಹಾಸ್ ಹೇಳಿದ್ದಾರೆ.

    ತಮ್ಮ ಪುತ್ರನ ಬೆಳ್ಳಿ ಸಾಧನೆ ಬಗ್ಗೆ ಸುಹಾಸ್ ಯತಿರಾಜ್ ಅವರ ತಾಯಿ ಜಯಶ್ರೀ, ಸುಹಾಸ್ ಪತ್ನಿ ರಿತು, ಸಹೋದರ ಶರತ್, ನಾದಿನಿ ಸಂಜನಾ ಅವರು ಪಬ್ಲಿಕ್ ಟಿವಿ ಜೊತೆಗೆ ಖುಷಿ ಹಂಚಿಕೊಂಡಿದ್ದಾರೆ. ಜಿಲ್ಲಾಧಿಕಾರಿಯಾಗಿದ್ದುಕೊಂಡೇ ಅವರು ಪ್ರತಿ ನಿತ್ಯ ಪ್ರ್ಯಾಕ್ಟಿಸ್ ಮಾಡುತ್ತಿದ್ದರು. ಸಂಜೆ ಅದಕ್ಕಾಗಿ ಸಮಯ ಮೀಸಲಿರಿಸುತ್ತಿದ್ದರು. ನಾನೂ ಸಹ ಚಿನ್ನದ ಪದಕಕ್ಕಾಗಿ ದೇವರಲ್ಲಿ ಪ್ರಾರ್ಥಿಸಿದ್ದೆ. ಆದರೆ ಬೆಳ್ಳಿ ಗೆದ್ದಿದ್ದಾರೆ ಖುಷಿ ಇದೆ ಎಂದು ಸುಹಾಸ್ ಪತ್ನಿ ರಿತು ತಿಳಿಸಿದ್ದಾರೆ. ಇದನ್ನೂ ಓದಿ: ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ವೀರ ಕನ್ನಡಿಗ ಸುಹಾಸ್ ಬೆಳ್ಳಿ ಸಾಧನೆ

    ಸುಹಾಸ್ ಯತಿರಾಜ್ ಸಾಧನೆಗೆ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅಭಿನಂದನೆ ಸಲ್ಲಿಸಿದ್ದಾರೆ. ಸುಹಾಸ್ ಅವರ ಬೆಳ್ಳಿ ಬೇಟೆಯೊಂದಿಗೆ ಪ್ಯಾರಾ ಒಲಿಂಪಿಕ್ಸ್ ನಲ್ಲಿ ಭಾರತದ ಪದಕಗಳ ಸಂಖ್ಯೆ 19ಕ್ಕೆ ಏರಿದೆ. 5 ಚಿನ್ನ, 8 ಬೆಳ್ಳಿ, 6 ಕಂಚು ಪದಕಗಳನ್ನು ಭಾರತ ಗೆದ್ದಿದೆ.

    ಬೆಳ್ಳಿ ಸಾಧನೆ:
    ಟೋಕಿಯೋ ಪ್ಯಾರಾಲಿಂಪಿಕ್ಸ್ ನಲ್ಲಿ ವೀರ ಕನ್ನಡಿಗ ಬೆಳ್ಳಿ ಗೆದ್ದಿದ್ದಾರೆ. ಕರ್ನಾಟಕ ಮೂಲದ ಐಎಎಸ್ ಅಧಿಕಾರಿ ಸುಹಾಸ್ ಯತಿರಾಜ್ ಬ್ಯಾಡ್ಮಿಂಟನ್‍ನಲ್ಲಿ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದ್ದು, ಈ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಬ್ಯಾಡ್ಮಿಂಟನ್ ಫೈನಲ್‍ನ Sಐ4 ವಿಭಾಗದಲ್ಲಿ ಫ್ರಾನ್ಸ್ ನ ಲುಕಾಸ್ ಮಜೂರ್ ಎದುರು 15-21, 21-17, 21-15 ಅಂತರದಲ್ಲಿ ಸೋಲು ಅನುಭವಿಸಿ ಬೆಳ್ಳಿ ಕೊರಳಿಗೇರಿಸಿಕೊಂಡಿದ್ದಾರೆ. ಇಂದು ಮುಂಜಾನೆ ಚಿನ್ನದ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಫ್ರಾನ್ಸ್ ನ ಲುಕಾಸ್ ಮಜೂರ್ ವಿರುದ್ಧ ಸೋತಿದ್ದಾರೆ.

    ಶಿವಮೊಗ್ಗ ಮೂಲದ ಯತಿರಾಜ್ ಹಾಗೂ ಹಾಸನ ಮೂಲದ ಜಯಶ್ರೀ(34) ಅವರ ಪುತ್ರ ಸುಹಾಸ್ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ಸದ್ಯ ಉತ್ತರ ಪ್ರದೇಶದ ನೋಯ್ಡಾದಲ್ಲಿ ಸುಹಾಸ್ ಜಿಲ್ಲಾಧಿಕಾರಿಯಾಗಿದ್ದಾರೆ. ಸುಹಾಸ್ ಅವರ ಪತ್ನಿ ರಿತು ಗಾಜಿಯಾಬಾದ್‍ನಲ್ಲಿ ಸಹಾಯಕ ವಿಭಾಗಾಧಿಕಾರಿ ಆಗಿದ್ದಾರೆ.